Connect with us

ರಾಜಕೀಯ

Hariprasad-ಮತಾಂತರ ನಿಷೇಧ ಕಾಯ್ದೆ ರದ್ದು ಫಿಕ್ಸ್? ಹರಿಪ್ರಸಾದ್ ಬಿಗ್ ಸುಳಿವು..!

Published

on



Ad Widget

Ad Widget

Ad Widget

Ad Widget

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಕಾಯ್ದೆಯನ್ನು ವಾಪಸ್ ಪಡೆಯುವ ಸಾಧ್ಯತೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸುಳಿವು ನೀಡಿದ್ದಾರೆ.

Ad Widget

Ad Widget

Ad Widget

ಬೆಂಗಳೂರು, ನ.12: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಕಾಯ್ದೆಯನ್ನು ವಾಪಸ್ ಪಡೆಯುವ ಸಾಧ್ಯತೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸುಳಿವು ನೀಡಿದ್ದಾರೆ.

Ad Widget

Ad Widget alt="Ad Widget"/>

Ad Widget

2022ರ ಹಿಂದಿನ ವ್ಯವಸ್ಥೆ ಮರುಜಾರಿ:
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಹಾಗೂ ದಲಿತ ಸಂಘಟನೆಗಳ ‘ವಚನಭ್ರಷ್ಟ ಹೋರಾಟ’ದ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಹರಿಪ್ರಸಾದ್, “ನಾವು ಕೊಟ್ಟ ಮಾತನ್ನು ಈಡೇರಿಸುತ್ತೇವೆ. 2022ರಲ್ಲಿ ಹೇಗಿತ್ತೋ ಅದೇ ರೀತಿಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುವುದು” ಎಂದು ತಿಳಿಸಿದ್ದಾರೆ.

Ad Widget

Ad Widget <> Ad Widget

ಕಾಂಗ್ರೆಸ್ ಪಕ್ಷವು 2023ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದಾಗಿ ಭರವಸೆ ನೀಡಿತ್ತು.



Ad Widget

ಕಾಯ್ದೆ ಹಿಂಪಡೆಯುವ ನಿರ್ಧಾರಕ್ಕೆ ಬಿಜೆಪಿಯಿಂದ ವಿರೋಧ:
ಇನ್ನೊಂದೆಡೆ, ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾಯ್ದೆಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಗಳ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Ad Widget

Ad Widget

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಸೇನಾ ತರಬೇತಿ ನೀಡುವ ಹೆಸರಿನಲ್ಲಿ ಹಿಂದೂಗಳಿಂದ ಅವರನ್ನು ಪ್ರತ್ಯೇಕಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು. ಸಮಾಜದಲ್ಲಿ ವಿಭಜನೆ ಸೃಷ್ಟಿಸುವ ಇಂತಹ ಕ್ರಮಗಳ ವಿರುದ್ಧ ಸೂಕ್ತ ಸಂದರ್ಭದಲ್ಲಿ ಧ್ವನಿ ಎತ್ತುವುದಾಗಿ ತಿಳಿಸಿದರು.

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

Ad Widget
Click to comment

Leave a Reply

ರಾಜಕೀಯ

New app-ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: ಮೂರು ತಿಂಗಳಲ್ಲಿ ಹೊಸ ಆ್ಯಪ್ ಜಾರಿ

Published

on



Ad Widget

Ad Widget

Ad Widget

Ad Widget

ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯ ನಿರ್ವಹಣೆ ಹಾಗೂ ವಿಲೇವಾರಿ ಮೇಲೆ ನಿಗಾ ಇಡಲು ವಿಶೇಷ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗುತ್ತಿದೆ. ಈ ನೂತನ ವ್ಯವಸ್ಥೆಯನ್ನು ಮೂರು ತಿಂಗಳೊಳಗೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

ಬೆಂಗಳೂರು: ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯ ನಿರ್ವಹಣೆ ಹಾಗೂ ವಿಲೇವಾರಿ ಮೇಲೆ ನಿಗಾ ಇಡಲು ವಿಶೇಷ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗುತ್ತಿದೆ. ಈ ನೂತನ ವ್ಯವಸ್ಥೆಯನ್ನು ಮೂರು ತಿಂಗಳೊಳಗೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ‘ಟ್ರೇಸಬಿಲಿಟಿ ಆ್ಯಪ್’ ಅಭಿವೃದ್ಧಿಪಡಿಸಲು ಮುಂದಾಗಿದೆ. ಈ ಆ್ಯಪ್ ಮೂಲಕ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಖರೀದಿಸುವ ಅಡುಗೆ ಎಣ್ಣೆಯ ಪ್ರಮಾಣ ಹಾಗೂ ಬಳಕೆಯಾದ ಬಳಿಕ ಅದನ್ನು ವಿಲೇವಾರಿ ಮಾಡುವ ಪ್ರಕ್ರಿಯೆಯ ಮೇಲೆ ನಿಗಾ ಇರಿಸಲಾಗುತ್ತದೆ ಎಂದು ಹೇಳಿದರು.

Ad Widget

Ad Widget <> Ad Widget

ಅಡುಗೆ ಎಣ್ಣೆಯನ್ನು ಪದೇಪದೇ ಮರುಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ದೊಡ್ಡ ಹೋಟೆಲ್‌ಗಳು ಮತ್ತು ಕಾರ್ಖಾನೆಗಳು ಸಗಟು ಪ್ರಮಾಣದಲ್ಲಿ ಎಣ್ಣೆ ಖರೀದಿಸಿದ ಬಳಿಕ ಬಳಸಿದ ಎಣ್ಣೆಯನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಇರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಎಣ್ಣೆ ಸಣ್ಣ ಹೋಟೆಲ್‌ಗಳಿಗೆ ಮರುಮಾರಾಟವಾಗುವುದನ್ನು ತಡೆಯಲು ಈ ವ್ಯವಸ್ಥೆ ಸಹಕಾರಿಯಾಗಲಿದೆ ಎಂದರು.



Ad Widget

ನೂತನ ಆ್ಯಪ್‌ನಲ್ಲಿ ಅಡುಗೆ ಎಣ್ಣೆ ಖರೀದಿಯ ಪ್ರಮಾಣ ಮತ್ತು ಬಳಸಿದ ಎಣ್ಣೆಯ ವಿತರಣೆಗೆ ಸಂಬಂಧಿಸಿದ ದತ್ತಾಂಶವನ್ನು ದಾಖಲಿಸಲಾಗುತ್ತದೆ. ಇದರಿಂದ ಬಳಸಿದ ಎಣ್ಣೆಯ ಚಲನವಲನವನ್ನು ಪತ್ತೆಹಚ್ಚಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

Ad Widget

Ad Widget

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ನಿಯಮದ ಪ್ರಕಾರ ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುವಂತಿಲ್ಲ. ಈ ನೂತನ ವ್ಯವಸ್ಥೆಯನ್ನು ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು, ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಜಾರಿಗೊಳಿಸಲಾಗುವುದು. ಎಫ್‌ಎಸ್‌ಎಸ್‌ಎಐ ಬಳಸಿದ ಅಡುಗೆ ಎಣ್ಣೆಗೆ ಸಂಬಂಧಿಸಿದ ನಿಯಮಗಳನ್ನು ಸರಳೀಕರಿಸಿದರೆ, ಅದನ್ನು ವೈಮಾನಿಕ ಇಂಧನ ಉತ್ಪಾದನೆಗೆ ರಫ್ತು ಮಾಡುವ ಅವಕಾಶವಿದೆ ಎಂದು ಸಚಿವರು ಹೇಳಿದರು.

Ad Widget
Continue Reading

ರಾಜಕೀಯ

Puttur-“ನನ್ನಷ್ಟು ರಾಜಕೀಯ ಅನುಭವ ಅಶೋಕ್ ರೈಗಿಲ್ಲ, ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ” – ಪುತ್ತೂರು ಶಾಸಕರಿಗೆ ಸವಾಲು ಹಾಕಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Published

on



Ad Widget

Ad Widget

Ad Widget

Ad Widget

“ಅಶೋಕ್ ರೈ ಅವರಿಗೆ ವಯಸ್ಸಾಗಿರಬಹುದು. ಆದರೆ ರಾಜಕೀಯ ಅನುಭವದ ವಿಚಾರದಲ್ಲಿ ನನ್ನಷ್ಟು ಅನುಭವ ಅವರಿಗಿಲ್ಲ. ನೀವು ಏನು ಮಾಡುತ್ತಿದ್ದೀರಿ ಎಂಬುದು ನಮಗೆ ಗೊತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಬೆಂಗಳೂರಿನ ಮೂರನೇ ಮಹಡಿಯಲ್ಲಿ ಏನು ಕೆಲಸ ಮಾಡುತ್ತಿದ್ದೀರಿ ಎಂಬುದೂ ತಿಳಿದಿದೆ. ನಮಗೆ ಬಂದು ಪಾಠ ಹೇಳಲು ಪ್ರಯತ್ನಿಸಬೇಡಿ. ಪುತ್ತೂರಿನಲ್ಲಿ ಅಥವಾ ನಿಮ್ಮ ಕಚೇರಿಯಲ್ಲಿ ಆಹ್ವಾನ ನೀಡಿ, ಅಭಿವೃದ್ಧಿ ವಿಚಾರವಾಗಿ ಬಹಿರಂಗ ಚರ್ಚೆಗೆ ಬರಲು ನಾನು ಸಿದ್ಧನಿದ್ದೇನೆ” ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸವಾಲು ಹಾಕಿದರು.

Ad Widget

Ad Widget

Ad Widget

ಪುತ್ತೂರು: “ಅಶೋಕ್ ರೈ ಅವರಿಗೆ ವಯಸ್ಸಾಗಿರಬಹುದು. ಆದರೆ ರಾಜಕೀಯ ಅನುಭವದ ವಿಚಾರದಲ್ಲಿ ನನ್ನಷ್ಟು ಅನುಭವ ಅವರಿಗಿಲ್ಲ. ನೀವು ಏನು ಮಾಡುತ್ತಿದ್ದೀರಿ ಎಂಬುದು ನಮಗೆ ಗೊತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಬೆಂಗಳೂರಿನ ಮೂರನೇ ಮಹಡಿಯಲ್ಲಿ ಏನು ಕೆಲಸ ಮಾಡುತ್ತಿದ್ದೀರಿ ಎಂಬುದೂ ತಿಳಿದಿದೆ. ನಮಗೆ ಬಂದು ಪಾಠ ಹೇಳಲು ಪ್ರಯತ್ನಿಸಬೇಡಿ. ಪುತ್ತೂರಿನಲ್ಲಿ ಅಥವಾ ನಿಮ್ಮ ಕಚೇರಿಯಲ್ಲಿ ಆಹ್ವಾನ ನೀಡಿ, ಅಭಿವೃದ್ಧಿ ವಿಚಾರವಾಗಿ ಬಹಿರಂಗ ಚರ್ಚೆಗೆ ಬರಲು ನಾನು ಸಿದ್ಧನಿದ್ದೇನೆ” ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿ–ಪಿಲಿಗೂಡು ರಸ್ತೆಯ ಮರು ಡಾಮರೀಕರಣಕ್ಕೆ ಅನುದಾನ ಬಿಡುಗಡೆ ಮಾಡದ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರದ ವತಿಯಿಂದ ನ.11ರಂದು ಆಯೋಜಿಸಿದ್ದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆಯ ಬಳಿಕ ಕಲ್ಲೇರಿಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ಬಿಜೆಪಿ ಸರಕಾರದ ಅವಧಿಯಲ್ಲಿ ತಮ್ಮ ಕ್ಷೇತ್ರಕ್ಕೆ ಎಷ್ಟು ಕೋಟಿ ರೂಪಾಯಿ ಅನುದಾನ ತಂದಿದ್ದೇನೆ ಎಂಬುದಕ್ಕೆ ದಾಖಲೆಗಳನ್ನು ಮುಂದಿಡುತ್ತೇನೆ. ಅದೇ ರೀತಿ ನೀವು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದೀರಿ ಎಂಬುದಕ್ಕೆ ದಾಖಲೆ ನೀಡಿ ಎಂದು ಅವರು ಆಗ್ರಹಿಸಿದರು.



Ad Widget

ಪುತ್ತೂರು ಶಾಸಕರು, ಮುಡಾ ಅಧ್ಯಕ್ಷರು ಹಾಗೂ ಪಕ್ಷದ ನಾಯಕರು ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಿದಾಗಲೆಲ್ಲ ಮೆಡಿಕಲ್ ಕಾಲೇಜು ಮತ್ತು ಮಹಾಲಿಂಗೇಶ್ವರ ದೇವಸ್ಥಾನವನ್ನು ಮುಂದಿಡುತ್ತಾರೆ. ಆದರೆ ಅಭಿವೃದ್ಧಿ ಎಂದರೆ ಈ ಎರಡು ಮಾತ್ರವಲ್ಲ. ಪುತ್ತೂರು ಕ್ಷೇತ್ರದಲ್ಲಿ 43 ಗ್ರಾಮಗಳಿವೆ ಎಂಬುದನ್ನು ಮರೆಯಬಾರದು. ಬೆಳ್ತಂಗಡಿ ಕ್ಷೇತ್ರದಲ್ಲಿ 81 ಗ್ರಾಮಗಳಿದ್ದು, ಈ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಕಳೆದ ಮೂರೂವರೆ ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನ ತಂದಿದ್ದೇನೆ. ಪುತ್ತೂರಿಗೆ ನೀವು ಎಷ್ಟು ಅನುದಾನ ತಂದಿದ್ದೀರಿ ಎಂದು ತಿಳಿಸಿ ಎಂದು ಹರೀಶ್ ಪೂಂಜ ಪ್ರಶ್ನಿಸಿದರು.

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿರುವುದು ಇದೇ ಮೊದಲು. ಆದರೆ ಮೆಡಿಕಲ್ ಕಾಲೇಜಿಗೆ ಅನುಮತಿ ನೀಡುವುದು ರಾಜ್ಯ ಸರಕಾರವಲ್ಲ, ಕೇಂದ್ರ ಸರಕಾರದ ಅಧೀನದಲ್ಲಿರುವ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ. ಜಿಲ್ಲೆಯ ಸಂಸದರು ಮನಸ್ಸು ಮಾಡಿದರೆ ಮಾತ್ರ ಅನುಮತಿ ಪಡೆಯಲು ಸಾಧ್ಯ. ಜಿಲ್ಲೆಯ ಜನರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜಿಲ್ಲೆಯ ಎಲ್ಲ ಶಾಸಕರು ಒಟ್ಟಾಗಿ ಸಂಸದರಲ್ಲಿ ಅನುಮತಿ ಕೊಡಿಸುವಂತೆ ಮನವಿ ಮಾಡಿದ್ದೇವೆ. ನಿಮ್ಮಂತೆ ನಾವು ಚೀಪ್ ಪಾಲಿಟಿಕ್ಸ್ ಮಾಡುವುದಿಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕೇಳಿದಷ್ಟು ಅನುದಾನ ನೀಡಲಾಗುತ್ತಿತ್ತು. ಆ ಸರಕಾರ ಜಿಲ್ಲೆಗೆ ಕಲ್ಪವೃಕ್ಷ, ಕಾಮಧೇನುವಿನಂತಿತ್ತು. ಗ್ರಾಮಗಳ ಅಭಿವೃದ್ಧಿಗೆ ನೀಡುತ್ತಿದ್ದ ಅನುದಾನದ ಪ್ರಮಾಣವನ್ನೂ ಹೆಚ್ಚಿಸಲಾಗಿತ್ತು. ರೈತರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಹಲವು ವೆಂಟೆಡ್ ಡ್ಯಾಂಗಳನ್ನು ನಿರ್ಮಿಸಲಾಗಿದೆ. ಪುತ್ತೂರು ಕ್ಷೇತ್ರದಲ್ಲೇ ಅಂದಿನ ಶಾಸಕ ಸಂಜೀವ ಮಠಂದೂರು ಅವರು 40ರಿಂದ 50 ವೆಂಟೆಡ್ ಡ್ಯಾಂಗಳನ್ನು ನಿರ್ಮಿಸಿದ್ದರು ಎಂದು ಹೇಳಿದರು.

ಹಾಲಿ ಶಾಸಕ ಅಶೋಕ್ ರೈ ಅವರು ಎಷ್ಟು ವೆಂಟೆಡ್ ಡ್ಯಾಂಗಳನ್ನು ನಿರ್ಮಿಸಿದ್ದಾರೆ? ಎಷ್ಟು ಕಿಲೋಮೀಟರ್ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದಾರೆ? ಆರ್‌ಡಿಪಿಆರ್ ಇಲಾಖೆಯಡಿ ಎಷ್ಟು ಕಾಮಗಾರಿಗಳನ್ನು ಮಾಡಿಸಿದ್ದಾರೆ? ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಎಷ್ಟು ಅನುದಾನ ತಂದಿದ್ದಾರೆ? ಎಂಬುದನ್ನು ದಾಖಲೆ ಸಮೇತ ತಿಳಿಸಲಿ ಎಂದು ಹರೀಶ್ ಪೂಂಜ ಸವಾಲು ಹಾಕಿದರು.

Ad Widget
Continue Reading

ರಾಜಕೀಯ

Puttur-ಚುನಾವಣಾ ಭರವಸೆ ಈಡೇರಿಸಿದ ಶಾಸಕ ಅಶೋಕ್ ರೈ; ಪುತ್ತೂರಿನಲ್ಲಿ ನಾಲ್ಕು ಸಮುದಾಯಗಳಿಗೆ ನಿವೇಶನ ಭಾಗ್ಯ: ಬ್ರಾಹ್ಮಣ, ವಿಶ್ವಕರ್ಮ, ಮುಸ್ಲಿಂ, ಮಲೆಯಾಳಿ ಬಿಲ್ಲವ ಸಮಾಜಕ್ಕೆ ಏಕಕಾಲದಲ್ಲಿ ಮಂಜೂರಾತಿ ಪತ್ರ

Published

on



Ad Widget

Ad Widget

Ad Widget

Ad Widget

ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸುತ್ತಾ ಬಂದಿದ್ದೇನೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಬಳಸುವ ರಸ್ತೆಯ ಅಭಿವೃದ್ಧಿಯಿಂದ ಹಿಡಿದು ಮೆಡಿಕಲ್ ಕಾಲೇಜು ಸ್ಥಾಪನೆಯವರೆಗೆ ಹಲವು ಭರವಸೆಗಳನ್ನು ಈಡೇರಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಸಮುದಾಯಗಳಿಗೂ ನಿವೇಶನ ಒದಗಿಸುವ ಭರವಸೆ ನೀಡಿದ್ದು, ಅದರಂತೆ ಇದೀಗ ನಿವೇಶನ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget

ಪುತ್ತೂರು: ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸುತ್ತಾ ಬಂದಿದ್ದೇನೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಬಳಸುವ ರಸ್ತೆಯ ಅಭಿವೃದ್ಧಿಯಿಂದ ಹಿಡಿದು ಮೆಡಿಕಲ್ ಕಾಲೇಜು ಸ್ಥಾಪನೆಯವರೆಗೆ ಹಲವು ಭರವಸೆಗಳನ್ನು ಈಡೇರಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಸಮುದಾಯಗಳಿಗೂ ನಿವೇಶನ ಒದಗಿಸುವ ಭರವಸೆ ನೀಡಿದ್ದು, ಅದರಂತೆ ಇದೀಗ ನಿವೇಶನ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ಬ್ರಾಹ್ಮಣ, ವಿಶ್ವಕರ್ಮ, ಮುಸ್ಲಿಂ ಹಾಗೂ ಮಲೆಯಾಳಿ ಬಿಲ್ಲವ ಸಮಾಜಗಳಿಗೆ ಏಕಕಾಲದಲ್ಲಿ ನಿವೇಶನ ಮಂಜೂರಾತಿ ಪತ್ರ ವಿತರಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಮುಖ ಸಮುದಾಯಗಳಿಗೆ ಸರಕಾರದ ಮೂಲಕ ನಿವೇಶನ ಹಂಚಿಕೆ ಮಾಡಲಾಗುತ್ತಿದೆ. ಈಗಾಗಲೇ ಕುಲಾಲ, ಭಂಡಾರಿ ಹಾಗೂ ಬಂಟ ಸಮಾಜಗಳಿಗೆ ನಿವೇಶನ ಒದಗಿಸಲಾಗಿದೆ. ನಿವೇಶನಗಳನ್ನು ಗುರುತಿಸಿ, ವಿವಿಧ ಸಮುದಾಯಗಳಿಗೆ ಹಂಚಿಕೆ ಮಾಡುವ ಸಂಬಂಧ ಕಡತವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಅನುಮೋದನೆ ಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರಿ ದಾಖಲೆಗಳ ಪ್ರಕಾರ ಆಯಾ ಸಮಾಜಗಳ ಹೆಸರಿನಲ್ಲಿ ನಿವೇಶನ ನೋಂದಣಿಯಾಗಲಿದೆ ಎಂದು ತಿಳಿಸಿದರು.



Ad Widget

ಒಂದೇ ವಾರದಲ್ಲಿ ಅನುಮೋದಿತ ಪತ್ರ ಕೈಗೆ – ಮಹೇಶ್ ಕಜೆ:
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರಮುಖರ ನಿಯೋಗ ವಾರದ ಹಿಂದೆ ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ನಿವೇಶನಕ್ಕಾಗಿ ಮನವಿ ಸಲ್ಲಿಸಿತ್ತು. ಮನವಿ ಸಲ್ಲಿಸಿದ ಒಂದೇ ವಾರದಲ್ಲಿ ಪುತ್ತೂರು ನಗರಸಭಾ ವ್ಯಾಪ್ತಿಯ 2.50 ಎಕರೆ ನಿವೇಶನದ ಕಡತಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಅನುಮೋದನೆ ಪಡೆದು ಮಂಜೂರಾತಿ ಪತ್ರವನ್ನು ಶಾಸಕರು ನೀಡಿದ್ದಾರೆ ಎಂದು ಬ್ರಾಹ್ಮಣ ಸಮಾಜದ ಪ್ರಮುಖ ಹಾಗೂ ವಕೀಲ ಮಹೇಶ್ ಕಜೆ ಹೇಳಿದರು.

Ad Widget

Ad Widget

ರಾಜಕಾರಣಿಗಳು ನೀಡುವ ಭರವಸೆಗಳ ಪೈಕಿ ಕೆಲವೇ ಕೆಲವು ಈಡೇರುತ್ತವೆ. ಆದರೆ ಅಶೋಕ್ ರೈ ಅವರು ನೀಡಿದ ಮಾತಿನಂತೆ ನಡೆದುಕೊಂಡಿದ್ದಾರೆ. ಮುಂದಿನ ಕೆಲವೇ ತಿಂಗಳಲ್ಲಿ ಬ್ರಾಹ್ಮಣ ಸಭಾದ ಹೆಸರಿನಲ್ಲಿ ನಿವೇಶನ ಮಂಜೂರಾಗುವ ವಿಶ್ವಾಸವಿದೆ. ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಶಾಸಕರು ಮಾಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಇಂತಹ ಶಾಸಕರನ್ನು ಪಡೆದಿರುವುದೇ ನಮ್ಮ ಪುಣ್ಯ – ಪುರುಷೋತ್ತಮ:
ಮಲೆಯಾಳಿ ಬಿಲ್ಲವ ಸಮಾಜಕ್ಕೆ ಒಂದು ಎಕರೆ ನಿವೇಶನ ಮಂಜೂರಾಗಿದ್ದು, ಅದರ ಅನುಮೋದಿತ ಪತ್ರವನ್ನು ಶಾಸಕರು ನೀಡಿದ್ದಾರೆ ಎಂದು ತೀಯಾ ಸಮಾಜದ ಗೌರವಾಧ್ಯಕ್ಷ ಪುರುಷೋತ್ತಮ ತಿಳಿಸಿದರು.

ಈ ಹಿಂದೆ ಹಲವು ಶಾಸಕರಿಗೆ ನಿವೇಶನಕ್ಕಾಗಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ ಮನವಿ ಸಲ್ಲಿಸಿದ ಒಂದೂವರೆ ತಿಂಗಳಲ್ಲೇ ನಿವೇಶನ ಮಂಜೂರಾತಿ ದೊರೆತಿದೆ. ಮಂಜೂರಾದ ನಿವೇಶನದಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು. ನಮ್ಮ ಬೇಡಿಕೆಗೆ ಸ್ಪಂದಿಸಿದ ಶಾಸಕರೊಂದಿಗೆ ಸಮಾಜ ಬೆಂಬಲವಾಗಿ ನಿಲ್ಲಲಿದೆ ಎಂದು ಹೇಳಿದರು.

ಮುಸ್ಲಿಂ ಸಮಾಜದ ಅಭಿವೃದ್ಧಿಗೆ ಬಳಕೆ – ಆಝಾದ್:
ಮುಸ್ಲಿಂ ಸಮಾಜಕ್ಕೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲೇ 2.88 ಎಕರೆ ನಿವೇಶನ ಮಂಜೂರು ಮಾಡಿರುವುದು ಸಂತಸದ ವಿಚಾರ ಎಂದು ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಹಿಮಾನ್ ಆಝಾದ್ ಹೇಳಿದರು.

ಮುಖ್ಯಮಂತ್ರಿಗಳಿಂದ ಅನುಮೋದನೆಗೊಂಡ ಪತ್ರವನ್ನು ಶಾಸಕರು ಹಸ್ತಾಂತರಿಸಿದ್ದು, ಮುಂದಿನ ದಿನಗಳಲ್ಲಿ ಈ ನಿವೇಶನವನ್ನು ಮುಸ್ಲಿಂ ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದರು.

ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಮಾತನಾಡಿ, ಶಾಸಕರು ಧರ್ಮಭೇದವಿಲ್ಲದೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಪರಿಗಣಿಸಿ ನಿವೇಶನ ಒದಗಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಈ ಪ್ರಯತ್ನಕ್ಕಾಗಿ ಸಮುದಾಯದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದಾಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಜಾತ್ಯತೀತ ಸಿದ್ಧಾಂತದಂತೆ ಶಾಸಕ ಅಶೋಕ್ ರೈ ಅವರು ಜಾತಿ, ಮತ ಭೇದವಿಲ್ಲದೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ನಿವೇಶನ ಒದಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಕೆಸರುಗದ್ದೆ ಕಾರ್ಯಕ್ರಮದಲ್ಲಿ ಮನವಿ ಮಾಡಿದ್ದೆವು – ದಿವಾಕರ ಆಚಾರ್ಯ:
ಮೂರು ತಿಂಗಳ ಹಿಂದೆ ಪುತ್ತೂರಿನಲ್ಲಿ ನಡೆದ ಕೆಸರುಗದ್ದೆ ಕಾರ್ಯಕ್ರಮಕ್ಕೆ ಶಾಸಕ ಅಶೋಕ್ ರೈ ಅವರನ್ನು ಆಹ್ವಾನಿಸಿದ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಪರವಾಗಿ ನಿವೇಶನಕ್ಕಾಗಿ ಮನವಿ ಸಲ್ಲಿಸಲಾಗಿತ್ತು. ಇದೀಗ ಕೇವಲ ಮೂರು ತಿಂಗಳಲ್ಲೇ ಒಂದು ಎಕರೆ ನಿವೇಶನದ ಮಂಜೂರಾತಿ ಪತ್ರ ದೊರೆತಿದೆ ಎಂದು ವಿಶ್ವಕರ್ಮ ಯುವಮಿಲನ್ ಕಾರ್ಯದರ್ಶಿ ದಿವಾಕರ ಆಚಾರ್ಯ ಹೇಳಿದರು.

ಇದು ನಮ್ಮ ಸಮಾಜದ 15 ವರ್ಷಗಳ ಬೇಡಿಕೆಯಾಗಿತ್ತು. ಈ ಹಿಂದೆ ಹಲವು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆತಿರಲಿಲ್ಲ. ಇದೀಗ ಬೇಡಿಕೆ ಈಡೇರಿರುವುದು ಸಂತಸದ ವಿಚಾರ. ನಮ್ಮ ಸಮಾಜದ ಪಾಲಿಗೆ ಈ ದಿನ ದೀಪಾವಳಿ ಹಬ್ಬದಂತಾಗಿದೆ ಎಂದರು.

ವಿಶ್ವಕರ್ಮ ಯುವಮಿಲನ್ ಅಧ್ಯಕ್ಷ ಹರೀಶ್ ಆಚಾರ್ಯ ಮಾತನಾಡಿ, 15 ವರ್ಷಗಳಿಂದ ವಿವಿಧ ಶಾಸಕರಿಗೆ ನಿವೇಶನಕ್ಕಾಗಿ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಜಿಲ್ಲಾ ಮಟ್ಟದಲ್ಲಿ ಪುತ್ತೂರಿನಲ್ಲೇ ವಿಶ್ವಕರ್ಮ ಸಮಾಜಕ್ಕೆ ಮೊದಲ ಬಾರಿಗೆ ನಿವೇಶನ ದೊರೆತಿರುವುದು ಸಂತಸದ ವಿಚಾರ. ಶಾಸಕರ ಈ ಕೊಡುಗೆಯನ್ನು ಸಮಾಜ ಮರೆಯುವುದಿಲ್ಲ ಎಂದು ಹೇಳಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!