Connect with us

ಶಿಕ್ಷಣ

Philomena-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ,ವಿದುಷಿ ವಿಂದ್ಯಾಶ್ರೀ ರೈ ಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ

Published

on



Ad Widget

Ad Widget

Ad Widget

Ad Widget

ವಿದುಷಿ ವಿಂದ್ಯಾಶ್ರೀ ರೈ ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಮಾಡುತ್ತಿದ್ದು ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡುವುದರ ಜೊತೆಗೆ ನೃತ್ಯ ನಿರ್ದೇಶನ ಹಾಗೂ ತರಬೇತಿ ನೀಡುವ ಮೂಲಕ ಕಲಾಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿರುತ್ತಾರೆ. ಇವರ ಸುಧೀರ್ಘ ಪರಿಶ್ರಮವನ್ನು ಪರಿಗಣಿಸಿ ಇವರಿಗೆ 2026–27ನೇ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.‌

Ad Widget

Ad Widget

Ad Widget

ವಿದುಷಿ ವಿಂದ್ಯಾಶ್ರೀ ರೈ ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಮಾಡುತ್ತಿದ್ದು ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡುವುದರ ಜೊತೆಗೆ ನೃತ್ಯ ನಿರ್ದೇಶನ ಹಾಗೂ ತರಬೇತಿ ನೀಡುವ ಮೂಲಕ ಕಲಾಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇದರೊಂದಿಗೆ ಅಭಿನಯರಂಗ, ಸಂಗೀತ, ನಿರೂಪಣಾ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದು, ಹಲವು ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದಾರೆ.

Ad Widget

Ad Widget <> Ad Widget

ಇವರ ಸುಧೀರ್ಘ ಪರಿಶ್ರಮವನ್ನು ಪರಿಗಣಿಸಿ ಇವರಿಗೆ 2026–27ನೇ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು .‌



Ad Widget

ವಿಂದ್ಯಾಶ್ರೀ ರೈ ಅವರಿಗ ಕಾಲೇಜಿನ ಸಂಚಾಲಕರಾದ ಡಾ.ಜಾನ್ ಬಿ ಸಲ್ದಾನ್ಹ , ಪ್ರಾಚಾರ್ಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಹಾಗೂ ಗುರು ವೃಂದ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Click to comment

Leave a Reply

ಶಿಕ್ಷಣ

Vivekananda-ಅಂಚೆ ಇಲಾಖೆ ನಡೆಸಲ್ಪಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Published

on



Ad Widget

Ad Widget

Ad Widget

Ad Widget

ಭಾರತೀಯ ಅಂಚೆ ಇಲಾಖೆ ಹಾಗೂ  ಅಂಚೆ ಅಧೀಕ್ಷಕರ ಕಚೇರಿ, ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ ಜಾಗೃತಿ ಸಪ್ತಾಹದ ಅಂಗವಾಗಿ “ಪ್ರಾಮಾಣಿಕತೆಯಿಂದ ಸಮೃದ್ಧಿ” ಎಂಬ ವಿಷಯದ ಕುರಿತು ನಡೆಸಲ್ಪಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Ad Widget

Ad Widget

Ad Widget

ಇವರಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಕುಮಾರಿ ದೀಪ್ತಿ ಕುಬಣುರಾಯ (ಸುಧಾಕರ ಕುಬಣುರಾಯ ಮತ್ತು ಸವಿತಾ ಸಾವಿತ್ರಿ ದಂಪತಿಗಳ ಪುತ್ರಿ ) ಇವರು ದ್ವಿತೀಯ ಬಹುಮಾನ ಹಾಗೂ ಕುಮಾರಿ ವೈಷ್ಣಿ ರೈ (ಜಗನ್ನಾಥ ಎಂ ಮತ್ತು ಸೀಮಾ ಜೆ ರೈ ದಂಪತಿಗಳ ಪುತ್ರಿ ) ಇವರು ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget
Ad Widget
Continue Reading

ಶಿಕ್ಷಣ

Narendra-ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ “ ವ್ಯವಹಾರ “ ಕ್ಲಬ್ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಮಾರುಕಟ್ಟೆಯು ವಿವಿಧ ರೀತಿಯ ಉತ್ಪನ್ನಗಳು ಮತ್ತು ವ್ಯವಹಾರ ಕಲ್ಪನೆಗಳಿಂದ ತುಂಬಿರುವಾಗ, ಹೊಸತನವನ್ನು ಮಾಡಲು ಮತ್ತು ವಿಶಿಷ್ಟವಾದ ಮತ್ತು ಉತ್ತಮವಾದದ್ದನ್ನು ಮಾಡಲು ಯಾವಾಗಲೂ ಅವಕಾಶವಿರುತ್ತದೆ. ವ್ಯವಹಾರದ ಯಶಸ್ಸು ಯೋಜನೆ ಮತ್ತು ಕಠಿಣ ಪರಿಶ್ರಮವನ್ನು ಅವಲಂಬಿಸಿರುತ್ತದೆ. ಅದ್ಭುತವಾದ ವ್ಯವಹಾರ ಕಲ್ಪನೆಯನ್ನು ಹೊಂದಿರುವುದು ಒಂದು ವಿಷಯ, ಆದರೆ ವ್ಯವಹಾರದ ಯಶಸ್ಸು ಕಲ್ಪನೆಯ ಕಾರ್ಯಗತಗೊಳಿಸುವಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಎಂದು ಪುತ್ತೂರಿನ ಉದ್ಯಮಿಗಳಾದ ಮತ್ತು ಮರಿಕೆ ಹೋಂ ಇಂಡಸ್ಟ್ರಿ ಇದರ ಮಾಲಕರಾದ ಸುಹಾಸ್ ಮರಿಕೆ ಇವರು ಹೇಳಿದರು.

Ad Widget

Ad Widget

Ad Widget

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕರ‍್ಯಕ್ರಮ “ ವ್ಯವಹಾರ “ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವ್ಯವಹಾರದ ಯಶಸ್ಸಿಗಾಗಿ ಮುಖ್ಯವಾದ ಅದರ ಸ್ವರೂಪದ ಬಗ್ಗೆ ವಿವರಿಸುತ್ತಾ, ಅವರು ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ವ್ಯವಹಾರದ ಯಶಸ್ಸಿಗೆ ಉತ್ತಮ ಯೋಜನೆ ಅಥವಾ ಕಾರ್ಯತಂತ್ರವನ್ನು ರೂಪಿಸುವುದು ಅತ್ಯಗತ್ಯ. ವ್ಯವಹಾರದ ಗುರಿಗಳು ಮತ್ತು ಉದ್ದೇಶಗಳು ಮತ್ತು ಅವುಗಳನ್ನು ಸಾಧಿಸುವ ಮಾರ್ಗಗಳನ್ನು ವಿವರಿಸುವ ಸಮಗ್ರ ವ್ಯಾಪಾರ ಯೋಜನೆಯ ಬಗ್ಗೆ ತಿಳಿಸಿದರು.ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿ ಕೆಲವು ಸಲಹೆಗಳನ್ನು ನೀಡಿದರು.

Ad Widget

Ad Widget <> Ad Widget

ಕಾರ‍್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮತ್ತು ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ‍್ಯಕ್ರಮದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸಾನ್ವಿ ಸ್ವಾಗತಿಸಿ ವಂದಿಸಿದರು.



Ad Widget
Ad Widget
Continue Reading

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ‌ಕನ್ನಡ ರಾಜ್ಯೋತ್ಸವ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಮಾತನಾಡಿ ಕನ್ನಡ ಭಾಷೆಯು ನಮ್ಮ ನಾಡಿನ ಹೆಮ್ಮೆ ಮತ್ತು ಅಸ್ಮಿತೆಯ ಪ್ರತೀಕವಾಗಿದ್ದು, ಅದರ ಉಳಿವು ಮತ್ತು ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಪಾತ್ರವು ಮಹತ್ವದ್ದಾಗಿದೆ ಎಂದು ಹೇಳಿ, ಕನ್ನಡ ಭಾಷೆಯನ್ನು ಕೇವಲ ಸಂವಹನದ ಮಾಧ್ಯಮವಾಗಿ ಮಾತ್ರವಲ್ಲದೆ, ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬವಾಗಿ ಕಾಣಬೇಕು. ವಿದ್ಯಾರ್ಥಿಗಳು ಮಾತೃಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಕನ್ನಡ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ,  ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ವತಿಯಿಂದ ನಡೆಸಲ್ಪಟ್ಟ ಬಾಲಸಾಹಿತಿಗಳ ಸಮಾವೇಶದಲ್ಲಿ ಭಾಗವಹಿಸಿದ  ಸಂಸ್ಥೆಯ ಬಾಲ ಸಾಹಿತಿಗಳು ಸ್ವರಚಿತ ಕವನ, ಪ್ರವಾಸ ಕಥನ ಹಾಗೂ ನನ್ನ ಆಪ್ತಮಿತ್ರೆ ಲೇಖನಗಳನ್ನು ವಾಚಿಸಿದರು.



Ad Widget

ಕಾರ್ಯಕ್ರಮದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ  ಅನರ್ಘ್ಯಶ್ರೀ ಹೆಚ್ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.10ನೇ ತರಗತಿಯ ಅದಿತಿ ಎನ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕಿಯರಾದ ಪ್ರಿಯಾಶ್ರೀ ಕೆ ಎಸ್ ಮತ್ತು ದಿವ್ಯಾರವರು  ಕಾರ್ಯಕ್ರಮವನ್ನು ನಿರ್ವಹಿಸಿದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!