ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು. ತಕ್ಷಣ ಕನ್ನಡ ಜಿಲ್ಲಾ 14 ಮತ್ತು 17ರ ವಯೋಮಿತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಶೇಷ ಚೇತನ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟವು ದಿನಾಂಕ 28ರಂದು ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು. ತಕ್ಷಣ ಕನ್ನಡ ಜಿಲ್ಲಾ 14 ಮತ್ತು 17ರ ವಯೋಮಿತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಶೇಷ ಚೇತನ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟವು ದಿನಾಂಕ 28ರಂದು ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.
ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಗೌಶಿಕ್ ರೈ (ಲೋಕೇಶ್ ರೈ ಮತ್ತು ಸುನಿತಾ ರೈ )ದಂಪತಿಗಳ ಪುತ್ರ ಉದ್ದ ಜಿಗಿತ ಪ್ರಥಮ ಹಾಗೂ 50 ಮೀಟರ್ ಪ್ರಥಮ ಸ್ಥಾನ ಪಡೆದಿರುತ್ತಾನೆ.
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶ್ರೇಯ ಬಿ .ಎ (ಭಾಸ್ಕರ ಆಚಾರ್ಯ ಮತ್ತು ಶ್ರೀಲತಾ) ದಂಪತಿಗಳ ಪುತ್ರಿ ಗುಂಡು ಎಸೆತ ಪ್ರಥಮ, 100 ಮೀಟರ್ ತೃತೀಯ ಸ್ಥಾನ ಪಡೆದು ಜನವರಿ ತಿಂಗಳಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯ ತಿಳಿಸಿರುತ್ತಾರೆ.
ಶಿಕ್ಷಣ
Vivekananda-ಅಂಚೆ ಇಲಾಖೆ ನಡೆಸಲ್ಪಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ
ಭಾರತೀಯ ಅಂಚೆ ಇಲಾಖೆ ಹಾಗೂ ಅಂಚೆ ಅಧೀಕ್ಷಕರ ಕಚೇರಿ, ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ ಜಾಗೃತಿ ಸಪ್ತಾಹದ ಅಂಗವಾಗಿ “ಪ್ರಾಮಾಣಿಕತೆಯಿಂದ ಸಮೃದ್ಧಿ” ಎಂಬ ವಿಷಯದ ಕುರಿತು ನಡೆಸಲ್ಪಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಇವರಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಕುಮಾರಿ ದೀಪ್ತಿ ಕುಬಣುರಾಯ (ಸುಧಾಕರ ಕುಬಣುರಾಯ ಮತ್ತು ಸವಿತಾ ಸಾವಿತ್ರಿ ದಂಪತಿಗಳ ಪುತ್ರಿ ) ಇವರು ದ್ವಿತೀಯ ಬಹುಮಾನ ಹಾಗೂ ಕುಮಾರಿ ವೈಷ್ಣಿ ರೈ (ಜಗನ್ನಾಥ ಎಂ ಮತ್ತು ಸೀಮಾ ಜೆ ರೈ ದಂಪತಿಗಳ ಪುತ್ರಿ ) ಇವರು ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾರೆ.
ಶಿಕ್ಷಣ
Narendra-ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ “ ವ್ಯವಹಾರ “ ಕ್ಲಬ್ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಮಾರುಕಟ್ಟೆಯು ವಿವಿಧ ರೀತಿಯ ಉತ್ಪನ್ನಗಳು ಮತ್ತು ವ್ಯವಹಾರ ಕಲ್ಪನೆಗಳಿಂದ ತುಂಬಿರುವಾಗ, ಹೊಸತನವನ್ನು ಮಾಡಲು ಮತ್ತು ವಿಶಿಷ್ಟವಾದ ಮತ್ತು ಉತ್ತಮವಾದದ್ದನ್ನು ಮಾಡಲು ಯಾವಾಗಲೂ ಅವಕಾಶವಿರುತ್ತದೆ. ವ್ಯವಹಾರದ ಯಶಸ್ಸು ಯೋಜನೆ ಮತ್ತು ಕಠಿಣ ಪರಿಶ್ರಮವನ್ನು ಅವಲಂಬಿಸಿರುತ್ತದೆ. ಅದ್ಭುತವಾದ ವ್ಯವಹಾರ ಕಲ್ಪನೆಯನ್ನು ಹೊಂದಿರುವುದು ಒಂದು ವಿಷಯ, ಆದರೆ ವ್ಯವಹಾರದ ಯಶಸ್ಸು ಕಲ್ಪನೆಯ ಕಾರ್ಯಗತಗೊಳಿಸುವಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಎಂದು ಪುತ್ತೂರಿನ ಉದ್ಯಮಿಗಳಾದ ಮತ್ತು ಮರಿಕೆ ಹೋಂ ಇಂಡಸ್ಟ್ರಿ ಇದರ ಮಾಲಕರಾದ ಸುಹಾಸ್ ಮರಿಕೆ ಇವರು ಹೇಳಿದರು.
ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕರ್ಯಕ್ರಮ “ ವ್ಯವಹಾರ “ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವ್ಯವಹಾರದ ಯಶಸ್ಸಿಗಾಗಿ ಮುಖ್ಯವಾದ ಅದರ ಸ್ವರೂಪದ ಬಗ್ಗೆ ವಿವರಿಸುತ್ತಾ, ಅವರು ಮಾತನಾಡಿದರು.
ವ್ಯವಹಾರದ ಯಶಸ್ಸಿಗೆ ಉತ್ತಮ ಯೋಜನೆ ಅಥವಾ ಕಾರ್ಯತಂತ್ರವನ್ನು ರೂಪಿಸುವುದು ಅತ್ಯಗತ್ಯ. ವ್ಯವಹಾರದ ಗುರಿಗಳು ಮತ್ತು ಉದ್ದೇಶಗಳು ಮತ್ತು ಅವುಗಳನ್ನು ಸಾಧಿಸುವ ಮಾರ್ಗಗಳನ್ನು ವಿವರಿಸುವ ಸಮಗ್ರ ವ್ಯಾಪಾರ ಯೋಜನೆಯ ಬಗ್ಗೆ ತಿಳಿಸಿದರು.ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿ ಕೆಲವು ಸಲಹೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮತ್ತು ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸಾನ್ವಿ ಸ್ವಾಗತಿಸಿ ವಂದಿಸಿದರು.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿಕನ್ನಡ ರಾಜ್ಯೋತ್ಸವ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಮಾತನಾಡಿ ಕನ್ನಡ ಭಾಷೆಯು ನಮ್ಮ ನಾಡಿನ ಹೆಮ್ಮೆ ಮತ್ತು ಅಸ್ಮಿತೆಯ ಪ್ರತೀಕವಾಗಿದ್ದು, ಅದರ ಉಳಿವು ಮತ್ತು ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಪಾತ್ರವು ಮಹತ್ವದ್ದಾಗಿದೆ ಎಂದು ಹೇಳಿ, ಕನ್ನಡ ಭಾಷೆಯನ್ನು ಕೇವಲ ಸಂವಹನದ ಮಾಧ್ಯಮವಾಗಿ ಮಾತ್ರವಲ್ಲದೆ, ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬವಾಗಿ ಕಾಣಬೇಕು. ವಿದ್ಯಾರ್ಥಿಗಳು ಮಾತೃಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಕನ್ನಡ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ವತಿಯಿಂದ ನಡೆಸಲ್ಪಟ್ಟ ಬಾಲಸಾಹಿತಿಗಳ ಸಮಾವೇಶದಲ್ಲಿ ಭಾಗವಹಿಸಿದ ಸಂಸ್ಥೆಯ ಬಾಲ ಸಾಹಿತಿಗಳು ಸ್ವರಚಿತ ಕವನ, ಪ್ರವಾಸ ಕಥನ ಹಾಗೂ ನನ್ನ ಆಪ್ತಮಿತ್ರೆ ಲೇಖನಗಳನ್ನು ವಾಚಿಸಿದರು.
ಕಾರ್ಯಕ್ರಮದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಅನರ್ಘ್ಯಶ್ರೀ ಹೆಚ್ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.10ನೇ ತರಗತಿಯ ಅದಿತಿ ಎನ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕಿಯರಾದ ಪ್ರಿಯಾಶ್ರೀ ಕೆ ಎಸ್ ಮತ್ತು ದಿವ್ಯಾರವರು ಕಾರ್ಯಕ್ರಮವನ್ನು ನಿರ್ವಹಿಸಿದರು.


















