ಬಿಗ್ ನ್ಯೂಸ್
ಭಾರತ – ವೆಸ್ಟ್ ಇಂಡೀಸ್ ಮೂರನೇ ಟಿ – 20 | ಸೂರ್ಯಕುಮಾರ್ ಸ್ಪೋಟಕ ಆಟ – ಭಾರತಕ್ಕೆ 7 ವಿಕೆಟ್ ಜಯ

ಬಾಸ್ಸೆಟೆರೆ: ಮಂಗಳವಾರ ಬಾಸ್ಸೆಟೆರೆಯಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆರಂಭಿಕ ಆಟಗಾರ ಸೂರ್ಯ ಕುಮಾರ್ ಯಾದವ್ ಅವರ ಸ್ಪೋಟಕ ಆಟದ ನೆರವಿನಿಂದಾಗಿ ಭಾರತ 7 ವಿಕೆಟ್‌ಗಳಿಂದ ಭರ್ಜರಿ ಜಯಬೇರಿ ಬಾರಿಸಿದೆ. ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಒಂದು ಒವರ್ ಬಾಕಿಯಿರುವಾಗಲೇ ಭಸರತ ಅಧಿಕಾರಯುತವಾಗಿ ಗೆಲುವು ಸಂಪಾದಿಸಿತ್ತು.
ಮೊದಲು ಬ್ಯಾಟ್ ಮಾಡಿದ್ದ ವೆಸ್ಟ್ ಇಂಡೀಸ್, ಭಾರತ ತಂಡಕ್ಕೆ 165 ರನ್ ಗಳ ಗುರಿ ನೀಡಿತ್ತು. ಇದನ್ನು ಹಿಂಬಾಲಿಸಿದ ಭಾರತ 19 ಓವರ್‌ಗಳಿಗೆ 3 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿ ಗೆಲುವು ಪಡೆಯಿತು.
ಸೂರ್ಯಕುಮಾರ್ ಯಾದವ್ (76 ರನ್, 44 ಎಸೆತಗಳು) ಅವರ ಸ್ಪೋಟಕ ಬ್ಯಾಟಿಂಗ್ ಭಾರತದ ಇನ್ನಿಂಗ್ಸ್ ನ ಪ್ರಮುಖ ಅಕರ್ಷಣೆಯಾಗಿತ್ತು. ವಿಕೆಟ್‌ಕೀಪರ್ ರಿಷಬ್ ಪಂತ್ ಅಜೇಯ 33 ರನ್ ಗಳಿಸಿದರು. ಆರಂಭಿಕ ಹಾಗೂ ನಾಯಕ ರೋಹಿತ್ ಶರ್ಮಾ 11 ರನ್ ಗಳಿಸಿ ಔಟಾದರು. ಶ್ರೇಯಸ್ ಅಯ್ಯರ್ 24, ಹಾರ್ದಿಕ್ ಪಾಂಡ್ಯ 4, ದೀಪಕ್ ಹೂಡಾ 10 ರನ್ ಗಳಿಸಿದರು
.
ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಸೂರ್ಯಕುಮಾರ್ ಯಾದವ್, ಇಂದಿನ(ಮಂಗಳವಾರ) ಪಂದ್ಯದಲ್ಲಿ ವಿಂಡೀಸ್ ಬೌಲರ್‌ಗಳಿಗೆ ಚಳಿ ಜ್ವರ ಬಿಡಿಸಿದರು. ಓಪನರ್ ಆಗಿ ಮೊದಲ ಅರ್ಧಶತಕ ದಾಖಲಿಸಿದ ಸೂರ್ಯ 146ರ ಸ್ಟ್ರೈಕ್‌ರೇಟ್‌ನಲ್ಲಿ 50 ಎಸೆತಗಳಲ್ಲಿ 73ರನ್ ಸಿಡಿಸಿದರು. ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಸೂರ್ಯ ಇನ್ನಿಂಗ್ಸ್‌ನಲ್ಲಿ ಎಂಟು ಬೌಂಡರಿ ಮತ್ತು ನಾಲ್ಕು ಅಮೋಘ ಸಿಕ್ಸರ್ ಒಳಗೊಂಡಿದ್ದವು.
ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅವರಿಗೆ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.
ಇನಿಂಗ್ಸ್ ಆರಂಭಿಸಿದ್ದ ರೋಹಿತ್ ಶರ್ಮಾ ಒಂದು ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ 11 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದರು. ಆದರೆ, ರಿಟೈರ್ಡ್ ಹರ್ಟ್ ಆಗಿ ಹೊರ ನಡೆದರು. ನಂತರ ಶ್ರೇಯಸ್ ಅಯ್ಯರ್(24) ಅಲ್ಪ ಕಾಣಿಕೆ ಕೊಟ್ಟು ಔಟ್ ಆಗಿದ್ದರು. ಆದರೆ, ಸೂರ್ಯ ವಿಕೆಟ್ ಒಪ್ಪಿಸಿದ ಬಳಿಕ ರಿಷಭ್ ಪಂತ್ ಜವಾಬ್ದಾರಿಯುತ ಬ್ಯಾಟ್ ಮಾಡುವ ಮೂಲಕ ಇನ್ನೂ ಒಂದು ಓವರ್ ಇರುವಾಗಲೇ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.
ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ವೆಸ್ಟ್ ಇಂಡೀಸ್ ತಂಡ, ಕೈಲ್ ಮೇಯರ್ಸ್ (73) ಅವರ ಅರ್ಧಶತಕದ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ ಹಾಗೂ ಭಾರತಕ್ಕೆ 165 ರನ್ ಗುರಿ ನೀಡಿತ್ತು.
ವಿಂಡೀಸ್‌ನ ಅಗ್ರ ಐವರೂ ಬ್ಯಾಟ್ಸ್‌ಮನ್‌ಗಳು ವೈಯಕ್ತಿಕ 20ಕ್ಕೂ ಹೆಚ್ಚಿನ ರನ್‌ಗಳನ್ನು ಗಳಿಸಿದರು. ಅದರಲ್ಲೂ ಕೈಲ್ ಮೇಯರ್ಸ್ 50 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 8 ಬೌಂಡರಿಯೊಂದಿಗೆ 73 ರನ್ ಸಿಡಿಸಿದ್ದರು. ಆ ಮೂಲಕ ವೆಸ್ಟ್ ಇಂಡೀಸ್ ತಂಡ 160ಕ್ಕೂ ಹೆಚ್ಚಿನ ರನ್ ಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.
ಇನ್ನುಳಿದಂತೆ ಬ್ರ್ಯಾಂಡನ್ ಕಿಂಗ್ (20), ನಿಕೋಲಸ್ ಪೂರನ್(22), ರೊವ್ಮನ್ ಪೂವೆಲ್ (23), ಶಿಮ್ರಾನ್ ಹೆಟ್ಮಾಯೆರ್ (20) ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ಭಾರತದ ಪರ ಭುವನೇಶ್ವರ್ ಕುಮಾರ್ ಎರಡು ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೂರ್
ವೆಸ್ಟ್ ಇಂಡೀಸ್:
20 ಓವರ್‌ಗಳಿಗೆ 164/5 (ಕೈಲ್ ಮೇಯರ್ಸ್ 73, ರೋವ್ಮನ್ ಪೊವೆಲ್ 23;ಭುವನೇಶ್ವರ್ ಕುಮಾರ್ 35 ಕ್ಕೆ 2, ಹಾರ್ದಿಕ್ ಪಾಂಡ್ಯ 19ಕ್ಕೆ 1, ಅರ್ಷದೀಪ್ ಸಿಂಗ್ 33ಕ್ಕೆ 1)
ಭಾರತ:
19 ಓವರ್‌ಗಳಿಗೆ 165ಕ್ಕೆ 3 (ಸೂರ್ಯಕುಮಾರ್ ಯಾದವ್ 76, ರಿಷಭ್‌ಪಂತ್ 33*, ಶ್ರೇಯಸ್ ಅಯ್ಯರ್ 24; ಅಕೇಲ್ ಹೊಸೈನ್ 22 ಕ್ಕೆ 1, ಜೇಸನ್ ಹೋಲ್ಡರ್ 30ಕ್ಕೆ 1)
20 ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಆಡಿದ್ದ ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನದಲ್ಲಿ ದೀಪಕ್ ಹೂಡಾಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಚಾನ್ಸ್ ನೀಡಲಾಗಿದೆ. ಆ ಮೂಲಕ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕೇವಲ ಒಂದು ಬದಲಾವಣೆ ತರಲಾಗಿದೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
-
ಬಿಗ್ ನ್ಯೂಸ್24 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್16 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ21 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು24 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized23 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್24 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ22 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್23 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















