Connect with us

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಎರಡನೇ ದಿನದ ವಾರ್ಷಿಕೋತ್ಸವ “ಪರಂಪರಾ ದರ್ಶನಂ”; ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ; ಹಿರಿಯ ವಿದ್ಯಾರ್ಥಿ ಸಿ.ಎ ದೀಪಕ್ ಅವರಿಗೆ ಸನ್ಮಾನ; ವಿದ್ಯಾರ್ಥಿಗಳು ಸಂವೇದನೆಗಳೊಂದಿಗೆ ಬದುಕಬೇಕು : ಕಶೆಕೋಡಿ ಸೂರ್ಯನಾರಾಯಣ ಭಟ್

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ “ಪರಂಪರಾ ದರ್ಶನಂ” ಕಾರ್ಯಕ್ರಮದಲ್ಲಿ ಪ್ರಧಾನ ವಕ್ತಾರರಾಗಿ ಭಾಗವಹಿಸಿ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿದರು.

Ad Widget

Ad Widget

Ad Widget

Ad Widget
  • ವಿದ್ಯಾರ್ಥಿ ಜೀವನ ಸುವರ್ಣ ಯುಗ. ವಿದ್ಯಾರ್ಥಿ ದೆಸೆಯ ಅನುಭವಗಳು ಹಾಗೂ ಅನುಭಾವಗಳು ಮತ್ತೆ ಗಳಿಸುವುದು ದುರ್ಲಭ. ದೊರೆತ ಅನುಭವಗಳು ಭವಿಷ್ಯದ ನಮ್ಮ ದಾರಿಯನ್ನು ಸ್ಪಷ್ಟಪಡಿಸುತ್ತವೆ. ಇಂದಿನ ಶಿಕ್ಷಣ ವ್ಯವಸ್ಥೆ ಸಂಸ್ಕಾರಭರಿತ ವಿದ್ಯೆಯನ್ನು,ಶಿಸ್ತನ್ನು ಕಲಿಸಿಕೊಡುವಲ್ಲಿ ಸೋಲನ್ನು ಕಂಡಿದೆ. ಪ್ರಾಚೀನ ಶಿಕ್ಷಣ ಪರಂಪರೆ ಒಬ್ಬ ವಿದ್ಯಾರ್ಥಿಗೆ ವಿದ್ಯೆಯ ಜೊತೆಗೆ ಜೀವನ ಮೌಲ್ಯವನ್ನು, ಭಾವನೆಗಳನ್ನು ಕಟ್ಟಿಕೊಡುವಲ್ಲಿ ಸಾಫಲ್ಯವನ್ನು ಕಂಡುಕೊಂಡಿತ್ತು.
  • ಇಂದಿನ ವಿದ್ಯಾರ್ಥಿಗಳು ಭಾವನೆಗಳು ಮತ್ತು ಸಂವೇದನೆಗಳೊಂದಿಗೆ ಬದುಕಬೇಕಾಗಿದೆ ಎಂದು ವಾಗ್ಮಿಗಳು ಹಾಗೂ ಮಾಜಿ ಸದಸ್ಯರು ಕರ್ನಾಟಕ ಧಾರ್ಮಿಕ ಪರಿಷತ್ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು.
  • ಅವರು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ “ಪರಂಪರಾ ದರ್ಶನಂ” ಕಾರ್ಯಕ್ರಮದಲ್ಲಿ ಪ್ರಧಾನ ವಕ್ತಾರರಾಗಿ ಭಾಗವಹಿಸಿ ಮಾತನಾಡಿದರು.
  • ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಲೆಕ್ಕ ಪರಿಶೋಧಕರು ಹಾಗೂ ಹಿರಿಯ ವಿದ್ಯಾರ್ಥಿ ಸಿ.ಎ ದೀಪಕ್ ಮಾತನಾಡುತ್ತಾ, ವಿದ್ಯಾರ್ಥಿಗಳ ಓದು, ಜೀವನವನ್ನು ರೂಪಿಸುವಲ್ಲಿ ಮಾರ್ಗದರ್ಶನವಾಗಬೇಕೇ ಹೊರತು ಕೇವಲ ಪರೀಕ್ಷೆಗಾಗಿ ಓದು ಸೀಮಿತವಾಗುವುದು ಸಮಂಜಸವಲ್ಲ. ಆಧುನಿಕ ಕಾಲದಲ್ಲಿ ಸಾಧ್ಯವಾದಷ್ಟು ಕೌಶಲ್ಯ ತಾಂತ್ರಿಕತೆಗಳನ್ನು ಬಳಸಿಕೊಂಡಷ್ಟು ಅವಕಾಶಗಳು ಹೆಚ್ಚು ಹೆಚ್ಚು ಒದಗಿ ಬರಬಲ್ಲದು. ಆದರೆ ಆಧುನಿಕ ತಂತ್ರಜ್ಞಾನಗಳನ್ನು ಮಿತಿಮೀರಿ ಬಳಸದೆ ಸಾಧ್ಯವಾದಷ್ಟು ಸ್ವಂತಿಕೆಯನ್ನು ಬೆಳಸಿಕೊಳ್ಳಬೇಕು ಎಂದು ಕಿವಿಮಾತನ್ನಿತ್ತರು.
  • ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತಮಂಡಳಿ ನಿರ್ದೇಶಕರಾದ ಡಾ. ಕೆ.ಎನ್ ಸುಬ್ರಹ್ಮಣ್ಯ ಮಾತನಾಡಿ, ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಕಠಿಣ ಪರಿಶ್ರಮವೇ ಮೂಲಾಧಾರ .ಅದು ನಿರ್ದಿಷ್ಟ ಗುರಿ ಹಾಗೂ ಸಕಾರಾತ್ಮಕ ಚಿಂತನೆಯಿಂದ ಕೂಡಿರಬೇಕು . ಸವಾಲುಗಳು ಎದುರಾದಾಗ ಧೈರ್ಯಗುಂದದೆ ಮುನ್ನಡೆಯುವ ಮನೋಭಾವ ನಮ್ಮಲ್ಲಿರಬೇಕು ಎಂದು ಹಿತನುಡಿದರು. ಸಭಾವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಭರತ್ ಪೈ ಹಾಗೂ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶಶಿಕಲಾ ಎಮ್. ಕೆ. ಉಪಸ್ಥಿತರಿದ್ದು ಶುಭಹಾರೈಸಿದರು.
  • ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಉಪನ್ಯಾಸಕಿಯರಾದ ಶೀತಲಾ ವಂದಿಸಿ, ಪವಿತ್ರ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವೇದಿಕೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
Ad Widget
Click to comment

Leave a Reply

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ “ಕನಸುಗಳು – 2026” ರ ಉದ್ಘಾಟನೆ – ಸಮಾರಂಭ; ವಿದ್ಯಾರ್ಥಿಗಳು ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು : ಶ್ರದ್ಧಾ ವಿ. ಶೆಟ್ಟಿ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ರಾಜ್ಯಮಟ್ಟದ “ಕನಸುಗಳು – 2026 ಇದರ ಉದ್ಘಾಟನೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ವೇದಾಂತ ಐರನ್ ಅಂಡ್ ಸ್ಟೀಲ್ ಲಿಮಿಟೆಡ್, ಗೋವಾ ಇದರ ಅಸೋಸಿಯೇಟ್ ಮ್ಯಾನೇಜರ್ ಸಿಎ ಶ್ರದ್ಧಾ ವಿ. ಶೆಟ್ಟಿ ನಡೆಸಿಕೊಟ್ಟು ಮಾತನಾಡಿದರು.

Ad Widget

Ad Widget

Ad Widget

Ad Widget

ಕಂಡ ಕನಸುಗಳನ್ನು ನನಸು ಮಾಡುವ ಪ್ರಯತ್ನಗಳು ಜೊತೆಗೂಡಿದಾಗ ಭವಿಷ್ಯ ಸುಂದರವಾಗಬಲ್ಲದು. ಕನಸು ಕಾಣುವುದು ಸುಲಭ, ಆದರೆ ಆ ಕನಸುಗಳನ್ನು ನನಸಾಗಿಸಲು ನಿರಂತರ ಪರಿಶ್ರಮ, ಆತ್ಮವಿಶ್ವಾಸ, ಶಿಸ್ತು ಮತ್ತು ದೃಢಸಂಕಲ್ಪ ಅತ್ಯಗತ್ಯ. ಜೀವನದಲ್ಲಿ ಎದುರಾಗುವ ಸವಾಲುಗಳು ನಮ್ಮನ್ನು ಹಿಮ್ಮೆಟ್ಟಿಸುವುದಕ್ಕಲ್ಲ, ಬದಲಾಗಿ ನಮ್ಮ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಿಗುವ ಅವಕಾಶಗಳಾಗಿವೆ. ಸೋಲು ಎದುರಾದಾಗ ಕುಗ್ಗದೆ, ಅದನ್ನೇ ಯಶಸ್ಸಿನ ಮೆಟ್ಟಿಲನ್ನಾಗಿ ಮಾಡಿಕೊಂಡು ಮುನ್ನಡೆಯಬೇಕು. ನಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ, ಸಾಧಿಸುವ ಛಲ ನಮ್ಮಲ್ಲಿರಲಿ, ಪ್ರಯತ್ನದಲ್ಲಿ ಎಂದಿಗೂ ವಿರಾಮವಿರದಿರಲಿ. ಇಂದಿನ ಸಣ್ಣ ಪ್ರಯತ್ನಗಳೇ ನಾಳಿನ ದೊಡ್ಡ ಸಾಧನೆಗಳಿಗೆ ಭದ್ರ ಬುನಾದಿಯಾಗುತ್ತವೆ. ಯುವಜನತೆ ತಮ್ಮಲ್ಲಿರುವ ಪ್ರತಿಭೆ, ಶಕ್ತಿ ಮತ್ತು ಸಾಮರ್ಥ್ಯವನ್ನು ಗುರುತಿಸಿಕೊಂಡು, ಸಕಾರಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ವೇದಾಂತ ಐರನ್ ಅಂಡ್ ಸ್ಟೀಲ್ ಲಿಮಿಟೆಡ್, ಗೋವಾ ಇದರ ಅಸೋಸಿಯೇಟ್ ಮ್ಯಾನೇಜರ್ ಸಿಎ ಶ್ರದ್ಧಾ ವಿ. ಶೆಟ್ಟಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ರಾಜ್ಯಮಟ್ಟದ “ಕನಸುಗಳು – 2026 ಇದರ ಉದ್ಘಾಟನೆಯನ್ನು ನಡೆಸಿಕೊಟ್ಟು ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಮಂಡಳಿಯ ನಿರ್ದೇಶಕರಾದ ರಮೇಶ್ಚಂದ್ರ ಎಮ್. ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಜ್ಞಾನಾರ್ಜನೆಗೆ, ಕೌಶಲ್ಯಗಳ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು, ಅಂತೆಯೇ ಕನಸುಗಳು ಕಾರ್ಯಕ್ರಮ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ರೂಪಿಸುವಲ್ಲಿ ಬೇಕಾದ ಅಡಿಪಾಯವನ್ನು ಒದಗಿಸಿ ಕೊಡಲಿ ಎಂದು ಆಶಿಸಿದರು.



Ad Widget

ಉದ್ಘಾಟನಾ ಸಮಾರಂಭದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸುಮಾರು 14 ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚಿತ್ರಕಲೆ, ಕನ್ನಡ ಕವನ ರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಯುವಪತ್ರಕರ್ತ, ಯುವ ವಾಣಿಜ್ಯೋದ್ಯಮಿ, ಮುಖವರ್ಣಿಕೆ, ವೀಡಿಯೋ ಸಂಕಲನ , ಚರ್ಚಾ ಸ್ಪರ್ಧೆ, ತಾಳವಾದ್ಯ , ಕಲರವ – ಸಾಂಸ್ಕೃತಿಕ ವೈವಿಧ್ಯ , ನಿಧಿಶೋಧ, ಭಗವದ್ಗೀತಾ ಕಂಠಪಾಠ ಮುಂತಾದ ಸ್ಪರ್ಧೆಗಳನ್ನು ನಡೆಸಲಾಯಿತು.

Ad Widget

Ad Widget

ಕಾರ್ಯಕ್ರಮದ ವೇದಿಕೆಯಲ್ಲಿ ಕನಸುಗಳು ಕಾರ್ಯಕ್ರಮದ ಸಂಯೋಜಕಿ ದೀಕ್ಷಿತಾ ಬಿ. ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿಯರಾದ ಮೊನೀಷಾ ವಂದಿಸಿ, ಮಮತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಸಮಾರೋಪ-3ನೇ ದಿನ; ಶಿಕ್ಷಣದೊಂದಿಗೆ ಸಂಸ್ಕಾರವೂ ವಿದ್ಯಾರ್ಥಿಗಳ ಬದುಕಿಗೆ ಅಗತ್ಯ – ಸೂರಜ್ ಕುಮಾರ್

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ನಡೆದ ಷಷ್ಟ್ಯಬ್ದ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ವಕ್ತಾರರಾಗಿ ಭಾಗವಹಿಸಿ ಚಾರ ಪ್ರಮುಖ್ ರಾಷ್ಟ್ರಿಯ ಸ್ವಯಂ ಸೇವಕ ಸಂಘ, ಮಂಗಳೂರು ವಿಭಾಗ ಹಾಗೂ ಉದ್ಯಮಿಗಳಾಗಿರುವ ಸೂರಜ್ ಕುಮಾರ್ ಮಾತನಾಡಿದರು.

Ad Widget

Ad Widget

Ad Widget

Ad Widget

“ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗದೆ, ಜ್ಞಾನ, ಶಿಸ್ತು, ಮಾನವೀಯ ಮೌಲ್ಯಗಳು ಹಾಗೂ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ನಿಜವಾದ ಉದ್ದೇಶ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ದೈಹಿಕ ಸಾಮರ್ಥ್ಯ, ಸೃಜನಶೀಲತೆ ಮತ್ತು ಜೀವನ ಕೌಶಲಗಳನ್ನು ವೃದ್ಧಿಸುವುದಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವಿಭಿನ್ನ ಪ್ರತಿಭೆಗಳು ಅಡಗಿರುತ್ತವೆ. ಸಂಗೀತ, ಕ್ರೀಡೆ, ಕಲೆ ಹಾಗೂ ಇತರ ಕ್ಷೇತ್ರಗಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶ್ರಮ, ಜವಾಬ್ದಾರಿ ಮತ್ತು ದೇಶಪ್ರೇಮದ ಮನೋಭಾವವನ್ನು ಬೆಳೆಸಬೇಕು,ಶಿಕ್ಷಣದೊಂದಿಗೆ ಸಂಸ್ಕಾರವೂ ವಿದ್ಯಾರ್ಥಿಗಳ ಬದುಕಿಗೆ ಅಗತ್ಯ ಎಂದರು. ಭಾರತದ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ, ವೈಜ್ಞಾನಿಕ ಚಿಂತನೆ, ಕೌಶಲಾಭಿವೃದ್ಧಿ ಮತ್ತು ಯುವಶಕ್ತಿಯ ಸದ್ಬಳಕೆ ಅತ್ಯಗತ್ಯವಾಗಿದೆ. ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವ ಇತರ ರಾಷ್ಟ್ರಗಳಿಂದ ಪ್ರೇರಣೆ ಪಡೆದು, ನಮ್ಮ ದೇಶದ ಪ್ರಗತಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು” ಎಂದು ಪ್ರಚಾರ ಪ್ರಮುಖ್ ರಾಷ್ಟ್ರಿಯ ಸ್ವಯಂ ಸೇವಕ ಸಂಘ, ಮಂಗಳೂರು ವಿಭಾಗ ಹಾಗೂ ಉದ್ಯಮಿಗಳಾಗಿರುವ ಸೂರಜ್ ಕುಮಾರ್ ಕರೆ ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ನಡೆದ ಷಷ್ಟ್ಯಬ್ದ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ವಕ್ತಾರರಾಗಿ ಭಾಗವಹಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹ್ಯಾಂಡ್ ಆಂಡ್ ಮೈಕ್ರೋವಾಸ್ಕ್ಯುಲರ್ ಸರ್ಜನ್, ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು, ಮಂಗಳೂರು ಮತ್ತು ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಪುತ್ತೂರು ಇಲ್ಲಿನ ಹಿರಿಯ ವಿದ್ಯಾರ್ಥಿಯಾದ ಡಾ.ಶ್ರುತಿಕಾಂತ್ ಎಸ್ ಮಾತನಾಡುತ್ತಾ, “ಪಿಯು ಹಂತದಲ್ಲಿರುವಾಗಲೇ ಭವಿಷ್ಯದ ಸಂಪೂರ್ಣ ಚಿತ್ರಣ ನಮ್ಮ ಮುಂದೆ ಇರುವುದಿಲ್ಲ. ಆದರೆ ಈ ಕ್ಷಣದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದು ಅತ್ಯಗತ್ಯ. ನಮ್ಮ ಶ್ರಮವನ್ನು ನೂರು ಪ್ರತಿಶತ ನೀಡಿದಾಗ ಯಶಸ್ಸಿನ ಸಾಧ್ಯತೆ ಹೆಚ್ಚುತ್ತದೆ. ಪ್ರತಿಭೆ ಆರಂಭದಲ್ಲಿ ನಮ್ಮನ್ನು ಗುರುತಿಸಬಹುದು. ಆದರೆ ನಮ್ಮನ್ನು ಮುಂದಕ್ಕೆ ಕೊಂಡೊಯ್ಯುವುದು ಸತತ ಪ್ರಯತ್ನ, ಛಲ, ಆಸಕ್ತಿ ಮತ್ತು ಆತ್ಮವಿಶ್ವಾಸ. ಸೋಲು ಎಲ್ಲರ ಜೀವನದಲ್ಲೂ ಬರುತ್ತದೆ. ಆದರೆ ಸೋಲು ನಮ್ಮ ಪ್ರಯತ್ನದ ಅಂತ್ಯವಲ್ಲ; ಅದೊಂದು ಘಟನೆಯಷ್ಟೇ. ನಮ್ಮ ತಪ್ಪುಗಳನ್ನು ಅರಿತು, ಅವುಗಳಿಂದ ಪಾಠ ಕಲಿತು ಮತ್ತೆ ಪ್ರಯತ್ನಿಸಿದಾಗ ಯಶಸ್ಸು ಖಂಡಿತವಾಗಿಯೂ ಸಾಧ್ಯ. ಶಿಸ್ತು, ಮಾನವೀಯ ಮೌಲ್ಯಗಳು ಮತ್ತು ನಿರಂತರ ಪರಿಶ್ರಮದೊಂದಿಗೆ ವಿದ್ಯಾಲಯವು ಇನ್ನಷ್ಟು ಎತ್ತರಕ್ಕೆ ಬೆಳೆದು ಯಶಸ್ಸಿನ ಶಿಖರವನ್ನು ತಲುಪಲಿ”ಎಂದು ನುಡಿದರು.



Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ , ಪುತ್ತೂರು ಇದರ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ ಕಡಬ ಮಾತನಾಡುತ್ತಾ, “ಹಿಂದೂ ಧಾರ್ಮಿಕ ನಂಬಿಕೆಗಳ ಮೇಲೆ ಅತಿಕ್ರಮಣವಾದಾಗ ನಮ್ಮ ಸಂಸ್ಕಾರಯುತ ಶಿಕ್ಷಣದ ಉಳಿಕೆಗೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ನಿರಂತರ ೬೦ ವರುಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಮೌಲ್ಯಾಧಾರಿತ ಶಿಕ್ಷಣ ಪಡಕೊಂಡ ವಿದ್ಯಾರ್ಥಿಗಳ ಮುಖೇನ ಸಮಾಜದಲ್ಲಿ ,ಸಂಸ್ಥೆಯು ಉತ್ತುಂಗಕ್ಕೇರಲು ಸಹಕಾರಿ” ಎಂದರು.

Ad Widget

Ad Widget

ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ವಾರ್ಷಿಕ ವರದಿಯನ್ನು ಮಂಡಿಸಿದರು.ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಿವಿಧ ದತ್ತಿನಿಧಿ ಬಹುಮಾನಗಳನ್ನು ವಿತರಣೆ ಮಾಡಲಾಯಿತು.

ಕಾಲೇಜಿನ ೬೦ನೇ ವರ್ಷಾಚರಣೆಯ ಸಮಾರೋಪ ಕಾರ್ಯಕ್ರಮದ ಪ್ರಯುಕ್ತ ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಶುಂಪಾಲರಾದ ಎ.ವಿ.ನಾರಾಯಣ್ ಷಷ್ಟ್ಯಬ್ದ ಹೆಗ್ಗುರುತಿನ ಲಾಂಛನಕ್ಕೆ ಗೌರವ ಸಮರ್ಪಿಸಿದರು. ಸಭಾ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಸುಬೋಧ್ ಶೆಟ್ಟಿ ಎಂ. ಉಪಸ್ಥಿತರಿದ್ದು ಶುಭ ಹಾರೈಸಿದರು. ವಿವೇಕಾನಂದ ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ ಹಾಗೂ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಉಪನ್ಯಾಸಕಿಯರಾದ ಕವಿತಾ ವಂದಿಸಿ, ಡಾ.ಶ್ರುತಿ ಎಂ.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Ad Widget
Continue Reading

ಶಿಕ್ಷಣ

Vidyamata Academy-ಕರ್ನಾಟಕ ಸರಕಾರದ ವಿವಿಧ ಇಲಾಖೆಗಳಲ್ಲಿ 5,431 SDA ಮತ್ತು FDA ಹುದ್ದೆಗಳ ಬೃಹತ್ ನೇಮಕಾತಿ: ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ಮತ್ತು ನೇರ ತರಬೇತಿ ಪ್ರಾರಂಭ

Published

on



Ad Widget

Ad Widget

Ad Widget

Ad Widget

ಕರ್ನಾಟಕ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ದ್ವಿತೀಯ ದರ್ಜೆ ಸಹಾಯಕ (SDA) ಹಾಗೂ ಪ್ರಥಮ ದರ್ಜೆ ಸಹಾಯಕ (FDA) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 5,431 ಹುದ್ದೆಗಳಿಗೆ ಈ ಬೃಹತ್ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Ad Widget

Ad Widget

Ad Widget

Ad Widget

​ಪುತ್ತೂರು / ಸುಳ್ಯ: ಕರ್ನಾಟಕ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ದ್ವಿತೀಯ ದರ್ಜೆ ಸಹಾಯಕ (SDA) ಹಾಗೂ ಪ್ರಥಮ ದರ್ಜೆ ಸಹಾಯಕ (FDA) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 5,431 ಹುದ್ದೆಗಳಿಗೆ ಈ ಬೃಹತ್ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Ad Widget

Ad Widget

Ad Widget alt="Ad Widget"/>

Ad Widget

​ದ್ವಿತೀಯ ಪಿಯುಸಿ, ಯಾವುದೇ ವಿಷಯದಲ್ಲಿ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಾರೆ. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ನಿಗದಿಯಾಗಿದ್ದು, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ, ಒಬಿಸಿ (OBC) ಅಭ್ಯರ್ಥಿಗಳಿಗೆ 43 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 45 ವರ್ಷಗಳವರೆಗೆ ಗರಿಷ್ಠ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇದರೊಂದಿಗೆ ಸರಕಾರಿ ನಿಯಮಾವಳಿಗಳ ಪ್ರಕಾರ ಇತರ ವಿಶೇಷ ಮೀಸಲಾತಿ ಅಭ್ಯರ್ಥಿಗಳಿಗೂ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

Ad Widget

Ad Widget <> Ad Widget

​ಅರ್ಜಿ ಸಲ್ಲಿಕೆಗೆ 2026ರ ನವೆಂಬರ್ 25 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ, ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ ಹಾಗೂ ಮೀಸಲಾತಿ ಸೌಲಭ್ಯಕ್ಕಾಗಿ ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣಪತ್ರಗಳೊಂದಿಗೆ ಸಿದ್ಧರಿರಬೇಕಾಗಿದೆ.



Ad Widget

​ಈ ಬೃಹತ್ ಸರಕಾರಿ ನೇಮಕಾತಿಯ ಸದುಪಯೋಗವನ್ನು ಪ್ರತಿಯೊಬ್ಬ ಅರ್ಹ ಉದ್ಯೋಗಾಕಾಂಕ್ಷಿಯೂ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಪುತ್ತೂರು ಮತ್ತು ಸುಳ್ಯದ ಪ್ರಸಿದ್ಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿ ವತಿಯಿಂದ ಅಭ್ಯರ್ಥಿಗಳಿಗೆ ಸಂಪೂರ್ಣ ಮಾರ್ಗದರ್ಶನ ಅತ್ಯುತ್ತಮ ತರಬೇತಿ ಮೂಲಕ ನಡೆಯಲಿದೆ.

Ad Widget

Ad Widget

ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗದಲ್ಲಿರುವವರಿಗೆ /ಗೃಹಣಿಯರಿಗೆ ಅನುಕೂಲ ಆಗುವಂತೆ ರಾತ್ರಿ 7ರಿಂದ09ರವರೆಗೆ ಆನ್ಲೈನ್ ತರಬೇತಿ ಹಾಗೂ ನೇರವಾಗಿ ತರಬೇತಿಗೆ ಹಾಜರಾಗುವವರಿಗಾಗಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 3.45ರವರೆಗೆ ತರಬೇತಿ ನಡೆಯಲಿದೆ ಅಲ್ಲದೇ ಇದರ ಜೊತೆಗೆ ಸಂಪೂರ್ಣ ನೋಟ್ಸ್, ಈ ಹಿಂದೆ ನಡೆದ ಪರೀಕ್ಷೆಗಳ ವಿವರಣೆ, ದಿನನಿತ್ಯ ಮಾದರಿ ಪರೀಕ್ಷೆಗಳೂ ನಡೆಯಲಿದೆ.ಉಚಿತ ಅರ್ಜಿ ಸಲ್ಲಿಕೆ ನೆರವುನ್ನು ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಒದಗಿಸಲಾಗುತ್ತಿದೆ. ನವೆಂಬರ್ 10ರಿಂದ ತರಬೇತಿ ಪ್ರಾರಂಭವಾಗಲಿದ್ದು, ಇಂದಿನಿಂದಲೇ ಪ್ರವೇಶ ಪ್ರಕೃಯೇ ಪ್ರಾರಂಭ ಆಗಿದೆ.

​ಹೆಚ್ಚಿನ ವಿವರಗಳಿಗಾಗಿ ಹಾಗೂ ನೋಂದಾಯಿಸಿಕೊಳ್ಳಲು ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯ
​ಸಂಪರ್ಕ ಸಂಖ್ಯೆಗಳಾದ 9620468869 / 9945182516 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!