Connect with us

ರಾಜ್ಯ

Farmer-₹25 ಲಕ್ಷ ಲಂಚ ಪಡೆದ ತಹಶೀಲ್ದಾರ್ ವರ್ಗಾವಣೆ: ಕಚೇರಿ ಆವರಣದಲ್ಲಿ ಮರವೇರಿ ಪ್ರತಿಭಟನೆ ನಡೆಸಿದ ರೈತ

Published

on



Ad Widget

Ad Widget

Ad Widget

Ad Widget

ಜಮೀನಿನ ಖಾತೆ ಬದಲಾವಣೆ ಮಾಡಿ ಪಹಣಿ ಪತ್ರ ನೀಡುವುದಾಗಿ ಹೇಳಿ ₹25 ಲಕ್ಷ ಲಂಚ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ 12 ರೈತ ಕುಟುಂಬಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

Ad Widget

Ad Widget

Ad Widget

ಶಿವಮೊಗ್ಗ: ಜಮೀನಿನ ಖಾತೆ ಬದಲಾವಣೆ ಮಾಡಿ ಪಹಣಿ ಪತ್ರ ನೀಡುವುದಾಗಿ ಹೇಳಿ ₹25 ಲಕ್ಷ ಲಂಚ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ 12 ರೈತ ಕುಟುಂಬಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ತಾಲೂಕಿನ ರಾಮೇನಕೊಪ್ಪ ಗ್ರಾಮದ ಸರ್ವೆ ನಂ. 17ರಲ್ಲಿರುವ ಜಮೀನಿನಲ್ಲಿ 1960ರಿಂದಲೂ 12 ಕುಟುಂಬಗಳು ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿವೆ. ತಾವೇ ಮೂಲ ಮಂಜೂರಾತಿದಾರರಾಗಿದ್ದರೂ ಜಮೀನಿನ ಖಾತೆ ಬದಲಾವಣೆ ಮಾಡಿ ತಮ್ಮ ಹೆಸರಿಗೆ ಪಹಣಿ ಮಾಡಿಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು.

Ad Widget

Ad Widget <> Ad Widget

ಇತ್ತೀಚೆಗೆ ವರ್ಗಾವಣೆಯಾಗಿರುವ ತಹಶೀಲ್ದಾರ್ ರಾಜೀವ್ ಅವರು ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ನೀಡಬೇಕೆಂದು ಹೇಳಿ ತಮ್ಮಿಂದ ₹25 ಲಕ್ಷ ಲಂಚ ಪಡೆದಿದ್ದಾರೆ. ಆದರೆ, ಹಣ ಪಡೆದರೂ ಕೆಲಸ ಮಾಡಿಕೊಡದೆ ವಂಚಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.



Ad Widget

ಈ ವೇಳೆ ಆಕ್ರೋಶಗೊಂಡ ರೈತ ನಾಗರಾಜ್ ಎಂಬವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಆಲದ ಮರವೇರಿ ಪ್ರತಿಭಟನೆ ನಡೆಸಿದರು.

Ad Widget

Ad Widget

ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ಕೆಳಗಿಳಿಸಲು ಪ್ರಯತ್ನಿಸಿದರು. ಬಳಿಕ ಹಿರಿಯ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ನ್ಯಾಯ ಒದಗಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಪ್ರತಿಭಟನೆ ಅಂತ್ಯಗೊಂಡಿತು.

ತಹಶೀಲ್ದಾರ್ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಸಮಗ್ರ ತನಿಖೆ ನಡೆಸಬೇಕು. ಆರೋಪಿತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದರು. ಈ ಸಂಬಂಧ ಲೋಕಾಯುಕ್ತ ಹಾಗೂ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸುವುದಾಗಿಯೂ ತಿಳಿಸಿದರು.

ಸಚಿವರ ಕಚೇರಿಯಿಂದ ಕರೆ ಮಾಡಿಸಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಲಾಗಿನ್ ಬಂದ್ ಮಾಡಿ ನೋಟಿಸ್ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ. ಲಂಚದ ಹಾವಳಿಯಿಂದ ರೈತರು ವಿಷ ಕುಡಿಯುವ ಸ್ಥಿತಿಗೆ ಬಂದಿದ್ದೇವೆ ಎಂದು ಮರ ಏರಿ ಪ್ರತಿಭಟಿಸಿದ ರೈತ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಅಂಜುಮ್, ತುಂಗಮ್ಮ, ಮೀನಾಕ್ಷಮ್ಮ, ರತ್ನಮ್ಮ, ಚಂದ್ರಶೇಖರ, ಬಸವರಾಜ ಸೇರಿದಂತೆ ನೊಂದ ಕುಟುಂಬಗಳ ಸದಸ್ಯರು ಪಾಲ್ಗೊಂಡಿದ್ದರು.

Ad Widget
Click to comment

Leave a Reply

ಅಪರಾಧ

Arrested-ಬಡ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಜಾಲ ಪತ್ತೆ: 11 ಮಂದಿ ಅರೆಸ್ಟ್; ಅಕ್ಕಪಡೆಯ ಮಹಿಳಾ ಪೊಲೀಸರ ಸಾಹಸಕ್ಕೆ ಮೆಚ್ಚುಗೆ

Published

on



Ad Widget

Ad Widget

Ad Widget

Ad Widget

ಬಡ ಕುಟುಂಬಗಳ ಹೆಣ್ಣುಮಕ್ಕಳಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಸಂಘಟಿತ ಜಾಲವೊಂದನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ. ಸುಮಾರು ಆರು ತಿಂಗಳಿಂದ ಡಿಜಿಟಲ್ ಮಾಧ್ಯಮಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದ ಈ ಜಾಲದ ವಿರುದ್ಧ ಪೊಲೀಸರು ಸುದೀರ್ಘ ತನಿಖೆ ನಡೆಸಿ 11 ಆರೋಪಿಗಳನ್ನು ಬಂಧಿಸಿದ್ದಾರೆ.

Ad Widget

Ad Widget

Ad Widget

ಬಳ್ಳಾರಿ, ನ.12: ಬಡ ಕುಟುಂಬಗಳ ಹೆಣ್ಣುಮಕ್ಕಳಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಸಂಘಟಿತ ಜಾಲವೊಂದನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ. ಸುಮಾರು ಆರು ತಿಂಗಳಿಂದ ಡಿಜಿಟಲ್ ಮಾಧ್ಯಮಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದ ಈ ಜಾಲದ ವಿರುದ್ಧ ಪೊಲೀಸರು ಸುದೀರ್ಘ ತನಿಖೆ ನಡೆಸಿ 11 ಆರೋಪಿಗಳನ್ನು ಬಂಧಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕಾರ್ಯಾಚರಣೆಯಲ್ಲಿ ವಿಶೇಷ ಗಮನ ಸೆಳೆದಿರುವುದು ಬಳ್ಳಾರಿಯ ‘ಅಕ್ಕ ಪಡೆ’ಯ ಮಹಿಳಾ ಪೊಲೀಸ್ ಸಿಬ್ಬಂದಿಯ ಸಾಹಸ. ಮಹಿಳಾ ಸಿಬ್ಬಂದಿಯೇ ಖುದ್ದಾಗಿ ಕಾರ್ಯಾಚರಣೆಗೆ ಇಳಿದು, ಆರೋಪಿಗಳ ಜಾಲದೊಳಗೆ ಪ್ರವೇಶಿಸಿ ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ನೆರವಾಗಿದ್ದಾರೆ.

Ad Widget

Ad Widget <> Ad Widget

ಬಡ ಕುಟುಂಬಗಳ ಹೆಣ್ಣುಮಕ್ಕಳನ್ನೇ ಗುರಿಯಾಗಿಸಿಕೊಂಡಿದ್ದ ಆರೋಪಿಗಳು, ಹಣದ ಆಮಿಷವೊಡ್ಡಿ ಅವರನ್ನು ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದರು. ಬಳ್ಳಾರಿ ಮಾತ್ರವಲ್ಲದೆ ಆಂಧ್ರಪ್ರದೇಶದ ಅನಂತಪುರ, ಚಿಕ್ಕಮಗಳೂರು, ಮೈಸೂರು ಸೇರಿದಂತೆ ಹಲವು ಪ್ರದೇಶಗಳಿಗೂ ಈ ಜಾಲದ ಸಂಪರ್ಕವಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.



Ad Widget

ಸುಮಾರು 45 ದಿನಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಿದ ಅಕ್ಕಪಡೆ ಬೃಹತ್ ಜಾಲವನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಸಂಬಂಧ ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Ad Widget

Ad Widget

ಫೋಟೋಗಳ ಮೂಲಕ ಹೆಣ್ಣುಮಕ್ಕಳ ಆಯ್ಕೆ!
ಆರೋಪಿಗಳು ಹೆಣ್ಣುಮಕ್ಕಳನ್ನು ಆಯ್ಕೆ ಮಾಡಲು ವ್ಯವಸ್ಥಿತ ವಿಧಾನ ಅನುಸರಿಸುತ್ತಿದ್ದರು. ನಿರ್ದಿಷ್ಟ ವಯಸ್ಸು, ಎತ್ತರ ಸೇರಿದಂತೆ ಕೆಲವು ಮಾನದಂಡಗಳನ್ನು ವಿಧಿಸಿ, ಜನ್ಮದಿನಾಂಕದೊಂದಿಗೆ ಮುಂಗೈ ಮತ್ತು ಮುಂಗಾಲು ಕಾಣುವಂತೆ ಫೋಟೋಗಳನ್ನು ಕಳುಹಿಸುವಂತೆ ಸೂಚಿಸುತ್ತಿದ್ದರು. ಹೀಗೆ ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿತ್ತು.

ಆಯ್ಕೆಯಾದ ಯುವತಿಯರನ್ನು ‘ಲಕ್ಷ್ಮಿ ಪೂಜೆ’ ಹೆಸರಿನಲ್ಲಿ ಕರೆಸಿಕೊಂಡು, ಹಣದ ಆಮಿಷವೊಡ್ಡಿ ಜಾಲಕ್ಕೆ ಸೆಳೆಯಲಾಗುತ್ತಿತ್ತು ಎನ್ನಲಾಗಿದೆ. ಈ ಪ್ರಕ್ರಿಯೆಯಲ್ಲಿ ಯುವತಿ, ಮಧ್ಯವರ್ತಿ ಹಾಗೂ ಜಾಲದ ಮುಖ್ಯಸ್ಥನಿಗೆ ಹಣ ನೀಡಲಾಗುತ್ತದೆ ಎಂದು ನಂಬಿಸಲಾಗುತ್ತಿತ್ತು. ಕೊನೆಗೆ ಬೆತ್ತಲೆ ಫೋಟೋಗಳನ್ನು ಕೂಡ ಕಳುಹಿಸುವಂತೆ ಒತ್ತಾಯಿಸಲಾಗುತ್ತಿತ್ತು. ಈ ಜಾಲದಲ್ಲಿ ಅಪ್ರಾಪ್ತ ವಯಸ್ಕ ಹೆಣ್ಣುಮಕ್ಕಳ ಫೋಟೋಗಳು ಕೂಡ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕೋಡ್ ವರ್ಡ್ ಮೂಲಕ ರಹಸ್ಯ ವ್ಯವಹಾರ
ತಮ್ಮ ಅಕ್ರಮ ಚಟುವಟಿಕೆಗಳನ್ನು ಗುಟ್ಟಾಗಿ ನಡೆಸಲು ಆರೋಪಿಗಳು ಕೋಡ್ ವರ್ಡ್‌ಗಳನ್ನು ಬಳಸುತ್ತಿದ್ದರು. ಜಾಲವನ್ನು ‘ಮೀಡಿಯಾ’, ಹೆಣ್ಣುಮಕ್ಕಳನ್ನು ‘ಪೇಪರ್’ ಹಾಗೂ ಜಾಲದ ಮುಖ್ಯಸ್ಥನನ್ನು ‘ಡಿಆರ್’ ಎಂದು ಕರೆಯುತ್ತಿದ್ದರು. ಈ ಸಂಕೇತ ಪದಗಳ ಮೂಲಕವೇ ಪರಸ್ಪರ ಸಂವಹನ ನಡೆಸಿ ಕಾರ್ಯಾಚರಣೆಯ ರಹಸ್ಯ ಕಾಪಾಡುತ್ತಿದ್ದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಳ್ಳಾರಿ ಜಿಲ್ಲೆಯಿಂದ ಮೂವರು ಯುವತಿಯರನ್ನು ಈ ಜಾಲದ ಮೂಲಕ ಕಳುಹಿಸಿರುವ ಸುಳಿವು ಲಭ್ಯವಾಗಿದೆ. ಒಟ್ಟು 16 ಜನರ ಪೈಕಿ 11 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಬಳ್ಳಾರಿಯ 10 ಮಂದಿ ಹಾಗೂ ಅನಂತಪುರ ಮತ್ತು ಪುಣೆಯ ತಲಾ ಒಬ್ಬರು ಸೇರಿದ್ದಾರೆ ಎಂದು ವರದಿಯಾಗಿದೆ.

ಬಡ ಮಹಿಳೆಯರ ವೇಷದಲ್ಲಿ ಅಕ್ಕಪಡೆ ಕಾರ್ಯಾಚರಣೆ
ನಗರದ ಕೆಲವು ಕೊಳೆಗೇರಿ ಪ್ರದೇಶಗಳಲ್ಲಿ ಈ ಜಾಲ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಕ್ಕಪಡೆಯ ಸಿಬ್ಬಂದಿ, ಜಾಲದ ಮಹಿಳಾ ಮಧ್ಯವರ್ತಿಗಳ ಸಂಪರ್ಕ ಸಾಧಿಸಿದ್ದಾರೆ. ಬಳಿಕ ಬಡ ಮಹಿಳೆಯರಂತೆ ಹಳೆಯ ಬಟ್ಟೆಗಳನ್ನು ಧರಿಸಿ, ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳ ಸದಸ್ಯರಂತೆ ನಟಿಸಿ ಜಾಲದ ಸಂಪರ್ಕಕ್ಕೆ ಬಂದಿದ್ದಾರೆ.

ಹಿಂದೆ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದ ತಮ್ಮ ಕುಟುಂಬಗಳು ಈಗ ಸಂಕಷ್ಟದಲ್ಲಿವೆ ಎಂದು ಹೇಳಿ ಆರೋಪಿಗಳ ವಿಶ್ವಾಸ ಗಳಿಸಿದ್ದಾರೆ. ಜಾಲದ ಮೂರು-ನಾಲ್ಕು ಹಂತಗಳನ್ನು ದಾಟಿ ಸಂಪೂರ್ಣ ಮಾಹಿತಿ ಸಂಗ್ರಹಿಸಿದ ಬಳಿಕ ಹೆಚ್ಚುವರಿ ಪೊಲೀಸ್ ತಂಡದ ನೆರವಿನಿಂದ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಅಕ್ಕಪಡೆಯ ಲಲಿತಮ್ಮ, ಅನಿತಾ, ಶಾಹೀದಾ ಹಾಗೂ ರುಖಿಯಾ ಬಾನು ಅವರು ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.

Ad Widget
Continue Reading

ರಾಜ್ಯ

Storms-ನ.14, 15ರಂದು ಶ್ರೀಲಂಕಾದಲ್ಲಿ ಚಂಡಮಾರುತ ಸಾಧ್ಯತೆ; ಕರ್ನಾಟಕದಲ್ಲಿ ಒಣಹವೆ ಮುಂದುವರಿಕೆ..!

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಚಳಿ ಮತ್ತು ಬಿಸಿಲಿನ ವಾತಾವರಣ ಮುಂದುವರಿದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಇದೇ ವೇಳೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಅದು ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆ ಹವಾಮಾನ ವಲಯದಲ್ಲಿ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

ರಾಜ್ಯದಲ್ಲಿ ಚಳಿ ಮತ್ತು ಬಿಸಿಲಿನ ವಾತಾವರಣ ಮುಂದುವರಿದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಇದೇ ವೇಳೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಅದು ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆ ಹವಾಮಾನ ವಲಯದಲ್ಲಿ ಕುತೂಹಲ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ನ.14 ಅಥವಾ 15ರಂದು ಚಂಡಮಾರುತ ಸಾಧ್ಯತೆ
ಹವಾಮಾನ ತಜ್ಞರ ಅಂದಾಜಿನ ಪ್ರಕಾರ, ನವೆಂಬರ್ 13ರ ವೇಳೆಗೆ ಶ್ರೀಲಂಕಾದ ಪೂರ್ವ ಕರಾವಳಿ ಸಮೀಪ ಪ್ರಬಲ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಈ ವಾಯುಭಾರ ಕುಸಿತ ಮತ್ತಷ್ಟು ಬಲ ಪಡೆದು ನವೆಂಬರ್ 14 ಅಥವಾ 15ರ ವೇಳೆಗೆ ಚಂಡಮಾರುತವಾಗಿ ರೂಪುಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

Ad Widget

Ad Widget <> Ad Widget

ಕರ್ನಾಟಕದಲ್ಲಿ ಒಣಹವೆ ಮುಂದುವರಿಕೆ
ಸಂಭಾವ್ಯ ಚಂಡಮಾರುತದ ಪರಿಣಾಮ ಕರ್ನಾಟಕದ ಹವಾಮಾನದ ಮೇಲೆ ಹೇಗಿರಲಿದೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.



Ad Widget

ಹಗಲಿನಲ್ಲಿ ಬಿಸಿಲಿನ ವಾತಾವರಣವಿದ್ದರೆ, ರಾತ್ರಿ ವೇಳೆ ತಂಪು ಹೆಚ್ಚಾಗುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಾತ್ರ ಹಗುರ ತುಂತುರು ಮಳೆಯಾಗುವ ಸಾಧ್ಯತೆಯನ್ನು ಅಂದಾಜಿಸಲಾಗಿದೆ.

Continue Reading

ರಾಜಕೀಯ

India Block Mega Rally: ಮೊದಲು ಚುನಾವಣಾ ಆಯುಕ್ತರ ಬೇಟೆ, ಬಳಿಕ ಮೋದಿ–ಶಾ ಸರದಿ : ಇಂಡಿಯಾ ಬ್ಲಾಕ್‌ ಮೆಗಾ Rallyಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುಡುಗು!

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವವನ್ನು ನಾಶವಾಗಲು ಬಿಡುವುದಿಲ್ಲ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

Ad Widget

Ad Widget alt="Ad Widget"/>

Ad Widget

ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇಶವನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿ ಮೊದಲ ಹೆಜ್ಜೆಯಾಗಲಿದೆ ಎಂದರು.

Ad Widget

Ad Widget <> Ad Widget

‘ಮೋದಿ ಎಲ್ಲಿಗೂ ಹೋಗುವುದಿಲ್ಲ’ ಎಂಬ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಗ್ಯಾನೇಶ್ ಕುಮಾರ್ ಬಳಿಕ ನಿಮ್ಮ ಸರದಿ ಬರಲಿದೆ. ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.



Ad Widget

ಈ ಸಭೆಯ ಮೂಲಕ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಜನರ ಸಂದೇಶವನ್ನು ತಲುಪಿಸುವ ಉದ್ದೇಶವಿದೆ. ಇದು ಕೇವಲ ರಾಜಕೀಯ ಪಕ್ಷದ ಧ್ವನಿಯಲ್ಲ. ದೇಶದ ಯುವಕರು, ರೈತರು ಮತ್ತು ಸಾಮಾನ್ಯ ಜನರ ಧ್ವನಿಯಾಗಿದೆ ಎಂದು ಅವರು ಹೇಳಿದರು.

Ad Widget

Ad Widget

ಮತದಾರರ ಹೆಸರು ಅಳಿಸಿರುವ ಆರೋಪ

2024ರ ಲೋಕಸಭಾ ಚುನಾವಣೆಯ ಬಳಿಕ ಸುಮಾರು 13.5 ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಪ್ರತಿ ಏಳು ಮತದಾರರಲ್ಲಿ ಒಬ್ಬರಂತೆ, ಅಂದರೆ ಶೇ.15ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಆದರೆ 2024ರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವಿನ ಮತಗಳ ಅಂತರ ಕೇವಲ ಶೇ.3ರಷ್ಟಿತ್ತು ಎಂದು ಅವರು ಹೇಳಿದರು.

ಇದು ಸಾಮಾನ್ಯ ಕಳ್ಳತನವಲ್ಲ. ದೇಶದ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಮತ್ತು ಧ್ವನಿಯನ್ನು ಕಸಿದುಕೊಂಡಂತಾಗಿದೆ. ಇದೊಂದು ಅತ್ಯಂತ ಗಂಭೀರ ಪ್ರಕರಣ ಎಂದು ಆರೋಪಿಸಿದ ಅವರು, ಈ ಅಕ್ರಮಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವೇ ಉತ್ತರ ನೀಡಬೇಕಿದೆ ಎಂದರು.

ಗ್ಯಾನೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ಜೈಲು ಶಿಕ್ಷೆಯಾಗುವ ಪರಿಸ್ಥಿತಿ ಬರಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಆರ್‌ಎಸ್‌ಎಸ್ ವಿರುದ್ಧವೂ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದೇಶದ ಎಲ್ಲ ಪ್ರಮುಖ ಸಂಸ್ಥೆಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ದೇಶದ ಸಂಸ್ಥೆಗಳು ಜನರಿಗೆ ಸೇರಿದ್ದವೇ ಹೊರತು ಆರ್‌ಎಸ್‌ಎಸ್ ಅಥವಾ ಬಿಜೆಪಿಗೆ ಸೇರಿದ್ದಲ್ಲ ಎಂದರು.

ಸರ್ಕಾರ ಕೆಲವೇ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ. ದೇಶದ ಸಂಪತ್ತು ಅದಾನಿ ಮತ್ತು ಅಂಬಾನಿಯಂತಹ ಕೆಲವೇ ಉದ್ಯಮಿಗಳ ಪಾಲಾಗುತ್ತಿದೆ. ಅವರ ಸಾಲ ಮನ್ನಾ ಮಾಡಲಾಗುತ್ತದೆ. ಆದರೆ ರೈತನ ಮಗ ಸಾಲ ಪಡೆದು ಮರುಪಾವತಿಸಲು ಸಾಧ್ಯವಾಗದಿದ್ದರೆ ಜೈಲಿಗೆ ಕಳುಹಿಸಲಾಗುತ್ತದೆ ಎಂದು ಟೀಕಿಸಿದರು.

ಎಲ್ಲವೂ ಅದಾನಿಯವರ ಪಾಲಾಗುವಂತಹ ದೇಶ ನಮಗೆ ಬೇಡ. ರೈತರು ಕಷ್ಟಪಟ್ಟು ದುಡಿದರೆ ಅವರ ಕನಸು ನನಸಾಗಬೇಕು. ವಿದ್ಯಾರ್ಥಿಗಳು ದಿನಕ್ಕೆ 18 ಗಂಟೆಗಳ ಕಾಲ ಓದಿದರೆ ಅವರಿಗೆ ಅದಕ್ಕೆ ತಕ್ಕ ಪ್ರತಿಫಲ ಸಿಗಬೇಕು. ಎಲ್ಲರಿಗೂ ಸಮಾನ ಅವಕಾಶಗಳು ದೊರೆಯುವ ಭಾರತ ನಿರ್ಮಾಣವಾಗಬೇಕು ಎಂದು ಹೇಳಿದರು.

ದ್ವೇಷ ರಾಜಕಾರಣಕ್ಕೆ ವಿರೋಧ

ತಮಗೆ ಪ್ರಧಾನಿ ಮೋದಿ, ಅಮಿತ್ ಶಾ ಅಥವಾ ಗ್ಯಾನೇಶ್ ಕುಮಾರ್ ಅವರ ಮೇಲೆ ವೈಯಕ್ತಿಕ ದ್ವೇಷವಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು. ಬಿಜೆಪಿ ಅಥವಾ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ದಾಳಿ ಮಾಡುವುದಾಗಲಿ, ಹಿಂಸಾಚಾರ ನಡೆಸುವುದಾಗಲಿ ತಮ್ಮ ಉದ್ದೇಶವಲ್ಲ ಎಂದರು.

ಧರ್ಮಕ್ಕಿಂತಲೂ ಜನರ ಧ್ವನಿ ತಮಗೆ ಮುಖ್ಯ. ನನ್ನ ಧರ್ಮ ಯಾವುದು ಎಂದು ಕೇಳಿದರೆ ಜನರ ಧ್ವನಿಯೇ ನನ್ನ ಧರ್ಮ ಎಂದು ಹೇಳುತ್ತೇನೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಹರಡುತ್ತಿರುವ ದ್ವೇಷ ದೇಶಕ್ಕೆ ಹಾನಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!