ನಿಧನ ವಾರ್ತೆ
Chikkamaglore-ಬಕೆಟ್ನಲ್ಲಿದ್ದ ಹೀಟರ್ನಿಂದ ವಿದ್ಯುತ್ ಪ್ರವಹಿಸಿ 8 ವರ್ಷದ ಬಾಲಕ ಸಾವು
ಸ್ನಾನ ಮಾಡಲು ಬಾತ್ರೂಮ್ಗೆ ತೆರಳಿದ್ದ 8 ವರ್ಷದ ಬಾಲಕನೊಬ್ಬ ವಿದ್ಯುತ್ ಶಾಕ್ಗೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಖರಾಯಪಟ್ಟಣದ ನೀಲಾಂಶ್ (8) ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರು: ಸ್ನಾನ ಮಾಡಲು ಬಾತ್ರೂಮ್ಗೆ ತೆರಳಿದ್ದ 8 ವರ್ಷದ ಬಾಲಕನೊಬ್ಬ ವಿದ್ಯುತ್ ಶಾಕ್ಗೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.
ಮೃತ ಬಾಲಕನನ್ನು ಸಖರಾಯಪಟ್ಟಣದ ನೀಲಾಂಶ್ (8) ಎಂದು ಗುರುತಿಸಲಾಗಿದೆ. ಈತ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.
ರವಿವಾರ ಶಾಲೆಗೆ ರಜೆ ಇದ್ದ ಕಾರಣ ನೀಲಾಂಶ್ ಮನೆಯಲ್ಲೇ ಇದ್ದನು. ಸ್ನಾನ ಮಾಡಲು ಬಾತ್ರೂಮ್ಗೆ ತೆರಳಿದ ವೇಳೆ ನೀರು ಕಾಯಿಸಲು ಬಕೆಟ್ನಲ್ಲಿ ವಿದ್ಯುತ್ ವಾಟರ್ ಹೀಟರ್ ಅಳವಡಿಸಲಾಗಿತ್ತು. ಹೀಟರ್ನಿಂದ ಬಿಸಿಯಾಗುತ್ತಿದ್ದ ನೀರಿಗೆ ಕೈ ಹಾಕಿದಾಗ ಬಾಲಕನಿಗೆ ವಿದ್ಯುತ್ ಪ್ರವಹಿಸಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದಾನೆ.
ಕೂಡಲೇ ಬಾಲಕನನ್ನು ರಕ್ಷಿಸಲು ಪ್ರಯತ್ನಿಸಿದರೂ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ಯುವಕರ ದಾರುಣ ಸಾವು
ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24) ಎಂದು ಗುರುತಿಸಲಾಗಿದೆ.
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24) ಎಂದು ಗುರುತಿಸಲಾಗಿದೆ. ಅನುರಾಗ್ ನೀಲೇಶ್ವರದ ವಸಂತ ಹೋಟೆಲ್ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಇಬ್ಬರೂ ನೀಲೇಶ್ವರದಿಂದ ಕಾಞಂಗಾಡ್ನ ತಿರುವತ್ತೆ ಅರಯಿಲ್ ಭಗವತಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ತೆಯ್ಯಂ ವೀಕ್ಷಿಸಲು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರಾತ್ರಿ ಸುಮಾರು 9 ಗಂಟೆಗೆ ಪಡನ್ನಕ್ಕಾಡ್ನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ನಿಧನ ವಾರ್ತೆ
Baikampadi-ಬೈಕಂಪಾಡಿಯಲ್ಲಿ ಭೀಕರ ಅಪಘಾತ; ಲಾರಿಗೆ ಸ್ಕೂಟರ್ ಢಿಕ್ಕಿ, ಸವಾರ ಸಾವು..!
ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಹಳೆಯಂಗಡಿ ಕದಿಕೆ ನಿವಾಸಿ ಇಮ್ತಿಯಾಝ್ (39) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ.
ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಹಳೆಯಂಗಡಿ ಕದಿಕೆ ನಿವಾಸಿ ಇಮ್ತಿಯಾಝ್ (39) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ.
ಸ್ಥಳೀಯ ಮೂಲಗಳ ಪ್ರಕಾರ, ಇಮ್ತಿಯಾಝ್ ಅವರು ಖಾಸಗಿ ಶಿಪ್ಪಿಂಗ್ ಕಂಪನಿಯೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಪಣಂಬೂರಿನಲ್ಲಿರುವ ತಮ್ಮ ಕಂಪನಿಯ ಲಾರಿ ಕಚೇರಿಗೆ ಕೆಲಸದ ನಿಮಿತ್ತ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿ ಹಾಗೂ ಇಮ್ತಿಯಾಝ್ ಅವರ ಸ್ಕೂಟರ್ ನಡುವೆ ತೀವ್ರ ಸ್ವರೂಪದ ಡಿಕ್ಕಿ ಸಂಭವಿಸಿದ್ದು, ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆ ನಡೆದ ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಇಮ್ತಿಯಾಝ್ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಗಾಯಗಳ ತೀವ್ರತೆಯಿಂದಾಗಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ (ಸುರತ್ಕಲ್) ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅಪಘಾತಕ್ಕೆ ಕಾರಣವಾದ ಲಾರಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Udupi-ಉಡುಪಿ: ಜಿಲ್ಲಾಸ್ಪತ್ರೆ ಶೌಚಾಲಯದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತ ಆತ್ಮಹತ್ಯೆಗೆ ಶರಣು..!; ಪ್ರೇಮ ಪ್ರಕರಣದಲ್ಲಿ ಜೈಲು ಪಾಲಾಗಿ ಬಿಡುಗಡೆಗೊಂಡ ಯುವಕನ ಮೇಲೆ ಯುವತಿಯ ಮನೆಯವರಿಂದ ಹಲ್ಲೆ ಆರೋಪ..!
ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಉಡುಪಿ: ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹಿಂದೂ ಜಾಗರಣ ವೇದಿಕೆಯ ನಾಯರ್ಕೊಡಿ ಘಟಕದ ಕಾರ್ಯಕರ್ತ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರದೀಪ್ ಪೂಜಾರಿ ಕಳೆದ ಏಳು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇತ್ತೀಚೆಗೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ 2025ರಲ್ಲಿ ಯುವತಿಯನ್ನು ಅಡ್ಡಗಟ್ಟಿ ಗಲಾಟೆ ನಡೆಸಿದ ಆರೋಪದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪ್ರದೀಪ್ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.
ಅ. 27ರಂದು ಮತ್ತೆ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಯುವತಿಯ ಮನೆಯವರು ಪ್ರದೀಪ್ ಮೇಲೆ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರದೀಪ್ ಪೂಜಾರಿ ಕೂಡ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಎನ್ನಲಾಗಿದೆ.
ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಪ್ರದೀಪ್ಗೆ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
-
ಸ್ಥಳೀಯ8 hours agoKukke Subrahmanya-ಕುಕ್ಕೆ ಸುಬ್ರಹ್ಮಣ್ಯ: ನದಿಗೆ ಹಾರಿದ ಮಹಿಳೆಗೆ ಮೊಸಳೆ ಕಚ್ಚಿ ಸಿಕ್ಕಿತು ಜೀವದಾನ..! ಸಾಯಲು ಹೋದವಳು ಬದುಕಿ ಬಂದ ವಿಚಿತ್ರ ಘಟನೆ..!
-
ರಾಜಕೀಯ14 hours agoGrihalakshmi-ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಫ್ಟ್: ಒಂದೇ ಬಾರಿಗೆ 3 ಕಂತಿನ ಹಣ ಬಿಡುಗಡೆ..!
-
ಸ್ಥಳೀಯ14 hours agoKadaba-ಕಡಬ: ಆಟೋ ಬಾಡಿಗೆ ಹಣ ಕೇಳಿದ್ದಕ್ಕೆ ಚಾಲಕನ ಮೇಲೆ ಹಲ್ಲೆ
-
ರಾಜಕೀಯ14 hours agoAbdul Al-Sayeed-ಅಮೆರಿಕದ ಸೆನೆಟ್ಗೆ ಭಟ್ಕಳದ ಅಳಿಯ ಅಬ್ದುಲ್ ಅಲ್ ಸಯೀದ್ ಆಯ್ಕೆ..!
-
ಬಿಗ್ ನ್ಯೂಸ್14 hours agoGhee and butter price-ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ..! ತುಪ್ಪ, ಬೆಣ್ಣೆ ದರವೂ ಏರಿಕೆ
-
ಸ್ಥಳೀಯ8 hours agoFertilizer-ಸದ್ದಿಲ್ಲದೆ ರಸಗೊಬ್ಬರ ಧಾರಣೆ ಏರಿಕೆ – ಸ್ಟಾಕ್ ಖಾಲಿ : ಕೃಷಿಕರಿಗೆ ಶಾಕ್
-
ಶಿಕ್ಷಣ13 hours agoತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಕನಸುಗಳು 2026 ಕಾರ್ಯಕ್ರಮದಲ್ಲಿ ಹಲವಾರು ಪ್ರಶಸ್ತಿಗಳು
-
ಶಿಕ್ಷಣ13 hours agoVivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿನ ವಿದ್ಯಾರ್ಥಿನಿ ರಾಷ್ಟ್ರಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಗೆ ಆಯ್ಕೆ




















