Uncategorized
Rahul Gandhi-ಟಾಟಾ ಸಮೂಹವನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಲಾಗುತ್ತಿದೆ : ‘ಉದ್ಯಮಿಗಳು ಇನ್ನೆಷ್ಟು ದಿನ ಮೌನವಾಗಿರುತ್ತೀರಿ..?’ ರಾಹುಲ್ ಗಾಂಧಿ
ಟಾಟಾ ಸಮೂಹವನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ವಿಚಾರದಲ್ಲಿ ದೇಶದ ಉದ್ಯಮಿಗಳು ಮೌನ ವಹಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟಾಟಾ ಸಮೂಹದ ನಾಯಕತ್ವಕ್ಕೆ ಸಂಬಂಧಿಸಿದಂತೆ ವಿವಾದ ತೀವ್ರಗೊಂಡಿರುವ ಬೆನ್ನಲ್ಲೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ನವದೆಹಲಿ: ಟಾಟಾ ಸಮೂಹವನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ವಿಚಾರದಲ್ಲಿ ದೇಶದ ಉದ್ಯಮಿಗಳು ಮೌನ ವಹಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಟಾಟಾ ಸಮೂಹದ ನಾಯಕತ್ವಕ್ಕೆ ಸಂಬಂಧಿಸಿದಂತೆ ವಿವಾದ ತೀವ್ರಗೊಂಡಿರುವ ಬೆನ್ನಲ್ಲೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಟಾಟಾ ಸಮೂಹವನ್ನು ನಾಶಪಡಿಸಲಾಗುತ್ತಿದೆ. ಆದರೆ, ಒಬ್ಬನೇ ಒಬ್ಬ ಉದ್ಯಮಿಯೂ ಈ ಬಗ್ಗೆ ಮಾತನಾಡಲು ಧೈರ್ಯ ತೋರುತ್ತಿಲ್ಲ. ನೀವು ಇನ್ನೆಷ್ಟು ದಿನ ಮೌನವಾಗಿರುತ್ತೀರಿ? ನಿಮ್ಮನ್ನು ಅಧೀನಕ್ಕೆ ತೆಗೆದುಕೊಳ್ಳುವವರೆಗೂ ಕಾಯುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.
“ನಿಮಗೆ ಧೈರ್ಯವಿಲ್ಲ. ಆದರೆ, ನಮಗೆ ಧೈರ್ಯವಿದೆ. ಇಂತಹ ಅಪರಾಧಗಳಿಗೆ ನಾವು ನ್ಯಾಯ ಒದಗಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ವೇಳೆ, ಭಾರತದ ಉದ್ಯಮ ವಲಯವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಟದ ವಸ್ತುವಲ್ಲ ಎಂದೂ ಅವರು ಟೀಕಿಸಿದ್ದಾರೆ.
ರಾಹುಲ್ ಗಾಂಧಿ ಅವರ ಆರೋಪಗಳಿಗೆ ಕೇಂದ್ರ ಸರ್ಕಾರವಾಗಲಿ, ಟಾಟಾ ಸಮೂಹವಾಗಲಿ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಏನಿದು ಟಾಟಾ ಸಮೂಹದ ನಾಯಕತ್ವದ ವಿವಾದ?
ಟಾಟಾ ಸನ್ಸ್‌ನ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರನ್ನು ಮರುನೇಮಕ ಮಾಡುವ ಪ್ರಸ್ತಾವಕ್ಕೆ ಟಾಟಾ ಟ್ರಸ್ಟ್‌ಗಳ ಅಧ್ಯಕ್ಷ ನೋಯೆಲ್ ಟಾಟಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಚಂದ್ರಶೇಖರನ್ ಅವರ ಮರುನೇಮಕದ ನಿರ್ಧಾರವನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕೈಗೊಳ್ಳಲಾಗಿದೆ. ಅಲ್ಲದೆ, ಈ ವಿಷಯ ಸಭೆಯ ಕಾರ್ಯಸೂಚಿಯಲ್ಲೂ ಇರಲಿಲ್ಲ ಎಂಬುದು ನೋಯೆಲ್ ಟಾಟಾ ಅವರ ಆಕ್ಷೇಪವಾಗಿತ್ತು.
ಈ ಬೆಳವಣಿಗೆಯು ಟಾಟಾ ಸಮೂಹದೊಳಗಿನ ನಾಯಕತ್ವಕ್ಕೆ ಸಂಬಂಧಿಸಿದ ಭಿನ್ನಾಭಿಪ್ರಾಯಗಳನ್ನು ಮುನ್ನೆಲೆಗೆ ತಂದಿದೆ.
Uncategorized
Petrol-Big Breaking: ರಾಜ್ಯದಲ್ಲಿ ಪೆಟ್ರೋಲ್ ಗೆ ಶೇ.31.2 ಇಥನಾಲ್ ಮಿಶ್ರಣ ಪತ್ತೆ..! ಲ್ಯಾಬ್ ವರದಿಯಲ್ಲಿ ಆಘಾತಕಾರಿ ಅಂಶ ಬಯಲು..! ಗಂಭೀರ ಆರೋಪ ಮಾಡಿದ ಸಚಿವ ರಿಜ್ವಾನ್ – ಮೈಲೇಜ್ ಕಡಿತ ವಾಹನ ದುಸ್ಥಿತಿಗೆ ಇದೆ ಕಾರಣ.!
ರಾಜ್ಯದಲ್ಲಿ ಪ್ರಮುಖ ತೈಲ ಮಾರಾಟ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿತ ಶೇ.20ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಇಥನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಕರ್ನಾಟಕ ಸರ್ಕಾರ ಮಾಡಿದೆ. ಖಾಸಗಿ ಪ್ರಯೋಗಾಲಯಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪೆಟ್ರೋಲ್‌ನಲ್ಲಿನ ಇಥನಾಲ್ ಪ್ರಮಾಣ ಗರಿಷ್ಠ ಶೇ.31.2ರಷ್ಟು ಇರುವುದು ಪತ್ತೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಪ್ರಮುಖ ತೈಲ ಮಾರಾಟ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿತ ಶೇ.20ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಇಥನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಕರ್ನಾಟಕ ಸರ್ಕಾರ ಮಾಡಿದೆ. ಖಾಸಗಿ ಪ್ರಯೋಗಾಲಯಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪೆಟ್ರೋಲ್‌ನಲ್ಲಿನ ಇಥನಾಲ್ ಪ್ರಮಾಣ ಗರಿಷ್ಠ ಶೇ.31.2ರಷ್ಟು ಇರುವುದು ಪತ್ತೆಯಾಗಿದೆ.
ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅವರು ಪರೀಕ್ಷಾ ವರದಿಯ ವಿವರಗಳನ್ನು ಬಹಿರಂಗಪಡಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 63 ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ತಿಳಿಸಿದರು.
ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL), ಹಿಂದುಸ್ತಾನ್ ಪೆಟ್ರೋಲಿಯಂ (HPCL), ಭಾರತ್ ಪೆಟ್ರೋಲಿಯಂ (BPCL), ನಾಯರಾ ಎನರ್ಜಿ, ಶೆಲ್ ಮತ್ತು ಎಂಆರ್‌ಪಿಎಲ್ (MRPL) ಕಂಪನಿಗಳ ಪೆಟ್ರೋಲ್ ಮಾದರಿಗಳಲ್ಲಿ ಶೇ.20ಕ್ಕಿಂತ ಹೆಚ್ಚಿನ ಇಥನಾಲ್ ಮಿಶ್ರಣವಾಗಿರುವುದು ಪರೀಕ್ಷೆಯಲ್ಲಿ ಕಂಡುಬಂದಿದೆ.
ಇಂಡಿಯನ್ ಆಯಿಲ್ ಕಂಪನಿಯ ಪೆಟ್ರೋಲ್ ಮಾದರಿಯಲ್ಲಿ ಗರಿಷ್ಠ ಶೇ.31.2ರಷ್ಟು ಇಥನಾಲ್ ಪತ್ತೆಯಾಗಿದ್ದರೆ, HPCL ಪವರ್ ಮಾದರಿಯಲ್ಲಿ ಶೇ.30.5ರಷ್ಟು ಇಥನಾಲ್ ಇರುವುದು ವರದಿಯಾಗಿದೆ.
ವಾಹನಗಳ ಮೈಲೇಜ್ ಇಳಿಕೆ, ದುರಸ್ತಿ ಸಮಸ್ಯೆ ಹಿನ್ನೆಲೆ ಪರೀಕ್ಷೆ
ವಾಹನ ಸವಾರರಿಂದ ಮೈಲೇಜ್ ಕಡಿಮೆಯಾಗುತ್ತಿರುವುದು ಹಾಗೂ ವಾಹನಗಳು ಪದೇಪದೇ ದುರಸ್ತಿಗೆ ಬರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲು ಮುಂದಾಗಿತ್ತು.
ಮೊದಲಿಗೆ ಸಂಗ್ರಹಿಸಿದ ಮಾದರಿಗಳನ್ನು ಸಂಬಂಧಪಟ್ಟ ತೈಲ ಕಂಪನಿಗಳ ಸ್ವಂತ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು. ಆದರೆ, ಇಥನಾಲ್ ಮಿಶ್ರಣದ ಪ್ರಮಾಣದ ಕುರಿತು ಕಂಪನಿಗಳಿಂದ ಸ್ಪಷ್ಟ ಮಾಹಿತಿ ದೊರೆಯದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅನುಮಾನ ಮೂಡಿತ್ತು. ಬಳಿಕ ಎನ್‌ಎಬಿಎಲ್ (NABL) ಮಾನ್ಯತೆ ಪಡೆದ ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ಈ ಪರೀಕ್ಷೆಯಲ್ಲಿ ಪರಿಶೀಲನೆಗೆ ಒಳಪಡಿಸಿದ ಐದು ಮಾದರಿಗಳಲ್ಲಿ ನಾಲ್ಕು ಮಾದರಿಗಳು ನಿಗದಿತ ಮಿತಿಯನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ರೀತಿಯ ಪರೀಕ್ಷೆ ನಡೆಸಿ ವರದಿಯನ್ನು ಬಹಿರಂಗಪಡಿಸಿದ ದೇಶದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದೂ ಅವರು ಹೇಳಿದ್ದಾರೆ.
ಶೇ.20ಕ್ಕಿಂತ ಹೆಚ್ಚಿನ ಇಥನಾಲ್ ವಾಹನಗಳಿಗೆ ಸಮಸ್ಯೆ?
ದೇಶದಲ್ಲಿ ಸುಮಾರು 35 ಕೋಟಿ ವಾಹನಗಳಿದ್ದು, ಅವುಗಳಲ್ಲಿ ಶೇ.99ರಷ್ಟು ವಾಹನಗಳು ಶೇ.20ಕ್ಕಿಂತ ಹೆಚ್ಚಿನ ಇಥನಾಲ್ ಹೊಂದಿರುವ ಇಂಧನ ಬಳಕೆಗೆ ಸೂಕ್ತವಾಗಿಲ್ಲ ಎಂದು ರಾಜ್ಯ ಸರ್ಕಾರ ಕಳವಳ ವ್ಯಕ್ತಪಡಿಸಿದೆ.
2023ರ ಏಪ್ರಿಲ್ ಬಳಿಕ ತಯಾರಾದ ವಾಹನಗಳೂ E20 ಇಂಧನ ಬಳಕೆಗೆ ಮಾತ್ರ ಪ್ರಮಾಣೀಕೃತವಾಗಿವೆ ಎಂದು ತಿಳಿಸಲಾಗಿದೆ. ಮತ್ತೊಂದೆಡೆ, ಪೆಟ್ರೋಲ್ ಬಂಕ್‌ಗಳಲ್ಲಿರುವ ಇಂಧನ ವಿತರಣಾ ಯಂತ್ರಗಳು (ಡಿಸ್ಪೆನ್ಸಿಂಗ್ ಯುನಿಟ್‌ಗಳು) ಕೂಡ ಶೇ.15ರವರೆಗಿನ ಇಥನಾಲ್ ಮಿಶ್ರಣಕ್ಕೆ ಮಾತ್ರ ವಿನ್ಯಾಸಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಇಥನಾಲ್ ಮಿಶ್ರಣವಾಗುತ್ತಿರುವ ಆರೋಪವು ವಾಹನ ಸವಾರರಲ್ಲಿ ಆತಂಕ ಮೂಡಿಸಿದ್ದು, ಈ ಕುರಿತು ಮುಂದಿನ ಕ್ರಮಗಳ ಬಗ್ಗೆ ಕುತೂಹಲ ಮೂಡಿದೆ.
Uncategorized
Kapu-ಕೇಪು ಕೋಳಿ ಅಂಕ ಪ್ರಕರಣ: ಶಾಸಕ ಅಶೋಕ್ ರೈ, ಮಾಜಿ ಶಾಸಕ ಮಠಂದೂರು ಸೇರಿದಂತೆ ಹಲವರ ವಿರುದ್ಧದ ಕೇಸ್ ಹೈಕೋರ್ಟ್ ರದ್ದು
ಪುತ್ತೂರಿನ ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ನಡೆದಿದ್ದ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವರ ವಿರುದ್ಧ ವಿಟ್ಲ ಠಾಣಾ ಪೊಲೀಸರು ದಾಖಲಿಸಿದ್ದ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ನಡೆದಿದ್ದ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವರ ವಿರುದ್ಧ ವಿಟ್ಲ ಠಾಣಾ ಪೊಲೀಸರು ದಾಖಲಿಸಿದ್ದ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈ ಹಿಂದೆ ಮಧ್ಯಂತರ ತಡೆಯಾಜ್ಞೆ ನೀಡಿದ್ದರೂ ಪೊಲೀಸರು ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು. ಈ ಕ್ರಮ ಕಾನೂನು ಪ್ರಕ್ರಿಯೆಗೆ ಅನುಗುಣವಾಗಿಲ್ಲ ಎಂಬ ಆರೋಪಿಗಳ ಪರ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ, ಪೊಲೀಸರ ಪ್ರಕ್ರಿಯೆಯಲ್ಲಿನ ಗಂಭೀರ ಲೋಪಗಳನ್ನು ಪರಿಗಣಿಸಿ ಎರಡೂ ಎಫ್‌ಐಆರ್‌ಗಳನ್ನು ರದ್ದುಗೊಳಿಸಿದೆ.
ಘಟನೆಯ ಹಿನ್ನೆಲೆ:
ಕೇಪು ಶ್ರೀ ಉಳ್ಳಾಲ್ತಿ ಕ್ಷೇತ್ರದ ವಾರ್ಷಿಕ ಕಜಂಬು ಉತ್ಸವದ ಅಂಗವಾಗಿ ಸುಮಾರು 700 ವರ್ಷಗಳ ಇತಿಹಾಸವಿರುವ, ಜೂಜು ರಹಿತ ಹರಕೆಯ ಸಾಂಪ್ರದಾಯಿಕ ಕೋಳಿ ಅಂಕ ಆಯೋಜಿಸಲಾಗಿತ್ತು. ಆದರೆ, ಪೊಲೀಸ್ ಇಲಾಖೆಯ ಪೂರ್ವಾನುಮತಿ ಇಲ್ಲ ಎಂಬ ಕಾರಣ ನೀಡಿ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, “ಇದು ಸಾಂಪ್ರದಾಯಿಕ ಹಾಗೂ ಜೂಜು ರಹಿತ ಆಚರಣೆಯಾಗಿದ್ದು, ಸಂಜೆಯೊಳಗೆ ಮುಕ್ತಾಯಗೊಳ್ಳಲಿದೆ” ಎಂದು ಪೊಲೀಸರಿಗೆ ಮನವರಿಕೆ ಮಾಡಿಕೊಟ್ಟಿದ್ದರು ಎನ್ನಲಾಗಿದೆ. ಆದಾಗ್ಯೂ, ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ಕೋಳಿಗಳನ್ನು ವಶಪಡಿಸಿಕೊಂಡು, ಕಾನೂನುಬಾಹಿರ ಕೃತ್ಯಕ್ಕೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದ ಆರೋಪದಡಿ ಶಾಸಕ ಅಶೋಕ್ ರೈ ಸೇರಿ 26 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಮರುದಿನ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಸೇರಿದಂತೆ ಹಲವು ಮುಖಂಡರು ಕ್ಷೇತ್ರಕ್ಕೆ ಭೇಟಿ ನೀಡಿ, ಧಾರ್ಮಿಕ ಭಾವನೆ ಹಾಗೂ ಸಂಪ್ರದಾಯದ ಹಿನ್ನೆಲೆಯಲ್ಲಿ ಕೋಳಿ ಅಂಕ ಮುಂದುವರಿಸಲು ಬೆಂಬಲ ಸೂಚಿಸಿದ್ದರು. ಈ ಸಂದರ್ಭದಲ್ಲೂ ದಾಳಿ ನಡೆಸಿದ್ದ ಪೊಲೀಸರು, ಸಂಜೀವ ಮಠಂದೂರು ಮತ್ತಿತರ 27 ಜನರ ವಿರುದ್ಧ ಎರಡನೇ ಪ್ರಕರಣ ದಾಖಲಿಸಿದ್ದರು.
ಹೈಕೋರ್ಟ್ ವಿಚಾರಣೆ:
ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಎರಡೂ ಪ್ರಕರಣಗಳ ಆರೋಪಿಗಳು ಪ್ರತ್ಯೇಕವಾಗಿ ಹೈಕೋರ್ಟ್‌ಗೆ ಕ್ರಿಮಿನಲ್ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಈ ಹಿಂದೆ ಎರಡೂ ಪ್ರಕರಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ಆದರೆ, ತಡೆಯಾಜ್ಞೆ ಜಾರಿಯಲ್ಲಿದ್ದರೂ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿದ ಆರೋಪಿಗಳ ಪರ ಹಿರಿಯ ವಕೀಲ ಡಾ. ಅರುಣ್ ಶ್ಯಾಮ್ ಹಾಗೂ ಸುಯೋಗ್ ಹೇರಳೆ, “ಮಧ್ಯಂತರ ತಡೆಯಾಜ್ಞೆ ಇರುವಾಗ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿರುವುದು ಕಾನೂನುಬಾಹಿರ” ಎಂದು ವಾದಿಸಿದ್ದರು. ಈ ವಾದವನ್ನು ಎತ್ತಿಹಿಡಿದ ನ್ಯಾಯಪೀಠ ಪ್ರಕರಣಗಳನ್ನು ವಜಾಗೊಳಿಸಿದೆ.
‘ದೇವರಿಗೆ ಪ್ರೀತಿಯಾದ ಕೆಲಸ’: ಶಾಸಕ ಅಶೋಕ್ ರೈ ಪ್ರತಿಕ್ರಿಯೆ
“ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ ನಡೆಯುವುದು ನೂರಾರು ವರ್ಷಗಳ ಇತಿಹಾಸವಿರುವ ಹರಕೆಯ ಸಾಂಪ್ರದಾಯಿಕ ಕೋಳಿ ಅಂಕ. ಧಾರ್ಮಿಕ ಆಚರಣೆಗೆ ಧಕ್ಕೆಯಾಗಬಾರದು ಎಂಬ ಉದ್ದೇಶದಿಂದ ನಾವು ಜನರೊಂದಿಗೆ ನಿಂತಿದ್ದೆವು. ಕ್ಷೇತ್ರದಲ್ಲಿ ಯಾವುದೇ ಜೂಜಾಟವಾಗಲಿ, ಕಾನೂನು ಉಲ್ಲಂಘನೆಯಾಗಲಿ ನಡೆದಿಲ್ಲ. ನಾವು ಕೈಗೊಂಡ ಕಾರ್ಯ ದೇವರಿಗೆ ಪ್ರೀತಿಯಾಗಿದೆ ಎಂಬುದಕ್ಕೆ ನ್ಯಾಯಾಲಯದ ಈ ಆದೇಶವೇ ಸಾಕ್ಷಿ.”
Uncategorized
Akshaya-ಅಕ್ಷಯ ಪದವಿ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ವಾಲ್ ಬೋರ್ಡ್ ಮ್ಯಾಗಜಿನ್ ಉದ್ಘಾಟನೆ ಮತ್ತು ಪ್ರೊಫೆಷನಲ್ ಕಮ್ಯುನಿಕೇಷನ್ ಕಾರ್ಯಾಗಾರ
ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂಗ್ಲ ಭಾಷಾ ವಿಭಾಗ ಮತ್ತು ಐಕ್ಯೂ ಎಸಿ ಸಹಭಾಗಿತ್ವದಲ್ಲಿ ” ಪ್ರೋಫೆಷನಲ್ ಕಮ್ಯುನಿಕೇಷನ್ ಎಂಬ ವಿಷಯದ ಕಾರ್ಯಗಾರ ಮತ್ತು ವಾಲ್ ಬೋಡ್ ಮ್ಯಾಗಜಿನ್ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂಗ್ಲ ಭಾಷಾ ವಿಭಾಗ ಮತ್ತು ಐಕ್ಯೂ ಎಸಿ ಸಹಭಾಗಿತ್ವದಲ್ಲಿ ” ಪ್ರೋಫೆಷನಲ್ ಕಮ್ಯುನಿಕೇಷನ್ ಎಂಬ ವಿಷಯದ ಕಾರ್ಯಗಾರ ಮತ್ತು ವಾಲ್ ಬೋಡ್ ಮ್ಯಾಗಜಿನ್ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಡಾ. ಅಕ್ಷಯ್, ವಿದ್ಯಾರ್ಥಿಗಳ ಮೊದಲ ಪ್ರಯತ್ನ ಯಶಸ್ಸು ಕಂಡಿದೆ. ಇದು ನಿರಂತರವಾಗಿ ಹರಿವ ನೀರಂತೆ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮುನ್ನುಡಿಯಾಗಲಿ ಎಂದು ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅಸಿಸ್ಟೆಂಟ್ ಪ್ರೊಫೆಸರ್ ಬಾಲಕೃಷ್ಣ ಹೆಚ್ ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರು, ವಿವೇಕಾನಂದ ಕಾಲೇಜು ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)
ಇವರು ವಾಲ್ ಬೋರ್ಡ್ ಮ್ಯಾಗಜಿನ್ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳು ಈ ವೇದಿಕೆಯನ್ನು ಹೇಗೆ ಬಳಕೆ ಮಾಡಬೇಕು ಮತ್ತು ಅದರಿಂದ ವಿದ್ಯಾರ್ಥಿಗಳಿಗೆ ಆಗುವ ಉಪಯೋಗಳನ್ನು ತಿಳಿಸಿ ಸದಾ ಕಲಿಕೆಯ ತುಡಿತ ನಿಮ್ಮದಾಗಲಿ ಎಂದು ಶುಭಹಾರೈಸಿ ನಂತರ ಪ್ರೊಫೆಷನಲ್ ಕಮ್ಯುನಿಕೇಷನ್ ವಿಷಯದ ಕುರಿತು ಕಾರ್ಯಾಗಾರ ನಡೆಸಿ ವಿದ್ಯಾರ್ಥಿಗಳಿಗೆ ಸಂವಹನದ ಮೂಲಕ ವೃತ್ತಿಪರ ಉದ್ಯೋಗಕ್ಕೆ ತಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕು ಎಂಬ ವಿಚಾರವನ್ನು ಚಟುವಟಿಕೆಗಳನ್ನು ಮಾಡುವ ಮೂಲಕ ವಿವರಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಡಾ. ಅರ್ಪಿತ್ ಟಿ.ಎ ಇವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಸಂವಹನ ಕ್ರಿಯೆ ಹೇಗೆ ಪ್ರಭಾವ ಬೀರುತ್ತದೆ ಹಾಗೂ ವಿದ್ಯಾರ್ಥಿಗಳು ಇಂತಹ ಕಾರ್ಯಗಾರವನ್ನು ಸತುಪಯೋಗಪಡಿಸಿಕೊಳ್ಳಬೇಕು ಹಾಗೂ ಇದಕ್ಕೆ ಬೇಕಾದಂತಹ ಎಲ್ಲಾ ಸಹಕಾರವನ್ನು ಕಾಲೇಜು ನೀಡಲು ಸದಾ ಸಿದ್ಧವಾಗಿದೆ ಎಂದು ಭರವಸೆ ನೀಡಿದರು.
-
ನಿಧನ ವಾರ್ತೆ13 hours ago
ಪುತ್ತೂರಿನ ಖ್ಯಾತ ಉದ್ಯಮಿ ಸಂತೋಷ್ ಕುಮಾರ್ ಎ. ನಿಧನ
-
ನಿಧನ ವಾರ್ತೆ17 hours agoSuicide-ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!
-
ಅಪರಾಧ21 hours ago
ಪುತ್ತೂರು : ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
-
ರಾಜಕೀಯ19 hours agoAishwarya Hegde-ಸಿಎಂ ಮುಂದೆಯೇ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಬಿಚ್ಚಿಟ್ಟ ಪುತ್ರಿ ಐಶ್ವರ್ಯಾ ಹೆಗ್ಡೆ..!
-
ಸ್ಥಳೀಯ18 hours agoAddahole-ಅಡ್ಡಹೊಳೆಯಲ್ಲಿ ಕಾರಿನ ಮೇಲೆ ಮಗುಚಿಬಿದ್ದ ಕಂಟೈನರ್ ಲಾರಿ: ದಂಪತಿ, ಮಕ್ಕಳು ಪವಾಡಸದೃಶ ಪಾರು..!
-
ಉಡುಪಿ18 hours agoAnil Kumar-ಬಾಳೆಕುದ್ರು ಶ್ರೀಗಳು ಪರಾರಿಯಾಗಿಲ್ಲ, ವಿಗ್ರಹಗಳೂ ಕಳವಾಗಿಲ್ಲ: ಆಡಳಿತಾಧಿಕಾರಿ ಅನಿಲ್ ಕುಮಾರ್ ಸ್ಪಷ್ಟನೆ
-
ಬಿಗ್ ನ್ಯೂಸ್17 hours agoChatGPT- ಪತ್ನಿಗೆ ಹತ್ಯೆ ಸಂಚು ರೂಪಿಸಲು ಸಲಹೆ ನೀಡಿದ ಆರೋಪ: ಚಾಟ್ಜಿಪಿಟಿ ವಿರುದ್ಧ ಪತಿ ಕಾನೂನು ದಾವೆ..!
-
ಅಂತರ ರಾಜ್ಯ18 hours agoArrested-ನಿವೃತ್ತ ಐಎಎಸ್ ಅಧಿಕಾರಿ ಕೊಲೆ ಪ್ರಕರಣ: ಒಂದು ತಿಂಗಳ ಬಳಿಕ ರೈಲಿನಲ್ಲಿ ಪರಾರಿಯಾಗಿದ್ದ ಕೇರ್ಟೇಕರ್ ಅರೆಸ್ಟ್..!
















