ಉಡುಪಿ
Anil Kumar-ಬಾಳೆಕುದ್ರು ಶ್ರೀಗಳು ಪರಾರಿಯಾಗಿಲ್ಲ, ವಿಗ್ರಹಗಳೂ ಕಳವಾಗಿಲ್ಲ: ಆಡಳಿತಾಧಿಕಾರಿ ಅನಿಲ್ ಕುಮಾರ್ ಸ್ಪಷ್ಟನೆ
ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ತಳ್ಳಿಹಾಕಿದ್ದಾರೆ.
ಉಡುಪಿ: ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ತಳ್ಳಿಹಾಕಿದ್ದಾರೆ.
ಈ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟಪಡಿಸಿರುವ ಅವರು, ಮಠದ ಎಲ್ಲಾ ವಿಗ್ರಹಗಳು ಶ್ರೀಗಳ ಬಳಿಯೇ ಸುರಕ್ಷಿತವಾಗಿವೆ ಎಂದು ತಿಳಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅನಿಲ್ ಕುಮಾರ್, ಮಠದ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಕಾನೂನು ಪ್ರಕ್ರಿಯೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಮಠ ಬಿಟ್ಟು ಓಡಿಹೋಗಿದ್ದಾರೆ ಅಥವಾ ಮಠಕ್ಕೆ ಬೀಗ ಹಾಕಲಾಗಿದೆ ಎಂಬ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.
ಆರು ಪ್ರಾಚೀನ ವಿಗ್ರಹಗಳ ಮಾರಾಟ ಆರೋಪ ಹಸಿ ಸುಳ್ಳು
ಮಠದ ಹಳೆಯ ಭಕ್ತರೊಬ್ಬರು ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶ್ರೀ ವಾಸುದೇವ ಸದಾಶಿವಾಶ್ರಮ, ಆಡಳಿತಾಧಿಕಾರಿ ಅನಿಲ್ ಕುಮಾರ್, ಸಿಬ್ಬಂದಿ ಜಯಲಕ್ಷ್ಮೀ ಹಾಗೂ ಪುರೋಹಿತ ಶ್ರೇಯಸ್ ಅವರು ಮಠದ ಹಳೆಯ ವಿಗ್ರಹಗಳನ್ನು ಕಳವು ಮಾಡಿ ಬೆಂಗಳೂರಿನ ಪ್ರಸಿದ್ಧ ‘ಐಡಲ್ಸ್’ ಸಂಸ್ಥೆಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಆದರೆ, ಈ ಆರೋಪಗಳು ಸಂಪೂರ್ಣ ಸುಳ್ಳು. ಯಾವುದೇ ವಿಗ್ರಹಗಳನ್ನು ಕಳವು ಮಾಡಿಲ್ಲ ಅಥವಾ ಮಾರಾಟ ಮಾಡಿಲ್ಲ. ಎಲ್ಲಾ ವಿಗ್ರಹಗಳು ಶ್ರೀಗಳ ಬಳಿಯೇ ಭದ್ರವಾಗಿವೆ ಎಂದು ಅನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮಠದಲ್ಲಿ ಪೂಜಾ ಕೈಂಕರ್ಯಗಳು ನಿರಂತರ
ಶ್ರೀಗಳು ಬೆಂಗಳೂರಿಗೆ ತೆರಳಿರುವುದರಿಂದ ಮಠದಲ್ಲಿ ಪೂಜಾ ಕಾರ್ಯಗಳಿಗೆ ಯಾವುದೇ ತೊಂದರೆಯಾಗಿಲ್ಲ. ಪೂಜೆಗೆ ಚ್ಯುತಿ ಬಾರದಂತೆ ಮಠದಲ್ಲಿ ಓರ್ವ ಪುರೋಹಿತರನ್ನು ನೇಮಿಸಲಾಗಿದ್ದು, ಧಾರ್ಮಿಕ ಕೈಂಕರ್ಯಗಳು ಎಂದಿನಂತೆ ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಶ್ರೀಗಳು ಕಾನೂನು ತಜ್ಞರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಎದುರಿಸುವ ಉದ್ದೇಶದಿಂದ ನಾವೆಲ್ಲರೂ ಇಲ್ಲಿಗೆ ಆಗಮಿಸಿದ್ದೇವೆ. ನಾವು ಯಾವುದೇ ಅನಾಚಾರ ಅಥವಾ ಅಪಚಾರ ಎಸಗಿಲ್ಲ. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಭಕ್ತರ ಮುಂದೆ ಬಂದು ಎಲ್ಲ ಸತ್ಯಾಂಶಗಳನ್ನು ಹಂಚಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಅಲ್ಲದೆ, ಭಕ್ತರು ಹಾಗೂ ಊರಿನವರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಸಹನೆಯಿಂದ ಸಹಕರಿಸಬೇಕು ಎಂದು ಕೈಮುಗಿದು ಮನವಿ ಮಾಡಿದ್ದಾರೆ.
ಅಪರಾಧ
FIR-ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹ ಮಾರಾಟ ಆರೋಪ: ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸ್ವಾಮೀಜಿ ನಾಪತ್ತೆ; ಪೊಲೀಸರಿಂದ ಶೋಧ
ಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬೀಗ ಹಾಕಲಾಗಿದ್ದು, ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಉಡುಪಿ: ಬ್ರಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬೀಗ ಹಾಕಲಾಗಿದ್ದು, ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಮಠದಲ್ಲಿದ್ದ ಪುರಾತನ ವಿಗ್ರಹಗಳನ್ನು ಬೆಂಗಳೂರಿನ ಕಂಪನಿಯೊಂದಕ್ಕೆ ಮಾರಾಟ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ವಿಗ್ರಹಗಳನ್ನು ಖರೀದಿಸಿದ ಕಂಪನಿಯ ಮಾಲಕ ನಾಗೇಂದ್ರ ಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ, ಮಠದ ಆಡಳಿತಾಧಿಕಾರಿ ಅನಿಲ್ ಕುಮಾರ್, ಅಕೌಂಟೆಂಟ್ ಜಯಲಕ್ಷ್ಮೀ, ಮಠದಲ್ಲಿದ್ದ ಶ್ರೇಯಸ್ ಹಾಗೂ ಖರೀದಿದಾರ ನಾಗೇಂದ್ರ ಪ್ರಸಾದ್ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬೆನ್ನಲ್ಲೇ ಮಠಕ್ಕೆ ಬೀಗ ಹಾಕಿ ಸ್ವಾಮೀಜಿ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ಸ್ವಾಮೀಜಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಉಡುಪಿ
Pradeep Poojari-ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣ: ಮಧ್ಯಪ್ರದೇಶದಲ್ಲಿ ಇಬ್ಬರು ವಶಕ್ಕೆ
ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ತಿಳಿಸಿದ್ದಾರೆ.
ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ಪೊಲೀಸರು ಉಡುಪಿಗೆ ಕರೆತರುತ್ತಿದ್ದು, ಇಲ್ಲಿಗೆ ತಲುಪಿದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೆರ್ಡೂರಿನ ದಿಲೀಪ್ ಕುಮಾರ್ ಅವರು ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಹೊರರಾಜ್ಯದ ಇಬ್ಬರು ಕಾರ್ಮಿಕರು ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪರಾಧ
UDUPI PRADEEP POOJARY CASE :ಪ್ರದೀಪ್–ಯುವತಿ ನಡುವೆ ನಡೆದದ್ದೇನು ? 3 ದೂರುಗಳು, 3 ಘಟನೆಗಳು; ಎಸ್‌ಪಿ ಬಿಚ್ಚಿಟ್ಟ ಸ್ಪೋಟಕ ಮಾಹಿತಿ! ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದವರ ಮೇಲೆ ಕೇಸ್ ದಾಖಲು-ಎಚ್ಚರಿಕೆ

UDUPI PRADEEP POOJARY CASE: ಉಡುಪಿ: ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ, ಹಲ್ಲೆ, ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಪೊಲೀಸ್ ಇಲಾಖೆಯ ಕರ್ತವ್ಯಲೋಪದ ಆರೋಪಗಳ ಕುರಿತು ಇಲಾಖಾ ತನಿಖೆಯಲ್ಲಿ ಬೆಳಕಿಗೆ ಬಂದಿರುವ ಅಂಶಗಳನ್ನು ಮಾಧ್ಯಮಗಳ ಮುಂದೆ ತೆರೆದಿಟ್ಟಿದ್ದಾರೆ. ಇದೇ ವೇಳೆ ಅತ್ಯಾಚಾರ ಸಂತ್ರಸ್ತೆಯ ಫೋಟೋ ಹಾಗೂ ಗುರುತನ್ನು ಬಹಿರಂಗಪಡಿಸಿದ 150ಕ್ಕೂ ಅಧಿಕ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪತ್ತೆಹಚ್ಚಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
8 ವರ್ಷಗಳ ಪ್ರೀತಿ, ಎರಡು ವರ್ಷಗಳಿಂದ ಬಿರುಕು!
ಸ್ತಳೀಯ ಮೂಲಗಳ ಪ್ರಕಾರ, ಪ್ರದೀಪ್ ಪೂಜಾರಿ ಹಾಗೂ ಯುವತಿ ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಕಳೆದ ಎರಡು ವರ್ಷಗಳಿಂದ ಇಬ್ಬರ ನಡುವಿನ ಸಂಬಂಧ ಹಳಸಿತ್ತು ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯುವತಿ ಕಳೆದ ಒಂದು ವರ್ಷದ ಅವಧಿಯಲ್ಲಿ ಮೂರು ಬಾರಿ ಪ್ರದೀಪ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಪೈಕಿ ಒಂದು ದೂರಿನ ಆಧಾರದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪ್ರದೀಪ್ ಬಂಧನಕ್ಕೊಳಗಾಗಿ ಹಲವು ತಿಂಗಳು ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಅವರಿಬ್ಬರೂ ರಿಲೇಷನ್ ಶಿಪ್ ನಲ್ಲಿ ದ್ದ ವೇಳೆ ಪ್ರದೀಪ್ ಯುವತಿಗೆ ಹಲವು ಬಾರಿ ಹಣ ನೀಡಿರುವುದಾಗಿ ಯುವಕನ ಕಡೆಯವರು ಆರೋಪಿಸಿ , ಡಿಜಿಟಲ್ ಪೇಮೆಂಟ್ Transactionಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದಾರೆ. ಇದರ ಸತ್ಯಾಸತ್ಯತೆ ತನಿಖೆಯಿಂದ ತಿಳಿದು ಬರಬೇಕಿದೆ.
ಎಸ್ಪಿ ಹೇಳಿದ್ದೇನು ?
ಈ ಪ್ರಕರಣದ ಕುರಿತು ಎಸ್ಪಿ ಹರಿರಾಮ್ ಶಂಕರ್ ರವರು ಸುದೀರ್ಘ ಮಾಹಿತಿ ನೀಡಿದ್ದು ಇವರಿಬ್ಬರ ಸಂಬಂಧ ಹಳಸಿದ ಬಳಿಕ ಏನೇನು ನಡೆಯಿತು ಎನ್ನುವುದುನ್ನು ವಿವರಿಸಿದ್ದು , ಇದೆಲ್ಲಕ್ಕೂ ತಮ್ಮ ಬಳಿ ಸಾಕ್ಷ್ಯ ಇರುವುದಾಗಿ ಅವರು ತಿಳಿಸಿದ್ದಾರೆ
ಮೊದಲ ಪ್ರಕರಣ: ಮದುವೆಯಾಗದಿದ್ದರೆ ಕೊಲೆ ಬೆದರಿಕೆ
2025ರ ನವೆಂಬರ್ 10ರಂದು ಯುವತಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಪ್ರದೀಪ್ ಪೂಜಾರಿ ಆಕೆಯನ್ನು ಅಡ್ಡಗಟ್ಟಿ, ತನ್ನನ್ನು ಮದುವೆಯಾಗಬೇಕು. ಇಲ್ಲವಾದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರದೀಪ್ ಬಂಧನಕ್ಕೊಳಗಾಗಿದ್ದ.
ಎರಡನೇ ಪ್ರಕರಣ: ಅತ್ಯಾಚಾರ ಆರೋಪ, ವೈಜ್ಞಾನಿಕ ಸಾಕ್ಷ್ಯ ಆಧರಿಸಿ ಚಾರ್ಜ್‌ಶೀಟ್
ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ 2025ರ ನವೆಂಬರ್ 29ರಂದು ಬೆಳಿಗ್ಗೆ ಯುವತಿ ಕೆಲಸಕ್ಕೆ ತೆರಳುತ್ತಿದ್ದಾಗ ದೊಡ್ಡಪಾದೆ ಪ್ರದೇಶದಲ್ಲಿ ಆಕೆಯನ್ನು ಅರಣ್ಯ ಪ್ರದೇಶಕ್ಕೆ ಎಳೆದುಕೊಂಡು ಹೋಗಿ, ತಲೆಗೆ ಕಲ್ಲು ಹಾಕುವುದಾಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.
ಈ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿತ್ತು. ಕೇವಲ ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಮಾತ್ರವಲ್ಲದೆ, ವೈದ್ಯಕೀಯ ಪರೀಕ್ಷೆ ಹಾಗೂ ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲಿಯೂ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು ಎಂದು ಎಸ್ಪಿ ತಿಳಿಸಿದ್ದಾರೆ. ಘಟನೆಯ ಬಳಿಕ ಸಂತ್ರಸ್ತೆ ಮೂರು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಗಾಯಗಳ ದಾಖಲೆಗಳೂ ಸಾಕ್ಷ್ಯಗಳಾಗಿ ಲಭ್ಯವಿವೆ ಎಂದು ವಿವರಿಸಿದ್ದಾರೆ.
ಮೂರನೇ ಪ್ರಕರಣ: ಖಾರದ ಪುಡಿ ಎರಚಿ ಹತ್ಯೆಗೆ ಯತ್ನ?
ಮೂರನೇ ಘಟನೆಯ ಸಂದರ್ಭದಲ್ಲಿ ಪ್ರದೀಪ್ ಪೂಜಾರಿ ಯುವತಿಯ ಮನೆಗೆ ತೆರಳಿ ಖಾರದ ಪುಡಿ, ಬಟ್ಟೆ ಸೇರಿದಂತೆ ಕೆಲವು ವಸ್ತುಗಳನ್ನು ಬಳಸಿ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ್ದಾನೆ ಎಂಬ ಆರೋಪವಿದೆ. ಇದನ್ನು ತಡೆಯಲು ಬಂದ ಯುವತಿಯ ತಾಯಿಯ ಮೇಲೂ ಖಾರದ ಪುಡಿ ಎರಚಿದ್ದಾನೆ ಎನ್ನಲಾಗಿದೆ.
ಘಟನೆಯ ವೇಳೆ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ಈ ಸಂದರ್ಭದಲ್ಲಿ ಪ್ರದೀಪ್ ಹಾಗೂ ಸ್ಥಳೀಯರ ನಡುವೆ ಸಂಘರ್ಷ ನಡೆದಿದೆ. ಯುವತಿಯ ತಾಯಿ ಸಂಬಂಧಿಕರನ್ನು ಕರೆದ ಹಿನ್ನೆಲೆಯಲ್ಲಿ 7ರಿಂದ 8 ಮಂದಿ ಸ್ಥಳಕ್ಕೆ ಬಂದು ಪ್ರದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಈ ಘಟನೆಯ ಆಡಿಯೋ, ವಿಡಿಯೋ ದಾಖಲೆಗಳು ಪೊಲೀಸರಿಗೆ ಲಭ್ಯವಾಗಿವೆ. ಘಟನಾ ಸ್ಥಳದಲ್ಲಿ ಖಾರದ ಪುಡಿ ಹಾಗೂ ಹಲ್ಲೆಗೆ ಬಳಸಲಾಗಿದೆ ಎನ್ನಲಾದ ವಸ್ತುಗಳೂ ಪತ್ತೆಯಾಗಿವೆ. ಪ್ರದೀಪ್ ಯುವತಿಯ ಕುಟುಂಬಕ್ಕೆ ಬೆದರಿಕೆ ಹಾಕಿರುವುದು ಆಡಿಯೋ ಮತ್ತು ವಿಡಿಯೋ ದಾಖಲೆಗಳಲ್ಲಿ ಸೆರೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಆರೋಪಕ್ಕೆ ಸಾಕ್ಷ್ಯವಿಲ್ಲ!
ಪ್ರದೀಪ್‌ನನ್ನು ಅಪಹರಿಸಿ ಬೇರೆಡೆಗೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಈವರೆಗಿನ ತನಿಖೆಯಲ್ಲಿ ಅಪಹರಣ ಅಥವಾ ಅಂತಹ ಘಟನೆಯನ್ನು ಪುಷ್ಟೀಕರಿಸುವ ಯಾವುದೇ ಸಾಕ್ಷ್ಯ ಪೊಲೀಸರಿಗೆ ಲಭ್ಯವಾಗಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
ಆದರೆ ಮೂರನೇ ಘಟನೆ ನಡೆದ ಸಂದರ್ಭದಲ್ಲಿ ಸ್ಥಳೀಯರಿಂದ ಪ್ರದೀಪ್ ಮೇಲೆ ಹಲ್ಲೆ ನಡೆದಿರುವುದನ್ನು ಪೊಲೀಸರು ನಿರಾಕರಿಸಿಲ್ಲ. ಈ ಬಗ್ಗೆ ತನಿಖೆ ಮುಂದುವರಿದಿದೆ.
ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ: ಕರ್ತವ್ಯಲೋಪದ ತನಿಖೆ
ಪ್ರದೀಪ್ ಆಸ್ಪತ್ರೆಯಲ್ಲಿದ್ದಾಗ ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಿದ್ದರೂ ಪೊಲೀಸರು ಎಫ್‌ಐಆರ್ ದಾಖಲಿಸದೆ ಎನ್‌ಸಿ ಪ್ರಕರಣ ದಾಖಲಿಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸಬ್‌ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಪಶ್ಚಿಮ ವಲಯದ ಐಜಿಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಕರ್ತವ್ಯಲೋಪ ಸಾಬೀತಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಮುಂದುವರಿಸುವುದಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ: ಮಣಿಪಾಲ ಪೊಲೀಸರಿಂದ ತನಿಖೆ
ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಹಿರಿಯಡ್ಕ ಠಾಣೆಯ ಬದಲಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು, ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
150ಕ್ಕೂ ಅಧಿಕ ಖಾತೆಗಳಿಗೆ ಪೊಲೀಸ್ ನೋಟಿಸ್ ಭೀತಿ!
ಈ ಪ್ರಕರಣದಲ್ಲಿ ಅತ್ಯಂತ ಗಂಭೀರ ಬೆಳವಣಿಗೆಯೆಂದರೆ ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿರುವುದು. ಕಳೆದ ಎರಡು ದಿನಗಳಿಂದ ಯುವತಿಯ ಫೋಟೋ ಹಾಗೂ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಆಕೆಯ ತೇಜೋವಧೆ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ.
ಈಗಾಗಲೇ 150ಕ್ಕೂ ಅಧಿಕ ಸಾಮಾಜಿಕ ಜಾಲತಾಣ ಖಾತೆಗಳನ್ನು ಪೊಲೀಸರು ಗುರುತಿಸಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಗುರುತು ಹಾಗೂ ಫೋಟೋಗಳನ್ನು ಬಹಿರಂಗಪಡಿಸುವುದು ಕಾನೂನುಬಾಹಿರ. ಸತ್ಯಾಸತ್ಯತೆ ಪರಿಶೀಲಿಸದೆ ಸುಳ್ಳು ಮಾಹಿತಿ ಹರಡುವವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.
ಒಟ್ಟಿನಲ್ಲಿ, ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ ಈಗ ಹಲವು ಆಯಾಮಗಳಲ್ಲಿ ತನಿಖೆಯ ಹಂತದಲ್ಲಿದೆ. ಯುವತಿಯ ಮೇಲಿನ ದೌರ್ಜನ್ಯ ಆರೋಪ, ಪ್ರದೀಪ್ ಮೇಲಿನ ಹಲ್ಲೆ, ಪೊಲೀಸ್ ಅಧಿಕಾರಿಯ ಕರ್ತವ್ಯಲೋಪ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪಗಳೆಲ್ಲವೂ ತನಿಖೆಯ ವ್ಯಾಪ್ತಿಯಲ್ಲಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಗಳಿಗಿಂತ ತನಿಖೆಯಲ್ಲಿ ಲಭ್ಯವಾಗುವ ಸಾಕ್ಷ್ಯಗಳೇ ಪ್ರಕರಣದ ಮುಂದಿನ ದಿಕ್ಕನ್ನು ನಿರ್ಧರಿಸಲಿವೆ.
Udupi Pradeep Poojary suicide case: SP Hariram Shankar reveals details of the conflict between Pradeep and the woman, assault allegations, police action and 150 social media accounts identified for sharing victim’s photos.
-
ನಿಧನ ವಾರ್ತೆ9 hours ago
ಪುತ್ತೂರಿನ ಖ್ಯಾತ ಉದ್ಯಮಿ ಸಂತೋಷ್ ಕುಮಾರ್ ಎ. ನಿಧನ
-
ನಿಧನ ವಾರ್ತೆ14 hours agoSuicide-ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!
-
ಅಪರಾಧ17 hours ago
ಪುತ್ತೂರು : ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
-
ರಾಜಕೀಯ15 hours agoAishwarya Hegde-ಸಿಎಂ ಮುಂದೆಯೇ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಬಿಚ್ಚಿಟ್ಟ ಪುತ್ರಿ ಐಶ್ವರ್ಯಾ ಹೆಗ್ಡೆ..!
-
ಸ್ಥಳೀಯ14 hours agoAddahole-ಅಡ್ಡಹೊಳೆಯಲ್ಲಿ ಕಾರಿನ ಮೇಲೆ ಮಗುಚಿಬಿದ್ದ ಕಂಟೈನರ್ ಲಾರಿ: ದಂಪತಿ, ಮಕ್ಕಳು ಪವಾಡಸದೃಶ ಪಾರು..!
-
ಬಿಗ್ ನ್ಯೂಸ್14 hours agoChatGPT- ಪತ್ನಿಗೆ ಹತ್ಯೆ ಸಂಚು ರೂಪಿಸಲು ಸಲಹೆ ನೀಡಿದ ಆರೋಪ: ಚಾಟ್ಜಿಪಿಟಿ ವಿರುದ್ಧ ಪತಿ ಕಾನೂನು ದಾವೆ..!
-
ಅಂತರ ರಾಜ್ಯ14 hours agoArrested-ನಿವೃತ್ತ ಐಎಎಸ್ ಅಧಿಕಾರಿ ಕೊಲೆ ಪ್ರಕರಣ: ಒಂದು ತಿಂಗಳ ಬಳಿಕ ರೈಲಿನಲ್ಲಿ ಪರಾರಿಯಾಗಿದ್ದ ಕೇರ್ಟೇಕರ್ ಅರೆಸ್ಟ್..!
-
ಅಂತರ ರಾಜ್ಯ15 hours agoSabarimala-ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್: ‘ಶಬರಿ ಪೋರ್ಟಲ್’ ಮತ್ತು ವಾಟ್ಸಾಪ್ ಚಾಟ್ಬಾಟ್ ಡಿಜಿಟಲ್ ವೇದಿಕೆ..! ಒಂದೇ ಸೂರಿನಡಿ ಸಮಗ್ರ ಮಾಹಿತಿ ಮತ್ತು ಸೇವೆಗಳು
















