ಶಿಕ್ಷಣ
Mangalore-ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಮಹಿಳೆಯರ ಕಬಡ್ಡಿ ಪಂದ್ಯಾಟ
ಕಬಡ್ಡಿ ಮಣ್ಣಿನ ಆಟ, ಆದರೆ ಕಾಲಕ್ಕೆ ತಕ್ಕಂತೆ ಪರಿವರ್ತನೆ ಹೊಂದಿ ಮ್ಯಾಟ್ ಅಂಕಣದಲ್ಲಿ ಆಡುವಂತಾಗಿದೆ, ನಿಯಮಗಳೂ ಬದಲಾಗಿದೆ. ಹೀಗಿದ್ದರೂ ಆಟದ ಗುಣಗಳು ಸಂಸ್ಕಾರಗಳು ಬದಲಾಗಿಲ್ಲ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸುಜಿತ್ ಕುಮಾರ್ ಕೊಟ್ಟಾರಿ ಹೇಳಿದರು.
ಪುತ್ತೂರು: ಕಬಡ್ಡಿ ಮಣ್ಣಿನ ಆಟ, ಆದರೆ ಕಾಲಕ್ಕೆ ತಕ್ಕಂತೆ ಪರಿವರ್ತನೆ ಹೊಂದಿ ಮ್ಯಾಟ್ ಅಂಕಣದಲ್ಲಿ ಆಡುವಂತಾಗಿದೆ, ನಿಯಮಗಳೂ ಬದಲಾಗಿದೆ. ಹೀಗಿದ್ದರೂ ಆಟದ ಗುಣಗಳು ಸಂಸ್ಕಾರಗಳು ಬದಲಾಗಿಲ್ಲ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸುಜಿತ್ ಕುಮಾರ್ ಕೊಟ್ಟಾರಿ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆಯುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಮಹಿಳೆಯರ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತಾಡಿದರು. ಶಾರೀರಿಕ ಕ್ಷಮತೆ, ಸಮಯಕ್ಕೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವ ಜಾಣತನ ಕಬಡ್ಡಿಗೆ ಆವಶ್ಯಕ. ಈ ಕ್ರೀಡೆಯಿಂದ ಪರಸ್ಪರ ಹೊಂದಾಣಿಕೆ, ಒಗ್ಗಟ್ಟು, ಮನೋಸ್ಥೈರ್ಯ ಮತ್ತು ನಾಯಕತ್ವ ಗುಣಗಳು ವೃದ್ದಿಸುತ್ತವೆ ಎಂದು ಹೇಳಿದರು. ಎದುರಾಳಿಗೆ ಗೌರವವನ್ನು ನೀಡುತ್ತಾ ಕ್ರೀಡಾಸ್ಪೂರ್ತಿಯಿಂದ ಆಟವನ್ನು ಆನಂದಿಸಿ. ಆಟದ ಸಮಯದಲ್ಲಿ ಗೆಲುವೊಂದೇ ಗುರಿಯಾಗಿರಲಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ಶುಭ ಹಾರೈಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ, ಕ್ರೀಡಾ ಸಂಯೋಜಕ ಪ್ರೊ.ದಿನೇಶ್ ಪ್ರಸನ್ನ ವಂದಿಸಿದರು. ಮೂಲ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಅನುಪಮಾ.ಟಿ ಕಾರ್ಯಕ್ರಮ ನಿರ್ವಹಿಸಿದರು.
ಶಿಕ್ಷಣ
ಹವ್ಯಕ ಭಾಷಾ ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ; ಸಂಕ್ರಾಂತಿ ಹವ್ಯಕ ಸಾಹಿತ್ಯ ಉತ್ಸವ-2027ಕ್ಕೆ ಬರಹಗಳ ಆಹ್ವಾನ

ಪುತ್ತೂರು: ಹವ್ಯಕ ಭಾಷೆಯ ಸಾಹಿತ್ಯವನ್ನು ಬೆಳೆಸುವ ಹಾಗೂ ಹೊಸ ತಲೆಮಾರಿನ ಬರಹಗಾರರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆರಂಭಗೊಂಡಿರುವ ‘ಹವ್ಯಕ ವಿಶ್ವ’ ಡಿಜಿಟಲ್ ವೇದಿಕೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ‘ಸಂಕ್ರಾಂತಿ ಹವ್ಯಕ ಸಾಹಿತ್ಯ ಉತ್ಸವ-2027’ ಆಯೋಜಿಸಲಾಗಿದೆ. ಈ ಪ್ರಯುಕ್ತ ಹವ್ಯಕ ಭಾಷೆಯಲ್ಲಿ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾಹಿತ್ಯಾಸಕ್ತರಿಂದ ಬರಹಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕದ ಕರಾವಳಿ ಭಾಗ (ಕಾಸರಗೋಡು ಸೇರಿದಂತೆ) ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಬಳಕೆಯಲ್ಲಿರುವ ಹವ್ಯಕ ಭಾಷೆಯ ಸಾಹಿತ್ಯಿಕ ಬೆಳವಣಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿದೆ.
ಕಥೆ, ಕವನ, ಪ್ರಬಂಧ ಹಾಗೂ ಲಘುಬರಹ ಹೀಗೆ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಕಥೆ ಮತ್ತು ಲಘುಬರಹ ವಿಭಾಗಗಳಲ್ಲಿ ಸ್ಪರ್ಧಿಗಳು ತಮ್ಮ ಇಷ್ಟದ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು. ಕವನ ವಿಭಾಗಕ್ಕೆ ‘ಹಳ್ಳಿ ಮನೆಯೋ/ಬದುಕೋ, ಪೇಟೆ ಮನೆಯೋ/ಬದುಕೋ’ ಎಂಬ ವಿಷಯ ನೀಡಲಾಗಿದೆ. ಪ್ರಬಂಧ ವಿಭಾಗದಲ್ಲಿ ‘ಹವ್ಯಕ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಯುವ ಪೀಳಿಗೆಯ ಜವಾಬ್ದಾರಿ’ ಎಂಬ ವಿಷಯದ ಕುರಿತು ಬರೆಯಬೇಕಾಗಿದೆ.
ಪ್ರತಿ ವಿಭಾಗದಲ್ಲಿ ಆಯ್ಕೆಯಾಗುವ ಬರಹಗಳಿಗೆ ಪ್ರಥಮ ಬಹುಮಾನವಾಗಿ 3,000 ರೂ. ನಗದು, ಫಲಕ ಹಾಗೂ ಪ್ರಮಾಣಪತ್ರ ಮತ್ತು ದ್ವಿತೀಯ ಬಹುಮಾನವಾಗಿ 1,500 ರೂ. ನಗದು, ಫಲಕ ಹಾಗೂ ಪ್ರಮಾಣಪತ್ರ ನೀಡಲಾಗುತ್ತದೆ.
ಸ್ಪರ್ಧೆಗೆ ಸಲ್ಲಿಸುವ ಬರಹಗಳು ಕಡ್ಡಾಯವಾಗಿ ಹವ್ಯಕ ಭಾಷೆಯಲ್ಲಿರಬೇಕು. ಈ ಹಿಂದೆ ಎಲ್ಲಿಯೂ ಪ್ರಕಟವಾಗಿರಬಾರದು. ಬರಹಗಳನ್ನು ಯೂನಿಕೋಡ್ ಅಥವಾ ನುಡಿ ಫಾಂಟ್ನಲ್ಲಿ ಸಿದ್ಧಪಡಿಸಿ ವರ್ಡ್, ಪಿಡಿಎಫ್ ರೂಪದಲ್ಲಿ ಅಥವಾ ಕಾಗದದಲ್ಲಿ ಬರೆದು ಸ್ಕ್ಯಾನ್ ಮಾಡಿ ಕಳುಹಿಸಬಹುದು.
ಬರಹಗಳನ್ನು ಕಳುಹಿಸಲು 2026ರ ಡಿಸೆಂಬರ್ 1 ಕೊನೆಯ ದಿನವಾಗಿದ್ದು, ಸ್ಪರ್ಧೆಯ ಫಲಿತಾಂಶವನ್ನು 2027ರ ಜನವರಿ 14ರ ಸಂಕ್ರಾಂತಿ ದಿನ ಪ್ರಕಟಿಸಲಾಗುವುದು.
ಆಸಕ್ತರು ತಮ್ಮ ಬರಹಗಳನ್ನು editor@havyakavishwa.com ಅಥವಾ havyakavishwa@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು. ವಾಟ್ಸ್ಆ್ಯಪ್ ಮೂಲಕವೂ +91 6360604365 ಸಂಖ್ಯೆಗೆ ಕಳುಹಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ havyakavishwa.com ವೆಬ್ಸೈಟ್ ಸಂಪರ್ಕಿಸಬಹುದು ಎಂದು ಹವ್ಯಕ ವಿಶ್ವ ಬಳಗದ ಪರವಾಗಿ ಕೃಷ್ಣ ಕಿಶೋರ್ ಯೇನಂಕೂಡ್ಲು ತಿಳಿಸಿದ್ದಾರೆ.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಅಮೋಘ ಸಾಧನೆ
ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾಭಾರತಿಯ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 6 ಚಿನ್ನ, 1 ಬೆಳ್ಳಿ ಹಾಗೂ 2 ಕಂಚು ಸೇರಿದಂತೆ ಒಟ್ಟು 9 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾಭಾರತಿಯ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 6 ಚಿನ್ನ, ೧ ಬೆಳ್ಳಿ ಹಾಗೂ 2 ಕಂಚು ಸೇರಿದಂತೆ ಒಟ್ಟು 9 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಹಿಂದೆ ನಡೆದ ಸ್ಪರ್ಧೆಗಳಲ್ಲಿ 100 ಮೀಟರ್ ಓಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಚಿನ್ನದ ಪದಕ ಗಳಿಸಿದ್ದರು.
ಕೊನೆಯ ದಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಗುಣಶ್ರೀ ಅವರು ೧೦೦ ಮೀಟರ್ ಹರ್ಡಲ್ಸ್ ಓಟದಲ್ಲಿ ಚಿನ್ನದ ಪದಕ, 400 ಮೀಟರ್ ಹರ್ಡಲ್ಸ್ ಓಟದಲ್ಲಿ ಕಂಚಿನ ಪದಕ ಹಾಗೂ 400×100ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ (ಇವರು ದೇವುಮೂಲೆ ನಿವಾಸಿಗಳಾದ ಶ್ರೀನಿವಾಸ ನಾಯ್ಕ್ ಮತ್ತು ಹೇಮಾವತಿ ದಂಪತಿಯ ಪುತ್ರಿ).
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ದಿವಿಜ್ಞಾ ಅವರು 200ಮೀಟರ್ ಓಟದಲ್ಲಿ ಚಿನ್ನದ ಪದಕ, 400 ಮೀಟರ್ ಓಟದಲ್ಲಿ ಬೆಳ್ಳಿಯ ಪದಕ ಹಾಗೂ 400×100ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ (ಇವರು ಮಲಾರ್ ನಿವಾಸಿಗಳಾದ ಶಿವಪ್ರಸಾದ್ ಯು.ಎ. ಮತ್ತು ಪವಿತ್ರ ದಂಪತಿಯ ಪುತ್ರಿ).
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ಷಾ ಅವರು 400×100ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ (ಇವರು ಮೂಡಂಬೈಲ್ ನಿವಾಸಿಗಳಾದ ಎಮ್ ಬಾಲಕೃಷ್ಣ ಹಾಗೂ ಶಶಿಕಲಾ ದಂಪತಿಯ ಪುತ್ರಿ).
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಡಿಂಪಲ್ ಶೆಟ್ಟಿ ಅವರು 400×100ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಹಾಗೂ 200ಮೀಟರ್ ಓಟದಲ್ಲಿ ಕಂಚಿನ ಪದಕ ಗಳಿಸಿದ್ದಾರೆ. (ಇವರು ಮೇರ್ಲ ನಿವಾಸಿಗಳಾದ ಎ. ಉದಯ ಶೆಟ್ಟಿ ಮತ್ತು ಸುನಿತಾ ಯು. ಶೆಟ್ಟಿ ದಂಪತಿಯ ಪುತ್ರಿ).
ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Vivekananda-ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ರ್ಯಾಂಕ್ ಪಟ್ಟಿ ಪ್ರಕಟ
ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ 2023-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಲ್ಲಿ ಒಟ್ಟು ಎಂಟು ರ್ಯಾಂಕ್ ಗಳನ್ನು ಘೋಷಿಸಲಾಗಿದೆ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ 2023-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಲ್ಲಿ ಒಟ್ಟು ಎಂಟು ರ್ಯಾಂಕ್ ಗಳನ್ನು ಘೋಷಿಸಲಾಗಿದೆ.

ಬಿ.ಎ ವಿಭಾಗದಲ್ಲಿ ಸುಮನಾ (91.41%) ಪ್ರಥಮ ರ್ಯಾಂಕ್ (ವಾಮನ ಆಚಾರ್ಯ ಮತ್ತು ಸುಮಿತಾ ದಂಪತಿಗಳ ಪುತ್ರಿ ), ಬಿಎಸ್ಸಿ ವಿಭಾಗದಲ್ಲಿ ಅನುಶ್ರೀ ಜಿ ಪ್ರಭು (96.38%) ಪ್ರಥಮ ರ್ಯಾಂಕ್ ( ಜಿ. ಪುರುಷೋತ್ತಮ ಪ್ರಭು, ಜಿ.ವಿದ್ಯಾ ಪ್ರಭು ದಂಪತಿಗಳ ಪುತ್ರಿ), ಬಿಬಿಎ ವಿಭಾಗದಲ್ಲಿ ಅನುಶ್ರೀ (94.21%) ಪ್ರಥಮ ರ್ಯಾಂಕ್ (ಪ್ರದೀಪ್, ಗೀತಾ. ಬಿ ದಂಪತಿಯ ಪುತ್ರಿ), ಬಿಕಾಂ ವಿಭಾಗದಲ್ಲಿ ಶರಣ್ಯ ವಿ.ಆರ್ (98.79%) ಪ್ರಥಮ ರ್ಯಾಂಕ್ ( ರಾಮಚಂದ್ರ ವಿ, ವಾಣಿ ರಾಮಚಂದ್ರ ದಂಪತಿಯ ಪುತ್ರಿ) ಹಾಗೂ ಸಿಂಧೂರ ವಿ.ಎಸ್ (98.29%) ದ್ವಿತೀಯ ರ್ಯಾಂಕ್ ( ಶ್ರೀ ಪತಿ ವಿ, ವೀಣಾ ಶ್ರೀಪತಿ ದಂಪತಿಯ ಪುತ್ರಿ) ಅಂತೆಯೇ ಬಿಸಿಎ ವಿಭಾಗದಲ್ಲಿ ಮಾಹಿ ಜೆ ಹೆಗ್ಡೆ (96.13%) ಪ್ರಥಮ ರ್ಯಾಂಕ್( ಜಯರಾಮ ಹೆಗ್ಡೆ, ಗಾಯತ್ರಿ ದೇವಿ ಪಿ ದಂಪತಿಯ ಪುತ್ರಿ), ಶ್ರೀನಿಧಿ ಎ (95.3%) ದ್ವಿತೀಯ ರ್ಯಾಂಕ್ ( ಗೋವಿಂದ ಪ್ರಸಾದ್, ವಿದ್ಯಾ ದಂಪತಿಯ ಪುತ್ರ) ಹಾಗೂ ಸಮೃದ್ಧಿ (94.96%) ತೃತೀಯ ರ್ಯಾಂಕ್ ( ಶೇಕರ ಪೂಜಾರಿ, ಸುಮಿತ್ರ ಬಿ ಕೆ ದಂಪತಿಯ ಪುತ್ರಿ)ಗಳನ್ನು ಗಳಿಸಿರುತ್ತಾರೆ.
ಸ್ನಾತಕೋತ್ತರ ಪದವಿಯಲ್ಲಿ 2024-26ರ ಸಾಲಿನಲ್ಲಿ ಒಟ್ಟು ಎರಡು ರಾಂಕ್ ಗಳು ಲಭಿಸಿದ್ದು ಎಂ.ಕಾಂ ವಿಭಾಗದಲ್ಲಿ ಪವನ್ ರಾಜ್ (9.05 ಸಿಜಿಪಿಎ) ಪ್ರಥಮ ರ್ಯಾಂಕ್( ರಘು ಮತ್ತು ಸುನಿತಾ ದಂಪತಿ ಪುತ್ರ), ಹಾಗೂ ಎಂ. ಎ ಜೆ ಎಂ ಸಿ ಯಲ್ಲಿ ಪಂಚಮಿ ಕುಮಾರಿ. ಬಿ (8.09 ಸಿಜಿಪಿಎ) ಪ್ರಥಮ ರ್ಯಾಂಕ್ ( ವೆಂಕಟರಮಣ ಭಟ್ ಬಿ ಮತ್ತು ಗುಣಶ್ರೀ ದಂಪತಿಯ ಪುತ್ರಿ) ಪಡೆದುಕೊಂಡಿರುತ್ತಾರೆ ಎಂದು ಕಾಲೇಜಿನ ಪ್ರಾಚಾರ್ಯ ಶ್ರೀಕೃಷ್ಣ ಗಣರಾಜ ಭಟ್ ಎಸ್ ಮತ್ತು ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಪ್ರಕಾಶ್ ಕುಮಾರ್ ಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಸ್ಥಳೀಯ7 hours agoKukke Subrahmanya-ಕುಕ್ಕೆ ಸುಬ್ರಹ್ಮಣ್ಯ: ನದಿಗೆ ಹಾರಿದ ಮಹಿಳೆಗೆ ಮೊಸಳೆ ಕಚ್ಚಿ ಸಿಕ್ಕಿತು ಜೀವದಾನ..! ಸಾಯಲು ಹೋದವಳು ಬದುಕಿ ಬಂದ ವಿಚಿತ್ರ ಘಟನೆ..!
-
ರಾಜಕೀಯ13 hours agoGrihalakshmi-ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಫ್ಟ್: ಒಂದೇ ಬಾರಿಗೆ 3 ಕಂತಿನ ಹಣ ಬಿಡುಗಡೆ..!
-
ಸ್ಥಳೀಯ13 hours agoKadaba-ಕಡಬ: ಆಟೋ ಬಾಡಿಗೆ ಹಣ ಕೇಳಿದ್ದಕ್ಕೆ ಚಾಲಕನ ಮೇಲೆ ಹಲ್ಲೆ
-
ರಾಜಕೀಯ13 hours agoAbdul Al-Sayeed-ಅಮೆರಿಕದ ಸೆನೆಟ್ಗೆ ಭಟ್ಕಳದ ಅಳಿಯ ಅಬ್ದುಲ್ ಅಲ್ ಸಯೀದ್ ಆಯ್ಕೆ..!
-
ಬಿಗ್ ನ್ಯೂಸ್13 hours agoGhee and butter price-ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ..! ತುಪ್ಪ, ಬೆಣ್ಣೆ ದರವೂ ಏರಿಕೆ
-
ಸ್ಥಳೀಯ7 hours agoFertilizer-ಸದ್ದಿಲ್ಲದೆ ರಸಗೊಬ್ಬರ ಧಾರಣೆ ಏರಿಕೆ – ಸ್ಟಾಕ್ ಖಾಲಿ : ಕೃಷಿಕರಿಗೆ ಶಾಕ್
-
ಶಿಕ್ಷಣ12 hours agoVivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿನ ವಿದ್ಯಾರ್ಥಿನಿ ರಾಷ್ಟ್ರಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಗೆ ಆಯ್ಕೆ
-
ಶಿಕ್ಷಣ12 hours agoತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಕನಸುಗಳು 2026 ಕಾರ್ಯಕ್ರಮದಲ್ಲಿ ಹಲವಾರು ಪ್ರಶಸ್ತಿಗಳು


















