Connect with us

ಮಂಗಳೂರು

‌ಮಂಗಳೂರು : ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ : ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಮತ್ತೊಂದು ಕೇಸ್

Published

on



Ad Widget

Ad Widget

Ad Widget

Ad Widget

ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರತಿ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ ಮೇ 13ರಂದು ಧರ್ಮಗುರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಂತ್ರಸ್ತ ಬಾಲಕನ ಕಡೆಯಿಂದ ದೂರು ಬಂದ ಹಿನ್ನೆಲೆಯಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಿಎನ್‌ಎಸ್‌ನ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಇದಕ್ಕೂ ಮೊದಲು 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಧರ್ಮಗುರು ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಅಕ್ಟೋಬರ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

Ad Widget

Ad Widget <> Ad Widget

ಪ್ರಸ್ತುತ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡನೇ ಪ್ರಕರಣದ ಮುಂದಿನ ತನಿಖೆಯ ಜವಾಬ್ದಾರಿಯನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ.



Ad Widget

Click to comment

Leave a Reply

ಅಪರಾಧ

Mangalore-ಮಂಗಳೂರು:‌ ಎಲೆಕ್ಟ್ರಿಷಿಯನ್‌ಗೆ ಹಲ್ಲೆ, ಹಣ ಸುಲಿಗೆ ಆರೋಪ: ಪಾಂಡೇಶ್ವರ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಕೇಸ್

Published

on



Ad Widget

Ad Widget

Ad Widget

Ad Widget

ಎಲೆಕ್ಟ್ರಿಷಿಯನ್‌ ಒಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Ad Widget

Ad Widget

Ad Widget

ಮಂಗಳೂರು, ನ.6: ಎಲೆಕ್ಟ್ರಿಷಿಯನ್‌ ಒಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ವಿಟ್ಲದ ಮುಳ್ಳೂರು ಮೂಲದವರಾದ, ಪ್ರಸ್ತುತ ಮಂಗಳೂರಿನ ಪಾಂಡೇಶ್ವರ ಶಿವನಗರದಲ್ಲಿ ವಾಸವಾಗಿರುವ ರವಿರಾಜ್ (39) ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಪಾಂಡೇಶ್ವರ ಠಾಣೆಯ ಶಿವರಾಜ್, ಹೊಯ್ಸಳ ವಾಹನದ ಚಾಲಕ ಹೀರಣ್ಣ ಬೆನ್ನಿ ಹಾಗೂ ಇನ್ನೋರ್ವ ಸಿಬ್ಬಂದಿ ಉಮಾನಾಥ ಆರೋಪಿಗಳಾಗಿದ್ದಾರೆ. ಈ ಪೈಕಿ ಶಿವರಾಜ್ ಮತ್ತು ಹೀರಣ್ಣ ಬೆನ್ನಿಯನ್ನು ಬಂಧಿಸಲಾಗಿದೆ.

Ad Widget

Ad Widget <> Ad Widget

ವಾಕಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಹಲ್ಲೆ ಆರೋಪ



Ad Widget

ದೂರಿನ ಪ್ರಕಾರ, ಅಕ್ಟೋಬರ್ 25ರಂದು ರಾತ್ರಿ ಸುಮಾರು 10 ಗಂಟೆಗೆ ನೆಹರು ಮೈದಾನದಲ್ಲಿ ವಾಕಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ರವಿರಾಜ್ ಅವರನ್ನು ಆರ್‌ಟಿಒ ಕಚೇರಿ ಮುಂಭಾಗದ ಮೈದಾನದ ಗೇಟ್ ಬಳಿ ಹೊಯ್ಸಳ ವಾಹನದಲ್ಲಿ ಬಂದ ಹೀರಣ್ಣ ಬೆನ್ನಿ ಮತ್ತು ಶಿವರಾಜ್ ತಡೆದು ನಿಲ್ಲಿಸಿದ್ದಾರೆ.

Ad Widget

Ad Widget

ಈ ವೇಳೆ ಶಿವರಾಜ್ ಬೆತ್ತದಿಂದ ರವಿರಾಜ್ ಅವರ ಭುಜ ಮತ್ತು ಕಾಲಿಗೆ ಹೊಡೆದು, ಅವರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಕಸಿದುಕೊಂಡಿದ್ದಾರೆ. ಮೊಬೈಲ್ ಕವರ್‌ನಲ್ಲಿದ್ದ 300 ರೂ. ತೆಗೆದುಕೊಂಡು ಅವಾಚ್ಯವಾಗಿ ನಿಂದಿಸಿ, ಮತ್ತೆ ಕಂಡರೆ ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕಿ ತೆರಳಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಎರಡನೇ ಬಾರಿ ತಡೆದು 2 ಸಾವಿರ ರೂ. ಪಡೆದ ಆರೋಪ

ಅಕ್ಟೋಬರ್ 27ರಂದು ರಾತ್ರಿ ಸುಮಾರು 9.30ರ ವೇಳೆಗೆ ಅದೇ ಸ್ಥಳದಲ್ಲಿ ತೆರಳುತ್ತಿದ್ದ ರವಿರಾಜ್ ಅವರನ್ನು ಹೊಯ್ಸಳ ವಾಹನದಲ್ಲಿ ಬಂದ ಹೀರಣ್ಣ ಬೆನ್ನಿ ಮತ್ತು ಶಿವರಾಜ್ ಮತ್ತೆ ತಡೆದಿದ್ದಾರೆ. ಬಲವಂತವಾಗಿ ಮೊಬೈಲ್ ಕಸಿದುಕೊಂಡು, ಅದರ ಕವರ್‌ನಲ್ಲಿದ್ದ ಎರಡು ಎಟಿಎಂ ಕಾರ್ಡ್‌ಗಳು, 1,000 ರೂ. ನಗದು ಹಾಗೂ ದ್ವಿಚಕ್ರ ವಾಹನದ ಕೀಯನ್ನು ತೆಗೆದುಕೊಂಡು, ಅಲ್ಲಿಯೇ ಕಾಯುವಂತೆ ಹೇಳಿ ತೆರಳಿದ್ದಾರೆ ಎನ್ನಲಾಗಿದೆ.

ರಾತ್ರಿ 11.30ರ ಸುಮಾರಿಗೆ ವಾಪಸ್ ಬಂದ ಆರೋಪಿಗಳು ರವಿರಾಜ್ ಅವರನ್ನು ಹೊಯ್ಸಳ ವಾಹನದಲ್ಲಿ ಕುಳ್ಳಿರಿಸಿ ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ತನ್ನ ಬಳಿ ಹಣವಿಲ್ಲ, ಎಟಿಎಂ ಕಾರ್ಡ್ ಮಾತ್ರ ಇದೆ ಎಂದು ತಿಳಿಸಿದಾಗ ಮೊಬೈಲ್ ಪಾಸ್‌ವರ್ಡ್ ಪಡೆದು ಬ್ಯಾಂಕ್ ಖಾತೆಯಲ್ಲಿದ್ದ ಹಣ ಪರಿಶೀಲಿಸಿದ್ದಾರೆ. ಖಾತೆಯಲ್ಲಿ 5 ಸಾವಿರ ರೂ. ಇರುವುದನ್ನು ಕಂಡು 2 ಸಾವಿರ ರೂ. ನೀಡುವಂತೆ ಒತ್ತಾಯಿಸಿ, ಹಣ ನೀಡದಿದ್ದರೆ ಜೈಲಿಗೆ ಹಾಕುವುದಾಗಿ ಬೆದರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬ್ಯಾಂಕ್ ಸಾಲದ ಕಂತು ಪಾವತಿಸಲು ಹಣ ಬೇಕೆಂದು ರವಿರಾಜ್ ಹೇಳಿದರೂ ಕೇಳದೆ, ಮಂಗಳಾದೇವಿ ಬಳಿಯ ಎಟಿಎಂಗೆ ಕರೆದುಕೊಂಡು ಹೋಗಿ ಹಣ ಡ್ರಾ ಮಾಡುವಂತೆ ಒತ್ತಾಯಿಸಿದ್ದಾರೆ. ಅದರಂತೆ ರವಿರಾಜ್ 1,000 ರೂ. ಡ್ರಾ ಮಾಡಿ, ಮೊಬೈಲ್ ಕವರ್‌ನಲ್ಲಿದ್ದ ಮತ್ತೊಂದು 1,000 ರೂ. ಸೇರಿಸಿ ಒಟ್ಟು 2 ಸಾವಿರ ರೂ. ನೀಡಿದ್ದಾರೆ. ಬಳಿಕ ಮೊಬೈಲ್, ಇನ್ನೊಂದು ಎಟಿಎಂ ಕಾರ್ಡ್ ಹಾಗೂ ವಾಹನದ ಕೀಯನ್ನು ಹಿಂದಿರುಗಿಸಿ ಸಿಬ್ಬಂದಿ ತೆರಳಿದ್ದಾರೆ ಎಂದು ಆರೋಪಿಸಲಾಗಿದೆ.

ನ. 4ರಂದು ಮತ್ತೆ ಕಿರುಕುಳ ನೀಡಿದ ಆರೋಪ
ನವೆಂಬರ್ 4ರಂದು ರಾತ್ರಿ ಕೆಲಸ ಮುಗಿಸಿ ನೆಹರು ಮೈದಾನದಲ್ಲಿ ವಾಕಿಂಗ್ ಮಾಡಿದ ಬಳಿಕ ಹೊರಗೆ ನಿಂತಿದ್ದ ರವಿರಾಜ್ ಅವರನ್ನು ರಾತ್ರಿ 9.15ರ ಸುಮಾರಿಗೆ ಹೊಯ್ಸಳ ವಾಹನದಲ್ಲಿ ಬಂದ ಶಿವರಾಜ್ ಮತ್ತು ಉಮಾನಾಥ ಕರೆಸಿಕೊಂಡಿದ್ದಾರೆ. ಅವರ ಮೊಬೈಲ್ ಹಾಗೂ ದ್ವಿಚಕ್ರ ವಾಹನದ ಕೀಯನ್ನು ಪಡೆದು ವಾಹನದಲ್ಲಿ ಕುಳ್ಳಿರಿಸಿಕೊಂಡ ಶಿವರಾಜ್, ದಂಡ ಕಟ್ಟಬೇಕೆಂದು ಹೇಳಿದ್ದಾರೆ ಎನ್ನಲಾಗಿದೆ.

ಹಣವಿಲ್ಲದಿದ್ದಾಗ ದಂಡ ಏಕೆ ಕಟ್ಟಬೇಕು ಎಂದು ರವಿರಾಜ್ ಪ್ರಶ್ನಿಸಿದಾಗ, ಪಾಂಡೇಶ್ವರದ ಮಾಲ್‌ವರೆಗೆ ಕರೆದೊಯ್ದು ವಾಪಸ್ ಕರೆತಂದು ಮೊಬೈಲ್ ನೀಡಿದ್ದಾರೆ. ಬಳಿಕ ರವಿರಾಜ್ ಅವರ ಮೊಬೈಲ್ ಸಂಖ್ಯೆ ಪಡೆದು, ಮರುದಿನ ಬೆಳಗ್ಗೆ 10 ಗಂಟೆಗೆ ಠಾಣೆಗೆ ಬರುವಂತೆ ಸೂಚಿಸಿ ದ್ವಿಚಕ್ರ ವಾಹನವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಂತರ ಶಿವರಾಜ್ ವಾಪಸ್ ಬಂದು ಹಣ ನೀಡಿದರೆ ವಾಹನ ಹಿಂದಿರುಗಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ರವಿರಾಜ್ ಮರುದಿನ ಠಾಣೆಗೆ ಬರುವುದಾಗಿ ತಿಳಿಸಿ ಅಲ್ಲಿಂದ ತೆರಳಿದ್ದಾರೆ. ಅದೇ ರಾತ್ರಿ ಸಿಬ್ಬಂದಿ ಉಮಾನಾಥ ಕರೆ ಮಾಡಿ ದ್ವಿಚಕ್ರ ವಾಹನವನ್ನು ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಘಟನೆಯ ಬಗ್ಗೆ ರವಿರಾಜ್ ತಮ್ಮ ಮ್ಯಾನೇಜರ್‌ಗೆ ಮಾಹಿತಿ ನೀಡಿದ್ದು, ಅವರ ಸಲಹೆಯಂತೆ ದೂರು ನೀಡಿದ್ದಾರೆ.

Ad Widget
Continue Reading

ಮಂಗಳೂರು

Soujanya Case-Big Breaking: ಸೌಜನ್ಯ ಪ್ರಕರಣ : ಸಂತೋಷ್ ರಾವೇ ನೈಜ ಆರೋಪಿ ಎಂದ ಬೆಂಗಳೂರಿನ ವಕೀಲ ಅಮೃತೇಶ್ ಎಸ್ಐಟಿ ಕಚೇರಿಗೆ – ದೂರು ದಾಖಲು..!

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಹಿರಿಯ ಹೈಕೋರ್ಟ್ ವಕೀಲ ಅಮೃತೇಶ್ ಅವರು ಎಸ್‌ಐಟಿ ಕಚೇರಿಗೆ ಭೇಟಿ ನೀಡಿ ತನಿಖಾಧಿಕಾರಿಗಳನ್ನು ಭೇಟಿಯಾಗಿದ್ದಾರೆ. ಸೌಜನ್ಯ ತಂದೆ ತಾಯಿ ಪ್ರಕರಣದಿಂದ ಹಣ ಮಾಡಿದ್ದಾರೆ. ಸಂತೋಷ್ ರಾವೇ ನೈಜ ಆರೋಪಿ ಎಂದು ಅಮೃತೇಶ್ ಆರೋಪಿಸಿದ್ದರು.

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಹಿರಿಯ ಹೈಕೋರ್ಟ್ ವಕೀಲ ಅಮೃತೇಶ್ ಅವರು ಎಸ್‌ಐಟಿ ಕಚೇರಿಗೆ ಭೇಟಿ ನೀಡಿ ತನಿಖಾಧಿಕಾರಿಗಳನ್ನು ಭೇಟಿಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಸೌಜನ್ಯ ತಂದೆ ತಾಯಿ ಪ್ರಕರಣದಿಂದ ಹಣ ಮಾಡಿದ್ದಾರೆ. ಸಂತೋಷ್ ರಾವೇ ನೈಜ ಆರೋಪಿ ಎಂದು ಅಮೃತೇಶ್ ಆರೋಪಿಸಿದ್ದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.



Ad Widget

ಸೌಜನ್ಯ ಪ್ರಕರಣದ ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಹಿರಿಯ ವಕೀಲ ಅಮೃತೇಶ್ ಅವರು ಎಸ್‌ಐಟಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿರುವುದು ಕುತೂಹಲ ಮೂಡಿಸಿದೆ. ಅವರು ನೀಡಿರುವ ದೂರಿನಲ್ಲಿರುವ ಅಂಶಗಳು ಹಾಗೂ ಮುಂದಿನ ತನಿಖೆಯಲ್ಲಿ ಯಾವ ರೀತಿಯ ಬೆಳವಣಿಗೆಗಳು ನಡೆಯಲಿವೆ ಎಂಬುದರ ಬಗ್ಗೆ ಆಸಕ್ತಿ ಹೆಚ್ಚಾಗಿದೆ.

Continue Reading

ಅಪರಾಧ

Mangalore-ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನ ಬಂಧನ; 3.8 ಕೆ.ಜಿ. ಗಾಂಜಾ, ಕಾರು ವಶಕ್ಕೆ

Published

on



Ad Widget

Ad Widget

Ad Widget

Ad Widget

ಗಾಂಜಾ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ತೂಕದ ಗಾಂಜಾ ಸೇರಿದಂತೆ ಒಟ್ಟು 3.94 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Ad Widget

Ad Widget

Ad Widget

ಮಂಗಳೂರು: ಗಾಂಜಾ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ತೂಕದ ಗಾಂಜಾ ಸೇರಿದಂತೆ ಒಟ್ಟು 3.94 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಗಾಂಜಾ ಮಾರಾಟಕ್ಕೆ ತಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಪಣಂಬೂರು ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದರು.

Ad Widget

Ad Widget <> Ad Widget

ಈ ವೇಳೆ ಪುತ್ತೂರು ತಾಲೂಕಿನ ಪಡ್ನೂರು ಅಂಚೆ ವ್ಯಾಪ್ತಿಯ ಪಡ್ಡಾಯೂರು ಹೌಸ್ ನಿವಾಸಿ ಹಂಜಾ ಅವರ ಪುತ್ರ ಮೊಹಮ್ಮದ್ ನಿಸಾರ್ (23) ಎಂಬಾತನನ್ನು ಬಂಧಿಸಲಾಗಿದೆ.



Ad Widget

ಆರೋಪಿಯಿಂದ ಅಂದಾಜು 1.90 ಲಕ್ಷ ರೂ. ಮೌಲ್ಯದ 3.8 ಕೆ.ಜಿ. ಗಾಂಜಾ, 4 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ ಕೆಎಲ್ 14 1662 ನೋಂದಣಿ ಸಂಖ್ಯೆಯ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Ad Widget

Ad Widget

ವಿಚಾರಣೆ ವೇಳೆ ಆರೋಪಿ ಸುರತ್ಕಲ್, ಪಣಂಬೂರು, ಕಾವೂರು ಸೇರಿದಂತೆ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದುದಾಗಿ ತಿಳಿದುಬಂದಿದೆ. ಈ ಹಿಂದೆಯೂ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 137/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(C), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!