ನಿಧನ ವಾರ್ತೆ
ಪುತ್ತೂರಿನ ಖ್ಯಾತ ಉದ್ಯಮಿ ಸಂತೋಷ್ ಕುಮಾರ್ ಎ. ನಿಧನ

ಪುತ್ತೂರು: ಪುತ್ತೂರಿನ ಪ್ರಸಿದ್ಧ ಉದ್ಯಮಿ, ಶಿವಾನಿ ಬಾಟ್ಲಿಂಗ್ (ಮಹೇಶ್ವರ ಬಾಟ್ಲಿಂಗ್ ಕಂಪನಿ) ಹಾಗೂ ಸಂತೋಷ್ ವೈನ್ಸ್ ಸಂಸ್ಥೆಗಳ ಮಾಲೀಕ, ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್ ಎ. (69) ಅವರು ನ. 7ರಂದು ನಿಧನರಾದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾಗಿಯೂ, ಪರಿವಾರ ಬಂಟರ ಸಂಘ ಮಂಗಳೂರು ಇದರ ನಿಕಟಪೂರ್ವ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಉದ್ಯಮ ಕ್ಷೇತ್ರದ ಜತೆಗೆ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡಿದ್ದ ಅವರು ಪುತ್ತೂರಿನ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು.
ಮಂಗಳೂರಿನಲ್ಲಿ ನ. 4ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಅವರು, ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ನೆಹರೂನಗರ ಕಾಯರ್ ಮಜಲು ನಿವಾಸಿಯಾಗಿದ್ದ ಅವರು ಪತ್ನಿ ನಿಶಾ, ಪುತ್ರಿಯರಾದ ನೇಹಾ ಸಂದೀಪ್ ನಾಯಕ್, ಸಮೀಕ್ಷಾ ಸುಶಿತ್ ನಾಯಕ್, ಪುತ್ರ ರಾಹುಲ್, ಸಹೋದರ ನವೀನ್ ನಾಯಕ್, ಸಹೋದರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ನ. 9ರಂದು ಅಂತ್ಯಸಂಸ್ಕಾರ
ನಿಧನ ವಾರ್ತೆ
Suicide-ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!
ಮಂಡ್ಯ ತಾಲೂಕಿನ ವಿ.ಸಿ. ಫಾರಂ ಗೇಟ್ ಸಮೀಪ ರೈಲಿಗೆ ತಲೆಕೊಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಗಳಾದ ಸಹನಾ (25) ಮತ್ತು ರಾಹುಲ್ (23) ಎಂದು ಗುರುತಿಸಲಾಗಿದೆ. ಸಹನಾ ಇಬ್ಬರು ಮಕ್ಕಳ ತಾಯಿಯಾಗಿದ್ದರು.
ಮಂಡ್ಯ, ನ.6: ತಾಲೂಕಿನ ವಿ.ಸಿ. ಫಾರಂ ಗೇಟ್ ಸಮೀಪ ರೈಲಿಗೆ ತಲೆಕೊಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಗಳಾದ ಸಹನಾ (25) ಮತ್ತು ರಾಹುಲ್ (23) ಎಂದು ಗುರುತಿಸಲಾಗಿದೆ. ಸಹನಾ ಇಬ್ಬರು ಮಕ್ಕಳ ತಾಯಿಯಾಗಿದ್ದರು.
ಸುಮಾರು ಎಂಟು ವರ್ಷಗಳ ಹಿಂದೆ ಸಹನಾ ಆಟೋ ಚಾಲಕ ವೀರೇಶ್ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಈ ದಂಪತಿ ಮೂರು ವರ್ಷಗಳ ಹಿಂದೆ ಮಾದನಾಯಕನಹಳ್ಳಿಯಲ್ಲಿ ವಾಸವಾಗಿದ್ದ ಸಂದರ್ಭದಲ್ಲಿ ಅದೇ ಬಡಾವಣೆಯ ರಾಹುಲ್ ಪರಿಚಯವಾಗಿದ್ದ ಎನ್ನಲಾಗಿದೆ.
ನಂತರ ಮನೆ ಬದಲಾಯಿಸಿದರೂ ಸಹನಾ ಮತ್ತು ರಾಹುಲ್ ನಡುವಿನ ಸಂಬಂಧ ಮುಂದುವರಿದಿತ್ತು ಎಂದು ತಿಳಿದುಬಂದಿದೆ. ಪತಿ ವೀರೇಶ್ ತಮ್ಮಿಬ್ಬರನ್ನು ಒಟ್ಟಿಗೆ ಬಾಳಲು ಬಿಡುವುದಿಲ್ಲ ಎಂಬ ಕಾರಣಕ್ಕೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನಿಧನ ವಾರ್ತೆ
Hormuz-ಹೊರ್ಮುಜ್ ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ತಂದೆಯ ಹಾದಿಯಲ್ಲೇ ಸಮುದ್ರದಲ್ಲಿ ಪ್ರಾಣ ಕಳೆದುಕೊಂಡ ಮಗ..!
ಸುಮಾರು ಎರಡು ದಶಕಗಳ ಹಿಂದೆ ಸಮುದ್ರದಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಗುಜರಾತ್‌ನ ದ್ವಾರಕ ಜಿಲ್ಲೆಯ ಸಲಾಯಾ ಗ್ರಾಮದ ಗಂಧರ್ ಕುಟುಂಬಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಹೊರ್ಮುಜ್ ಜಲಸಂಧಿಯಲ್ಲಿ ನವೆಂಬರ್ 2ರಂದು ಭಾರತೀಯ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಕುಟುಂಬದ ಕಿರಿಯ ಸದಸ್ಯ, ನಾವಿಕ ನಹೀಮ್ ಅಜೀಜ್ ಗಂಧರ್ ಮೃತಪಟ್ಟಿದ್ದಾರೆ.
ಅಹಮದಾಬಾದ್: ಸುಮಾರು ಎರಡು ದಶಕಗಳ ಹಿಂದೆ ಸಮುದ್ರದಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಗುಜರಾತ್‌ನ ದ್ವಾರಕ ಜಿಲ್ಲೆಯ ಸಲಾಯಾ ಗ್ರಾಮದ ಗಂಧರ್ ಕುಟುಂಬಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಹೊರ್ಮುಜ್ ಜಲಸಂಧಿಯಲ್ಲಿ ನವೆಂಬರ್ 2ರಂದು ಭಾರತೀಯ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಕುಟುಂಬದ ಕಿರಿಯ ಸದಸ್ಯ, ನಾವಿಕ ನಹೀಮ್ ಅಜೀಜ್ ಗಂಧರ್ ಮೃತಪಟ್ಟಿದ್ದಾರೆ.
ನಹೀಮ್ ಅವರು ‘ಅಲ್ ಜುಸುಫಿ’ ಎಂಬ ಹಡಗಿನಲ್ಲಿದ್ದ 14 ಸಿಬ್ಬಂದಿಗಳ ಪೈಕಿ ಒಬ್ಬರಾಗಿದ್ದರು. ಯುಎಇಯ ಹಮ್ಮಿಯಾ ಬಂದರಿನಿಂದ ಪೋರಬಂದರ್‌ಗೆ 900 ಮೆಟ್ರಿಕ್ ಟನ್ ಖರ್ಜೂರ ಸಾಗಿಸುತ್ತಿದ್ದ ಈ ಹಡಗಿನ ಮೇಲೆ ಒಮನ್‌ನ ಲಿಮಾ ಸಮೀಪ ಕ್ಷಿಪಣಿ ದಾಳಿ ನಡೆದಿತ್ತು ಎನ್ನಲಾಗಿದೆ. ಘಟನೆಯಲ್ಲಿ ನಹೀಮ್ ಮೃತಪಟ್ಟಿದ್ದು, ಉಳಿದ 13 ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಧರ್ ಕುಟುಂಬಕ್ಕೆ ಸಮುದ್ರದ ದುರಂತ ಹೊಸದೇನಲ್ಲ. ಸುಮಾರು 20-21 ವರ್ಷಗಳ ಹಿಂದೆ ನಹೀಮ್ ಅವರ ತಂದೆ ಅಜೀಜ್‌ಭಾಯಿ ಕೂಡ ಸಮುದ್ರದಲ್ಲೇ ಮೃತಪಟ್ಟಿದ್ದರು. ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಚಂಡಮಾರುತಕ್ಕೆ ಸಿಲುಕಿ ಅವರು ನಾಪತ್ತೆಯಾಗಿದ್ದರು. ಅವರ ಮೃತದೇಹವೂ ಪತ್ತೆಯಾಗಿರಲಿಲ್ಲ ಎಂದು ನಹೀಮ್ ಅವರ ಸಂಬಂಧಿ ಇರ್ಫಾನ್ ತಿಳಿಸಿದ್ದಾರೆ.
ಅಜೀಜ್‌ಭಾಯಿ ಅವರ ಐವರು ಮಕ್ಕಳಲ್ಲಿ ನಹೀಮ್ ಕೊನೆಯವರಾಗಿದ್ದರು. ಅವರಿಗೆ ನಾಲ್ವರು ಸಹೋದರಿಯರು ಹಾಗೂ ಒಬ್ಬ ಅಣ್ಣ ಇದ್ದಾರೆ. ನಾಲ್ವರು ಸಹೋದರಿಯರಿಗೂ ವಿವಾಹವಾಗಿದ್ದು, ಅಣ್ಣ ಸ್ವಗ್ರಾಮದಲ್ಲೇ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದಾರೆ.
ಒಮನ್‌ನಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧಾರ
ದುರಂತಕ್ಕೀಡಾದ ಹಡಗಿನ ಮಾಲೀಕ ಹಾಜಿ ಅಕ್ಟರ್ ಸುಂಭಾನಿಯಾ ಮಾತನಾಡಿ, ನಹೀಮ್ ಅವರ ಅಂತ್ಯಕ್ರಿಯೆಯನ್ನು ಒಮನ್‌ನಲ್ಲೇ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕುಟುಂಬದವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಒಮನ್‌ಗೆ ತೆರಳಲು ಬಯಸಿದ್ದರೂ, ವೀಸಾ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆಯಿದೆ. ಹೀಗಾಗಿ ಅಂತ್ಯಕ್ರಿಯೆಯನ್ನು ಮುಂದೂಡಲು ಕುಟುಂಬದವರು ಇಚ್ಛಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಭಾರತೀಯ ರಾಯಭಾರ ಕಚೇರಿ ವಿರುದ್ಧ ಮಾಲೀಕರ ಆರೋಪ
ಹಡಗಿನಲ್ಲಿರುವ ಇತರ ಸಿಬ್ಬಂದಿ ಅಂತ್ಯಕ್ರಿಯೆಗೆ ಅಗತ್ಯವಾದ ವಿಧಿವಿಧಾನಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಒಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಸೂಕ್ತ ನೆರವು ದೊರೆಯುತ್ತಿಲ್ಲ ಎಂದು ಹಡಗಿನ ಮಾಲೀಕರು ಆರೋಪಿಸಿದ್ದಾರೆ. ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಲು 24 ಗಂಟೆಗಳ ಕಾಲ ವಿಳಂಬ ಮಾಡಿದ್ದಾರೆ ಎಂದು ದೂರಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಯುದ್ಧ ಆರಂಭವಾದ ಬಳಿಕ ಭಾರತದ ಹಲವು ಹಡಗುಗಳು ಹಾನಿಗೊಳಗಾಗಿವೆ. ಈ ವರ್ಷದ ಫೆಬ್ರುವರಿಯಿಂದ ಆರು ಹಡಗುಗಳು ಸಂಪೂರ್ಣ ನಾಶವಾಗಿದ್ದರೂ, ಸರ್ಕಾರದಿಂದ ಯಾವುದೇ ಪರಿಹಾರ ದೊರೆತಿಲ್ಲ ಎಂದು ಸುಂಭಾನಿಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಡಗಿನಲ್ಲಿದ್ದ ಸರಕು ಹಾಗೂ ಸಿಬ್ಬಂದಿಗೆ ವಿಮೆ ಮಾಡಿಸಿರಲಿಲ್ಲ. ಇದುವರೆಗೆ ಸರ್ಕಾರದಿಂದ ಒಂದು ರೂಪಾಯಿ ನೆರವೂ ಸಿಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಹೊರ್ಮುಜ್ ಜಲಸಂಧಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದ ಅಲ್ತಾಫ್ ತಾಲಬ್ ಕೇರ್ ಅವರ ಕುಟುಂಬಕ್ಕೆ ಮಾತ್ರ ಹಡಗು ಸಾಗಣೆ ಮಹಾನಿರ್ದೇಶನಾಲಯದಿಂದ ₹10 ಲಕ್ಷ ಪರಿಹಾರ ನೀಡಲಾಗಿತ್ತು ಎಂದು ಸುಂಭಾನಿಯಾ ಮಾಹಿತಿ ನೀಡಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು: ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ಯುವಕರ ದಾರುಣ ಸಾವು
ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24) ಎಂದು ಗುರುತಿಸಲಾಗಿದೆ.
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24) ಎಂದು ಗುರುತಿಸಲಾಗಿದೆ. ಅನುರಾಗ್ ನೀಲೇಶ್ವರದ ವಸಂತ ಹೋಟೆಲ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಇಬ್ಬರೂ ನೀಲೇಶ್ವರದಿಂದ ಕಾಞಂಗಾಡ್‌ನ ತಿರುವತ್ತೆ ಅರಯಿಲ್ ಭಗವತಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ತೆಯ್ಯಂ ವೀಕ್ಷಿಸಲು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಾತ್ರಿ ಸುಮಾರು 9 ಗಂಟೆಗೆ ಪಡನ್ನಕ್ಕಾಡ್‌ನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
-
ನಿಧನ ವಾರ್ತೆ14 hours agoSuicide-ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!
-
ಅಪರಾಧ17 hours ago
ಪುತ್ತೂರು : ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
-
ರಾಜಕೀಯ15 hours agoAishwarya Hegde-ಸಿಎಂ ಮುಂದೆಯೇ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಬಿಚ್ಚಿಟ್ಟ ಪುತ್ರಿ ಐಶ್ವರ್ಯಾ ಹೆಗ್ಡೆ..!
-
ಸ್ಥಳೀಯ14 hours agoAddahole-ಅಡ್ಡಹೊಳೆಯಲ್ಲಿ ಕಾರಿನ ಮೇಲೆ ಮಗುಚಿಬಿದ್ದ ಕಂಟೈನರ್ ಲಾರಿ: ದಂಪತಿ, ಮಕ್ಕಳು ಪವಾಡಸದೃಶ ಪಾರು..!
-
ಉಡುಪಿ14 hours agoAnil Kumar-ಬಾಳೆಕುದ್ರು ಶ್ರೀಗಳು ಪರಾರಿಯಾಗಿಲ್ಲ, ವಿಗ್ರಹಗಳೂ ಕಳವಾಗಿಲ್ಲ: ಆಡಳಿತಾಧಿಕಾರಿ ಅನಿಲ್ ಕುಮಾರ್ ಸ್ಪಷ್ಟನೆ
-
ಬಿಗ್ ನ್ಯೂಸ್14 hours agoChatGPT- ಪತ್ನಿಗೆ ಹತ್ಯೆ ಸಂಚು ರೂಪಿಸಲು ಸಲಹೆ ನೀಡಿದ ಆರೋಪ: ಚಾಟ್ಜಿಪಿಟಿ ವಿರುದ್ಧ ಪತಿ ಕಾನೂನು ದಾವೆ..!
-
ಅಂತರ ರಾಜ್ಯ14 hours agoArrested-ನಿವೃತ್ತ ಐಎಎಸ್ ಅಧಿಕಾರಿ ಕೊಲೆ ಪ್ರಕರಣ: ಒಂದು ತಿಂಗಳ ಬಳಿಕ ರೈಲಿನಲ್ಲಿ ಪರಾರಿಯಾಗಿದ್ದ ಕೇರ್ಟೇಕರ್ ಅರೆಸ್ಟ್..!
-
ಅಂತರ ರಾಜ್ಯ15 hours agoSabarimala-ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್: ‘ಶಬರಿ ಪೋರ್ಟಲ್’ ಮತ್ತು ವಾಟ್ಸಾಪ್ ಚಾಟ್ಬಾಟ್ ಡಿಜಿಟಲ್ ವೇದಿಕೆ..! ಒಂದೇ ಸೂರಿನಡಿ ಸಮಗ್ರ ಮಾಹಿತಿ ಮತ್ತು ಸೇವೆಗಳು
















