Connect with us

ಮಂಗಳೂರು

Prajwal R. Shetty-ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ಆಯ್ಕೆ

Published

on



Ad Widget

Ad Widget

Ad Widget

Ad Widget

ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು : ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದ್ವಿತೀಯ ಪಿಯುಸಿ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು, ದೇಶದ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ), ಪುಣೆಯಲ್ಲಿ ಮೂರು ವರ್ಷಗಳ ಸೈನಿಕ ತರಬೇತಿಯನ್ನು ಪಡೆದರು. ಈ ಅವಧಿಯಲ್ಲಿ ಸೂಪರ್ ಡಿಮೋನಾ ವಿಮಾನವನ್ನು ಹಾರಿಸುವ ತರಬೇತಿಯನ್ನೂ ಪಡೆದು, ತಮ್ಮ ವೈಮಾನಿಕ ಪಯಣಕ್ಕೆ ಭದ್ರ ಬುನಾದಿ ಹಾಕಿಕೊಂಡರು.

Ad Widget

Ad Widget <> Ad Widget

ಎನ್‌ಡಿಎಯಲ್ಲಿ ತರಬೇತಿ ಪೂರ್ಣಗೊಳಿಸಿದ ಬಳಿಕ ಹೈದರಾಬಾದ್‌ನ ವಾಯುಪಡೆ ಅಕಾಡೆಮಿಯಲ್ಲಿ ಒಂದು ವರ್ಷದ ವೈಮಾನಿಕ ತರಬೇತಿಯನ್ನು ಪಡೆದರು. ಇಲ್ಲಿ ಪಿಲಾಟಸ್ ಮತ್ತು ಕಿರಣ್ ವಿಮಾನಗಳಲ್ಲಿ ಹಾರಾಟದ ತರಬೇತಿ ಪಡೆದ ಅವರು, ವಾಯುಯಾನ ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದರು. ಇದೇ ಅವಧಿಯಲ್ಲಿ ಬಿ.ಟೆಕ್. ಪದವಿಯನ್ನೂ ಪಡೆದರು.



Ad Widget

ಡಿಸೆಂಬರ್ 2022ರಲ್ಲಿ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಭಾರತೀಯ ವಾಯುಪಡೆಯ ಫೈಟರ್ ವಿಭಾಗಕ್ಕೆ ನಿಯೋಜನೆಗೊಂಡರು. ನಂತರ ಪಶ್ಚಿಮ ಬಂಗಾಳದ ಕಲೈಕುಂಡದಲ್ಲಿ ಹಾಕ್ ಯುದ್ಧವಿಮಾನದಲ್ಲಿ ಒಂದು ವರ್ಷದ ಬೇಸಿಕ್ ಯುದ್ಧವಿಮಾನ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಈ ಹಂತದಲ್ಲಿಯೂ ವಾಯುಯಾನ ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

Ad Widget

Ad Widget

ತರಬೇತಿಯ ವಿವಿಧ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ, ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರಿಗೆ ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಯುದ್ಧವಿಮಾನವನ್ನು ಹಾರಿಸುವ ಅವಕಾಶ ದೊರೆಯಿತು. ಅಂಬಾಲಾದ 17ನೇ ಸ್ಕ್ವಾಡ್ರನ್, ಗೋಲ್ಡನ್ ಆರೋಸ್ಗೆ ನಿಯೋಜನೆಗೊಂಡ ಅವರು, ರಫೇಲ್ ವಿಮಾನದಲ್ಲಿ ಪರಿವರ್ತನಾ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಪ್ರಸ್ತುತ ರಫೇಲ್ ಯುದ್ಧವಿಮಾನದ ಪೂರ್ಣ ಕಾರ್ಯಾಚರಣಾ ಸಾಮರ್ಥ್ಯ ಹೊಂದಿದ ಪೈಲಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚೆಗೆ ವಾರಾಣಸಿಯಲ್ಲಿ ನಡೆದ ಭಾರತೀಯ ವಾಯುಪಡೆಯ 94ನೇ ವಾಯುಪಡೆ ದಿನದ ವೈಮಾನಿಕ ಪ್ರದರ್ಶನ ‘ವಿಂಗ್ಸ್ ಓವರ್ ಗಂಗೇಸ್’ ನಲ್ಲಿ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಭಾಗವಹಿಸಿದ್ದು ವಿಶೇಷ ಹೆಮ್ಮೆಯ ಸಂಗತಿಯಾಗಿದೆ. ಈ ವೈಮಾನಿಕ ಪ್ರದರ್ಶನದಲ್ಲಿ ಮೂರು ರಫೇಲ್ ಯುದ್ಧವಿಮಾನಗಳನ್ನು ಒಳಗೊಂಡ ‘ನೀಲಕಂಠ’ ರಚನೆಯ ಭಾಗವಾಗಿ ಅವರು ಹಾರಾಟ ನಡೆಸಿದರು. ಈ ರಚನೆಯಲ್ಲಿ ಮಧ್ಯದ ಪ್ರಮುಖ ಸ್ಥಾನದಲ್ಲಿ ಹಾರಾಟ ನಡೆಸುವ ಮೂಲಕ ತಮ್ಮ ವೃತ್ತಿಪರ ಕೌಶಲ ಮತ್ತು ವೈಮಾನಿಕ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಹರೇಕಳ ಉಳಿದೊಟ್ಟು ಶ್ರೀ ರಮೇಶ್ ಶೆಟ್ಟಿ ಮತ್ತು ಕೊಡೆತ್ತೂರು ಮೂಡುದೇವಸ್ಯ ಶ್ರೀಮತಿ ಸೀತಾ ಆರ್. ಶೆಟ್ಟಿ ದಂಪತಿಯ ಪುತ್ರರಾಗಿದ್ದಾರೆ. ಕಠಿಣ ತರಬೇತಿ, ಶೈಕ್ಷಣಿಕ ಸಾಧನೆ ಹಾಗೂ ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಯುದ್ಧವಿಮಾನದ ಕಾರ್ಯಾಚರಣಾ ಪೈಲಟ್ ಆಗಿ ಬೆಳೆದಿರುವ ಅವರ ಪಯಣ, ಯುವಜನರಿಗೆ ಸ್ಫೂರ್ತಿದಾಯಕವಾಗಿದೆ.

Ad Widget
Click to comment

Leave a Reply

ಅಪರಾಧ

Rakesh Murder :ಮಂಗಳೂರು : ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಕೊಲೆ: ಮೂವರು ಹಂತಕರಿಗೆ ಜೀವಾವಧಿ ಶಿಕ್ಷೆ!

Published

on



Ad Widget

Ad Widget

Ad Widget

Ad Widget

ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ನಾಲ್ವರು ಆರೋಪಿಗಳಿಗೂ ವಿವಿಧ ಶಿಕ್ಷೆಗಳನ್ನು ವಿಧಿಸಲಾಗಿದೆ.

Ad Widget

Ad Widget

Ad Widget

Ad Widget

2019ರ ಜನವರಿ 3ರಂದು ಪಂಜಿಮೊಗರು ಮಾಲಾಡಿ ರಸ್ತೆಯ ಎಂ.ವಿ. ಶೆಟ್ಟಿ ಕಾಲೇಜು ಬಳಿ ಈ ಕೊಲೆ ನಡೆದಿತ್ತು. ಪ್ರಕರಣದ ಮೊದಲ ಆರೋಪಿ ಸುನೀಲ್ ಕುಮಾರ್ ಅಲಿಯಾಸ್ ಕೌಟಿ ಎಂಬಾತನ ತಂಗಿಯನ್ನು ರಾಕೇಶ್ ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಸುನೀಲ್ ಕುಮಾರ್ ಸೇರಿದಂತೆ ಪ್ರವೀಣ್ ಪೂಜಾರಿ ಅಲಿಯಾಸ್ ಚೋಟು, ಪ್ರೀತಮ್ ಅಲಿಯಾಸ್ ಅಭಿ ಹಾಗೂ ರೋಹಿತ್ ಕುಮಾರ್ ಅಲಿಯಾಸ್ ಶೂಟರ್ ಸೇರಿಕೊಂಡು ರಾಕೇಶ್‌ನನ್ನು ತಲವಾರಿನಿಂದ ಕೊಲೆ ಮಾಡಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ ಮಾರುತಿ ಕಮಟೆ ಅವರು ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಿದ್ದಾರೆ.



Ad Widget

ಮೂವರಿಗೆ ಜೀವಾವಧಿ ಶಿಕ್ಷೆ

Ad Widget

Ad Widget

ಕೊಲೆ ಹಾಗೂ ಸಂಚು ರೂಪಿಸಿದ ಆರೋಪದಡಿ ಮೊದಲ ಮೂರು ಆರೋಪಿಗಳಾದ ಸುನೀಲ್ ಕುಮಾರ್, ಪ್ರವೀಣ್ ಪೂಜಾರಿ ಮತ್ತು ಪ್ರೀತಮ್ ಅವರಿಗೆ ಭಾರತೀಯ ದಂಡ ಸಂಹಿತೆಯ ಕಲಂ 302, 120(ಬಿ) ಹಾಗೂ 34ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ತಲಾ ₹15,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಶಿಕ್ಷೆ ಅನುಭವಿಸಬೇಕಾಗಿದೆ.

ಸಾಕ್ಷ್ಯ ನಾಶಪಡಿಸಿದ ಆರೋಪದಡಿ ನಾಲ್ವರು ಆರೋಪಿಗಳಿಗೂ ಕಲಂ 201 ಹಾಗೂ 34ರ ಅಡಿಯಲ್ಲಿ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ತಲಾ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ ವಿಧಿಸಲಾಗಿದೆ.

ಅಲ್ಲದೆ, ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ನಾಲ್ಕನೇ ಆರೋಪಿ ರೋಹಿತ್ ಕುಮಾರ್‌ಗೆ ಕಲಂ 212 ಹಾಗೂ 34ರ ಅಡಿಯಲ್ಲಿ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ ಅನುಭವಿಸಬೇಕಾಗಿದೆ.

ಮೃತನ ತಂದೆಗೆ ₹50 ಸಾವಿರ ಪರಿಹಾರ

ಒಟ್ಟು ₹70,000 ದಂಡದ ಮೊತ್ತದಲ್ಲಿ ₹20,000ವನ್ನು ಸರ್ಕಾರಕ್ಕೆ ಹಾಗೂ ₹50,000ವನ್ನು ಮೃತ ರಾಕೇಶ್‌ನ ತಂದೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತೀಲಾಲ್ ಚೌದರಿ ಸರ್ಕಾರದ ಪರ ವಾದ ಮಂಡಿಸಿದ್ದರು.

Ad Widget
Continue Reading

ಮಂಗಳೂರು

Soujanya case-ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್ ಬಿಡುಗಡೆ?

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.29: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

Ad Widget

Ad Widget

Ad Widget alt="Ad Widget"/>

Ad Widget

ಎಸ್‌ಐಟಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಎಸ್‌ಐಟಿಯ ನೂತನ ಮುಖ್ಯಸ್ಥರಾಗಿ ಲಾಬುರಾಮ್ ಅಥವಾ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.



Ad Widget

ಇದೇ ವೇಳೆ, ಎಸ್‌ಐಟಿಯ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರನ್ನೂ ಬದಲಾಯಿಸುವ ಸಾಧ್ಯತೆ ಇದೆ. ಅವರ ಸ್ಥಾನಕ್ಕೆ ಎಸಿಪಿ ಶ್ರೀನಿಧಿ ಅವರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Continue Reading

ಮಂಗಳೂರು

Soujanya Case-Big Breaking: ಸೌಜನ್ಯ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆ : SIT ವಿಚಾರಣೆಗೆ ಆಗಮಿಸಿದ ಎಸ್ಐ ಯೋಗೀಶ್ – ಸಿಐಡಿ ಡಿವೈಎಸ್ಪಿ ರುದ್ರಮುನಿ – ಭಾಸ್ಕರ್ ರೈ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿಗಳನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ವಿಚಾರಣೆಗೆ ಒಳಪಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್ ಭಾಸ್ಕರ್ ರೈ, ಸಿಐಡಿಯ ಅಂದಿನ ಡಿವೈಎಸ್‌ಪಿ ರುದ್ರಮುನಿ ಹಾಗೂ ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಪಿಎಸ್‌ಐ ಯೋಗೀಶ್ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿಗಳನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ವಿಚಾರಣೆಗೆ ಒಳಪಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್ ಭಾಸ್ಕರ್ ರೈ, ಸಿಐಡಿಯ ಅಂದಿನ ಡಿವೈಎಸ್‌ಪಿ ರುದ್ರಮುನಿ ಹಾಗೂ ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಪಿಎಸ್‌ಐ ಯೋಗೀಶ್ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಮಂಗಳೂರಿನಲ್ಲಿರುವ ಎಸ್‌ಐಟಿ ಕಚೇರಿಗೆ ಅಂದಿನ ಅಧಿಕಾರಿಗಳು ಆಗಮಿಸಿದ್ದು, ಪಿಎಸ್‌ಐ ಯೋಗೀಶ್ ಅವರು ತಮ್ಮೊಂದಿಗೆ ನೋಟ್‌ಬುಕ್‌ ತಂದಿರುವುದು ಗಮನ ಸೆಳೆದಿದೆ.



Ad Widget

ಇನ್ನು, ಕೆಲವು ಮಾಜಿ ಪೊಲೀಸ್ ಅಧಿಕಾರಿಗಳು ಹಲವು ಕಡತಗಳೊಂದಿಗೆ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅವರು ತಂದಿರಬಹುದು ಎಂದು ಹೇಳಲಾಗುತ್ತಿದ್ದರೂ, ಕಡತಗಳಲ್ಲಿರುವ ಮಾಹಿತಿ ಕುರಿತು ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

Ad Widget

Ad Widget

ಪ್ರಕರಣದ ಆರಂಭಿಕ ತನಿಖೆಯಲ್ಲಿ ನಡೆದಿದ್ದ ಬೆಳವಣಿಗೆಗಳು ಹಾಗೂ ಸಂಗ್ರಹಿಸಲಾಗಿದ್ದ ದಾಖಲೆಗಳ ಕುರಿತು ಎಸ್‌ಐಟಿ ಮಾಹಿತಿ ಪಡೆಯುತ್ತಿದೆ ಎನ್ನಲಾಗಿದೆ. ಮರುತನಿಖೆಯ ಭಾಗವಾಗಿ ಹಿಂದಿನ ತನಿಖಾಧಿಕಾರಿಗಳ ವಿಚಾರಣೆ ಮಹತ್ವ ಪಡೆದುಕೊಂಡಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!