ಕ್ರೈಂ
Bangalore-ಬೆಂಗಳೂರಿನಲ್ಲಿ ಭೀಕರ ಸಾಮೂಹಿಕ ಹತ್ಯೆ: ಪತ್ನಿ ಸಹಿತ ಕುಟುಂಬದ 7 ಮಂದಿಯನ್ನು ರುಬ್ಬುಗುಂಡಿನಿಂದ ಜಜ್ಜಿ ಕೊಂದ ಕ್ಯಾಬ್ ಚಾಲಕ..!
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಹಾಗೂ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಜಜ್ಜಿ ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್‌ನನ್ನು ರಾಜಾಜಿನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಹಾಗೂ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಜಜ್ಜಿ ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್‌ನನ್ನು ರಾಜಾಜಿನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಹತ್ಯೆಯಾದವರನ್ನು ಆರೋಪಿಯ ಪತ್ನಿ ಸುನೀತಾ, ಆಕೆಯ ತಾಯಿ ರೂಪಾವತಿ, ಸಹೋದರರಾದ ಶಿವಕುಮಾರ್ ಮತ್ತು ಶಂಕರ್, ರೂಪಾವತಿಯವರ ಸೊಸೆಯಂದಿರಾದ ದಿವ್ಯಾ ಮತ್ತು ನಳಿನಿ ಹಾಗೂ ಶಿವಕುಮಾರ್ ಅವರ ಏಳು ವರ್ಷದ ಪುತ್ರ ಪುನೀತ್ ಎಂದು ಗುರುತಿಸಲಾಗಿದೆ.
20 ವರ್ಷಗಳ ದಾಂಪತ್ಯದಲ್ಲಿ ಬಿರುಕು
ಶೇಖರ್ ಸುಮಾರು 20 ವರ್ಷಗಳ ಹಿಂದೆ ಸುನೀತಾ ಅವರನ್ನು ವಿವಾಹವಾಗಿದ್ದ. ಇತ್ತೀಚಿನ ದಿನಗಳಲ್ಲಿ ದಂಪತಿ ನಡುವೆ ವೈವಾಹಿಕ ಕಲಹ ತೀವ್ರಗೊಂಡಿತ್ತು ಎನ್ನಲಾಗಿದೆ. ಪ್ರತಿ ಬಾರಿ ಜಗಳ ಉಂಟಾದಾಗ ಸುನೀತಾ ಅವರ ಕುಟುಂಬಸ್ಥರು ಮಧ್ಯಪ್ರವೇಶಿಸಿ ಸಂಧಾನ ನಡೆಸುತ್ತಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಶೇಖರ್, ಪತ್ನಿಯ ಕುಟುಂಬದವರು ತಮ್ಮ ವೈವಾಹಿಕ ಜೀವನದಲ್ಲಿ ಅತಿಯಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಭಾವಿಸಿದ್ದ. ಇದೇ ಕಾರಣಕ್ಕೆ ಇಡೀ ಕುಟುಂಬವನ್ನೇ ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಾರ್ಟಿ ನೆಪದಲ್ಲಿ ಕರೆಸಿ ಹತ್ಯೆ
ರಾಜಾಜಿನಗರದ ಭಾಷ್ಯಂ ವೃತ್ತದ ಸಮೀಪದ ತನ್ನ ಮನೆಗೆ ಪತ್ನಿಯ ಕುಟುಂಬದವರನ್ನು ಒಬ್ಬೊಬ್ಬರಾಗಿ ಕರೆಸಿಕೊಂಡು ಆರೋಪಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಪಾರ್ಟಿ ಮಾಡುವ ನೆಪದಲ್ಲಿ ಬಾಮೈದಂದಿರನ್ನು ಮನೆಗೆ ಕರೆಸಿಕೊಂಡು, ಬಳಿಕ ಪತ್ನಿ, ಅತ್ತೆ ಹಾಗೂ ಕುಟುಂಬದ ಇತರ ಸದಸ್ಯರನ್ನು ರುಬ್ಬುಗುಂಡಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ.
ಹತ್ಯೆಯ ಬಳಿಕ ಮನೆಯಲ್ಲಿದ್ದ ರಕ್ತದ ಕಲೆಗಳನ್ನು ರಾಸಾಯನಿಕ ಬಳಸಿ ಸ್ವಚ್ಛಗೊಳಿಸಿದ್ದಲ್ಲದೆ, ಕೃತ್ಯಕ್ಕೆ ಬಳಸಿದ್ದ ರುಬ್ಬುಗುಂಡನ್ನೂ ತೊಳೆದು ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಾಪತ್ತೆ ಪ್ರಕರಣದ ತನಿಖೆಯಲ್ಲಿ ಬಯಲಾದ ಸಾಮೂಹಿಕ ಹತ್ಯೆ
ಶಂಕರ್ ಅವರ ಪತ್ನಿ ನಳಿನಿ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ರೂಪಾವತಿ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಶೇಖರ್‌ನ ವರ್ತನೆಯ ಮೇಲೆ ಅನುಮಾನ ಮೂಡಿತ್ತು. ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಏಳು ಮಂದಿಯ ಹತ್ಯೆಯ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ನಂದಿ ಬೆಟ್ಟದ ಬಳಿ ಬಾಲಕನ ಮೃತದೇಹ ಪತ್ತೆ
ಹತ್ಯೆಗೈದ ಬಳಿಕ ಮೃತದೇಹಗಳನ್ನು ಕಾರಿನಲ್ಲಿ ಸಾಗಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ಸುತ್ತಮುತ್ತ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಎಸೆದಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಗುರುವಾರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಏಳು ವರ್ಷದ ಬಾಲಕ ಪುನೀತ್‌ನ ಮೃತದೇಹ ನಂದಿ ಬೆಟ್ಟದ ಸಮೀಪ ಪತ್ತೆಯಾಗಿದೆ. ಉಳಿದವರ ಮೃತದೇಹಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಸ್ಥಳೀಯ
Arrested-ಬಿಸಿಲೆ ಘಾಟಿಯಲ್ಲಿ ಗರ್ಭಿಣಿ ಯುವತಿಯ ಕೊಲೆಗೆ ಯತ್ನ? ಹಲ್ಲೆ ನಡೆಸಿ ಚರಂಡಿಗೆ ಎಸೆದ ಪ್ರಿಯಕರ ಅರೆಸ್ಟ್
ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ ಗರ್ಭಿಣಿ ಯುವತಿಯೊಬ್ಬಳನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ ನಡೆಸಿ, ಮೃತಪಟ್ಟಿದ್ದಾಳೆಂದು ಭಾವಿಸಿ ಚರಂಡಿಗೆ ಎಸೆದು ಪರಾರಿಯಾದ ಘಟನೆ ನವೆಂಬರ್ 4ರಂದು ವರದಿಯಾಗಿದೆ.
ಕಡಬ: ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ ಗರ್ಭಿಣಿ ಯುವತಿಯೊಬ್ಬಳನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ ನಡೆಸಿ, ಮೃತಪಟ್ಟಿದ್ದಾಳೆಂದು ಭಾವಿಸಿ ಚರಂಡಿಗೆ ಎಸೆದು ಪರಾರಿಯಾದ ಘಟನೆ ನವೆಂಬರ್ 4ರಂದು ವರದಿಯಾಗಿದೆ.
ಕಡಬ ತಾಲೂಕಿನ ಕೊಣಾಜೆ ಗ್ರಾಮದ ಯುವಕ ಹಾಗೂ ಕೊಂಬಾರು ಗ್ರಾಮದ ಯುವತಿಯ ನಡುವೆ ಪ್ರೇಮ ಸಂಬಂಧವಿತ್ತು ಎನ್ನಲಾಗಿದೆ. ನವೆಂಬರ್ 4ರ ಸಂಜೆ ಇಬ್ಬರೂ ಬಿಸಿಲೆ ಘಾಟಿಗೆ ತೆರಳಿದ್ದರು. ಈ ವೇಳೆ ಯುವಕ ಯುವತಿಯ ಮೇಲೆ ಹಲ್ಲೆ ನಡೆಸಿ, ಆಕೆ ಪ್ರಜ್ಞೆ ತಪ್ಪಿದ ಬಳಿಕ ಮೃತಪಟ್ಟಿದ್ದಾಳೆಂದು ಭಾವಿಸಿ ಕಾಡಿನ ಮಧ್ಯೆ ಇರುವ ಚರಂಡಿಗೆ ಎಸೆದು ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಗಂಭೀರ ಸ್ಥಿತಿಯಲ್ಲಿದ್ದ ಯುವತಿ ರಾತ್ರಿಯಿಡೀ ಕಾಡಿನ ನಡುವೆ ಚರಂಡಿಯಲ್ಲೇ ಕಳೆದಿದ್ದಾಳೆ. ಮರುದಿನ ಬೆಳಗ್ಗೆ ಅಲ್ಲಿಂದ ಹೊರಬಂದ ಯುವತಿ ಬಸ್ ಮೂಲಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾಳೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡ ಸುಬ್ರಹ್ಮಣ್ಯ ಪೊಲೀಸರು, ಆರೋಪಿ ಪ್ರಸಾದ್ ಎಂಬಾತನನ್ನು ನವೆಂಬರ್ 5ರಂದು ಸುಬ್ರಹ್ಮಣ್ಯದಲ್ಲಿನ ಆತ ಕೆಲಸ ಮಾಡುತ್ತಿದ್ದ ವಸತಿಗೃಹದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಯಸಳೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿ ಯುವಕನಿಗೆ ಬೇರೆ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಯುವತಿಯೂ ಸುಬ್ರಹ್ಮಣ್ಯದಲ್ಲಿ ಖಾಸಗಿ ಉದ್ಯೋಗದಲ್ಲಿದ್ದಳು ಎನ್ನಲಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಕಡಬ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Murder case-ಬೆಂಗಳೂರಿನಲ್ಲಿ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ಕಾಡಿನಲ್ಲಿ 7 ವರ್ಷದ ಬಾಲಕನ ಮೃತದೇಹ ಪತ್ತೆ – ಉಳಿದವರಿಗಾಗಿ ಶೋಧ : ಬಾಲಕನಿಂದ ಮಹತ್ವದ ಸುಳಿವು : ಕೃತ್ಯಕ್ಕೆ ಆರೋಪಿಯ 17 ವರ್ಷದ ಮಗಳ ಸಾಥ್..!
ಪತ್ನಿಯೊಂದಿಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಏಳು ಮಂದಿಯನ್ನು ಹತ್ಯೆಗೈದಿರುವ ಆರೋಪ ಎದುರಿಸುತ್ತಿರುವ ಇಂದುಶೇಖರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ತೀವ್ರಗೊಂಡಿದೆ. ಆರೋಪಿಯ ಮರ್ಡರ್ ಪ್ಲ್ಯಾನ್ ಹಾಗೂ ಮೃತದೇಹಗಳನ್ನು ವಿಲೇವಾರಿ ಮಾಡಿದ ರೀತಿಯ ಬಗ್ಗೆ ಆತನ ಸಂಬಂಧಿಕನಾದ 13 ವರ್ಷದ ಬಾಲಕ ಪೊಲೀಸರಿಗೆ ಮಹತ್ವದ ಮಾಹಿತಿ ನೀಡಿದ್ದಾನೆ.
ಬೆಂಗಳೂರು: ಪತ್ನಿಯೊಂದಿಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಏಳು ಮಂದಿಯನ್ನು ಹತ್ಯೆಗೈದಿರುವ ಆರೋಪ ಎದುರಿಸುತ್ತಿರುವ ಇಂದುಶೇಖರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ತೀವ್ರಗೊಂಡಿದೆ. ಆರೋಪಿಯ ಮರ್ಡರ್ ಪ್ಲ್ಯಾನ್ ಹಾಗೂ ಮೃತದೇಹಗಳನ್ನು ವಿಲೇವಾರಿ ಮಾಡಿದ ರೀತಿಯ ಬಗ್ಗೆ ಆತನ ಸಂಬಂಧಿಕನಾದ 13 ವರ್ಷದ ಬಾಲಕ ಪೊಲೀಸರಿಗೆ ಮಹತ್ವದ ಮಾಹಿತಿ ನೀಡಿದ್ದಾನೆ.
ಪತ್ನಿ ಸುನಿತಾ ತನ್ನೊಂದಿಗೆ ಜಗಳವಾಡುತ್ತಿದ್ದಳು ಎಂಬ ಸಿಟ್ಟಿನಿಂದ ಆಕೆಯ ಕುಟುಂಬದವರನ್ನೇ ಗುರಿಯಾಗಿಸಿಕೊಂಡು ಇಂದುಶೇಖರ್ ಹತ್ಯೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ಪತ್ನಿ, ಅತ್ತೆ, ಪತ್ನಿಯ ಇಬ್ಬರು ಅಣ್ಣಂದಿರು, ಇಬ್ಬರು ಅತ್ತಿಗೆ ಹಾಗೂ ಏಳು ವರ್ಷದ ಮಗನನ್ನು ಹತ್ಯೆಗೈದಿರುವ ಆರೋಪ ಆತನ ಮೇಲಿದೆ. ಈ ಕೃತ್ಯಕ್ಕೆ ಆರೋಪಿಯ 17 ವರ್ಷದ ಮಗಳು ಕೂಡ ಸಹಕರಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.
ಮೃತದೇಹಗಳನ್ನು ಗೋಣಿ ಚೀಲಗಳಲ್ಲಿ ತುಂಬಿ ಸಾಗಾಟ
ಆರೋಪಿಯೊಂದಿಗೆ ಕೆಲವು ದಿನಗಳ ಕಾಲ ಇದ್ದ 13 ವರ್ಷದ ಬಾಲಕ, ಮೃತದೇಹಗಳನ್ನು ಗೋಣಿ ಚೀಲಗಳಲ್ಲಿ ತುಂಬಿ ಕಾರಿನಲ್ಲಿ ಸಾಗಿಸಿದ ಬಗ್ಗೆ ಮಾಹಿತಿ ನೀಡಿದ್ದಾನೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಹಾಗೂ ಶೃಂಗೇರಿ ಸೇರಿದಂತೆ ಹಲವು ಕಡೆಗಳಿಗೆ ಆರೋಪಿಯೊಂದಿಗೆ ತೆರಳಿದ್ದಾಗಿ ಬಾಲಕ ಹೇಳಿದ್ದಾನೆ.
ಗೋಣಿ ಚೀಲಗಳಲ್ಲಿ ಏನೋ ಮುಚ್ಚಿಟ್ಟಿದ್ದು, ಮುಟ್ಟಲು ಹೋದಾಗ ಆರೋಪಿಗಳು ತಡೆದಿದ್ದರು. ಚೀಲಗಳಿಂದ ದುರ್ವಾಸನೆ ಬರುತ್ತಿತ್ತು. ಕಾರಿನ ಡಿಕ್ಕಿ ತೆರೆದಾಗ ಬೈದು ಮುಚ್ಚಿಸಿದ್ದರು. ಬಳಿಕ ಯಾರೂ ಇಲ್ಲದ ಸ್ಥಳವನ್ನು ಗಮನಿಸಿ ಚೀಲಗಳನ್ನು ಎಸೆದಿದ್ದರು ಎಂದು ಬಾಲಕ ವಿವರಿಸಿದ್ದಾನೆ. ನಾಲ್ಕು ಮೃತದೇಹಗಳಿದ್ದ ಚೀಲಗಳನ್ನು ಎಸೆಯುವುದನ್ನು ಮಾತ್ರ ತಾನು ನೋಡಿರುವುದಾಗಿ ತಿಳಿಸಿದ್ದಾನೆ.
ಶುಕ್ರವಾರ ರಾತ್ರಿ ತನ್ನ ತಂದೆ-ತಾಯಿ ಮನೆಯಲ್ಲೇ ಇದ್ದರು. ಮರುದಿನ ಬೆಳಗ್ಗೆ ತಂದೆ ಕಾಣಿಸದಿದ್ದಾಗ ತಾಯಿ ಅವರನ್ನು ಹುಡುಕಿಕೊಂಡು ಹೊರಗೆ ಹೋದರು. ತಾನೂ ಹಿಂಬಾಲಿಸಲು ಮುಂದಾದಾಗ ಅಕ್ಕ ತಡೆದು ಮನೆಯೊಳಗೆ ಕರೆದುಕೊಂಡು ಬಂದಳು ಎಂದು ಬಾಲಕ ಹೇಳಿದ್ದಾನೆ. ಆರೋಪಿಯ ಬಳಿ ಕುಟುಂಬದವರ ಮೊಬೈಲ್ ಫೋನ್‌ಗಳೆಲ್ಲ ಇದ್ದವು. ತಂದೆ ಮತ್ತು ಅಕ್ಕ ಗುಸುಗುಸು ಮಾತನಾಡುತ್ತಿದ್ದರು ಎಂದೂ ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ನಂದಿಬೆಟ್ಟದ ಕಾಡಿನಲ್ಲಿ ಬಾಲಕನ ಮೃತದೇಹ ಪತ್ತೆ
ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಚಿಕ್ಕಬಳ್ಳಾಪುರದ ನಂದಿಬೆಟ್ಟದ ರಂಗಪ್ಪ ಸರ್ಕಲ್ ರಸ್ತೆಯ ಎಡಭಾಗದ ಕಾಡಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಏಳು ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದೆ.
ಆರೋಪಿಯನ್ನು ನಂದಿಬೆಟ್ಟಕ್ಕೆ ಕರೆದೊಯ್ದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಅಂಬುಲೆನ್ಸ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಉಳಿದ ಆರು ಮೃತದೇಹಗಳಿಗಾಗಿ ಶೋಧ
ಇಂದುಶೇಖರ್ ನೀಡಿರುವ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಉಳಿದ ಆರು ಮೃತದೇಹಗಳಿಗಾಗಿ ವಿವಿಧ ಪ್ರದೇಶಗಳಲ್ಲಿ ಶೋಧ ಮುಂದುವರಿಸಿದ್ದಾರೆ. ನಂದಿಬೆಟ್ಟದ ಸ್ಕಂದಗಿರಿ ಪ್ರದೇಶದಲ್ಲೂ ಹುಡುಕಾಟ ನಡೆಯುತ್ತಿದೆ. ಅಲ್ಲದೆ, ತಮಿಳುನಾಡಿನ ಸೇಲಂ ಪ್ರದೇಶಕ್ಕೂ ವಿಶೇಷ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ.
ಪ್ರಕರಣದ ಸಂಪೂರ್ಣ ವಿವರ ಹಾಗೂ ಹತ್ಯೆಯ ಹಿಂದಿನ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು
Mangalore LSD Drug Bus: ಬೆಂಗಳೂರು ಟು ಮಂಗಳೂರು ಡ್ರಗ್ಸ್ ನೆಟ್‌ವರ್ಕ್ ಪತ್ತೆ: 9 ಕೇಸ್‌ಗಳ ಆರೋಪಿ ಸಹಿತ ಇಬ್ಬರು ಅಂದರ್ ! ವಿದ್ಯಾರ್ಥಿಗಳೇ ಈ ಖದೀಮರ ಟಾರ್ಗೆಟ್

Mangalore LSD Drug Bust: ಮಂಗಳೂರು: ಕರಾವಳಿ ಭಾಗದಲ್ಲಿ ಮಾದಕವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ನಿಷೇಧಿತ LSD (Lysergic Acid Diethylamide) ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 3 ಲಕ್ಷ ರೂ. ಮೌಲ್ಯದ 100 LSD ಡ್ರಗ್ಸ್ ಸ್ಟ್ರಿಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ನಗರದಿಂದ LSD ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿಗೆ ತಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್ 3ರಂದು ಮಧ್ಯಾಹ್ನ ಮಂಗಳೂರು ನಗರದ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಯಾರು?
ಮಂಗಳೂರು ಅಳಪೆ, ಪಡೀಲ್‌ನ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30) ಹಾಗೂ ಉರ್ವಸ್ಟೋರ್‌ನ ದಡ್ಡಲಕಾಡ್ ನಿವಾಸಿ ಸಿದ್ದಾರ್ಥ ಶೆಟ್ಟಿ (35) ಬಂಧಿತ ಆರೋಪಿಗಳು.
ಆರೋಪಿಗಳಿಂದ ಸುಮಾರು 3 ಲಕ್ಷ ರೂ. ಮೌಲ್ಯದ 100 LSD ಡ್ರಗ್ಸ್ ಸ್ಟ್ರಿಪ್‌ಗಳು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3.35 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದಾರ್ಥ ಶೆಟ್ಟಿ ವಿರುದ್ಧ 9 ಪ್ರಕರಣ!
ಬಂಧಿತ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ ವಿರುದ್ಧ ಈ ಹಿಂದೆ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಇನ್ನು ಸಿದ್ದಾರ್ಥ ಶೆಟ್ಟಿ ವಿರುದ್ಧ ಮಂಗಳೂರಿನ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ ಹಾಗೂ ಗಾಂಜಾ ಮಾರಾಟ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಹಲವರ ಕೈವಾಡದ ಶಂಕೆ; ತನಿಖೆ ಮುಂದುವರಿಕೆ
ಈ ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದಲ್ಲಿ ಮಾದಕವಸ್ತು ಜಾಲದ ವಿರುದ್ಧ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಸೂಚನೆ: ಆರೋಪಿಗಳು ಎಂಬ ಉಲ್ಲೇಖವನ್ನು ತನಿಖಾ ಹಂತದ ಆರೋಪದ ಆಧಾರದಲ್ಲಿ ಬಳಸಲಾಗಿದೆ. ಅಪರಾಧ ಸಾಬೀತಾಗುವವರೆಗೆ ಆರೋಪಿಗಳು ನಿರಪರಾಧಿಗಳೆಂಬ ಕಾನೂನು ತತ್ವ ಅನ್ವಯಿಸುತ್ತದೆ.
-
ನಿಧನ ವಾರ್ತೆ10 hours ago
ಪುತ್ತೂರಿನ ಖ್ಯಾತ ಉದ್ಯಮಿ ಸಂತೋಷ್ ಕುಮಾರ್ ಎ. ನಿಧನ
-
ನಿಧನ ವಾರ್ತೆ15 hours agoSuicide-ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!
-
ಅಪರಾಧ18 hours ago
ಪುತ್ತೂರು : ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
-
ರಾಜಕೀಯ16 hours agoAishwarya Hegde-ಸಿಎಂ ಮುಂದೆಯೇ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಬಿಚ್ಚಿಟ್ಟ ಪುತ್ರಿ ಐಶ್ವರ್ಯಾ ಹೆಗ್ಡೆ..!
-
ಸ್ಥಳೀಯ15 hours agoAddahole-ಅಡ್ಡಹೊಳೆಯಲ್ಲಿ ಕಾರಿನ ಮೇಲೆ ಮಗುಚಿಬಿದ್ದ ಕಂಟೈನರ್ ಲಾರಿ: ದಂಪತಿ, ಮಕ್ಕಳು ಪವಾಡಸದೃಶ ಪಾರು..!
-
ಉಡುಪಿ15 hours agoAnil Kumar-ಬಾಳೆಕುದ್ರು ಶ್ರೀಗಳು ಪರಾರಿಯಾಗಿಲ್ಲ, ವಿಗ್ರಹಗಳೂ ಕಳವಾಗಿಲ್ಲ: ಆಡಳಿತಾಧಿಕಾರಿ ಅನಿಲ್ ಕುಮಾರ್ ಸ್ಪಷ್ಟನೆ
-
ಬಿಗ್ ನ್ಯೂಸ್14 hours agoChatGPT- ಪತ್ನಿಗೆ ಹತ್ಯೆ ಸಂಚು ರೂಪಿಸಲು ಸಲಹೆ ನೀಡಿದ ಆರೋಪ: ಚಾಟ್ಜಿಪಿಟಿ ವಿರುದ್ಧ ಪತಿ ಕಾನೂನು ದಾವೆ..!
-
ಅಂತರ ರಾಜ್ಯ15 hours agoArrested-ನಿವೃತ್ತ ಐಎಎಸ್ ಅಧಿಕಾರಿ ಕೊಲೆ ಪ್ರಕರಣ: ಒಂದು ತಿಂಗಳ ಬಳಿಕ ರೈಲಿನಲ್ಲಿ ಪರಾರಿಯಾಗಿದ್ದ ಕೇರ್ಟೇಕರ್ ಅರೆಸ್ಟ್..!
















