Connect with us

ದಕ್ಷಿಣ ಕನ್ನಡ

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ₹6.86 ಕೋಟಿ ವಂಚನೆ ಆರೋಪ: ಕಾರ್ಯನಿರ್ವಾಹಣಾಧಿಕಾರಿ ಹಾಗೂ ಮಹಿಳೆ ವಿರುದ್ಧ FIR

Published

on



Ad Widget

Ad Widget

Ad Widget

Ad Widget

ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸುಮಾರು ₹6.86 ಕೋಟಿ ಮೊತ್ತದ ಹಣಕಾಸು ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಸಾಲದ ಅರ್ಜಿಗಳು, ಆಡಳಿತ ಮಂಡಳಿಯ ಸಭಾ ನಡಾವಳಿಗಳು ಹಾಗೂ ವಕೀಲರ ಕಾನೂನು ಅಭಿಪ್ರಾಯ ಪತ್ರಗಳನ್ನು ತಿದ್ದಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಲಾಗಿದೆ  ಎಂದು  ಆರೋಪಿಸಿ ಸಂಘದ ಅಧ್ಯಕ್ಷರು ನ್ಯಾಯಲಯಕ್ಕೆ ಖಾಸಗಿ ದೂರು ಸಲ್ಲಿಸಿದ ಮೇರೆಗೆ , ಕೋರ್ಟಿನ ಆದೇಶದಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಕೇಶವ ಗೌಡ ಹಾಗೂ ಮಂಗಳೂರಿನ ಕದ್ರಿ ನಿವಾಸಿ ಸಮೀರಾ ರಿಯಾಝ್‌ ರವರು ಕೃತ್ಯ ಎಸಗಿದವರೆಂದು ದೂರಿನಲ್ಲಿ ಆರೋಪಿಸಲಾಗಿದೆ. ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪದ್ಮನಾಭ ಭಟ್‌ ಅವರು  ದೂರು ನೀಡಿದವರು.

Ad Widget

Ad Widget

Ad Widget alt="Ad Widget"/>

Ad Widget

ದೂರಿನಲ್ಲಿ ಏನಿದೆ ?

Ad Widget

Ad Widget <> Ad Widget

ದೂರಿನ ಪ್ರಕಾರ, ಸಂಘದಲ್ಲಿ ಸಾರ್ವಜನಿಕರಿಂದ ವಿವಿಧ ಠೇವಣಿಗಳ ರೂಪದಲ್ಲಿ ಒಟ್ಟು ₹31,21,84,821 ಸಂಗ್ರಹಿಸಲಾಗಿದೆ. 12 ಸದಸ್ಯರ ಚುನಾಯಿತ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯೊಂದಿಗೆ ಸಂಘ ಕಾರ್ಯನಿರ್ವಹಿಸುತ್ತಿದೆ.



Ad Widget

2025-26ನೇ ಸಾಲಿನ ವ್ಯವಹಾರಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಸುಮಾರು ₹6.86 ಕೋಟಿ ಮೊತ್ತದ ಅನುಮಾನಾಸ್ಪದ ಹಣ ವರ್ಗಾವಣೆ ನಡೆದಿರುವುದು ಗಮನಕ್ಕೆ ಬಂದಿದೆ. ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಸಮೀರಾ ರಿಯಾಜ್ ಎಂಬವರ ಖಾತೆಗೆ ಹಣ ವರ್ಗಾವಣೆಯಾಗಿರುವುದು ಪರಿಶೀಲನೆಯ ವೇಳೆ ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Ad Widget

Ad Widget

ಸಂಘದ CoBank ಸಾಫ್ಟ್‌ವೇರ್ ಮೂಲಕ ನಡೆಯುವ ಖಾತೆಗಳ ವ್ಯವಹಾರದ ಜವಾಬ್ದಾರಿಯನ್ನು ಕಾರ್ಯನಿರ್ವಾಹಣಾಧಿಕಾರಿ ಕೇಶವ ಗೌಡ ಕೆ. ಅವರಿಗೆ ವಹಿಸಲಾಗಿತ್ತು. ಅವರ ಮೂಲಕವೇ ಈ ಹಣ ವರ್ಗಾವಣೆಗಳು ನಡೆದಿವೆ ಎಂದು ಆರೋಪಿಸಲಾಗಿದೆ.

ವಿಚಾರಣೆ ವೇಳೆ, ಮಂಗಳೂರಿನ ಜಪ್ಪಿನಮೊಗರು ನಿವಾಸಿಯೊಬ್ಬರು   ಸಮೀರಾ ರಿಯಾಜ್ ಅವರನ್ನು ಪರಿಚಯಿಸಿದ್ದರು ಎಂದು ಕೇಶವ ಗೌಡ ತಿಳಿಸಿದ್ದಾರೆ ಎನ್ನಲಾಗಿದೆ.  ಆ ವ್ಯಕ್ತಿಯು  ಈ ಹಿಂದೆ ₹1.67 ಕೋಟಿ ಹಣವನ್ನು ಬ್ಯಾಂಕ್ ವರ್ಗಾವಣೆ ಮೂಲಕ ಪಡೆದು, ಬಳಿಕ ಸಮೀರಾ ರಿಯಾಜ್ ಅವರ ಖಾತೆಗೆ ವರ್ಗಾಯಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಸಮೀರಾ ರಿಯಾಜ್ ಅವರು ನಿರಂತರವಾಗಿ ದೂರವಾಣಿ ಕರೆ ಮಾಡಿ ಹಣ ನೀಡುವಂತೆ ಒತ್ತಡ ಹೇರಿದ್ದಲ್ಲದೆ, ಹಣ ನೀಡದಿದ್ದರೆ ಸುಳ್ಳು ಆರೋಪ ಮಾಡಿ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಭಯಗೊಂಡು ಹಂತ ಹಂತವಾಗಿ ಒಟ್ಟು ₹7.26 ಕೋಟಿ ವರ್ಗಾವಣೆ ಮಾಡಿರುವುದಾಗಿ ಕೇಶವ ಗೌಡ ತಿಳಿಸಿದ್ದಾರೆ ಎನ್ನಲಾಗಿದೆ.

ಸಾಲದ ದಾಖಲೆಗಳ ತಿದ್ದುಪಡಿ, ನಕಲಿ ಸಹಿ ಆರೋಪ

ಸಂಘದ ಅಧ್ಯಕ್ಷರು ಹಾಗೂ ಇತರ ನಿರ್ದೇಶಕರು ದಾಖಲೆಗಳನ್ನು ಪರಿಶೀಲಿಸಿದಾಗ ಸಾಲಗಾರರ ಸಾಲದ ಅರ್ಜಿಗಳು ಮತ್ತು ಸಾಲ ಮಂಜೂರಾತಿಗೆ ಸಂಬಂಧಿಸಿದ ಆಡಳಿತ ಮಂಡಳಿಯ ಸಭಾ ನಡಾವಳಿಗಳಲ್ಲಿ ತಿದ್ದುಪಡಿ ಮಾಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಧ್ಯಕ್ಷರು ಮತ್ತು ನಿರ್ದೇಶಕರು ಸಹಿ ಮಾಡಿದ ಬಳಿಕ ಅವರ ಗಮನಕ್ಕೆ ತಾರದೆ ಹೆಚ್ಚುವರಿ ನಡಾವಳಿಗಳನ್ನು ಬರೆದಿರುವುದು, ಸಾಲದ ಮೊತ್ತ ಹಾಗೂ ದಿನಾಂಕಗಳನ್ನು ತಿದ್ದಿರುವುದು ಮತ್ತು ನಕಲಿ ಸಹಿಗಳನ್ನು ಹಾಕಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ, ಸಾಲದ ಅರ್ಜಿಗಳಿಗೆ ಲಗತ್ತಿಸಲು ವಕೀಲರ ಹೆಸರಿನಲ್ಲಿ ನಕಲಿ ಕಾನೂನು ಅಭಿಪ್ರಾಯ ಪತ್ರಗಳನ್ನು ಸೃಷ್ಟಿಸಿ, ಹಳೆಯ ಅಭಿಪ್ರಾಯ ಪತ್ರಗಳನ್ನು ಹೊಸ ಸಾಲದ ಅರ್ಜಿಗಳಿಗೆ ಬಳಸಿರುವ ಆರೋಪವೂ ಇದೆ. ಸಂಘದ ನಿಯಮಾನುಸಾರ ಮಂಜೂರಾದ ಸಾಲದ ದಾಖಲೆಗಳನ್ನು ಬಳಿಕ ತಿದ್ದುಪಡಿ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕೃತ್ಯಗಳು 2024ರಿಂದಲೇ ನಡೆದಿರುವ ಶಂಕೆಯಿದ್ದು, ಆರೋಪಿಗಳ ಕೃತ್ಯದಿಂದ ಸಂಘಕ್ಕೆ ಸುಮಾರು ₹6.86 ಕೋಟಿ ನಷ್ಟವಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.ಈ ಸಂಬಂಧ ಸಂಘದ ಅಧ್ಯಕ್ಷರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಡಿಸ್. ನಂ. 2495/2026ರ ಆದೇಶದಂತೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪ್ರಕರಣ ದಾಖಲಿಸಲಾಗಿದೆ ಎಂದು ದೂರಿನ ಸಾರಾಂಶದಲ್ಲಿ ತಿಳಿಸಲಾಗಿದೆ.

ಇದು FIR ಪ್ರತಿಯಲ್ಲಿ ಆರೋಪಿಸಲಾದ ಆರೋಪಗಳಷ್ಟೇ ಆಗಿದ್ದು, ಪೊಲೀಸ್‌ ತನಿಖೆಯಿಂದ ನಿಜಾಂಶ ಹೊರಗೆ ಬರಬೇಕಿದೆ . ಈ ಕುರಿತು ಮಾಹಿತಿ ಪಡೆಯಲು ನಿಖರ ನ್ಯೂಸ್‌  ಸಿಇಒ ಕೇಶವ ಗೌಡರವರನ್ನು ಸಂಪರ್ಕಕ್ಕೆ ಪ್ರಯತ್ನಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರ ಪ್ರತಿಕ್ರಿಯೆ ಲಭಿಸಿದಲ್ಲಿ ಈ ವರದಿಯಲ್ಲಿ Update ಮಾಡಲಾಗುವುದು

Ad Widget
Click to comment

Leave a Reply

ಬಿಗ್ ನ್ಯೂಸ್

Dr. Varadaraja Chandragiri-ಪುತ್ತೂರಿನ ವಿವೇಕಾನಂದ ಸ್ವಾಯತ್ತ ಪದವಿ ಕಾಲೇಜ್ ಗೆ ನೂತನ ಆಡಳಿತ ಮಂಡಳಿ – ಅಧ್ಯಕ್ಷರಾಗಿ ಡಾ. ವರದರಾಜ ಚಂದ್ರಗಿರಿ ಜವಬ್ದಾರಿ ಸ್ವೀಕಾರ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಪುತ್ತೂರು, ಇಲ್ಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಡಾ.ವರದ ರಾಜ್ ಚಂದ್ರಗಿರಿ, ಸಂಚಾಲಕರಾಗಿ ಎ ಮೋಹನ್ ಜವಬ್ದಾರಿ ಸ್ವೀಕರಿಸಿದರು.

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಪುತ್ತೂರು, ಇಲ್ಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಡಾ.ವರದ ರಾಜ್ ಚಂದ್ರಗಿರಿ, ಸಂಚಾಲಕರಾಗಿ ಎ ಮೋಹನ್ ಜವಬ್ದಾರಿ ಸ್ವೀಕರಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಕೋಶಾಧಿಕಾರಿಗಳಾಗಿ ಸುಕುಮಾರ್ ರಾವ್ ಎನ್.ಎಸ್. ಹಾಗೂ ಸದಸ್ಯರುಗಳಾಗಿ ಯಶೋಧರ ಜೈನ್, ಎಸ್ ರಾಜಶೇಖರ್, ವೇಣುಗೋಪಾಲ ಭಟ್ ಎಂ, ಪೂರ್ಣ ಮಂಗಳ, ಮಾಲಿನಿ ಕಶ್ಯಪ್, ರಂಜಿತ್ ಜೈನ್ ಇವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣ ಕುಮಾರ್ ಶೆಟ್ಟಿ ಕಡಬ ದೀಪ ಪ್ರದಾನ ಮಾಡುವ ಮೂಲಕ ಜವಬ್ದಾರಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ, ಹಾಗೂ ಕಾಲೇಜಿನ ನಿಕಟ ಪೂರ್ವ ಅಧ್ಯಕ್ಷರಾದ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ ಎನ್, ಕಾಲೇಜಿನ ಪ್ರಾರ್ಚಾಯ ಶ್ರೀಕೃಷ್ಣ ಗಣರಾಜ ಭಟ್ ಎಸ್ ಹಾಗೂ ವಿಭಾಗದ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.



Ad Widget
Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಅ.31ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Published

on



Ad Widget

Ad Widget

Ad Widget

Ad Widget

ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಮಾರ್ಗ ಬದಲಾವಣೆ ಕಾರ್ಯ ಕೈಗೊಳ್ಳಲಿರುವುದರಿಂದ ಅ.31ರ ಶನಿವಾರ ಪುತ್ತೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ 110/33/11 ಕೆ.ವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಹಾಗೂ ವಾಟರ್ ಸಪ್ಲೈ ಫೀಡರ್‌ಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಮಾರ್ಗ ಬದಲಾವಣೆ ಕಾರ್ಯ ಕೈಗೊಳ್ಳಲಿರುವುದರಿಂದ ಅ.31ರ ಶನಿವಾರ ಪುತ್ತೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ 110/33/11 ಕೆ.ವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಹಾಗೂ ವಾಟರ್ ಸಪ್ಲೈ ಫೀಡರ್‌ಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Ad Widget

Ad Widget <> Ad Widget

ಈ ಫೀಡರ್‌ಗಳ ವ್ಯಾಪ್ತಿಗೆ ಒಳಪಡುವ ವಾಟರ್ ಸಪ್ಲೈ, ದರ್ಬೆ, ಕೆಎಸ್‌ಆರ್‌ಟಿಸಿ, ನೆಲ್ಲಿಕಟ್ಟೆ, ಕಲ್ಲಾರೆ, ಸಾಮೆತ್ತಡ್ಕ, ಹನುಮಾನ್ ಮಿಲ್, ಅಶ್ವಿನಿ ಸರ್ಕಲ್, ಐಬಿ, ಎಂ.ಟಿ. ರಸ್ತೆ, ಕೋರ್ಟ್ ರಸ್ತೆ, ಬೊಳ್ಳಾರು, ಬೈಪಾಸ್, ಬೀರಮಲೆ, ಪರ್ಲಡ್ಕ ಹಾಗೂ ಮಿನಿ ವಿಧಾನಸೌಧ ಪರಿಸರದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.



Ad Widget
Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ “ಕನಸುಗಳು – 2026” ರ ಉದ್ಘಾಟನೆ – ಸಮಾರಂಭ; ವಿದ್ಯಾರ್ಥಿಗಳು ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು : ಶ್ರದ್ಧಾ ವಿ. ಶೆಟ್ಟಿ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ರಾಜ್ಯಮಟ್ಟದ “ಕನಸುಗಳು – 2026 ಇದರ ಉದ್ಘಾಟನೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ವೇದಾಂತ ಐರನ್ ಅಂಡ್ ಸ್ಟೀಲ್ ಲಿಮಿಟೆಡ್, ಗೋವಾ ಇದರ ಅಸೋಸಿಯೇಟ್ ಮ್ಯಾನೇಜರ್ ಸಿಎ ಶ್ರದ್ಧಾ ವಿ. ಶೆಟ್ಟಿ ನಡೆಸಿಕೊಟ್ಟು ಮಾತನಾಡಿದರು.

Ad Widget

Ad Widget

Ad Widget

Ad Widget

ಕಂಡ ಕನಸುಗಳನ್ನು ನನಸು ಮಾಡುವ ಪ್ರಯತ್ನಗಳು ಜೊತೆಗೂಡಿದಾಗ ಭವಿಷ್ಯ ಸುಂದರವಾಗಬಲ್ಲದು. ಕನಸು ಕಾಣುವುದು ಸುಲಭ, ಆದರೆ ಆ ಕನಸುಗಳನ್ನು ನನಸಾಗಿಸಲು ನಿರಂತರ ಪರಿಶ್ರಮ, ಆತ್ಮವಿಶ್ವಾಸ, ಶಿಸ್ತು ಮತ್ತು ದೃಢಸಂಕಲ್ಪ ಅತ್ಯಗತ್ಯ. ಜೀವನದಲ್ಲಿ ಎದುರಾಗುವ ಸವಾಲುಗಳು ನಮ್ಮನ್ನು ಹಿಮ್ಮೆಟ್ಟಿಸುವುದಕ್ಕಲ್ಲ, ಬದಲಾಗಿ ನಮ್ಮ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಿಗುವ ಅವಕಾಶಗಳಾಗಿವೆ. ಸೋಲು ಎದುರಾದಾಗ ಕುಗ್ಗದೆ, ಅದನ್ನೇ ಯಶಸ್ಸಿನ ಮೆಟ್ಟಿಲನ್ನಾಗಿ ಮಾಡಿಕೊಂಡು ಮುನ್ನಡೆಯಬೇಕು. ನಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ, ಸಾಧಿಸುವ ಛಲ ನಮ್ಮಲ್ಲಿರಲಿ, ಪ್ರಯತ್ನದಲ್ಲಿ ಎಂದಿಗೂ ವಿರಾಮವಿರದಿರಲಿ. ಇಂದಿನ ಸಣ್ಣ ಪ್ರಯತ್ನಗಳೇ ನಾಳಿನ ದೊಡ್ಡ ಸಾಧನೆಗಳಿಗೆ ಭದ್ರ ಬುನಾದಿಯಾಗುತ್ತವೆ. ಯುವಜನತೆ ತಮ್ಮಲ್ಲಿರುವ ಪ್ರತಿಭೆ, ಶಕ್ತಿ ಮತ್ತು ಸಾಮರ್ಥ್ಯವನ್ನು ಗುರುತಿಸಿಕೊಂಡು, ಸಕಾರಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ವೇದಾಂತ ಐರನ್ ಅಂಡ್ ಸ್ಟೀಲ್ ಲಿಮಿಟೆಡ್, ಗೋವಾ ಇದರ ಅಸೋಸಿಯೇಟ್ ಮ್ಯಾನೇಜರ್ ಸಿಎ ಶ್ರದ್ಧಾ ವಿ. ಶೆಟ್ಟಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ರಾಜ್ಯಮಟ್ಟದ “ಕನಸುಗಳು – 2026 ಇದರ ಉದ್ಘಾಟನೆಯನ್ನು ನಡೆಸಿಕೊಟ್ಟು ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಮಂಡಳಿಯ ನಿರ್ದೇಶಕರಾದ ರಮೇಶ್ಚಂದ್ರ ಎಮ್. ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಜ್ಞಾನಾರ್ಜನೆಗೆ, ಕೌಶಲ್ಯಗಳ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು, ಅಂತೆಯೇ ಕನಸುಗಳು ಕಾರ್ಯಕ್ರಮ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ರೂಪಿಸುವಲ್ಲಿ ಬೇಕಾದ ಅಡಿಪಾಯವನ್ನು ಒದಗಿಸಿ ಕೊಡಲಿ ಎಂದು ಆಶಿಸಿದರು.



Ad Widget

ಉದ್ಘಾಟನಾ ಸಮಾರಂಭದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸುಮಾರು 14 ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚಿತ್ರಕಲೆ, ಕನ್ನಡ ಕವನ ರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಯುವಪತ್ರಕರ್ತ, ಯುವ ವಾಣಿಜ್ಯೋದ್ಯಮಿ, ಮುಖವರ್ಣಿಕೆ, ವೀಡಿಯೋ ಸಂಕಲನ , ಚರ್ಚಾ ಸ್ಪರ್ಧೆ, ತಾಳವಾದ್ಯ , ಕಲರವ – ಸಾಂಸ್ಕೃತಿಕ ವೈವಿಧ್ಯ , ನಿಧಿಶೋಧ, ಭಗವದ್ಗೀತಾ ಕಂಠಪಾಠ ಮುಂತಾದ ಸ್ಪರ್ಧೆಗಳನ್ನು ನಡೆಸಲಾಯಿತು.

Ad Widget

Ad Widget

ಕಾರ್ಯಕ್ರಮದ ವೇದಿಕೆಯಲ್ಲಿ ಕನಸುಗಳು ಕಾರ್ಯಕ್ರಮದ ಸಂಯೋಜಕಿ ದೀಕ್ಷಿತಾ ಬಿ. ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿಯರಾದ ಮೊನೀಷಾ ವಂದಿಸಿ, ಮಮತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!