Connect with us

ಸ್ಥಳೀಯ

Uppinangadi-ಉಪ್ಪಿನಂಗಡಿ–ಗುರುವಾಯನಕೆರೆ ರಸ್ತೆ ದುರಸ್ತಿಗೆ ನ .16 ಡೆಡ್ ಲೈನ್ – ತಪ್ಪಿದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಖಡಕ್ ವಾರ್ನಿಂಗ್..!

Published

on



Ad Widget

Ad Widget

Ad Widget

Ad Widget

ಉಪ್ಪಿನಂಗಡಿ–ಗುರುವಾಯನಕೆರೆ ರಾಜ್ಯ ಹೆದ್ದಾರಿಯ ದುಸ್ಥಿತಿಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕುಪ್ಪೆಟ್ಟಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಗುರುವಾರ ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಉಪ್ಪಿನಂಗಡಿ–ಗುರುವಾಯನಕೆರೆ ರಾಜ್ಯ ಹೆದ್ದಾರಿಯ ದುಸ್ಥಿತಿಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕುಪ್ಪೆಟ್ಟಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಗುರುವಾರ ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಲ್ಲೇರಿಯ ತಣ್ಣೀರುವಂತ ಹಾಲು ಉತ್ಪಾದಕರ ಸಹಕಾರ ಸಂಘದ ಎದುರು ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪ್ರತಿಭಟನಾಕಾರರು ಸಾಂಕೇತಿಕ ರಸ್ತೆ ತಡೆ ನಡೆಸಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿವೃತ್ತ ಪೊಲೀಸ್ ಅಧಿಕಾರಿ ಪುಷ್ಪಗಿರಿ ಅನ್ನಿಗೌಡ ಸಮಾವೇಶ ಉದ್ಘಾಟಿಸಿದರು. ಸ್ಥಳೀಯರಾದ ಮುಹಮ್ಮದ್ ಅಲಿ ತುರ್ಕಳಿಕೆ ಪ್ರಮುಖ ಭಾಷಣ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ ಮುಹಮ್ಮದ್ ಅಲಿ ತುರ್ಕಳಿಕೆ, ರಸ್ತೆ ದುರಸ್ತಿ ವಿಚಾರದಲ್ಲಿ ಇನ್ನು ಮುಂದೆ ಯಾವುದೇ ಮೌಖಿಕ ಭರವಸೆಗಳನ್ನು ಸ್ವೀಕರಿಸುವುದಿಲ್ಲ. ಇದು ಸರ್ಕಾರಕ್ಕೆ ಮತ್ತೊಂದು ಮನವಿ ಸಲ್ಲಿಸುವ ಕಾರ್ಯಕ್ರಮವಲ್ಲ; ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ನೀಡುತ್ತಿರುವ ಅಂತಿಮ ಎಚ್ಚರಿಕೆ ಎಂದು ಹೇಳಿದರು.



Ad Widget

ನವೆಂಬರ್ 16ರೊಳಗೆ ರಸ್ತೆ ದುರಸ್ತಿ ಕಾಮಗಾರಿ ಆರಂಭವಾಗದಿದ್ದರೆ ಕಚೇರಿ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಇನ್ನು ಮನವಿ ಸಲ್ಲಿಸುವುದಾಗಲಿ, ಮೌಖಿಕ ಭರವಸೆಗಳನ್ನು ನಂಬುವುದಾಗಲಿ ಇಲ್ಲ. ನಿಗದಿತ ಗಡುವಿನೊಳಗೆ ಕಾಮಗಾರಿ ಆರಂಭಿಸುವುದೇ ನಮ್ಮ ಪ್ರಮುಖ ಬೇಡಿಕೆ ಎಂದು ಎಚ್ಚರಿಸಿದರು.

Ad Widget

Ad Widget

ಉಪ್ಪಿನಂಗಡಿ–ಗುರುವಾಯನಕೆರೆ ರಾಜ್ಯ ಹೆದ್ದಾರಿಯು ಹೊಂಡ-ಗುಂಡಿಗಳಿಂದ ಕೂಡಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಹದಗೆಟ್ಟಿರುವುದರಿಂದ ಅಪಾಯದ ನಡುವೆಯೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಕೂಡಲೇ ದುರಸ್ತಿ ಕಾಮಗಾರಿ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನವೆಂಬರ್ 16ರ ಗಡುವಿನೊಳಗೆ ಕಾಮಗಾರಿ ಆರಂಭಿಸದಿದ್ದರೆ ಮುಂದಿನ ಹಂತದಲ್ಲಿ ರಸ್ತೆ ಬಂದ್ ಸೇರಿದಂತೆ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಕುಪ್ಪೆಟ್ಟಿ ನಾಗರಿಕ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.

Ad Widget
Click to comment

Leave a Reply

ದಕ್ಷಿಣ ಕನ್ನಡ

ಪುತ್ತೂರಿನಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 8ರಂದು ದೀಪಾವಳಿ ಹಬ್ಬ – ನ. 9 ರಂದು ಸಾಮೂಹಿಕ ಗೋ ಪೂಜೆ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.8ರಂದು (ಭಾನುವಾರ) ರಾತ್ರಿ 7.30ಕ್ಕೆ ಶ್ರೀ ದೇವರ ಬಲಿ ಹೊರಕಾಣಿಕೆ ನಡೆಯಲಿದೆ. ಬಳಿಕ ನ.9ರಂದು (ಸೋಮವಾರ) ಸಂಜೆ 5 ಗಂಟೆಗೆ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ರೀ ದೇವರ ಬಲಿ ಹೊರಕಾಣಿಕೆಯ ಬಳಿಕ ದೇವಸ್ಥಾನದ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ನ.9ರಂದು ನಡೆಯಲಿರುವ ಸಾಮೂಹಿಕ ಗೋಪೂಜೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಗೋವುಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Ad Widget

Ad Widget <> Ad Widget

ಗೋಪೂಜೆಯ ಅಂಗವಾಗಿ ಅಂದು ಮಧ್ಯಾಹ್ನ 4.30ರಿಂದ ಗೋಶಾಲೆಯಲ್ಲಿ ಸಂಕಲ್ಪ ಹಾಗೂ ಪೂಜಾ ವಿಧಿವಿಧಾನಗಳು ನಡೆಯಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಸಮಿತಿಯವರು ಮನವಿ ಮಾಡಿದ್ದಾರೆ.



Ad Widget

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸನ್, ಆಡಳಿತ ಮಂಡಳಿ ಹಾಗೂ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.

Continue Reading

ಶಿಕ್ಷಣ

Vivekananda-ಅಂಚೆ ಇಲಾಖೆ ನಡೆಸಲ್ಪಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Published

on



Ad Widget

Ad Widget

Ad Widget

Ad Widget

ಭಾರತೀಯ ಅಂಚೆ ಇಲಾಖೆ ಹಾಗೂ  ಅಂಚೆ ಅಧೀಕ್ಷಕರ ಕಚೇರಿ, ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ ಜಾಗೃತಿ ಸಪ್ತಾಹದ ಅಂಗವಾಗಿ “ಪ್ರಾಮಾಣಿಕತೆಯಿಂದ ಸಮೃದ್ಧಿ” ಎಂಬ ವಿಷಯದ ಕುರಿತು ನಡೆಸಲ್ಪಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Ad Widget

Ad Widget

Ad Widget

Ad Widget

ಇವರಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಕುಮಾರಿ ದೀಪ್ತಿ ಕುಬಣುರಾಯ (ಸುಧಾಕರ ಕುಬಣುರಾಯ ಮತ್ತು ಸವಿತಾ ಸಾವಿತ್ರಿ ದಂಪತಿಗಳ ಪುತ್ರಿ ) ಇವರು ದ್ವಿತೀಯ ಬಹುಮಾನ ಹಾಗೂ ಕುಮಾರಿ ವೈಷ್ಣಿ ರೈ (ಜಗನ್ನಾಥ ಎಂ ಮತ್ತು ಸೀಮಾ ಜೆ ರೈ ದಂಪತಿಗಳ ಪುತ್ರಿ ) ಇವರು ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget
Ad Widget
Continue Reading

ಶಿಕ್ಷಣ

Narendra-ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ “ ವ್ಯವಹಾರ “ ಕ್ಲಬ್ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಮಾರುಕಟ್ಟೆಯು ವಿವಿಧ ರೀತಿಯ ಉತ್ಪನ್ನಗಳು ಮತ್ತು ವ್ಯವಹಾರ ಕಲ್ಪನೆಗಳಿಂದ ತುಂಬಿರುವಾಗ, ಹೊಸತನವನ್ನು ಮಾಡಲು ಮತ್ತು ವಿಶಿಷ್ಟವಾದ ಮತ್ತು ಉತ್ತಮವಾದದ್ದನ್ನು ಮಾಡಲು ಯಾವಾಗಲೂ ಅವಕಾಶವಿರುತ್ತದೆ. ವ್ಯವಹಾರದ ಯಶಸ್ಸು ಯೋಜನೆ ಮತ್ತು ಕಠಿಣ ಪರಿಶ್ರಮವನ್ನು ಅವಲಂಬಿಸಿರುತ್ತದೆ. ಅದ್ಭುತವಾದ ವ್ಯವಹಾರ ಕಲ್ಪನೆಯನ್ನು ಹೊಂದಿರುವುದು ಒಂದು ವಿಷಯ, ಆದರೆ ವ್ಯವಹಾರದ ಯಶಸ್ಸು ಕಲ್ಪನೆಯ ಕಾರ್ಯಗತಗೊಳಿಸುವಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಎಂದು ಪುತ್ತೂರಿನ ಉದ್ಯಮಿಗಳಾದ ಮತ್ತು ಮರಿಕೆ ಹೋಂ ಇಂಡಸ್ಟ್ರಿ ಇದರ ಮಾಲಕರಾದ ಸುಹಾಸ್ ಮರಿಕೆ ಇವರು ಹೇಳಿದರು.

Ad Widget

Ad Widget

Ad Widget

Ad Widget

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕರ‍್ಯಕ್ರಮ “ ವ್ಯವಹಾರ “ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವ್ಯವಹಾರದ ಯಶಸ್ಸಿಗಾಗಿ ಮುಖ್ಯವಾದ ಅದರ ಸ್ವರೂಪದ ಬಗ್ಗೆ ವಿವರಿಸುತ್ತಾ, ಅವರು ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ವ್ಯವಹಾರದ ಯಶಸ್ಸಿಗೆ ಉತ್ತಮ ಯೋಜನೆ ಅಥವಾ ಕಾರ್ಯತಂತ್ರವನ್ನು ರೂಪಿಸುವುದು ಅತ್ಯಗತ್ಯ. ವ್ಯವಹಾರದ ಗುರಿಗಳು ಮತ್ತು ಉದ್ದೇಶಗಳು ಮತ್ತು ಅವುಗಳನ್ನು ಸಾಧಿಸುವ ಮಾರ್ಗಗಳನ್ನು ವಿವರಿಸುವ ಸಮಗ್ರ ವ್ಯಾಪಾರ ಯೋಜನೆಯ ಬಗ್ಗೆ ತಿಳಿಸಿದರು.ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿ ಕೆಲವು ಸಲಹೆಗಳನ್ನು ನೀಡಿದರು.

Ad Widget

Ad Widget <> Ad Widget

ಕಾರ‍್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮತ್ತು ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ‍್ಯಕ್ರಮದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸಾನ್ವಿ ಸ್ವಾಗತಿಸಿ ವಂದಿಸಿದರು.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!