Connect with us

ಬಿಗ್ ನ್ಯೂಸ್

Krupa Alva-ಸ್ಟಿಂಗ್ ಆಪರೇಷನ್ ಪ್ರಕರಣ: ಸೈಬರ್ ಕ್ರೈಂ ಪೊಲೀಸರ ವಿಚಾರಣೆಗೆ ಹಾಜರಾದ ಕೃಪಾ ಆಳ್ವ

Published

on



Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಅವರು ಸೋಮವಾರ ಸೈಬರ್ ಕ್ರೈಂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಅವರು ಸುಮಾರು ಎರಡೂವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಅಲ್ಲದೆ, ನ.11ರಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.

Ad Widget

Ad Widget

Ad Widget

ಬೆಂಗಳೂರು, ನ.9: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಅವರು ಸೋಮವಾರ ಸೈಬರ್ ಕ್ರೈಂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಳೆದ ವಾರವಷ್ಟೇ ಈ ಪ್ರಕರಣದಲ್ಲಿ ಕೃಪಾ ಆಳ್ವ ಅವರಿಗೆ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗ ಹಾಜರಾಗಬೇಕು ಹಾಗೂ ಸಾಕ್ಷಿಗಳ ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿತ್ತು.

Ad Widget

Ad Widget <> Ad Widget

ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋದಲ್ಲಿ ಕೃಪಾ ಆಳ್ವ ಹಾಗೂ ಪವರ್ ಟಿವಿಯ ರಾಕೇಶ್ ಶೆಟ್ಟಿ ಕಾಣಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು.



Ad Widget

ನೋಟಿಸ್ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸರ ಮುಂದೆ ಹಾಜರಾದ ಕೃಪಾ ಆಳ್ವ ಅವರು ಸುಮಾರು ಎರಡೂವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಅಲ್ಲದೆ, ನವೆಂಬರ್ 11ರಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.

Ad Widget

Ad Widget

ಇದಕ್ಕೂ ಮುನ್ನ ಕೃಪಾ ಆಳ್ವ ಅವರ ಪರ ವಕೀಲೆ ನಿಖಿತಾ ಮಾಧ್ಯಮಗಳೊಂದಿಗೆ ಮಾತನಾಡಿ, ಕೃಪಾ ಆಳ್ವ ಅವರು ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಮತ್ತೊಮ್ಮೆ ವಿಚಾರಣೆಗೆ ಬರುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಇಂದು ಹಾಜರಾಗಿದ್ದಾರೆ ಎಂದು ತಿಳಿಸಿದರು.

ಕೃಪಾ ಆಳ್ವ ಅವರು ವಿದೇಶಕ್ಕೆ ತೆರಳಿದ್ದ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಕೀಲೆ, ಮಗಳೊಂದಿಗೆ ಪೂರ್ವನಿಗದಿತ ಪ್ರವಾಸಕ್ಕಾಗಿ ವಿದೇಶಕ್ಕೆ ತೆರಳಿದ್ದರು. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

Ad Widget
Click to comment

Leave a Reply

ಸ್ಥಳೀಯ

Uppinangadi-ಉಪ್ಪಿನಂಗಡಿ: ಕೂಟೇಲಿನಲ್ಲಿ ಕಾರು-ಬೈಕ್ ಡಿಕ್ಕಿ; ರಸ್ತೆಯಲ್ಲೇ ಹೊತ್ತಿ ಉರಿದ ಬೈಕ್

Published

on



Ad Widget

Ad Widget

Ad Widget

Ad Widget

ಕಾರಿಗೆ ಡಿಕ್ಕಿ ಹೊಡೆದ ಬೈಕ್ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ನ.10ರಂದು ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಸ್ಥಳದಲ್ಲಿ ಕೂಡಲೇ ಬೆಂಕಿ ನಂದಿಸುವ ವ್ಯವಸ್ಥೆ ಇಲ್ಲದ ಕಾರಣ ಬೈಕ್ ಬೆಂಕಿಗಾಹುತಿಯಾಗಿದೆ.

Ad Widget

Ad Widget

Ad Widget

ಉಪ್ಪಿನಂಗಡಿ: ಕಾರಿಗೆ ಡಿಕ್ಕಿ ಹೊಡೆದ ಬೈಕ್ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ನ.10ರಂದು ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ದ್ವಿಪಥದ ಏಕಮುಖ ರಸ್ತೆಯಲ್ಲಿ ಏಕಾಏಕಿ ಮತ್ತೊಂದು ಪಥಕ್ಕೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ.

Ad Widget

Ad Widget <> Ad Widget

ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಉರುಳಿ ಬಿದ್ದಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲಿ ಕೂಡಲೇ ಬೆಂಕಿ ನಂದಿಸುವ ವ್ಯವಸ್ಥೆ ಇಲ್ಲದ ಕಾರಣ ಬೈಕ್ ಬೆಂಕಿಗಾಹುತಿಯಾಗಿದೆ.



Ad Widget

ಅದೃಷ್ಟವಶಾತ್ ಬೈಕ್ ಸವಾರ ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading

ಸ್ಥಳೀಯ

Beltangadi-ಪಟಾಕಿ ಮೇಲೆ ಕಾಲಿಟ್ಟ ಯುವಕ – ಪಾದ ಛಿದ್ರ..!

Published

on



Ad Widget

Ad Widget

Ad Widget

Ad Widget

ಪಟಾಕಿ ಸಿಡಿಯುವುದನ್ನು ತಡೆಯುವ ಉದ್ದೇಶದಿಂದ ಅದರ ಮೇಲೆ ಕಾಲಿಟ್ಟ ಯುವಕನ ಬಲಗಾಲಿಗೆ ಸ್ಫೋಟದ ಪರಿಣಾಮ ಗಾಯವಾದ ಘಟನೆ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಸಮೀಪದ ಪೊರ್ಕಂಡದಲ್ಲಿ ನ. 9ರಂದು ಸಂಜೆ ನಡೆದಿದೆ. ಪೊರ್ಕಂಡ ನಿವಾಸಿ ಕೃಷ್ಣಪ್ಪ ಗೌಡ ಅವರ ಪುತ್ರ ಲಿಕೇಶ್ ಗೌಡ (20) ಗಾಯಗೊಂಡ ಯುವಕ.

Ad Widget

Ad Widget

Ad Widget

ಬೆಳ್ತಂಗಡಿ: ಪಟಾಕಿ ಸಿಡಿಯುವುದನ್ನು ತಡೆಯುವ ಉದ್ದೇಶದಿಂದ ಅದರ ಮೇಲೆ ಕಾಲಿಟ್ಟ ಯುವಕನ ಬಲಗಾಲಿಗೆ ಸ್ಫೋಟದ ಪರಿಣಾಮ ಗಾಯವಾದ ಘಟನೆ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಸಮೀಪದ ಪೊರ್ಕಂಡದಲ್ಲಿ ನ. 9ರಂದು ಸಂಜೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ಪೊರ್ಕಂಡ ನಿವಾಸಿ ಕೃಷ್ಣಪ್ಪ ಗೌಡ ಅವರ ಪುತ್ರ ಲಿಕೇಶ್ ಗೌಡ (20) ಗಾಯಗೊಂಡ ಯುವಕ.

Ad Widget

Ad Widget <> Ad Widget

ಮನೆಯ ಅಂಗಳದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ಮನೆಯವರು ಒಳಗಿನಿಂದ ಹೊರಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಪಟಾಕಿಯಿಂದ ಅಪಾಯವಾಗದಂತೆ ತಡೆಯುವ ಉದ್ದೇಶದಿಂದ ಲಿಕೇಶ್ ಅವರು ಅದರ ಮೇಲೆ ಬಲಗಾಲು ಇಟ್ಟಿದ್ದಾರೆ ಎನ್ನಲಾಗಿದೆ. ಈ ವೇಳೆ ಪಟಾಕಿ ಏಕಾಏಕಿ ಸ್ಫೋಟಗೊಂಡಿದ್ದು, ಸ್ಫೋಟದ ರಭಸಕ್ಕೆ ಅವರ ಬಲಗಾಲಿಗೆ ಭಾಗಶಃ ಗಾಯವಾಗಿದೆ.



Ad Widget

ತಕ್ಷಣ ಮನೆಯವರು ಹಾಗೂ ಸ್ನೇಹಿತರು ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಲಿಕೇಶ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಅಂತರ ರಾಜ್ಯ

Divorce-ಮೂರನೇ ಪತ್ನಿಯಿಂದಲೂ ಡೈವರ್ಸ್: ಪವನ್ ಕಲ್ಯಾಣ್- ಅನ್ನಾ ದಾಂಪತ್ಯದಲ್ಲಿ ಬಿರುಕು..!

Published

on



Ad Widget

Ad Widget

Ad Widget

Ad Widget

ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅವರ ಪತ್ನಿ ಅನ್ನಾ ಕೊನಿಡೇಲ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ. ಪರಸ್ಪರ ಒಪ್ಪಿಗೆಯ ಮೇರೆಗೆ ಪ್ರತ್ಯೇಕವಾಗುತ್ತಿರುವುದಾಗಿ ದಂಪತಿ ಘೋಷಿಸಿದ್ದು, 13 ವರ್ಷಗಳ ವೈವಾಹಿಕ ಜೀವನ ಮುಕ್ತಾಯಗೊಂಡಿದೆ.

Ad Widget

Ad Widget

Ad Widget

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅವರ ಪತ್ನಿ ಅನ್ನಾ ಕೊನಿಡೇಲ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ. ಪರಸ್ಪರ ಒಪ್ಪಿಗೆಯ ಮೇರೆಗೆ ಪ್ರತ್ಯೇಕವಾಗುತ್ತಿರುವುದಾಗಿ ದಂಪತಿ ಘೋಷಿಸಿದ್ದು, 13 ವರ್ಷಗಳ ವೈವಾಹಿಕ ಜೀವನ ಮುಕ್ತಾಯಗೊಂಡಿದೆ.

Ad Widget

Ad Widget alt="Ad Widget"/>

Ad Widget

ಪವನ್ ಕಲ್ಯಾಣ್ ಮತ್ತು ಅನ್ನಾ ಕೊನಿಡೇಲ ಅವರ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಸುದ್ದಿಗಳು ಕೆಲವು ಸಮಯದಿಂದ ಟಾಲಿವುಡ್ ವಲಯದಲ್ಲಿ ಹರಿದಾಡುತ್ತಿದ್ದವು. ಇದೀಗ ಪ್ರತ್ಯೇಕತೆಯ ನಿರ್ಧಾರ ಅಧಿಕೃತವಾಗಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಹಾಗೂ ಬೇಸರ ಮೂಡಿಸಿದೆ.

Ad Widget

Ad Widget <> Ad Widget

ವಿಚ್ಛೇದನದ ಸುಳಿವು ನೀಡಿದ್ದ ಮೂರು ಬೆಳವಣಿಗೆಗಳು!
ದಂಪತಿಯ ಪ್ರತ್ಯೇಕತೆಯ ನಿರ್ಧಾರಕ್ಕೂ ಮುನ್ನ ನಡೆದ ಕೆಲವು ಘಟನೆಗಳು ಇದೀಗ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆಗಳು ಹಲವು ತಿಂಗಳ ಹಿಂದೆಯೇ ದಂಪತಿ ಪ್ರತ್ಯೇಕವಾಗುವ ನಿರ್ಧಾರ ಕೈಗೊಂಡಿದ್ದರೇ ಎಂಬ ಊಹಾಪೋಹಗಳಿಗೆ ಕಾರಣವಾಗಿವೆ.



Ad Widget

ಅನ್ನಾ ಇನ್‌ಸ್ಟಾಗ್ರಾಂ ಖಾತೆ ನಿಷ್ಕ್ರಿಯ:
ಕೆಲವು ಸಮಯದ ಹಿಂದೆ ಅನ್ನಾ ಕೊನಿಡೇಲ ತಮ್ಮ ಇನ್‌ಸ್ಟಾಗ್ರಾಂ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು. ಆಗಲೇ ಅಭಿಮಾನಿಗಳಲ್ಲಿ ಹಲವು ಅನುಮಾನಗಳು ಮೂಡಿದ್ದವು. ಇದೀಗ ದಂಪತಿಯ ಪ್ರತ್ಯೇಕತೆಯ ಸುದ್ದಿ ಹೊರಬಂದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮತ್ತೆ ಚರ್ಚೆಯಾಗುತ್ತಿದೆ.

Ad Widget

Ad Widget

ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿದ್ದ ಪವನ್:
ಸುಮಾರು ಎರಡು ವಾರಗಳ ಹಿಂದೆ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಆರಂಭದಲ್ಲಿ ಈ ಭೇಟಿಯನ್ನು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತ ರಾಜಕೀಯ ಚರ್ಚೆ ಎಂದು ಭಾವಿಸಲಾಗಿತ್ತು. ಆದರೆ ಇದೀಗ ಪವನ್ ಅವರ ವೈಯಕ್ತಿಕ ವಿಚಾರದ ಬಗ್ಗೆಯೂ ಚರ್ಚೆ ನಡೆದಿರಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಜನಸೇನಾ ಮತ್ತು ಟಿಡಿಪಿ ನಡುವೆ ರಾಜಕೀಯ ಮೈತ್ರಿ ಇರುವುದರಿಂದ ಈ ಭೇಟಿಯ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಸಾಯಿ ದುರ್ಗಾ ತೇಜ್ ನಿಶ್ಚಿತಾರ್ಥಕ್ಕೆ ಅನ್ನಾ ಗೈರು:
ಪವನ್ ಕಲ್ಯಾಣ್ ಅವರ ಸಂಬಂಧಿ, ನಟ ಸಾಯಿ ದುರ್ಗಾ ತೇಜ್ ಅವರ ನಿಶ್ಚಿತಾರ್ಥ ಸಮಾರಂಭಕ್ಕೆ ಅನ್ನಾ ಕೊನಿಡೇಲ ಗೈರಾಗಿದ್ದರು. ಪವನ್ ಕಲ್ಯಾಣ್ ಕೂಡ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ರಾಜಕೀಯ ಕಾರ್ಯಕ್ರಮದ ಕಾರಣದಿಂದ ಪವನ್ ಗೈರಾಗಿದ್ದರು ಎನ್ನಲಾಗಿತ್ತು. ಆದರೆ ಅನ್ನಾ ಅವರ ಗೈರುಹಾಜರಿ ದಂಪತಿಯ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿತ್ತು.

ಮೂರನೇ ದಾಂಪತ್ಯಕ್ಕೂ ಅಂತ್ಯ:
ಪವನ್ ಕಲ್ಯಾಣ್ ಅವರಿಗೆ ಇದು ಮೂರನೇ ವಿವಾಹವಾಗಿತ್ತು. 1997ರಲ್ಲಿ ನಂದಿನಿ ಅವರನ್ನು ವಿವಾಹವಾಗಿದ್ದ ಅವರು, 2008ರಲ್ಲಿ ನ್ಯಾಯಾಲಯದ ಮೂಲಕ ವಿಚ್ಛೇದನ ಪಡೆದಿದ್ದರು. ಬಳಿಕ ನಟಿ ರೇಣು ದೇಸಾಯಿ ಅವರನ್ನು ವಿವಾಹವಾಗಿದ್ದರು. ಈ ದಾಂಪತ್ಯವೂ ಹೆಚ್ಚು ಕಾಲ ಉಳಿಯದೆ ಇಬ್ಬರೂ ಪ್ರತ್ಯೇಕವಾಗಿದ್ದರು. ಪವನ್ ಮತ್ತು ರೇಣು ದೇಸಾಯಿ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

ಇದೀಗ ಅನ್ನಾ ಕೊನಿಡೇಲ ಅವರೊಂದಿಗಿನ 13 ವರ್ಷಗಳ ದಾಂಪತ್ಯವೂ ಅಂತ್ಯಗೊಂಡಿದೆ. ಆದರೆ ದಂಪತಿ ಪ್ರತ್ಯೇಕವಾಗಲು ನಿಖರವಾದ ಕಾರಣವೇನು ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಈ ಬೆಳವಣಿಗೆ ಪವನ್ ಕಲ್ಯಾಣ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!