Connect with us

Uncategorized

Modi visit effect-ಮೋದಿ ಭೇಟಿ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು..!

Published

on



Ad Widget

Ad Widget

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget

Ad Widget

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget alt="Ad Widget"/>

Ad Widget

ಬನ್ನೇರುಘಟ್ಟ ಮುಖ್ಯರಸ್ತೆ, ಆಡುಗೋಡಿ, ಜಯನಗರ, ಜೆ.ಪಿ.ನಗರ, ತಲಘಟ್ಟಪುರ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿತ್ತು.

Ad Widget

Ad Widget <> Ad Widget

ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿತ್ತು.



Ad Widget

ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಐಐಎಂಬಿ ಹಾಗೂ ಜಯದೇವ ಆಸ್ಪತ್ರೆ ಮಾರ್ಗವಾಗಿ ಸಂಚರಿಸುವವರು ತೀವ್ರ ತೊಂದರೆ ಅನುಭವಿಸಿದರು. ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದರಿಂದ ವಾಹನ ಸವಾರರು ಬಿಟಿಎಂ ಬಡಾವಣೆ, ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳ ಮೂಲಕ ಸಂಚರಿಸಬೇಕಾಯಿತು. ಇದರಿಂದ ಕಿರಿದಾದ ವಸತಿ ಪ್ರದೇಶಗಳ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಹಲವು ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

Ad Widget

Ad Widget

ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು, ಬಿಟಿಎಂ ಬಡಾವಣೆ ಒಳರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಕಂಡುಬಂದಿತು. ಡೇರಿ ವೃತ್ತ, ಮೈಕೋ ಲೇಔಟ್, ಹುಳಿಮಾವು ಹಾಗೂ ಜಯನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಚಲಿಸಿದವು.

ಬೆಳಿಗ್ಗೆ 9 ಗಂಟೆಗೆ ಹುಳಿಮಾವಿನಿಂದ ಹೊರಟು ಡೇರಿ ವೃತ್ತದಲ್ಲಿ 11 ಗಂಟೆಗೆ ನಡೆಯಬೇಕಿದ್ದ ಸಭೆಗೆ ತೆರಳುತ್ತಿದ್ದರೂ ಮಧ್ಯಾಹ್ನ 1 ಗಂಟೆಯಾದರೂ ತಲುಪಲು ಸಾಧ್ಯವಾಗಲಿಲ್ಲ ಎಂದು ಪ್ರಯಾಣಿಕ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಪರ್ಯಾಯ ಮಾರ್ಗಗಳಲ್ಲಿಯೂ ವಾಹನ ದಟ್ಟಣೆ ಇತ್ತು. ಯಾವ ರಸ್ತೆಯಲ್ಲಿ ಸಂಚರಿಸಬೇಕು ಎಂಬುದರ ಕುರಿತು ಸ್ಪಷ್ಟ ಸೂಚನಾ ಫಲಕಗಳಿರಲಿಲ್ಲ ಎಂದು ಅವರು ದೂರಿದರು.

ಸಂಚಾರ ನಿರ್ಬಂಧದಿಂದ ಉದ್ಯೋಗಿಗಳಿಗೆ ತೊಂದರೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಹಲವು ಐಟಿ ಕಂಪನಿಗಳು ಶುಕ್ರವಾರ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್ ಫ್ರಂ ಹೋಮ್) ಸೂಚಿಸಿದ್ದವು.

ಮಾರ್ಗ ಬದಲಾವಣೆ ಕುರಿತು ಎಫ್‌ಎಂ ರೇಡಿಯೊ, ಸುದ್ದಿವಾಹಿನಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಆದರೂ ಪರ್ಯಾಯ ಮಾರ್ಗಗಳ ಪರಿಚಯವಿಲ್ಲದವರು ಕಿರಿದಾದ ಒಳರಸ್ತೆಗಳಿಗೆ ಪ್ರವೇಶಿಸಿದ್ದರಿಂದ ಗೊಂದಲ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚು ಸಂಚಾರ ದಟ್ಟಣೆ ಕಂಡುಬಂದ ಪ್ರದೇಶಗಳು:
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು
ಬಿಟಿಎಂ ಬಡಾವಣೆ ಒಳರಸ್ತೆಗಳು
ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳು
ಮೈಕೋ ಲೇಔಟ್ ಜಂಕ್ಷನ್‌ಗಳು
ಹುಳಿಮಾವು ಜಂಕ್ಷನ್‌ಗಳು
ಡೇರಿ ವೃತ್ತ
ಜಯದೇವ ಆಸ್ಪತ್ರೆ ಮತ್ತು ಐಐಎಂಬಿ ಮುಂಭಾಗದ ರಸ್ತೆಗಳು

Ad Widget
Click to comment

Leave a Reply

Uncategorized

Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget <> Ad Widget

ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.



Ad Widget

ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಈ ನಡುವೆ ತನಿಖಾಧಿಕಾರಿ ಲೋಕೇಶ್ ಹಾಗೂ ಸಹ ತನಿಖಾಧಿಕಾರಿ ಮನೋಜ್ ನಾಯ್ಕ್ ಅವರು ಕೂಡ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget
Continue Reading

Uncategorized

Vivekananda-ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ-ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಮಾಲೆಮಾರ್ ಎಸ್ಟೇಟ್‌ನಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

ಮಾಲೆಮಾರ್ ಎಸ್ಟೇಟ್‌ನಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಈ ತಂಡದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಮನ್ಮಿತಾ ಹಾಗೂ ವಿಜ್ಞಾನ ವಿಭಾಗದ ಆತ್ಮಿಕ ಭಾಗವಹಿಸಿರುತ್ತಾರೆ. ಇವರಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮನ್ಮಿತಾ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

Uncategorized

Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ತುಡರ್ ಪರ್ಬ ಆಚರಣೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ವಿದ್ಯಾರ್ಥಿ ಸಂಘ ಹಾಗೂ ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಆಯೋಜಿಸಿದ ತುಡರ್ ಪರ್ಬ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್. ಅಧ್ಯಕ್ಷೀಯ ನುಡಿಗಳನ್ನಾಡಿದರು.

Ad Widget

Ad Widget

Ad Widget

ಪುತ್ತೂರು: ಕತ್ತಲೆಯನ್ನು ಹೋಗಲಾಡಿಸಲು ಬೆಳಕು ಅತ್ಯಗತ್ಯ. ಅದೇ ರೀತಿ ನಮ್ಮ ಮನಸ್ಸಿನಲ್ಲಿರುವ ಅಜ್ಞಾನವನ್ನು ದೂರವಿರಿಸಲು ಜ್ಞಾನದಿಂದ ಮಾತ್ರ ಸಾಧ್ಯ. ದೀಪಾವಳಿ ಎಂದರೆ ಅಂಧಾಕಾರದಿಂದ ಬೆಳಕಿನತ್ತ ಸಾಗುವುದಾಗಿದ್ದು, ಪ್ರತಿಯೊಬ್ಬರ ಬದುಕಿನಲ್ಲೂ ಜ್ಞಾನವು ವಿಜೃಂಭಿಸಬೇಕೆಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್. ಹೇಳಿದರು.

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ವಿದ್ಯಾರ್ಥಿ ಸಂಘ ಹಾಗೂ ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಆಯೋಜಿಸಿದ ತುಡರ್ ಪರ್ಬ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದರು.

Ad Widget

Ad Widget <> Ad Widget

ವೇದಿಕೆಯಲ್ಲಿ ವಕೀಲ ಜಯರಾಮ ಎ, ಆಶಾ ಜಯರಾಮ, ಲಲಿತ ಕಲಾ ಸಂಘದ ಸಂಯೋಜಕಿ ಅನ್ನಪೂರ್ಣ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಾಮ್ ಉಪಸ್ಥಿತರಿದ್ದರು.



Ad Widget

ಕಾರ್ಯಕ್ರಮದಲ್ಲಿ ಸರಿಗಮಪ ಟೈಟಲ್ ವಿನ್ನರ್ ಅಶ್ಮಿತ್ ಎ.ಜೆ ಅವರನ್ನು ಸನ್ಮಾನಿಸಲಾಯಿತು ಮತ್ತು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿ ಬಂತು.

Ad Widget

Ad Widget

ಕಾರ್ಯಕ್ರಮವನ್ನು ಪ್ರಥಮ ಬಿ.ಎ.ಸ್ಸಿ ವಿಭಾಗದ ವಿದ್ಯಾರ್ಥಿ ಸಂಪತ್ ಸ್ವಾಗತಿಸಿ, ವಂದಿಸಿ, ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಮಾ ಭಟ್ ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!