Connect with us

ಅಪರಾಧ

Arrested-ಬಡ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಜಾಲ ಪತ್ತೆ: 11 ಮಂದಿ ಅರೆಸ್ಟ್; ಅಕ್ಕಪಡೆಯ ಮಹಿಳಾ ಪೊಲೀಸರ ಸಾಹಸಕ್ಕೆ ಮೆಚ್ಚುಗೆ

Published

on



Ad Widget

Ad Widget

Ad Widget

Ad Widget

ಬಡ ಕುಟುಂಬಗಳ ಹೆಣ್ಣುಮಕ್ಕಳಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಸಂಘಟಿತ ಜಾಲವೊಂದನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ. ಸುಮಾರು ಆರು ತಿಂಗಳಿಂದ ಡಿಜಿಟಲ್ ಮಾಧ್ಯಮಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದ ಈ ಜಾಲದ ವಿರುದ್ಧ ಪೊಲೀಸರು ಸುದೀರ್ಘ ತನಿಖೆ ನಡೆಸಿ 11 ಆರೋಪಿಗಳನ್ನು ಬಂಧಿಸಿದ್ದಾರೆ.

Ad Widget

Ad Widget

Ad Widget

ಬಳ್ಳಾರಿ, ನ.12: ಬಡ ಕುಟುಂಬಗಳ ಹೆಣ್ಣುಮಕ್ಕಳಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಸಂಘಟಿತ ಜಾಲವೊಂದನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ. ಸುಮಾರು ಆರು ತಿಂಗಳಿಂದ ಡಿಜಿಟಲ್ ಮಾಧ್ಯಮಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದ ಈ ಜಾಲದ ವಿರುದ್ಧ ಪೊಲೀಸರು ಸುದೀರ್ಘ ತನಿಖೆ ನಡೆಸಿ 11 ಆರೋಪಿಗಳನ್ನು ಬಂಧಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕಾರ್ಯಾಚರಣೆಯಲ್ಲಿ ವಿಶೇಷ ಗಮನ ಸೆಳೆದಿರುವುದು ಬಳ್ಳಾರಿಯ ‘ಅಕ್ಕ ಪಡೆ’ಯ ಮಹಿಳಾ ಪೊಲೀಸ್ ಸಿಬ್ಬಂದಿಯ ಸಾಹಸ. ಮಹಿಳಾ ಸಿಬ್ಬಂದಿಯೇ ಖುದ್ದಾಗಿ ಕಾರ್ಯಾಚರಣೆಗೆ ಇಳಿದು, ಆರೋಪಿಗಳ ಜಾಲದೊಳಗೆ ಪ್ರವೇಶಿಸಿ ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ನೆರವಾಗಿದ್ದಾರೆ.

Ad Widget

Ad Widget <> Ad Widget

ಬಡ ಕುಟುಂಬಗಳ ಹೆಣ್ಣುಮಕ್ಕಳನ್ನೇ ಗುರಿಯಾಗಿಸಿಕೊಂಡಿದ್ದ ಆರೋಪಿಗಳು, ಹಣದ ಆಮಿಷವೊಡ್ಡಿ ಅವರನ್ನು ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದರು. ಬಳ್ಳಾರಿ ಮಾತ್ರವಲ್ಲದೆ ಆಂಧ್ರಪ್ರದೇಶದ ಅನಂತಪುರ, ಚಿಕ್ಕಮಗಳೂರು, ಮೈಸೂರು ಸೇರಿದಂತೆ ಹಲವು ಪ್ರದೇಶಗಳಿಗೂ ಈ ಜಾಲದ ಸಂಪರ್ಕವಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.



Ad Widget

ಸುಮಾರು 45 ದಿನಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಿದ ಅಕ್ಕಪಡೆ ಬೃಹತ್ ಜಾಲವನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಸಂಬಂಧ ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Ad Widget

Ad Widget

ಫೋಟೋಗಳ ಮೂಲಕ ಹೆಣ್ಣುಮಕ್ಕಳ ಆಯ್ಕೆ!
ಆರೋಪಿಗಳು ಹೆಣ್ಣುಮಕ್ಕಳನ್ನು ಆಯ್ಕೆ ಮಾಡಲು ವ್ಯವಸ್ಥಿತ ವಿಧಾನ ಅನುಸರಿಸುತ್ತಿದ್ದರು. ನಿರ್ದಿಷ್ಟ ವಯಸ್ಸು, ಎತ್ತರ ಸೇರಿದಂತೆ ಕೆಲವು ಮಾನದಂಡಗಳನ್ನು ವಿಧಿಸಿ, ಜನ್ಮದಿನಾಂಕದೊಂದಿಗೆ ಮುಂಗೈ ಮತ್ತು ಮುಂಗಾಲು ಕಾಣುವಂತೆ ಫೋಟೋಗಳನ್ನು ಕಳುಹಿಸುವಂತೆ ಸೂಚಿಸುತ್ತಿದ್ದರು. ಹೀಗೆ ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿತ್ತು.

ಆಯ್ಕೆಯಾದ ಯುವತಿಯರನ್ನು ‘ಲಕ್ಷ್ಮಿ ಪೂಜೆ’ ಹೆಸರಿನಲ್ಲಿ ಕರೆಸಿಕೊಂಡು, ಹಣದ ಆಮಿಷವೊಡ್ಡಿ ಜಾಲಕ್ಕೆ ಸೆಳೆಯಲಾಗುತ್ತಿತ್ತು ಎನ್ನಲಾಗಿದೆ. ಈ ಪ್ರಕ್ರಿಯೆಯಲ್ಲಿ ಯುವತಿ, ಮಧ್ಯವರ್ತಿ ಹಾಗೂ ಜಾಲದ ಮುಖ್ಯಸ್ಥನಿಗೆ ಹಣ ನೀಡಲಾಗುತ್ತದೆ ಎಂದು ನಂಬಿಸಲಾಗುತ್ತಿತ್ತು. ಕೊನೆಗೆ ಬೆತ್ತಲೆ ಫೋಟೋಗಳನ್ನು ಕೂಡ ಕಳುಹಿಸುವಂತೆ ಒತ್ತಾಯಿಸಲಾಗುತ್ತಿತ್ತು. ಈ ಜಾಲದಲ್ಲಿ ಅಪ್ರಾಪ್ತ ವಯಸ್ಕ ಹೆಣ್ಣುಮಕ್ಕಳ ಫೋಟೋಗಳು ಕೂಡ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕೋಡ್ ವರ್ಡ್ ಮೂಲಕ ರಹಸ್ಯ ವ್ಯವಹಾರ
ತಮ್ಮ ಅಕ್ರಮ ಚಟುವಟಿಕೆಗಳನ್ನು ಗುಟ್ಟಾಗಿ ನಡೆಸಲು ಆರೋಪಿಗಳು ಕೋಡ್ ವರ್ಡ್‌ಗಳನ್ನು ಬಳಸುತ್ತಿದ್ದರು. ಜಾಲವನ್ನು ‘ಮೀಡಿಯಾ’, ಹೆಣ್ಣುಮಕ್ಕಳನ್ನು ‘ಪೇಪರ್’ ಹಾಗೂ ಜಾಲದ ಮುಖ್ಯಸ್ಥನನ್ನು ‘ಡಿಆರ್’ ಎಂದು ಕರೆಯುತ್ತಿದ್ದರು. ಈ ಸಂಕೇತ ಪದಗಳ ಮೂಲಕವೇ ಪರಸ್ಪರ ಸಂವಹನ ನಡೆಸಿ ಕಾರ್ಯಾಚರಣೆಯ ರಹಸ್ಯ ಕಾಪಾಡುತ್ತಿದ್ದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಳ್ಳಾರಿ ಜಿಲ್ಲೆಯಿಂದ ಮೂವರು ಯುವತಿಯರನ್ನು ಈ ಜಾಲದ ಮೂಲಕ ಕಳುಹಿಸಿರುವ ಸುಳಿವು ಲಭ್ಯವಾಗಿದೆ. ಒಟ್ಟು 16 ಜನರ ಪೈಕಿ 11 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಬಳ್ಳಾರಿಯ 10 ಮಂದಿ ಹಾಗೂ ಅನಂತಪುರ ಮತ್ತು ಪುಣೆಯ ತಲಾ ಒಬ್ಬರು ಸೇರಿದ್ದಾರೆ ಎಂದು ವರದಿಯಾಗಿದೆ.

ಬಡ ಮಹಿಳೆಯರ ವೇಷದಲ್ಲಿ ಅಕ್ಕಪಡೆ ಕಾರ್ಯಾಚರಣೆ
ನಗರದ ಕೆಲವು ಕೊಳೆಗೇರಿ ಪ್ರದೇಶಗಳಲ್ಲಿ ಈ ಜಾಲ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಕ್ಕಪಡೆಯ ಸಿಬ್ಬಂದಿ, ಜಾಲದ ಮಹಿಳಾ ಮಧ್ಯವರ್ತಿಗಳ ಸಂಪರ್ಕ ಸಾಧಿಸಿದ್ದಾರೆ. ಬಳಿಕ ಬಡ ಮಹಿಳೆಯರಂತೆ ಹಳೆಯ ಬಟ್ಟೆಗಳನ್ನು ಧರಿಸಿ, ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳ ಸದಸ್ಯರಂತೆ ನಟಿಸಿ ಜಾಲದ ಸಂಪರ್ಕಕ್ಕೆ ಬಂದಿದ್ದಾರೆ.

ಹಿಂದೆ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದ ತಮ್ಮ ಕುಟುಂಬಗಳು ಈಗ ಸಂಕಷ್ಟದಲ್ಲಿವೆ ಎಂದು ಹೇಳಿ ಆರೋಪಿಗಳ ವಿಶ್ವಾಸ ಗಳಿಸಿದ್ದಾರೆ. ಜಾಲದ ಮೂರು-ನಾಲ್ಕು ಹಂತಗಳನ್ನು ದಾಟಿ ಸಂಪೂರ್ಣ ಮಾಹಿತಿ ಸಂಗ್ರಹಿಸಿದ ಬಳಿಕ ಹೆಚ್ಚುವರಿ ಪೊಲೀಸ್ ತಂಡದ ನೆರವಿನಿಂದ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಅಕ್ಕಪಡೆಯ ಲಲಿತಮ್ಮ, ಅನಿತಾ, ಶಾಹೀದಾ ಹಾಗೂ ರುಖಿಯಾ ಬಾನು ಅವರು ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.

Ad Widget
Click to comment

Leave a Reply

ಅಪರಾಧ

Padnuru-ಪಡ್ನೂರು: ಬೇಲಿ ಕಲ್ಲು ಕಿತ್ತು ಜಮೀನಿಗೆ ಅಕ್ರಮ ಪ್ರವೇಶ; ನಿವೃತ್ತ ಮುಖ್ಯಗುರು ಕುಟುಂಬದ ಮೇಲೆ ಹಲ್ಲೆಗೆ ಯತ್ನ ಆರೋಪ; ಇತ್ತಂಡಗಳಿಂದ ದೂರು ದಾಖಲು

Published

on



Ad Widget

Ad Widget

Ad Widget

Ad Widget

ಜಮೀನಿಗೆ ಹಾಕಿದ್ದ ಬೇಲಿ ಕಲ್ಲುಗಳನ್ನು ಕಿತ್ತು ಹಾಕಿ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೆ, ನಿವೃತ್ತ ಮುಖ್ಯಗುರು ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ದೇಮೇರು ಎಂಬಲ್ಲಿ ನ.11ರಂದು ನಡೆದಿದೆ ಎನ್ನಲಾಗಿದೆ.

Ad Widget

Ad Widget

Ad Widget

ಪುತ್ತೂರು: ಜಮೀನಿಗೆ ಹಾಕಿದ್ದ ಬೇಲಿ ಕಲ್ಲುಗಳನ್ನು ಕಿತ್ತು ಹಾಕಿ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೆ, ನಿವೃತ್ತ ಮುಖ್ಯಗುರು ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ದೇಮೇರು ಎಂಬಲ್ಲಿ ನ.11ರಂದು ನಡೆದಿದೆ ಎನ್ನಲಾಗಿದೆ.

Ad Widget

Ad Widget alt="Ad Widget"/>

Ad Widget

ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿದ್ದು, ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಲ್ಲಿನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿರುವ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget

Ad Widget <> Ad Widget

ಬೇಲಿ ಕಲ್ಲುಗಳನ್ನು ಕಿತ್ತು ಹಲ್ಲೆಗೆ ಯತ್ನ ಆರೋಪ:
ನಿವೃತ್ತ ಮುಖ್ಯಗುರು ವಿಜಯಕುಮಾರಿ ಅವರು ನೀಡಿರುವ ದೂರಿನ ಪ್ರಕಾರ, ಅವರ ಪುತ್ರಿ ಸ್ವಪ್ನ ಗೋಪಿನಾಥ್ ಖರೀದಿಸಿರುವ ಜಮೀನಿಗೆ ಸಂಬಂಧಿಸಿದಂತೆ ನೆರೆಯ ಮನೆಯವರಾದ ದಮಯಂತಿ ಹಾಗೂ ಅವರ ಪುತ್ರಿ ಪುಷ್ಪಶ್ರೀ ಅವರು ನ.11ರ ಮಧ್ಯಾಹ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ.



Ad Widget

ಈ ಬಗ್ಗೆ ವಿಚಾರಿಸಲು ಹೋದಾಗ ಜಮೀನಿನ ಬೇಲಿಗೆ ಹಾಕಿದ್ದ ಕಲ್ಲುಗಳನ್ನು ನೂಕಿ ಹಾಕಿ, ಅದೇ ಕಲ್ಲುಗಳಿಂದ ತಮ್ಮ ಹಾಗೂ ಕುಟುಂಬದವರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾರೆ ಎಂದು ವಿಜಯಕುಮಾರಿ ಆರೋಪಿಸಿದ್ದಾರೆ.

Ad Widget

Ad Widget

ಘಟನೆಯ ದೃಶ್ಯಗಳು ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿವೆ. ಈ ಹಿಂದೆಯೂ ಪದೇಪದೇ ತೊಂದರೆ ನೀಡುತ್ತಿರುವ ಬಗ್ಗೆ ನ.8 ಮತ್ತು 9ರಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಮಧ್ಯಂತರ ತಡೆಯಾಜ್ಞೆ ಅರ್ಜಿ ತಿರಸ್ಕೃತ:
ಸ್ಥಳೀಯ ನಿವಾಸಿ ದಮಯಂತಿ ಅವರು ತಮ್ಮ ಜಮೀನಿನಲ್ಲಿ ಕಾಲುದಾರಿ ಹಕ್ಕು ಕೋರಿ ಮೂಲ ದಾವೆ ಸಂಖ್ಯೆ 269/2025ರಂತೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಪಡೆದು ತಮ್ಮ ತಂತಿ ಬೇಲಿಯನ್ನು ತುಂಡರಿಸಿದ್ದರು ಎನ್ನಲಾಗಿದೆ.

ಈ ವಿಚಾರವಾಗಿ ವಿಜಯಕುಮಾರಿ ಅವರು ವಕೀಲರ ಮೂಲಕ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಿದ್ದರು. 2026ರ ನ.7ರಂದು ಪುತ್ತೂರಿನ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಪ್ರಕರಣದಲ್ಲಿ ವಾದಿಗಳು ಸಲ್ಲಿಸಿದ್ದ ಐಎ ಸಂಖ್ಯೆ 2ರ ಮಧ್ಯಂತರ ತಡೆಯಾಜ್ಞೆ ಅರ್ಜಿಯನ್ನು ತಿರಸ್ಕರಿಸಿತ್ತು.

ಆದರೂ ಮತ್ತೆ ಮತ್ತೆ ಬೇಲಿಯನ್ನು ತುಂಡರಿಸಿ ತಮ್ಮ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಲಾಗುತ್ತಿದೆ ಎಂದು ವಿಜಯಕುಮಾರಿ ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡೂ ಕಡೆಯವರ ದೂರುಗಳ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget
Continue Reading

ಸ್ಥಳೀಯ

Arrested-ಮಣಿಪಾಲದಲ್ಲಿ ವೇಶ್ಯಾವಾಟಿಕೆ ದಂಧೆ: ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳದ ಇಬ್ಬರು ಪಿಂಪ್‌ಗಳ ಬಂಧನ

Published

on



Ad Widget

Ad Widget

Ad Widget

Ad Widget

ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಕರೆತಂದು ಮಣಿಪಾಲದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಠಾಣೆಯ ಪೊಲೀಸರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬಂಧಿಸಿದ್ದಾರೆ.

Ad Widget

Ad Widget

Ad Widget

ಮಣಿಪಾಲ: ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಕರೆತಂದು ಮಣಿಪಾಲದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಠಾಣೆಯ ಪೊಲೀಸರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬಂಧಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಬಂಧಿತರನ್ನು ಪಶ್ಚಿಮ ಬಂಗಾಳದ ಡಮ್‌ಡಮ್‌ನ ಕಾಳಿಧಾಮ್ ಕಾಲೋನಿ ನಿವಾಸಿ ಎಸ್ತಾರ್ ಶಾಹ ಅಲಿಯಾಸ್ ಕಾಜಲ್ (40) ಹಾಗೂ ಅರಬಿಂದಾ ಸರಾನಿ, ಕಾಳಿಧಾಮ್ ಕಾಲೋನಿ ನಿವಾಸಿ ಸಂಜಯ (49) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2025ರಲ್ಲಿ ಆರೋಪಿಗಳು ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಮಣಿಪಾಲಕ್ಕೆ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಂದು ದಾಳಿ ನಡೆಸಿ ಮಹಿಳೆಯರನ್ನು ರಕ್ಷಿಸಿದ್ದರು. ಈ ವೇಳೆ ಇಬ್ಬರು ಪಿಂಪ್‌ಗಳು ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದರು.



Ad Widget

ಆರೋಪಿಗಳ ಬಗ್ಗೆ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತಂಡವು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯ ನೇತಾಜಿ ನಗರಕ್ಕೆ ತೆರಳಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Ad Widget

Ad Widget

ಬಂಧಿತ ಆರೋಪಿಗಳನ್ನು ಉಡುಪಿಯ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ₹1.15 ಕೋಟಿ ದರೋಡೆಗೆ ಸಂಚು ಪ್ರಕರಣ: ಪೊಲೀಸ್ ಕಾನ್‌ಸ್ಟೇಬಲ್ ಅರೆಸ್ಟ್-ಕೆಲಸದಿಂದ ಅಮಾನತು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget

ಮಂಗಳೂರು, ನ.12: ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಡುಪಿ ಜಿಲ್ಲೆಯ ಕಾಪು ನಿವಾಸಿ ಅಝೀಝ್, ಹಳಿಯಾಳದ ನಸ್ರುಲ್ಲಾಖಾನ್, ಕಾರವಾರದ ನಿತ್ಯಾನಂದ ಹಾಗೂ ಖಾಲಿದ್ ಎಂಬವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಗಣೇಶ ಕೋಳಂಕರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.



Ad Widget

ದಾವಣಗೆರೆಯಿಂದ ಮಂಗಳೂರಿಗೆ ಸತ್ಯನಾರಾಯಣ ಎಂಬವರು ಬಸ್ಸಿನಲ್ಲಿ ₹1.15 ಕೋಟಿ ಹಣ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದ ಕಾನ್‌ಸ್ಟೇಬಲ್ ಶ್ರೀಶೈಲ್, ಯುವಕರ ತಂಡವೊಂದನ್ನು ಕಟ್ಟಿಕೊಂಡು ಪೊಲೀಸರ ಸೋಗಿನಲ್ಲಿ ತೆರಳಿ ಹಣ ದೋಚಲು ಸಂಚು ರೂಪಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಸತ್ಯನಾರಾಯಣ ಅವರು ದೂರು ನೀಡಿದ್ದು, ಉರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

Ad Widget

Ad Widget

ಕಾರವಾರ ತಾಲೂಕಿನ ಕಿನ್ನರ ಗ್ರಾಮದ ಗಣೇಶ ಕೋಳಂಕರ್ ಎಂಬ ಯುವಕನನ್ನು ಪೊಲೀಸ್ ಕಾನ್‌ಸ್ಟೇಬಲ್ ಶ್ರೀಶೈಲ್ ಈ ಕೃತ್ಯಕ್ಕೆ ಬಳಸಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಪ್ರಮುಖ ಆರೋಪಿಯ ಪತ್ತೆಗಾಗಿ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಾನ್‌ಸ್ಟೇಬಲ್ ಅಮಾನತು: ಹಣ ದರೋಡೆ ಹಾಗೂ ಅಪಹರಣ ಪ್ರಕರಣದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆತನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!