Connect with us

ಅಪರಾಧ

Puttur-ಪುತ್ತೂರು: ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಮಕ್ಕಳನ್ನು ಕೊಡಿಸುವುದಾಗಿ ವಂಚಿಸಲು ಯತ್ನಿಸುತ್ತಿದ್ದ ವ್ಯಕ್ತಿ ಪೊಲೀಸ್‌ ವಶ

Published

on



Ad Widget

Ad Widget

Ad Widget

Ad Widget

ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಣೇಶ್ (24) ಎಂಬಾತ ಈ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಣೇಶ್ (24) ಎಂಬಾತ ಈ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಈತ ಶಾಂತಿನಗರದ ಮನೆಯೊಂದಕ್ಕೆ ತೆರಳಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಕೇಳುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.



Ad Widget

ಮಾಹಿತಿ ಪಡೆದ 112 ತುರ್ತು ಕರ್ತವ್ಯದಲ್ಲಿದ್ದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದು ಪುತ್ತೂರು ನಗರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

Ad Widget

Ad Widget

ಈ ಘಟನೆಗೆ ಸಂಬಂಧಿಸಿ ದೂರು ನೀಡಲು ದೂರುದಾರರು ನಿರಾಕರಿಸಿದ ಹಿನ್ನೆಲೆಯಲ್ಲಿ, ಗಣೇಶ್ ವಿರುದ್ಧ ಕಲಂ 92, ಕರ್ನಾಟಕ ಪೊಲೀಸ್ ಅಧಿನಿಯಮ-1965ರ ಅಡಿಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Ad Widget
Click to comment

Leave a Reply

ಸ್ಥಳೀಯ

Kadaba-ಕಡಬ: ಸರಣಿ ಕಳ್ಳತನ ಪ್ರಕರಣ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರು

Published

on



Ad Widget

Ad Widget

Ad Widget

Ad Widget

ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಕೊನೆಗೂ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

Ad Widget

Ad Widget

Ad Widget

Ad Widget

ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಕೊನೆಗೂ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

Ad Widget

Ad Widget

Ad Widget alt="Ad Widget"/>

Ad Widget

ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 110/16, 112/16, 113/16 ಹಾಗೂ 114/16ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಕಲಂ 457 ಮತ್ತು 380ರಂತೆ ಪ್ರಕರಣಗಳು ದಾಖಲಾಗಿದ್ದವು.

Ad Widget

Ad Widget <> Ad Widget

ಈ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ದೊಡ್ಡಬಳ್ಳಾಪುರದ ನರಸಿಂಹ ಅಲಿಯಾಸ್ ರಾಜು, ಮಹಾರಾಷ್ಟ್ರದ ವಿಜಯ್ ಸುರೇಶ್ ಪೊಂಕೆ, ನವೀನ್ ಚಂದ್ರ ಸಿಂಗ್, ಉತ್ತರ ಕನ್ನಡದ ಚಂದ್ರಕಾಂತ್ ಪೂಜಾರಿ ಹಾಗೂ ಮಂಡ್ಯದ ಪ್ರಕಾಶ್ ಬಹದ್ದೂರ್ ಅವರಿಗೆ ಈಗಾಗಲೇ ಪುತ್ತೂರಿನ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು.



Ad Widget

ಇದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರ ಮೂಲದ ವಿಶಾಲ್ ಪೊಂಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನ ಪತ್ತೆಗಾಗಿ ಪೊಲೀಸರು ಪ್ರಯತ್ನ ನಡೆಸಿದ್ದು, ಆರೋಪಿಯ ವಿರುದ್ಧ ನ್ಯಾಯಾಲಯದಿಂದ ಪ್ರೊಕ್ಲಮೇಶನ್ ಹೊರಡಿಸಲಾಗಿತ್ತು.

Ad Widget

Ad Widget

ಅಂತಿಮವಾಗಿ 2026ರ ಅಕ್ಟೋಬರ್ 30ರಂದು ವಿಶಾಲ್ ಪೊಂಕೆ ಪುತ್ತೂರಿನ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ (ಸಂಚಾರಿ ನ್ಯಾಯಾಲಯ, ಕಡಬ)ಕ್ಕೆ ಹಾಜರಾಗಿದ್ದಾನೆ. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಿಶಾಲ್ ಪೊಂಕೆ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಎಂಒಬಿ ತೆರೆಯಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಯೂ ಅಪರಾಧ ಸಂಖ್ಯೆ 105/2016ರ ಅಡಿಯಲ್ಲಿ ಐಪಿಸಿ ಕಲಂ 457 ಮತ್ತು 380ರಂತೆ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ನಕಲಿ mParivahan APK ಫೈಲ್ ಡೌನ್‌ಲೋಡ್; ಬ್ಯಾಂಕ್‌ ಖಾತೆಯಿಂದ ₹4.89 ಲಕ್ಷ ಕಳೆದುಕೊಂಡ ವ್ಯಕ್ತಿ

Published

on



Ad Widget

Ad Widget

Ad Widget

Ad Widget

ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್‌ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್‌ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ (CEN) ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್‌ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್‌ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ (CEN) ಪ್ರಕರಣ ದಾಖಲಾಗಿದೆ.

Ad Widget

Ad Widget <> Ad Widget

ಅಕ್ಟೋಬರ್ 28ರಂದು ದೂರುದಾರರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು ₹4,89,509 ಹಣ ಕಡಿತಗೊಂಡಿತ್ತು. ಖಾತೆಯಿಂದ ಭಾರಿ ಮೊತ್ತದ ಹಣ ವರ್ಗಾವಣೆಯಾಗಿರುವ ಬಗ್ಗೆ ಮೊಬೈಲ್‌ಗೆ ಬಂದ ಎಸ್‌ಎಂಎಸ್ ಗಮನಿಸಿದ ಅವರು ಆಘಾತಕ್ಕೊಳಗಾಗಿದ್ದಾರೆ. ಬಳಿಕ ಈ ವಿಚಾರವನ್ನು ಕುಟುಂಬದ ಸದಸ್ಯರ ಗಮನಕ್ಕೆ ತಂದಿದ್ದಾರೆ.



Ad Widget

ಕುಟುಂಬದ ಸದಸ್ಯರು ಮೊಬೈಲ್ ಪರಿಶೀಲಿಸಿದಾಗ, ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್‌ನಂತೆ ಕಾಣುವ ‘mParivahan’ ಹೆಸರಿನ ನಕಲಿ APK ಫೈಲ್ ಡೌನ್‌ಲೋಡ್ ಆಗಿರುವುದು ಪತ್ತೆಯಾಗಿದೆ. ಸಂಚಾರ ನಿಯಮ ಉಲ್ಲಂಘನೆ ಅಥವಾ ಇ-ಚಲನ್ ಪಾವತಿಯ ನೆಪದಲ್ಲಿ ಸೈಬರ್ ವಂಚಕರು ಕಳುಹಿಸಿದ್ದ ಲಿಂಕ್ ಮೂಲಕ ಈ ಅಪಾಯಕಾರಿ ಆ್ಯಪ್ ಮೊಬೈಲ್‌ಗೆ ಇನ್‌ಸ್ಟಾಲ್ ಆಗಿರುವ ಶಂಕೆ ವ್ಯಕ್ತವಾಗಿದೆ.

Ad Widget

Ad Widget

ನಕಲಿ ಆ್ಯಪ್ ಮೂಲಕ ಮೊಬೈಲ್‌ನಲ್ಲಿನ ಮಾಹಿತಿಗೆ ಪ್ರವೇಶ ಪಡೆದು ಬ್ಯಾಂಕ್ ಖಾತೆಯ ಹಣವನ್ನು ವಂಚಕರು ದೋಚಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ವಂಚನೆಗೊಳಗಾಗಿರುವುದು ತಿಳಿಯುತ್ತಿದ್ದಂತೆಯೇ ಸಂತ್ರಸ್ತರು ತಕ್ಷಣವೇ ಸೈಬರ್ ಅಪರಾಧಗಳ ರಾಷ್ಟ್ರೀಯ ಸಹಾಯವಾಣಿ 1930ಕ್ಕೆ ಕರೆ ಮಾಡಿ, ಆನ್‌ಲೈನ್ ಮೂಲಕ ದೂರು ದಾಖಲಿಸಿದ್ದಾರೆ.

Ad Widget
Continue Reading

ಅಪರಾಧ

Mangalore-ಫೇಸ್‌ಬುಕ್ ಲಾಟರಿ ಜಾಹೀರಾತಿಗೆ ಮರುಳಾಗಿ ₹7.22 ಲಕ್ಷ ಕಳೆದುಕೊಂಡ ಮಂಗಳೂರಿನ ವ್ಯಕ್ತಿ..!

Published

on



Ad Widget

Ad Widget

Ad Widget

Ad Widget

ಫೇಸ್‌ಬುಕ್‌ನಲ್ಲಿ ಕೇರಳ ರಾಜ್ಯದ ಆನ್‌ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ (CEN) ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಫೇಸ್‌ಬುಕ್‌ನಲ್ಲಿ ಕೇರಳ ರಾಜ್ಯದ ಆನ್‌ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ (CEN) ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದೂರುದಾರರು ಸೆಪ್ಟೆಂಬರ್ 25, 2026ರಂದು ರಾತ್ರಿ ಮೊಬೈಲ್‌ನಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ ಕೇರಳ ರಾಜ್ಯದ ಆನ್‌ಲೈನ್ ಲಾಟರಿ ಮಾರಾಟಕ್ಕೆ ಸಂಬಂಧಿಸಿದ ವೀಡಿಯೊ ಜಾಹೀರಾತನ್ನು ಗಮನಿಸಿದ್ದರು. ಬಳಿಕ ಸೆಪ್ಟೆಂಬರ್ 27ರಂದು ಲಾಟರಿ ಖರೀದಿಸುವ ಉದ್ದೇಶದಿಂದ ಜಾಹೀರಾತಿನಲ್ಲಿ ನೀಡಲಾಗಿದ್ದ 7797769038 ಸಂಖ್ಯೆಗೆ ಕರೆ ಮಾಡಿ ಮಾತನಾಡಿದ್ದರು.

Ad Widget

Ad Widget <> Ad Widget

ಈ ವೇಳೆ ವಂಚಕರು ವಾಟ್ಸಾಪ್ ಮೂಲಕ ಕಳುಹಿಸಿದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ₹200 ಪಾವತಿಸುವ ಮೂಲಕ ಲಾಟರಿ ಟಿಕೆಟ್ ಖರೀದಿಸಿದ್ದರು. ಅದೇ ದಿನ ಸಂಜೆ ಸುಮಾರು 4 ಗಂಟೆಗೆ ಅದೇ ಮೊಬೈಲ್ ಸಂಖ್ಯೆಯಿಂದ ವಾಟ್ಸಾಪ್ ಸಂದೇಶ ಬಂದಿದ್ದು, ಆನ್‌ಲೈನ್ ಲಾಟರಿಯಲ್ಲಿ ₹12 ಲಕ್ಷ ಮತ್ತು ₹5 ಲಕ್ಷ ಸೇರಿದಂತೆ ಒಟ್ಟು ₹17 ಲಕ್ಷ ಬಹುಮಾನ ಗೆದ್ದಿರುವುದಾಗಿ ವಂಚಕರು ತಿಳಿಸಿದ್ದಾರೆ.



Ad Widget

ಬಹುಮಾನದ ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಿಸಿಕೊಳ್ಳಲು ಪ್ರೊಸೆಸಿಂಗ್ ಶುಲ್ಕ, ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಪಾವತಿಸಬೇಕೆಂದು ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿದ ಸಂತ್ರಸ್ತರು ಸೆಪ್ಟೆಂಬರ್ 27ರಿಂದ ಅಕ್ಟೋಬರ್ 27ರವರೆಗೆ ವಿವಿಧ ದಿನಗಳಲ್ಲಿ ತಮ್ಮ ಬ್ಯಾಂಕ್ ಖಾತೆಗಳಿಂದ ಒಟ್ಟು ₹7,22,804 ಹಣವನ್ನು ವಂಚಕರು ಸೂಚಿಸಿದ ಖಾತೆಗಳಿಗೆ ವರ್ಗಾಯಿಸಿದ್ದಾರೆ.

Ad Widget

Ad Widget

ಆದರೆ, ಹಲವು ಬಾರಿ ಹಣ ಪಾವತಿಸಿದರೂ ಬಹುಮಾನದ ಮೊತ್ತ ಕೈ ಸೇರದ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಅನುಮಾನ ಮೂಡಿದೆ. ಬಳಿಕ ತಾವು ವರ್ಗಾಯಿಸಿದ ಹಣವನ್ನು ವಾಪಸ್ ನೀಡುವಂತೆ ವಂಚಕರನ್ನು ಸಂಪರ್ಕಿಸಿದಾಗ ಅವರು ಹಣ ಹಿಂದಿರುಗಿಸದೆ, ಮೊಬೈಲ್ ಸಂಪರ್ಕವನ್ನೂ ಕಡಿತಗೊಳಿಸಿದ್ದಾರೆ.

ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ಸಂತ್ರಸ್ತರು ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!