ಬಿಗ್ ನ್ಯೂಸ್
Savanuru Seetharama Rai-ಡಾ. ವೀರೇಂದ್ರ ಹೆಗ್ಗಡೆಯವರಿಗೆ ಸವಣೂರು ಸೀತಾರಾಮ ರೈ ಅವರಿಂದ ಗೌರವಾಭಿನಂದನೆ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 59ನೇ ಪಟ್ಟಾಭಿಷೇಕ ವರ್ಧಂತಿಯ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ರೊ. ಸವಣೂರು ಸೀತಾರಾಮ ರೈ ಕೆ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಗೌರವಾಭಿನಂದನೆ ಸಲ್ಲಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 59ನೇ ಪಟ್ಟಾಭಿಷೇಕ ವರ್ಧಂತಿಯ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ರೊ. ಸವಣೂರು ಸೀತಾರಾಮ ರೈ ಕೆ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಗೌರವಾಭಿನಂದನೆ ಸಲ್ಲಿಸಿದರು.
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 59ನೇ ಪಟ್ಟಾಭಿಷೇಕ ವರ್ಧಂತಿಯ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ರೊ. ಸವಣೂರು ಸೀತಾರಾಮ ರೈ ಕೆ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಗೌರವಾಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಜತ ಮಹೋತ್ಸವದ ಸಂಭ್ರಮದಲ್ಲಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ನಿ., ದರ್ಬೆ, ಪುತ್ತೂರು ಇದರ ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೇಂದ್ರ ಕಚೇರಿ, ಸವಣೂರು ಶಾಖೆ ಹಾಗೂ ವಾಣಿಜ್ಯ ಸಂಕೀರ್ಣಗಳ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ನೀಡಲಾಯಿತು.
ಅಲ್ಲದೆ, ವಿದ್ಯಾರಶ್ಮಿ ವಿದ್ಯಾಲಯದ ರಜತ ಮಹೋತ್ಸವದ ಅಂಗವಾಗಿ ಹೊರತರಲಾಗುತ್ತಿರುವ ಸ್ಮರಣ ಸಂಚಿಕೆಗೆ ಶುಭಾಶಯ ಸಂದೇಶ ನೀಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ರಾಮಯ್ಯ ರೈ ಎನ್., ರಶ್ಮಿ ರೈ ಎಸ್., ಮಹಾಪ್ರಬಂಧಕರಾದ ವಸಂತ ಜಾಲಾಡಿ, ಸಹಾಯಕ ಮಹಾಪ್ರಬಂಧಕರಾದ ಸುನಾದ್ ರಾಜ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಶಶಿಕಲಾ ಎಸ್. ಆಳ್ವ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜಲಕ್ಷ್ಮೀ ಎಸ್. ರೈ, ಸಂಘದ ಉಜಿರೆ ಶಾಖೆಯ ವ್ಯವಸ್ಥಾಪಕರಾದ ವಾಣಿಶ್ರೀ ಬಿ.ಎಲ್. ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Bus-ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ: ಇಂದು ಮಧ್ಯರಾತ್ರಿಯಿಂದ ಹೊಸ ದರ ಜಾರಿ; ಎಲ್ಲೆಲ್ಲಿ ಎಷ್ಟು ಹೆಚ್ಚಳ?
ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ. ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಕೆಎಸ್ಸಾರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರದಲ್ಲಿ ಬದಲಾವಣೆ ಮಾಡಲಾಗಿದೆ.
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ. ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಕೆಎಸ್ಸಾರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರದಲ್ಲಿ ಬದಲಾವಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು, ಕಳೆದ 10 ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಕೇವಲ ಒಂದು ಬಾರಿ ಮಾತ್ರ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. 2025ರಲ್ಲಿಯೂ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಇದೀಗ ಕೆಎಸ್ಸಾರ್ಟಿಸಿಯಲ್ಲಿ ಟಿಕೆಟ್ ದರದಲ್ಲಿ 9 ರೂ.ವರೆಗೆ ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಒಟ್ಟು 26,125 ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ. ಸಾರಿಗೆ ಸಂಸ್ಥೆಗಳಲ್ಲಿ 1,03,646 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರತಿದಿನ 24,179 ಮಾರ್ಗಗಳಲ್ಲಿ ಬಸ್‌ಗಳು ಸಂಚರಿಸುತ್ತಿವೆ. ದಿನನಿತ್ಯ 1.24 ಕೋಟಿ ಪ್ರಯಾಣಿಕರಿಗೆ ಸಾರಿಗೆ ಸೇವೆ ಒದಗಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದೆ ಎಂಬ ನಿರ್ಧಾರವನ್ನು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿತ್ತು. ಅದರಂತೆ ಇದೀಗ ದರ ಪರಿಷ್ಕರಣೆ ಮಾಡಲಾಗಿದೆ.
ಮಂಗಳೂರು
Mangalore-ಮಂಗಳೂರು: ಬೈಕಂಪಾಡಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 16 ಗೋವುಗಳ ರಕ್ಷಣೆ, ಲಾರಿ ವಶಕ್ಕೆ
ಮಂಗಳೂರು ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು 16 ಗೋವುಗಳನ್ನು ರಕ್ಷಿಸಿದ್ದಾರೆ. ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು: ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು 16 ಗೋವುಗಳನ್ನು ರಕ್ಷಿಸಿದ್ದಾರೆ.
ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೈಕಂಪಾಡಿ ಪರಿಸರದಲ್ಲಿ KA-19-AB-2715 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ, ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಕಾರ್ಯಾಚರಣೆ ನಡೆಸಿದ ಪಣಂಬೂರು ಪೊಲೀಸರು ಲಾರಿಯಲ್ಲಿದ್ದ 16 ಗೋವುಗಳನ್ನು ರಕ್ಷಿಸಿದ್ದು, ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಸುತ್ತಮುತ್ತ ಅಕ್ರಮ ಗೋ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಬಿಗ್ ನ್ಯೂಸ್
Likhith Ramachandra-ಈಜು ಸ್ಪರ್ಧೆಯಲ್ಲಿ ಸಾಧನೆ : ವಿವೇಕಾನಂದ ಆ.ಮಾ.ಶಾಲೆಯ ಲಿಖಿತ್ ರಾಮಚಂದ್ರಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ರಾಮಚಂದ್ರಗೆ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ 2026ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಪುತ್ತೂರು; ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ರಾಮಚಂದ್ರಗೆ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ 2026ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಈತ ತನ್ನ 4ನೇ ವಯಸ್ಸಿನಲ್ಲಿಯೇ ಈಜು ತರಬೇತಿಯನ್ನು ಆರಂಭಿಸಿ, ಕಳೆದ ಹನ್ನೊಂದು ವರ್ಷಗಳಿಂದ ಸತತ ಅಭ್ಯಾಸ ಹಾಗೂ ಪರಿಶ್ರಮದ ಮೂಲಕಕ್ರೀಡಾಕ್ಷೇತ್ರದಲ್ಲಿ ವಿಶಿಷ್ಟಸಾಧನೆ ಮಾಡಿದ್ದಾರೆ.
ಪರ್ಲಡ್ಕ ಡಾ. ಶಿವರಾಮ ಕಾರಂತ ಬಾಲವನದ ಈಜುಕೊಳದಲ್ಲಿ ಈಜು ತರಬೇತಿ ಪಡೆದಿರುವ ಲಿಖಿತ್, ಇದುವರೆಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಸ್ಪರ್ಧೆಗಳನ್ನು ಒಳಗೊಂಡಂತೆ 100ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 182 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ, ನಾಲ್ಕು ಪ್ರಮುಖ ಚಾಂಪಿಯನ್‌ಶಿಪ್ ಪ್ರಶಸ್ತಿಗಳನ್ನು ಗೆದ್ದಿರುವುದು ಅವರ ಕ್ರೀಡಾ ಪ್ರತಿಭೆಗೆ ಸಾಕ್ಷಿಯಾಗಿದೆ. ಇವರ ಸಾಧನೆಗಳಲ್ಲಿ 13ನೇ ವಯಸ್ಸಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಲೈಫ್ ಸೇವಿಂಗ್ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯ ಚಾಂಪಿಯನ್ ಆಗಿರುವುದು ವಿಶೇಷವಾಗಿದೆ.
ಇವರು ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ರಾಮಚಂದ್ರ ಎ. ಹಾಗೂ ದೀಪಾರಾಣಿ ದಂಪತಿಯ ಪುತ್ರ.
-
ಉಡುಪಿ10 hours agoPradeep Poojari-ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣ: ಮಧ್ಯಪ್ರದೇಶದಲ್ಲಿ ಇಬ್ಬರು ವಶಕ್ಕೆ
-
ಅಪರಾಧ12 hours agoSting case-ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು: ಕೇರಳದ ಸಂತ್ರಸ್ತೆಗೆ 4 ಲಕ್ಷ ರೂ. ಆಮಿಷ?
-
ಅಂತರ ರಾಜ್ಯ10 hours agoPunjab-ಪಂಜಾಬ್ನಲ್ಲಿ ಆಪ್ಗೆ ಭಾರೀ ಹಿನ್ನಡೆ ಸಾಧ್ಯತೆ? ಬಿಜೆಪಿ, ಕಾಂಗ್ರೆಸ್ಗೆ ಸಮಬಲದ ಮುನ್ನಡೆ: ಸಮೀಕ್ಷೆಯಲ್ಲಿ ಅಚ್ಚರಿಯ ಫಲಿತಾಂಶ..!
-
Uncategorized23 hours ago
ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ 120 ಎಕರೆ ಜಮೀನು ಕಾಯ್ದಿರಿಸಲು ಡಿಸಿಗೆ ಮನವಿ
-
ಮಂಗಳೂರು10 hours agoSuratkal-ಸುರತ್ಕಲ್ ಸೋಮನಾಥ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ವರ್ಗಾವಣೆ
-
ಅಂತರ ರಾಜ್ಯ9 hours agoMurasu-ಬಂಗಾಳ ಕೊಲ್ಲಿಯಲ್ಲಿ ‘ಮುರಸು’ ಚಂಡಮಾರುತದ ಆತಂಕ: ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ; 19 ವಿಮಾನಗಳ ಹಾರಾಟ ರದ್ದು
-
ರಾಜಕೀಯ11 hours agoBettampadi-ಬೆಟ್ಟಂಪಾಡಿಯಲ್ಲಿ ಅಕ್ರಮ-ಸಕ್ರಮ, ಬಗರ್ ಹುಕುಂ ಬೈಠಕ್: 2,500 ಅರ್ಜಿಗಳ ವಿಲೇವಾರಿ; 6 ತಿಂಗಳಲ್ಲಿ ಕುಡಿಯುವ ನೀರಿನ ಯೋಜನೆ ಪೂರ್ಣ – ಅಶೋಕ್ ರೈ
-
ಬಿಗ್ ನ್ಯೂಸ್6 hours agoPuttur-ಟೀಮ್ ಮಾತೆರ್ಲ ಒಂಜೇ ಪುತ್ತೂರು ಸಂಘಟನೆಗೆ ನೂತನ ಪದಾಧಿಕಾರಿಗಳ ಆಯ್ಕೆ: ಮನ್ಮಥ ಶೆಟ್ಟಿ ಅಧ್ಯಕ್ಷರಾಗಿ, ರಾಜೇಶ್ ಎಂ ಕುಲಾಲ್ ಕಾರ್ಯದರ್ಶಿಯಾಗಿ, ಹರೀಶ್ ಮಂಜೊಟ್ಟಿ ಕೋಶಾಧಿಕಾರಿಯಾಗಿ ಆಯ್ಕೆ






















