Connect with us

ಬಿಗ್ ನ್ಯೂಸ್

Marriage-ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಜೊತೆ ಕಾವ್ಯಾ ಮಾರನ್ ಮದುವೆ: ಗ್ರೀಸ್‌ನಲ್ಲಿ ಅದ್ಧೂರಿ ಸಮಾರಂಭ..!

Published

on



Ad Widget

Ad Widget

Ad Widget

Ad Widget

ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನ.11ರಂದು ಗ್ರೀಸ್‌ನಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಅದ್ಧೂರಿ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ.

Ad Widget

Ad Widget

Ad Widget

ಗ್ರೀಸ್: ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನ.11ರಂದು ಗ್ರೀಸ್‌ನಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಅದ್ಧೂರಿ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಮದುವೆಯ ಮೊದಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನವಜೋಡಿ ಐವರಿ ಬಣ್ಣದ ಸಾಂಪ್ರದಾಯಿಕ ಉಡುಪುಗಳಲ್ಲಿ ಕಂಗೊಳಿಸಿದ್ದು, ಸುಂದರ ಕಸೂತಿ ವಿನ್ಯಾಸ ಹಾಗೂ ಮುತ್ತಿನ ಆಭರಣಗಳಿಂದ ಅಲಂಕರಿಸಿಕೊಂಡಿದ್ದಾರೆ. ಬಿಳಿ ಹೂವುಗಳಿಂದ ಸಿಂಗರಿಸಿದ ವೇದಿಕೆಯಲ್ಲಿ ಇಬ್ಬರೂ ನಗುಮುಖದಿಂದ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

Ad Widget

Ad Widget <> Ad Widget

ಅನಿರುದ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಂಡು, “ನನ್ನ ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಪ್ರೀತಿ… ಜೀವನಪೂರ್ತಿ ಜೊತೆಯಾಗಿ… 11.11” ಎಂದು ಬರೆದುಕೊಂಡಿದ್ದಾರೆ.



Ad Widget

ಗ್ರೀಸ್‌ನಲ್ಲಿ ನಿಶ್ಚಿತಾರ್ಥ, ಗಣ್ಯರ ಉಪಸ್ಥಿತಿ
ಗ್ರೀಸ್‌ನಲ್ಲಿ ನ.10ರಂದು ಈ ಜೋಡಿಯ ಸಾಂಪ್ರದಾಯಿಕ ನಿಶ್ಚಿತಾರ್ಥ ಸಮಾರಂಭ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಅನಿರುದ್ ಅವರ ಮಾವ, ಸೂಪರ್‌ಸ್ಟಾರ್ ರಜನಿಕಾಂತ್, ಐಶ್ವರ್ಯಾ ರಜನಿಕಾಂತ್, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಉದಯನಿಧಿ ಸ್ಟಾಲಿನ್ ಸೇರಿದಂತೆ ಕುಟುಂಬದ ಸದಸ್ಯರು ಮತ್ತು ಹಲವು ಗಣ್ಯರು ಭಾಗವಹಿಸಿದ್ದರು.

Ad Widget

Ad Widget

ಅನಿರುದ್ ಮತ್ತು ಕಾವ್ಯಾ ತಮ್ಮ ಪ್ರೀತಿಯ ವಿಚಾರವನ್ನು ಸಾರ್ವಜನಿಕವಾಗಿ ಗೌಪ್ಯವಾಗಿಯೇ ಇರಿಸಿದ್ದರು. 2024ರಲ್ಲಿ ಲಾಸ್ ವೇಗಾಸ್ ಸೇರಿದಂತೆ ವಿದೇಶಿ ಪ್ರವಾಸಗಳಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡ ಬಳಿಕ ಪ್ರೀತಿಯ ವದಂತಿಗಳು ಹರಡಿದ್ದವು. 2025ರ ಜೂನ್‌ನಲ್ಲಿ ಅನಿರುದ್ ಸಾಮಾಜಿಕ ಜಾಲತಾಣದಲ್ಲಿ ವಿವಾಹದ ಕುರಿತ ವದಂತಿಗಳನ್ನು ತಳ್ಳಿಹಾಕಿದ್ದರು. ಆದರೆ ಬಳಿಕ ಕುಟುಂಬದ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದ ಈ ಜೋಡಿ ಇದೀಗ ವಿವಾಹವಾಗುವ ಮೂಲಕ ಸುದ್ದಿಯಲ್ಲಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ ಅನಿರುದ್ ಸಾಧನೆ
‘ವೈ ದಿಸ್ ಕೊಲವೆರಿ ಡಿ’ ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಅನಿರುದ್, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ‘ಜೈಲರ್’, ‘ವಿಕ್ರಮ್’, ‘ಲಿಯೋ’, ‘ಜವಾನ್’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದಾರೆ.

ಕಾವ್ಯಾ ಮಾರನ್ ಅವರು ಸನ್ ಟಿವಿ ನೆಟ್‌ವರ್ಕ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದು, ಸನ್ ಗ್ರೂಪ್ ಸಂಸ್ಥಾಪಕ ಕಲಾನಿಧಿ ಮಾರನ್ ಅವರ ಪುತ್ರಿ. ಐಪಿಎಲ್‌ನ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಿರ್ವಹಣೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ನ.21ರಂದು ಚೆನ್ನೈನಲ್ಲಿ ಆರತಕ್ಷತೆ
ಗ್ರೀಸ್‌ನಲ್ಲಿ ಖಾಸಗಿ ಸಮಾರಂಭದಲ್ಲಿ ವಿವಾಹವಾದ ಬಳಿಕ ನ.21ರಂದು ಚೆನ್ನೈನಲ್ಲಿ ಅದ್ಧೂರಿ ವಿವಾಹ ಆರತಕ್ಷತೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗ, ರಾಜಕೀಯ, ಉದ್ಯಮ ಹಾಗೂ ಕ್ರಿಕೆಟ್ ಕ್ಷೇತ್ರದ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

High Court-ಈಶ್ವರಮಂಗಲ: ಮೇನಾಲದ ಹೈಟೆಕ್ ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕ ಬಂದ್‌ಗೆ ಹೈಕೋರ್ಟ್ ಆದೇಶ..!

Published

on



Ad Widget

Ad Widget

Ad Widget

Ad Widget

ಈಶ್ವರಮಂಗಲದ ಮೇನಾಲ ಪರಿಸರದಲ್ಲಿ ಕಾರ್ಯಾಚರಿಸುತ್ತಿದ್ದ ‘ಹೈಟೆಕ್ ಆರ್ಗಾನಿಕ್ ಫರ್ಟಿಲೈಸರ್’ ಹೆಸರಿನ ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

ಪುತ್ತೂರು: ಈಶ್ವರಮಂಗಲದ ಮೇನಾಲ ಪರಿಸರದಲ್ಲಿ ಕಾರ್ಯಾಚರಿಸುತ್ತಿದ್ದ ‘ಹೈಟೆಕ್ ಆರ್ಗಾನಿಕ್ ಫರ್ಟಿಲೈಸರ್’ ಹೆಸರಿನ ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget alt="Ad Widget"/>

Ad Widget

ಘಟಕದಿಂದ ಪರಿಸರದಲ್ಲಿ ಹರಡುತ್ತಿದ್ದ ತೀವ್ರ ದುರ್ವಾಸನೆ ಹಾಗೂ ಸ್ಥಳೀಯ ಸಾರ್ವಜನಿಕರಿಗೆ ಉಂಟಾಗುತ್ತಿದ್ದ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಈ ಆದೇಶ ನೀಡಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಘಟಕದ ಕಾರ್ಯಾಚರಣೆಯಿಂದ ಸ್ಥಳೀಯ ನಿವಾಸಿಗಳು ಎದುರಿಸುತ್ತಿದ್ದ ಸಮಸ್ಯೆಗಳಿಗೆ ನ್ಯಾಯಾಲಯದ ಈ ಆದೇಶದಿಂದ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ.



Ad Widget

ಈ ಬೆಳವಣಿಗೆಯನ್ನು ಈಶ್ವರಮಂಗಲದ ಮೇನಾಲ ಪರಿಸರದ ಜನರ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯೆಂದು ಸ್ಥಳೀಯರು ಪರಿಗಣಿಸಿದ್ದಾರೆ.

Continue Reading

ಅಂತರ ರಾಜ್ಯ

Sonia Gandhi-ಸೋನಿಯಾ ಗಾಂಧಿ ಜೀವನಾಧಾರಿತ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ: ತೆಲುಗಿನಲ್ಲಿ ತೆರೆಗೆ ಬರಲಿದೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’..!

Published

on



Ad Widget

Ad Widget

Ad Widget

Ad Widget

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಹಾಗೂ ರಾಜಕೀಯ ಪಯಣವನ್ನು ಆಧರಿಸಿದ ಆತ್ಮಕಥೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ತೆಲುಗು ಚಲನಚಿತ್ರವಾಗಿ ತೆರೆಗೆ ಬರಲು ಸಿದ್ಧತೆ ನಡೆಯುತ್ತಿದೆ. ಈ ಕುರಿತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಕಾರ್ಯಾಧ್ಯಕ್ಷ ಜಗ್ಗಾ ರೆಡ್ಡಿ ಘೋಷಣೆ ಮಾಡಿದ್ದಾರೆ.

Ad Widget

Ad Widget

Ad Widget

ಹೈದರಾಬಾದ್: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಹಾಗೂ ರಾಜಕೀಯ ಪಯಣವನ್ನು ಆಧರಿಸಿದ ಆತ್ಮಕಥೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ತೆಲುಗು ಚಲನಚಿತ್ರವಾಗಿ ತೆರೆಗೆ ಬರಲು ಸಿದ್ಧತೆ ನಡೆಯುತ್ತಿದೆ. ಈ ಕುರಿತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಕಾರ್ಯಾಧ್ಯಕ್ಷ ಜಗ್ಗಾ ರೆಡ್ಡಿ ಘೋಷಣೆ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಸಂಗಾರೆಡ್ಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚಿತ್ರದ ನಿರ್ಮಾಣಕ್ಕೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೈಜೋಡಿಸುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರದ ಕಾಂಗ್ರೆಸ್ ಸಂಚಾಲಕ ಜುಲಕಂಟಿ ಆಂಜನೇಯಲು ಅವರು ಸಿನಿಮಾ ನಿರ್ಮಾಣಕ್ಕಾಗಿ ₹2 ಕೋಟಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

Ad Widget

Ad Widget <> Ad Widget

ಚಿತ್ರದ ಆರಂಭಿಕ ನಿರ್ಮಾಣ ಕಾರ್ಯಗಳ ಮೇಲ್ವಿಚಾರಣೆಗಾಗಿ 50 ಸದಸ್ಯರ ಸಮಿತಿ ರಚಿಸಲು ಜಗ್ಗಾ ರೆಡ್ಡಿ ಪ್ರಸ್ತಾಪಿಸಿದ್ದಾರೆ. ಗಾಂಧಿ ಭವನದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರಿಪ್ರಸಾದ್ ಸಮಿತಿಯ ಚಟುವಟಿಕೆಗಳನ್ನು ನಿರ್ವಹಿಸಲಿದ್ದಾರೆ.



Ad Widget

“ನೀವೆಲ್ಲರೂ ಚುನಾವಣೆಗೆ ಹಣ ಖರ್ಚು ಮಾಡುತ್ತೀರಲ್ಲವೇ? ಇದನ್ನೂ ಅಂತಹದ್ದೇ ಒಂದು ಖರ್ಚು ಎಂದು ಪರಿಗಣಿಸಿ. ನಾವೆಲ್ಲರೂ ಸೇರಿ ಬಜೆಟ್ ಸಂಗ್ರಹಿಸಿ, ಉತ್ತಮ ನಿರ್ದೇಶಕರನ್ನು ಆಯ್ಕೆ ಮಾಡೋಣ” ಎಂದು ಜಗ್ಗಾ ರೆಡ್ಡಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

Ad Widget

Ad Widget

ಅಗತ್ಯ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಟಿಪಿಸಿಸಿ ಅಧ್ಯಕ್ಷ ಮಹೇಶ್ ಕುಮಾರ್ ಗೌಡ್ ಅವರನ್ನು ಆಹ್ವಾನಿಸಿ ಚಿತ್ರದ ಚಿತ್ರೀಕರಣಕ್ಕೆ ಅಧಿಕೃತ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಸೋನಿಯಾ ಗಾಂಧಿ ಅವರ ಜೀವನದ ಅನುಭವಗಳು ಮತ್ತು ರಾಜಕೀಯ ಪಯಣವನ್ನು ಕಾರ್ಯಕರ್ತರು ತಿಳಿದುಕೊಳ್ಳಲು ಅನುಕೂಲವಾಗುವಂತೆ ಅವರ ಆತ್ಮಕಥೆಯ ಪ್ರತಿಗಳನ್ನು ತರಿಸಿ ವಿತರಿಸುವುದಾಗಿಯೂ ಹೇಳಿದ್ದಾರೆ.

ಸೋನಿಯಾ ಗಾಂಧಿ ಜೀವನದ ಪ್ರಮುಖ ಘಟ್ಟಗಳು ಚಿತ್ರದಲ್ಲಿ ಅನಾವರಣ
ಉದ್ದೇಶಿತ ಸಿನಿಮಾದಲ್ಲಿ ಸೋನಿಯಾ ಗಾಂಧಿ ಅವರು ಗಾಂಧಿ ಕುಟುಂಬದೊಂದಿಗೆ ಬೆಸೆದುಕೊಂಡ ದಿನಗಳಿಂದ ಹಿಡಿದು ದೇಶದ ಪ್ರಮುಖ ರಾಜಕೀಯ ನಾಯಕಿಯಾಗಿ ಬೆಳೆದ ಹಾದಿಯನ್ನು ಚಿತ್ರಿಸುವ ಉದ್ದೇಶವಿದೆ ಎಂದು ಜಗ್ಗಾ ರೆಡ್ಡಿ ತಿಳಿಸಿದ್ದಾರೆ.

ಇಂದಿರಾ ಗಾಂಧಿ ಅವರ ಸೊಸೆಯಾಗಿ, ರಾಜೀವ್ ಗಾಂಧಿ ಅವರ ಪತ್ನಿಯಾಗಿ ಹಾಗೂ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ತಾಯಿಯಾಗಿ ಸೋನಿಯಾ ಗಾಂಧಿ ಅವರ ಜೀವನದ ವಿವಿಧ ಮಜಲುಗಳು ಚಿತ್ರದಲ್ಲಿ ಮೂಡಿಬರಲಿವೆ.

ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹತ್ಯೆಯ ಬಳಿಕ ಕುಟುಂಬ ಎದುರಿಸಿದ ಸಂಕಷ್ಟಗಳು, ಸೋನಿಯಾ ಗಾಂಧಿ ಅವರ ಮುಂದಿನ ರಾಜಕೀಯ ಸವಾಲುಗಳು ಹಾಗೂ ರಾಜಕೀಯ ಜವಾಬ್ದಾರಿಗಳ ನಡುವೆ ಮಕ್ಕಳನ್ನು ಬೆಳೆಸಿದ ರೀತಿ ಸೇರಿದಂತೆ ಹಲವು ಪ್ರಮುಖ ಘಟನೆಗಳು ಸಿನಿಮಾದಲ್ಲಿ ಇರಲಿವೆ ಎಂದು ವರದಿಯಾಗಿದೆ.

ಭಾರತದಂತಹ ವಿವಿಧ ಧರ್ಮ, ಜಾತಿ ಮತ್ತು ಭಾಷೆಗಳ ವೈವಿಧ್ಯಮಯ ದೇಶದಲ್ಲಿ ಸೋನಿಯಾ ಗಾಂಧಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ ಎಂದು ಜಗ್ಗಾ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ad Widget
Continue Reading

ಸುಳ್ಯ

Areca nut-ಅಡಿಕೆ ರೇಟ್‌ ಜಂಪ್‌ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ

Published

on



Ad Widget

Ad Widget

Ad Widget

Ad Widget

ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget

Ad Widget

ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.



Ad Widget

ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.

Ad Widget

Ad Widget

ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.

ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!