ಸ್ಥಳೀಯ
Soujanya Case-Breaking News: ಪೋಸ್ಟ್ ಮಾರ್ಟಮ್ ವೇಳೆ ಸೌಜನ್ಯ ಮೃತದೇಹ ಕೊಯ್ದ ವಾರ್ಡ್ ಬಾಯ್ ನ ಸತತ 5 ಗಂಟೆ ವಿಚಾರಣೆ ನಡೆಸಿದ ಎಸ್ಐಟಿ..!
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಸೌಜನ್ಯ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವೇಳೆ ವೈದ್ಯರಿಗೆ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ವಾರ್ಡ್ ಬಾಯ್ ಅನಿಲ್ ಕುಮಾರ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಸೌಜನ್ಯ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವೇಳೆ ವೈದ್ಯರಿಗೆ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ವಾರ್ಡ್ ಬಾಯ್ ಅನಿಲ್ ಕುಮಾರ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಸೌಜನ್ಯ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಸಹಾಯಕರಾಗಿದ್ದ ಅನಿಲ್ ಕುಮಾರ್ ಅವರು, ಮೃತದೇಹವನ್ನು ಪರೀಕ್ಷೆಗಾಗಿ ಕೊಯ್ದ ಪ್ರಕ್ರಿಯೆಯಲ್ಲೂ ಭಾಗಿಯಾಗಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯ ಭಾಗವಾಗಿ ಎಸ್‌ಐಟಿ ಅಧಿಕಾರಿಗಳು ಅನಿಲ್ ಕುಮಾರ್ ಅವರನ್ನು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ವಿಚಾರಣೆ ಇದೀಗ ಮುಕ್ತಾಯಗೊಂಡಿದೆ.
ಸೌಜನ್ಯ ಪ್ರಕರಣದ ಮರುತನಿಖೆಯ ಹಿನ್ನೆಲೆಯಲ್ಲಿ ಅಂದು ಮರಣೋತ್ತರ ಪರೀಕ್ಷೆ ಹಾಗೂ ತನಿಖೆಗೆ ಸಂಬಂಧಿಸಿದ ಪ್ರಕ್ರಿಯೆಗಳಲ್ಲಿ ಭಾಗಿಯಾಗಿದ್ದವರನ್ನು ಎಸ್‌ಐಟಿ ವಿಚಾರಣೆಗೆ ಒಳಪಡಿಸುತ್ತಿದೆ.
ಬಿಗ್ ನ್ಯೂಸ್
Blood donation camp-ಸಂಸ್ಥಾಪಕರ ದಿನಕ್ಕೆ ಸಮಾಜಮುಖಿ ಸ್ಪರ್ಶ: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ರಕ್ತದಾನ ಶಿಬಿರ‘ರಕ್ತದಾನ ಜೀವ ಉಳಿಸುವ ಪವಿತ್ರ ಕಾರ್ಯ; ಪ್ರತಿಯೊಬ್ಬರಲ್ಲೂ ರಕ್ತದಾನದ ಮನೋಭಾವ ಬೆಳೆಸಬೇಕು’ – ಜಿ.ಎಲ್. ಬಲರಾಮ ಆಚಾರ್ಯ
ಸಂಸ್ಥಾಪಕರ ದಿನಾಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಕ್ಕೆ ಉಪಯುಕ್ತವಾಗುವ ಸೇವಾ ಕಾರ್ಯದ ಮೂಲಕ ಆಚರಿಸುವ ಉದ್ದೇಶದಿಂದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಪುತ್ತೂರು: ಸಂಸ್ಥಾಪಕರ ದಿನಾಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಕ್ಕೆ ಉಪಯುಕ್ತವಾಗುವ ಸೇವಾ ಕಾರ್ಯದ ಮೂಲಕ ಆಚರಿಸುವ ಉದ್ದೇಶದಿಂದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಪುತ್ತೂರು ಮುಖ್ಯರಸ್ತೆಯಲ್ಲಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಹಾಗೂ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಸೆಂಟರ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಸಂಸ್ಥೆಯ ಚೇರ್ಮನ್ ಜಿ.ಎಲ್. ಬಲರಾಮ ಆಚಾರ್ಯ ಮಾತನಾಡಿದರು.
ರಕ್ತದಾನ ಅತ್ಯಂತ ಪವಿತ್ರವಾದ ಕಾರ್ಯ. ಒಬ್ಬ ವ್ಯಕ್ತಿ ನೀಡುವ ರಕ್ತ ಮತ್ತೊಬ್ಬರ ಜೀವ ಉಳಿಸಲು ನೆರವಾಗುತ್ತದೆ. ಹೀಗಾಗಿ ರಕ್ತದಾನವನ್ನು ಕೇವಲ ಶಿಬಿರಗಳಿಗೆ ಸೀಮಿತಗೊಳಿಸದೆ, ಪ್ರತಿಯೊಬ್ಬರಲ್ಲೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಬೇಕೆಂಬ ಮನೋಭಾವ ಬೆಳೆಯಬೇಕು. ಪುತ್ತೂರಿನ ಆರೋಗ್ಯ ಕ್ಷೇತ್ರದಲ್ಲಿ ಬ್ಲಡ್ ಬ್ಯಾಂಕ್ ಮಹತ್ವದ ಪಾತ್ರ ವಹಿಸುತ್ತಿದ್ದು, ಸಂಸ್ಥೆಯ ಸಂಸ್ಥಾಪಕರ ದಿನವನ್ನು ಸಮಾಜಮುಖಿಯಾಗಿ ಆಚರಿಸಬೇಕೆಂಬ ಆಶಯದಿಂದ ಈ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು.
ವ್ಯಾಪಾರ ಮತ್ತು ಉದ್ಯಮದ ಯಶಸ್ಸಿನ ಜತೆಗೆ ಸಮಾಜದ ಆರೋಗ್ಯ ಹಾಗೂ ಜೀವ ರಕ್ಷಣೆಯ ಕಾರ್ಯಗಳಲ್ಲೂ ಸಂಸ್ಥೆಗಳು ಕೈಜೋಡಿಸಬೇಕು ಎಂಬ ಸಂದೇಶವನ್ನು ಈ ಕಾರ್ಯಕ್ರಮ ಸಾರಿತು.
ಬಿಗ್ ನ್ಯೂಸ್
Radhas-ಮಕ್ಕಳ ದಿನಾಚರಣೆ ಸಂಭ್ರಮ: ಪುತ್ತೂರಿನ ರಾಧಾಸ್‌ನಲ್ಲಿ ನಾಳೆ ಪುಟಾಣಿಗಳ ಫ್ಯಾಷನ್ ಶೋ
ಮಕ್ಕಳ ದಿನಾಚರಣೆಯ ಅಂಗವಾಗಿ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಜನಪ್ರಿಯ ರಾಧಾಸ್ ಜವುಳಿ ಮಳಿಗೆಯು ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ನ.14ರಂದು ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಮಕ್ಕಳಿಗಾಗಿ ಫ್ಯಾಷನ್ ಶೋ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಪುಟಾಣಿ ಮಾಡೆಲ್‌ಗಳ Ramp ವಾಕ್ ಸಂಭ್ರಮಕ್ಕೆ ವೇದಿಕೆ ಸಜ್ಜಾಗಿದೆ.
ಪುತ್ತೂರು: ಮಕ್ಕಳ ದಿನಾಚರಣೆಯ ಅಂಗವಾಗಿ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಜನಪ್ರಿಯ ರಾಧಾಸ್ ಜವುಳಿ ಮಳಿಗೆಯು ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ನ.14ರಂದು ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಮಕ್ಕಳಿಗಾಗಿ ಫ್ಯಾಷನ್ ಶೋ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಪುಟಾಣಿ ಮಾಡೆಲ್‌ಗಳ Ramp ವಾಕ್ ಸಂಭ್ರಮಕ್ಕೆ ವೇದಿಕೆ ಸಜ್ಜಾಗಿದೆ.
ಜವುಳಿ ಉದ್ಯಮದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ರಾಧಾಸ್ ಮಳಿಗೆಯ ಈ ವಿನೂತನ ಪ್ರಯತ್ನ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹಾಗೂ ಆತ್ಮವಿಶ್ವಾಸವನ್ನು ಅನಾವರಣಗೊಳಿಸಲು ಉತ್ತಮ ಅವಕಾಶ ಕಲ್ಪಿಸಲಿದೆ.
14 ವರ್ಷದೊಳಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸ್ಪರ್ಧಿಗಳಿಗೆ ಅಗತ್ಯವಿರುವ ಆಕರ್ಷಕ ಉಡುಗೆಗಳನ್ನು ಮಳಿಗೆಯ ವತಿಯಿಂದಲೇ ಒದಗಿಸಲಾಗುತ್ತದೆ. ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮಕ್ಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು.
ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ವೇದಿಕೆಯ ಅನುಭವ ಕಲ್ಪಿಸುವ ಉದ್ದೇಶದಿಂದ ಆಯೋಜಿಸಿರುವ ಈ ಫ್ಯಾಷನ್ ಶೋ ಪುಟಾಣಿಗಳಿಗೆ ವಿಶೇಷ ಸಂಭ್ರಮ ನೀಡಲಿದೆ.
ರಾಜಕೀಯ
Puttur-ಪುತ್ತೂರು ಕ್ಷೇತ್ರಕ್ಕೆ ₹654 ಕೋಟಿಗೂ ಅಧಿಕ ಗ್ಯಾರಂಟಿ ಸೌಲಭ್ಯ: ಬಿಜೆಪಿ ಟೀಕೆಗೆ ಉಮಾನಾಥ ಶೆಟ್ಟಿ ಪೆರ್ನೆ ತಿರುಗೇಟು
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂಬ ಬಿಜೆಪಿ ಆರೋಪಕ್ಕೆ ಅಂಕಿಅಂಶಗಳ ಮೂಲಕ ಉತ್ತರಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ₹654 ಕೋಟಿಗೂ ಅಧಿಕ ಮೊತ್ತದ ಗ್ಯಾರಂಟಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಪುತ್ತೂರು: ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂಬ ಬಿಜೆಪಿ ಆರೋಪಕ್ಕೆ ಅಂಕಿಅಂಶಗಳ ಮೂಲಕ ಉತ್ತರಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ₹654 ಕೋಟಿಗೂ ಅಧಿಕ ಮೊತ್ತದ ಗ್ಯಾರಂಟಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಸೇತುವೆ ನಿರ್ಮಾಣವಲ್ಲ. ಪ್ರತಿಯೊಂದು ಕುಟುಂಬದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ತರುವುದೂ ಅಭಿವೃದ್ಧಿಯ ಭಾಗವಾಗಿದೆ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತಂದಿದ್ದು, ಅರ್ಹ ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯ ತಲುಪಿಸಲಾಗುತ್ತಿದೆ ಎಂದರು.
ಗೃಹಜ್ಯೋತಿ ಯೋಜನೆಯಡಿ ಪುತ್ತೂರು ಮತ್ತು ವಿಟ್ಲ ಭಾಗಗಳಲ್ಲಿ 80,371 ಮಂದಿ ಪ್ರಯೋಜನ ಪಡೆಯುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆಯಡಿ ಒಟ್ಟು 46,176 ಕುಟುಂಬಗಳಿಗೆ ₹293.91 ಕೋಟಿ ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 37 ಸಾವಿರಕ್ಕೂ ಅಧಿಕ ಕುಟುಂಬಗಳು ಸೌಲಭ್ಯ ಪಡೆಯುತ್ತಿವೆ. ಶಕ್ತಿ ಯೋಜನೆಯಡಿ 4.11 ಕೋಟಿಗೂ ಅಧಿಕ ಮಹಿಳಾ ಪ್ರಯಾಣಗಳು ನಡೆದಿದ್ದು, ಟಿಕೆಟ್ ಮೌಲ್ಯ ₹102.36 ಕೋಟಿ ಆಗಿದೆ. ಯುವನಿಧಿ ಯೋಜನೆಯಡಿ 1,005 ಮಂದಿಗೆ ಸುಮಾರು ₹2.50 ಕೋಟಿ ವಿತರಿಸಲಾಗಿದೆ ಎಂದು ವಿವರಿಸಿದರು.
ಗೃಹಲಕ್ಷ್ಮೀ ಯೋಜನೆಯ ಹಣ ಉಳಿತಾಯ ಮಾಡಿ ಹೈನುಗಾರಿಕೆ ಆರಂಭಿಸಿರುವ ಹಿರೇಬಂಡಾಡಿನ ಸುಂದರಿ ಅವರ ಉದಾಹರಣೆಯನ್ನು ಉಲ್ಲೇಖಿಸಿದರು. ಏಳು ದನಗಳನ್ನು ಹೊಂದಿರುವ ಅವರು ದಿನಕ್ಕೆ 50ರಿಂದ 60 ಲೀಟರ್ ಹಾಲು ಉತ್ಪಾದಿಸಿ, ತಿಂಗಳಿಗೆ ಸುಮಾರು ₹60 ಸಾವಿರ ಆದಾಯ ಗಳಿಸುತ್ತಿದ್ದಾರೆ.
-
ಬಿಗ್ ನ್ಯೂಸ್10 hours agoHigh Court-ಈಶ್ವರಮಂಗಲ: ಮೇನಾಲದ ಹೈಟೆಕ್ ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕ ಬಂದ್ಗೆ ಹೈಕೋರ್ಟ್ ಆದೇಶ..!
-
ಅಪರಾಧ12 hours agoMangalore-ಮಂಗಳೂರು: ₹1.15 ಕೋಟಿ ದರೋಡೆಗೆ ಸಂಚು ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್-ಕೆಲಸದಿಂದ ಅಮಾನತು
-
ಸುಳ್ಯ12 hours agoAreca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
-
ಅಪರಾಧ11 hours agoArrested-ಬಡ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಜಾಲ ಪತ್ತೆ: 11 ಮಂದಿ ಅರೆಸ್ಟ್; ಅಕ್ಕಪಡೆಯ ಮಹಿಳಾ ಪೊಲೀಸರ ಸಾಹಸಕ್ಕೆ ಮೆಚ್ಚುಗೆ
-
ರಾಜಕೀಯ12 hours agoHariprasad-ಮತಾಂತರ ನಿಷೇಧ ಕಾಯ್ದೆ ರದ್ದು ಫಿಕ್ಸ್? ಹರಿಪ್ರಸಾದ್ ಬಿಗ್ ಸುಳಿವು..!
-
ಕ್ರೈಂ10 hours agoSeven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ
-
ನಿಧನ ವಾರ್ತೆ10 hours agoMelkar-ಮೆಲ್ಕಾರ್: ಸ್ವರಾಜ್ ಸ್ಟುಡಿಯೋ ಮಾಲೀಕರ ಪುತ್ರಿ ನಿಧನ
-
ಸ್ಥಳೀಯ11 hours agoArrested-ಮಣಿಪಾಲದಲ್ಲಿ ವೇಶ್ಯಾವಾಟಿಕೆ ದಂಧೆ: ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳದ ಇಬ್ಬರು ಪಿಂಪ್ಗಳ ಬಂಧನ

















