Connect with us

ನಿಧನ ವಾರ್ತೆ

Mudubidire-ಮೂಡುಬಿದಿರೆ: ಖಾಸಗಿ ಬಸ್–ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; 19ರ ಹರೆಯದ ಯುವಕ ದುರ್ಮರಣ

Published

on



Ad Widget

Ad Widget

Ad Widget

Ad Widget

ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ 19 ವರ್ಷದ ಯುವಕ ಮೃತಪಟ್ಟ ಘಟನೆ ಮಂಗಳೂರು–ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರು ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತ ಯುವಕನನ್ನು ತೋಡಾರು ನಿವಾಸಿ ರಿಫಾಝ್ (19) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ 19 ವರ್ಷದ ಯುವಕ ಮೃತಪಟ್ಟ ಘಟನೆ ಮಂಗಳೂರು–ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರು ಎಂಬಲ್ಲಿ ಶುಕ್ರವಾರ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತ ಯುವಕನನ್ನು ತೋಡಾರು ನಿವಾಸಿ ರಿಫಾಝ್ (19) ಎಂದು ಗುರುತಿಸಲಾಗಿದೆ. ಅವರು ಮೂಡುಬಿದಿರೆಯಲ್ಲಿ ಹಣ್ಣುಹಂಪಲು ಮಾರಾಟದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

‘ಅಭಿಮಾನ್’ ಹೆಸರಿನ ಖಾಸಗಿ ಬಸ್ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸರ್ವಿಸ್ ರಸ್ತೆಯ ಮೂಲಕ ಸಂಚರಿಸಬೇಕಿದ್ದ ಬಸ್ ವಿರುದ್ಧ ದಿಕ್ಕಿನಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿ ರಿಫಾಝ್ ಅವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



Ad Widget

ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ರಿಫಾಝ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Udupi-ಉಡುಪಿ: ಜಿಲ್ಲಾಸ್ಪತ್ರೆ ಶೌಚಾಲಯದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತ ಆತ್ಮಹತ್ಯೆಗೆ ಶರಣು..!; ಪ್ರೇಮ ಪ್ರಕರಣದಲ್ಲಿ ಜೈಲು ಪಾಲಾಗಿ ಬಿಡುಗಡೆಗೊಂಡ ಯುವಕನ ಮೇಲೆ ಯುವತಿಯ ಮನೆಯವರಿಂದ ಹಲ್ಲೆ ಆರೋಪ..!

Published

on



Ad Widget

Ad Widget

Ad Widget

Ad Widget

ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.

Ad Widget

Ad Widget

Ad Widget

Ad Widget

ಉಡುಪಿ: ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹಿಂದೂ ಜಾಗರಣ ವೇದಿಕೆಯ ನಾಯರ್‌ಕೊಡಿ ಘಟಕದ ಕಾರ್ಯಕರ್ತ ಪ್ರದೀಪ್‌ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರದೀಪ್‌ ಪೂಜಾರಿ ಕಳೆದ ಏಳು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇತ್ತೀಚೆಗೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ 2025ರಲ್ಲಿ ಯುವತಿಯನ್ನು ಅಡ್ಡಗಟ್ಟಿ ಗಲಾಟೆ ನಡೆಸಿದ ಆರೋಪದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪ್ರದೀಪ್‌ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.

Ad Widget

Ad Widget <> Ad Widget

ಅ. 27ರಂದು ಮತ್ತೆ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಯುವತಿಯ ಮನೆಯವರು ಪ್ರದೀಪ್‌ ಮೇಲೆ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರದೀಪ್‌ ಪೂಜಾರಿ ಕೂಡ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಎನ್ನಲಾಗಿದೆ.



Ad Widget

ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಪ್ರದೀಪ್‌ಗೆ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

ಘಟನೆ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ಎದುರು ಜಮಾಯಿಸಿ, ಯುವಕನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ನಿಧನ ವಾರ್ತೆ

Helicopter crash-ಬದ್ರಿನಾಥ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಪತನ: ಕರ್ನಾಟಕದ ಐವರು ಸೇರಿ 6 ಮಂದಿ ದುರ್ಮರಣ

Published

on



Ad Widget

Ad Widget

Ad Widget

Ad Widget

ಬದ್ರಿನಾಥನ ದರ್ಶನ ಪಡೆದು ಡೆಹ್ರಾಡೂನ್‌ನ ಸಹಸ್ತ್ರಧಾರ ಕಡೆಗೆ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರಿತ್ಯಕ್ಕೆ ಸಿಲುಕಿ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್ ಕ್ಯಾಪ್ಟನ್ ಸೇರಿದಂತೆ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರನ್ನು ಹೆಲಿಕಾಪ್ಟರ್ ಕ್ಯಾಪ್ಟನ್ ಹಿಮಾಂಶು ಹಾಗೂ ಕರ್ನಾಟಕದ ಪ್ರತಾಪ್, ಸುಧೀರ್, ಶಂಕರಗೌಡ, ಅರುಣ್ ಸಾಲುಂಕೆ ಮತ್ತು ನಟರಾಜ್ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಉತ್ತರಾಖಂಡ: ಬದ್ರಿನಾಥನ ದರ್ಶನ ಪಡೆದು ಡೆಹ್ರಾಡೂನ್‌ನ ಸಹಸ್ತ್ರಧಾರ ಕಡೆಗೆ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರಿತ್ಯಕ್ಕೆ ಸಿಲುಕಿ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್ ಕ್ಯಾಪ್ಟನ್ ಸೇರಿದಂತೆ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಹೆಲಿಕಾಪ್ಟರ್ ಕ್ಯಾಪ್ಟನ್ ಹಿಮಾಂಶು ಹಾಗೂ ಕರ್ನಾಟಕದ ಪ್ರತಾಪ್, ಸುಧೀರ್, ಶಂಕರಗೌಡ, ಅರುಣ್ ಸಾಲುಂಕೆ ಮತ್ತು ನಟರಾಜ್ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಇಂದು ಮಧ್ಯಾಹ್ನ 1:14ಕ್ಕೆ ಬದ್ರಿನಾಥದಿಂದ ಟೇಕಾಫ್ ಆದ ಹೆಲಿಕಾಪ್ಟರ್ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕೊಠಡಿಯೊಂದಿಗಿನ ಸಂಪರ್ಕ ಕಳೆದುಕೊಂಡಿದೆ. ಇದಾದ ಕೆಲವೇ ನಿಮಿಷಗಳಲ್ಲಿ ಜೋಶಿಮಠದ ಕಣಿವೆ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.



Ad Widget

ವಿಷಯ ತಿಳಿಯುತ್ತಿದ್ದಂತೆ ಉತ್ತರಾಖಂಡದ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಜಂಟಿಯಾಗಿ ಶೋಧ ಕಾರ್ಯಾಚರಣೆ ಕೈಗೊಂಡಿವೆ. ಈಗಾಗಲೇ ಹೆಲಿಕಾಪ್ಟರ್‌ನ ಅವಶೇಷಗಳು ಹಾಗೂ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಚಾರ್ ಧಾಮ್ ಯಾತ್ರೆಗೆ ತೆರಳಿದ್ದ ಐವರು
ಮೃತ ಐವರು ಪ್ರಯಾಣಿಕರು ಕರ್ನಾಟಕದವರಾಗಿದ್ದು, ಚಾರ್ ಧಾಮ್ ಯಾತ್ರೆಗೆ ತೆರಳಿದ್ದರು. ಬದ್ರಿನಾಥನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಮೃತರು ಯಾರು?
ಅರುಣ್ ಸಾಲುಂಕೆ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದವರಾದ ಅರುಣ್ ಸಾಲುಂಕೆ, 2007ರ ಬ್ಯಾಚ್‌ನ ಪೊಲೀಸ್ ಅಧಿಕಾರಿಯಾಗಿದ್ದರು. ಪ್ರಸ್ತುತ ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಂ ವಿಭಾಗದಲ್ಲಿ ಇನ್‌ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾಮಮೂರ್ತಿನಗರದಲ್ಲಿ ವಾಸವಾಗಿದ್ದ ಅವರು ಈ ಹಿಂದೆ ಸಿಸಿಬಿ, ಬಾಣಸವಾಡಿ ಹಾಗೂ ಇಂದಿರಾನಗರ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು.

ನಟರಾಜ್: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದವರಾದ ನಟರಾಜ್, ಕೋಳಿ ವ್ಯಾಪಾರ ನಡೆಸುತ್ತಿದ್ದರು. ಬೆಂಗಳೂರಿನಲ್ಲಿ ವಾಸವಾಗಿದ್ದ ಅವರು ಶಿಕ್ಷಣ ಸಂಸ್ಥೆಯೊಂದನ್ನೂ ನಡೆಸುತ್ತಿದ್ದರು.

ಶಂಕರಗೌಡ: ಇವರು ಕೂಡ ಕುಣಿಗಲ್ ಮೂಲದವರಾಗಿದ್ದು, ಅರುಣ್ ಸಾಲುಂಕೆ ಅವರು ಕುಣಿಗಲ್‌ನ ಅಮೃತೂರು ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಸಂದರ್ಭದಲ್ಲಿ ಪರಿಚಯವಾಗಿದ್ದರು. ಶಂಕರಗೌಡ ವೃತ್ತಿಯಲ್ಲಿ ವಕೀಲರಾಗಿದ್ದರು ಎಂದು ತಿಳಿದುಬಂದಿದೆ.

ಸುಧೀರ್ ಮತ್ತು ಪ್ರತಾಪ್: ಮೃತಪಟ್ಟವರಲ್ಲಿ ಸುಧೀರ್ ಕೂಡ ವಕೀಲರಾಗಿದ್ದರು. ಪ್ರತಾಪ್ ಅವರು ಅರುಣ್ ಸಾಲುಂಕೆ ಅವರ ಸ್ನೇಹಿತರಾಗಿದ್ದರು. ಇವರೆಲ್ಲರೂ ಒಟ್ಟಾಗಿ ಚಾರ್ ಧಾಮ್ ಯಾತ್ರೆಗೆ ತೆರಳಿದ್ದರು ಎನ್ನಲಾಗಿದೆ

Ad Widget
Continue Reading

ನಿಧನ ವಾರ್ತೆ

Uppinangadi-ತೆಂಗಿನಕಾಯಿ ಕೀಳಲು ಉಪ್ಪಿನಂಗಡಿಯಿಂದ ಕರೆದೊಯ್ದ ಕಾರ್ಮಿಕ ಶಿವಮೊಗ್ಗದಲ್ಲಿ ನಿಗೂಢ ಸಾವು; ದೂರು ದಾಖಲು

Published

on



Ad Widget

Ad Widget

Ad Widget

Ad Widget

ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಕರೆದೊಯ್ಯಲ್ಪಟ್ಟ ಕಾರ್ಮಿಕನೊಬ್ಬ ಶಿವಮೊಗ್ಗದಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಾರಿಂಜ ಬೈತಾರು ಮನೆ ನಿವಾಸಿ ನಾರಾಯಣ ಪೂಜಾರಿ ಅವರ ಪುತ್ರ ದೇವದಾಸ್ (47) ಮೃತಪಟ್ಟ ಕಾರ್ಮಿಕ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಕರೆದೊಯ್ಯಲ್ಪಟ್ಟ ಕಾರ್ಮಿಕನೊಬ್ಬ ಶಿವಮೊಗ್ಗದಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಾರಿಂಜ ಬೈತಾರು ಮನೆ ನಿವಾಸಿ ನಾರಾಯಣ ಪೂಜಾರಿ ಅವರ ಪುತ್ರ ದೇವದಾಸ್ (47) ಮೃತಪಟ್ಟ ಕಾರ್ಮಿಕ.

Ad Widget

Ad Widget <> Ad Widget

ಉಳ್ಳಾಲದ ನಿವಾಸಿ ಎಂದು ತಿಳಿಸಲಾದ ಸಯೀದ್ ಹಸನ್ ಎಂಬಾತ ಅ.23ರಂದು ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ದೇವದಾಸ್‌ನನ್ನು ಉಪ್ಪಿನಂಗಡಿಯಿಂದ ಕರೆದೊಯ್ದಿದ್ದ ಎನ್ನಲಾಗಿದೆ. ಬಳಿಕ ಅ.27ರಂದು ಶಿವಮೊಗ್ಗದಲ್ಲಿ ದೇವದಾಸ್ ಸಂಶಯಾಸ್ಪದವಾಗಿ ಮೃತಪಟ್ಟಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.



Ad Widget

ಮೃತನ ಸಾವಿನ ಬಗ್ಗೆ ಸಂಬಂಧಿಕರಿಗೆ ಯಾವುದೇ ಮಾಹಿತಿ ನೀಡದೆ, ಆತ ಆರೋಗ್ಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸುಳ್ಳು ಮಾಹಿತಿ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಕುರಿತು ಪ್ರಶ್ನಿಸಿದಾಗ, ಪೊಲೀಸ್ ಇಲಾಖೆ ಹಾಗೂ ಆಸ್ಪತ್ರೆಯಲ್ಲಿ ತಾನು ಸೂಕ್ತ ವ್ಯವಸ್ಥೆ ಮಾಡಿಕೊಂಡಿರುವುದಾಗಿ ಸಯೀದ್ ಹಸನ್ ಹೇಳಿದ್ದಾನೆ ಎನ್ನಲಾಗಿದ್ದು, ಇದು ಸಾವಿನ ಬಗ್ಗೆ ಅನುಮಾನ ಮೂಡಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Ad Widget

Ad Widget

ದೇವದಾಸ್ ಅನಾರೋಗ್ಯಕ್ಕೆ ತುತ್ತಾಗಿದ್ದರೂ ವಿಶ್ರಾಂತಿ ನೀಡದೆ ಕೆಲಸ ಮಾಡಿಸಿದ್ದರಿಂದ ಸಾವು ಸಂಭವಿಸಿರಬಹುದು ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಹಿಂಸೆ ನೀಡಿ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆಯನ್ನು ಮೃತನ ಪತ್ನಿ ಪದ್ಮಲತಾ ವ್ಯಕ್ತಪಡಿಸಿದ್ದಾರೆ. ಘಟನೆಯ ಸತ್ಯಾಸತ್ಯತೆ ಬಯಲಿಗೆಳೆಯಲು ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೂರು ಸ್ವೀಕರಿಸಲು ನಿರಾಕರಣೆ
ಪತಿಯ ಸಂಶಯಾಸ್ಪದ ಸಾವಿನ ಸುದ್ದಿತಿಳಿಯುತ್ತಿದ್ದಂತೆಯೇ ತನ್ನ ಗಂಡನನ್ನು ಕೂಲಿ ಕೆಲಸಕ್ಕೆಂದು ಕರೆದೊಯ್ದ ವ್ಯಕ್ತಿಯ ಮೇಲೆ ದೂರು ನೀಡಲು ಮೃತರ ಪತ್ನಿ ಅ. 27 ರ ರಾತ್ರಿಯೇ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ನೀಡಲು ಮುಂದಾದಾಗ, ವ್ಯಕ್ತಿ ಮೃತಪಟ್ಟಿದ್ದು ಶಿವಮೊಗ್ಗದಲ್ಲಿ ಆಗಿರುವುದರಿಂದ ನೀವು ಅಲ್ಲಿಗೆ ಹೋಗಿ ಅಲ್ಲಿಯೇ ದೂರು ಸಲ್ಲಿಸಬೇಕೆಂದು ಠಾಣಾ ಪೊಲೀಸರು ತಾಕೀತು ಮಾಡಿದ್ದಾರೆಂದು ಆರೋಪಿಸಲಾಗಿದೆ. ತನ್ನ ಗಂಡನನ್ನು ಕರೆದೊಯ್ದದ್ದು ಉಪ್ಪಿನಂಗಡಿಯಿಂದ ಎಂದು ತಿಳಿಸಿದರೂ ಒಪ್ಪದ ಪೊಲೀಸರ ನಡೆ, ಘಟನೆಯ ಬಗ್ಗೆ ಎಲ್ಲಿ ದೂರು ಸಲ್ಲಿಸಿದರೂ ಸ್ವೀಕರಿಸಬೇಕೆಂಬ ಪೊಲೀಸ್ ಇಲಾಖೆಯ ನಿರ್ದೇಶನವನ್ನು ಗಾಳಿಗೆ ತೂರಿದಂತಾಗಿದೆ. ಬಳಿಕ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಟಂದೂರು ಮಧ್ಯೆ ಪ್ರವೇಶಿಸಿ ಉನ್ನತಾಧಿಕಾರಿಗಳನ್ನು ಸಂಪರ್ಕಿಸಿದ ಬಳಿಕ ಬುಧವಾರದಂದು ದೂರು ಸ್ವೀಕರಿಸಲು ಪೊಲೀಸರು ಮುಂದಾದರು ಎಂದು ಮೃತ ವ್ಯಕ್ತಿಯ ಸಂಬಂಧಿಕರು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!