Connect with us

Uncategorized

Vivekananda-ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ-ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಮಾಲೆಮಾರ್ ಎಸ್ಟೇಟ್‌ನಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

ಮಾಲೆಮಾರ್ ಎಸ್ಟೇಟ್‌ನಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಈ ತಂಡದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಮನ್ಮಿತಾ ಹಾಗೂ ವಿಜ್ಞಾನ ವಿಭಾಗದ ಆತ್ಮಿಕ ಭಾಗವಹಿಸಿರುತ್ತಾರೆ. ಇವರಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮನ್ಮಿತಾ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ತುಡರ್ ಪರ್ಬ ಆಚರಣೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ವಿದ್ಯಾರ್ಥಿ ಸಂಘ ಹಾಗೂ ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಆಯೋಜಿಸಿದ ತುಡರ್ ಪರ್ಬ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್. ಅಧ್ಯಕ್ಷೀಯ ನುಡಿಗಳನ್ನಾಡಿದರು.

Ad Widget

Ad Widget

Ad Widget

ಪುತ್ತೂರು: ಕತ್ತಲೆಯನ್ನು ಹೋಗಲಾಡಿಸಲು ಬೆಳಕು ಅತ್ಯಗತ್ಯ. ಅದೇ ರೀತಿ ನಮ್ಮ ಮನಸ್ಸಿನಲ್ಲಿರುವ ಅಜ್ಞಾನವನ್ನು ದೂರವಿರಿಸಲು ಜ್ಞಾನದಿಂದ ಮಾತ್ರ ಸಾಧ್ಯ. ದೀಪಾವಳಿ ಎಂದರೆ ಅಂಧಾಕಾರದಿಂದ ಬೆಳಕಿನತ್ತ ಸಾಗುವುದಾಗಿದ್ದು, ಪ್ರತಿಯೊಬ್ಬರ ಬದುಕಿನಲ್ಲೂ ಜ್ಞಾನವು ವಿಜೃಂಭಿಸಬೇಕೆಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್. ಹೇಳಿದರು.

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ವಿದ್ಯಾರ್ಥಿ ಸಂಘ ಹಾಗೂ ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಆಯೋಜಿಸಿದ ತುಡರ್ ಪರ್ಬ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದರು.

Ad Widget

Ad Widget <> Ad Widget

ವೇದಿಕೆಯಲ್ಲಿ ವಕೀಲ ಜಯರಾಮ ಎ, ಆಶಾ ಜಯರಾಮ, ಲಲಿತ ಕಲಾ ಸಂಘದ ಸಂಯೋಜಕಿ ಅನ್ನಪೂರ್ಣ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಾಮ್ ಉಪಸ್ಥಿತರಿದ್ದರು.



Ad Widget

ಕಾರ್ಯಕ್ರಮದಲ್ಲಿ ಸರಿಗಮಪ ಟೈಟಲ್ ವಿನ್ನರ್ ಅಶ್ಮಿತ್ ಎ.ಜೆ ಅವರನ್ನು ಸನ್ಮಾನಿಸಲಾಯಿತು ಮತ್ತು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿ ಬಂತು.

Ad Widget

Ad Widget

ಕಾರ್ಯಕ್ರಮವನ್ನು ಪ್ರಥಮ ಬಿ.ಎ.ಸ್ಸಿ ವಿಭಾಗದ ವಿದ್ಯಾರ್ಥಿ ಸಂಪತ್ ಸ್ವಾಗತಿಸಿ, ವಂದಿಸಿ, ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಮಾ ಭಟ್ ನಿರೂಪಿಸಿದರು.

Ad Widget
Continue Reading

ಶೈಕ್ಷಣಿಕ

ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿಗೆ ನೂತನ ಸಾರಥ್ಯ: ಅಧ್ಯಕ್ಷರಾಗಿ ವಿಷ್ಣುಪ್ರಸಾದ್ ಸಿ, ಸಂಚಾಲಕರಾಗಿ ರವಿನಾರಾಯಣ ಎಂ , ಕೋಶಾಧಿಕಾರಿಯಾಗಿ ಸಿಎ ದೀಪಕ್ ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಿಷ್ಣುಪ್ರಸಾದ್ ಸಿ, ಸಂಚಾಲಕರಾಗಿ ರವಿನಾರಾಯಣ ಎಂ ಹಾಗೂ ಕೋಶಾಧಿಕಾರಿಯಾಗಿ ಸಿಎ ದೀಪಕ್ ಕೆ ಜವಾಬ್ದಾರಿ ಸ್ವೀಕರಿಸಿದರು. ಡಾ. ಅಮೃತಾ ಕೃಷ್ಣ ಪ್ರಸಾದ್, ಪ್ರೀತಿ ಎಸ್. ಶೆಣೈ, ಶುಭದಾ ಜಿ. ಭಟ್, ಪಿ. ಗೋವಿಂದ ರಾಜ್, ರಾಧಾಕೃಷ್ಣ ಬಿ. ಹಾಗೂ ಶಾರದಾ ಶೆಟ್ಟಿ ಪಿ ಸಮಿತಿಯ ಇತರ ಸದಸ್ಯರು.

Ad Widget

Ad Widget

Ad Widget

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಅವರು ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಚಿ ಸಂತೋಷ್ ಬೋನಂತಾಯ, ನಿರ್ದೇಶಕರಾದ ರವೀಂದ್ರ ರೈ, ರಮೇಶ್ಚಂದ್ರ ನಾಯಕ್, ಸಂಘದ ಸಿಇಒ ಲಕ್ಷ್ಮೀಪ್ರಸಾದ್, ನಿಕಟಪೂರ್ವ ಆಡಳಿತ ಮಂಡಳಿ ಅಧ್ಯಕ್ಷೆ ವಾಸಂತಿ ಭಟ್, ಸಂಚಾಲಕ ಭರತ್ ಪೈ, ಸದಸ್ಯರಾದ ಶಂಕರಿ ಭಟ್, ಪ್ರೀತಿ ಶೆಣೈ, ಸಂಸ್ಥೆಯ ಪ್ರಾಂಶುಪಾಲೆ ಸಿಂಧು, ಉಪಪ್ರಾಂಶುಪಾಲೆ ಶ್ರೀದೇವಿ ಕೆ. ಹೆಗಡೆ, ಅಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದು ನೂತನ ಸಮಿತಿಗೆ ಶುಭ ಹಾರೈಸಿದರು.

Ad Widget

Ad Widget <> Ad Widget

ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿ, ಸಂಸ್ಥೆಯ ಎಲ್ಲ ಅಧ್ಯಾಪಕರು ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಕರೆ ನೀಡಿದರು.



Ad Widget

ನಿಕಟಪೂರ್ವ ಆಡಳಿತ ಮಂಡಳಿಯ ಅಧ್ಯಕ್ಷೆ ಹಾಗೂ ಸಂಚಾಲಕರು ಮಾತನಾಡಿ, ಕಳೆದ ಏಳು ವರ್ಷಗಳಲ್ಲಿ ಸಂಸ್ಥೆ ಬೆಳೆದು ಬಂದ ಹಾದಿಯನ್ನು ಸ್ಮರಿಸಿ, ಅಭಿವೃದ್ಧಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನೂತನ ತಂಡಕ್ಕೆ ಶುಭ ಹಾರೈಸಿದರು.

Ad Widget

Ad Widget

ನೂತನ ಅಧ್ಯಕ್ಷ ವಿಷ್ಣುಪ್ರಸಾದ್ ಸಿ ಮಾತನಾಡಿ, ನಿರ್ದಿಷ್ಟ ಗುರಿ ಮತ್ತು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ನೂತನ ಸಂಚಾಲಕ ರವಿನಾರಾಯಣ ಎಂ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ವಿವೇಕಾನಂದ ವಿದ್ಯಾವರ್ಧಕ ಸಂಘದ ತಂಡದೊಂದಿಗೆ ಕಾರ್ಯನಿರ್ವಹಿಸಿದ ಅನುಭವವಿದೆ. ವೈಯಕ್ತಿಕವಾಗಿ ಈ ಜವಾಬ್ದಾರಿಗೆ ಬಂದಿಲ್ಲ; ಸಂಘಟಿತ ವ್ಯವಸ್ಥೆಯ ಭಾಗವಾಗಿ ಬಂದಿದ್ದೇನೆ. ಎಲ್ಲರ ಆಲೋಚನೆ ಹಾಗೂ ಯೋಜನೆಗಳನ್ನು ಸಮನ್ವಯಗೊಳಿಸಿಕೊಂಡು, ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗದಂತೆ ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿ ಸಂಸ್ಥೆಯನ್ನು ಮತ್ತಷ್ಟು ಬೆಳೆಸುವ ಗುರಿ ಹೊಂದಿದ್ದೇವೆ. ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಅನುಭವದ ಹಿನ್ನೆಲೆಯ ನೂತನ ಸಾರಥಿಗಳು

ಅಧ್ಯಕ್ಷ ವಿಷ್ಣುಪ್ರಸಾದ್ ಸಿ:

1966ರ ಮೇ 30ರಂದು ಜನಿಸಿದ ವಿಷ್ಣುಪ್ರಸಾದ್ ಸಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ. 1987ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ ಅವರು, ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಹಾಗೂ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. 2010ರಿಂದ ವಿವೇಕಾನಂದ ಶಿಕ್ಷಣ ಸಂಸ್ಥೆಯೊಂದಿಗೆ ಗುರುತಿಸಿಕೊಂಡಿದ್ದು, ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅನುಭವ ಹೊಂದಿದ್ದಾರೆ.

ಸಂಚಾಲಕ ರವಿನಾರಾಯಣ ಎಂ:

ವಿವೇಕಾನಂದ ಶಿಶುಮಂದಿರದ ಕಾರ್ಯದರ್ಶಿಯಾಗಿ, ಕನ್ನಡ ಮಾಧ್ಯಮ ಶಾಲೆಯ ಸಂಚಾಲಕರಾಗಿ ಹಾಗೂ ಕಳೆದ ಐದು ವರ್ಷಗಳಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಸುಮಾರು 30 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಮೈತ್ರಿ ಎಲೆಕ್ಟ್ರಿಕ್ ಕಂಪನಿಯನ್ನು ಆರಂಭಿಸಿ, ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಣಮಟ್ಟದ ವ್ಯವಹಾರದ ಮೂಲಕ ಗುರುತಿಸಿಕೊಂಡಿದ್ದಾರೆ.

ಕೋಶಾಧಿಕಾರಿ ಸಿಎ ದೀಪಕ್ ಕೆ:

ಪುತ್ತೂರಿನ ಸಿಎ ದಾಮೋದರ ನಾಯಕ್ ಕೆ. ಮತ್ತು ದಿವ್ಯಾ ಡಿ. ನಾಯಕ್ ಅವರ ಪುತ್ರರಾದ ದೀಪಕ್ ಕೆ ಅವರು ಬಿಕಾಂ, ಡಿಐಎಸ್ಎ ಪದವಿಯೊಂದಿಗೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದಾರೆ. 2012ರ ಮೇ ತಿಂಗಳ ಸಿಎ ಇಂಟರ್ಮೀಡಿಯೇಟ್ (ಐಪಿಸಿಸಿ) ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 47ನೇ ರ‍್ಯಾಂಕ್ ಗಳಿಸಿದ್ದಾರೆ. ಪುತ್ತೂರಿನ ಎಂ/ಎಸ್ ದಾಮೋದರ್ ಆ್ಯಂಡ್ ಕೋ ಸಂಸ್ಥೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ವೃತ್ತಿ ನಿರ್ವಹಿಸುತ್ತಿದ್ದು, ಸಿಎಸ್ ಅಂತಿಮ ಹಂತದ ಅಧ್ಯಯನ ಮುಂದುವರಿಸಿದ್ದಾರೆ. ಮಂಗಳೂರು ಐಸಿಎಐ ಶಾಖೆಯಲ್ಲಿ ಐಸಿಐಟಿಎಸ್ಎಸ್ ಮತ್ತು ಎಐಸಿಐಟಿಎಸ್ಎಸ್ ತರಬೇತಿಗಳಿಗೆ ಅರೆಕಾಲಿಕ ಅಧ್ಯಾಪಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Ad Widget
Continue Reading

ಸುಳ್ಯ

ಕಾಣಿಯೂರು : ಚಾರ್ವಕದ ಕೋಳಿ ಅಂಕದಲ್ಲಿ ಹಣದ ಪಣ; ಪೊಲೀಸರ ದಾಳಿಗೆ ಜೂಜಾಟಗಾರರ ಪಲಾಯನ!; ಓರ್ವನ ಬಂಧನ

Published

on



Ad Widget

Ad Widget

Ad Widget

Ad Widget

ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಡಬ ಪೊಲೀಸ್ ಠಾಣೆಯ ಪ್ರಭಾರ ಉಪನಿರೀಕ್ಷಕ ಸಂತೋಷ್ ಬಿ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.

Ad Widget

Ad Widget alt="Ad Widget"/>

Ad Widget

ಈ ವೇಳೆ ಜೂಜಾಟದಲ್ಲಿ ತೊಡಗಿದ್ದವರು ಪೊಲೀಸರನ್ನು ಕಂಡು ಓಡಿಹೋಗಿದ್ದು, ಚಾರ್ವಾಕ ನಿವಾಸಿ ಬಾಲಕೃಷ್ಣ (46) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆತನ ಬಳಿಯಿಂದ ಜೂಜಾಟದಲ್ಲಿ ಗಳಿಸಿದ್ದ ₹1,030 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಸ್ಥಳದಲ್ಲಿದ್ದ ಐದು ಕೋಳಿಗಳು ಹಾಗೂ ಕೋಳಿ ಅಂಕಕ್ಕೆ ಬಳಸುತ್ತಿದ್ದ ಕತ್ತಿಯನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget <> Ad Widget

ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!