ಬಿಗ್ ನ್ಯೂಸ್
Meta CEO Zuckerberg-₹538 ಕೋಟಿಯ ಐತಿಹಾಸಿಕ ಕೋಟೆ ಖರೀದಿಸಿದ ಮೆಟಾ ಸಿಇಒ ಜುಕರ್‌ಬರ್ಗ್..!
ಮೆಟಾ ಸಂಸ್ಥೆಯ ಸಿಇಒ ಮಾರ್ಕ್ ಜುಕರ್‌ಬರ್ಗ್ ಹಾಗೂ ಅವರ ಪತ್ನಿ ಪ್ರಿಸ್ಸಿಲ್ಲಾ ಚಾನ್ ಐರ್ಲೆಂಡ್‌ನಲ್ಲಿ ಐತಿಹಾಸಿಕ ಕೋಟೆಯೊಂದನ್ನು ಖರೀದಿಸಿದ್ದಾರೆ. ಐರ್ಲೆಂಡ್‌ನ ಕೌಂಟಿ ವಾಟರ್‌ಫೋರ್ಡ್‌ನಲ್ಲಿರುವ ಐತಿಹಾಸಿಕ ‘ಸ್ಟ್ರಾನ್ಕಲ್ಲಿ ಕ್ಯಾಸೆಲ್ ಎಸ್ಟೇಟ್’ ಇದೀಗ ಜುಕರ್‌ಬರ್ಗ್ ದಂಪತಿಯ ಒಡೆತನಕ್ಕೆ ಸೇರಿದೆ ಎನ್ನಲಾಗಿದೆ.
ವಾಷಿಂಗ್ಟನ್: ಮೆಟಾ ಸಂಸ್ಥೆಯ ಸಿಇಒ ಮಾರ್ಕ್ ಜುಕರ್‌ಬರ್ಗ್ ಹಾಗೂ ಅವರ ಪತ್ನಿ ಪ್ರಿಸ್ಸಿಲ್ಲಾ ಚಾನ್ ಐರ್ಲೆಂಡ್‌ನಲ್ಲಿ ಐತಿಹಾಸಿಕ ಕೋಟೆಯೊಂದನ್ನು ಖರೀದಿಸಿದ್ದಾರೆ. ಐರ್ಲೆಂಡ್‌ನ ಕೌಂಟಿ ವಾಟರ್‌ಫೋರ್ಡ್‌ನಲ್ಲಿರುವ ಐತಿಹಾಸಿಕ ‘ಸ್ಟ್ರಾನ್ಕಲ್ಲಿ ಕ್ಯಾಸೆಲ್ ಎಸ್ಟೇಟ್’ ಇದೀಗ ಜುಕರ್‌ಬರ್ಗ್ ದಂಪತಿಯ ಒಡೆತನಕ್ಕೆ ಸೇರಿದೆ ಎನ್ನಲಾಗಿದೆ.
ಸುಮಾರು ₹538 ಕೋಟಿ ಮೌಲ್ಯದ ಈ ಭವ್ಯ ಎಸ್ಟೇಟ್ 440 ಎಕರೆ ವಿಶಾಲ ಪ್ರದೇಶದಲ್ಲಿ ಹರಡಿಕೊಂಡಿದೆ. 1830ರಲ್ಲಿ ನಿರ್ಮಾಣಗೊಂಡಿರುವ ಈ ಐತಿಹಾಸಿಕ ಕೋಟೆಯನ್ನು 2003ರಲ್ಲಿ ನವೀಕರಿಸಲಾಗಿತ್ತು.
ಮೂರು ಅಂತಸ್ತುಗಳನ್ನು ಹೊಂದಿರುವ ಮುಖ್ಯ ಬಂಗಲೆಯು ವಿಶೇಷ ವಾಸ್ತುಶಿಲ್ಪದಿಂದ ಗಮನ ಸೆಳೆಯುತ್ತದೆ. ಇತಿಹಾಸದ ಪ್ರಕಾರ, ಈ ಕಟ್ಟಡವನ್ನು ಅಂದಿನ ಸಂಸತ್ ಸದಸ್ಯ ಜಾನ್ ಕೀಲಿ ಅವರಿಗಾಗಿ ನಿರ್ಮಿಸಲಾಗಿತ್ತು.
ಐತಿಹಾಸಿಕ ಹಿನ್ನೆಲೆ, ವಿಶಾಲ ಪ್ರದೇಶ ಹಾಗೂ ಭವ್ಯ ವಿನ್ಯಾಸ ಹೊಂದಿರುವ ಈ ಕೋಟೆಯ ಖರೀದಿಯೊಂದಿಗೆ ಜುಕರ್‌ಬರ್ಗ್ ದಂಪತಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಅಂತರ ರಾಜ್ಯ
Fire-ಕೇರಳದಲ್ಲಿ ಕಾರಿಗೆ ಬೆಂಕಿ: ಕರ್ನಾಟಕದ ಆರು ಮಂದಿ ಕೂದಲೆಳೆ ಅಂತರದಲ್ಲಿ ಪಾರು..!
ಕೇರಳದಲ್ಲಿ ಅಪಘಾತಕ್ಕೀಡಾದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕರ್ನಾಟಕದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಕೋಯಿಕ್ಕೋಡ್ ಜಿಲ್ಲೆಯ ವಡಗರ ಸಮೀಪದ ಕುಂಜಿಪ್ಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸುಮಾರು 7 ಗಂಟೆಗೆ ಈ ಘಟನೆ ಸಂಭವಿಸಿದೆ.
ಕೋಯಿಕ್ಕೋಡ್: ಕೇರಳದಲ್ಲಿ ಅಪಘಾತಕ್ಕೀಡಾದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕರ್ನಾಟಕದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಕೋಯಿಕ್ಕೋಡ್ ಜಿಲ್ಲೆಯ ವಡಗರ ಸಮೀಪದ ಕುಂಜಿಪ್ಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸುಮಾರು 7 ಗಂಟೆಗೆ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅದೃಷ್ಟವಶಾತ್, ಕಾರಿನಲ್ಲಿದ್ದ ಆರು ಮಂದಿ ತಕ್ಷಣವೇ ಹೊರಬಂದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ಬಳಿಕ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದವರು ಕರ್ನಾಟಕದವರಾಗಿದ್ದು, ಗುರುವಾಯೂರು ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಕಾರು ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
ಅಂತರ ರಾಜ್ಯ
Commander-ನಗ್ನ ಚಿತ್ರಗಳ ಆಮಿಷಕ್ಕೆ ಬಲಿಯಾದ ವಾಯುಪಡೆ ವಿಂಗ್ ಕಮಾಂಡರ್: ಪಾಕ್ ಏಜೆಂಟ್‌ಗೆ ರಹಸ್ಯ ಯುದ್ಧ ಮಾಹಿತಿ ಸೋರಿಕೆ..!
ಪಾಕಿಸ್ತಾನದ ಗುಪ್ತಚರ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಏಜೆಂಟ್ ಕಳುಹಿಸುತ್ತಿದ್ದ ನಗ್ನ ಚಿತ್ರಗಳ ಆಮಿಷಕ್ಕೆ ಒಳಗಾಗಿ ಭಾರತೀಯ ವಾಯುಪಡೆಯ (IAF) ವಿಂಗ್ ಕಮಾಂಡರ್ ಒಬ್ಬರು ದೇಶದ ಅತ್ಯಂತ ಸೂಕ್ಷ್ಮ ರಕ್ಷಣಾ ಮತ್ತು ಯುದ್ಧ ಕಾರ್ಯಾಚರಣೆಗಳ ಮಾಹಿತಿಯನ್ನು ಸೋರಿಕೆ ಮಾಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ಹೊಸದಿಲ್ಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಏಜೆಂಟ್ ಕಳುಹಿಸುತ್ತಿದ್ದ ನಗ್ನ ಚಿತ್ರಗಳ ಆಮಿಷಕ್ಕೆ ಒಳಗಾಗಿ ಭಾರತೀಯ ವಾಯುಪಡೆಯ (IAF) ವಿಂಗ್ ಕಮಾಂಡರ್ ಒಬ್ಬರು ದೇಶದ ಅತ್ಯಂತ ಸೂಕ್ಷ್ಮ ರಕ್ಷಣಾ ಮತ್ತು ಯುದ್ಧ ಕಾರ್ಯಾಚರಣೆಗಳ ಮಾಹಿತಿಯನ್ನು ಸೋರಿಕೆ ಮಾಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ದಿಲ್ಲಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಅಧಿಕೃತ ರಹಸ್ಯ ಕಾಯ್ದೆಯಡಿ ಬಂಧಿತನಾಗಿರುವ ವಿಂಗ್ ಕಮಾಂಡರ್ ಕಳೆದ ಐದು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾನೆ. 2026ರ ಜನವರಿ 12ರಿಂದ ಏಪ್ರಿಲ್ 1ರವರೆಗೆ ವಾಟ್ಸ್‌ಆ್ಯಪ್ ಮೂಲಕ ಪಾಕ್ ಏಜೆಂಟ್‌ನೊಂದಿಗೆ ಸಂಪರ್ಕದಲ್ಲಿದ್ದ ಆತ, ಹಲವು ಸೂಕ್ಷ್ಮ ಮಿಲಿಟರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾನೆ ಎನ್ನಲಾಗಿದೆ.
ಏಪ್ರಿಲ್ 1ರಂದು ಕಚೇರಿಯೊಳಗೆ ಸ್ಮಾರ್ಟ್‌ಫೋನ್ ತೆಗೆದುಕೊಂಡು ಹೋಗಿದ್ದ ವೇಳೆ ನಡೆದ ತಪಾಸಣೆಯಲ್ಲಿ ಈ ಕೃತ್ಯ ಬಯಲಾಗಿದೆ. ಪಾಕ್ ಏಜೆಂಟ್ ಕಳುಹಿಸುತ್ತಿದ್ದ ಪ್ರತಿ ನಗ್ನ ಚಿತ್ರಕ್ಕೆ ಪ್ರತಿಯಾಗಿ ವಾಯುಪಡೆಯ ರಹಸ್ಯ ಯುದ್ಧ ಯೋಜನೆಯ ಒಂದೊಂದು ಪುಟವನ್ನು ಕಳುಹಿಸುವ ಒಪ್ಪಂದ ಮಾಡಿಕೊಂಡಿದ್ದ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಸೋರಿಕೆಯಾದ ರಹಸ್ಯ ಮಾಹಿತಿಗಳೇನು?
ವಾಯುಪಡೆಯ ರಹಸ್ಯ ಡ್ರೋನ್ ಘಟಕದ ಸಾಮರ್ಥ್ಯ, ಕಾರ್ಯಾಚರಣೆಯ ವಿಧಾನ, ಹಾರಾಟದ ಅವಧಿ, ಶಸ್ತ್ರಾಸ್ತ್ರಗಳ ಗುರಿ ವ್ಯವಸ್ಥೆ ಹಾಗೂ ಯುದ್ಧದ ಸಂದರ್ಭದಲ್ಲಿ ಡ್ರೋನ್‌ಗಳನ್ನು ನಿಯೋಜಿಸಬಹುದಾದ ಸ್ಥಳಗಳ ಮಾಹಿತಿಯನ್ನು ಆರೋಪಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಇದರ ಜೊತೆಗೆ ಲೇಹ್‌ನಲ್ಲಿ ನಿಯೋಜಿಸಲಾಗಿರುವ ಯುದ್ಧ ವಿಮಾನಗಳ ವಿವರ, ರಾಜಸ್ಥಾನದ ಸೂರತ್‌ಗಢದ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ನಡೆದ ಮಿಲಿಟರಿ ಸಮರಾಭ್ಯಾಸದ ಮಾಹಿತಿ ಹಾಗೂ ಸೂಕ್ಷ್ಮ ಸೇನಾ ನೆಲೆಗಳ ವಿವರಗಳನ್ನೂ ಪಾಕ್ ಏಜೆಂಟ್‌ಗೆ ನೀಡಿದ್ದಾನೆ ಎನ್ನಲಾಗಿದೆ.
ಐವರು ಅಧೀನ ಅಧಿಕಾರಿಗಳ ಮೊಬೈಲ್‌ಗಳಿಗೂ ಸ್ಪೈವೇರ್!
ಈ ಪ್ರಕರಣದ ಮತ್ತೊಂದು ಗಂಭೀರ ಅಂಶವೆಂದರೆ, ಪಾಕ್ ಏಜೆಂಟ್ ಕಳುಹಿಸಿದ್ದ ಮಾಲ್‌ವೇರ್ ಮತ್ತು ಸ್ಪೈವೇರ್ ಹೊಂದಿರುವ ಲಿಂಕ್‌ಗಳು ಹಾಗೂ ಆ್ಯಪ್‌ಗಳನ್ನು ತನ್ನ ಅಧೀನದಲ್ಲಿ ಕೆಲಸ ಮಾಡುತ್ತಿದ್ದ ಐವರು ಅಧಿಕಾರಿಗಳ ಮೊಬೈಲ್‌ಗಳಲ್ಲಿ ಅಳವಡಿಸಲು ಆರೋಪಿ ಸಹಕರಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಮೂಲಕ ಅಧಿಕಾರಿಗಳ ಮೊಬೈಲ್‌ಗಳಲ್ಲಿದ್ದ ಗೌಪ್ಯ ಮಾಹಿತಿ ಹಾಗೂ ಹಿರಿಯ ಅಧಿಕಾರಿಗಳೊಂದಿಗಿನ ಸಂವಹನವನ್ನು ಕದಿಯಲು ಸೈಬರ್ ಗೂಢಚರ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
3,008 ಸಂದೇಶಗಳು, 65 ಫೋಟೋಗಳ ವಿನಿಮಯ
ಆರೋಪಿ ಮತ್ತು ಪಾಕ್ ಏಜೆಂಟ್ ನಡುವಿನ ವಾಟ್ಸ್‌ಆ್ಯಪ್ ಸಂವಹನವನ್ನು ಪರಿಶೀಲಿಸಿದಾಗ ಒಟ್ಟು 3,008 ಪಠ್ಯ ಸಂದೇಶಗಳು, 65 ಫೋಟೋಗಳು, 42 ಧ್ವನಿ ಕರೆಗಳು, 4 ವಿಡಿಯೋ ಕರೆಗಳು ಹಾಗೂ 6 URL ಲಿಂಕ್‌ಗಳ ವಿನಿಮಯ ನಡೆದಿರುವುದು ಪತ್ತೆಯಾಗಿದೆ.
ಈ ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ಇನ್ನಷ್ಟು ರಹಸ್ಯ ಮಾಹಿತಿ ಸೋರಿಕೆಯಾಗಿದೆಯೇ? ಈ ಪಿತೂರಿಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ? ಎಂಬ ಕುರಿತು ದಿಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಬಿಗ್ ನ್ಯೂಸ್21 hours agoCourt order-ಸುದ್ದಿ ಪ್ರಕಟಿಸದಂತೆ ತಡೆಯುವ ಯತ್ನ ವಿಫಲ – ನಿರ್ಬಂಧಕ್ಕೆ ಮುಂದಾಗಿದ್ದ ಅರ್ಜಿ ವಜಾ..! ʻನಿಖರ ನ್ಯೂಸ್ʼ ಪರ ಕೋರ್ಟ್ ಆದೇಶ
-
ಕ್ರೈಂ23 hours agoMurder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ನ.27ರಂದು ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರ ಬಿಡುಗಡೆ
-
ರಾಜಕೀಯ21 hours agoPuttur-ಪುತ್ತೂರು ಕ್ಷೇತ್ರಕ್ಕೆ ₹654 ಕೋಟಿಗೂ ಅಧಿಕ ಗ್ಯಾರಂಟಿ ಸೌಲಭ್ಯ: ಬಿಜೆಪಿ ಟೀಕೆಗೆ ಉಮಾನಾಥ ಶೆಟ್ಟಿ ಪೆರ್ನೆ ತಿರುಗೇಟು
-
ಮಂಗಳೂರು24 hours agoAshwini Vaishnaw-ಕೊಂಕಣ ರೈಲ್ವೆ ವಿಲೀನಕ್ಕೆ 4 ರಾಜ್ಯಗಳ ಸಮ್ಮತಿ ಅನಿವಾರ್ಯ; ಪಶ್ಚಿಮ ಘಟ್ಟದ ರೈಲು ಮಾರ್ಗಕ್ಕೆ ಹೊಸ ರೂಪ-ಸಚಿವ ಅಶ್ವಿನಿ ವೈಷ್ಣವ್
-
ಬಿಗ್ ನ್ಯೂಸ್21 hours agoRadhas-ಮಕ್ಕಳ ದಿನಾಚರಣೆ ಸಂಭ್ರಮ: ಪುತ್ತೂರಿನ ರಾಧಾಸ್ನಲ್ಲಿ ನಾಳೆ ಪುಟಾಣಿಗಳ ಫ್ಯಾಷನ್ ಶೋ
-
ಸ್ಥಳೀಯ4 hours agoMandya-ಕೊಲೆಯಾಗಿದ್ದಾಳೆಂದು ಭಾವಿಸಿದ್ದ ಮಹಿಳೆ 6 ವರ್ಷಗಳ ಬಳಿಕ ಜೀವಂತ ಪ್ರತ್ಯಕ್ಷ..! ಮಾಡದ ತಪ್ಪಿಗೆ ಎರಡೂವರೆ ವರ್ಷ ಜೈಲಿನಲ್ಲಿದ್ದ ವ್ಯಕ್ತಿ
-
ಸ್ಥಳೀಯ5 hours agoMurder-26 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕೊಲೆ ಆರೋಪಿ..!















