Connect with us

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ 2026

Published

on



Ad Widget

Ad Widget

Ad Widget

Ad Widget

ಪ್ರತಿ ಕ್ಷೇತ್ರದಲ್ಲಿಯೂ ಕೃತಕ ಬುದ್ದಿಮತ್ತೆಯು ಅಗಾಧವಾದ ಪ್ರಭಾವವನ್ನು ಬೀರುತ್ತಿದೆ. ಇದರಿಂದಾಗಿ ಉದ್ಯೋಗ ನಷ್ಟವಾಗುತ್ತಿದೆ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ನೂತನ ತಂತ್ರಜ್ಞಾನಗಳನ್ನು ತಮ್ಮಲ್ಲಿ ಅಳವಡಿಸಿಕೊಂಡ ಪ್ರತಿಯೊಬ್ಬರಿಗೂ ಸಾಕಷ್ಟು ಅವಕಾಶಗಳು ಸಿಗುತ್ತವೆ ಎಂದು ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ‌ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಬಿಸಿನೆಸ್ ಸಿಸ್ಟಮ್ಸ್ ವಿಭಾಗದ ಮುಖ್ಯಸ್ಥ ಡಾ.ಶೈಲೇಶ್ ಶೆಟ್ಟಿ.ಎಸ್ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪ್ರತಿ ಕ್ಷೇತ್ರದಲ್ಲಿಯೂ ಕೃತಕ ಬುದ್ದಿಮತ್ತೆಯು ಅಗಾಧವಾದ ಪ್ರಭಾವವನ್ನು ಬೀರುತ್ತಿದೆ. ಇದರಿಂದಾಗಿ ಉದ್ಯೋಗ ನಷ್ಟವಾಗುತ್ತಿದೆ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ನೂತನ ತಂತ್ರಜ್ಞಾನಗಳನ್ನು ತಮ್ಮಲ್ಲಿ ಅಳವಡಿಸಿಕೊಂಡ ಪ್ರತಿಯೊಬ್ಬರಿಗೂ ಸಾಕಷ್ಟು ಅವಕಾಶಗಳು ಸಿಗುತ್ತವೆ ಎಂದು ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ‌ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಬಿಸಿನೆಸ್ ಸಿಸ್ಟಮ್ಸ್ ವಿಭಾಗದ ಮುಖ್ಯಸ್ಥ ಡಾ.ಶೈಲೇಶ್ ಶೆಟ್ಟಿ.ಎಸ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2026 ಕ್ಕೆ ಚಾಲನೆ ನೀಡಿ ಮಾತಾಡಿದರು. ಉದ್ಯೋಗದ ಬೆನ್ನು ಹತ್ತಿ ಹೋಗುವ ಬದಲು ಸ್ವಂತ ಉದ್ದಿಮೆಯನ್ನು ಸ್ಥಾಪಿಸುವುದರಿಂದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು ಮತ್ತು ಆವಶ್ಯಕತೆ ಉಳ್ಳವರಿಗೆ ಉದ್ಯೋಗವನ್ನು ನೀಡಬಹುದು ಎಂದರು. ನಾಳೆ ಏನಾಗಬಹುದು ಎಂದು ಬಲ್ಲವರು ಯಾರೂ ಇಲ್ಲ ಹಾಗಾಗಿ ಇಂದು ಸಿಕ್ಕಿದ ಅವಕಾಶಗಳನ್ನು ಉಪಯೋಗಿಸಿ ನಾಳೆಗೆ ತಯಾರಿಯನ್ನು ಮಾಡುವುದು ಆವಶ್ಯಕ ಎಂದು ನುಡಿದರು.

Ad Widget

Ad Widget <> Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ತಂತ್ರಜ್ಞಾನಗಳ ಅತಿಯಾದ ಬಳಕೆಯಿಂದ ನಾವು ಆರಾಮವಾಗಿದ್ದೇವೆ. ತಂತ್ರಜ್ಞಾನದ ಸಹಾಯವನ್ನು ನಾವು ಪಡೆದುಕೊಳ್ಳಬೇಕೇ ಹೊರತು ಅವು ನಮ್ಮನ್ನು ಆಳುವಂತಾಗಬಾರದು ಎಂದರು. ಮುಂದಿನ ದಿನಗಳಲ್ಲಿ ಕಂಪೆನಿಗಳು ಉದ್ಯೋಗಕ್ಕಾಗಿ ನಮ್ಮನ್ನು ಹುಡುಕಿಕೊಂಡು ಬರಲಾರವು ಬದಲಿಗೆ ನಮ್ಮಲ್ಲಿರುವ ವಿಶೇಷ ಸಾಮರ್ಥ್ಯ, ಕೌಶಲ್ಯಗಳನ್ನು ಪ್ರದರ್ಶಿಸಿ ನಾವೇ ಉದ್ಯೋಗ ಪಡೆಯಬೇಕಾದ ಅನಿವಾರ್ಯತೆ ಒದಗಿಬರಲಿದೆ ಎಂದರು. ನಮ್ಮ ಕಾಲೇಜು ವಿದ್ಯಾರ್ಜನೆಗೆ ಪೂರಕವಾದ ಅನೇಕ ಚಟುವಟಿಕೆಗಳನ್ನು ನಡೆಸುತ್ತದೆ. ಪಾಠದ ಜತೆಗೆ ನೈತಿಕ ಮೌಲ್ಯವನ್ನು ಬೆಳೆಸುವುದಕ್ಕೂ ಸಹಕರಿಸುತ್ತದೆ ಎಂದರು.



Ad Widget

ಇಲ್ಲಿ ಮಂಡಿಸಲ್ಪಡುವ 60 ಪ್ರೌಢ ಪ್ರಬಂಧಗಳನ್ನು ಮುದ್ರಿಸಿದ ಸಂಚಿಕೆಯನ್ನು ಅತಿಥಿಗಳು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.

Ad Widget

Ad Widget

ವಿವಿಧ ವಿಷಯಗಳ ಒಟ್ಟು 125ಪ್ರಬಂಧಗಳನ್ನು ಸ್ವೀಕರಿಸಲಾಗಿತ್ತು. ಅದರಲ್ಲಿ 61ಪ್ರಬಂಧಗಳನ್ನು ಮಂಡನೆಗೆ ಮತ್ತು 47 ಯೋಜನೆಗಳನ್ನು ಪೋಸ್ಟರ್ ಪ್ರಸ್ತುತಿಗೆ ಆಯ್ಕೆಮಾಡಲಾಗಿದೆ.
ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್, ಜ್ಞಾನ ಸಂಗಮ 2026ರ ಸಹ ಸಂಯೋಜಕಿ ಪ್ರೊ.ರಶ್ಮಿ.ಪಿ.ಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜ್ಞಾನ ಸಂಗಮ 2026ರ ಸಂಯೋಜಕ ಪ್ರೊ.ವೆಂಕಟೇಶ್.ವೈ.ಸಿ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಮಾನಸಾ.ಪಿ ಅತಿಥಿಗಳನ್ನು ಪರಿಚಯಿಸಿದರು. ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಜನಿ ರೈ ವಂದಿಸಿದರು. ಮೂಲ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಶ್ರೀಶರಣ್ಯ.ಯು.ಆರ್ ಕಾರ್ಯಕ್ರಮ ನಿರ್ವಹಿಸಿದರು.

Ad Widget
Click to comment

Leave a Reply

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ; ದೇಶಭಕ್ತ ವಿದ್ಯಾರ್ಥಿಗಳ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ: ಸುಬ್ರಮಣ್ಯ ನಟ್ಟೋಜ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಮಣ್ಯ ನಟ್ಟೋಜ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ದೇಶವನ್ನು ಉತ್ತಮ ಹಾದಿಯತ್ತ ಕೊಂಡೊಯ್ಯುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ. ಇಂದಿನ ಪಠ್ಯಪುಸ್ತಕದಲ್ಲಿ ಹಿಂದೆ ನಮ್ಮ ದೇಶವನ್ನು ಆಳಿದ ಬ್ರಿಟಿಷ್ ಅಧಿಕಾರಿಗಳನ್ನು ‘ದೇವರು'(ಲಾರ್ಡ್) ಎಂದು ಕರೆಯುತ್ತಿದ್ದೇವೆ. ಹಾಗಾಗಿ ದೇಶವನ್ನು ಕಟ್ಟುವ ಶಿಕ್ಷಕರು ಮಕ್ಕಳಿಗೆ ಕೆಲವು ಸೂಕ್ಷö್ಮ ವಿಚಾರಗಳನ್ನೂ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟಾಗ ಮಕ್ಕಳು ಉತ್ತಮ ರೀತಿಯ ಜ್ಞಾನ ಪಡೆಯಲು ಸಾಧ್ಯ. ಈ ಮೂಲಕ ದೇಶಭಕ್ತ ಹಾಗೂ ರಾಷ್ಟç ನಿರ್ಮಾಣ ಮಾಡುವ ಬಲಿಷ್ಠ ಯುವ ಜನತೆಯನ್ನು ನಿರ್ಮಿಸಲು ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಮಣ್ಯ ನಟ್ಟೋಜ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ದೇಶದ ಬಗೆಗೆ ಸರಿಯಾದ ಜ್ಞಾನವನ್ನು ಮಕ್ಕಳಿಗೆ ಉಣಬಡಿಸುವುದು ಅಗತ್ಯ. ಮಕ್ಕಳಲ್ಲಿ ದೇಶಭಕ್ತಿ ಹೆಚ್ಚಿಸುವ ಕುರಿತು ಮಾಹಿತಿಗಳನ್ನು ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.



Ad Widget

ಶಿಕ್ಷಕರ ಪುನಶ್ಚೇತನ ತರಬೇತಿಯಲ್ಲಿ ವಿಮರ್ಶಾತ್ಮಕ ಚಿಂತನೆ ಹಾಗೂ ಸೃಜನಾತ್ಮಕ ಚಿಂತನೆಯನ್ನು ತರಗತಿಯಲ್ಲಿ ಅಳವಡಿಸಿಕೊಳ್ಳುವ ಕುರಿತು ಸಿಬಿಎಸ್‌ಇಯಿಂದ ನಿಯೋಜನೆಗೊಂಡ ತರಬೇತುದಾರರಾದ ವಂದನಾ ಎಸ್. ನಾಯಕ್ ಹಾಗೂ ಪ್ರಾಚಿ ಸಿಂಗ್ ತರಬೇತಿ ನೀಡಿದರು. ಸ್ಥಳೀಯ ಸಿಬಿಎಸ್‌ಇ ಶಾಲೆಗಳ ಶಿಕ್ಷಕರು ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು.

Ad Widget

Ad Widget
ಅಂಬಿಕಾ ಸಿಬಿಎಎಸ್‌ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ., ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ವಿದ್ಯಾಲಯದ ಶಿಕ್ಷಕಿಯರಾದ ಶರಣ್ಯ ಹಾಗೂ ರಕ್ಷಾ ಪ್ರಾರ್ಥಿಸಿದರು. ಶಿಕ್ಷಕಿ ಸಹನಾ ಸ್ವಾಗತಿಸಿ, ಶಿಕ್ಷಕಿ ಗೌರಿ ಕಾರ್ಯಕ್ರಮವನ್ನು ನಿರ್ವಹಿಸಿದರು.
Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ “ಕನಸುಗಳು – 2026” ರ ಉದ್ಘಾಟನೆ – ಸಮಾರಂಭ; ವಿದ್ಯಾರ್ಥಿಗಳು ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು : ಶ್ರದ್ಧಾ ವಿ. ಶೆಟ್ಟಿ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ರಾಜ್ಯಮಟ್ಟದ “ಕನಸುಗಳು – 2026 ಇದರ ಉದ್ಘಾಟನೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ವೇದಾಂತ ಐರನ್ ಅಂಡ್ ಸ್ಟೀಲ್ ಲಿಮಿಟೆಡ್, ಗೋವಾ ಇದರ ಅಸೋಸಿಯೇಟ್ ಮ್ಯಾನೇಜರ್ ಸಿಎ ಶ್ರದ್ಧಾ ವಿ. ಶೆಟ್ಟಿ ನಡೆಸಿಕೊಟ್ಟು ಮಾತನಾಡಿದರು.

Ad Widget

Ad Widget

Ad Widget

Ad Widget

ಕಂಡ ಕನಸುಗಳನ್ನು ನನಸು ಮಾಡುವ ಪ್ರಯತ್ನಗಳು ಜೊತೆಗೂಡಿದಾಗ ಭವಿಷ್ಯ ಸುಂದರವಾಗಬಲ್ಲದು. ಕನಸು ಕಾಣುವುದು ಸುಲಭ, ಆದರೆ ಆ ಕನಸುಗಳನ್ನು ನನಸಾಗಿಸಲು ನಿರಂತರ ಪರಿಶ್ರಮ, ಆತ್ಮವಿಶ್ವಾಸ, ಶಿಸ್ತು ಮತ್ತು ದೃಢಸಂಕಲ್ಪ ಅತ್ಯಗತ್ಯ. ಜೀವನದಲ್ಲಿ ಎದುರಾಗುವ ಸವಾಲುಗಳು ನಮ್ಮನ್ನು ಹಿಮ್ಮೆಟ್ಟಿಸುವುದಕ್ಕಲ್ಲ, ಬದಲಾಗಿ ನಮ್ಮ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಿಗುವ ಅವಕಾಶಗಳಾಗಿವೆ. ಸೋಲು ಎದುರಾದಾಗ ಕುಗ್ಗದೆ, ಅದನ್ನೇ ಯಶಸ್ಸಿನ ಮೆಟ್ಟಿಲನ್ನಾಗಿ ಮಾಡಿಕೊಂಡು ಮುನ್ನಡೆಯಬೇಕು. ನಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ, ಸಾಧಿಸುವ ಛಲ ನಮ್ಮಲ್ಲಿರಲಿ, ಪ್ರಯತ್ನದಲ್ಲಿ ಎಂದಿಗೂ ವಿರಾಮವಿರದಿರಲಿ. ಇಂದಿನ ಸಣ್ಣ ಪ್ರಯತ್ನಗಳೇ ನಾಳಿನ ದೊಡ್ಡ ಸಾಧನೆಗಳಿಗೆ ಭದ್ರ ಬುನಾದಿಯಾಗುತ್ತವೆ. ಯುವಜನತೆ ತಮ್ಮಲ್ಲಿರುವ ಪ್ರತಿಭೆ, ಶಕ್ತಿ ಮತ್ತು ಸಾಮರ್ಥ್ಯವನ್ನು ಗುರುತಿಸಿಕೊಂಡು, ಸಕಾರಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ವೇದಾಂತ ಐರನ್ ಅಂಡ್ ಸ್ಟೀಲ್ ಲಿಮಿಟೆಡ್, ಗೋವಾ ಇದರ ಅಸೋಸಿಯೇಟ್ ಮ್ಯಾನೇಜರ್ ಸಿಎ ಶ್ರದ್ಧಾ ವಿ. ಶೆಟ್ಟಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ರಾಜ್ಯಮಟ್ಟದ “ಕನಸುಗಳು – 2026 ಇದರ ಉದ್ಘಾಟನೆಯನ್ನು ನಡೆಸಿಕೊಟ್ಟು ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಮಂಡಳಿಯ ನಿರ್ದೇಶಕರಾದ ರಮೇಶ್ಚಂದ್ರ ಎಮ್. ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಜ್ಞಾನಾರ್ಜನೆಗೆ, ಕೌಶಲ್ಯಗಳ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು, ಅಂತೆಯೇ ಕನಸುಗಳು ಕಾರ್ಯಕ್ರಮ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ರೂಪಿಸುವಲ್ಲಿ ಬೇಕಾದ ಅಡಿಪಾಯವನ್ನು ಒದಗಿಸಿ ಕೊಡಲಿ ಎಂದು ಆಶಿಸಿದರು.



Ad Widget

ಉದ್ಘಾಟನಾ ಸಮಾರಂಭದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸುಮಾರು 14 ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚಿತ್ರಕಲೆ, ಕನ್ನಡ ಕವನ ರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಯುವಪತ್ರಕರ್ತ, ಯುವ ವಾಣಿಜ್ಯೋದ್ಯಮಿ, ಮುಖವರ್ಣಿಕೆ, ವೀಡಿಯೋ ಸಂಕಲನ , ಚರ್ಚಾ ಸ್ಪರ್ಧೆ, ತಾಳವಾದ್ಯ , ಕಲರವ – ಸಾಂಸ್ಕೃತಿಕ ವೈವಿಧ್ಯ , ನಿಧಿಶೋಧ, ಭಗವದ್ಗೀತಾ ಕಂಠಪಾಠ ಮುಂತಾದ ಸ್ಪರ್ಧೆಗಳನ್ನು ನಡೆಸಲಾಯಿತು.

Ad Widget

Ad Widget

ಕಾರ್ಯಕ್ರಮದ ವೇದಿಕೆಯಲ್ಲಿ ಕನಸುಗಳು ಕಾರ್ಯಕ್ರಮದ ಸಂಯೋಜಕಿ ದೀಕ್ಷಿತಾ ಬಿ. ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿಯರಾದ ಮೊನೀಷಾ ವಂದಿಸಿ, ಮಮತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಸಮಾರೋಪ-3ನೇ ದಿನ; ಶಿಕ್ಷಣದೊಂದಿಗೆ ಸಂಸ್ಕಾರವೂ ವಿದ್ಯಾರ್ಥಿಗಳ ಬದುಕಿಗೆ ಅಗತ್ಯ – ಸೂರಜ್ ಕುಮಾರ್

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ನಡೆದ ಷಷ್ಟ್ಯಬ್ದ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ವಕ್ತಾರರಾಗಿ ಭಾಗವಹಿಸಿ ಚಾರ ಪ್ರಮುಖ್ ರಾಷ್ಟ್ರಿಯ ಸ್ವಯಂ ಸೇವಕ ಸಂಘ, ಮಂಗಳೂರು ವಿಭಾಗ ಹಾಗೂ ಉದ್ಯಮಿಗಳಾಗಿರುವ ಸೂರಜ್ ಕುಮಾರ್ ಮಾತನಾಡಿದರು.

Ad Widget

Ad Widget

Ad Widget

Ad Widget

“ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗದೆ, ಜ್ಞಾನ, ಶಿಸ್ತು, ಮಾನವೀಯ ಮೌಲ್ಯಗಳು ಹಾಗೂ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ನಿಜವಾದ ಉದ್ದೇಶ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ದೈಹಿಕ ಸಾಮರ್ಥ್ಯ, ಸೃಜನಶೀಲತೆ ಮತ್ತು ಜೀವನ ಕೌಶಲಗಳನ್ನು ವೃದ್ಧಿಸುವುದಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವಿಭಿನ್ನ ಪ್ರತಿಭೆಗಳು ಅಡಗಿರುತ್ತವೆ. ಸಂಗೀತ, ಕ್ರೀಡೆ, ಕಲೆ ಹಾಗೂ ಇತರ ಕ್ಷೇತ್ರಗಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶ್ರಮ, ಜವಾಬ್ದಾರಿ ಮತ್ತು ದೇಶಪ್ರೇಮದ ಮನೋಭಾವವನ್ನು ಬೆಳೆಸಬೇಕು,ಶಿಕ್ಷಣದೊಂದಿಗೆ ಸಂಸ್ಕಾರವೂ ವಿದ್ಯಾರ್ಥಿಗಳ ಬದುಕಿಗೆ ಅಗತ್ಯ ಎಂದರು. ಭಾರತದ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ, ವೈಜ್ಞಾನಿಕ ಚಿಂತನೆ, ಕೌಶಲಾಭಿವೃದ್ಧಿ ಮತ್ತು ಯುವಶಕ್ತಿಯ ಸದ್ಬಳಕೆ ಅತ್ಯಗತ್ಯವಾಗಿದೆ. ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವ ಇತರ ರಾಷ್ಟ್ರಗಳಿಂದ ಪ್ರೇರಣೆ ಪಡೆದು, ನಮ್ಮ ದೇಶದ ಪ್ರಗತಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು” ಎಂದು ಪ್ರಚಾರ ಪ್ರಮುಖ್ ರಾಷ್ಟ್ರಿಯ ಸ್ವಯಂ ಸೇವಕ ಸಂಘ, ಮಂಗಳೂರು ವಿಭಾಗ ಹಾಗೂ ಉದ್ಯಮಿಗಳಾಗಿರುವ ಸೂರಜ್ ಕುಮಾರ್ ಕರೆ ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ನಡೆದ ಷಷ್ಟ್ಯಬ್ದ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ವಕ್ತಾರರಾಗಿ ಭಾಗವಹಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹ್ಯಾಂಡ್ ಆಂಡ್ ಮೈಕ್ರೋವಾಸ್ಕ್ಯುಲರ್ ಸರ್ಜನ್, ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು, ಮಂಗಳೂರು ಮತ್ತು ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಪುತ್ತೂರು ಇಲ್ಲಿನ ಹಿರಿಯ ವಿದ್ಯಾರ್ಥಿಯಾದ ಡಾ.ಶ್ರುತಿಕಾಂತ್ ಎಸ್ ಮಾತನಾಡುತ್ತಾ, “ಪಿಯು ಹಂತದಲ್ಲಿರುವಾಗಲೇ ಭವಿಷ್ಯದ ಸಂಪೂರ್ಣ ಚಿತ್ರಣ ನಮ್ಮ ಮುಂದೆ ಇರುವುದಿಲ್ಲ. ಆದರೆ ಈ ಕ್ಷಣದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದು ಅತ್ಯಗತ್ಯ. ನಮ್ಮ ಶ್ರಮವನ್ನು ನೂರು ಪ್ರತಿಶತ ನೀಡಿದಾಗ ಯಶಸ್ಸಿನ ಸಾಧ್ಯತೆ ಹೆಚ್ಚುತ್ತದೆ. ಪ್ರತಿಭೆ ಆರಂಭದಲ್ಲಿ ನಮ್ಮನ್ನು ಗುರುತಿಸಬಹುದು. ಆದರೆ ನಮ್ಮನ್ನು ಮುಂದಕ್ಕೆ ಕೊಂಡೊಯ್ಯುವುದು ಸತತ ಪ್ರಯತ್ನ, ಛಲ, ಆಸಕ್ತಿ ಮತ್ತು ಆತ್ಮವಿಶ್ವಾಸ. ಸೋಲು ಎಲ್ಲರ ಜೀವನದಲ್ಲೂ ಬರುತ್ತದೆ. ಆದರೆ ಸೋಲು ನಮ್ಮ ಪ್ರಯತ್ನದ ಅಂತ್ಯವಲ್ಲ; ಅದೊಂದು ಘಟನೆಯಷ್ಟೇ. ನಮ್ಮ ತಪ್ಪುಗಳನ್ನು ಅರಿತು, ಅವುಗಳಿಂದ ಪಾಠ ಕಲಿತು ಮತ್ತೆ ಪ್ರಯತ್ನಿಸಿದಾಗ ಯಶಸ್ಸು ಖಂಡಿತವಾಗಿಯೂ ಸಾಧ್ಯ. ಶಿಸ್ತು, ಮಾನವೀಯ ಮೌಲ್ಯಗಳು ಮತ್ತು ನಿರಂತರ ಪರಿಶ್ರಮದೊಂದಿಗೆ ವಿದ್ಯಾಲಯವು ಇನ್ನಷ್ಟು ಎತ್ತರಕ್ಕೆ ಬೆಳೆದು ಯಶಸ್ಸಿನ ಶಿಖರವನ್ನು ತಲುಪಲಿ”ಎಂದು ನುಡಿದರು.



Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ , ಪುತ್ತೂರು ಇದರ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ ಕಡಬ ಮಾತನಾಡುತ್ತಾ, “ಹಿಂದೂ ಧಾರ್ಮಿಕ ನಂಬಿಕೆಗಳ ಮೇಲೆ ಅತಿಕ್ರಮಣವಾದಾಗ ನಮ್ಮ ಸಂಸ್ಕಾರಯುತ ಶಿಕ್ಷಣದ ಉಳಿಕೆಗೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ನಿರಂತರ ೬೦ ವರುಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಮೌಲ್ಯಾಧಾರಿತ ಶಿಕ್ಷಣ ಪಡಕೊಂಡ ವಿದ್ಯಾರ್ಥಿಗಳ ಮುಖೇನ ಸಮಾಜದಲ್ಲಿ ,ಸಂಸ್ಥೆಯು ಉತ್ತುಂಗಕ್ಕೇರಲು ಸಹಕಾರಿ” ಎಂದರು.

Ad Widget

Ad Widget

ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ವಾರ್ಷಿಕ ವರದಿಯನ್ನು ಮಂಡಿಸಿದರು.ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಿವಿಧ ದತ್ತಿನಿಧಿ ಬಹುಮಾನಗಳನ್ನು ವಿತರಣೆ ಮಾಡಲಾಯಿತು.

ಕಾಲೇಜಿನ ೬೦ನೇ ವರ್ಷಾಚರಣೆಯ ಸಮಾರೋಪ ಕಾರ್ಯಕ್ರಮದ ಪ್ರಯುಕ್ತ ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಶುಂಪಾಲರಾದ ಎ.ವಿ.ನಾರಾಯಣ್ ಷಷ್ಟ್ಯಬ್ದ ಹೆಗ್ಗುರುತಿನ ಲಾಂಛನಕ್ಕೆ ಗೌರವ ಸಮರ್ಪಿಸಿದರು. ಸಭಾ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಸುಬೋಧ್ ಶೆಟ್ಟಿ ಎಂ. ಉಪಸ್ಥಿತರಿದ್ದು ಶುಭ ಹಾರೈಸಿದರು. ವಿವೇಕಾನಂದ ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ ಹಾಗೂ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಉಪನ್ಯಾಸಕಿಯರಾದ ಕವಿತಾ ವಂದಿಸಿ, ಡಾ.ಶ್ರುತಿ ಎಂ.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!