ಅಪರಾಧ
Kripa Alva-ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಮತ್ತೊಂದು ತಿರುವು: ಕೃಪಾ ಆಳ್ವ ವಿರುದ್ಧ ಹಳೆಯ ದೂರು ಮುಚ್ಚಿಹಾಕಿದ ಆರೋಪ..!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಟಿಂಗ್ ಆಪರೇಷನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಕೃಪಾ ಆಳ್ವ ಅವರ ಹಿಂದಿನ ಕಾರ್ಯವೈಖರಿ ಇದೀಗ ಮತ್ತೆ ಚರ್ಚೆಗೆ ಬಂದಿದೆ. ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ಇ-ಮೇಲ್ ಮೂಲಕ ದೂರು ನೀಡಿದ್ದರೂ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಬದಲು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರು, ನ. 3: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಟಿಂಗ್ ಆಪರೇಷನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಕೃಪಾ ಆಳ್ವ ಅವರ ಹಿಂದಿನ ಕಾರ್ಯವೈಖರಿ ಇದೀಗ ಮತ್ತೆ ಚರ್ಚೆಗೆ ಬಂದಿದೆ. ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ಇ-ಮೇಲ್ ಮೂಲಕ ದೂರು ನೀಡಿದ್ದರೂ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಬದಲು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ಕೃಪಾ ಆಳ್ವ ಅವರು 2015ರಿಂದ 2018ರವರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಮಹಿಳೆಯೊಬ್ಬರು ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದರು ಎನ್ನಲಾಗಿದೆ.
ಸಾಮಾನ್ಯವಾಗಿ ಇಂತಹ ದೂರುಗಳು ಬಂದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪೊಲೀಸರಿಗೆ ದೂರು ಸಲ್ಲಿಸಿ ತನಿಖೆಗೆ ವಹಿಸುವುದು ಅಗತ್ಯವಾಗಿತ್ತು. ಆದರೆ, ಮಹಿಳೆಯ ದೂರಿನ ಬಗ್ಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವ ಬದಲು ಅದನ್ನು ನಿರ್ಲಕ್ಷಿಸಿ ಪ್ರಕರಣವನ್ನು ಮುಚ್ಚಿಹಾಕಲು ಕೃಪಾ ಆಳ್ವ ಪ್ರಯತ್ನಿಸಿದ್ದರು ಎಂಬ ಆರೋಪ ಇದೀಗ ಮುನ್ನೆಲೆಗೆ ಬಂದಿದೆ.
ಮಕ್ಕಳ ಹಕ್ಕುಗಳ ಆಯೋಗದಂತಹ ಜವಾಬ್ದಾರಿಯುತ ಸಂಸ್ಥೆಯ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಇಂತಹ ದೂರು ಬಂದಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತೇ ಎಂಬ ಪ್ರಶ್ನೆಗಳು ಎದ್ದಿವೆ.
2018ರಿಂದಲೂ ಮಹಿಳೆಯ ಸಂಪರ್ಕದಲ್ಲಿದ್ದರಾ ಕೃಪಾ ಆಳ್ವ?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ವಿಚಾರ ಬೆಳಕಿಗೆ ಬಂದಿದೆ. 2018ರಿಂದಲೇ ಕೇರಳ ಮೂಲದ ಮಹಿಳೆಯೊಂದಿಗೆ ಕೃಪಾ ಆಳ್ವ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಅಲ್ಲದೆ, 2023ರಲ್ಲಿ ಮಹಿಳೆಯ ಹೇಳಿಕೆಯನ್ನು ವಿಡಿಯೋ ರೂಪದಲ್ಲಿ ದಾಖಲಿಸಿಕೊಂಡಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.
ಮಹಿಳೆ ಈ ಹಿಂದೆ ನೀಡಿದ್ದ ದೂರಿನ ಹಿನ್ನೆಲೆ ಏನು? ಆ ದೂರಿನ ಬಗ್ಗೆ ಕೃಪಾ ಆಳ್ವ ಯಾವ ಕ್ರಮ ಕೈಗೊಂಡಿದ್ದರು? ಪೊಲೀಸರಿಗೆ ಮಾಹಿತಿ ನೀಡದೆ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರೇ? 2023ರಲ್ಲಿ ಮಹಿಳೆಯ ಹೇಳಿಕೆಯನ್ನು ವಿಡಿಯೋ ರೂಪದಲ್ಲಿ ದಾಖಲಿಸಿಕೊಳ್ಳಲು ಕಾರಣವೇನು? ಎಂಬ ಪ್ರಶ್ನೆಗಳು ಇದೀಗ ಚರ್ಚೆಗೆ ಕಾರಣವಾಗಿವೆ.
ಸ್ಟಿಂಗ್ ಪ್ರಕರಣದ ತನಿಖೆಯಲ್ಲಿ ಸಿಸಿಬಿಯ ಪ್ರಾಥಮಿಕ ತೀರ್ಮಾನ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ಸೆಪ್ಟೆಂಬರ್‌ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಮೂಲಕ ತಮ್ಮ ಮಾನಹಾನಿ ಮಾಡಲು ಹಾಗೂ ಬ್ಲ್ಯಾಕ್‌ಮೇಲ್ ನಡೆಸಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಅಕ್ಟೋಬರ್ 6ರಂದು ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣದ ತನಿಖೆ ನಡೆಸಿದ ಸಿಸಿಬಿ, ಅಕ್ಟೋಬರ್ 29ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ವಿಡಿಯೋದಲ್ಲಿ ಬಿಂಬಿಸಲಾದ ಆರೋಪಗಳು ಕಟ್ಟುಕಥೆಯಾಗಿರುವ ಸಾಧ್ಯತೆಯಿದೆ ಎಂಬ ಪ್ರಾಥಮಿಕ ತೀರ್ಮಾನವನ್ನು ತಿಳಿಸಿತ್ತು.
ವಿಡಿಯೋದಲ್ಲಿನ ಘಟನೆಗಳಿಗೆ ಸಂಬಂಧಿಸಿದಂತೆ ಈವರೆಗೆ ಸಂಗ್ರಹಿಸಿರುವ ಹೇಳಿಕೆಗಳು ಮತ್ತು ಸಾಕ್ಷ್ಯಗಳು ಆರೋಪಗಳನ್ನು ದೃಢಪಡಿಸುತ್ತಿಲ್ಲ ಎಂದು ಸಿಸಿಬಿ ತಿಳಿಸಿತ್ತು. ಆದರೆ, ವಿಡಿಯೋ ಚಿತ್ರೀಕರಣ, ಅದರ ನೈಜತೆ ಹಾಗೂ ಪ್ರಸಾರದ ಹಿಂದೆ ಇರುವ ವ್ಯಕ್ತಿಗಳ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಸ್ಪಷ್ಟಪಡಿಸಿತ್ತು.
ಇದರ ಬೆನ್ನಲ್ಲೇ ಕೃಪಾ ಆಳ್ವ, ವಿನೋದ್ ಕುಮಾರ್ ಮತ್ತು ಪ್ರಶಾಂತ್ ಕುಮಾರ್ ಅವರಿಗೆ ಬೆಂಗಳೂರಿನ 66ನೇ ಸಿಸಿಹೆಚ್ ನ್ಯಾಯಾಲಯ ನವೆಂಬರ್ 2ರಂದು ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ತನಿಖೆಗೆ ಸಹಕರಿಸುವುದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕದಿರುವುದು ಸೇರಿದಂತೆ ಷರತ್ತುಗಳನ್ನು ವಿಧಿಸಿತ್ತು.
ರಾಹುಲ್ ಗಾಂಧಿ ಭೇಟಿಯಾಗಿ ಸಿದ್ದರಾಮಯ್ಯ ಮನವಿ
ಈ ಎಲ್ಲ ಬೆಳವಣಿಗೆಗಳ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸ್ಟಿಂಗ್ ವಿಡಿಯೋ ಹಿಂದಿರುವ ಸೂತ್ರಧಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಮುಂದುವರಿದರೆ ಮುಂದಿನ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವುದಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ ಎನ್ನುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕುಮಾರಸ್ವಾಮಿ ಹೆಸರು ಪ್ರಸ್ತಾಪ: ಬಿಜೆಪಿ-ಜೆಡಿಎಸ್ ನಾಯಕರ ಸಭೆ
ಇನ್ನೊಂದೆಡೆ, ಸ್ಟಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.
ಬೆಂಗಳೂರಿನ ಆರ್. ಅಶೋಕ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ್, ಸಂಸದರಾದ ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎನ್ನಲಾಗಿದೆ. ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಹಾಗೂ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸುವ ಬಗ್ಗೆ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯ
Kadaba-ಕಡಬ: ಆಟೋ ಬಾಡಿಗೆ ಹಣ ಕೇಳಿದ್ದಕ್ಕೆ ಚಾಲಕನ ಮೇಲೆ ಹಲ್ಲೆ
ಆಟೋ ಬಾಡಿಗೆ ಹಣ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಡಬದ ಕುರಿಯಾಳಕೊಪ್ಪದಲ್ಲಿ ನಡೆದಿದೆ. ಕಡಬ ಕೋಡಿಂಬಾಳ ನಿವಾಸಿ ಬೇಬಿಕೃಷ್ಣ (49) ಹಲ್ಲೆಗೊಳಗಾದ ಆಟೋ ಚಾಲಕ. ಇವರು ಕಡಬದ 2ನೇ ಆಟೋ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡಿಕೊಂಡು ಆಟೋ ಚಾಲನೆ ಮಾಡುತ್ತಿದ್ದರು.
ಕಡಬ: ಆಟೋ ಬಾಡಿಗೆ ಹಣ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಡಬದ ಕುರಿಯಾಳಕೊಪ್ಪದಲ್ಲಿ ನಡೆದಿದೆ.
ಕಡಬ ಕೋಡಿಂಬಾಳ ನಿವಾಸಿ ಬೇಬಿಕೃಷ್ಣ (49) ಹಲ್ಲೆಗೊಳಗಾದ ಆಟೋ ಚಾಲಕ. ಇವರು ಕಡಬದ 2ನೇ ಆಟೋ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡಿಕೊಂಡು ಆಟೋ ಚಾಲನೆ ಮಾಡುತ್ತಿದ್ದರು.
ನ.4ರಂದು ರಾತ್ರಿ ಆಟೋ ನಿಲ್ದಾಣದಲ್ಲಿದ್ದಾಗ ಅಪರಿಚಿತ ಹಿಂದಿ ಭಾಷಿಕ ವ್ಯಕ್ತಿಯೊಬ್ಬ ಕುರಿಯಾಳಕೊಪ್ಪಕ್ಕೆ ಬಾಡಿಗೆಗೆ ಕರೆದಿದ್ದಾನೆ. ಅದರಂತೆ ಆತನನ್ನು ಆಟೋದಲ್ಲಿ ಕೂರಿಸಿಕೊಂಡು ಕುರಿಯಾಳಕೊಪ್ಪಕ್ಕೆ ತೆರಳಿದ್ದಾರೆ. ಅಲ್ಲಿಗೆ ತಲುಪಿದ ಬಳಿಕ ಬಾಡಿಗೆ ಹಣ ನೀಡುವುದಾಗಿ ಹೇಳಿ ಆಟೋ ಚಾಲಕನಿಗೆ ಕಾಯುವಂತೆ ಸೂಚಿಸಿದ ವ್ಯಕ್ತಿ ಬಳಿಕ ನಾಪತ್ತೆಯಾಗಿದ್ದಾನೆ.
ಹಣ ಪಡೆಯಲು ಚಾಲಕ ಆ ವ್ಯಕ್ತಿ ಇದ್ದ ಟೆಂಟ್‌ಗೆ ತೆರಳಿ ಬಾಡಿಗೆ ಕೇಳಿದಾಗ ಹಣ ನೀಡದೆ ಸತಾಯಿಸಿದ್ದಾನೆ. ಈ ವೇಳೆ ಆರೋಪಿತ ಹಾಗೂ ಇತರ 3-4 ಮಂದಿ ಸ್ಥಳಕ್ಕೆ ಬಂದು ಆಟೋ ಮುಂದೆ ಹೋಗದಂತೆ ತಡೆದು, ಎಲ್ಲರೂ ಸೇರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಪರಾಧ
Sting case-ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು: ಕೇರಳದ ಸಂತ್ರಸ್ತೆಗೆ 4 ಲಕ್ಷ ರೂ. ಆಮಿಷ?
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಸ್ಟಿಂಗ್ ಕಾರ್ಯಾಚರಣೆಗೆ ಸಹಕರಿಸಿದರೆ ಕೇರಳ ಮೂಲದ ಯುವತಿಗೆ 4 ಲಕ್ಷ ರೂ. ನೀಡುವುದಾಗಿ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ಹಾಗೂ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಭರವಸೆ ನೀಡಿದ್ದರು ಎಂಬ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು, ನ. 3: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಸ್ಟಿಂಗ್ ಕಾರ್ಯಾಚರಣೆಗೆ ಸಹಕರಿಸಿದರೆ ಕೇರಳ ಮೂಲದ ಯುವತಿಗೆ 4 ಲಕ್ಷ ರೂ. ನೀಡುವುದಾಗಿ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ಹಾಗೂ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಭರವಸೆ ನೀಡಿದ್ದರು ಎಂಬ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.
2023ರ ಜನವರಿಯಲ್ಲಿ ಕೇರಳದಲ್ಲಿದ್ದ ಯುವತಿಯನ್ನು ಸುದ್ದಿವಾಹಿನಿಯ ಮುಖ್ಯಸ್ಥ ಹಾಗೂ ಕೃಪಾ ಆಳ್ವಾ ಸಂಪರ್ಕಿಸಿದ್ದರು ಎನ್ನಲಾಗಿದೆ. ಸಿದ್ದರಾಮಯ್ಯ ಅವರ ಕುರಿತ ಸ್ಟಿಂಗ್ ಆಪರೇಷನ್‌ಗೆ ಸಹಕರಿಸಿದರೆ 4 ಲಕ್ಷ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು ಎಂದು ತಿಳಿದುಬಂದಿದೆ.
ಯುವತಿಯ ಕುಟುಂಬ ಆರ್ಥಿಕವಾಗಿ ಹಿಂದುಳಿದಿದ್ದು, ತಾಯಿ ಹಾಗೂ ಸಹೋದರಿಯರು ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಕುಟುಂಬದ ಆರ್ಥಿಕ ಸಂಕಷ್ಟದ ಬಗ್ಗೆ ತಿಳಿದಿದ್ದ ಕೃಪಾ ಆಳ್ವಾ ಅವರು ಸುದ್ದಿವಾಹಿನಿಯ ಮುಖ್ಯಸ್ಥನೊಂದಿಗೆ ಸೇರಿ ಯುವತಿಯ ಮನೆಗೆ ಐದಾರು ಬಾರಿ ಭೇಟಿ ನೀಡಿ ಸ್ಟಿಂಗ್ ಕಾರ್ಯಾಚರಣೆಗೆ ಒಪ್ಪಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ.
ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದು ಎಂಬ ನಿರೀಕ್ಷೆಯಿಂದ ಯುವತಿ ಅಂತಿಮವಾಗಿ ಸ್ಟಿಂಗ್ ಆಪರೇಷನ್‌ಗೆ ಸಹಕರಿಸಲು ಒಪ್ಪಿಕೊಂಡಿದ್ದರು ಎಂದು ತನಿಖಾ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
Threatening call-ಟೈಗರ್ ಶ್ರಾಫ್ ಬಳಿಕ ಮತ್ತೊಬ್ಬ ನಟನಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಕರೆ; ₹5 ಕೋಟಿ ಡಿಮಾಂಡ್..!
ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಇದೀಗ ಮತ್ತೊಬ್ಬ ನಟ ತುಷಾರ್ ಕಪೂರ್ ಅವರಿಗೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಕರೆ ಬಂದಿರುವುದು ವರದಿಯಾಗಿದೆ. ಕರೆ ಮಾಡಿದ ವ್ಯಕ್ತಿ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಇದೀಗ ಮತ್ತೊಬ್ಬ ನಟ ತುಷಾರ್ ಕಪೂರ್ ಅವರಿಗೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಕರೆ ಬಂದಿರುವುದು ವರದಿಯಾಗಿದೆ. ಕರೆ ಮಾಡಿದ ವ್ಯಕ್ತಿ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ತುಷಾರ್ ಕಪೂರ್ ಅವರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಮುಂಬೈ ಕ್ರೈಮ್ ಬ್ರಾಂಚ್ ತನಿಖೆ ಕೈಗೆತ್ತಿಕೊಂಡಿದೆ. ಕರೆ ಮಾಡಿದ ವ್ಯಕ್ತಿ ತಾನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ‘ಹ್ಯಾರಿ ಬಾಕ್ಸರ್’ ಎಂದು ಪರಿಚಯಿಸಿಕೊಂಡು ಹಣ ನೀಡದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಆದರೆ, ಕ್ರೈಮ್ ಬ್ರಾಂಚ್ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಈ ಬೆದರಿಕೆ ಕರೆ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕರೆ ಮಾಡಿದ ವ್ಯಕ್ತಿಯ ಧ್ವನಿ ಮಾದರಿಯನ್ನು ಹ್ಯಾರಿ ಬಾಕ್ಸರ್‌ನ ಅಧಿಕೃತ ಧ್ವನಿ ಮಾದರಿಯೊಂದಿಗೆ ಹೋಲಿಕೆ ಮಾಡಿದಾಗ ಎರಡೂ ಹೊಂದಾಣಿಕೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೀಗಾಗಿ, ನಟನನ್ನು ಹೆದರಿಸಿ ಹಣ ವಸೂಲಿ ಮಾಡುವ ಉದ್ದೇಶದಿಂದ ಯಾರೋ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿರಬಹುದು. ಇದು ಹುಸಿ ಬೆದರಿಕೆ ಕರೆಯಾಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಕೆಲವೇ ವಾರಗಳ ಹಿಂದೆ ಮುಂಬೈನಲ್ಲಿ ನಟ ಟೈಗರ್ ಶ್ರಾಫ್ ಅವರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆದಿತ್ತು. ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಹೊತ್ತುಕೊಂಡಿದ್ದರು ಎನ್ನಲಾಗಿತ್ತು. ಇದರ ಬೆನ್ನಲ್ಲೇ ತುಷಾರ್ ಕಪೂರ್ ಅವರಿಗೆ ಬೆದರಿಕೆ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿತ್ತು.
ಸುಮಾರು ಒಂದು ವಾರದ ಹಿಂದೆ ತುಷಾರ್ ಕಪೂರ್ ದೂರು ನೀಡಿದ್ದು, ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಕರೆ ಮಾಡಿದ ವ್ಯಕ್ತಿಯ ಗುರುತು ಹಾಗೂ ಬೆದರಿಕೆಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಸ್ಥಳೀಯ7 hours agoKukke Subrahmanya-ಕುಕ್ಕೆ ಸುಬ್ರಹ್ಮಣ್ಯ: ನದಿಗೆ ಹಾರಿದ ಮಹಿಳೆಗೆ ಮೊಸಳೆ ಕಚ್ಚಿ ಸಿಕ್ಕಿತು ಜೀವದಾನ..! ಸಾಯಲು ಹೋದವಳು ಬದುಕಿ ಬಂದ ವಿಚಿತ್ರ ಘಟನೆ..!
-
ರಾಜಕೀಯ13 hours agoGrihalakshmi-ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಫ್ಟ್: ಒಂದೇ ಬಾರಿಗೆ 3 ಕಂತಿನ ಹಣ ಬಿಡುಗಡೆ..!
-
ಸ್ಥಳೀಯ13 hours agoKadaba-ಕಡಬ: ಆಟೋ ಬಾಡಿಗೆ ಹಣ ಕೇಳಿದ್ದಕ್ಕೆ ಚಾಲಕನ ಮೇಲೆ ಹಲ್ಲೆ
-
ರಾಜಕೀಯ13 hours agoAbdul Al-Sayeed-ಅಮೆರಿಕದ ಸೆನೆಟ್ಗೆ ಭಟ್ಕಳದ ಅಳಿಯ ಅಬ್ದುಲ್ ಅಲ್ ಸಯೀದ್ ಆಯ್ಕೆ..!
-
ಬಿಗ್ ನ್ಯೂಸ್13 hours agoGhee and butter price-ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ..! ತುಪ್ಪ, ಬೆಣ್ಣೆ ದರವೂ ಏರಿಕೆ
-
ಸ್ಥಳೀಯ7 hours agoFertilizer-ಸದ್ದಿಲ್ಲದೆ ರಸಗೊಬ್ಬರ ಧಾರಣೆ ಏರಿಕೆ – ಸ್ಟಾಕ್ ಖಾಲಿ : ಕೃಷಿಕರಿಗೆ ಶಾಕ್
-
ಶಿಕ್ಷಣ12 hours agoVivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿನ ವಿದ್ಯಾರ್ಥಿನಿ ರಾಷ್ಟ್ರಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಗೆ ಆಯ್ಕೆ
-
ಶಿಕ್ಷಣ12 hours agoತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಕನಸುಗಳು 2026 ಕಾರ್ಯಕ್ರಮದಲ್ಲಿ ಹಲವಾರು ಪ್ರಶಸ್ತಿಗಳು


















