Connect with us

ಬಿಗ್ ನ್ಯೂಸ್

Prasanna Darbe On Ashok kumar Rai“ಇದು ಗುಲಾಮರ ನೆಲವಲ್ಲ, ಸ್ವಾಭಿಮಾನದ ಪುತ್ತೂರು – ಶಾಸಕರ ಅಭಿವೃದ್ಧಿ ರೀಲ್ಸ್‌, ಫ್ಲೆಕ್ಸ್‌ಗಳಿಗೆ ಸೀಮಿತ : ಪ್ರಸನ್ನ ದರ್ಬೆ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸ್ವಾಭಿಮಾನದ ನೆಲವಾಗಿದ್ದು, ಇಲ್ಲಿ ಯಾರೂ ಗುಲಾಮರಲ್ಲ ಎಂಬುದನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು. ಸಾರ್ವಜನಿಕವಾಗಿ ಮಾತನಾಡುವಾಗ ಶಾಸಕರ ಘನತೆಗೆ ತಕ್ಕ ಭಾಷೆ ಬಳಸಬೇಕು ಎಂದು ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಹ ಸಂಚಾಲಕ ಪ್ರಸನ್ನ ದರ್ಬೆ ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಜಿಲ್ಲೆಯ ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಪಕ್ಷ ಬೆಳೆದು ನಿಂತಿದೆ. ಅಂತಹ ಕಾರ್ಯಕರ್ತರ ಅಧ್ಯಕ್ಷರನ್ನು ಏಕವಚನದಲ್ಲಿ ಸಂಬೋಧಿಸುವುದು ಒಬ್ಬ ವ್ಯಕ್ತಿಗೆ ಮಾಡಿದ ಅವಮಾನವಲ್ಲ; ಜಿಲ್ಲೆಯ ಲಕ್ಷಾಂತರ ಕಾರ್ಯಕರ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Ad Widget

Ad Widget <> Ad Widget

ಅಭಿವೃದ್ಧಿ ಎಲ್ಲಿ? ರೀಲ್ಸ್‌ ಮತ್ತು ಫ್ಲೆಕ್ಸ್‌ಗಳಲ್ಲಿ ಮಾತ್ರವೇ?



Ad Widget

ಪುತ್ತೂರಿನಲ್ಲಿ ಅಭಿವೃದ್ಧಿ ಕಾರ್ಯಗಳು ಎಷ್ಟರ ಮಟ್ಟಿಗೆ ನಡೆದಿವೆ ಎಂಬುದನ್ನು ಹಳ್ಳಿಗಳ ರಸ್ತೆಗಳನ್ನು ಗಮನಿಸಿದರೆ ತಿಳಿಯುತ್ತದೆ. ಹಲವು ಕಡೆ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅಭಿವೃದ್ಧಿಯ ಬಗ್ಗೆ ರೀಲ್ಸ್‌ ಮತ್ತು ಫ್ಲೆಕ್ಸ್‌ಗಳಲ್ಲಿ ಪ್ರಚಾರ ಮಾಡುವುದಕ್ಕಿಂತ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಮುಖ್ಯ ಎಂದು ಪ್ರಸನ್ನ ದರ್ಬೆ ಟೀಕಿಸಿದ್ದಾರೆ.

Ad Widget

Ad Widget

ಕೇಂದ್ರ ಸರ್ಕಾರದ ಯೋಜನೆಗಳಿಗೆ ಫ್ಲೆಕ್ಸ್‌ ಹಾಕುವವರು, ಅದೇ ಪಕ್ಷದ ಜಿಲ್ಲಾಧ್ಯಕ್ಷರ ಬಗ್ಗೆ ತುಚ್ಛವಾಗಿ ಮಾತನಾಡುವುದು ಎಷ್ಟು ಸಮಂಜಸ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ. ರಾಜ್ಯದ ಅನುದಾನದಿಂದ ಅಭಿವೃದ್ಧಿ ಕೆಲಸಗಳಾಗಿರುವುದಕ್ಕಿಂತ ಪ್ರಚಾರದ ಫ್ಲೆಕ್ಸ್‌ಗಳೇ ಹೆಚ್ಚಾಗಿ ಕಾಣಿಸುತ್ತಿವೆ. ನೈಜ ಅಭಿವೃದ್ಧಿ ಕಾರ್ಯಗಳು ಎಲ್ಲಿ ನಡೆದಿವೆ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇತರರನ್ನು ತುಚ್ಛವಾಗಿ ಮಾತನಾಡುವುದನ್ನು ಬಿಟ್ಟು, ಕ್ಯಾಮೆರಾದ ಮುಂದೆ ಪ್ರಚಾರ ಮಾಡುವುದಕ್ಕಿಂತ ಕ್ಯಾಮೆರಾದ ಹಿಂದೆ ಜನರ ಬಳಿಗೆ ತೆರಳಿ ಅವರ ಕಷ್ಟಗಳನ್ನು ಆಲಿಸಬೇಕು. ಪುತ್ತೂರಿನ ಗೌರವ ಮತ್ತು ಜನರ ಸ್ವಾಭಿಮಾನವನ್ನು ಎತ್ತಿಹಿಡಿಯುವ ರೀತಿಯಲ್ಲಿ ಶಾಸಕರು ನಡೆದುಕೊಳ್ಳಬೇಕು ಎಂದು ಪ್ರಸನ್ನ ದರ್ಬೆ ಹೇಳಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಹೊಸಂಗಡಿಯಲ್ಲಿ ಪತ್ತೆ..!

Published

on



Ad Widget

Ad Widget

Ad Widget

Ad Widget

ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿ ಶ್ರೀವತ್ಸ ಹೊಸಂಗಡಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳಾರೆ ಪೊಲೀಸರು, ಮಂಜೇಶ್ವರದ ಹೊಸಂಗಡಿಯಲ್ಲಿರುವ ಹೋಟೆಲ್‌ವೊಂದರಲ್ಲಿ ವಿದ್ಯಾರ್ಥಿಯನ್ನು ಪತ್ತೆಹಚ್ಚಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿ ಶ್ರೀವತ್ಸ ಹೊಸಂಗಡಿಯಲ್ಲಿ ಪತ್ತೆಯಾಗಿದ್ದಾನೆ.

Ad Widget

Ad Widget

Ad Widget alt="Ad Widget"/>

Ad Widget

ಎಡಮಂಗಲ ಗ್ರಾಮದ ಪೊಯ್ಯತ್ತೂರು ನಿವಾಸಿ ರವಿಕುಮಾರ್ ಪೂಜಾರಿ ಅವರ ಪುತ್ರ ಶ್ರೀವತ್ಸ ನಾಪತ್ತೆಯಾಗಿರುವ ಬಗ್ಗೆ ಅವರ ತಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ad Widget

Ad Widget <> Ad Widget

ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಬೆಳ್ಳಾರೆ ಪೊಲೀಸರು, ಮಂಜೇಶ್ವರದ ಹೊಸಂಗಡಿಯಲ್ಲಿರುವ ಹೋಟೆಲ್‌ವೊಂದರಲ್ಲಿ ವಿದ್ಯಾರ್ಥಿಯನ್ನು ಪತ್ತೆಹಚ್ಚಿದ್ದಾರೆ. ಬಳಿಕ ಆತನನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Saujanya case-ಸೌಜನ್ಯ ಪ್ರಕರಣದ ಮರುತನಿಖೆ – ಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಎಸ್‌ಐಟಿ ಮುಖ್ಯಸ್ಥ ಶಶಿ ಕುಮಾರ್‌

Published

on



Ad Widget

Ad Widget

Ad Widget

Ad Widget

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ಪ್ರಗತಿ ಕುರಿತು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ, ಹಿರಿಯ ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ. 28: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ಪ್ರಗತಿ ಕುರಿತು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ, ಹಿರಿಯ ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬುಧವಾರ ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಭೇಟಿಯಾದ ಶಶಿಕುಮಾರ್, ಪ್ರಕರಣದ ಮರುತನಿಖೆಯ ಭಾಗವಾಗಿ ಈವರೆಗೆ ಕೈಗೊಂಡಿರುವ ಕ್ರಮಗಳು ಹಾಗೂ ತನಿಖೆಯ ಪ್ರಗತಿಯ ಕುರಿತು ವಿವರಿಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಸುಪ್ರೀಂ ಕೋರ್ಟ್ ಈ ಪ್ರಕರಣದ ಡಿ ನೊವೊ (ಹೊಸದಾಗಿ ಆರಂಭಿಸುವ) ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಶಿಕುಮಾರ್ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.



Ad Widget

ಇತ್ತೀಚಿನ ದಿನಗಳಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಎಸ್‌ಐಟಿ, ಕಳೆದ ವಾರ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿತ್ತು. ಇದರ ಬೆನ್ನಲ್ಲೇ ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Ad Widget

Ad Widget

ಪ್ರಕರಣದ ಆರಂಭಿಕ ತನಿಖೆ ನಡೆಸಿದ್ದ ಸಬ್‌ಇನ್‌ಸ್ಪೆಕ್ಟರ್ ಯೋಗೇಶ್, ಆಗ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಭಾಸ್ಕರ್ ರೈ ಹಾಗೂ ಸಿಐಡಿ ತನಿಖಾಧಿಕಾರಿಯಾಗಿದ್ದ ರುದ್ರಮುನಿ ಅವರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಅ. 30ರಂದು ವಿಚಾರಣೆಗೆ ಹಾಜರಾಗಲು ಸೂಚನೆ
ಮರುತನಿಖೆಯ ಭಾಗವಾಗಿ ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಕ್ಟೋಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಸೂಚಿಸಿದೆ. ಅಲ್ಲದೆ, ಪ್ರಕರಣದ ಮರಣೋತ್ತರ ಪರೀಕ್ಷೆ ನಡೆಸಿದ್ದ ಸಿಬ್ಬಂದಿಗೂ ನೋಟಿಸ್ ಜಾರಿಗೊಳಿಸಲಾಗಿದೆ.
ಹಿಂದಿನ ತನಿಖೆಯ ವೇಳೆ ಸಂಗ್ರಹಿಸಲಾಗಿದ್ದ ದಾಖಲೆಗಳು, ಮಾಹಿತಿ ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸುವ ಮೂಲಕ ಎಸ್‌ಐಟಿ ಮುಂದಿನ ತನಿಖೆ ಕೈಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡಿರುವ ಕ್ರಮಗಳು ಮತ್ತು ಮುಂದಿನ ತನಿಖೆಯ ದಿಕ್ಕಿನ ಕುರಿತು ಎಸ್‌ ಐಟಿ ಮುಖ್ಯಸ್ಥರು ಸಿ ಎಂ ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಎಸ್‌ ಐಟಿ ರಚನೆಯಾದ ಆರಂಭದ ದಿನಗಳಲ್ಲಿ ಎಸ್‌ ಐಟಿಗೆ ಶಸಿಕುಮಾರ್‌ ಅವರನ್ನು ಆಯ್ಕೆ ಮಾಡಿರುವುದನ್ನು ಸೌಜನ್ಯ ಪರ ಹೋರಾಟಗಾರರು ವಿರೊಧೀಸಿದ್ದರು . ಆದರೇ ಬಳಿಕ ಹೋರಾಟಗಾರರು ಎಸ್‌ ಐಟಿ ಅಧಿಕಾರಿಗಳ ಕುರಿತು ವಿರೋಧ ವ್ಯಕ್ತಪಡಿಸದಿರುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ

Ad Widget
Continue Reading

ಅಂತರ ರಾಜ್ಯ

‘Arnab’ storm-ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ; ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

Published

on



Ad Widget

Ad Widget

Ad Widget

Ad Widget

ಆಂಧ್ರಪ್ರದೇಶದ ಕರಾವಳಿಗೆ ಬುಧವಾರ ಮುಂಜಾನೆ ತೀವ್ರ ಸ್ವರೂಪದ ‘ಅರ್ನಬ್’ ಚಂಡಮಾರುತ ಅಪ್ಪಳಿಸಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

Ad Widget

Ad Widget

Ad Widget

Ad Widget

ಅಮರಾವತಿ, ಅ.28: ಆಂಧ್ರಪ್ರದೇಶದ ಕರಾವಳಿಗೆ ಬುಧವಾರ ಮುಂಜಾನೆ ತೀವ್ರ ಸ್ವರೂಪದ ‘ಅರ್ನಬ್’ ಚಂಡಮಾರುತ ಅಪ್ಪಳಿಸಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಚಂಡಮಾರುತವು ಕರಾವಳಿ ದಾಟುವ ಪ್ರಕ್ರಿಯೆ ಮುಂದುವರಿದಿದ್ದು, ಅದರ ಕೇಂದ್ರಭಾಗ ಕರಾವಳಿಯ ಸಮೀಪದಲ್ಲೇ ಬಹುತೇಕ ಸ್ಥಿರವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

Ad Widget

Ad Widget <> Ad Widget

ಚಂಡಮಾರುತದ ಉತ್ತರ ಭಾಗದಲ್ಲಿರುವ ಸುರುಳಿಯಾಕಾರದ ಮೋಡಗಳ ಪಟ್ಟಿಯು ಒಳನಾಡಿನತ್ತ ಚಲಿಸುತ್ತಿದ್ದು, ಕರಾವಳಿ ದಾಟುವ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಮೂರು ಗಂಟೆಗಳು ಬೇಕಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



Ad Widget

ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಆಂಧ್ರಪ್ರದೇಶದ ಕರಾವಳಿಗೆ ಸಮೀಪ ಚಂಡಮಾರುತ ಕೇಂದ್ರೀಕೃತವಾಗಿದೆ. ಇದು ನರಸಾಪುರದಿಂದ ಪೂರ್ವಕ್ಕೆ ಸುಮಾರು 30 ಕಿ.ಮೀ., ಯಾನಂನಿಂದ ದಕ್ಷಿಣ-ನೈಋತ್ಯಕ್ಕೆ 45 ಕಿ.ಮೀ., ಕಾಕಿನಾಡದಿಂದ ದಕ್ಷಿಣ-ನೈಋತ್ಯಕ್ಕೆ 70 ಕಿ.ಮೀ. ಹಾಗೂ ಮಚಲಿಪಟ್ಟಣದಿಂದ ಪೂರ್ವ-ಈಶಾನ್ಯಕ್ಕೆ 90 ಕಿ.ಮೀ. ದೂರದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Ad Widget

Ad Widget

ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಚಂಡಮಾರುತದ ಪರಿಣಾಮ ಅನಕಾಪಲ್ಲಿ, ವಿಶಾಖಪಟ್ಟಣ, ಕಾಕಿನಾಡ ಹಾಗೂ ಕೋನಸೀಮಾ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ತೊಂದರೆ ಅನುಭವಿಸುವಂತಾಗಿದೆ.

ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ
ಕಾಕಿನಾಡದಲ್ಲಿ ಭಾರೀ ಮಳೆ ಹಾಗೂ ಸಮುದ್ರದ ನೀರು ನುಗ್ಗಿದ ಪರಿಣಾಮ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರನ್ನು ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನಾಲ್ವರು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ, ನಿರಂತರ ಮಳೆಯಿಂದ ಸುತ್ತಮುತ್ತಲಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದರಿಂದ ಅವರಿಗೆ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡಿದ್ದರು.

ಹೊರಬರಲು ಯಾವುದೇ ಮಾರ್ಗವಿಲ್ಲದ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ನಾಲ್ವರನ್ನೂ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!