ಕ್ರೈಂ
Murder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.
ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಅವರ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಆಯುಧಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಳೆಯ ದ್ವೇಷದ ಶಂಕೆ
ಚರಣ್ ಗೌಡ ಅವರ ಹತ್ಯೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಅವರಿಗೆ ಕೆಲವರೊಂದಿಗೆ ವೈಷಮ್ಯವಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.
ಕ್ರೈಂ
Seven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಪತ್ನಿ ಹಾಗೂ ಆಕೆಯ ತವರು ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ಹಿಂಸೆಯನ್ನು ಸಹಿಸಲಾಗದೆ ಎಲ್ಲರನ್ನೂ ಮನೆಗೆ ಕರೆಸಿ ಹತ್ಯೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಆದರೆ, ಕೌಟುಂಬಿಕ ಕಲಹವೇ ಹತ್ಯೆಗಳಿಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆ ಉದ್ದೇಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಮೂರ್ನಾಲ್ಕು ಕೋಟಿ ಆಸ್ತಿಗಾಗಿ ಹತ್ಯೆ ಸಂಚು?
ಶ್ರೀರಾಂಪುರದಲ್ಲಿ ಅಜ್ಜಿಗೆ ಸೇರಿದ ಸುಮಾರು ₹3ರಿಂದ ₹4 ಕೋಟಿ ಮೌಲ್ಯದ ಆಸ್ತಿ ಇದೆ. ಈ ಆಸ್ತಿಯಲ್ಲಿ ಅತ್ತೆ, ಮಾವ ಸೇರಿದಂತೆ ಕುಟುಂಬದ ಇತರ ಸದಸ್ಯರಿಗೂ ಪಾಲು ನೀಡಬೇಕಾಗುತ್ತದೆ. ಎಲ್ಲರನ್ನೂ ಹತ್ಯೆ ಮಾಡಿದರೆ ಆಸ್ತಿಯನ್ನು ಯಾರೊಂದಿಗೂ ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಆರೋಪಿ ಇಂದುಶೇಖರ್ ತನ್ನ ಮಗಳಿಗೆ ಆಮಿಷವೊಡ್ಡಿ ಸಂಚಿನಲ್ಲಿ ಭಾಗಿಯಾಗಿಸಿದ್ದ ಎನ್ನಲಾಗಿದೆ.
ತಂದೆಯ ಮಾತು ನಂಬಿದ ಪಿಯುಸಿ ವಿದ್ಯಾರ್ಥಿನಿ ಹತ್ಯೆ ಕೃತ್ಯದಲ್ಲಿ ಸಹಕರಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ವಿಚಾರಣೆ ವೇಳೆ, ‘ತಂದೆ ಹೇಳಿದ ಕೆಲಸವನ್ನಷ್ಟೇ ಮಾಡುತ್ತಿದ್ದೆ. ಬೇರೆ ಏನೂ ಗೊತ್ತಿಲ್ಲ’ ಎಂದು ಆಕೆ ಹೇಳಿದ್ದಾಳೆ ಎನ್ನಲಾಗಿದೆ.
ವಿಚಾರಣೆಗೆ ತಂದೆ ಮತ್ತು ಮಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅಪ್ರಾಪ್ತ ವಯಸ್ಸಿನ ಕಾರಣ ಕಾನೂನು ರಕ್ಷಣೆ?
ಹತ್ಯೆ ನಡೆದ ಸಂದರ್ಭದಲ್ಲಿ ಆರೋಪಿಯ ಮಗಳಿಗೆ 17 ವರ್ಷ ವಯಸ್ಸಾಗಿತ್ತು. ನವೆಂಬರ್ 8ರಂದು ಆಕೆ 18 ವರ್ಷಕ್ಕೆ ಕಾಲಿಟ್ಟಿದ್ದಾಳೆ. ಕೃತ್ಯ ನಡೆದ ಸಮಯದಲ್ಲಿ ಅಪ್ರಾಪ್ತೆಯಾಗಿದ್ದ ಕಾರಣ ಬಾಲ ನ್ಯಾಯ ಕಾಯ್ದೆಯಡಿ ಕಾನೂನು ರಕ್ಷಣೆ ದೊರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದ್ದಾರೆ.
ಮೃತದೇಹ ಸಾಗಣೆ, ಸಾಕ್ಷ್ಯ ನಾಶಕ್ಕೂ ಸಂಚು!
ಏಳು ಮಂದಿಯ ಹತ್ಯೆಯ ಬಳಿಕ ಮೃತದೇಹಗಳನ್ನು ಸಾಗಿಸುವುದು ಹಾಗೂ ಸಾಕ್ಷ್ಯಗಳನ್ನು ನಾಶಪಡಿಸುವುದಕ್ಕೂ ಆರೋಪಿ ಮೊದಲೇ ಯೋಜನೆ ರೂಪಿಸಿದ್ದ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈಗಾಗಲೇ ಮೃತರ ಅಂತ್ಯಕ್ರಿಯೆ ನೆರವೇರಿಸಿರುವ ಕುಟುಂಬದವರು ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಏಳು ಮಂದಿಯ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹತ್ಯೆಗೆ ಬಳಸಿದ ವಿಧಾನ ಸೇರಿದಂತೆ ಹಲವು ಮಹತ್ವದ ಸಂಗತಿಗಳು ತಿಳಿದುಬರಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಸ್ತಿ ವಿವಾದವೂ ಹತ್ಯೆಗೆ ಪ್ರಮುಖ ಕಾರಣ: ಪೊಲೀಸ್ ಆಯುಕ್ತ
ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತನಾಡಿ, ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿಯ ವೈಯಕ್ತಿಕ ದ್ವೇಷದ ಜತೆಗೆ ಹಣಕಾಸಿನ ವಿಚಾರವೂ ಪ್ರಮುಖ ಕಾರಣವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕ ತನಿಖಾಧಿಕಾರಿಯೂ ಆಗಿರುವ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕ್ರೈಂ
Dharmasthala Human Skull Found: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ಬುರುಡೆ ಪತ್ತೆ : ಪೊಲೀಸರಿಂದ ತನಿಖೆ ಆರಂಭ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಪತ್ತೆಯಾಗಿರುವ ಘಟನೆ ನ.12ರಂದು ಬೆಳಕಿಗೆ ಬಂದಿದೆ.
ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ನ.12ರಂದು ಸಂಜೆ ವೇಳೆ ನೇತ್ರಾವತಿ ಸ್ನಾನಘಟ್ಟದ ಬಳಿ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ವಿದ್ಯುತ್ ಕಂಬಗಳಿಗೆ ಅಡ್ಡವಾಗಿದ್ದ ಮರದ ರೆಂಬೆಗಳನ್ನು ಕತ್ತರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಕಂಡುಬಂದಿದೆ ಎನ್ನಲಾಗಿದೆ.
ಈ ಬಗ್ಗೆ ಅವರು ಅದೇ ದಿನ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಅರ್ಜಿ ಸಲ್ಲಿಸಿದ್ದಾರೆ. ದೂರನ್ನು ಅರ್ಜಿ ಸಂಖ್ಯೆ 422/2026ರ ಅಡಿಯಲ್ಲಿ ಸ್ವೀಕರಿಸಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದು, ಪರಿಶೀಲನೆ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕ್ರೈಂ
Murder-ಮಕ್ಕಳಾಗದ ವಿಚಾರಕ್ಕೆ ಹಿಂಸೆ ನೀಡುತ್ತಿದ್ದ ಪತಿಯನ್ನು ಚಾಕುವಿನಿಂದ ಇರಿದು ಕೊಂದ ಪತ್ನಿ..!
ಮಕ್ಕಳಾಗಲಿಲ್ಲ ಎಂಬ ವಿಚಾರವಾಗಿ ಪತ್ನಿಯನ್ನು ನಿತ್ಯ ನಿಂದಿಸಿ, ಮದ್ಯದ ಅಮಲಿನಲ್ಲಿ ಹಿಂಸೆ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಗರದ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ಬುಧವಾರ ರಾತ್ರಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದೆ.
ಬೆಂಗಳೂರು: ಮಕ್ಕಳಾಗಲಿಲ್ಲ ಎಂಬ ವಿಚಾರವಾಗಿ ಪತ್ನಿಯನ್ನು ನಿತ್ಯ ನಿಂದಿಸಿ, ಮದ್ಯದ ಅಮಲಿನಲ್ಲಿ ಹಿಂಸೆ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಗರದ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ಬುಧವಾರ ರಾತ್ರಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದೆ. ಬ್ಯಾಂಕ್ ಉದ್ಯೋಗಿಯಾಗಿದ್ದ ರಾಜಶೇಖರ್ ಅವರ ಪತ್ನಿ ಮಾಲಾಶ್ರೀ (35) ಹತ್ಯೆ ಆರೋಪಿಯಾಗಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ದಂಪತಿಗೆ ಹಲವು ವರ್ಷಗಳ ದಾಂಪತ್ಯ ಜೀವನದ ಬಳಿಕವೂ ಮಕ್ಕಳಾಗಿರಲಿಲ್ಲ. ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಹಗಲಿನಲ್ಲಿ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ರಾಜಶೇಖರ್, ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದು ಮಕ್ಕಳಾಗದ ವಿಚಾರವಾಗಿ ನಿಂದಿಸಿ ಹಿಂಸೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಇದೇ ವಿಚಾರವಾಗಿ ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಮಾಲಾಶ್ರೀ ಚಾಕುವಿನಿಂದ ಪತಿಗೆ ಇರಿದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್10 hours agoHigh Court-ಈಶ್ವರಮಂಗಲ: ಮೇನಾಲದ ಹೈಟೆಕ್ ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕ ಬಂದ್ಗೆ ಹೈಕೋರ್ಟ್ ಆದೇಶ..!
-
ಅಪರಾಧ12 hours agoMangalore-ಮಂಗಳೂರು: ₹1.15 ಕೋಟಿ ದರೋಡೆಗೆ ಸಂಚು ಪ್ರಕರಣ: ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್-ಕೆಲಸದಿಂದ ಅಮಾನತು
-
ಸುಳ್ಯ12 hours agoAreca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
-
ಅಪರಾಧ11 hours agoArrested-ಬಡ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಬೃಹತ್ ಜಾಲ ಪತ್ತೆ: 11 ಮಂದಿ ಅರೆಸ್ಟ್; ಅಕ್ಕಪಡೆಯ ಮಹಿಳಾ ಪೊಲೀಸರ ಸಾಹಸಕ್ಕೆ ಮೆಚ್ಚುಗೆ
-
ರಾಜಕೀಯ12 hours agoHariprasad-ಮತಾಂತರ ನಿಷೇಧ ಕಾಯ್ದೆ ರದ್ದು ಫಿಕ್ಸ್? ಹರಿಪ್ರಸಾದ್ ಬಿಗ್ ಸುಳಿವು..!
-
ನಿಧನ ವಾರ್ತೆ10 hours agoMelkar-ಮೆಲ್ಕಾರ್: ಸ್ವರಾಜ್ ಸ್ಟುಡಿಯೋ ಮಾಲೀಕರ ಪುತ್ರಿ ನಿಧನ
-
ಕ್ರೈಂ11 hours agoSeven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ
-
ಸ್ಥಳೀಯ11 hours agoArrested-ಮಣಿಪಾಲದಲ್ಲಿ ವೇಶ್ಯಾವಾಟಿಕೆ ದಂಧೆ: ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳದ ಇಬ್ಬರು ಪಿಂಪ್ಗಳ ಬಂಧನ















