Connect with us

ಮಂಗಳೂರು

ನಕ್ಸಲ್ ಮುಂಡಗಾರು ಲತಾ ವಶಕ್ಕೆ ಪಡೆದ ಉಪ್ಪಿನಂಗಡಿ ಪೊಲೀಸರು

Published

on



Ad Widget

Ad Widget

Ad Widget

Ad Widget

ಕಡಬ, ನ.3: ಸರಕಾರಕ್ಕೆ ಶರಣಾಗತಿಯಾಗಿರುವ ಮಾಜಿ ನಕ್ಸಲ್ ನಾಯಕಿ ಮುಂಡಗಾರು ಲತಾ ಅಲಿಯಾಸ್ ಶ್ರೀಲತಾಳನ್ನು 2018ರಲ್ಲಿ ಶಿರಾಡಿ ಗ್ರಾಮದ ಮಿತ್ತಮಜಲಿನಲ್ಲಿ ನಡೆದಿದ್ದ ಪ್ರಕರಣವೊಂದರ ವಿಚಾರಣೆಗಾಗಿ ಮಂಗಳವಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Ad Widget

Ad Widget

Ad Widget

Ad Widget

2025ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಸರಕಾರಕ್ಕೆ ಶರಣಾಗತಿಯಾಗಿದ್ದ ಲತಾ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆಯಾ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ಹಾಗೂ ಘಟನೆ ನಡೆದ ಸ್ಥಳಗಳಲ್ಲಿ ಮಹಜರು ಪ್ರಕ್ರಿಯೆ ನಡೆಯುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

2018ರಲ್ಲಿ ಶಿರಾಡಿ ಗ್ರಾಮದ ಮಿತ್ತಮಜಲಿನ ಸುರೇಶ್ ಮತ್ತು ಲೀಲಾ ಅವರ ಮನೆಗೆ ಮುಂಡಗಾರು ಲತಾ ನೇತೃತ್ವದ ನಕ್ಸಲರ ತಂಡ ರಾತ್ರಿ ವೇಳೆ ತೆರಳಿ ಮನೆಯವರನ್ನು ಬೆದರಿಸಿ ಊಟ ಮಾಡಿದ್ದಲ್ಲದೆ, ಮನೆಯಿಂದ ಅಕ್ಕಿ ಸೇರಿದಂತೆ ಕೆಲವು ಸಾಮಗ್ರಿಗಳನ್ನು ಪಡೆದುಕೊಂಡು ತೆರಳಿತ್ತು ಎನ್ನಲಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget <> Ad Widget

ಕಡಬ ತಾಲೂಕಿನಲ್ಲಿ ಪ್ರಕರಣ ನಡೆದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಲತಾಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆತರಲಾಯಿತು. ಬಳಿಕ ಕಡಬ ಸಂಚಾರಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಸಂಜೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಮತ್ತೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.



Ad Widget

ಬುಧವಾರ ಶಿರಾಡಿ ಗ್ರಾಮದ ಮಿತ್ತಮಜಲಿನಲ್ಲಿ ಸ್ಥಳ ಮಹಜರು ನಡೆಯಲಿದ್ದು, ಈ ಪ್ರಕ್ರಿಯೆಗಾಗಿ ಲತಾಳನ್ನು ಅಲ್ಲಿಗೆ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಗುರುವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದೊಯ್ಯಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Ad Widget

ಮುಂಡಗಾರು ಲತಾ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದ ಆದಿವಾಸಿ ಕುಟುಂಬಕ್ಕೆ ಸೇರಿದವಳಾಗಿದ್ದಾಳೆ.

ಬಿಗಿ ಪೊಲೀಸ್ ಬಂದೋಬಸ್ತ್

ಲತಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಕಡಬ ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಎರಡು ಪೊಲೀಸ್ ವ್ಯಾನ್‌ಗಳು ಸೇರಿದಂತೆ ಆರು ಪೊಲೀಸ್ ವಾಹನಗಳಲ್ಲಿ ಬೆಂಗಳೂರು, ಉಪ್ಪಿನಂಗಡಿ, ಕಡಬ ಹಾಗೂ ಬೆಳ್ತಂಗಡಿ ಠಾಣೆಗಳ ಪೊಲೀಸರು ಭದ್ರತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರು: ಬೈಕಂಪಾಡಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 16 ಗೋವುಗಳ ರಕ್ಷಣೆ, ಲಾರಿ ವಶಕ್ಕೆ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು 16 ಗೋವುಗಳನ್ನು ರಕ್ಷಿಸಿದ್ದಾರೆ. ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು 16 ಗೋವುಗಳನ್ನು ರಕ್ಷಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೈಕಂಪಾಡಿ ಪರಿಸರದಲ್ಲಿ KA-19-AB-2715 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ, ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

Ad Widget

Ad Widget <> Ad Widget

ತಕ್ಷಣ ಕಾರ್ಯಾಚರಣೆ ನಡೆಸಿದ ಪಣಂಬೂರು ಪೊಲೀಸರು ಲಾರಿಯಲ್ಲಿದ್ದ 16 ಗೋವುಗಳನ್ನು ರಕ್ಷಿಸಿದ್ದು, ವಾಹನವನ್ನು ವಶಕ್ಕೆ ಪಡೆದಿದ್ದಾರೆ.



Ad Widget

ಮಂಗಳೂರು ಸುತ್ತಮುತ್ತ ಅಕ್ರಮ ಗೋ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Continue Reading

ಶಿಕ್ಷಣ

Mangalore-ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಮಹಿಳೆಯರ ಕಬಡ್ಡಿ ಪಂದ್ಯಾಟ

Published

on



Ad Widget

Ad Widget

Ad Widget

Ad Widget

ಕಬಡ್ಡಿ ಮಣ್ಣಿನ ಆಟ, ಆದರೆ ಕಾಲಕ್ಕೆ ತಕ್ಕಂತೆ ಪರಿವರ್ತನೆ ಹೊಂದಿ ಮ್ಯಾಟ್ ಅಂಕಣದಲ್ಲಿ ಆಡುವಂತಾಗಿದೆ, ನಿಯಮಗಳೂ ಬದಲಾಗಿದೆ. ಹೀಗಿದ್ದರೂ ಆಟದ ಗುಣಗಳು ಸಂಸ್ಕಾರಗಳು ಬದಲಾಗಿಲ್ಲ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸುಜಿತ್ ಕುಮಾರ್ ಕೊಟ್ಟಾರಿ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಕಬಡ್ಡಿ ಮಣ್ಣಿನ ಆಟ, ಆದರೆ ಕಾಲಕ್ಕೆ ತಕ್ಕಂತೆ ಪರಿವರ್ತನೆ ಹೊಂದಿ ಮ್ಯಾಟ್ ಅಂಕಣದಲ್ಲಿ ಆಡುವಂತಾಗಿದೆ, ನಿಯಮಗಳೂ ಬದಲಾಗಿದೆ. ಹೀಗಿದ್ದರೂ ಆಟದ ಗುಣಗಳು ಸಂಸ್ಕಾರಗಳು ಬದಲಾಗಿಲ್ಲ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸುಜಿತ್ ಕುಮಾರ್ ಕೊಟ್ಟಾರಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆಯುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಮಹಿಳೆಯರ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತಾಡಿದರು. ಶಾರೀರಿಕ ಕ್ಷಮತೆ, ಸಮಯಕ್ಕೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವ ಜಾಣತನ ಕಬಡ್ಡಿಗೆ ಆವಶ್ಯಕ. ಈ ಕ್ರೀಡೆಯಿಂದ ಪರಸ್ಪರ ಹೊಂದಾಣಿಕೆ, ಒಗ್ಗಟ್ಟು, ಮನೋಸ್ಥೈರ್ಯ ಮತ್ತು ನಾಯಕತ್ವ ಗುಣಗಳು ವೃದ್ದಿಸುತ್ತವೆ ಎಂದು ಹೇಳಿದರು. ಎದುರಾಳಿಗೆ ಗೌರವವನ್ನು ನೀಡುತ್ತಾ ಕ್ರೀಡಾಸ್ಪೂರ್ತಿಯಿಂದ ಆಟವನ್ನು ಆನಂದಿಸಿ. ಆಟದ ಸಮಯದಲ್ಲಿ ಗೆಲುವೊಂದೇ ಗುರಿಯಾಗಿರಲಿ ಎಂದರು.

Ad Widget

Ad Widget <> Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ಶುಭ ಹಾರೈಸಿದರು.



Ad Widget

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ, ಕ್ರೀಡಾ ಸಂಯೋಜಕ ಪ್ರೊ.ದಿನೇಶ್ ಪ್ರಸನ್ನ ವಂದಿಸಿದರು. ಮೂಲ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಅನುಪಮಾ.ಟಿ ಕಾರ್ಯಕ್ರಮ ನಿರ್ವಹಿಸಿದರು.

Ad Widget

Ad Widget

ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ ಮಹಿಳೆಯರ 7 ತಂಡಗಳು ಇದರಲ್ಲಿ ಭಾಗವಹಿಸುತ್ತಿವೆ.

Ad Widget
Continue Reading

ಮಂಗಳೂರು

Mangalore-ಮಂಗಳೂರು: ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ಮಹಿಳೆಗೆ 1.30 ಲಕ್ಷ ರೂ. ವಂಚನೆ..!

Published

on



Ad Widget

Ad Widget

Ad Widget

Ad Widget

ಅಮೆಜಾನ್ ಕಸ್ಟಮರ್ ಕೇರ್ ಪ್ರತಿನಿಧಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ ಬರೋಬ್ಬರಿ 1.30 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕುರಿತು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ. 3: ಅಮೆಜಾನ್ ಕಸ್ಟಮರ್ ಕೇರ್ ಪ್ರತಿನಿಧಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ ಬರೋಬ್ಬರಿ 1.30 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕುರಿತು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದೂರುದಾರ ಮಹಿಳೆ ಅಕ್ಟೋಬರ್ 21ರಂದು ಅಮೆಜಾನ್ ಆ್ಯಪ್ ಮೂಲಕ ಸೀಲಿಂಗ್ ಫ್ಯಾನ್ ಬುಕ್ ಮಾಡಿ, ಗೂಗಲ್ ಪೇ ಮೂಲಕ 7,903 ರೂ. ಪಾವತಿಸಿದ್ದರು. ಆದರೆ ಬಳಿಕ ಆರ್ಡರ್ ರದ್ದಾಗಿರುವ ಬಗ್ಗೆ ಆ್ಯಪ್‌ನಲ್ಲಿ ಮಾಹಿತಿ ಲಭ್ಯವಾಗಿತ್ತು. ಆದರೂ ಪಾವತಿಸಿದ ಹಣ ಮರುಪಾವತಿಯಾಗಿರಲಿಲ್ಲ.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಮಹಿಳೆ ಗೂಗಲ್‌ನಲ್ಲಿ ಅಮೆಜಾನ್ ಕಸ್ಟಮರ್ ಕೇರ್ ಹೆಲ್ಪ್‌ಲೈನ್ ನಂಬರ್ ಹುಡುಕಿ ಕರೆ ಮಾಡಿದ್ದಾರೆ. ಮೊದಲ ಬಾರಿ ಕರೆ ಕಡಿತಗೊಂಡಿದ್ದು, ಬಳಿಕ ಅದೇ ನಂಬರ್‌ನಿಂದ ಮಹಿಳೆಗೆ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ತಾನು ಅಮೆಜಾನ್ ಕಸ್ಟಮರ್ ಕೇರ್ ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದಾನೆ.



Ad Widget

ಆರ್ಡರ್ ರದ್ದಾಗಿರುವುದರಿಂದ ಹಣ ಮರುಪಾವತಿಸಲು ಗೂಗಲ್ ಪೇ ಐಡಿ ರಚಿಸಬೇಕು ಎಂದು ಆತ ಮಹಿಳೆಗೆ ತಿಳಿಸಿದ್ದಾನೆ. ಇದನ್ನು ನಂಬಿದ ಮಹಿಳೆಯ ಖಾತೆಯಿಂದ ಆಕೆಗೆ ತಿಳಿಯದಂತೆ 80 ಸಾವಿರ ರೂ.ಗಳನ್ನು ವಂಚಕ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ ಎನ್ನಲಾಗಿದೆ.

Ad Widget

Ad Widget

ಇದಲ್ಲದೆ, ಐಎಂಪಿಎಸ್ ಮೂಲಕ ಮತ್ತಷ್ಟು 50 ಸಾವಿರ ರೂ. ಸ್ವಯಂಚಾಲಿತವಾಗಿ ವರ್ಗಾವಣೆಯಾಗಿದೆ. ಈ ಮೂಲಕ ಹಣ ಮರುಪಾವತಿ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿ ಒಟ್ಟು 1.30 ಲಕ್ಷ ರೂ.ಗಳನ್ನು ಆನ್‌ಲೈನ್ ಮೂಲಕ ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಂಚನೆ ನಡೆಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!