ಅಪರಾಧ
Panambur Beach-ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿಗರು ವಶಕ್ಕೆ
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಣಂಬೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅವರಿಗೆ ಲಭಿಸಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಇಬ್ಬರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಪಣಂಬೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಪಿಎಸ್‌ಐಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.
ಸ್ಥಳೀಯ
Uppinangadi-ಉಪ್ಪಿನಂಗಡಿ: ವೈದ್ಯರ ಮನೆ ದರೋಡೆ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಸುಲಿಗೆ ಪ್ರಕರಣವೊಂದರಲ್ಲಿ ಕಳೆದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್ ಮಸೂರ್ ಬಂಧಿತ ಆರೋಪಿ.
ಉಪ್ಪಿನಂಗಡಿ: ಸುಲಿಗೆ ಪ್ರಕರಣವೊಂದರಲ್ಲಿ ಕಳೆದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್ ಮಸೂರ್ ಬಂಧಿತ ಆರೋಪಿ.
2006ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿಯಲ್ಲಿ ಈ ಸುಲಿಗೆ ಪ್ರಕರಣ ನಡೆದಿತ್ತು. ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಅವರ ಮನೆಗೆ ನಾಲ್ವರು ಅಪರಿಚಿತರು ಚಿಕಿತ್ಸೆ ಪಡೆಯುವ ನೆಪದಲ್ಲಿ ಬಂದಿದ್ದರು. ಬಳಿಕ ಮನೆಯಲ್ಲಿದ್ದ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ ಚಿನ್ನಾಭರಣ ಮತ್ತು ನಗದು ಸೇರಿದಂತೆ ಒಟ್ಟು 2,35,800 ರೂ. ಮೌಲ್ಯದ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದರು.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 187/2006ರ ಅಡಿಯಲ್ಲಿ ಐಪಿಸಿ ಕಲಂ 395 ಮತ್ತು 397ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿದ್ದ ಮಸೂದ್ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಸ್ಥಳೀಯ
Mandya-ಕೊಲೆಯಾಗಿದ್ದಾಳೆಂದು ಭಾವಿಸಿದ್ದ ಮಹಿಳೆ 6 ವರ್ಷಗಳ ಬಳಿಕ ಜೀವಂತ ಪ್ರತ್ಯಕ್ಷ..! ಮಾಡದ ತಪ್ಪಿಗೆ ಎರಡೂವರೆ ವರ್ಷ ಜೈಲಿನಲ್ಲಿದ್ದ ವ್ಯಕ್ತಿ
ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೊಬ್ಬರು ಬರೋಬ್ಬರಿ ಆರು ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕೊಲೆ ಆರೋಪ ಹೊತ್ತು ನಿರಪರಾಧಿ ವ್ಯಕ್ತಿಯೊಬ್ಬರು ಸುಮಾರು ಎರಡೂವರೆ ವರ್ಷ ಜೈಲಿನಲ್ಲಿ ಕಳೆದಿರುವುದು ಇದೀಗ ಪೊಲೀಸರ ತನಿಖಾ ವೈಖರಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಂಡ್ಯ: ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೊಬ್ಬರು ಬರೋಬ್ಬರಿ ಆರು ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕೊಲೆ ಆರೋಪ ಹೊತ್ತು ನಿರಪರಾಧಿ ವ್ಯಕ್ತಿಯೊಬ್ಬರು ಸುಮಾರು ಎರಡೂವರೆ ವರ್ಷ ಜೈಲಿನಲ್ಲಿ ಕಳೆದಿರುವುದು ಇದೀಗ ಪೊಲೀಸರ ತನಿಖಾ ವೈಖರಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
2019ರಲ್ಲಿ ಮಂಜು ಎಂಬ ಮಹಿಳೆ ನಾಪತ್ತೆಯಾಗಿದ್ದ ಬಗ್ಗೆ ಆಕೆಯ ತಂದೆ ನಾಗರಾಜು ಪಾಂಡವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸುಮಾರು ಎರಡು ವರ್ಷಗಳ ಬಳಿಕ ಪಾಂಡವಪುರದ ರಾಗಿಮುದ್ದನಹಳ್ಳಿ ನಿವಾಸಿ ರಾಜೇಶ್ ಎಂಬಾತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.
ಮಹಿಳೆ ನಾಪತ್ತೆಯಾಗುವ ಮೊದಲು ರಾಜೇಶ್‌ನ ಮೊಬೈಲ್‌ನಿಂದ ಕೊನೆಯ ಕರೆ ಮಾಡಿರುವುದು ಪೊಲೀಸರಿಗೆ ಅನುಮಾನ ಮೂಡಿಸಿತ್ತು. ಪಾಂಡವಪುರ ಬಸ್ ನಿಲ್ದಾಣದಲ್ಲಿ ಆಕಸ್ಮಿಕವಾಗಿ ರಾಜೇಶ್‌ನ ಮೊಬೈಲ್ ಬಳಸಿ ಮಂಜು ಕರೆ ಮಾಡಿದ್ದಳು ಎನ್ನಲಾಗಿದೆ. ಈ ಕರೆಯನ್ನೇ ಆಧಾರವಾಗಿಟ್ಟುಕೊಂಡು ಪೊಲೀಸರು ರಾಜೇಶ್‌ನನ್ನು ಪ್ರಕರಣದ ಆರೋಪಿಯನ್ನಾಗಿ ಮಾಡಿ ಬಂಧಿಸಿದ್ದರು.
ಪೊಲೀಸರಿಂದ ಹಿಂಸೆ, ಬೆದರಿಕೆ ಆರೋಪ
ತಾನು ಮಾಡದ ಕೊಲೆಯನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಚಿತ್ರಹಿಂಸೆ ನೀಡಿದ್ದರು ಎಂದು ರಾಜೇಶ್ ಆರೋಪಿಸಿದ್ದಾರೆ. ಅಂದಿನ ಪೊಲೀಸ್ ಅಧಿಕಾರಿ ಪ್ರಭಾಕರ್ ಅವರು ತನಿಖೆಯ ವೇಳೆ ಬೂಟಿನಿಂದ ಒದ್ದು, ವಿದ್ಯುತ್ ಶಾಕ್ ನೀಡಿ, ಕುಟುಂಬದವರನ್ನು ಬಂಧಿಸುವುದಾಗಿ ಬೆದರಿಕೆ ಹಾಕಿದ್ದರು. ಪೊಲೀಸರ ಕಿರುಕುಳಕ್ಕೆ ಹೆದರಿ ತಾನು ಮಾಡದ ತಪ್ಪನ್ನು ಒಪ್ಪಿಕೊಂಡಿದ್ದಾಗಿ ರಾಜೇಶ್ ತಿಳಿಸಿದ್ದಾರೆ.
2021ರಲ್ಲಿ ಜೈಲು ಸೇರಿದ ರಾಜೇಶ್ ಸುಮಾರು ಎರಡೂವರೆ ವರ್ಷಗಳ ಕಾಲ ಸೆರೆವಾಸ ಅನುಭವಿಸಿದ್ದರು. ಬಳಿಕ 2024ರ ಜನವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ವಕೀಲರ ಪ್ರಯತ್ನದಿಂದ ಮಹಿಳೆ ಪತ್ತೆ
ಜೈಲಿನಿಂದ ಬಿಡುಗಡೆಯಾದ ಬಳಿಕವೂ ನ್ಯಾಯಕ್ಕಾಗಿ ಹೋರಾಟ ಮುಂದುವರಿಸಿದ ರಾಜೇಶ್ ಮತ್ತು ಅವರ ವಕೀಲರು, ಕೊಲೆಯಾಗಿದ್ದಾಳೆಂದು ಭಾವಿಸಲಾಗಿದ್ದ ಮಂಜುವನ್ನು ಪತ್ತೆಹಚ್ಚಲು ಪ್ರಯತ್ನಿಸಿದರು. ನಾಗಮಂಗಲದಲ್ಲಿ ಮಹಿಳೆ ಜೀವಂತವಾಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಆಕೆಯನ್ನು ಪತ್ತೆಹಚ್ಚಿ ಬಿಂಡಿಗನವಿಲೆ ಪೊಲೀಸರ ವಶಕ್ಕೆ ಒಪ್ಪಿಸಿ ಹೇಳಿಕೆ ದಾಖಲಿಸಿದ್ದಾರೆ.
ಈ ವೇಳೆ ಮಂಜು, ತನಗೆ ಇಷ್ಟವಿಲ್ಲದ ಮದುವೆ ಮಾಡಿದ್ದರಿಂದ ಮನೆ ಬಿಟ್ಟು ಹೋಗಿದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ಇದೀಗ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿ ಜೀವನ ನಡೆಸುತ್ತಿದ್ದು, ರಾಜೇಶ್ ಎಂಬಾತನ ಪರಿಚಯವೇ ತನಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ನ್ಯಾಯಕ್ಕಾಗಿ ರಾಜೇಶ್ ಆಗ್ರಹ
ಮಹಿಳೆ ಜೀವಂತವಾಗಿ ಪತ್ತೆಯಾಗಿರುವುದರಿಂದ ತಾನು ನಿರಪರಾಧಿ ಎಂಬುದು ಸಾಬೀತಾಗಿದೆ ಎಂದು ರಾಜೇಶ್ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಸುಳ್ಳು ದೂರು ನೀಡಿದವರು ಹಾಗೂ ಸರಿಯಾಗಿ ತನಿಖೆ ನಡೆಸದೆ ತನ್ನನ್ನು ಜೈಲಿಗೆ ಕಳುಹಿಸಿದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಒಟ್ಟಿನಲ್ಲಿ, ನಾಪತ್ತೆಯಾಗಿದ್ದ ಮಹಿಳೆಯನ್ನು ಕೊಲೆಯಾದವಳೆಂದು ಭಾವಿಸಿ ನಡೆದ ತನಿಖೆಯಿಂದ ನಿರಪರಾಧಿ ವ್ಯಕ್ತಿಯೊಬ್ಬರು ವರ್ಷಗಳ ಕಾಲ ಸಂಕಷ್ಟ ಅನುಭವಿಸಿರುವ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ಅಪರಾಧ
Padnuru-ಪಡ್ನೂರು: ಬೇಲಿ ಕಲ್ಲು ಕಿತ್ತು ಜಮೀನಿಗೆ ಅಕ್ರಮ ಪ್ರವೇಶ; ನಿವೃತ್ತ ಮುಖ್ಯಗುರು ಕುಟುಂಬದ ಮೇಲೆ ಹಲ್ಲೆಗೆ ಯತ್ನ ಆರೋಪ; ಇತ್ತಂಡಗಳಿಂದ ದೂರು ದಾಖಲು
ಜಮೀನಿಗೆ ಹಾಕಿದ್ದ ಬೇಲಿ ಕಲ್ಲುಗಳನ್ನು ಕಿತ್ತು ಹಾಕಿ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೆ, ನಿವೃತ್ತ ಮುಖ್ಯಗುರು ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ದೇಮೇರು ಎಂಬಲ್ಲಿ ನ.11ರಂದು ನಡೆದಿದೆ ಎನ್ನಲಾಗಿದೆ.
ಪುತ್ತೂರು: ಜಮೀನಿಗೆ ಹಾಕಿದ್ದ ಬೇಲಿ ಕಲ್ಲುಗಳನ್ನು ಕಿತ್ತು ಹಾಕಿ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೆ, ನಿವೃತ್ತ ಮುಖ್ಯಗುರು ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ದೇಮೇರು ಎಂಬಲ್ಲಿ ನ.11ರಂದು ನಡೆದಿದೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿದ್ದು, ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಲ್ಲಿನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿರುವ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೇಲಿ ಕಲ್ಲುಗಳನ್ನು ಕಿತ್ತು ಹಲ್ಲೆಗೆ ಯತ್ನ ಆರೋಪ:
ನಿವೃತ್ತ ಮುಖ್ಯಗುರು ವಿಜಯಕುಮಾರಿ ಅವರು ನೀಡಿರುವ ದೂರಿನ ಪ್ರಕಾರ, ಅವರ ಪುತ್ರಿ ಸ್ವಪ್ನ ಗೋಪಿನಾಥ್ ಖರೀದಿಸಿರುವ ಜಮೀನಿಗೆ ಸಂಬಂಧಿಸಿದಂತೆ ನೆರೆಯ ಮನೆಯವರಾದ ದಮಯಂತಿ ಹಾಗೂ ಅವರ ಪುತ್ರಿ ಪುಷ್ಪಶ್ರೀ ಅವರು ನ.11ರ ಮಧ್ಯಾಹ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ.
ಈ ಬಗ್ಗೆ ವಿಚಾರಿಸಲು ಹೋದಾಗ ಜಮೀನಿನ ಬೇಲಿಗೆ ಹಾಕಿದ್ದ ಕಲ್ಲುಗಳನ್ನು ನೂಕಿ ಹಾಕಿ, ಅದೇ ಕಲ್ಲುಗಳಿಂದ ತಮ್ಮ ಹಾಗೂ ಕುಟುಂಬದವರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾರೆ ಎಂದು ವಿಜಯಕುಮಾರಿ ಆರೋಪಿಸಿದ್ದಾರೆ.
ಘಟನೆಯ ದೃಶ್ಯಗಳು ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿವೆ. ಈ ಹಿಂದೆಯೂ ಪದೇಪದೇ ತೊಂದರೆ ನೀಡುತ್ತಿರುವ ಬಗ್ಗೆ ನ.8 ಮತ್ತು 9ರಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ನ್ಯಾಯಾಲಯದಲ್ಲಿ ಮಧ್ಯಂತರ ತಡೆಯಾಜ್ಞೆ ಅರ್ಜಿ ತಿರಸ್ಕೃತ:
ಸ್ಥಳೀಯ ನಿವಾಸಿ ದಮಯಂತಿ ಅವರು ತಮ್ಮ ಜಮೀನಿನಲ್ಲಿ ಕಾಲುದಾರಿ ಹಕ್ಕು ಕೋರಿ ಮೂಲ ದಾವೆ ಸಂಖ್ಯೆ 269/2025ರಂತೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಪಡೆದು ತಮ್ಮ ತಂತಿ ಬೇಲಿಯನ್ನು ತುಂಡರಿಸಿದ್ದರು ಎನ್ನಲಾಗಿದೆ.
ಈ ವಿಚಾರವಾಗಿ ವಿಜಯಕುಮಾರಿ ಅವರು ವಕೀಲರ ಮೂಲಕ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಿದ್ದರು. 2026ರ ನ.7ರಂದು ಪುತ್ತೂರಿನ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಪ್ರಕರಣದಲ್ಲಿ ವಾದಿಗಳು ಸಲ್ಲಿಸಿದ್ದ ಐಎ ಸಂಖ್ಯೆ 2ರ ಮಧ್ಯಂತರ ತಡೆಯಾಜ್ಞೆ ಅರ್ಜಿಯನ್ನು ತಿರಸ್ಕರಿಸಿತ್ತು.
ಆದರೂ ಮತ್ತೆ ಮತ್ತೆ ಬೇಲಿಯನ್ನು ತುಂಡರಿಸಿ ತಮ್ಮ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಲಾಗುತ್ತಿದೆ ಎಂದು ವಿಜಯಕುಮಾರಿ ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡೂ ಕಡೆಯವರ ದೂರುಗಳ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ರಾಜಕೀಯ24 hours agoAshok Rai-ಪುತ್ತೂರು ವಿಧಾನಸಭಾ ಕ್ಷೇತ್ರದ 3 ಮಸೀದಿಗಳಿಗೆ ರಾಜ್ಯ ವಖ್ಫ್ ಇಲಾಖೆಯಿಂದ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ
-
ದಕ್ಷಿಣ ಕನ್ನಡ20 hours ago
Ashoka Janamana 2026 : ಒಂದು ಲಕ್ಷ ಜನರಿಗೆ ಆತಿಥ್ಯ, ಉಡುಗೊರೆ ಸಿದ್ಧ! ನ.22ಕ್ಕೆ ಪುತ್ತೂರಿನಲ್ಲಿ ಅಶೋಕ ಜನಮನ
-
ಸ್ಥಳೀಯ22 hours agoDharmasthala-ಧರ್ಮಸ್ಥಳದ ಗ್ರಾಮಸ್ಥರಿಂದ ಕಾನೂನು ಕ್ರಮಕ್ಕೆ ಸಿಎಂ ಡಿಕೆಶಿಗೆ ಮನವಿ
-
ಸ್ಥಳೀಯ23 hours agoUppinangadi-ಉಪ್ಪಿನಂಗಡಿ: ವೈದ್ಯರ ಮನೆ ದರೋಡೆ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
-
ಅಂತರ ರಾಜ್ಯ23 hours agoDog Box-ಸಾಕುಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್: ವಂದೇ ಭಾರತ್ ಸ್ಲೀಪರ್ನಲ್ಲಿ ‘ಡಾಗ್ ಬಾಕ್ಸ್’ ಸೌಲಭ್ಯ
-
ದಕ್ಷಿಣ ಕನ್ನಡ3 hours agoHarish Poonja School Political Speech, ಶಾಲಾ ಮಕ್ಕಳಿಗೆ ಬಿಜೆಪಿ ಶಾಸಕನ ರಾಜಕೀಯ ಪಾಠ! ಕಾಂಗ್ರೆಸ್ನಂತಹ ದರಿದ್ರ ಪಕ್ಷದ ಹಿಂದೆ ಹೋಗಬೇಡಿ ಮಕ್ಕಳೇ’ ಎಂಬ ಹೇಳಿಕೆ ಹೊತ್ತಿಸಿದೆ ವಿವಾದದ ಕಿಡಿ
-
ಶಿಕ್ಷಣ23 hours agoVivekananda-ವಿಟಿಯು ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ 1 ಚಿನ್ನ, 1 ಬೆಳ್ಳಿ ಹಾಗೂ 2 ಕಂಚಿನ ಪದಕಗಳ ಸಾಧನೆ
-
ಶಿಕ್ಷಣ23 hours agoDr. S.V. Prasad-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಡಾ.ಎಸ್.ವಿ.ಪ್ರಸಾದ್ ಅವರಿಗೆ ಪೋಸ್ಟ್ ಡಾಕ್ಟರಲ್ ಫೆಲೋಶಿಪ್















