Connect with us

ಮಂಗಳೂರು

Mangalore-ಮಂಗಳೂರು: ಬೈಕಂಪಾಡಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 16 ಗೋವುಗಳ ರಕ್ಷಣೆ, ಲಾರಿ ವಶಕ್ಕೆ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು 16 ಗೋವುಗಳನ್ನು ರಕ್ಷಿಸಿದ್ದಾರೆ. ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು 16 ಗೋವುಗಳನ್ನು ರಕ್ಷಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೈಕಂಪಾಡಿ ಪರಿಸರದಲ್ಲಿ KA-19-AB-2715 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ, ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

Ad Widget

Ad Widget <> Ad Widget

ತಕ್ಷಣ ಕಾರ್ಯಾಚರಣೆ ನಡೆಸಿದ ಪಣಂಬೂರು ಪೊಲೀಸರು ಲಾರಿಯಲ್ಲಿದ್ದ 16 ಗೋವುಗಳನ್ನು ರಕ್ಷಿಸಿದ್ದು, ವಾಹನವನ್ನು ವಶಕ್ಕೆ ಪಡೆದಿದ್ದಾರೆ.



Ad Widget

ಮಂಗಳೂರು ಸುತ್ತಮುತ್ತ ಅಕ್ರಮ ಗೋ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Click to comment

Leave a Reply

ಶಿಕ್ಷಣ

Mangalore-ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಮಹಿಳೆಯರ ಕಬಡ್ಡಿ ಪಂದ್ಯಾಟ

Published

on



Ad Widget

Ad Widget

Ad Widget

Ad Widget

ಕಬಡ್ಡಿ ಮಣ್ಣಿನ ಆಟ, ಆದರೆ ಕಾಲಕ್ಕೆ ತಕ್ಕಂತೆ ಪರಿವರ್ತನೆ ಹೊಂದಿ ಮ್ಯಾಟ್ ಅಂಕಣದಲ್ಲಿ ಆಡುವಂತಾಗಿದೆ, ನಿಯಮಗಳೂ ಬದಲಾಗಿದೆ. ಹೀಗಿದ್ದರೂ ಆಟದ ಗುಣಗಳು ಸಂಸ್ಕಾರಗಳು ಬದಲಾಗಿಲ್ಲ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸುಜಿತ್ ಕುಮಾರ್ ಕೊಟ್ಟಾರಿ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಕಬಡ್ಡಿ ಮಣ್ಣಿನ ಆಟ, ಆದರೆ ಕಾಲಕ್ಕೆ ತಕ್ಕಂತೆ ಪರಿವರ್ತನೆ ಹೊಂದಿ ಮ್ಯಾಟ್ ಅಂಕಣದಲ್ಲಿ ಆಡುವಂತಾಗಿದೆ, ನಿಯಮಗಳೂ ಬದಲಾಗಿದೆ. ಹೀಗಿದ್ದರೂ ಆಟದ ಗುಣಗಳು ಸಂಸ್ಕಾರಗಳು ಬದಲಾಗಿಲ್ಲ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸುಜಿತ್ ಕುಮಾರ್ ಕೊಟ್ಟಾರಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆಯುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಮಹಿಳೆಯರ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತಾಡಿದರು. ಶಾರೀರಿಕ ಕ್ಷಮತೆ, ಸಮಯಕ್ಕೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವ ಜಾಣತನ ಕಬಡ್ಡಿಗೆ ಆವಶ್ಯಕ. ಈ ಕ್ರೀಡೆಯಿಂದ ಪರಸ್ಪರ ಹೊಂದಾಣಿಕೆ, ಒಗ್ಗಟ್ಟು, ಮನೋಸ್ಥೈರ್ಯ ಮತ್ತು ನಾಯಕತ್ವ ಗುಣಗಳು ವೃದ್ದಿಸುತ್ತವೆ ಎಂದು ಹೇಳಿದರು. ಎದುರಾಳಿಗೆ ಗೌರವವನ್ನು ನೀಡುತ್ತಾ ಕ್ರೀಡಾಸ್ಪೂರ್ತಿಯಿಂದ ಆಟವನ್ನು ಆನಂದಿಸಿ. ಆಟದ ಸಮಯದಲ್ಲಿ ಗೆಲುವೊಂದೇ ಗುರಿಯಾಗಿರಲಿ ಎಂದರು.

Ad Widget

Ad Widget <> Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ಶುಭ ಹಾರೈಸಿದರು.



Ad Widget

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ, ಕ್ರೀಡಾ ಸಂಯೋಜಕ ಪ್ರೊ.ದಿನೇಶ್ ಪ್ರಸನ್ನ ವಂದಿಸಿದರು. ಮೂಲ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಅನುಪಮಾ.ಟಿ ಕಾರ್ಯಕ್ರಮ ನಿರ್ವಹಿಸಿದರು.

Ad Widget

Ad Widget

ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ ಮಹಿಳೆಯರ 7 ತಂಡಗಳು ಇದರಲ್ಲಿ ಭಾಗವಹಿಸುತ್ತಿವೆ.

Ad Widget
Continue Reading

ಮಂಗಳೂರು

Mangalore-ಮಂಗಳೂರು: ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ಮಹಿಳೆಗೆ 1.30 ಲಕ್ಷ ರೂ. ವಂಚನೆ..!

Published

on



Ad Widget

Ad Widget

Ad Widget

Ad Widget

ಅಮೆಜಾನ್ ಕಸ್ಟಮರ್ ಕೇರ್ ಪ್ರತಿನಿಧಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ ಬರೋಬ್ಬರಿ 1.30 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕುರಿತು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ. 3: ಅಮೆಜಾನ್ ಕಸ್ಟಮರ್ ಕೇರ್ ಪ್ರತಿನಿಧಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ ಬರೋಬ್ಬರಿ 1.30 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕುರಿತು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದೂರುದಾರ ಮಹಿಳೆ ಅಕ್ಟೋಬರ್ 21ರಂದು ಅಮೆಜಾನ್ ಆ್ಯಪ್ ಮೂಲಕ ಸೀಲಿಂಗ್ ಫ್ಯಾನ್ ಬುಕ್ ಮಾಡಿ, ಗೂಗಲ್ ಪೇ ಮೂಲಕ 7,903 ರೂ. ಪಾವತಿಸಿದ್ದರು. ಆದರೆ ಬಳಿಕ ಆರ್ಡರ್ ರದ್ದಾಗಿರುವ ಬಗ್ಗೆ ಆ್ಯಪ್‌ನಲ್ಲಿ ಮಾಹಿತಿ ಲಭ್ಯವಾಗಿತ್ತು. ಆದರೂ ಪಾವತಿಸಿದ ಹಣ ಮರುಪಾವತಿಯಾಗಿರಲಿಲ್ಲ.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಮಹಿಳೆ ಗೂಗಲ್‌ನಲ್ಲಿ ಅಮೆಜಾನ್ ಕಸ್ಟಮರ್ ಕೇರ್ ಹೆಲ್ಪ್‌ಲೈನ್ ನಂಬರ್ ಹುಡುಕಿ ಕರೆ ಮಾಡಿದ್ದಾರೆ. ಮೊದಲ ಬಾರಿ ಕರೆ ಕಡಿತಗೊಂಡಿದ್ದು, ಬಳಿಕ ಅದೇ ನಂಬರ್‌ನಿಂದ ಮಹಿಳೆಗೆ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ತಾನು ಅಮೆಜಾನ್ ಕಸ್ಟಮರ್ ಕೇರ್ ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದಾನೆ.



Ad Widget

ಆರ್ಡರ್ ರದ್ದಾಗಿರುವುದರಿಂದ ಹಣ ಮರುಪಾವತಿಸಲು ಗೂಗಲ್ ಪೇ ಐಡಿ ರಚಿಸಬೇಕು ಎಂದು ಆತ ಮಹಿಳೆಗೆ ತಿಳಿಸಿದ್ದಾನೆ. ಇದನ್ನು ನಂಬಿದ ಮಹಿಳೆಯ ಖಾತೆಯಿಂದ ಆಕೆಗೆ ತಿಳಿಯದಂತೆ 80 ಸಾವಿರ ರೂ.ಗಳನ್ನು ವಂಚಕ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ ಎನ್ನಲಾಗಿದೆ.

Ad Widget

Ad Widget

ಇದಲ್ಲದೆ, ಐಎಂಪಿಎಸ್ ಮೂಲಕ ಮತ್ತಷ್ಟು 50 ಸಾವಿರ ರೂ. ಸ್ವಯಂಚಾಲಿತವಾಗಿ ವರ್ಗಾವಣೆಯಾಗಿದೆ. ಈ ಮೂಲಕ ಹಣ ಮರುಪಾವತಿ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿ ಒಟ್ಟು 1.30 ಲಕ್ಷ ರೂ.ಗಳನ್ನು ಆನ್‌ಲೈನ್ ಮೂಲಕ ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಂಚನೆ ನಡೆಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ad Widget
Continue Reading

ಮಂಗಳೂರು

Suratkal-ಸುರತ್ಕಲ್ ಸೋಮನಾಥ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ವರ್ಗಾವಣೆ

Published

on



Ad Widget

Ad Widget

Ad Widget

Ad Widget

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸೋಮನಾಥ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿ ಕರ್ನಾಟಕ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರಾಗಿರುವ ಡಾ. ಎಂ.ಎ. ಸಲೀಂ ಮಂಗಳವಾರ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸೋಮನಾಥ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿ ಕರ್ನಾಟಕ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರಾಗಿರುವ ಡಾ. ಎಂ.ಎ. ಸಲೀಂ ಮಂಗಳವಾರ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸೋಮನಾಥ ಅವರ ಆತ್ಮಹತ್ಯೆ ಪ್ರಕರಣ, ಹಲ್ಲೆಗೀಡಾಗಿದ್ದ ದೆಹಲಿ ಮೂಲದ ಮಹಿಳೆ ನೀಡಿದ್ದ ಪ್ರಕರಣ ಹಾಗೂ ಮೃತ ಸೋಮನಾಥ ಅವರ ಪತ್ನಿ ಪೊಲೀಸ್ ದೌರ್ಜನ್ಯ ಕಾರಣ ಎಂದು ಆರೋಪಿಸಿ ನೀಡಿದ್ದ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

Ad Widget

Ad Widget <> Ad Widget

ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ: 142/2026, ಅಪರಾಧ ಸಂಖ್ಯೆ: 145/2026, ಯು.ಡಿ.ಆರ್. (UDR) ಸಂಖ್ಯೆ: 49/2026ಗಳಡಿಯ ಮುಂದಿನ ವಿಚಾರಣೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಲಾಗಿದೆ. ಈ ಸಂಬಂಧಪಟ್ಟಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಸಂಬಂಧಪಟ್ಟ ತನಿಖಾಧಿಕಾರಿಗಳಲ್ಲಿರುವ ಪ್ರಕರಣದ ಕಡತಗಳನ್ನು ಸಿ.ಐ.ಡಿ.ಯ ತನಿಖಾಧಿಕಾರಿಗೆ ಖುದ್ದಾಗಿ ಹಸ್ತಾಂತರಿಸಬೇಕು ಎಂದು ಸೂಚಿಸಿದ್ದಾರೆ.



Ad Widget

ಘಟನೆ ಹಿನ್ನೆಲೆ:
ಅಕ್ಟೋಬರ್ 25ರಂದು ರಾತ್ರಿ ಸುಮಾರು 11 ಗಂಟೆಗೆ ದೆಹಲಿ ಮೂಲದ ಮಹಿಳೆಯೊಬ್ಬರು ಹಾಗೂ ಕೇರಳ ಮೂಲದ ಯುವಕನೊಬ್ಬ ಹೊಸಬೆಟ್ಟು ಬೀಚ್‌ಗೆ ತೆರಳಿದ್ದ ಸಂದರ್ಭದಲ್ಲಿ ಸೋಮನಾಥ್ ಮತ್ತಿತರರು ಅವರನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Ad Widget

Ad Widget

ದೂರಿನ ಆಧಾರದ ಮೇಲೆ ಪೊಲೀಸರು ಅದೇ ರಾತ್ರಿ ಸೋಮನಾಥ್ ಅವರನ್ನು ಠಾಣೆಗೆ ಕರೆತಂದು ನೋಟಿಸ್ ನೀಡಿ ಕಳುಹಿಸಿದ್ದರು ಎನ್ನಲಾಗಿದೆ.

ಇದಾದ ಎರಡು ದಿನಗಳ ಬಳಿಕ, ಅಕ್ಟೋಬರ್ 27ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಸೋಮನಾಥ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪೊಲೀಸರು ಠಾಣೆಗೆ ಕರೆಸಿ ದೌರ್ಜನ್ಯ ನಡೆಸಿದ ಪರಿಣಾಮ ಸೋಮನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಅಂದು ರಾತ್ರಿ ಅವರ ಮೃತದೇಹವನ್ನು ಹೆದ್ದಾರಿಯಲ್ಲಿಟ್ಟು ಹೊಸಬೆಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ದೆಹಲಿ ಮೂಲದ ಮಹಿಳೆ ಸುಳ್ಳು ದೂರು ನೀಡಿದ್ದಾರೆ ಎಂದು ಆರೋಪಿಸಿದ್ದ ಪ್ರತಿಭಟನಾಕಾರರು, ಅವರ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ಸೋಮನಾಥ್ ಅವರ ಪತ್ನಿ ದೆಹಲಿ ಮೂಲದ ಮಹಿಳೆಯ ವಿರುದ್ಧ ದೂರು ದಾಖಲಿಸಿದ್ದರು.

ಇದೀಗ ಸೋಮನಾಥ್ ಆತ್ಮಹತ್ಯೆ ಪ್ರಕರಣ ಸೇರಿದಂತೆ ಘಟನೆಗೆ ಸಂಬಂಧಿಸಿದ ಮೂರು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ಮುಂದಿನ ತನಿಖೆ ಸಿಐಡಿ ಅಧಿಕಾರಿಗಳಿಂದ ನಡೆಯಲಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!