ಅಪರಾಧ
Mangalore-ಮಂಗಳೂರು: ನಕಲಿ mParivahan APK ಫೈಲ್ ಡೌನ್ಲೋಡ್; ಬ್ಯಾಂಕ್ ಖಾತೆಯಿಂದ ₹4.89 ಲಕ್ಷ ಕಳೆದುಕೊಂಡ ವ್ಯಕ್ತಿ
ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ (CEN) ಪ್ರಕರಣ ದಾಖಲಾಗಿದೆ.
ಮಂಗಳೂರು: ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ (CEN) ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 28ರಂದು ದೂರುದಾರರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು ₹4,89,509 ಹಣ ಕಡಿತಗೊಂಡಿತ್ತು. ಖಾತೆಯಿಂದ ಭಾರಿ ಮೊತ್ತದ ಹಣ ವರ್ಗಾವಣೆಯಾಗಿರುವ ಬಗ್ಗೆ ಮೊಬೈಲ್ಗೆ ಬಂದ ಎಸ್ಎಂಎಸ್ ಗಮನಿಸಿದ ಅವರು ಆಘಾತಕ್ಕೊಳಗಾಗಿದ್ದಾರೆ. ಬಳಿಕ ಈ ವಿಚಾರವನ್ನು ಕುಟುಂಬದ ಸದಸ್ಯರ ಗಮನಕ್ಕೆ ತಂದಿದ್ದಾರೆ.
ಕುಟುಂಬದ ಸದಸ್ಯರು ಮೊಬೈಲ್ ಪರಿಶೀಲಿಸಿದಾಗ, ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್ನಂತೆ ಕಾಣುವ ‘mParivahan’ ಹೆಸರಿನ ನಕಲಿ APK ಫೈಲ್ ಡೌನ್ಲೋಡ್ ಆಗಿರುವುದು ಪತ್ತೆಯಾಗಿದೆ. ಸಂಚಾರ ನಿಯಮ ಉಲ್ಲಂಘನೆ ಅಥವಾ ಇ-ಚಲನ್ ಪಾವತಿಯ ನೆಪದಲ್ಲಿ ಸೈಬರ್ ವಂಚಕರು ಕಳುಹಿಸಿದ್ದ ಲಿಂಕ್ ಮೂಲಕ ಈ ಅಪಾಯಕಾರಿ ಆ್ಯಪ್ ಮೊಬೈಲ್ಗೆ ಇನ್ಸ್ಟಾಲ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳೀಯ
Kadaba-ಕಡಬ: ಸರಣಿ ಕಳ್ಳತನ ಪ್ರಕರಣ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರು
ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಕೊನೆಗೂ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.
ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಕೊನೆಗೂ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.
ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 110/16, 112/16, 113/16 ಹಾಗೂ 114/16ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಕಲಂ 457 ಮತ್ತು 380ರಂತೆ ಪ್ರಕರಣಗಳು ದಾಖಲಾಗಿದ್ದವು.
ಈ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ದೊಡ್ಡಬಳ್ಳಾಪುರದ ನರಸಿಂಹ ಅಲಿಯಾಸ್ ರಾಜು, ಮಹಾರಾಷ್ಟ್ರದ ವಿಜಯ್ ಸುರೇಶ್ ಪೊಂಕೆ, ನವೀನ್ ಚಂದ್ರ ಸಿಂಗ್, ಉತ್ತರ ಕನ್ನಡದ ಚಂದ್ರಕಾಂತ್ ಪೂಜಾರಿ ಹಾಗೂ ಮಂಡ್ಯದ ಪ್ರಕಾಶ್ ಬಹದ್ದೂರ್ ಅವರಿಗೆ ಈಗಾಗಲೇ ಪುತ್ತೂರಿನ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು.
ಇದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರ ಮೂಲದ ವಿಶಾಲ್ ಪೊಂಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನ ಪತ್ತೆಗಾಗಿ ಪೊಲೀಸರು ಪ್ರಯತ್ನ ನಡೆಸಿದ್ದು, ಆರೋಪಿಯ ವಿರುದ್ಧ ನ್ಯಾಯಾಲಯದಿಂದ ಪ್ರೊಕ್ಲಮೇಶನ್ ಹೊರಡಿಸಲಾಗಿತ್ತು.
ಅಂತಿಮವಾಗಿ 2026ರ ಅಕ್ಟೋಬರ್ 30ರಂದು ವಿಶಾಲ್ ಪೊಂಕೆ ಪುತ್ತೂರಿನ 2ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ (ಸಂಚಾರಿ ನ್ಯಾಯಾಲಯ, ಕಡಬ)ಕ್ಕೆ ಹಾಜರಾಗಿದ್ದಾನೆ. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವಿಶಾಲ್ ಪೊಂಕೆ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಎಂಒಬಿ ತೆರೆಯಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಯೂ ಅಪರಾಧ ಸಂಖ್ಯೆ 105/2016ರ ಅಡಿಯಲ್ಲಿ ಐಪಿಸಿ ಕಲಂ 457 ಮತ್ತು 380ರಂತೆ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಅಪರಾಧ
Mangalore-ಫೇಸ್ಬುಕ್ ಲಾಟರಿ ಜಾಹೀರಾತಿಗೆ ಮರುಳಾಗಿ ₹7.22 ಲಕ್ಷ ಕಳೆದುಕೊಂಡ ಮಂಗಳೂರಿನ ವ್ಯಕ್ತಿ..!
ಫೇಸ್ಬುಕ್ನಲ್ಲಿ ಕೇರಳ ರಾಜ್ಯದ ಆನ್ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ (CEN) ಪ್ರಕರಣ ದಾಖಲಾಗಿದೆ.
ಮಂಗಳೂರು: ಫೇಸ್ಬುಕ್ನಲ್ಲಿ ಕೇರಳ ರಾಜ್ಯದ ಆನ್ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಯಲ್ಲಿ (CEN) ಪ್ರಕರಣ ದಾಖಲಾಗಿದೆ.
ದೂರುದಾರರು ಸೆಪ್ಟೆಂಬರ್ 25, 2026ರಂದು ರಾತ್ರಿ ಮೊಬೈಲ್ನಲ್ಲಿ ಫೇಸ್ಬುಕ್ ವೀಕ್ಷಿಸುತ್ತಿದ್ದಾಗ ಕೇರಳ ರಾಜ್ಯದ ಆನ್ಲೈನ್ ಲಾಟರಿ ಮಾರಾಟಕ್ಕೆ ಸಂಬಂಧಿಸಿದ ವೀಡಿಯೊ ಜಾಹೀರಾತನ್ನು ಗಮನಿಸಿದ್ದರು. ಬಳಿಕ ಸೆಪ್ಟೆಂಬರ್ 27ರಂದು ಲಾಟರಿ ಖರೀದಿಸುವ ಉದ್ದೇಶದಿಂದ ಜಾಹೀರಾತಿನಲ್ಲಿ ನೀಡಲಾಗಿದ್ದ 7797769038 ಸಂಖ್ಯೆಗೆ ಕರೆ ಮಾಡಿ ಮಾತನಾಡಿದ್ದರು.
ಈ ವೇಳೆ ವಂಚಕರು ವಾಟ್ಸಾಪ್ ಮೂಲಕ ಕಳುಹಿಸಿದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ₹200 ಪಾವತಿಸುವ ಮೂಲಕ ಲಾಟರಿ ಟಿಕೆಟ್ ಖರೀದಿಸಿದ್ದರು. ಅದೇ ದಿನ ಸಂಜೆ ಸುಮಾರು 4 ಗಂಟೆಗೆ ಅದೇ ಮೊಬೈಲ್ ಸಂಖ್ಯೆಯಿಂದ ವಾಟ್ಸಾಪ್ ಸಂದೇಶ ಬಂದಿದ್ದು, ಆನ್ಲೈನ್ ಲಾಟರಿಯಲ್ಲಿ ₹12 ಲಕ್ಷ ಮತ್ತು ₹5 ಲಕ್ಷ ಸೇರಿದಂತೆ ಒಟ್ಟು ₹17 ಲಕ್ಷ ಬಹುಮಾನ ಗೆದ್ದಿರುವುದಾಗಿ ವಂಚಕರು ತಿಳಿಸಿದ್ದಾರೆ.
ಬಹುಮಾನದ ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಿಸಿಕೊಳ್ಳಲು ಪ್ರೊಸೆಸಿಂಗ್ ಶುಲ್ಕ, ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿಸಬೇಕೆಂದು ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿದ ಸಂತ್ರಸ್ತರು ಸೆಪ್ಟೆಂಬರ್ 27ರಿಂದ ಅಕ್ಟೋಬರ್ 27ರವರೆಗೆ ವಿವಿಧ ದಿನಗಳಲ್ಲಿ ತಮ್ಮ ಬ್ಯಾಂಕ್ ಖಾತೆಗಳಿಂದ ಒಟ್ಟು ₹7,22,804 ಹಣವನ್ನು ವಂಚಕರು ಸೂಚಿಸಿದ ಖಾತೆಗಳಿಗೆ ವರ್ಗಾಯಿಸಿದ್ದಾರೆ.
ಆದರೆ, ಹಲವು ಬಾರಿ ಹಣ ಪಾವತಿಸಿದರೂ ಬಹುಮಾನದ ಮೊತ್ತ ಕೈ ಸೇರದ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಅನುಮಾನ ಮೂಡಿದೆ. ಬಳಿಕ ತಾವು ವರ್ಗಾಯಿಸಿದ ಹಣವನ್ನು ವಾಪಸ್ ನೀಡುವಂತೆ ವಂಚಕರನ್ನು ಸಂಪರ್ಕಿಸಿದಾಗ ಅವರು ಹಣ ಹಿಂದಿರುಗಿಸದೆ, ಮೊಬೈಲ್ ಸಂಪರ್ಕವನ್ನೂ ಕಡಿತಗೊಳಿಸಿದ್ದಾರೆ.
ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ಸಂತ್ರಸ್ತರು ಮಂಗಳೂರು ಸೈಬರ್ ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಪರಾಧ
Puttur-ಪುತ್ತೂರು: ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಮಕ್ಕಳನ್ನು ಕೊಡಿಸುವುದಾಗಿ ವಂಚಿಸಲು ಯತ್ನಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶ
ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಣೇಶ್ (24) ಎಂಬಾತ ಈ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪುತ್ತೂರು: ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಣೇಶ್ (24) ಎಂಬಾತ ಈ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಈತ ಶಾಂತಿನಗರದ ಮನೆಯೊಂದಕ್ಕೆ ತೆರಳಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಕೇಳುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ 112 ತುರ್ತು ಕರ್ತವ್ಯದಲ್ಲಿದ್ದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದು ಪುತ್ತೂರು ನಗರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.
-
ಬಿಗ್ ನ್ಯೂಸ್23 hours ago‘ಸ್ಟಿಂಗ್’ ತಲ್ಲಣ : ‘ಪುತ್ತೂರು’ ಟಿಕೆಟ್ ಆಕಾಂಕ್ಷಿ ಕೃಪಾ ಆಳ್ವ ಕಾಂಗ್ರೆಸ್ ನಿಂದ ಉಚ್ಚಾಟನೆ
-
ನಿಧನ ವಾರ್ತೆ11 hours agoMudubidire-ಮೂಡುಬಿದಿರೆ: ಖಾಸಗಿ ಬಸ್–ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; 19ರ ಹರೆಯದ ಯುವಕ ದುರ್ಮರಣ
-
ನಿಧನ ವಾರ್ತೆ11 hours agoHelicopter crash-ಬದ್ರಿನಾಥ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಪತನ: ಕರ್ನಾಟಕದ ಐವರು ಸೇರಿ 6 ಮಂದಿ ದುರ್ಮರಣ
-
ರಾಜಕೀಯ11 hours agoYatnal-ಬಿಜೆಪಿ ಸೇರ್ಪಡೆಗೆ ಯತ್ನಾಳ್ರಿಂದ ಎರಡು ಷರತ್ತು? ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು?
-
ಸ್ಥಳೀಯ6 hours agoMangalore-ಮಂಗಳೂರಿಗೆ ಕೆಲಸಕ್ಕೆಂದು ಹೋದ ಎಡಮಂಗಲದ ಯುವತಿ ನಾಪತ್ತೆ
-
ನಿಧನ ವಾರ್ತೆ6 hours agoUdupi-ಉಡುಪಿ: ಜಿಲ್ಲಾಸ್ಪತ್ರೆ ಶೌಚಾಲಯದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತ ಆತ್ಮಹತ್ಯೆಗೆ ಶರಣು..!; ಪ್ರೇಮ ಪ್ರಕರಣದಲ್ಲಿ ಜೈಲು ಪಾಲಾಗಿ ಬಿಡುಗಡೆಗೊಂಡ ಯುವಕನ ಮೇಲೆ ಯುವತಿಯ ಮನೆಯವರಿಂದ ಹಲ್ಲೆ ಆರೋಪ..!
-
ಅಪರಾಧ11 hours agoPuttur-ಪುತ್ತೂರು: ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಮಕ್ಕಳನ್ನು ಕೊಡಿಸುವುದಾಗಿ ವಂಚಿಸಲು ಯತ್ನಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶ
-
ಸ್ಥಳೀಯ9 hours agoSoujanya case-ಸೌಜನ್ಯ ಮೃತದೇಹ ಸಿಕ್ಕ ಸ್ಥಳಕ್ಕೆ ಎಸ್ಐಟಿ ತಂಡ ಭೇಟಿ; ಸ್ಥಳದಲ್ಲಿ ಬಿಗಿ ಭದ್ರತೆ


















