Connect with us

ಶಿಕ್ಷಣ

Vivekananda-ವಿವೇಕಾನಂದ ವಸತಿನಿಲಯ ಆಡಳಿತ ಮಂಡಳಿಗೆ ನೂತನ ಸಾರಥ್ಯ; ಅಧ್ಯಕ್ಷರಾಗಿ ರಮೇಶ್ ಪ್ರಭು, ಸಂಚಾಲಕರಾಗಿ ಸಚಿನ್ ಶೆಣೈ, ಕೋಶಾಧಿಕಾರಿಯಾಗಿ ಅಶೋಕ್ ಕುಂಬ್ಳೆ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ವಸತಿನಿಲಯದ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಪ್ರಭು, ಸಂಚಾಲಕರಾಗಿ ಸಚಿನ್ ಶೆಣೈ, ಕೋಶಾಧಿಕಾರಿಯಾಗಿ ಅಶೋಕ್ ಕುಂಬ್ಳೆ ಜವಾಬ್ದಾರಿ ಸ್ವೀಕರಿಸಿದರು.

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ವಸತಿನಿಲಯದ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಪ್ರಭು, ಸಂಚಾಲಕರಾಗಿ ಸಚಿನ್ ಶೆಣೈ, ಕೋಶಾಧಿಕಾರಿಯಾಗಿ ಅಶೋಕ್ ಕುಂಬ್ಳೆ ಜವಾಬ್ದಾರಿ ಸ್ವೀಕರಿಸಿದರು.

Ad Widget

Ad Widget alt="Ad Widget"/>

Ad Widget

ರಮೇಶ್ ರೈ ಬಿ, ರಾಜಗೋಪಾಲ ಭಟ್, ಚಂದ್ರಶೇಖರ ಎಸ್, ರಾಮಪ್ರಸಾದ್ ಮಯ್ಯ ಯಂ, ಯಶಸ್ವಿನಿ ಶಾಸ್ತ್ರೀ, ಅಶ್ವಿನಿ ಬಿ.ಕೆ ಹಾಗು ಸಮಿತಿಯ ಇತರ ಸದಸ್ಯರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯಾನಾರಾಯಣ ಕೆ.ಎಂ ಜವಾಬ್ದಾರಿ ಹಸ್ತಾಂತರಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಚಿ ಸಂತೋಷ್ ಬೋನಂತಾಯ, ಆಡಳಿತ ಕಾರ್ಯನಿರ್ವಹಣಾ ಅಧಿಕಾರಿ ಲಕ್ಷ್ಮೀಪ್ರಸಾದ್ ಬೋಟ್ಯಾಡಿ, ನಿಕಟಪೂರ್ವ ಆಡಳಿತ ಮಂಡಳಿ ಕೋಶಾಧಿಕಾರಿ ಶಿವಕುಮಾರ್ ಪಿ.ಬಿ, ಇಂದುಶೇಖರ್, ಜೀವಂದರ್ ಜೈನ್, ಶೈಲಾ ರಾಜೇಶ್, ವಿದ್ಯಾಗೌರಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದರಾಜ ಶರ್ಮ, ವಿಶೇಷಾಧಿಕಾರಿ ವಿಜಯಲಕ್ಷ್ಮೀ, ವಸತಿನಿಲಯದ ನಿಲಯಪಾಲಕ/ನಿಲಯಪಾಲಕಿಯರು ಉಪಸ್ಥಿತರಿದ್ದು ನೂತನ ಸಮಿತಿಗೆ ಶುಭ ಹಾರೈಸಿದರು.



Ad Widget
Ad Widget
Click to comment

Leave a Reply

ಶಿಕ್ಷಣ

Ambika-ಬಪ್ಪಳಿಗೆ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ;ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯ- ರಾಜಶ್ರೀ ಎಸ್. ನಟ್ಟೋಜ

Published

on



Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ನಡೆದಿದ್ದು, ವೈಯಕ್ತಿಕ ವಿಭಾಗದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಹೃಷಿಕೇಶ್ ಪ್ರಥಮ ಸ್ಥಾನ, ಗುಂಪು ವಿಭಾಗದಲ್ಲಿ ಸುದಾನ ವಸತಿಯುತ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಸಮರ್ಥ್ ಸುಮಂತ್ ಮತ್ತು ಆರ್ಯನ್ ಪಿ.ಎಲ್. ಪ್ರಥಮ ಸ್ಥಾನ ಪಡೆದರು.

Ad Widget

Ad Widget

Ad Widget

ವಿಜ್ಞಾನ ವಸ್ತುಪ್ರದರ್ಶನ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್.ನಟ್ಟೋಜ ಮಾತನಾಡಿ, ವಿದ್ಯಾರ್ಥಿಗಳು ಆತ್ಮಸ್ಥೈರ್ಯದೊಂದಿಗೆ ವೈಜ್ಞಾನಿಕ ಮನೋಭಾವ ಮತ್ತು ಕಾರ್ಯತಂತ್ರ ಮೂಡಿಸಿಕೊಳ್ಳಬೇಕು. ಸಿಕ್ಕಿರುವ ಅವಕಾಶಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳುವುದು ಅತಿ ಅವಶ್ಯ. ಸರಕಾರದ ಕಾರ್ಯಕ್ರಮಗಳನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಗುರಿಯೊಂದಿಗೆ ದೇಶದ ಶಕ್ತಿಯಾಗಿ ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

Ad Widget

Ad Widget alt="Ad Widget"/>

Ad Widget

ಎರಡು ವಿಭಾಗಗಳಲ್ಲಿ ಬಹುಮಾನ:
ವೈಯಕ್ತಿಕ ವಿಭಾಗದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಹೃಷಿಕೇಶ್ ಪ್ರಥಮ ಸ್ಥಾನ, ಸುದಾನ ವಸತಿಯುತ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಆದಿತ್ಯ ಕೆ. ದ್ವಿತೀಯ ಸ್ಥಾನ, ಅಲಂಕಾರಿನ ಶ್ರೀ ದುರ್ಗಾಂಬ ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿ ಅಲ್ವಿನ್ ಕೆ ಎಸ್ ತೃತೀಯ ಸ್ಥಾನ ಪಡೆದರು.

Ad Widget

Ad Widget <> Ad Widget

ಗುಂಪು ವಿಭಾಗದಲ್ಲಿ ಸುದಾನ ವಸತಿಯುತ ಶಾಲೆಯ ೮ನೇ ತರಗತಿಯ ಸಮರ್ಥ್ ಸುಮಂತ್ ಮತ್ತು ಆರ್ಯನ್ ಪಿ ಎಲ್ ಪ್ರಥಮ ಸ್ಥಾನ, ಶ್ರೀರಾಮಕೃಷ್ಣ ಪ್ರೌಢಶಾಲೆಯ ೧೦ನೇ ತರಗತಿಯ ಅಭಿಷೇಕ್ ಪ್ರಭು ಮತ್ತು ಉದಿತ್ ಟಿ ದ್ವಿತೀಯ ಸ್ಥಾನ, ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ೯ನೇ ತರಗತಿಯ ಪ್ರಜ್ವಲ್ ರಾವ್ ಮತ್ತು ಶ್ರವಣ್ ಕುಮಾರ್ ತೃತೀಯ ಸ್ಥಾನ ಪಡೆದುಕೊಂಡರು.



Ad Widget

ಪುತ್ತೂರು ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಜಲಜಾಕ್ಷಿ, ಪುತ್ತೂರು ತಾಲೂಕಿನ ಶಿಕ್ಷಣ ಸಂಯೋಜಕರಾದ ಅಮೃತಾ ಕಲಾ, ಅಂಬಿಕಾ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ ಉಪಸ್ಥಿತರಿದ್ದರು. ಅಂಬಿಕಾ ವಿದ್ಯಾಲಯದ ಶಿಕ್ಷಕಿ ವೀಣಾ ಸರಸ್ವತಿ ನಿರೂಪಿಸಿದರು.

Continue Reading

ಶಿಕ್ಷಣ

Ambika-ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ವಿಶೇಷ ನೈತಿಕ ಶಿಕ್ಷಣ; ಓದಿನ ಜ್ಞಾನಕ್ಕಿದೆ ವ್ಯಕ್ತಿತ್ವ ರೂಪಿಸುವ ಶಕ್ತಿ: ಸತೀಶ್ ಭಟ್

Published

on



Ad Widget

Ad Widget

Ad Widget

Ad Widget

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ನೈತಿಕ ಶಿಕ್ಷಣ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯೋಗ ತರಬೇತುದಾರ ಹಾಗೂ ವ್ಯಕ್ತಿತ್ವ ವಿಕಸನ ತಜ್ಞ ಜೆ.ಸಿ. ಸತೀಶ್ ಭಟ್ ಬಿಳಿನೆಲೆ ಮಾತನಾಡಿದರು.

Ad Widget

Ad Widget

Ad Widget

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಕೇವಲ ಬುದ್ಧಿವಂತಿಕೆ ಅಥವಾ ಹೆಚ್ಚಿನ ಅಂಕಗಳೇ ಮಾನದಂಡಗಳಲ್ಲ. ಶಿಸ್ತು, ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವವೂ ಒಂದು ಪ್ರತಿಭೆ. ಈ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಿರಂತರ ಪ್ರಯತ್ನ ಮಾಡಿದಾಗ ಪ್ರತಿಯೊಬ್ಬರೂ ತಮ್ಮ ಗುರಿಯನ್ನು ತಲುಪಲು ಸಾಧ್ಯ ಎಂದು ಯೋಗ ತರಬೇತುದಾರ ಹಾಗೂ ವ್ಯಕ್ತಿತ್ವ ವಿಕಸನ ತಜ್ಞ ಜೆ.ಸಿ. ಸತೀಶ್ ಭಟ್ ಬಿಳಿನೆಲೆ ಹೇಳಿದರು.

Ad Widget

Ad Widget alt="Ad Widget"/>

Ad Widget

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ನೈತಿಕ ಶಿಕ್ಷಣ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಓದು ಕೇವಲ ಪರೀಕ್ಷೆಯಲ್ಲಿ ಅಂಕಗಳಿಸುವುದಕ್ಕೆ ಸೀಮಿತವಾಗಬಾರದು. ಅದು ಜ್ಞಾನವನ್ನು ವಿಸ್ತರಿಸುವ, ಆಲೋಚನಾ ಸಾಮರ್ಥ್ಯವನ್ನು ಬೆಳೆಸುವ, ಸೃಜನಶೀಲತೆಯನ್ನು ಉತ್ತೇಜಿಸುವ ಹಾಗೂ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿಯುತ ಸಾಧನವಾಗಿದೆ. ಪ್ರತಿದಿನ ಓದುವ ಅಭ್ಯಾಸ ಬೆಳೆಸಿಕೊಂಡಾಗ ಭಾಷಾ ಕೌಶಲ, ಗ್ರಹಣಶಕ್ತಿ, ನೆನಪಿನ ಶಕ್ತಿ ಮತ್ತು ಆತ್ಮವಿಶ್ವಾಸ ವೃದ್ಧಿಯಾಗುತ್ತದೆ. ಓದಿದ ವಿಷಯಗಳನ್ನು ಅರ್ಥಮಾಡಿಕೊಂಡು ಪುನರಾವರ್ತನೆ ಮಾಡುವುದು, ಮುಖ್ಯ ಅಂಶಗಳನ್ನು ಟಿಪ್ಪಣಿ ಮಾಡಿಕೊಳ್ಳುವುದು ಹಾಗೂ ಕಲಿತ ವಿಷಯಗಳನ್ನು ಇತರರಿಗೆ ವಿವರಿಸುವುದು ನೆನಪಿನ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು.



Ad Widget

ವಿದ್ಯಾರ್ಥಿಗಳು ಹಲವು ಮಾನಸಿಕ ಮತ್ತು ಭಾವನಾತ್ಮಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ತರಗತಿಯಲ್ಲಿ ಪ್ರಶ್ನೆ ಕೇಳಲು ಹಿಂಜರಿಯುವುದು, ವೇದಿಕೆಯಲ್ಲಿ ಮಾತನಾಡಲು ಭಯಪಡುವುದು, ಇತರರ ಮುಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ನಾಚಿಕೆ ಪಡುವುದು, ಓದಿದ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಕಷ್ಟಪಡುವುದು ಹಾಗೂ ಪರೀಕ್ಷೆಯ ಸಮಯದಲ್ಲಿ ಆತಂಕಕ್ಕೆ ಒಳಗಾಗುವುದು ಸಾಮಾನ್ಯ ಸಮಸ್ಯೆಗಳಾಗಿವೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಮರ್ಥ್ಯವನ್ನು ಗುರುತಿಸಬೇಕು. ಸಣ್ಣಸಣ್ಣ ಗುರಿಗಳನ್ನು ನಿಗದಿಪಡಿಸಿಕೊಂಡು ಅವುಗಳನ್ನು ಸಾಧಿಸುವ ಮೂಲಕ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಪ್ರತಿದಿನ ಹೊಸವಿಷಯಗಳನ್ನು ಕಲಿಯುವ ಹಂಬಲ, ಪ್ರಶ್ನಿಸುವ ಮನೋಭಾವ ಮತ್ತು ನಿರಂತರ ಅಭ್ಯಾಸ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುತ್ತದೆ ಎಂದರು.

Ad Widget

Ad Widget

ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳುವುದಕ್ಕಿಂತ ನಿನ್ನೆಗಿಂತ ಇಂದು ಉತ್ತಮವಾಗುವ ಗುರಿ ಹೊಂದಬೇಕು. ಸಣ್ಣಸಣ್ಣ ಬದಲಾವಣೆಗಳು ಮತ್ತು ನಿರಂತರ ಪ್ರಯತ್ನಗಳು ಜೀವನದಲ್ಲಿ ದೊಡ್ಡ ಸಾಧನೆಗೆ ಕಾರಣವಾಗುತ್ತವೆ. ಸಮಯ ಪಾಲನೆ, ಶಿಸ್ತು, ಪರಿಶ್ರಮ, ತಾಳ್ಮೆ, ಗುರಿಯ ಸ್ಪಷ್ಟತೆ ಮತ್ತು ಸಮರ್ಪಣೆಯಿಂದ ಯಶಸ್ಸು ರೂಪುಗೊಳ್ಳುತ್ತದೆ. ಸೋಲು ಬಂದಾಗ ನಿರಾಶರಾಗದೆ ಅದರಿಂದ ಪಾಠ ಕಲಿತು ಮತ್ತಷ್ಟು ಆತ್ಮವಿಶ್ವಾಸದಿಂದ ಮುನ್ನಡೆಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮೊಬೈಲ್ ಬಳಕೆ, ಸಾಮಾಜಿಕ ಜಾಲತಾಣಗಳು ಮತ್ತು ಅನಗತ್ಯ ಮನರಂಜನೆಗಳು ವಿದ್ಯಾರ್ಥಿಗಳ ಏಕಾಗ್ರತೆಗೆ ಅಡ್ಡಿಯಾಗುತ್ತಿವೆ. ಓದುವ ಸಮಯದಲ್ಲಿ ಮೊಬೈಲ್ನಿಂದ ದೂರವಿರುವುದು, ಓದಿಗೆ ಸೂಕ್ತವಾದ ವಾತಾವರಣ ನಿರ್ಮಿಸಿಕೊಳ್ಳುವುದು, ಸಮಯವನ್ನು ಸಮರ್ಪಕವಾಗಿ ಹಂಚಿಕೊಳ್ಳುವುದು ಮತ್ತು ಮಧ್ಯೆ ಮಧ್ಯೆ ವಿಶ್ರಾಂತಿ ಪಡೆಯುವುದು ಅಗತ್ಯವಾಗಿದೆ. ನೆನಪಿನ ಶಕ್ತಿಯನ್ನು ಉತ್ತಮ ಪಡಿಸಿಕೊಳ್ಳಲು ಪುನರಾವರ್ತನೆ, ಧ್ಯಾನ, ಪ್ರಾಣಾಯಾಮ, ಉತ್ತಮನಿದ್ರೆ ಹಾಗೂ ಆರೋಗ್ಯಕರ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಪರೀಕ್ಷೆಯನ್ನು ಭಯದ ದೃಷ್ಟಿಯಿಂದ ನೋಡದೆ, ಕಲಿತಿರುವುದನ್ನು ಪ್ರದರ್ಶಿಸುವ ಅವಕಾಶವೆಂದು ಪರಿಗಣಿಸಬೇಕು ಎಂದು ಸಲಹೆ ನೀಡಿದರು.
ಯೋಗಾಸನ, ಪ್ರಾಣಾಯಾಮ, ಧ್ಯಾನ, ನಿಯಮಿತ ವ್ಯಾಯಾಮ, ಸರಿಯಾದ ನಿದ್ರೆ ಮತ್ತು ಸಕಾರಾತ್ಮಕ ಚಿಂತನೆ ಮಾನಸಿಕ ನೆಮ್ಮದಿಗೆ ಸಹಕಾರಿಯಾಗುತ್ತವೆ. ಕೆಲಸ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು, ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸುವುದು ಹಾಗೂ ಅಗತ್ಯವಿದ್ದಾಗ ಕುಟುಂಬದವರು ಮತ್ತು ಹಿತೈಷಿಗಳೊಂದಿಗೆ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳುವುದು ಒತ್ತಡ ಕಡಿಮೆ ಮಾಡಲು ಸಹಕಾರಿ ಎಂದರು.

ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದಲ್ಲ ಒಂದು ವಿಶೇಷ ಸಾಮರ್ಥ್ಯ ಅಡಗಿರುತ್ತದೆ. ಅದನ್ನುಗುರುತಿಸಿ ಬೆಳೆಸಿಕೊಳ್ಳುವುದು ಮುಖ್ಯ. ಶಿಸ್ತು, ಪರಿಶ್ರಮ ಮತ್ತು ಸಮರ್ಪಣೆಗಳನ್ನು ತಮ್ಮ ಜೀವನದ ಅವಿಭಾಜ್ಯ ಅಂಗಗಳನ್ನಾಗಿ ಮಾಡಿಕೊಂಡಾಗ ಸಾಧನೆಯ ಹಾದಿ ಸುಗಮವಾಗುತ್ತದೆ. ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು, ಯೋಗ ಮತ್ತು ಧ್ಯಾನದ ಮೂಲಕ ಮನಸ್ಸನ್ನು ಸಮತೋಲನದಲ್ಲಿ ಇಟ್ಟುಕೊಳ್ಳಬೇಕು ಹಾಗೂ ನಿರಂತರ ಕಲಿಕೆಯ ಮೂಲಕ ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ‘ನಾನುಮಾಡಬಲ್ಲೆ, ನಾನುಕಲಿಯಬಲ್ಲೆ, ನಾನುಸಾಧಿಸಬಲ್ಲೆ’ ಎಂಬ ಆತ್ಮವಿಶ್ವಾಸ ಪ್ರತಿಯೊಬ್ಬರಲ್ಲೂ ಮೂಡಬೇಕು. ನಿನ್ನೆಗಿಂತ ಇಂದು ಉತ್ತಮರಾಗುವ ಪ್ರಯತ್ನವೇ ನಾಳೆ ನಮ್ಮನ್ನು ಶ್ರೇಷ್ಠರನ್ನಾಗಿ ರೂಪಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಎ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಟಿ.ಎಸ್.ಉರ್ಶಿತಾ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

ವಿಟಿಯು ರಾಜ್ಯಮಟ್ಟದ ಕಬಡ್ಡಿಯಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ತಂಡಕ್ಕೆ ದ್ವಿತೀಯ ಸ್ಥಾನ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.

Ad Widget

Ad Widget alt="Ad Widget"/>

Ad Widget

ತುಮಕೂರಿನ ಗುಬ್ಬಿಯಲ್ಲಿರುವ ಚೆನ್ನಬಸವೇಶ್ವರ ‌ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

Ad Widget

Ad Widget <> Ad Widget

ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಅನನ್ಯ.ಕೆ.ಬಿ ಈ ಕೂಟದ ಉತ್ತಮ ಆಟಗಾರ್ತಿಯಾಗಿ ಆಯ್ಕೆಯಾಗಿದ್ದಾರೆ.



Ad Widget

ತಮ್ಮದೇ ಕಾಲೇಜಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು.

Ad Widget

Ad Widget

ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಅರ್ಪಿತಾ ಬಾಲಚಂದ್ರ ನಾಯ್ಕ್ ಇವರ ಸಮರ್ಥ ನಾಯಕತ್ವದಲ್ಲಿ ತಂಡವು ಅಮೋಘ ಸಾಧನೆಯನ್ನು ಮಾಡಿದ್ದು, ತೃತೀಯ ವರ್ಷದ ಎಐಎಂಎಲ್ ವಿಭಾಗದ ಶ್ರಾವ್ಯ ಅಂಚನ್.ವೈ.ವೈ, ಪ್ರಥಮ ವರ್ಷದ ಎಂಬಿಎ ಎಲೆಕ್ಟ್ರಾನಿಕ್ಸ್ ವಿಭಾಗದ ಸೌಮ್ಯಾ ರೈ, ಪ್ರಥಮ ವರ್ಷದ ಎಐಎಂಎಲ್ ವಿಭಾಗದ ಪ್ರಶಸ್ತಿ.ಬಿ, ಅಂತಿಮ ವರ್ಷದ ಇಲೆಕ್ಕ್ಸ ವಿಭಾಗದ ರಚನಾ.ಕೆ.ಡಿ, ಪ್ರಥಮ ವರ್ಷದ ಎಐಎಂಎಲ್ ವಿಭಾಗದ ಅನುಶ್ರೀ.ಎಂ.ಎಚ್, ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಅನನ್ಯ.ಕೆ.ಬಿ ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ತೇಜಶ್ವಿ.ಯು, ತೃತೀಯ ವರ್ಷದ ಡಾಟಾ ಸೈನ್ಸ್ ವಿಭಾಗದ ಸೃಜನಾ.ಎಸ್, ತೃತೀಯ ವರ್ಷದ ಎಐಎಂಎಲ್ ವಿಭಾಗದ ಮಂಜುಶ್ರೀ.ಎನ್, ಪ್ರಥಮ ವರ್ಷದ ಡಾಟಾ ಸೈನ್ಸ್ ವಿಭಾಗದ ನಿಹಾರಿಕಾ.ಎಂ.ಎಸ್, ದ್ವಿತೀಯ ವರ್ಷದ ಎಂಸಿಎ ವಿಭಾಗದ ರೇಷ್ಮಾ, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಮನೀಶಾ ಮತ್ತು ದ್ವಿತೀಯ ವರ್ಷದ ಡಾಟಾ ಸೈನ್ಸ್ ವಿಭಾಗದ ವಾಣಿ ಲಕ್ಷ್ಮಣ್ ವಿಜೇತ ತಂಡದ ಸದಸ್ಯರಾಗಿದ್ದಾರೆ.‌

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ರಾಷ್ಟ್ರೀಯ ಆಟಗಾರ ಸತ್ಯಮ್.ಡಿ.ಜಿ ಮತ್ತು ಲಕ್ಷ್ಮಣ್ ಪಡ್ನೂರು ಅವರು ವಿಜೇತ ತಂಡಕ್ಕೆ ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!