ಮೈಸೂರು
H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್. ವಿಶ್ವನಾಥ್
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.
ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಮೈಸೂರು
Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.
ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ಮೈಸೂರು
Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್‌ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.
ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.
‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.
‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.
ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.
ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.
ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.
ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು
Pramodadevi Odeyar-ಮೈಸೂರು ದಸರಾ: ಸರ್ಕಾರಿ ಇಲಾಖೆಗಳ ನಡೆಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ: ಸರ್ಕಾರಕ್ಕೆ ಉಚ್ಚ ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆ..!
ನಾಡಹಬ್ಬ ಮೈಸೂರು ದಸರಾ ಆಚರಣೆಯ ನಿರ್ವಹಣೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಾಲ್ಕು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿಂದ ನಿರಾಸೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮೈಸೂರು: ನಾಡಹಬ್ಬ ಮೈಸೂರು ದಸರಾ ಆಚರಣೆಯ ನಿರ್ವಹಣೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಾಲ್ಕು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿಂದ ನಿರಾಸೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜಟ್ಟಿ ಕಾಳಗದ ವಿಚಾರದಲ್ಲಿ ಪೊಲೀಸರ ನಡೆಗೆ ಆಕ್ಷೇಪ
ವಜ್ರಮಷ್ಟಿ ಕಾಳಗದ ಸಂದರ್ಭದಲ್ಲಿ ಪೊಲೀಸರ ನಡೆ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಪ್ರಮೋದಾದೇವಿ ಒಡೆಯರ್, ಜಟ್ಟಿ ಕಾಳಗ ಈ ಹಿಂದೆಯೂ ಸ್ಥಗಿತಗೊಂಡ ನಿದರ್ಶನಗಳಿವೆ ಎಂದು ತಿಳಿಸಿದ್ದಾರೆ. 1970, 1980 ಹಾಗೂ 2020ರಲ್ಲಿಯೂ ಕಾಳಗ ನಡೆದಿರಲಿಲ್ಲ ಎಂದು ಉಲ್ಲೇಖಿಸಿದ್ದಾರೆ.
ದಸರಾ ಆಚರಣೆಯ ಭಾಗವಾಗಿ ವಜ್ರಮಷ್ಟಿ ಕಾಳಗವನ್ನು ನಡೆಸುತ್ತಿಲ್ಲ ಹಾಗೂ ಅದಕ್ಕೆ ಧಾರ್ಮಿಕ ಮಹತ್ವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಜಯಯಾತ್ರೆ ನಿಗದಿತ ಮುಹೂರ್ತದಂತೆ ನಡೆದಿದ್ದು, ಜಟ್ಟಿ ಸಮುದಾಯ ಮತ್ತು ಪೊಲೀಸರ ನಡುವಿನ ಸಮನ್ವಯದ ಕೊರತೆಯಿಂದ ಕಾಳಗ ರದ್ದಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿ ವಿರುದ್ಧ ಮೇಲಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಚಿನ್ನದ ಅಂಬಾರಿ ನಮ್ಮ ಖಾಸಗಿ ಆಸ್ತಿ
ಚಿನ್ನದ ಅಂಬಾರಿಯ ಭದ್ರತೆ ವಿಚಾರದಲ್ಲಿಯೂ ಪೊಲೀಸ್ ಇಲಾಖೆಯ ವಿರುದ್ಧ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಆಯುಕ್ತರು ನೀಡಿದ ಭರವಸೆಯ ಮೇರೆಗೆ ಅಂಬಾರಿಯನ್ನು ನೀಡಿದ್ದರೂ, ಆ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ.
ಅಂಬಾರಿಯ ಸುತ್ತ ಅನಧಿಕೃತ ವ್ಯಕ್ತಿಗಳು ಓಡಾಡುತ್ತಿದ್ದರು. ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಅಂಬಾರಿಯ ಸಮೀಪದಲ್ಲಿದ್ದರು. ಅಂಬಾರಿಯ ಭದ್ರತೆಗೆ ಧಕ್ಕೆ ಉಂಟಾಗಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ಅಂಬಾರಿ ತಮ್ಮ ಕುಟುಂಬದ ಖಾಸಗಿ ಆಸ್ತಿಯಾಗಿದ್ದು, ಅದು ಸರ್ಕಾರದ ಆಸ್ತಿಯಲ್ಲ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ಧಾರ್ಮಿಕ ಕಾರ್ಯಗಳಿಗೆ ಅಡ್ಡಿ ಆರೋಪ
ದಸರಾ ಸಂದರ್ಭದಲ್ಲಿ ತಮ್ಮ ಅತಿಥಿಗಳಿಗಾಗಿ ಮೀಸಲಿಟ್ಟಿದ್ದ ಖಾಸಗಿ ಸ್ಥಳವನ್ನು ಅತಿಕ್ರಮಿಸಲಾಗಿದೆ ಹಾಗೂ ಅನಧಿಕೃತ ತಡೆಬೇಲಿ ಹಾಕಿ ಧಾರ್ಮಿಕ ಕಾರ್ಯಗಳಿಗೆ ಅಡ್ಡಿಪಡಿಸಲಾಗಿದೆ ಎಂದು ಪ್ರಮೋದಾದೇವಿ ಒಡೆಯರ್ ಆರೋಪಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ವಿರುದ್ಧವೂ ಆಕ್ಷೇಪ ವ್ಯಕ್ತಪಡಿಸಿರುವ ಅವರು, ನವರಾತ್ರಿ ಆಚರಣೆಯ ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಯಾಗಿರುವುದು ಬೇಸರ ತಂದಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ದಸರಾಕ್ಕೆ ಮಾತ್ರ ಮಹತ್ವ ನೀಡಿ, ಅರಮನೆಯ ಧಾರ್ಮಿಕ ಆಚರಣೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ಉಚ್ಚ ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆ
ತಮ್ಮ ಧಾರ್ಮಿಕ ಆಚರಣೆಗಳಿಗೆ ಸರ್ಕಾರಿ ಅಧಿಕಾರಿಗಳಿಂದ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸಲು ತಾವು ಸ್ವತಂತ್ರರು ಎಂದು ಪ್ರಮೋದಾದೇವಿ ಒಡೆಯರ್ ಎಚ್ಚರಿಸಿದ್ದಾರೆ. ಈ ಕುರಿತು ನ್ಯಾಯಾಲಯ ಸ್ಪಷ್ಟ ಆದೇಶ ನೀಡಿದ್ದರೂ, ಪ್ರತಿ ವರ್ಷ ನ್ಯಾಯಾಲಯದ ಮೊರೆ ಹೋಗದೆ ಸಹಕಾರ ನೀಡುತ್ತಾ ಬಂದಿದ್ದೇವೆ ಎಂದು ತಿಳಿಸಿದ್ದಾರೆ.
ದಸರಾ ಮೊದಲ ದಿನದಿಂದ ಏಳನೇ ದಿನದವರೆಗೆ ಸರ್ಕಾರಿ ಕಾರ್ಯಕ್ರಮಗಳನ್ನು ನಡೆಸಬಹುದು. ಆದರೆ ಆಯುಧಪೂಜೆ ಮತ್ತು ವಿಜಯದಶಮಿಯಂದು ತಮ್ಮ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅಂಬಾರಿ ಹೊರುವ ಆನೆಯ ಮಾಹಿತಿ ಕೊನೆಯ ಕ್ಷಣದಲ್ಲಿ ನೀಡಿದ ಆರೋಪ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರದಲ್ಲಿಯೂ ಸರ್ಕಾರದ ಕಾರ್ಯವೈಖರಿಗೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ವಿಚಾರದಲ್ಲಿ ಇಷ್ಟೊಂದು ಗೌಪ್ಯತೆ ಕಾಪಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಕಾರ್ಯಕ್ರಮಕ್ಕೆ ಕೇವಲ ಐದು ದಿನಗಳು ಬಾಕಿ ಇರುವಾಗ ಮಾಹಿತಿ ನೀಡಲಾಗಿದ್ದು, ಕೊನೆಯ ಕ್ಷಣದವರೆಗೂ ಯಾವುದೇ ವಿವರ ಲಭ್ಯವಾಗಿರಲಿಲ್ಲ. ಯಾವ ಆನೆಗೆ ಅಂಬಾರಿ ಹೊರಿಸಲಾಗುತ್ತದೆ ಎಂಬುದನ್ನು ತಾವೇ ಅರಣ್ಯ ಇಲಾಖೆಯ ಡಿಸಿಎಫ್ ಅವರನ್ನು ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿವರ್ಷವೂ ದಸರಾ ಆಚರಣೆಗೆ ತಾವು ಸಹಕಾರ ನೀಡುತ್ತಾ ಬಂದಿದ್ದರೂ, ಈ ಬಾರಿ ನಿರ್ಲಕ್ಷ್ಯ ತೋರಲಾಗಿದೆ ಎಂದು ದೂರಿದ್ದಾರೆ.
ಸರ್ಕಾರಕ್ಕೆ ರಾಜಮಾತೆಯ ಎಚ್ಚರಿಕೆ
ತಮ್ಮ ಸಹಕಾರವನ್ನು ಸರ್ಕಾರ ಸಾಮಾನ್ಯ ಸಂಗತಿಯಾಗಿ ಪರಿಗಣಿಸಿ ನಿರ್ಲಕ್ಷ್ಯ ಮಾಡುತ್ತಿರುವುದು ತೀವ್ರ ನಿರಾಸೆ ಮೂಡಿಸಿದೆ ಎಂದು ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ತಮ್ಮ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳಿಗೆ ಸೂಕ್ತ ಮೌಲ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮೈಸೂರು ದಸರಾ ಆಚರಣೆಯಲ್ಲಿ ಧಾರ್ಮಿಕ ಸಂಪ್ರದಾಯಗಳು, ಅರಮನೆಯ ಹಕ್ಕುಗಳು ಹಾಗೂ ಸರ್ಕಾರಿ ಇಲಾಖೆಗಳ ಸಮನ್ವಯಕ್ಕೆ ಆದ್ಯತೆ ನೀಡಬೇಕು ಎಂಬ ಸಂದೇಶವನ್ನು ತಮ್ಮ ಪತ್ರದ ಮೂಲಕ ಅವರು ನೀಡಿದ್ದಾರೆ.
-
ಬಿಗ್ ನ್ಯೂಸ್23 hours ago‘ಸ್ಟಿಂಗ್’ ತಲ್ಲಣ : ‘ಪುತ್ತೂರು’ ಟಿಕೆಟ್ ಆಕಾಂಕ್ಷಿ ಕೃಪಾ ಆಳ್ವ ಕಾಂಗ್ರೆಸ್ ನಿಂದ ಉಚ್ಚಾಟನೆ
-
ನಿಧನ ವಾರ್ತೆ11 hours agoMudubidire-ಮೂಡುಬಿದಿರೆ: ಖಾಸಗಿ ಬಸ್–ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; 19ರ ಹರೆಯದ ಯುವಕ ದುರ್ಮರಣ
-
ನಿಧನ ವಾರ್ತೆ11 hours agoHelicopter crash-ಬದ್ರಿನಾಥ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಹೆಲಿಕಾಪ್ಟರ್ ಪತನ: ಕರ್ನಾಟಕದ ಐವರು ಸೇರಿ 6 ಮಂದಿ ದುರ್ಮರಣ
-
ರಾಜಕೀಯ11 hours agoYatnal-ಬಿಜೆಪಿ ಸೇರ್ಪಡೆಗೆ ಯತ್ನಾಳ್ರಿಂದ ಎರಡು ಷರತ್ತು? ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು?
-
ಸ್ಥಳೀಯ6 hours agoMangalore-ಮಂಗಳೂರಿಗೆ ಕೆಲಸಕ್ಕೆಂದು ಹೋದ ಎಡಮಂಗಲದ ಯುವತಿ ನಾಪತ್ತೆ
-
ನಿಧನ ವಾರ್ತೆ6 hours agoUdupi-ಉಡುಪಿ: ಜಿಲ್ಲಾಸ್ಪತ್ರೆ ಶೌಚಾಲಯದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತ ಆತ್ಮಹತ್ಯೆಗೆ ಶರಣು..!; ಪ್ರೇಮ ಪ್ರಕರಣದಲ್ಲಿ ಜೈಲು ಪಾಲಾಗಿ ಬಿಡುಗಡೆಗೊಂಡ ಯುವಕನ ಮೇಲೆ ಯುವತಿಯ ಮನೆಯವರಿಂದ ಹಲ್ಲೆ ಆರೋಪ..!
-
ಅಪರಾಧ11 hours agoPuttur-ಪುತ್ತೂರು: ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಮಕ್ಕಳನ್ನು ಕೊಡಿಸುವುದಾಗಿ ವಂಚಿಸಲು ಯತ್ನಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶ
-
ಸ್ಥಳೀಯ9 hours agoSoujanya case-ಸೌಜನ್ಯ ಮೃತದೇಹ ಸಿಕ್ಕ ಸ್ಥಳಕ್ಕೆ ಎಸ್ಐಟಿ ತಂಡ ಭೇಟಿ; ಸ್ಥಳದಲ್ಲಿ ಬಿಗಿ ಭದ್ರತೆ


















