Connect with us

ಕ್ರೈಂ

Seven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ

Published

on



Ad Widget

Ad Widget

Ad Widget

Ad Widget

ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

Ad Widget

Ad Widget

Ad Widget

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

Ad Widget

Ad Widget alt="Ad Widget"/>

Ad Widget

ಪತ್ನಿ ಹಾಗೂ ಆಕೆಯ ತವರು ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ಹಿಂಸೆಯನ್ನು ಸಹಿಸಲಾಗದೆ ಎಲ್ಲರನ್ನೂ ಮನೆಗೆ ಕರೆಸಿ ಹತ್ಯೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಆದರೆ, ಕೌಟುಂಬಿಕ ಕಲಹವೇ ಹತ್ಯೆಗಳಿಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆ ಉದ್ದೇಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Ad Widget

Ad Widget <> Ad Widget

ಮೂರ್ನಾಲ್ಕು ಕೋಟಿ ಆಸ್ತಿಗಾಗಿ ಹತ್ಯೆ ಸಂಚು?
ಶ್ರೀರಾಂಪುರದಲ್ಲಿ ಅಜ್ಜಿಗೆ ಸೇರಿದ ಸುಮಾರು ₹3ರಿಂದ ₹4 ಕೋಟಿ ಮೌಲ್ಯದ ಆಸ್ತಿ ಇದೆ. ಈ ಆಸ್ತಿಯಲ್ಲಿ ಅತ್ತೆ, ಮಾವ ಸೇರಿದಂತೆ ಕುಟುಂಬದ ಇತರ ಸದಸ್ಯರಿಗೂ ಪಾಲು ನೀಡಬೇಕಾಗುತ್ತದೆ. ಎಲ್ಲರನ್ನೂ ಹತ್ಯೆ ಮಾಡಿದರೆ ಆಸ್ತಿಯನ್ನು ಯಾರೊಂದಿಗೂ ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಆರೋಪಿ ಇಂದುಶೇಖರ್ ತನ್ನ ಮಗಳಿಗೆ ಆಮಿಷವೊಡ್ಡಿ ಸಂಚಿನಲ್ಲಿ ಭಾಗಿಯಾಗಿಸಿದ್ದ ಎನ್ನಲಾಗಿದೆ.



Ad Widget

ತಂದೆಯ ಮಾತು ನಂಬಿದ ಪಿಯುಸಿ ವಿದ್ಯಾರ್ಥಿನಿ ಹತ್ಯೆ ಕೃತ್ಯದಲ್ಲಿ ಸಹಕರಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ವಿಚಾರಣೆ ವೇಳೆ, ‘ತಂದೆ ಹೇಳಿದ ಕೆಲಸವನ್ನಷ್ಟೇ ಮಾಡುತ್ತಿದ್ದೆ. ಬೇರೆ ಏನೂ ಗೊತ್ತಿಲ್ಲ’ ಎಂದು ಆಕೆ ಹೇಳಿದ್ದಾಳೆ ಎನ್ನಲಾಗಿದೆ.

Ad Widget

Ad Widget

ವಿಚಾರಣೆಗೆ ತಂದೆ ಮತ್ತು ಮಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಪ್ರಾಪ್ತ ವಯಸ್ಸಿನ ಕಾರಣ ಕಾನೂನು ರಕ್ಷಣೆ?
ಹತ್ಯೆ ನಡೆದ ಸಂದರ್ಭದಲ್ಲಿ ಆರೋಪಿಯ ಮಗಳಿಗೆ 17 ವರ್ಷ ವಯಸ್ಸಾಗಿತ್ತು. ನವೆಂಬರ್ 8ರಂದು ಆಕೆ 18 ವರ್ಷಕ್ಕೆ ಕಾಲಿಟ್ಟಿದ್ದಾಳೆ. ಕೃತ್ಯ ನಡೆದ ಸಮಯದಲ್ಲಿ ಅಪ್ರಾಪ್ತೆಯಾಗಿದ್ದ ಕಾರಣ ಬಾಲ ನ್ಯಾಯ ಕಾಯ್ದೆಯಡಿ ಕಾನೂನು ರಕ್ಷಣೆ ದೊರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದ್ದಾರೆ.

ಮೃತದೇಹ ಸಾಗಣೆ, ಸಾಕ್ಷ್ಯ ನಾಶಕ್ಕೂ ಸಂಚು!
ಏಳು ಮಂದಿಯ ಹತ್ಯೆಯ ಬಳಿಕ ಮೃತದೇಹಗಳನ್ನು ಸಾಗಿಸುವುದು ಹಾಗೂ ಸಾಕ್ಷ್ಯಗಳನ್ನು ನಾಶಪಡಿಸುವುದಕ್ಕೂ ಆರೋಪಿ ಮೊದಲೇ ಯೋಜನೆ ರೂಪಿಸಿದ್ದ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಈಗಾಗಲೇ ಮೃತರ ಅಂತ್ಯಕ್ರಿಯೆ ನೆರವೇರಿಸಿರುವ ಕುಟುಂಬದವರು ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಏಳು ಮಂದಿಯ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹತ್ಯೆಗೆ ಬಳಸಿದ ವಿಧಾನ ಸೇರಿದಂತೆ ಹಲವು ಮಹತ್ವದ ಸಂಗತಿಗಳು ತಿಳಿದುಬರಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಸ್ತಿ ವಿವಾದವೂ ಹತ್ಯೆಗೆ ಪ್ರಮುಖ ಕಾರಣ: ಪೊಲೀಸ್ ಆಯುಕ್ತ
ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತನಾಡಿ, ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿಯ ವೈಯಕ್ತಿಕ ದ್ವೇಷದ ಜತೆಗೆ ಹಣಕಾಸಿನ ವಿಚಾರವೂ ಪ್ರಮುಖ ಕಾರಣವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕ ತನಿಖಾಧಿಕಾರಿಯೂ ಆಗಿರುವ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Ad Widget
Click to comment

Leave a Reply

ಕ್ರೈಂ

Dharmasthala Human Skull Found: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ಬುರುಡೆ ಪತ್ತೆ : ಪೊಲೀಸರಿಂದ ತನಿಖೆ ಆರಂಭ

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಪತ್ತೆಯಾಗಿರುವ ಘಟನೆ ನ.12ರಂದು ಬೆಳಕಿಗೆ ಬಂದಿದೆ.

Ad Widget

Ad Widget

Ad Widget

ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ನ.12ರಂದು ಸಂಜೆ ವೇಳೆ ನೇತ್ರಾವತಿ ಸ್ನಾನಘಟ್ಟದ ಬಳಿ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ವಿದ್ಯುತ್ ಕಂಬಗಳಿಗೆ ಅಡ್ಡವಾಗಿದ್ದ ಮರದ ರೆಂಬೆಗಳನ್ನು ಕತ್ತರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಕಂಡುಬಂದಿದೆ ಎನ್ನಲಾಗಿದೆ.

Ad Widget

Ad Widget alt="Ad Widget"/>

Ad Widget

ಈ ಬಗ್ಗೆ ಅವರು ಅದೇ ದಿನ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಅರ್ಜಿ ಸಲ್ಲಿಸಿದ್ದಾರೆ. ದೂರನ್ನು ಅರ್ಜಿ ಸಂಖ್ಯೆ 422/2026ರ ಅಡಿಯಲ್ಲಿ ಸ್ವೀಕರಿಸಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದು, ಪರಿಶೀಲನೆ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Ad Widget

Ad Widget <> Ad Widget

Ad Widget
Continue Reading

ಕ್ರೈಂ

Murder-ಮಕ್ಕಳಾಗದ ವಿಚಾರಕ್ಕೆ ಹಿಂಸೆ ನೀಡುತ್ತಿದ್ದ ಪತಿಯನ್ನು ಚಾಕುವಿನಿಂದ ಇರಿದು ಕೊಂದ ಪತ್ನಿ..!

Published

on



Ad Widget

Ad Widget

Ad Widget

Ad Widget

ಮಕ್ಕಳಾಗಲಿಲ್ಲ ಎಂಬ ವಿಚಾರವಾಗಿ ಪತ್ನಿಯನ್ನು ನಿತ್ಯ ನಿಂದಿಸಿ, ಮದ್ಯದ ಅಮಲಿನಲ್ಲಿ ಹಿಂಸೆ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಗರದ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ಬುಧವಾರ ರಾತ್ರಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

ಬೆಂಗಳೂರು: ಮಕ್ಕಳಾಗಲಿಲ್ಲ ಎಂಬ ವಿಚಾರವಾಗಿ ಪತ್ನಿಯನ್ನು ನಿತ್ಯ ನಿಂದಿಸಿ, ಮದ್ಯದ ಅಮಲಿನಲ್ಲಿ ಹಿಂಸೆ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಗರದ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ಬುಧವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಹತ್ಯೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದೆ. ಬ್ಯಾಂಕ್ ಉದ್ಯೋಗಿಯಾಗಿದ್ದ ರಾಜಶೇಖರ್ ಅವರ ಪತ್ನಿ ಮಾಲಾಶ್ರೀ (35) ಹತ್ಯೆ ಆರೋಪಿಯಾಗಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

Ad Widget

Ad Widget <> Ad Widget

ದಂಪತಿಗೆ ಹಲವು ವರ್ಷಗಳ ದಾಂಪತ್ಯ ಜೀವನದ ಬಳಿಕವೂ ಮಕ್ಕಳಾಗಿರಲಿಲ್ಲ. ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಹಗಲಿನಲ್ಲಿ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ರಾಜಶೇಖರ್, ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದು ಮಕ್ಕಳಾಗದ ವಿಚಾರವಾಗಿ ನಿಂದಿಸಿ ಹಿಂಸೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.



Ad Widget

ಇದೇ ವಿಚಾರವಾಗಿ ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಮಾಲಾಶ್ರೀ ಚಾಕುವಿನಿಂದ ಪತಿಗೆ ಇರಿದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

Ad Widget

Ad Widget

ಘಟನೆಗೆ ಸಂಬಂಧಿಸಿದಂತೆ ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಕ್ರೈಂ

Rajajinagar-ರಾಜಾಜಿನಗರದ 7 ಕೊಲೆ ಪ್ರಕರಣ: ಆರೋಪಿ ಕೃತ್ಯದ ಆಡಿಯೊ ಪೊಲೀಸರ ಕೈಗೆ

Published

on



Ad Widget

Ad Widget

Ad Widget

Ad Widget

ರಾಜಾಜಿನಗರದ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಇಂದುಶೇಖರ್‌ನ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದೆ. ಹತ್ಯೆಗೀಡಾದ ಬಾಮೈದ ಶಂಕರ್ ಮತ್ತು ನಳಿನಿ ದಂಪತಿಯ ಪುತ್ರನಿಂದಲೇ ಸಂಬಂಧಿಕರಿಗೆ ಕರೆ ಮಾಡಿಸಿ, ‘ಮೂರು ತಿಂಗಳು ವಾಪಸ್ ಬರುವುದಿಲ್ಲ’ ಎಂದು ಹೇಳಿಸಿದ್ದ ಆಡಿಯೊ ಸಂಭಾಷಣೆ ಪೊಲೀಸರ ಕೈಗೆ ಸಿಕ್ಕಿದೆ.

Ad Widget

Ad Widget

Ad Widget

ಬೆಂಗಳೂರು: ರಾಜಾಜಿನಗರದ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಇಂದುಶೇಖರ್‌ನ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದೆ. ಹತ್ಯೆಗೀಡಾದ ಬಾಮೈದ ಶಂಕರ್ ಮತ್ತು ನಳಿನಿ ದಂಪತಿಯ ಪುತ್ರನಿಂದಲೇ ಸಂಬಂಧಿಕರಿಗೆ ಕರೆ ಮಾಡಿಸಿ, ‘ಮೂರು ತಿಂಗಳು ವಾಪಸ್ ಬರುವುದಿಲ್ಲ’ ಎಂದು ಹೇಳಿಸಿದ್ದ ಆಡಿಯೊ ಸಂಭಾಷಣೆ ಪೊಲೀಸರ ಕೈಗೆ ಸಿಕ್ಕಿದೆ.

Ad Widget

Ad Widget alt="Ad Widget"/>

Ad Widget

ಶಂಕರ್ ಮತ್ತು ನಳಿನಿ ದಂಪತಿಯನ್ನು ಕೊಲೆ ಮಾಡಿ, ಅವರ ಮೃತದೇಹಗಳನ್ನು ಶಿರಾಡಿ ಘಾಟ್‌ನ ಅರಣ್ಯ ಪ್ರದೇಶಕ್ಕೆ ಎಸೆದಿದ್ದ ಇಂದುಶೇಖರ್, ದಂಪತಿಯ ಪುತ್ರನನ್ನು ತನ್ನೊಂದಿಗೆ ಕರೆದೊಯ್ದಿದ್ದ. ಈ ವೇಳೆ ಉತ್ತರ ಭಾರತದ ತೀರ್ಥಯಾತ್ರೆಗೆ ಬಂದಿರುವುದಾಗಿ ಸಂಬಂಧಿಕರಿಗೆ ಹೇಳುವಂತೆ ಬಾಲಕನಿಗೆ ಸೂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಆಡಿಯೊ ಸಂಭಾಷಣೆಯಲ್ಲಿ ಏನಿದೆ?
ನಳಿನಿ ಅವರ ಸಹೋದರಿ ಬಾಲಕನೊಂದಿಗೆ ಮಾತನಾಡುತ್ತಾ, ‘ಒಂದೇ ಒಂದು ಬಾರಿ ನಿಮ್ಮ ಅಮ್ಮನೊಂದಿಗೆ ಮಾತನಾಡುತ್ತೇನೆ. ನೀ ಎಲ್ಲಿದ್ದೀಯ ಮಗನೇ?’ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಬಾಲಕ, ‘ಆಫೀಸರ್ ಎಲ್ಲ ಇರುತ್ತಾರೆ. ಫೋನ್‌ನಲ್ಲಿ ಮಾತನಾಡಲು ಬಿಡುವುದಿಲ್ಲ. ಏನೇ ಇದ್ದರೂ ಮೆಸೇಜ್ ಮಾಡಿ ದೊಡ್ಡಮ್ಮ’ ಎಂದು ಹೇಳಿದ್ದಾನೆ.



Ad Widget

ಬಳಿಕ ‘ಬಸ್‌ನಿಂದ ಆಚೆ ಇದ್ದೇನೆ. ನೀವು ಫೋನ್ ಮಾಡುತ್ತಿದ್ದೀರಲ್ಲ, ಅದಕ್ಕೆ ಮಾತನಾಡಲು ಕಳುಹಿಸಿದ್ದಾರೆ’ ಎಂದು ತಿಳಿಸಿದ್ದಾನೆ. ಸಂಬಂಧಿಕರು ಅಮ್ಮನೊಂದಿಗೆ ಮಾತನಾಡಿಸುವಂತೆ ಕೇಳಿದಾಗಲೂ, ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದಾಗಲೂ ಬಾಲಕ ನಿರ್ದಿಷ್ಟ ಸ್ಥಳದ ಮಾಹಿತಿ ನೀಡದೆ, ‘ಯಾವುದೋ ಊರಲ್ಲಿದ್ದೇವೆ’ ಎಂದು ಉತ್ತರಿಸಿದ್ದಾನೆ.

Ad Widget

Ad Widget

ಶವ ಸಾಗಿಸಲು ಬೆಡ್‌ಶೀಟ್ ಖರೀದಿ!
ಮೃತದೇಹಗಳನ್ನು ಸಾಗಿಸಲು ಆರೋಪಿ ಒಂದು ಬಂಡಲ್ ಬೆಡ್‌ಶೀಟ್ ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿ ಸುನಿತಾ ಮತ್ತು ಅತ್ತೆ ರೂಪಾವತಿ ಅವರ ಮೃತದೇಹಗಳನ್ನು ಸುತ್ತಲು ನಾಲ್ಕು ಬೆಡ್‌ಶೀಟ್‌ಗಳನ್ನು ಬಳಸಿದ್ದಾನೆ. ಶಿವಕುಮಾರ್ ಹಾಗೂ ಶಂಕರ್ ದಂಪತಿಯನ್ನು ಅವರ ಬಟ್ಟೆಗಳಿಂದಲೇ ಕೈ ಮತ್ತು ಮೊಣಕಾಲುಗಳನ್ನು ಕಟ್ಟಿ, ಬಳಿಕ ಬೆಡ್‌ಶೀಟ್ ಸುತ್ತಿ ಮೃತದೇಹಗಳನ್ನು ಎಸೆದಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ತ್ವರಿತ ನ್ಯಾಯಾಲಯ ಸ್ಥಾಪನೆಗೆ ಚಿಂತನೆ

ಏಳು ಮಂದಿಯ ಹತ್ಯೆ ಪ್ರಕರಣದ ಹಿಂದೆ ವೈಯಕ್ತಿಕ ಕಾರಣಗಳ ಜತೆಗೆ ಆರ್ಥಿಕ ಕಾರಣಗಳೂ ಇರುವ ಸುಳಿವು ಸಿಕ್ಕಿದೆ. ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸುವುದು ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಲ್ಲ ಮೃತದೇಹಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಲಾಗಿದೆ. ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಬಾಬಾ ಸಾಹೇಬ್ ನೇಮಗೌಡ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಕೃತ್ಯದ ಹಿಂದಿರುವ ಉದ್ದೇಶಗಳ ಕುರಿತು ನಿರ್ಣಾಯಕ ಸುಳಿವುಗಳು ಲಭ್ಯವಾಗಿವೆ. ಆದಷ್ಟು ಬೇಗ ಸಾಕ್ಷ್ಯಗಳು ಹಾಗೂ ಕೃತ್ಯಕ್ಕೆ ಬಳಸಿದ ಪರಿಕರಗಳನ್ನು ಒಳಗೊಂಡಂತೆ ಚಾರ್ಜ್‌ಶೀಟ್ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!