ಮಂಗಳೂರು
Ashwini Vaishnaw-ಕೊಂಕಣ ರೈಲ್ವೆ ವಿಲೀನಕ್ಕೆ 4 ರಾಜ್ಯಗಳ ಸಮ್ಮತಿ ಅನಿವಾರ್ಯ; ಪಶ್ಚಿಮ ಘಟ್ಟದ ರೈಲು ಮಾರ್ಗಕ್ಕೆ ಹೊಸ ರೂಪ-ಸಚಿವ ಅಶ್ವಿನಿ ವೈಷ್ಣವ್
ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ಪ್ರಮುಖ ರೈಲ್ವೆ ಯೋಜನೆಗಳ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡರು.
ಮಂಗಳೂರು: ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ಪ್ರಮುಖ ರೈಲ್ವೆ ಯೋಜನೆಗಳ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡರು.
ಕೊಂಕಣ ರೈಲ್ವೆ ವಿಲೀನದ ತಾಂತ್ರಿಕ ಅಡಚಣೆಗಳೇನು?
ವಿಲೀನ ಪ್ರಕ್ರಿಯೆ ಕುರಿತು ವಿವರಿಸಿದ ಸಚಿವರು, “ಕೊಂಕಣ ರೈಲ್ವೆಯು ಕೇವಲ ಕೇಂದ್ರ ಸರ್ಕಾರದ ಸಂಸ್ಥೆಯಲ್ಲ; ಇದರಲ್ಲಿ ಕೇಂದ್ರದ ಜೊತೆಗೆ ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಗಳ ಷೇರು ಪಾಲುದಾರಿಕೆಯಿದೆ. ನಿಯಮದ ಪ್ರಕಾರ, ಈ ಎಲ್ಲಾ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ವಿಲೀನಕ್ಕೆ ಸಮ್ಮತಿ ಸೂಚಿಸಿದರೆ ಮಾತ್ರ ಮುಂದಿನ ಹೆಜ್ಜೆ ಇಡಲು ಸಾಧ್ಯ. ಈಗಾಗಲೇ ಎಲ್ಲಾ ರಾಜ್ಯಗಳಿಗೂ ಈ ಬಗ್ಗೆ ಮನವಿ ಸಲ್ಲಿಸಲಾಗಿದ್ದು, ಅವರ ಒಪ್ಪಿಗೆ ದೊರೆತ ತಕ್ಷಣ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ” ಎಂದು ಸ್ಪಷ್ಟಪಡಿಸಿದರು.
ಘಾಟ್ ಮಾರ್ಗದ ದ್ವಿಪಥಕ್ಕೆ (Doubling) ವಿನೂತನ ವಿನ್ಯಾಸ:
ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗವನ್ನು ದ್ವಿಪಥಗೊಳಿಸುವ ಯೋಜನೆಗೆ ಸರ್ಕಾರ ಸಂಪೂರ್ಣ ಆದ್ಯತೆ ನೀಡಿದೆ ಎಂದ ಸಚಿವರು, ಈ ಕುರಿತ ತಾಂತ್ರಿಕ ಅಂಶಗಳನ್ನು ಬಿಚ್ಚಿಟ್ಟರು:
- ಡಿಪಿಆರ್ ಸಿದ್ಧತೆ ಆರಂಭ: ಈ ಮಾರ್ಗದ ಅಂತಿಮ ಸ್ಥಳ ಸಮೀಕ್ಷೆ (FLS) ಪೂರ್ಣಗೊಂಡಿದ್ದು, ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ.
- ಇಳಿಜಾರು ತಗ್ಗಿಸಲು ಪ್ಲಾನ್: ಪಶ್ಚಿಮ ಘಟ್ಟದ ಕಡಿದಾದ ಪ್ರದೇಶದಲ್ಲಿ ಹಳಿ ನಿರ್ಮಿಸುವುದು ಸವಾಲಿನ ಕೆಲಸ. ಮೊದಲ ಹಳಿಯಲ್ಲಿರುವಂತೆ ಅತಿಯಾದ ಏರು-ಇಳಿಜಾರು (Steep gradient) ಸಮಸ್ಯೆ ಎದುರಾಗದಂತೆ ತಡೆಯಲು, ಎರಡನೇ ಹಳಿಯನ್ನು ಸಾಧಾರಣ ಇಳಿಜಾರು (Moderate gradient) ಹೊಂದಿರುವಂತೆ ಹೊಸದಾಗಿ ವಿನ್ಯಾಸಗೊಳಿಸಲಾಗುತ್ತಿದೆ.
- ಕರಾವಳಿ-ರಾಜಧಾನಿ ನಡುವೆ ವಂದೇ ಭಾರತ್ ಸಂಭ್ರಮ:
“ಶುಕ್ರವಾರದಿಂದ (ನಾಳೆ) ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಕರಾವಳಿ ಕರ್ನಾಟಕವನ್ನು ರಾಜಧಾನಿಯೊಂದಿಗೆ ಬೆಸೆಯುವ ಈ ಯೋಜನೆಗೆ ಘಾಟ್ ಪ್ರದೇಶದ ವಿದ್ಯುದ್ದೀಕರಣ ಹಾಗೂ ರೈಲಿನ ತಾಂತ್ರಿಕ ಮಾರ್ಪಾಡುಗಳಂತಹ ದೊಡ್ಡ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿನಿಂತಿದ್ದೇವೆ. ಇದೇ ವೇಳೆ ಉಡುಪಿಯಲ್ಲಿ ಎಫ್‌ಎಂ ರೇಡಿಯೋ ಟ್ರಾನ್ಸ್‌ಮಿಟರ್ ಕೂಡ ಉದ್ಘಾಟನೆಯಾಗಲಿದೆ” ಎಂದು ಹೇಳಿದರು. - ಕಾಂಗ್ರೆಸ್ ಅವಧಿಯ ಬಜೆಟ್ ಎಷ್ಟಿತ್ತು? ಎಂ.ಬಿ. ಪಾಟೀಲ್‌ಗೆ ಸಚಿವರ ಪ್ರಶ್ನೆ:
ರಾಜ್ಯಕ್ಕೆ ಪ್ರಮುಖ ರೈಲ್ವೆ ಯೋಜನೆಗಳನ್ನು ನೀಡುವಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿದೆ ಎಂಬ ಸಚಿವ ಎಂ.ಬಿ. ಪಾಟೀಲ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ವೈಷ್ಣವ್, “ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಬಂದ ಮೇಲೆಯೇ ಕರ್ನಾಟಕದ ರೈಲ್ವೆ ಕ್ಷೇತ್ರಕ್ಕೆ ನ್ಯಾಯ ಸಿಕ್ಕಿದೆ. ಇಂದು ರಾಜ್ಯದಲ್ಲಿ ₹75,000 ಕೋಟಿ ಮೊತ್ತದ ಬೃಹತ್ ಯೋಜನೆಗಳು ನಡೆಯುತ್ತಿವೆ. ಬುಲೆಟ್ ರೈಲು, ವಂದೇ ಭಾರತ್, ವಂದೇ ಭಾರತ್ ಸ್ಲೀಪರ್ ಹಾಗೂ ನಿಲ್ದಾಣಗಳ ಆಧುನೀಕರಣದಂತಹ ಕೆಲಸಗಳು ಹಿಂದೆಂದೂ ನಡೆದಿರಲಿಲ್ಲ. ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಕರ್ನಾಟಕಕ್ಕೆ ಎಷ್ಟು ಅನುದಾನ ಸಿಕ್ಕಿತ್ತು ಎಂಬುದನ್ನು ಎಂ.ಬಿ. ಪಾಟೀಲ್ ಅವರೇ ಉತ್ತರಿಸಲಿ” ಎಂದು ಸವಾಲು ಹಾಕಿದರು.
ಅಪರಾಧ
Mangalore-ಮಂಗಳೂರು: ₹1.15 ಕೋಟಿ ದರೋಡೆಗೆ ಸಂಚು ಪ್ರಕರಣ: ಪೊಲೀಸ್ ಕಾನ್‌ಸ್ಟೇಬಲ್ ಅರೆಸ್ಟ್-ಕೆಲಸದಿಂದ ಅಮಾನತು
ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು, ನ.12: ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಡುಪಿ ಜಿಲ್ಲೆಯ ಕಾಪು ನಿವಾಸಿ ಅಝೀಝ್, ಹಳಿಯಾಳದ ನಸ್ರುಲ್ಲಾಖಾನ್, ಕಾರವಾರದ ನಿತ್ಯಾನಂದ ಹಾಗೂ ಖಾಲಿದ್ ಎಂಬವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಗಣೇಶ ಕೋಳಂಕರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ದಾವಣಗೆರೆಯಿಂದ ಮಂಗಳೂರಿಗೆ ಸತ್ಯನಾರಾಯಣ ಎಂಬವರು ಬಸ್ಸಿನಲ್ಲಿ ₹1.15 ಕೋಟಿ ಹಣ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದ ಕಾನ್‌ಸ್ಟೇಬಲ್ ಶ್ರೀಶೈಲ್, ಯುವಕರ ತಂಡವೊಂದನ್ನು ಕಟ್ಟಿಕೊಂಡು ಪೊಲೀಸರ ಸೋಗಿನಲ್ಲಿ ತೆರಳಿ ಹಣ ದೋಚಲು ಸಂಚು ರೂಪಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಸತ್ಯನಾರಾಯಣ ಅವರು ದೂರು ನೀಡಿದ್ದು, ಉರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ಕಾರವಾರ ತಾಲೂಕಿನ ಕಿನ್ನರ ಗ್ರಾಮದ ಗಣೇಶ ಕೋಳಂಕರ್ ಎಂಬ ಯುವಕನನ್ನು ಪೊಲೀಸ್ ಕಾನ್‌ಸ್ಟೇಬಲ್ ಶ್ರೀಶೈಲ್ ಈ ಕೃತ್ಯಕ್ಕೆ ಬಳಸಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಪ್ರಮುಖ ಆರೋಪಿಯ ಪತ್ತೆಗಾಗಿ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಾನ್‌ಸ್ಟೇಬಲ್ ಅಮಾನತು: ಹಣ ದರೋಡೆ ಹಾಗೂ ಅಪಹರಣ ಪ್ರಕರಣದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆತನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಮಂಗಳೂರು
Dr. Mahabal Shetty-ಸೌಜನ್ಯ ಕೇಸ್: 4 ಗಂಟೆಗಳ ವಿಚಾರಣೆ ಎದುರಿಸಿದ ಡಾ. ಮಹಾಬಲ ಶೆಟ್ಟಿ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ವೈದ್ಯಕೀಯ ಪರೀಕ್ಷೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ವೈದ್ಯಕೀಯ ಪರೀಕ್ಷೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಸೌಜನ್ಯ ಪ್ರಕರಣದಲ್ಲಿ ಈ ಹಿಂದೆ ಆರೋಪಿಯಾಗಿದ್ದ ಸಂತೋಷ್ ರಾವ್ ಅವರ ವೈದ್ಯಕೀಯ ಪರೀಕ್ಷೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರು ವಿಚಾರಣೆಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ವಿಚಾರಣೆ ಪೂರ್ಣಗೊಂಡ ಬಳಿಕ ಅವರು ಅಲ್ಲಿಂದ ವಾಪಸ್ಸಾಗಿದ್ದಾರೆ.
ಇನ್ನು, ಎಸ್‌ಐಟಿ ವಿಚಾರಣೆಯಲ್ಲಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಲಾಯಿತು ಎಂಬ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ಡಾ. ಮಹಾಬಲ ಶೆಟ್ಟಿ ನಿರಾಕರಿಸಿದ್ದಾರೆ.
ಮಂಗಳೂರು
Dr. Mahabal Shetty-Big Breaking: ಸೌಜನ್ಯ ಎಸ್ಐಟಿ : ಸಂತೋಷ್ ರಾವ್ ನನ್ನು ಮೆಡಿಕಲ್ ಟೆಸ್ಟ್ ಮಾಡಿದ್ದ ಡಾ.ಮಹಾಬಲ ಶೆಟ್ಟಿ ವಿಚಾರಣೆ – ವಿಕ್ಟರಿ ಸಿಂಬಲ್ ತೋರಿಸಿದ ಪೋರೆನ್ಸಿಕ್ ತಜ್ಞ..!
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಹಲವು ಮಂದಿಯನ್ನು ವಿಚಾರಣೆಗೆ ಕರೆಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಜ್ಞ ಡಾ. ಮಹಾಬಲ ಶೆಟ್ಟಿ ಅವರು ಮಂಗಳೂರಿನಲ್ಲಿರುವ SIT ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಹಲವು ಮಂದಿಯನ್ನು ವಿಚಾರಣೆಗೆ ಕರೆಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಜ್ಞ ಡಾ. ಮಹಾಬಲ ಶೆಟ್ಟಿ ಅವರು ಮಂಗಳೂರಿನಲ್ಲಿರುವ SIT ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣದಲ್ಲಿ ಈ ಹಿಂದೆ ಆರೋಪಿಯಾಗಿದ್ದ ಸಂತೋಷ್ ರಾವ್ ಅವರ ವೈದ್ಯಕೀಯ ಪರೀಕ್ಷೆ ನಡೆಸಿದ್ದವರು ಡಾ. ಮಹಾಬಲ ಶೆಟ್ಟಿ. ಅಂದು ಸಂತೋಷ್ ರಾವ್ ಅವರ ದೇಹದಲ್ಲಿ 17 ಗಾಯಗಳಿದ್ದವು ಎಂದು ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ.
ಸಂತೋಷ್ ರಾವ್ ಅವರ ವೈದ್ಯಕೀಯ ತಪಾಸಣೆ, ಗಾಯಗಳ ವಿವರ ಹಾಗೂ ಅಂದು ನೀಡಿದ್ದ ವೈದ್ಯಕೀಯ ವರದಿಗೆ ಸಂಬಂಧಿಸಿದಂತೆ SIT ಅಧಿಕಾರಿಗಳು ಡಾ. ಮಹಾಬಲ ಶೆಟ್ಟಿ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸೌಜನ್ಯ ಪ್ರಕರಣದ ಮರುತನಿಖೆಯ ಭಾಗವಾಗಿ ಈ ಹಿಂದಿನ ತನಿಖೆ, ವೈದ್ಯಕೀಯ ದಾಖಲೆಗಳು ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ಹೇಳಿಕೆಗಳನ್ನು SIT ಪರಿಶೀಲಿಸುತ್ತಿದೆ.
-
ಬಿಗ್ ನ್ಯೂಸ್10 hours agoHigh Court-ಈಶ್ವರಮಂಗಲ: ಮೇನಾಲದ ಹೈಟೆಕ್ ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕ ಬಂದ್ಗೆ ಹೈಕೋರ್ಟ್ ಆದೇಶ..!
-
ಅಪರಾಧ12 hours agoMangalore-ಮಂಗಳೂರು: ₹1.15 ಕೋಟಿ ದರೋಡೆಗೆ ಸಂಚು ಪ್ರಕರಣ: ಪೊಲೀಸ್ ಕಾನ್‌ಸ್ಟೇಬಲ್ ಅರೆಸ್ಟ್-ಕೆಲಸದಿಂದ ಅಮಾನತು
-
ಸುಳ್ಯ12 hours agoAreca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
-
ಅಪರಾಧ11 hours agoArrested-ಬಡ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಜಾಲ ಪತ್ತೆ: 11 ಮಂದಿ ಅರೆಸ್ಟ್; ಅಕ್ಕಪಡೆಯ ಮಹಿಳಾ ಪೊಲೀಸರ ಸಾಹಸಕ್ಕೆ ಮೆಚ್ಚುಗೆ
-
ರಾಜಕೀಯ12 hours agoHariprasad-ಮತಾಂತರ ನಿಷೇಧ ಕಾಯ್ದೆ ರದ್ದು ಫಿಕ್ಸ್? ಹರಿಪ್ರಸಾದ್ ಬಿಗ್ ಸುಳಿವು..!
-
ಕ್ರೈಂ11 hours agoSeven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ
-
ನಿಧನ ವಾರ್ತೆ10 hours agoMelkar-ಮೆಲ್ಕಾರ್: ಸ್ವರಾಜ್ ಸ್ಟುಡಿಯೋ ಮಾಲೀಕರ ಪುತ್ರಿ ನಿಧನ
-
ಸ್ಥಳೀಯ11 hours agoArrested-ಮಣಿಪಾಲದಲ್ಲಿ ವೇಶ್ಯಾವಾಟಿಕೆ ದಂಧೆ: ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳದ ಇಬ್ಬರು ಪಿಂಪ್ಗಳ ಬಂಧನ















