ಉಡುಪಿ
Udupi: ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ಮದ್ಯಪಾನ; ಆಕ್ಷೇಪಿಸಿದ ಮಾಲಕರ ಸಂಬಂಧಿಗೆ ಐವರಿಂದ ಹಲ್ಲೆ
ಪೆಟ್ರೋಲ್ ಬಂಕ್ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಐವರು ಹಲ್ಲೆ ನಡೆಸಿದ ಘಟನೆ ಉಡುಪಿಯ ಗುಂಡಿಬೈಲ್‌ನಲ್ಲಿ ನ.7ರ ರಾತ್ರಿ ನಡೆದಿದೆ. ಹಲ್ಲೆಗೊಳಗಾದವರನ್ನು ನಿಟ್ಟೂರು ನಿವಾಸಿ ಆಶಿಶ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಇವರು ಪೆಟ್ರೋಲ್ ಬಂಕ್ ಮಾಲಕರ ಸಂಬಂಧಿಯಾಗಿದ್ದಾರೆ.
ಉಡುಪಿ: ಪೆಟ್ರೋಲ್ ಬಂಕ್ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಐವರು ಹಲ್ಲೆ ನಡೆಸಿದ ಘಟನೆ ಉಡುಪಿಯ ಗುಂಡಿಬೈಲ್‌ನಲ್ಲಿ ನ.7ರ ರಾತ್ರಿ ನಡೆದಿದೆ.
ಹಲ್ಲೆಗೊಳಗಾದವರನ್ನು ನಿಟ್ಟೂರು ನಿವಾಸಿ ಆಶಿಶ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಇವರು ಪೆಟ್ರೋಲ್ ಬಂಕ್ ಮಾಲಕರ ಸಂಬಂಧಿಯಾಗಿದ್ದಾರೆ.
ನ.7ರಂದು ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಖಾಸಗಿ ಬಸ್ ಚಾಲಕ ಆಕಾಶ್ ಎಂಬಾತ ಪೆಟ್ರೋಲ್ ಬಂಕ್ ಆವರಣದಲ್ಲಿ ಬಸ್ ನಿಲ್ಲಿಸಿ ಮದ್ಯಪಾನ ಮಾಡುತ್ತಿದ್ದ. ಇದನ್ನು ಗಮನಿಸಿದ ಆಶಿಶ್ ಶೆಟ್ಟಿ, ಬಂಕ್ ಆವರಣದಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪಿಸಿ ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ತಳ್ಳಾಟವೂ ನಡೆದಿತ್ತು.
ಇದಾದ ಕೆಲ ಹೊತ್ತಿನ ಬಳಿಕ ನಾಲ್ವರು ಕಾರಿನಲ್ಲಿ ಹಾಗೂ ಮತ್ತೊಬ್ಬ ಲಾರಿಯಲ್ಲಿ ಪೆಟ್ರೋಲ್ ಬಂಕ್‌ಗೆ ವಾಪಸ್ ಬಂದಿದ್ದಾರೆ. ಲಾರಿಗೆ ಸುಮಾರು 3,000 ರೂ. ಮೌಲ್ಯದ ಡೀಸೆಲ್ ಹಾಕಿಸಿಕೊಂಡ ಬಳಿಕ ಏಕಾಏಕಿ ಆಶಿಶ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆರೋಪಿಗಳು ಕೈಯಿಂದ ಹೊಡೆದು, ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ. ಈ ವೇಳೆ ಪುನೀತ್ ಎಂಬಾತ ತನ್ನ ಕೈಯಲ್ಲಿದ್ದ ಕಡಗದಿಂದ ಆಶಿಶ್ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗಾಯಗೊಂಡ ಆಶಿಶ್ ಶೆಟ್ಟಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಉಡುಪಿ
Pradeep Poojari case-ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಮಹತ್ವದ ತಿರುವು: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ವರ್ಗಾವಣೆ
ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೋಮವಾರ ತಿಳಿಸಿದ್ದಾರೆ.
ಉಡುಪಿ: ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೋಮವಾರ ತಿಳಿಸಿದ್ದಾರೆ.
ಪ್ರದೀಪ್ ಪೂಜಾರಿ ಸಾವಿನ ಪ್ರಕರಣ ಕರಾವಳಿ ಭಾಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ತನಿಖೆಯ ಬಗ್ಗೆ ಮೃತನ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳು ಹಲವು ಅನುಮಾನಗಳನ್ನು ವ್ಯಕ್ತಪಡಿಸಿ, ತನಿಖೆಯನ್ನು ಸಿಐಡಿ ಅಥವಾ ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದರು. ಸಿಐಡಿ ತನಿಖೆಗೆ ವಹಿಸದಿದ್ದರೆ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಲಾಗಿತ್ತು.
ಇದರ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಕರ್ತವ್ಯ ಲೋಪದ ಬಗ್ಗೆಯೂ ವಿಚಾರಣೆ ನಡೆಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ನಡೆದ ತನಿಖೆಯ ವರದಿ ಆಧರಿಸಿ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ಲಗತ್ತಿಸಲಾಗಿತ್ತು. ಅಲ್ಲದೆ, ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಮಧ್ಯಪ್ರದೇಶ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ಉಡುಪಿ
Anil Kumar-ಬಾಳೆಕುದ್ರು ಶ್ರೀಗಳು ಪರಾರಿಯಾಗಿಲ್ಲ, ವಿಗ್ರಹಗಳೂ ಕಳವಾಗಿಲ್ಲ: ಆಡಳಿತಾಧಿಕಾರಿ ಅನಿಲ್ ಕುಮಾರ್ ಸ್ಪಷ್ಟನೆ
ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ತಳ್ಳಿಹಾಕಿದ್ದಾರೆ.
ಉಡುಪಿ: ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ತಳ್ಳಿಹಾಕಿದ್ದಾರೆ.
ಈ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟಪಡಿಸಿರುವ ಅವರು, ಮಠದ ಎಲ್ಲಾ ವಿಗ್ರಹಗಳು ಶ್ರೀಗಳ ಬಳಿಯೇ ಸುರಕ್ಷಿತವಾಗಿವೆ ಎಂದು ತಿಳಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅನಿಲ್ ಕುಮಾರ್, ಮಠದ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಕಾನೂನು ಪ್ರಕ್ರಿಯೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಮಠ ಬಿಟ್ಟು ಓಡಿಹೋಗಿದ್ದಾರೆ ಅಥವಾ ಮಠಕ್ಕೆ ಬೀಗ ಹಾಕಲಾಗಿದೆ ಎಂಬ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.
ಆರು ಪ್ರಾಚೀನ ವಿಗ್ರಹಗಳ ಮಾರಾಟ ಆರೋಪ ಹಸಿ ಸುಳ್ಳು
ಮಠದ ಹಳೆಯ ಭಕ್ತರೊಬ್ಬರು ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶ್ರೀ ವಾಸುದೇವ ಸದಾಶಿವಾಶ್ರಮ, ಆಡಳಿತಾಧಿಕಾರಿ ಅನಿಲ್ ಕುಮಾರ್, ಸಿಬ್ಬಂದಿ ಜಯಲಕ್ಷ್ಮೀ ಹಾಗೂ ಪುರೋಹಿತ ಶ್ರೇಯಸ್ ಅವರು ಮಠದ ಹಳೆಯ ವಿಗ್ರಹಗಳನ್ನು ಕಳವು ಮಾಡಿ ಬೆಂಗಳೂರಿನ ಪ್ರಸಿದ್ಧ ‘ಐಡಲ್ಸ್’ ಸಂಸ್ಥೆಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಆದರೆ, ಈ ಆರೋಪಗಳು ಸಂಪೂರ್ಣ ಸುಳ್ಳು. ಯಾವುದೇ ವಿಗ್ರಹಗಳನ್ನು ಕಳವು ಮಾಡಿಲ್ಲ ಅಥವಾ ಮಾರಾಟ ಮಾಡಿಲ್ಲ. ಎಲ್ಲಾ ವಿಗ್ರಹಗಳು ಶ್ರೀಗಳ ಬಳಿಯೇ ಭದ್ರವಾಗಿವೆ ಎಂದು ಅನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮಠದಲ್ಲಿ ಪೂಜಾ ಕೈಂಕರ್ಯಗಳು ನಿರಂತರ
ಶ್ರೀಗಳು ಬೆಂಗಳೂರಿಗೆ ತೆರಳಿರುವುದರಿಂದ ಮಠದಲ್ಲಿ ಪೂಜಾ ಕಾರ್ಯಗಳಿಗೆ ಯಾವುದೇ ತೊಂದರೆಯಾಗಿಲ್ಲ. ಪೂಜೆಗೆ ಚ್ಯುತಿ ಬಾರದಂತೆ ಮಠದಲ್ಲಿ ಓರ್ವ ಪುರೋಹಿತರನ್ನು ನೇಮಿಸಲಾಗಿದ್ದು, ಧಾರ್ಮಿಕ ಕೈಂಕರ್ಯಗಳು ಎಂದಿನಂತೆ ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಶ್ರೀಗಳು ಕಾನೂನು ತಜ್ಞರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಎದುರಿಸುವ ಉದ್ದೇಶದಿಂದ ನಾವೆಲ್ಲರೂ ಇಲ್ಲಿಗೆ ಆಗಮಿಸಿದ್ದೇವೆ. ನಾವು ಯಾವುದೇ ಅನಾಚಾರ ಅಥವಾ ಅಪಚಾರ ಎಸಗಿಲ್ಲ. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಭಕ್ತರ ಮುಂದೆ ಬಂದು ಎಲ್ಲ ಸತ್ಯಾಂಶಗಳನ್ನು ಹಂಚಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಅಲ್ಲದೆ, ಭಕ್ತರು ಹಾಗೂ ಊರಿನವರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಸಹನೆಯಿಂದ ಸಹಕರಿಸಬೇಕು ಎಂದು ಕೈಮುಗಿದು ಮನವಿ ಮಾಡಿದ್ದಾರೆ.
ಅಪರಾಧ
FIR-ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹ ಮಾರಾಟ ಆರೋಪ: ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸ್ವಾಮೀಜಿ ನಾಪತ್ತೆ; ಪೊಲೀಸರಿಂದ ಶೋಧ
ಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬೀಗ ಹಾಕಲಾಗಿದ್ದು, ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಉಡುಪಿ: ಬ್ರಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬೀಗ ಹಾಕಲಾಗಿದ್ದು, ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಮಠದಲ್ಲಿದ್ದ ಪುರಾತನ ವಿಗ್ರಹಗಳನ್ನು ಬೆಂಗಳೂರಿನ ಕಂಪನಿಯೊಂದಕ್ಕೆ ಮಾರಾಟ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ವಿಗ್ರಹಗಳನ್ನು ಖರೀದಿಸಿದ ಕಂಪನಿಯ ಮಾಲಕ ನಾಗೇಂದ್ರ ಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ, ಮಠದ ಆಡಳಿತಾಧಿಕಾರಿ ಅನಿಲ್ ಕುಮಾರ್, ಅಕೌಂಟೆಂಟ್ ಜಯಲಕ್ಷ್ಮೀ, ಮಠದಲ್ಲಿದ್ದ ಶ್ರೇಯಸ್ ಹಾಗೂ ಖರೀದಿದಾರ ನಾಗೇಂದ್ರ ಪ್ರಸಾದ್ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬೆನ್ನಲ್ಲೇ ಮಠಕ್ಕೆ ಬೀಗ ಹಾಕಿ ಸ್ವಾಮೀಜಿ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ಸ್ವಾಮೀಜಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
-
ಪುತ್ತೂರು21 hours agoPuttur-ಪುತ್ತೂರಿನಲ್ಲಿ ಮಹಿಳೆಯ ಹಿಂಬಾಲಿಸಿ ಅನುಚಿತ ವರ್ತನೆ ಆರೋಪ: ಯುವಕನ ಬಂಧನ
-
ಅಂತರ ರಾಜ್ಯ18 hours agoAstrologer-2029ರಲ್ಲೂ ಮೋದಿ ಪ್ರಧಾನಿ, ಮುಂದಿನ 15 ವರ್ಷ ಬಿಜೆಪಿ ಆಡಳಿತ? ಜ್ಯೋತಿಷಿ ಆಸ್ಟ್ರೋ ಶರ್ಮಿಷ್ಠಾ ಭವಿಷ್ಯವಾಣಿ ಭಾರೀ ಚರ್ಚೆ..!
-
ಅಪರಾಧ20 hours agoNMC ಹೆಲ್ತ್ಕೇರ್ ಬಹುಕೋಟಿ ವಂಚನೆ ಪ್ರಕರಣ: ಬಿ.ಆರ್. ಶೆಟ್ಟಿ, ಪ್ರಶಾಂತ್ ಮಂಗಾಟ್ಗೆ ಕೋರ್ಟ್ ಶಾಕ್; 5.397 ಬಿಲಿಯನ್ ಡಾಲರ್ ಹೊಣೆಗಾರಿಕೆ ನಿಗದಿ..!
-
ಅಪರಾಧ21 hours agoKanyana-ಕನ್ಯಾನದಲ್ಲಿ ಅಕ್ರಮ ಕೆಂಪು ಮಣ್ಣು ಸಾಗಾಟ ಪತ್ತೆ: ಲಾರಿ ವಶಕ್ಕೆ
-
ದಿನ ಭವಿಷ್ಯ17 hours agoDaily Horoscope-ದಿನ ಭವಿಷ್ಯ : 12 ರಾಶಿಗಳ ಇಂದಿನ ರಾಶಿಫಲ ಹೀಗಿದೆ..!
-
ಅಪರಾಧ18 hours agoPuttur-ಪುತ್ತೂರು: ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಪೋಕ್ಸೋ ಆರೋಪಿಗೆ ಜಾಮೀನು
-
ಮಂಗಳೂರು11 hours ago
ಮಂಗಳೂರು : ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ : ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಮತ್ತೊಂದು ಕೇಸ್
-
ಉಡುಪಿ13 hours agoPradeep Poojari case-ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಮಹತ್ವದ ತಿರುವು: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ವರ್ಗಾವಣೆ
















