Connect with us

ಶಿಕ್ಷಣ

Vivekananda-ಜ್ಞಾನಸೇತು :2026:, “ಸೈನ್ಸ್ ಫಾರ್ ಪೀಸ್” ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ.

Published

on



Ad Widget

Ad Widget

Ad Widget

Ad Widget

ಜ್ಞಾನಸೇತು : 2026: “ಸೈನ್ಸ್ ಫಾರ್ ಪೀಸ್ ” ವಿಜ್ಞಾನ ಮೇಳವು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜುನಲ್ಲಿ ಅಕ್ಟೋಬರ್ 30ರಂದು ಜರುಗಿತು.ಹೈಸ್ಕೂಲ್ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿವಿಧ ವಿಜ್ಞಾನ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

ಜ್ಞಾನಸೇತು : 2026: “ಸೈನ್ಸ್ ಫಾರ್ ಪೀಸ್ ” ವಿಜ್ಞಾನ ಮೇಳವು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜುನಲ್ಲಿ ಅಕ್ಟೋಬರ್ 30ರಂದು ಜರುಗಿತು.ಹೈಸ್ಕೂಲ್ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿವಿಧ ವಿಜ್ಞಾನ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಈ ಸ್ಪರ್ಧೆ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 20ಕ್ಕೂ ಅಧಿಕ ಶಾಲೆಗಳ 600 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ ಲೋಡ್ ಅಪ್ ‘ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಪಿ. ಕೆ ಶುಭನ್. (ಪದ್ಮನಾಭ ಕೆ ಮತ್ತು ರೇಖಾ ಪಿ. ನಾಯ್ಕ್ ದಂಪತಿ ಪುತ್ರ )ಭವಿಷ್ 9ನೇ ತರಗತಿ (ಮುತ್ತಪ್ಪ ನಾಯ್ಕ್ ಎ ಮತ್ತು ಆಶಾಲತಾ. ಎ ದಂಪತಿ ಪುತ್ರ )ಪ್ರಥಮ ಸ್ಥಾನವನ್ನು ಹಾಗೂ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಸಮೃದ್.ಆರ್. ಶೆಟ್ಟಿ 10ನೇ ತರಗತಿ (ರಾಮಚಂದ್ರ. ಕೆ ಮತ್ತು ಶೋಭಾ ದಂಪತಿ ಪುತ್ರ ) ಮತ್ತು ಸಮನ್ಯು ವೈಲಾಯ 8ನೇ ತರಗತಿ( ವಿಜಯ್ ವಿ . ಎಸ್ ಮತ್ತು ಪ್ರಥ್ವಿ. ಎಮ್ ದಂಪತಿ ಪುತ್ರ )ಪ್ರಥಮ ಸ್ಥಾನವನ್ನು  ಪಡೆದುಕೊಂಡರು.

Ad Widget

Ad Widget <> Ad Widget

ಶಾಲಾ ತಂಡವು ರನ್ನರ್ ಅಪ್ ಪ್ರಶಸ್ತಿ ಯೊಂದಿಗೆ ರೂಪಾಯಿ ಹತ್ತು ಸಾವಿರವನ್ನು ಪಡೆದುಕೊಂಡಿದೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶಕುಮಾರ್ ರೈ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



Ad Widget
Ad Widget
Click to comment

Leave a Reply

ಶಿಕ್ಷಣ

Vivekananda-ವಲಯ ಮಟ್ಟದ ಪ್ರತಿಭಾ ಕಾರಂಜಿ 2026: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕೇಂದ್ರ ಸಂಸ್ಥೆಯ ಕೇಂದ್ರ ಪುತ್ತೂರು, ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ 2026 ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ನಡೆಯಿತು. ಈ ವಲಯ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 35 ಮಂದಿ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ.

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕೇಂದ್ರ ಸಂಸ್ಥೆಯ ಕೇಂದ್ರ ಪುತ್ತೂರು, ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ 2026 ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ನಡೆಯಿತು. ಈ ವಲಯ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸುಮಾರು 35 ಮಂದಿ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ.

Ad Widget

Ad Widget alt="Ad Widget"/>

Ad Widget

ರಸಪ್ರಶ್ನೆ ಸ್ಪರ್ಧೆ- ಸಮೃದ್ಧಿ ಕೆ ಶೆಟ್ಟಿ, ದೇವಿ ಪ್ರಣಾವತಿ- –ಪ್ರಥಮ ಸ್ಥಾನ, ಧಾರ್ಮಿಕ ಪಠಣ- ಅಭೀಷ್ಟಾಶಂಕರ ಶರ್ಮ – ಪ್ರಥಮ ಸ್ಥಾನ, ಚಿತ್ರಕಲೆ – ಚಿಂತನಾ.ಎಂ – ಪ್ರಥಮ ಸ್ಥಾನ, ಜನಪದ ನೃತ್ಯ – ಗಹನ, ಪೃಥ್ವಿ, ಆಕಾಂಕ್ಷ ಶೆಟ್ಟಿ, ಆಶಿನಾ.ಎನ್, ಲಿಖಿತಾ, ಧ್ವನಿ.ಎ, ಆನಿಕ, ದೇವಿಕಾ, ಕೃತಜ್ಞ, ಪ್ರಣವಿ, ಅನಘ ಮತ್ತು ಶ್ರೀವರ್ಧನ- ಪ್ರಥಮ ಸ್ಥಾನ, ಭಾವಗೀತೆ- ಸಿರಿ ಹಿಳ್ಳೆಮನೆ- ದ್ವಿತೀಯ ಸ್ಥಾನ, ಇಂಗ್ಲೀಷ್ ಭಾಷಣ-ಶ್ರೀಯಾ.ಎಸ್.ರೈ- ತೃತೀಯ ಸ್ಥಾನ, ಭರತನಾಟ್ಯ-ಸಾನ್ವಿ.ಎಸ್- ತೃತೀಯ ಸ್ಥಾನ, ಗಝಲ್- ದೀಪ್ತಿ ಕುಬುಣುರಾಯ- ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಅವರು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Vivekananda Law College-ವಿವೇಕಾನಂದ ಕಾನೂನು ಕಾಲೇಜಿನ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ವಿಶ್ವಾಸ್ ಶೆಣೈ, ಸಂಚಾಲಕರಾಗಿ ಮಹೇಶ್ ಕಜೆ, ಕೋಶಾಧಿಕಾರಿಯಾಗಿ ಸುರೇಶ್ ರೈ ಪಡ್ಡಂಬೈಲು ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಹಾಗೂ ಜವಾಬ್ದಾರಿ ಹಸ್ತಾಂತರ ಸಮಾರಂಭ ನ.6ರಂದು ಕಾಲೇಜಿನ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು.

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಹಾಗೂ ಜವಾಬ್ದಾರಿ ಹಸ್ತಾಂತರ ಸಮಾರಂಭ ನ.6ರಂದು ಕಾಲೇಜಿನ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾಲೇಜಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದ್ಯಮಿ ಕೆ. ವಿಶ್ವಾಸ್ ಶೆಣೈ, ಸಂಚಾಲಕರಾಗಿ ನ್ಯಾಯವಾದಿ ಮಹೇಶ್ ಕಜೆ ಹಾಗೂ ಕೋಶಾಧಿಕಾರಿಯಾಗಿ ನ್ಯಾಯವಾದಿ ಸುರೇಶ್ ರೈ ಪಡ್ಡಂಬೈಲು ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ನೂತನ ಆಡಳಿತ ಮಂಡಳಿಯ ಸದಸ್ಯರಾಗಿ ವಕೀಲರಾದ ಡಾ. ಅರುಣ್ ಶ್ಯಾಂ, ಮಾಧವ ಪೂಜಾರಿ, ಮಹೇಶ್ ಕೆ. ಸವಣೂರು, ನಗರಸಭೆಯ ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಶೋಭಾ ಕೊಳತ್ತಾಯ ಹಾಗೂ ಸಂತೋಷ್ ರೈ ಕೈಕಾರ ಆಯ್ಕೆಯಾಗಿದ್ದಾರೆ.



Ad Widget

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಹಾಗೂ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಅವರು ನೂತನ ಸಮಿತಿಗೆ ಜವಾಬ್ದಾರಿ ಹಸ್ತಾಂತರಿಸಿದರು.

Ad Widget

Ad Widget

ಈ ಸಂದರ್ಭದಲ್ಲಿ ಮಾತೃ ಸಂಸ್ಥೆಯ ನಿರ್ದೇಶಕರಾದ ರವೀಂದ್ರ ರೈ, ರಮೇಶ್ಚಂದ್ರ, ಮಹಾಲಕ್ಷ್ಮೀ ಕೆ., ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸುರೇಂದ್ರ ಕಿಣಿ ಜಿ., ಕೋಶಾಧಿಕಾರಿ ಯಶೋಧರ ಜೈನ್ ಹಾಗೂ ಸದಸ್ಯರಾದ ಅರುಣ್ ಬಿ.ಕೆ., ಚೇತನ್ ನಾಯಕ್, ಇಂದುಶೇಖರ್ ಮತ್ತು ಪ್ರಮಿತಾ ಸಿ. ಹಾಸ್ ಉಪಸ್ಥಿತರಿದ್ದರು.

ಮಾತೃ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್ ಬೊಟ್ಯಾಡಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ.ಕೆ. ರವೀಂದ್ರ, ಪ್ರಾಂಶುಪಾಲೆ ಡಾ. ಅಕ್ಷತಾ ಎ.ಪಿ., ಅಧ್ಯಾಪಕ ಮತ್ತು ಬೋಧಕೇತರ ಸಿಬ್ಬಂದಿ ನೂತನ ಆಡಳಿತ ಮಂಡಳಿಗೆ ಶುಭ ಹಾರೈಸಿದರು.

ನಿರ್ಗಮಿತ ಸಮಿತಿಯ ಅಧ್ಯಕ್ಷರು ಹಾಗೂ ಸಂಚಾಲಕರು ನೂತನ ಆಡಳಿತ ಮಂಡಳಿಗೆ ಶುಭ ಹಾರೈಸಿ, ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನೂತನ ಅಧ್ಯಕ್ಷರು ಮತ್ತು ಸಂಚಾಲಕರು ಸಂಸ್ಥೆಯ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವ ಸಂಕಲ್ಪ ವ್ಯಕ್ತಪಡಿಸಿ, ಎಲ್ಲರ ಸಹಕಾರ ಕೋರಿದರು.

Ad Widget
Continue Reading

ಶಿಕ್ಷಣ

Medha – 2027-ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ “ಮೇಧಾ – 2027” – ಉಚಿತ ಶಿಕ್ಷಣ ಯೋಜನೆ ; ಡಿ.6ರಂದು ಪ್ರವೇಶ ಪರೀಕ್ಷೆ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ, ಸುಮಾರು ಆರು ದಶಕಗಳ ಸಮೃದ್ಧ ಶೈಕ್ಷಣಿಕ ಪರಂಪರೆಯುಳ್ಳ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಕೇವಲ ನಗರ ಪ್ರದೇಶ ಮಾತ್ರವಲ್ಲದೇ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ. ಸಂಸ್ಥೆಯು ಮೇಧಾ –2027 ಎಂಬ ಶೀರ್ಷಿಕೆಯೊಂದಿಗೆ ಉಚಿತ ಶಿಕ್ಷಣ ಯೋಜನೆಯನ್ನು ಪರಿಚಯಿಸಿದ್ದು, ಪರೀಕ್ಷೆಯೊಂದನ್ನು ನಡೆಸಿ ಅದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೇ. 100 ವಿದ್ಯಾರ್ಥಿವೇತನ ಅರ್ಥಾತ್ ಉಚಿತ ಶಿಕ್ಷಣ ದೊರೆಯಲಿದೆ.

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ, ಸುಮಾರು ಆರು ದಶಕಗಳ ಸಮೃದ್ಧ ಶೈಕ್ಷಣಿಕ ಪರಂಪರೆಯುಳ್ಳ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಕೇವಲ ನಗರ ಪ್ರದೇಶ ಮಾತ್ರವಲ್ಲದೇ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯವನ್ನು ಒದಗಿಸುತ್ತಾ ಬಂದಿರುವ ನಮ್ಮ ಸಂಸ್ಥೆಯು ಮೇಧಾ –2027 ಎಂಬ ಶೀರ್ಷಿಕೆಯೊಂದಿಗೆ ಉಚಿತ ಶಿಕ್ಷಣ ಯೋಜನೆಯನ್ನು ಪರಿಚಯಿಸಿದ್ದು, ಪರೀಕ್ಷೆಯೊಂದನ್ನು ನಡೆಸಿ ಅದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೇ. 100 ವಿದ್ಯಾರ್ಥಿವೇತನ ಅರ್ಥಾತ್ ಉಚಿತ ಶಿಕ್ಷಣ ದೊರೆಯಲಿದೆ. ಕಳೆದೆರಡು ಶೈಕ್ಷಣಿಕ ವರ್ಷದಿಂದ ಆರಂಭಗೊಂಡ ಈ ಯೋಜನೆಯಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ನಡೆಯಲಿದ್ದು, 9 ಹಾಗೂ 10ನೇ ತರಗತಿಗೆ ಸಂಬಂಧಪಟ್ಟ ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಜ್ಞಾನದ ಆಧಾರದ ಮೇಲೆ 120 ನಿಮಿಷಗಳ ಪರೀಕ್ಷೆ ಇರಲಿದೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.

Ad Widget

Ad Widget <> Ad Widget

2026 ರ ಡಿಸೆಂಬರ್ 6 ರಂದು ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು, ಹಾಸನ ಹಾಗೂ ತುಮಕೂರು ಜಿಲ್ಲೆಯ 9 ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿದೆ. ಪುತ್ತೂರಿನ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜು, ಕಡಬದ ಪಂಜ ರಸ್ತೆಯ ವಿದ್ಯಾನಗರದಲ್ಲಿರುವ ಸರಸ್ವತಿ ಪ್ರೌಢಶಾಲೆ, ವಿಟ್ಲದ ಸಾಲೆತ್ತೂರು ರಸ್ತೆಯಲ್ಲಿರುವ ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ, ಬಿ. ಸಿ. ರೋಡ್ ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ, ಸುಳ್ಯದ ಜಾಲ್ಸೂರಿನ ವಿನೋಬನಗರದಲ್ಲಿರುವ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿರುವ ಶ್ರೀ ಭಾರತಿ ವಿದ್ಯಾಪೀಠ, ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿರುವ ರೋಟರಿ ಇಂಗ್ಲಿಷ್ ಸ್ಕೂಲ್ ಹಾಗೂ ತುಮಕೂರಿನಲ್ಲಿರುವ ಚೇತನ ವಿದ್ಯಾಮಂದಿರ ಪ್ರೌಢಶಾಲೆ, ಸರ್ವೋದಯ ಶಿಕ್ಷಣ ಸಂಸ್ಥೆ ಪರೀಕ್ಷಾ ಕೇಂದ್ರಗಳಾಗಿರಲಿವೆ.



Ad Widget

ವಿದ್ಯಾರ್ಥಿಗಳು ಈ ನೋಂದಣಿ ಲಿಂಕ್ – www.vivekanandapuc.com/medhaನಲ್ಲಿ ನೋಂದಾಯಿಸುವ ಮೂಲಕ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 89711924424, 8105072386, 8073700468 ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!