Connect with us

ಶಿಕ್ಷಣ

Ambika-ಬಪ್ಪಳಿಗೆ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ;ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯ- ರಾಜಶ್ರೀ ಎಸ್. ನಟ್ಟೋಜ

Published

on



Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ನಡೆದಿದ್ದು, ವೈಯಕ್ತಿಕ ವಿಭಾಗದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಹೃಷಿಕೇಶ್ ಪ್ರಥಮ ಸ್ಥಾನ, ಗುಂಪು ವಿಭಾಗದಲ್ಲಿ ಸುದಾನ ವಸತಿಯುತ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಸಮರ್ಥ್ ಸುಮಂತ್ ಮತ್ತು ಆರ್ಯನ್ ಪಿ.ಎಲ್. ಪ್ರಥಮ ಸ್ಥಾನ ಪಡೆದರು.

Ad Widget

Ad Widget

Ad Widget

ವಿಜ್ಞಾನ ವಸ್ತುಪ್ರದರ್ಶನ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್.ನಟ್ಟೋಜ ಮಾತನಾಡಿ, ವಿದ್ಯಾರ್ಥಿಗಳು ಆತ್ಮಸ್ಥೈರ್ಯದೊಂದಿಗೆ ವೈಜ್ಞಾನಿಕ ಮನೋಭಾವ ಮತ್ತು ಕಾರ್ಯತಂತ್ರ ಮೂಡಿಸಿಕೊಳ್ಳಬೇಕು. ಸಿಕ್ಕಿರುವ ಅವಕಾಶಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳುವುದು ಅತಿ ಅವಶ್ಯ. ಸರಕಾರದ ಕಾರ್ಯಕ್ರಮಗಳನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಗುರಿಯೊಂದಿಗೆ ದೇಶದ ಶಕ್ತಿಯಾಗಿ ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

Ad Widget

Ad Widget alt="Ad Widget"/>

Ad Widget

ಎರಡು ವಿಭಾಗಗಳಲ್ಲಿ ಬಹುಮಾನ:
ವೈಯಕ್ತಿಕ ವಿಭಾಗದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಹೃಷಿಕೇಶ್ ಪ್ರಥಮ ಸ್ಥಾನ, ಸುದಾನ ವಸತಿಯುತ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಆದಿತ್ಯ ಕೆ. ದ್ವಿತೀಯ ಸ್ಥಾನ, ಅಲಂಕಾರಿನ ಶ್ರೀ ದುರ್ಗಾಂಬ ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿ ಅಲ್ವಿನ್ ಕೆ ಎಸ್ ತೃತೀಯ ಸ್ಥಾನ ಪಡೆದರು.

Ad Widget

Ad Widget <> Ad Widget

ಗುಂಪು ವಿಭಾಗದಲ್ಲಿ ಸುದಾನ ವಸತಿಯುತ ಶಾಲೆಯ ೮ನೇ ತರಗತಿಯ ಸಮರ್ಥ್ ಸುಮಂತ್ ಮತ್ತು ಆರ್ಯನ್ ಪಿ ಎಲ್ ಪ್ರಥಮ ಸ್ಥಾನ, ಶ್ರೀರಾಮಕೃಷ್ಣ ಪ್ರೌಢಶಾಲೆಯ ೧೦ನೇ ತರಗತಿಯ ಅಭಿಷೇಕ್ ಪ್ರಭು ಮತ್ತು ಉದಿತ್ ಟಿ ದ್ವಿತೀಯ ಸ್ಥಾನ, ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ೯ನೇ ತರಗತಿಯ ಪ್ರಜ್ವಲ್ ರಾವ್ ಮತ್ತು ಶ್ರವಣ್ ಕುಮಾರ್ ತೃತೀಯ ಸ್ಥಾನ ಪಡೆದುಕೊಂಡರು.



Ad Widget

ಪುತ್ತೂರು ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಜಲಜಾಕ್ಷಿ, ಪುತ್ತೂರು ತಾಲೂಕಿನ ಶಿಕ್ಷಣ ಸಂಯೋಜಕರಾದ ಅಮೃತಾ ಕಲಾ, ಅಂಬಿಕಾ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ ಉಪಸ್ಥಿತರಿದ್ದರು. ಅಂಬಿಕಾ ವಿದ್ಯಾಲಯದ ಶಿಕ್ಷಕಿ ವೀಣಾ ಸರಸ್ವತಿ ನಿರೂಪಿಸಿದರು.

Click to comment

Leave a Reply

ಶಿಕ್ಷಣ

Sahyadri-ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿನರ್ಜಿಯ 2026 ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ತಾಂತ್ರಿಕ ಹಬ್ಬವಾದ ಸಿನರ್ಜಿಯ 2026ರ ಉದ್ಘಾಟನೆಯು ನವೆಂಬರ್ 12 ರಂದು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯೂ ಏಜ್ ಟೆಕ್ನಾಲಜೀಸ್, ಎನ್ವಿಡಿಯಾ ಇದರ ಉಪಾಧ್ಯಕ್ಷರಾದ ಡಾ.ಸಂಪತ್ ಕುಮಾರ್ ಇವರು ಮಾತನಾಡಿದರು.

Ad Widget

Ad Widget

Ad Widget

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ತಾಂತ್ರಿಕ ಹಬ್ಬವಾದ ಸಿನರ್ಜಿಯ 2026ರ ಉದ್ಘಾಟನೆಯು ನವೆಂಬರ್ 12 ರಂದು ಕಾಲೇಜಿನ ಆವರಣದಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯೂ ಏಜ್ ಟೆಕ್ನಾಲಜೀಸ್, ಎನ್ವಿಡಿಯಾ ಇದರ ಉಪಾಧ್ಯಕ್ಷರಾದ ಡಾ.ಸಂಪತ್ ಕುಮಾರ್ ಇವರು ಇಂದಿನ ಕೃತಕ ಬುದ್ಧಿಮತ್ತೆಯ ಯುಗದಲ್ಲಿ ವಿಧ್ಯಾರ್ಥಿಗಳ ಚಿಂತನೆಯನ್ನು ಹೆಚ್ಚಿಸುವ ಇಂತಹ ಕಾರ್ಯಕ್ರಮಗಳ ಅನಿವಾರ್ಯತೆಯನ್ನು ತಿಳಿಸಿದರು. ವಿದ್ಯಾರ್ಥಿಗಳು ಪ್ರಕೃತಿಯಲ್ಲಿ ಹಾಸುಹೊಕ್ಕಾಗಿರುವ ವಿಜ್ಞಾನದ ಪರಿಕಲ್ಪನೆಯನ್ನು ಗುರುತಿಸಬೇಕಾದರೆ ಕೂತುಹಲದಾಯಕ ವೀಕ್ಷಣೆ ಮತ್ತು ಪ್ರಶ್ನಿಸುವ ಧೈರ್ಯ ತಂದುಕೊಳ್ಳಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಈಜಿ ಇಂಡಿಯಾ ದ ಮುಖ್ಯ ಡೇಟಾ ವಿಜ್ಞಾನಿ ಡಾ. ಪ್ರಖ್ಯಾತ ರೈ ಇವರು, ಇಂದು ಉದ್ಯಮ ಮಾರುಕಟ್ಟೆಯಲ್ಲಿ ಇರುವ ಸ್ಪರ್ಧಾತ್ಮಕ ವಾತಾವರಣದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಕೌಶಲ್ಯಭರಿತ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶವಿದ್ದು, ಸಿನರ್ಜಿಯ ದಂತಹ ರಾಷ್ಟ್ರೀಯ ಸ್ಪರ್ಧೆಗಳು ತಮ್ಮ ಕೌಶಲ್ಯವನ್ನು ಹೆಚ್ಚಿಸುವ ವೇದಿಕೆಯಾಗಬೇಕೆಂದು ತಿಳಿಸಿದರು. ಇನ್ನೋರ್ವ ಮುಖ್ಯ ಅತಿಥಿ ನೈನ್ಟ್ರಾನ್ ಟೆಕ್ ನ ಸಂಸ್ಥಾಪಕ ಶ್ರೀ. ಅಬ್ದುಲ್ ಶಮೀರ್ ಮಾತನಾಡಿ, ವಿದ್ಯಾರ್ಥಿಗಳು ಸಿನರ್ಜಿಯ ದಂತಹ ವೇದಿಕೆಗಳನ್ನು ಸದುಪಯೋಗಪಡಿಸಿಕೊಂಡು, ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ತಯಾರಿ ನಡೆಸಬೇಕೆಂದು ತಿಳಿಸಿದರು.



Ad Widget

ಸಹ್ಯಾದ್ರಿಯ ಆಡಳಿತಾಧಿಕಾರಿ ಶ್ರೀ. ಕೃಷ್ಣ ಹೆಗ್ಡೆ ಇವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎಸ್.ಎಸ್. ಇಂಜಗನೇರಿ ಇವರು ಸಿನರ್ಜಿಯ ನಾಲ್ಕನೇ ಆವೃತ್ತಿಯನ್ನು ಆಚರಿಸುತ್ತಿದ್ದು ಕಳೆದ ಮೂರು ಆವೃತ್ತಿಗಳು ವಿಧ್ಯಾರ್ಥಿಗಳ ವೈಜ್ಞಾನಿಕ ಚಿಂತನೆಗೆ ಮತ್ತು ನಾವಿನ್ಯತೆಗೆ ವೇದಿಕೆಯನ್ನು ಒದಗಿಸಿ ಕೊಟ್ಟಿದೆ. ಈ ಆವೃತ್ತಿ ಕೂಡ ಸುಮಾರು 5000 ವಿಧ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಲಿದೆ ಎಂದು ತಿಳಿಸಿದರು.

Ad Widget

Ad Widget

ವಿದ್ಯಾರ್ಥಿ ಕ್ಷೇಮ ಪಾಲಕ ಡೀನ್ ಡಾ. ಪ್ರಶಾಂತ್ ರಾವ್ ಇವರು ಕಾರ್ಯಕ್ರಮದ ವಿವರಗಳನ್ನು ನೀಡಿದರು. ಶೈಕ್ಷಣಿಕ ಡೀನ್ ಡಾ. ಶಮಂತ್ ರೈ ಸ್ವಾಗತಿಸಿ, ವಿದ್ಯಾರ್ಥಿ ಸಂಯೋಜಕಿ ಕುಶಿ ಶೆಟ್ಟಿ ವಂದಿಸಿದರು. ವಿದ್ಯಾರ್ಥಿ ಅದಿತಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ‘ಫಿಲೋ ವೇವ್ಸ್ – 2026’ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ವಿಜ್ಞಾನದ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಿರದೆ, ಸಮಾಜದ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಮಾಡಬೇಕು ಎಂದು ಪುತ್ತೂರಿನ ಸಂತ ಫಿಲೋಮಿನಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಕ್ಲೆಮೆಂಟ್ ಪಿಂಟೋ ಹೇಳಿದರು.

Ad Widget

Ad Widget

Ad Widget

ಪುತ್ತೂರು: ವಿಜ್ಞಾನದ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಿರದೆ, ಸಮಾಜದ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಮಾಡಬೇಕು ಎಂದು ಪುತ್ತೂರಿನ ಸಂತ ಫಿಲೋಮಿನಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಕ್ಲೆಮೆಂಟ್ ಪಿಂಟೋ ಹೇಳಿದರು.

Ad Widget

Ad Widget alt="Ad Widget"/>

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ವಿಜ್ಞಾನ ವಿಭಾಗದ ವಿಜ್ಞಾನ ವೇದಿಕೆ ಹಾಗೂ ಇಕೋ ಕ್ಲಬ್ ಇದರ ಸಹಯೋಗದೊಂದಿಗೆ ನ 12 ರಂದು ಕಾಲೇಜು ಸಭಾಂಗಣದಲ್ಲಿ
‘ಫಿಲೋ ವೇವ್ಸ್ 2026’ ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಇವರು ಪ್ರಕೃತಿ ನಮ್ಮ ಸ್ವತ್ತಲ್ಲ. ಪ್ರಕೃತಿಯ ಮೇಲೆ ಕಾಳಜಿ, ಜವಾಬ್ದಾರಿಯನ್ನು ತೆಗೆದುಕೊಂಡು ಅದರ ರಕ್ಷಣೆಯನ್ನು ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಪ್ರಶ್ನಿಸುವ  ಗುಣ ಹೊಂದಿರಬೇಕು. ಒಪ್ಪಿಕೊಳ್ಳುವ, ನಿರ್ಧರಿಸುವ ಮತ್ತು ಪ್ರತಿಕ್ರಿಯಿಸುವ ಮೊದಲು ಆಲೋಚಿಸಿ. ವಿದ್ಯಾರ್ಥಿಗಳು ಕಲಿಯಲು, ಯೋಚಿಸಲು ಹಾಗೂ ಬದಲಾವಣೆಯನ್ನು ಬಯಸಲು ಸಿದ್ದರಾಗಿರಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ,  ವಿಜ್ಞಾನ ನಮ್ಮ ದಿನ ನಿತ್ಯದ ಕಾರ್ಯಗಳಲ್ಲಿ ಹಾಸುಹೊಕ್ಕಗಿದ್ದು, ವೈಜ್ಞಾನಿಕ ಯೋಚನೆಗಳಿಂದ ಮಾತ್ರ ವಿಜ್ಞಾನದ ಪರಿಕಲ್ಪನೆಯನ್ನು ಗುರುತಿಸಲು ಸಾಧ್ಯ.  ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳು ಪ್ರಶ್ನಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಪ್ರಕೃತಿಯನ್ನು ಕುತೂಹಲದ ದೃಷ್ಟಿಯಿಂದ ನೋಡಿದಾಗ ವೈಜ್ಞಾನಿಕ ಕಲ್ಪನೆಗಳು ನಮಗೆ ಮನನವಾಗುತ್ತದೆ ಎಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ವಿಜ್ಞಾನ ವಿಭಾಗದ ಡೀನ್ ಯಶ್ವಂತ್ ಎಂ ಡಿ ಹಾಗೂ ವಿಜ್ಞಾನ ವೇದಿಕೆ ಹಾಗೂ ಇಕೋ ಕ್ಲಬ್ ನ ನಿರ್ದೇಶಕರಾದ ಶಿಲ್ಪಾ ಎಮಿಲ ರೋಡ್ರಿಗಸ್, ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ad Widget

Ad Widget

ವಿಜ್ಞಾನದ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಪೋಸ್ಟರ್ ತಯಾರಿಕೆ, ವಿಜ್ಞಾನ ಛಾಯಾಗ್ರಹಣ, ವಿಜ್ಞಾನ
ಮಾದರಿ ತಯಾರಿ, ವಿಜ್ಞಾನ ವಿಷಯಾಧಾರಿತ ಚರ್ಚಾ ಸ್ಪರ್ಧೆ (ಪರ-ವಿರೋಧ ವಾದ ಮಂಡನೆ),
ವಿಜ್ಞಾನ ಆಧಾರಿತ ಫ್ಯಾಷನ್ ಶೋ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿಜ್ಞಾನ ವಿಭಾಗದ ಡೀನ್ ಯಶ್ವಂತ್ ಎಂ. ಡಿ ಸ್ವಾಗತಿಸಿ,
ವಿದ್ಯಾರ್ಥಿಗಳಾದ  ಕಥೀಜತುಲ್ ಶೈಮ ವಂದಿಸಿ, ಜೀವಿತಾ ಕೆ ಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಶಿಕ್ಷಣ

Ambika-ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ವಿಶೇಷ ನೈತಿಕ ಶಿಕ್ಷಣ; ಓದಿನ ಜ್ಞಾನಕ್ಕಿದೆ ವ್ಯಕ್ತಿತ್ವ ರೂಪಿಸುವ ಶಕ್ತಿ: ಸತೀಶ್ ಭಟ್

Published

on



Ad Widget

Ad Widget

Ad Widget

Ad Widget

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ನೈತಿಕ ಶಿಕ್ಷಣ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯೋಗ ತರಬೇತುದಾರ ಹಾಗೂ ವ್ಯಕ್ತಿತ್ವ ವಿಕಸನ ತಜ್ಞ ಜೆ.ಸಿ. ಸತೀಶ್ ಭಟ್ ಬಿಳಿನೆಲೆ ಮಾತನಾಡಿದರು.

Ad Widget

Ad Widget

Ad Widget

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಕೇವಲ ಬುದ್ಧಿವಂತಿಕೆ ಅಥವಾ ಹೆಚ್ಚಿನ ಅಂಕಗಳೇ ಮಾನದಂಡಗಳಲ್ಲ. ಶಿಸ್ತು, ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವವೂ ಒಂದು ಪ್ರತಿಭೆ. ಈ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಿರಂತರ ಪ್ರಯತ್ನ ಮಾಡಿದಾಗ ಪ್ರತಿಯೊಬ್ಬರೂ ತಮ್ಮ ಗುರಿಯನ್ನು ತಲುಪಲು ಸಾಧ್ಯ ಎಂದು ಯೋಗ ತರಬೇತುದಾರ ಹಾಗೂ ವ್ಯಕ್ತಿತ್ವ ವಿಕಸನ ತಜ್ಞ ಜೆ.ಸಿ. ಸತೀಶ್ ಭಟ್ ಬಿಳಿನೆಲೆ ಹೇಳಿದರು.

Ad Widget

Ad Widget alt="Ad Widget"/>

Ad Widget

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ನೈತಿಕ ಶಿಕ್ಷಣ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಓದು ಕೇವಲ ಪರೀಕ್ಷೆಯಲ್ಲಿ ಅಂಕಗಳಿಸುವುದಕ್ಕೆ ಸೀಮಿತವಾಗಬಾರದು. ಅದು ಜ್ಞಾನವನ್ನು ವಿಸ್ತರಿಸುವ, ಆಲೋಚನಾ ಸಾಮರ್ಥ್ಯವನ್ನು ಬೆಳೆಸುವ, ಸೃಜನಶೀಲತೆಯನ್ನು ಉತ್ತೇಜಿಸುವ ಹಾಗೂ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿಯುತ ಸಾಧನವಾಗಿದೆ. ಪ್ರತಿದಿನ ಓದುವ ಅಭ್ಯಾಸ ಬೆಳೆಸಿಕೊಂಡಾಗ ಭಾಷಾ ಕೌಶಲ, ಗ್ರಹಣಶಕ್ತಿ, ನೆನಪಿನ ಶಕ್ತಿ ಮತ್ತು ಆತ್ಮವಿಶ್ವಾಸ ವೃದ್ಧಿಯಾಗುತ್ತದೆ. ಓದಿದ ವಿಷಯಗಳನ್ನು ಅರ್ಥಮಾಡಿಕೊಂಡು ಪುನರಾವರ್ತನೆ ಮಾಡುವುದು, ಮುಖ್ಯ ಅಂಶಗಳನ್ನು ಟಿಪ್ಪಣಿ ಮಾಡಿಕೊಳ್ಳುವುದು ಹಾಗೂ ಕಲಿತ ವಿಷಯಗಳನ್ನು ಇತರರಿಗೆ ವಿವರಿಸುವುದು ನೆನಪಿನ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು.



Ad Widget

ವಿದ್ಯಾರ್ಥಿಗಳು ಹಲವು ಮಾನಸಿಕ ಮತ್ತು ಭಾವನಾತ್ಮಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ತರಗತಿಯಲ್ಲಿ ಪ್ರಶ್ನೆ ಕೇಳಲು ಹಿಂಜರಿಯುವುದು, ವೇದಿಕೆಯಲ್ಲಿ ಮಾತನಾಡಲು ಭಯಪಡುವುದು, ಇತರರ ಮುಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ನಾಚಿಕೆ ಪಡುವುದು, ಓದಿದ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಕಷ್ಟಪಡುವುದು ಹಾಗೂ ಪರೀಕ್ಷೆಯ ಸಮಯದಲ್ಲಿ ಆತಂಕಕ್ಕೆ ಒಳಗಾಗುವುದು ಸಾಮಾನ್ಯ ಸಮಸ್ಯೆಗಳಾಗಿವೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಮರ್ಥ್ಯವನ್ನು ಗುರುತಿಸಬೇಕು. ಸಣ್ಣಸಣ್ಣ ಗುರಿಗಳನ್ನು ನಿಗದಿಪಡಿಸಿಕೊಂಡು ಅವುಗಳನ್ನು ಸಾಧಿಸುವ ಮೂಲಕ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಪ್ರತಿದಿನ ಹೊಸವಿಷಯಗಳನ್ನು ಕಲಿಯುವ ಹಂಬಲ, ಪ್ರಶ್ನಿಸುವ ಮನೋಭಾವ ಮತ್ತು ನಿರಂತರ ಅಭ್ಯಾಸ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುತ್ತದೆ ಎಂದರು.

Ad Widget

Ad Widget

ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳುವುದಕ್ಕಿಂತ ನಿನ್ನೆಗಿಂತ ಇಂದು ಉತ್ತಮವಾಗುವ ಗುರಿ ಹೊಂದಬೇಕು. ಸಣ್ಣಸಣ್ಣ ಬದಲಾವಣೆಗಳು ಮತ್ತು ನಿರಂತರ ಪ್ರಯತ್ನಗಳು ಜೀವನದಲ್ಲಿ ದೊಡ್ಡ ಸಾಧನೆಗೆ ಕಾರಣವಾಗುತ್ತವೆ. ಸಮಯ ಪಾಲನೆ, ಶಿಸ್ತು, ಪರಿಶ್ರಮ, ತಾಳ್ಮೆ, ಗುರಿಯ ಸ್ಪಷ್ಟತೆ ಮತ್ತು ಸಮರ್ಪಣೆಯಿಂದ ಯಶಸ್ಸು ರೂಪುಗೊಳ್ಳುತ್ತದೆ. ಸೋಲು ಬಂದಾಗ ನಿರಾಶರಾಗದೆ ಅದರಿಂದ ಪಾಠ ಕಲಿತು ಮತ್ತಷ್ಟು ಆತ್ಮವಿಶ್ವಾಸದಿಂದ ಮುನ್ನಡೆಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮೊಬೈಲ್ ಬಳಕೆ, ಸಾಮಾಜಿಕ ಜಾಲತಾಣಗಳು ಮತ್ತು ಅನಗತ್ಯ ಮನರಂಜನೆಗಳು ವಿದ್ಯಾರ್ಥಿಗಳ ಏಕಾಗ್ರತೆಗೆ ಅಡ್ಡಿಯಾಗುತ್ತಿವೆ. ಓದುವ ಸಮಯದಲ್ಲಿ ಮೊಬೈಲ್ನಿಂದ ದೂರವಿರುವುದು, ಓದಿಗೆ ಸೂಕ್ತವಾದ ವಾತಾವರಣ ನಿರ್ಮಿಸಿಕೊಳ್ಳುವುದು, ಸಮಯವನ್ನು ಸಮರ್ಪಕವಾಗಿ ಹಂಚಿಕೊಳ್ಳುವುದು ಮತ್ತು ಮಧ್ಯೆ ಮಧ್ಯೆ ವಿಶ್ರಾಂತಿ ಪಡೆಯುವುದು ಅಗತ್ಯವಾಗಿದೆ. ನೆನಪಿನ ಶಕ್ತಿಯನ್ನು ಉತ್ತಮ ಪಡಿಸಿಕೊಳ್ಳಲು ಪುನರಾವರ್ತನೆ, ಧ್ಯಾನ, ಪ್ರಾಣಾಯಾಮ, ಉತ್ತಮನಿದ್ರೆ ಹಾಗೂ ಆರೋಗ್ಯಕರ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಪರೀಕ್ಷೆಯನ್ನು ಭಯದ ದೃಷ್ಟಿಯಿಂದ ನೋಡದೆ, ಕಲಿತಿರುವುದನ್ನು ಪ್ರದರ್ಶಿಸುವ ಅವಕಾಶವೆಂದು ಪರಿಗಣಿಸಬೇಕು ಎಂದು ಸಲಹೆ ನೀಡಿದರು.
ಯೋಗಾಸನ, ಪ್ರಾಣಾಯಾಮ, ಧ್ಯಾನ, ನಿಯಮಿತ ವ್ಯಾಯಾಮ, ಸರಿಯಾದ ನಿದ್ರೆ ಮತ್ತು ಸಕಾರಾತ್ಮಕ ಚಿಂತನೆ ಮಾನಸಿಕ ನೆಮ್ಮದಿಗೆ ಸಹಕಾರಿಯಾಗುತ್ತವೆ. ಕೆಲಸ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು, ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸುವುದು ಹಾಗೂ ಅಗತ್ಯವಿದ್ದಾಗ ಕುಟುಂಬದವರು ಮತ್ತು ಹಿತೈಷಿಗಳೊಂದಿಗೆ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳುವುದು ಒತ್ತಡ ಕಡಿಮೆ ಮಾಡಲು ಸಹಕಾರಿ ಎಂದರು.

ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದಲ್ಲ ಒಂದು ವಿಶೇಷ ಸಾಮರ್ಥ್ಯ ಅಡಗಿರುತ್ತದೆ. ಅದನ್ನುಗುರುತಿಸಿ ಬೆಳೆಸಿಕೊಳ್ಳುವುದು ಮುಖ್ಯ. ಶಿಸ್ತು, ಪರಿಶ್ರಮ ಮತ್ತು ಸಮರ್ಪಣೆಗಳನ್ನು ತಮ್ಮ ಜೀವನದ ಅವಿಭಾಜ್ಯ ಅಂಗಗಳನ್ನಾಗಿ ಮಾಡಿಕೊಂಡಾಗ ಸಾಧನೆಯ ಹಾದಿ ಸುಗಮವಾಗುತ್ತದೆ. ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು, ಯೋಗ ಮತ್ತು ಧ್ಯಾನದ ಮೂಲಕ ಮನಸ್ಸನ್ನು ಸಮತೋಲನದಲ್ಲಿ ಇಟ್ಟುಕೊಳ್ಳಬೇಕು ಹಾಗೂ ನಿರಂತರ ಕಲಿಕೆಯ ಮೂಲಕ ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ‘ನಾನುಮಾಡಬಲ್ಲೆ, ನಾನುಕಲಿಯಬಲ್ಲೆ, ನಾನುಸಾಧಿಸಬಲ್ಲೆ’ ಎಂಬ ಆತ್ಮವಿಶ್ವಾಸ ಪ್ರತಿಯೊಬ್ಬರಲ್ಲೂ ಮೂಡಬೇಕು. ನಿನ್ನೆಗಿಂತ ಇಂದು ಉತ್ತಮರಾಗುವ ಪ್ರಯತ್ನವೇ ನಾಳೆ ನಮ್ಮನ್ನು ಶ್ರೇಷ್ಠರನ್ನಾಗಿ ರೂಪಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಎ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಟಿ.ಎಸ್.ಉರ್ಶಿತಾ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!