ಸ್ಥಳೀಯ
Murder-26 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕೊಲೆ ಆರೋಪಿ..!
ಸುಮಾರು 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳ ಮೂಲದ ಟೋಮಿ ಅಲಿಯಾಸ್ ಥಾಮಸ್ ಬಂಧಿತ ಆರೋಪಿ.
ಸುಬ್ರಹ್ಮಣ್ಯ: ಸುಮಾರು 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳ ಮೂಲದ ಟೋಮಿ ಅಲಿಯಾಸ್ ಥಾಮಸ್ ಬಂಧಿತ ಆರೋಪಿ.
2000ರ ಸೆಪ್ಟೆಂಬರ್ 10ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುತ್ತಿಗಾರಿನಲ್ಲಿ ಈ ಘಟನೆ ನಡೆದಿತ್ತು. ಕೇರಳ ಮೂಲದ ಜೊಯ್, ಶೆಲ್ಟನ್ ಹಾಗೂ ಟೋಮಿ ಅಲಿಯಾಸ್ ಥಾಮಸ್ ಎಂಬವರ ನಡುವೆ ಕೆಲಸದ ವಿಚಾರವಾಗಿ ಜಗಳ ನಡೆದಿತ್ತು. ಈ ವೇಳೆ ಜೊಯ್ ಎಂಬಾತನಿಗೆ ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೋಮಿ ಅಲಿಯಾಸ್ ಥಾಮಸ್ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 37/2000, ಐಪಿಸಿ ಕಲಂ 302 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿದ್ದ ಕೇರಳದ ತ್ರಿಶೂರ್ ನಿವಾಸಿ ಟೋಮಿ, ಸುಮಾರು 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ನವೆಂಬರ್ 12ರಂದು ಸುಬ್ರಹ್ಮಣ್ಯ ಠಾಣೆಯ ಎಎಸ್‌ಐ ಸ್ಕರೀಯಾ, ಸುಳ್ಯ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಹರೀಶ್ (HC-557) ಹಾಗೂ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆದ್ರಾಂ (HC-811) ಅವರ ತಂಡ ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
ಸ್ಥಳೀಯ
Mandya-ಕೊಲೆಯಾಗಿದ್ದಾಳೆಂದು ಭಾವಿಸಿದ್ದ ಮಹಿಳೆ 6 ವರ್ಷಗಳ ಬಳಿಕ ಜೀವಂತ ಪ್ರತ್ಯಕ್ಷ..! ಮಾಡದ ತಪ್ಪಿಗೆ ಎರಡೂವರೆ ವರ್ಷ ಜೈಲಿನಲ್ಲಿದ್ದ ವ್ಯಕ್ತಿ
ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೊಬ್ಬರು ಬರೋಬ್ಬರಿ ಆರು ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕೊಲೆ ಆರೋಪ ಹೊತ್ತು ನಿರಪರಾಧಿ ವ್ಯಕ್ತಿಯೊಬ್ಬರು ಸುಮಾರು ಎರಡೂವರೆ ವರ್ಷ ಜೈಲಿನಲ್ಲಿ ಕಳೆದಿರುವುದು ಇದೀಗ ಪೊಲೀಸರ ತನಿಖಾ ವೈಖರಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಂಡ್ಯ: ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೊಬ್ಬರು ಬರೋಬ್ಬರಿ ಆರು ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕೊಲೆ ಆರೋಪ ಹೊತ್ತು ನಿರಪರಾಧಿ ವ್ಯಕ್ತಿಯೊಬ್ಬರು ಸುಮಾರು ಎರಡೂವರೆ ವರ್ಷ ಜೈಲಿನಲ್ಲಿ ಕಳೆದಿರುವುದು ಇದೀಗ ಪೊಲೀಸರ ತನಿಖಾ ವೈಖರಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
2019ರಲ್ಲಿ ಮಂಜು ಎಂಬ ಮಹಿಳೆ ನಾಪತ್ತೆಯಾಗಿದ್ದ ಬಗ್ಗೆ ಆಕೆಯ ತಂದೆ ನಾಗರಾಜು ಪಾಂಡವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸುಮಾರು ಎರಡು ವರ್ಷಗಳ ಬಳಿಕ ಪಾಂಡವಪುರದ ರಾಗಿಮುದ್ದನಹಳ್ಳಿ ನಿವಾಸಿ ರಾಜೇಶ್ ಎಂಬಾತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.
ಮಹಿಳೆ ನಾಪತ್ತೆಯಾಗುವ ಮೊದಲು ರಾಜೇಶ್‌ನ ಮೊಬೈಲ್‌ನಿಂದ ಕೊನೆಯ ಕರೆ ಮಾಡಿರುವುದು ಪೊಲೀಸರಿಗೆ ಅನುಮಾನ ಮೂಡಿಸಿತ್ತು. ಪಾಂಡವಪುರ ಬಸ್ ನಿಲ್ದಾಣದಲ್ಲಿ ಆಕಸ್ಮಿಕವಾಗಿ ರಾಜೇಶ್‌ನ ಮೊಬೈಲ್ ಬಳಸಿ ಮಂಜು ಕರೆ ಮಾಡಿದ್ದಳು ಎನ್ನಲಾಗಿದೆ. ಈ ಕರೆಯನ್ನೇ ಆಧಾರವಾಗಿಟ್ಟುಕೊಂಡು ಪೊಲೀಸರು ರಾಜೇಶ್‌ನನ್ನು ಪ್ರಕರಣದ ಆರೋಪಿಯನ್ನಾಗಿ ಮಾಡಿ ಬಂಧಿಸಿದ್ದರು.
ಪೊಲೀಸರಿಂದ ಹಿಂಸೆ, ಬೆದರಿಕೆ ಆರೋಪ
ತಾನು ಮಾಡದ ಕೊಲೆಯನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಚಿತ್ರಹಿಂಸೆ ನೀಡಿದ್ದರು ಎಂದು ರಾಜೇಶ್ ಆರೋಪಿಸಿದ್ದಾರೆ. ಅಂದಿನ ಪೊಲೀಸ್ ಅಧಿಕಾರಿ ಪ್ರಭಾಕರ್ ಅವರು ತನಿಖೆಯ ವೇಳೆ ಬೂಟಿನಿಂದ ಒದ್ದು, ವಿದ್ಯುತ್ ಶಾಕ್ ನೀಡಿ, ಕುಟುಂಬದವರನ್ನು ಬಂಧಿಸುವುದಾಗಿ ಬೆದರಿಕೆ ಹಾಕಿದ್ದರು. ಪೊಲೀಸರ ಕಿರುಕುಳಕ್ಕೆ ಹೆದರಿ ತಾನು ಮಾಡದ ತಪ್ಪನ್ನು ಒಪ್ಪಿಕೊಂಡಿದ್ದಾಗಿ ರಾಜೇಶ್ ತಿಳಿಸಿದ್ದಾರೆ.
2021ರಲ್ಲಿ ಜೈಲು ಸೇರಿದ ರಾಜೇಶ್ ಸುಮಾರು ಎರಡೂವರೆ ವರ್ಷಗಳ ಕಾಲ ಸೆರೆವಾಸ ಅನುಭವಿಸಿದ್ದರು. ಬಳಿಕ 2024ರ ಜನವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ವಕೀಲರ ಪ್ರಯತ್ನದಿಂದ ಮಹಿಳೆ ಪತ್ತೆ
ಜೈಲಿನಿಂದ ಬಿಡುಗಡೆಯಾದ ಬಳಿಕವೂ ನ್ಯಾಯಕ್ಕಾಗಿ ಹೋರಾಟ ಮುಂದುವರಿಸಿದ ರಾಜೇಶ್ ಮತ್ತು ಅವರ ವಕೀಲರು, ಕೊಲೆಯಾಗಿದ್ದಾಳೆಂದು ಭಾವಿಸಲಾಗಿದ್ದ ಮಂಜುವನ್ನು ಪತ್ತೆಹಚ್ಚಲು ಪ್ರಯತ್ನಿಸಿದರು. ನಾಗಮಂಗಲದಲ್ಲಿ ಮಹಿಳೆ ಜೀವಂತವಾಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಆಕೆಯನ್ನು ಪತ್ತೆಹಚ್ಚಿ ಬಿಂಡಿಗನವಿಲೆ ಪೊಲೀಸರ ವಶಕ್ಕೆ ಒಪ್ಪಿಸಿ ಹೇಳಿಕೆ ದಾಖಲಿಸಿದ್ದಾರೆ.
ಈ ವೇಳೆ ಮಂಜು, ತನಗೆ ಇಷ್ಟವಿಲ್ಲದ ಮದುವೆ ಮಾಡಿದ್ದರಿಂದ ಮನೆ ಬಿಟ್ಟು ಹೋಗಿದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ಇದೀಗ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿ ಜೀವನ ನಡೆಸುತ್ತಿದ್ದು, ರಾಜೇಶ್ ಎಂಬಾತನ ಪರಿಚಯವೇ ತನಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ನ್ಯಾಯಕ್ಕಾಗಿ ರಾಜೇಶ್ ಆಗ್ರಹ
ಮಹಿಳೆ ಜೀವಂತವಾಗಿ ಪತ್ತೆಯಾಗಿರುವುದರಿಂದ ತಾನು ನಿರಪರಾಧಿ ಎಂಬುದು ಸಾಬೀತಾಗಿದೆ ಎಂದು ರಾಜೇಶ್ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಸುಳ್ಳು ದೂರು ನೀಡಿದವರು ಹಾಗೂ ಸರಿಯಾಗಿ ತನಿಖೆ ನಡೆಸದೆ ತನ್ನನ್ನು ಜೈಲಿಗೆ ಕಳುಹಿಸಿದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಒಟ್ಟಿನಲ್ಲಿ, ನಾಪತ್ತೆಯಾಗಿದ್ದ ಮಹಿಳೆಯನ್ನು ಕೊಲೆಯಾದವಳೆಂದು ಭಾವಿಸಿ ನಡೆದ ತನಿಖೆಯಿಂದ ನಿರಪರಾಧಿ ವ್ಯಕ್ತಿಯೊಬ್ಬರು ವರ್ಷಗಳ ಕಾಲ ಸಂಕಷ್ಟ ಅನುಭವಿಸಿರುವ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.
-
ಬಿಗ್ ನ್ಯೂಸ್22 hours agoCourt order-ಸುದ್ದಿ ಪ್ರಕಟಿಸದಂತೆ ತಡೆಯುವ ಯತ್ನ ವಿಫಲ – ನಿರ್ಬಂಧಕ್ಕೆ ಮುಂದಾಗಿದ್ದ ಅರ್ಜಿ ವಜಾ..! ʻನಿಖರ ನ್ಯೂಸ್ʼ ಪರ ಕೋರ್ಟ್ ಆದೇಶ
-
ಕ್ರೈಂ24 hours agoMurder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
-
ಕಾರ್ಯಕ್ರಮಗಳು24 hours agoPuttur-ಪುತ್ತೂರು: ನ.27ರಂದು ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರ ಬಿಡುಗಡೆ
-
ರಾಜಕೀಯ22 hours agoPuttur-ಪುತ್ತೂರು ಕ್ಷೇತ್ರಕ್ಕೆ ₹654 ಕೋಟಿಗೂ ಅಧಿಕ ಗ್ಯಾರಂಟಿ ಸೌಲಭ್ಯ: ಬಿಜೆಪಿ ಟೀಕೆಗೆ ಉಮಾನಾಥ ಶೆಟ್ಟಿ ಪೆರ್ನೆ ತಿರುಗೇಟು
-
ಮಂಗಳೂರು24 hours agoAshwini Vaishnaw-ಕೊಂಕಣ ರೈಲ್ವೆ ವಿಲೀನಕ್ಕೆ 4 ರಾಜ್ಯಗಳ ಸಮ್ಮತಿ ಅನಿವಾರ್ಯ; ಪಶ್ಚಿಮ ಘಟ್ಟದ ರೈಲು ಮಾರ್ಗಕ್ಕೆ ಹೊಸ ರೂಪ-ಸಚಿವ ಅಶ್ವಿನಿ ವೈಷ್ಣವ್
-
ಸ್ಥಳೀಯ4 hours agoMandya-ಕೊಲೆಯಾಗಿದ್ದಾಳೆಂದು ಭಾವಿಸಿದ್ದ ಮಹಿಳೆ 6 ವರ್ಷಗಳ ಬಳಿಕ ಜೀವಂತ ಪ್ರತ್ಯಕ್ಷ..! ಮಾಡದ ತಪ್ಪಿಗೆ ಎರಡೂವರೆ ವರ್ಷ ಜೈಲಿನಲ್ಲಿದ್ದ ವ್ಯಕ್ತಿ
-
ಬಿಗ್ ನ್ಯೂಸ್22 hours agoRadhas-ಮಕ್ಕಳ ದಿನಾಚರಣೆ ಸಂಭ್ರಮ: ಪುತ್ತೂರಿನ ರಾಧಾಸ್ನಲ್ಲಿ ನಾಳೆ ಪುಟಾಣಿಗಳ ಫ್ಯಾಷನ್ ಶೋ
-
ಕ್ರೈಂ4 hours agoMurder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!















