Connect with us

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ-ಸನ್ಮಾನ ಕಾರ್ಯಕ್ರಮ; ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ವಿದ್ಯೆಯ ಜೊತೆಗೆ ವಿನಯ ಇರಲಿ – ಜೀವನ್ ದಾಸ್

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜೀವನ್‌ದಾಸ್ ಎ. ಏಕತಾ ವೇದಿಕೆಯಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವದ ಮೊದಲನೇ ದಿನ ‘ಸಾಧನಾ ದರ್ಪಣಂʼ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು.

Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜೀವನ್‌ದಾಸ್ ಎ. ಏಕತಾ ವೇದಿಕೆಯಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವದ ಮೊದಲನೇ ದಿನ ‘ಸಾಧನಾ ದರ್ಪಣಂʼ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ “ವಿದ್ಯಾರ್ಥಿಗಳ ಜೀವನದಲ್ಲಿ ಒಂದು ನಿರ್ದಿಷ್ಟ ಗುರಿ ಇರಬೇಕು.

Ad Widget

Ad Widget

Ad Widget alt="Ad Widget"/>

Ad Widget

ನಾವು ಏನಾಗಬೇಕು, ನಮ್ಮ ಜೀವನದಲ್ಲಿ ಏನನ್ನು ಸಾಧಿಸಬೇಕು ಎಂಬ ಸ್ಪಷ್ಟತೆ ಇರಬೇಕು. ಗುರಿಯಿಲ್ಲದ ಜೀವನ ದಿಕ್ಕಿಲ್ಲದ ಪ್ರಯಾಣದಂತೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ನಿರ್ಧರಿಸಿ, ಅದನ್ನು ಸಾಧಿಸಲು ನಿರಂತರ ಪ್ರಯತ್ನ ಮಾಡಬೇಕು. ತಾಯಿಯೇ ಮಗುವಿನ ಮೊದಲ ಗುರು. ಮಗುವಿಗೆ ಮೊದಲ ಮಾತು, ಮೊದಲ ನಡವಳಿಕೆ, ಮೊದಲ ಸಂಸ್ಕಾರ ದೊರೆಯುವುದೇ ತಾಯಿಯಿಂದ. ತಂದೆ-ತಾಯಿ ನೀಡುವ ಪ್ರೀತಿ, ಮಾರ್ಗದರ್ಶನ ಮತ್ತು ಗುರುಗಳು ನೀಡುವ ಶಿಕ್ಷಣ ನಮ್ಮ ಜೀವನದುದ್ದಕ್ಕೂ ನಮಗೆ ದಾರಿದೀಪವಾಗಿರುತ್ತವೆ.” ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾ.ಸುಚೇತಾ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಸಂಶೋಧನಾ ವಿಜ್ಞಾನಿ, ಅಜೀಂ ಪ್ರೇಮ್ ಜಿ ಫೌಂಡೇಶನ್ ಅನುದಾನಿತ ಕ್ಯಾನ್ಸರ್ ತಪಾಸಣಾ ಯೋಜನೆ ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯ ಮಾತನಾಡುತ್ತಾ “ವಿದ್ಯಾರ್ಥಿ ಜೀವನವು ಭವಿಷ್ಯದ ಬದುಕಿಗೆ ಬುನಾದಿಯಿದ್ದಂತೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಯಾವುದೇ ಗೊಂದಲಗಳಿಗೆ ಒಳಗಾಗದೆ ತಮ್ಮ ಭವಿಷ್ಯದ ಬಗ್ಗೆ ನಿರ್ದಿಷ್ಟ ಉದ್ದೇಶವನ್ನು ಹೊಂದಿರಬೇಕು ಹಾಗೂ ಸಿಗುವ ಎಲ್ಲಾ ಸೂಕ್ತ ಅವಕಾಶಗಳನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಂಡು ತಮ್ಮ ಸ್ವಂತ ನಿರ್ಧಾರಗಳನ್ನು ತಾವೇ ತೆಗೆದುಕೊಳ್ಳುವತ್ತ ಗಮನ ಹರಿಸಬೇಕು.



Ad Widget

ಕೇವಲ ಅಂಕಗಳನ್ನು ಗಳಿಸುವುದು ಮಾತ್ರ ಶಿಕ್ಷಣದ ಉದ್ದೇಶವಲ್ಲ, ಬದಲಿಗೆ ವಿದ್ಯಾರ್ಥಿಗಳು ಹೊಸ ಹೊಸ ವಿಚಾರಗಳನ್ನು ಸದಾ ಅನ್ವೇಷಿಸುತ್ತಾ, ಸ್ವಾವಲಂಬಿಗಳಾಗಿ ಬೆಳೆಯಲು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಸುಧಾರಿಸಿಕೊಳ್ಳಬೇಕು. ಯಾವುದೇ ರಂಗದಲ್ಲಿ ಯಶಸ್ಸು ಸಿಗಬೇಕಾದರೂ ಅದಕ್ಕೆ ಕೇವಲ ಅದೃಷ್ಟ ಕಾರಣವಲ್ಲ, ಬದಲಿಗೆ ನಿರಂತರವಾದ ಕಠಿಣ ಶ್ರಮ ಮಾತ್ರ ಯಶಸ್ಸನ್ನು ತಂದುಕೊಡುತ್ತದೆ. ” ಎಂದು ಕಿವಿಮಾತನ್ನು ಹೇಳಿದರು.

Ad Widget

Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತಮಂಡಳಿಯ ಕೋಶಾಧಿಕಾರಿ ಸಚಿನ್ ಶೆಣೈ ಕೆ. ವಹಿಸಿಕೊಂಡು “ಸಂಸ್ಥೆಯು ಉತ್ತುಂಗಕ್ಕೇರಲು ವಿದ್ಯಾರ್ಥಿಗಳು, ಹೆತ್ತವರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಅದರಲ್ಲೂ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ವಿದ್ಯಾರ್ಥಿಗಳ ಸಾಧನೆಯೇ ಸಂಸ್ಥೆಯ ಕೀರ್ತಿ ಮತ್ತು ಗೌರವವನ್ನು ಹೆಚ್ಚಿಸುತ್ತದೆ. ತಮ್ಮ ಸಾಧನೆಗಳ ಮೂಲಕ ಹೆತ್ತವರಿಗೆ, ಶಿಕ್ಷಕರಿಗೆ ಹಾಗೂ ತಾವು ಕಲಿತ ಸಂಸ್ಥೆಗೆ ಹೆಮ್ಮೆ ತರುವ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು” ಎಂದು ಹೇಳಿದರು.

ಏಕತಾ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳಿಗೆ ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಲಾಯಿತು. ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸ್ಪರ್ಧೆಗಳ ಹಾಗೂ ಕಾಲೇಜಿನ ವಿವಿಧ ಸಂಘಗಳ ವತಿಯಿಂದ ನಡೆಸಲಾದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜತೆಗೆ ಕಾಲೇಜು ವಾರ್ಷಿಕ ಕ್ರೀಡಾಕೂಟದ ವಿವಿಧ ಪಂದ್ಯಾಟಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕ –ರಕ್ಷಕ ಸಂಘದ ಉಪಾಧ್ಯಕ್ಷರಾದ ಎನ್. ಸತ್ಯನಾರಾಯಣ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ ದಯಾಮಣಿ ಟಿ.ಕೆ ಸ್ವಾಗತಿಸಿ, ದಿವ್ಯಾ ಕೆ. ವಂದಿಸಿ ಪುಷ್ಪಲತಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

Ad Widget
Click to comment

Leave a Reply

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ “ಕನಸುಗಳು-2026” ಕಾರ್ಯಕ್ರಮ; ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಸ್ಪರ್ಧೆಗಳು; 14 ವಿವಿಧ ರೀತಿಯ ಸ್ಪರ್ಧೆಗಳು

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ “ಕನಸುಗಳು –2026” ಅಕ್ಟೋಬರ್ 30ನೇ ಶುಕ್ರವಾರ ನಡೆಯಲಿದೆ. ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಗ್ಗೆ 9 ರಿಂದ ನಡೆಯಲಿದೆ.

Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ “ಕನಸುಗಳು –2026” ಅಕ್ಟೋಬರ್ 30ನೇ ಶುಕ್ರವಾರ ನಡೆಯಲಿದೆ. ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಗ್ಗೆ 9 ರಿಂದ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಮಂಡಳಿಯ ನಿರ್ದೇಶಕರಾದ ರಮೇಶ್ಚಂದ್ರ ಎಮ್. ಇವರು ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ವೇದಾಂತ ಐರನ್ ಅಂಡ್ ಸ್ಟೀಲ್ ಲಿಮಿಟೆಡ್, ಗೋವಾ ಇದರ ಅಸೋಸಿಯೇಟ್ ಮ್ಯಾನೇಜರ್ ಸಿಎ ಶ್ರದ್ಧಾ ವಿ ಶೆಟ್ಟಿ ನಡೆಸಿಕೊಡಲಿದ್ದಾರೆ.

Ad Widget

Ad Widget <> Ad Widget

ಸಭಾಕಾರ್ಯಕ್ರಮದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಲವು ರೀತಿಯ ಸ್ಪರ್ಧೆಗಳು ನಡೆಯಲಿದ್ದು, ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಪೆನ್ಸಿಲ್ ಸ್ಕೆಚ್, ಕನ್ನಡ ಕವನರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಮುಖವರ್ಣಿಕೆ, ವೀಡಿಯೋ ಸಂಕಲನ, ಚರ್ಚಾಸ್ಪರ್ಧೆ, ತಾಳವಾದ್ಯ , ಕಲರವ ಸಾಂಸ್ಕೃತಿಕ ವೈವಿಧ್ಯ, ನಿಧಿಶೋಧ, ಭಗವದ್ಗೀತಾ ಕಂಠಪಾಠ ಮುಂತಾದ ಸ್ಪರ್ಧೆಗಳು ನಡೆಯಲಿವೆ. ಅಪರಾಹ್ನ 3ಕ್ಕೆ ಕನಸುಗಳು ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ.



Ad Widget

ಸಮಾರೋಪದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ ಇವರು ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯೂಟ್ಯೂಬರ್ ಹಾಗೂ ನಟ ಧನರಾಜ್ ಆಚಾರ್ ಇವರು ಭಾಗವಹಿಸಲಿದ್ದಾರೆ.

ವಿಶೇಷ ಅಭ್ಯಾಗತರಾಗಿ ಖ್ಯಾತ ವೈದರು ಹಾಗೂ ಹಿರಿಯ ವಿದ್ಯಾರ್ಥಿ ವಿವೇಕಾನಂದ ಪದವಿಪೂರ್ವ ಕಾಲೇಜು ಡಾ. ವೇಣುಗೋಪಾಲ ಶರ್ಮ ಇವರು ಆಗಮಿಸಲಿದ್ದಾರೆ.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಗಾನಾಮೃತ; ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಸಂಕೀರ್ತನಕಾರ ಡಾ. ವಿದ್ಯಾಭೂಷಣ ಇವರಿಗೆ ಕಾಲೇಜಿನ ವತಿಯಿಂದ ಸನ್ಮಾನ; 700 ಕ್ಕೂ ಮಿಕ್ಕಿ ಸಾರ್ವಜನಿಕರು ಭಾಗಿ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ವಿಶೇಷ ಸಂಗೀತ ಕಾರ್ಯಕ್ರಮ ‘ವಿವೇಕ ಗಾನಮೃತ’ ಕಾರ್ಯಕ್ರಮ ಏಕತಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಸಂಕೀರ್ತನಕಾರರಾದ ಸಂಗೀತ ವಿದ್ಯಾನಿಧಿ ಡಾ. ವಿದ್ಯಾಭೂಷಣ ಇವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget

Ad Widget
  • ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ವಿಶೇಷ ಸಂಗೀತ ಕಾರ್ಯಕ್ರಮ ‘ವಿವೇಕ ಗಾನಮೃತ’ ಕಾರ್ಯಕ್ರಮ ಏಕತಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು.
  • ಈ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಸಂಕೀರ್ತನಕಾರರಾದ ಸಂಗೀತ ವಿದ್ಯಾನಿಧಿ ಡಾ. ವಿದ್ಯಾಭೂಷಣ ಇವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ನಡೆಯಿತು.
  • ಈ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ, ವಿವೇಕಾನಂದ ಮಹಾ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಶ್ರೀಪತಿ ಕಲ್ಲೂರಾಯ, ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಪುಷ್ಪಲತಾ ನಿರೂಪಿಸಿದರು.
Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Published

on



Ad Widget

Ad Widget

Ad Widget

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಅಕ್ಟೋಬರ್ 26 ರಂದು ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ‍್ಯಕ್ರಮದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ (ಸ್ವಾಯತ್ತ) ಇದರ ಸಂಸ್ಕೃತ ವಿಭಾಗದ ಪ್ರಾಧ್ಯಾಪಕರಾದ ಡಾ. ಮುರಳಿಕೃಷ್ಣ ಟಿ. ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಮಹರ್ಷಿ ವಾಲ್ಮೀಕಿಯವರನ್ನು ರಾಮಾಯಣದ ಕರ್ತೃ ಎಂದೂ, ಆದಿಕವಿಯೆಂದೂ ಕರೆಯಲಾಗುತ್ತದೆ. ವಾಲ್ಮೀಕಿ ಜಯಂತಿಯು ಸಂಸ್ಕೃತ ಸಾಹಿತ್ಯ, ಆಧ್ಯಾತ್ಮಿಕ ಬೋಧನೆಗಳು ಮತ್ತು ಭಾರತೀಯ ಸಾಂಸ್ಕೃತಿಕ ಪರಂಪರೆಗೆ ಮಹರ್ಷಿ ವಾಲ್ಮೀಕಿ ನೀಡಿದ ಕೊಡುಗೆಯನ್ನು ಸ್ಮರಿಸುವಂತಹ ವಿಶೇಷ ದಿನವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಆಚರಣೆಯು, ಅವರ ಜೀವನ ಮತ್ತು ರಾಮಾಯಣಕ್ಕೆ ಸಂಬಂಧಿಸಿದ ಬೋಧನೆಗಳ ಬಗ್ಗೆ ಚಿಂತಿಸಲು ಜನರಿಗೆ ಪ್ರೇರೇಪಣೆಯನ್ನು ನೀಡುತ್ತದೆ.ಸಂಸ್ಕೃತ ಕಾವ್ಯಕ್ಕೆ ಮಹರ್ಷಿ ವಾಲ್ಮೀಕಿ ನೀಡಿರುವ ಕೊಡುಗೆಯು ಭಾರತೀಯ ಸಾಹಿತ್ಯ ಪರಂಪರೆಯಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ವಾಲ್ಮೀಕಿ ಜಯಂತಿಯು ಯುವ ಪೀಳಿಗೆಗೆ ಶಾಸ್ತ್ರೀಯ ಸಾಹಿತ್ಯ ಮತ್ತು ಕಥಾ ಪರಂಪರೆಯನ್ನು ಪರಿಚಯಿಸಲು ಒಂದು ಅವಕಾಶವನ್ನು ಒದಗಿಸುತ್ತದೆ.

Ad Widget

Ad Widget <> Ad Widget

ರಾಮಾಯಣದ ಮೌಲ್ಯಗಳನ್ನು ಸ್ಮರಿಸಲು ನಮಗೆ ಸಹಾಯ ಮಾಡುತ್ತದೆ.ರಾಮಾಯಣವು ಕರ್ತವ್ಯ, ನಿಷ್ಠೆ, ಸತ್ಯನಿಷ್ಠೆ, ನ್ಯಾಯ ಮತ್ತು ಕರುಣೆಯಂತಹ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ.ಎಲ್ಲದಕ್ಕಿಂತಲೂ ಮುಖ್ಯವಾಗಿ ಆತ್ಮಾವಲೋಕನ ಮತ್ತು ಜವಾಬ್ದಾರಿಯುತ ನಿರ್ಧಾರಗಳು ಅರ್ಥಪೂರ್ಣ ಬದಲಾವಣೆಗೆ ದಾರಿ ಮಾಡಿಕೊಡಬಲ್ಲವು ಎಂಬುದನ್ನು ನೆನಪಿಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ (ಸ್ವಾಯತ್ತ) ಇದರ ಸಂಸ್ಕೃತ ವಿಭಾಗದ ಪ್ರಾಧ್ಯಾಪಕರಾದ ಡಾ. ಮುರಳಿಕೃಷ್ಣ ಟಿ. ಇವರು ಹೇಳಿದರು.



Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಅಕ್ಟೋಬರ್ 26 ರಂದು ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

Ad Widget

Ad Widget

ಸಾಮಾನ್ಯ ವ್ಯಕ್ತಿಯೊಬ್ಬ ಅಸಾಮಾನ್ಯನಾಗಿ ಕಾವ್ಯ ಸೃಷ್ಟಿ ಮಾಡಬಲ್ಲ ಎಂಬುದಕ್ಕೆ ವಾಲ್ಮೀಕಿಯ ಜೀವನ ವೃತ್ತಾಂತ ನೈಜ ಉದಾಹರಣೆ ಎಂದು ಹೇಳಿದರು. ಅವರ ಜೀವನ ಸಾಧನೆ ಹಾಗೂ ಆದರ್ಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.
ಕರ‍್ಯಕ್ರಮದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ವಿದಿಶಾ ಸ್ವಾಗತಿಸಿ, ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!