Connect with us

ಮಂಗಳೂರು

Srinivas Rao-ಧರ್ಮಸ್ಥಳ ತಲೆಬುರುಡೆ ಪ್ರಕರಣ: ವಿರೋಧಿಗಳೇ ತಂದು ಹಾಕಿರುವ ಶಂಕೆ- ಧರ್ಮಸ್ಥಳ ಗ್ರಾಮಸ್ಥ ಶ್ರೀನಿವಾಸ್ ರಾವ್ ಆರೋಪ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ತಲೆಬುರುಡೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮಸ್ಥ ಶ್ರೀನಿವಾಸ್ ರಾವ್ ಪ್ರತಿಕ್ರಿಯೆ ನೀಡಿದ್ದು, ವಿರೋಧಿಗಳೇ ತಲೆಬುರುಡೆಯನ್ನು ತಂದು ಹಾಕಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ.

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ತಲೆಬುರುಡೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮಸ್ಥ ಶ್ರೀನಿವಾಸ್ ರಾವ್ ಪ್ರತಿಕ್ರಿಯೆ ನೀಡಿದ್ದು, ವಿರೋಧಿಗಳೇ ತಲೆಬುರುಡೆಯನ್ನು ತಂದು ಹಾಕಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಾನವ ತಲೆಬುರುಡೆ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯೇ ಸೂಕ್ತ ಉತ್ತರ ನೀಡಬೇಕು. ‘ನಾಟಕದ ಒಂದು ಪರದೆ ಬಿದ್ದಾಗ ಮತ್ತೊಂದು ಹೊಸ ನಾಟಕ ಶುರುವಾಗಬೇಕು’ ಎನ್ನುವಂತೆ ಈ ಪ್ರಕರಣದ ಕುರಿತು ಸುಳ್ಳು ಊಹಾಪೋಹಗಳನ್ನು ಹರಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವ ಇಂತಹ ಗ್ಯಾಂಗ್‌ಗಳ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ದೇಶದ ವಿವಿಧೆಡೆ ನಡೆಯುತ್ತಿರುವ ಹೋರಾಟಗಳ ದಿಕ್ಕನ್ನು ಗಮನದಲ್ಲಿಟ್ಟುಕೊಂಡು, ಈ ಪ್ರಕರಣವೂ ದುರ್ಬಳಕೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.



Ad Widget

ಅಲ್ಲದೆ, ಧರ್ಮಸ್ಥಳದ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀನಿವಾಸ್ ರಾವ್ ಆಗ್ರಹಿಸಿದ್ದಾರೆ.

Click to comment

Leave a Reply

ಅಪರಾಧ

Panambur Beach-ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿಗರು ವಶಕ್ಕೆ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಣಂಬೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಪೊಲೀಸರು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.



Ad Widget

ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಇಬ್ಬರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಪಣಂಬೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಪಿಎಸ್‌ಐಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.

Ad Widget
Continue Reading

ಮಂಗಳೂರು

Ashwini Vaishnaw-ಕೊಂಕಣ ರೈಲ್ವೆ ವಿಲೀನಕ್ಕೆ 4 ರಾಜ್ಯಗಳ ಸಮ್ಮತಿ ಅನಿವಾರ್ಯ; ಪಶ್ಚಿಮ ಘಟ್ಟದ ರೈಲು ಮಾರ್ಗಕ್ಕೆ ಹೊಸ ರೂಪ-ಸಚಿವ ಅಶ್ವಿನಿ ವೈಷ್ಣವ್

Published

on



Ad Widget

Ad Widget

Ad Widget

Ad Widget

ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ಪ್ರಮುಖ ರೈಲ್ವೆ ಯೋಜನೆಗಳ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡರು.

Ad Widget

Ad Widget

Ad Widget

ಮಂಗಳೂರು: ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ಪ್ರಮುಖ ರೈಲ್ವೆ ಯೋಜನೆಗಳ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡರು.

Ad Widget

Ad Widget alt="Ad Widget"/>

Ad Widget

ಕೊಂಕಣ ರೈಲ್ವೆ ವಿಲೀನದ ತಾಂತ್ರಿಕ ಅಡಚಣೆಗಳೇನು?
ವಿಲೀನ ಪ್ರಕ್ರಿಯೆ ಕುರಿತು ವಿವರಿಸಿದ ಸಚಿವರು, “ಕೊಂಕಣ ರೈಲ್ವೆಯು ಕೇವಲ ಕೇಂದ್ರ ಸರ್ಕಾರದ ಸಂಸ್ಥೆಯಲ್ಲ; ಇದರಲ್ಲಿ ಕೇಂದ್ರದ ಜೊತೆಗೆ ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಗಳ ಷೇರು ಪಾಲುದಾರಿಕೆಯಿದೆ. ನಿಯಮದ ಪ್ರಕಾರ, ಈ ಎಲ್ಲಾ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ವಿಲೀನಕ್ಕೆ ಸಮ್ಮತಿ ಸೂಚಿಸಿದರೆ ಮಾತ್ರ ಮುಂದಿನ ಹೆಜ್ಜೆ ಇಡಲು ಸಾಧ್ಯ. ಈಗಾಗಲೇ ಎಲ್ಲಾ ರಾಜ್ಯಗಳಿಗೂ ಈ ಬಗ್ಗೆ ಮನವಿ ಸಲ್ಲಿಸಲಾಗಿದ್ದು, ಅವರ ಒಪ್ಪಿಗೆ ದೊರೆತ ತಕ್ಷಣ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ” ಎಂದು ಸ್ಪಷ್ಟಪಡಿಸಿದರು.

Ad Widget

Ad Widget <> Ad Widget

ಘಾಟ್ ಮಾರ್ಗದ ದ್ವಿಪಥಕ್ಕೆ (Doubling) ವಿನೂತನ ವಿನ್ಯಾಸ:
ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗವನ್ನು ದ್ವಿಪಥಗೊಳಿಸುವ ಯೋಜನೆಗೆ ಸರ್ಕಾರ ಸಂಪೂರ್ಣ ಆದ್ಯತೆ ನೀಡಿದೆ ಎಂದ ಸಚಿವರು, ಈ ಕುರಿತ ತಾಂತ್ರಿಕ ಅಂಶಗಳನ್ನು ಬಿಚ್ಚಿಟ್ಟರು:



Ad Widget
  • ಡಿಪಿಆರ್ ಸಿದ್ಧತೆ ಆರಂಭ: ಈ ಮಾರ್ಗದ ಅಂತಿಮ ಸ್ಥಳ ಸಮೀಕ್ಷೆ (FLS) ಪೂರ್ಣಗೊಂಡಿದ್ದು, ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ.
  • ಇಳಿಜಾರು ತಗ್ಗಿಸಲು ಪ್ಲಾನ್: ಪಶ್ಚಿಮ ಘಟ್ಟದ ಕಡಿದಾದ ಪ್ರದೇಶದಲ್ಲಿ ಹಳಿ ನಿರ್ಮಿಸುವುದು ಸವಾಲಿನ ಕೆಲಸ. ಮೊದಲ ಹಳಿಯಲ್ಲಿರುವಂತೆ ಅತಿಯಾದ ಏರು-ಇಳಿಜಾರು (Steep gradient) ಸಮಸ್ಯೆ ಎದುರಾಗದಂತೆ ತಡೆಯಲು, ಎರಡನೇ ಹಳಿಯನ್ನು ಸಾಧಾರಣ ಇಳಿಜಾರು (Moderate gradient) ಹೊಂದಿರುವಂತೆ ಹೊಸದಾಗಿ ವಿನ್ಯಾಸಗೊಳಿಸಲಾಗುತ್ತಿದೆ.
  • ಕರಾವಳಿ-ರಾಜಧಾನಿ ನಡುವೆ ವಂದೇ ಭಾರತ್ ಸಂಭ್ರಮ:
    “ಶುಕ್ರವಾರದಿಂದ (ನಾಳೆ) ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಕರಾವಳಿ ಕರ್ನಾಟಕವನ್ನು ರಾಜಧಾನಿಯೊಂದಿಗೆ ಬೆಸೆಯುವ ಈ ಯೋಜನೆಗೆ ಘಾಟ್ ಪ್ರದೇಶದ ವಿದ್ಯುದ್ದೀಕರಣ ಹಾಗೂ ರೈಲಿನ ತಾಂತ್ರಿಕ ಮಾರ್ಪಾಡುಗಳಂತಹ ದೊಡ್ಡ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿನಿಂತಿದ್ದೇವೆ. ಇದೇ ವೇಳೆ ಉಡುಪಿಯಲ್ಲಿ ಎಫ್‌ಎಂ ರೇಡಿಯೋ ಟ್ರಾನ್ಸ್‌ಮಿಟರ್ ಕೂಡ ಉದ್ಘಾಟನೆಯಾಗಲಿದೆ” ಎಂದು ಹೇಳಿದರು.
  • ಕಾಂಗ್ರೆಸ್ ಅವಧಿಯ ಬಜೆಟ್ ಎಷ್ಟಿತ್ತು? ಎಂ.ಬಿ. ಪಾಟೀಲ್‌ಗೆ ಸಚಿವರ ಪ್ರಶ್ನೆ:
    ರಾಜ್ಯಕ್ಕೆ ಪ್ರಮುಖ ರೈಲ್ವೆ ಯೋಜನೆಗಳನ್ನು ನೀಡುವಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿದೆ ಎಂಬ ಸಚಿವ ಎಂ.ಬಿ. ಪಾಟೀಲ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ವೈಷ್ಣವ್, “ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಬಂದ ಮೇಲೆಯೇ ಕರ್ನಾಟಕದ ರೈಲ್ವೆ ಕ್ಷೇತ್ರಕ್ಕೆ ನ್ಯಾಯ ಸಿಕ್ಕಿದೆ. ಇಂದು ರಾಜ್ಯದಲ್ಲಿ ₹75,000 ಕೋಟಿ ಮೊತ್ತದ ಬೃಹತ್ ಯೋಜನೆಗಳು ನಡೆಯುತ್ತಿವೆ. ಬುಲೆಟ್ ರೈಲು, ವಂದೇ ಭಾರತ್, ವಂದೇ ಭಾರತ್ ಸ್ಲೀಪರ್ ಹಾಗೂ ನಿಲ್ದಾಣಗಳ ಆಧುನೀಕರಣದಂತಹ ಕೆಲಸಗಳು ಹಿಂದೆಂದೂ ನಡೆದಿರಲಿಲ್ಲ. ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಕರ್ನಾಟಕಕ್ಕೆ ಎಷ್ಟು ಅನುದಾನ ಸಿಕ್ಕಿತ್ತು ಎಂಬುದನ್ನು ಎಂ.ಬಿ. ಪಾಟೀಲ್ ಅವರೇ ಉತ್ತರಿಸಲಿ” ಎಂದು ಸವಾಲು ಹಾಕಿದರು.
Ad Widget
Continue Reading

ಅಪರಾಧ

Mangalore-ಮಂಗಳೂರು: ₹1.15 ಕೋಟಿ ದರೋಡೆಗೆ ಸಂಚು ಪ್ರಕರಣ: ಪೊಲೀಸ್ ಕಾನ್‌ಸ್ಟೇಬಲ್ ಅರೆಸ್ಟ್-ಕೆಲಸದಿಂದ ಅಮಾನತು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget

ಮಂಗಳೂರು, ನ.12: ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಡುಪಿ ಜಿಲ್ಲೆಯ ಕಾಪು ನಿವಾಸಿ ಅಝೀಝ್, ಹಳಿಯಾಳದ ನಸ್ರುಲ್ಲಾಖಾನ್, ಕಾರವಾರದ ನಿತ್ಯಾನಂದ ಹಾಗೂ ಖಾಲಿದ್ ಎಂಬವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಗಣೇಶ ಕೋಳಂಕರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.



Ad Widget

ದಾವಣಗೆರೆಯಿಂದ ಮಂಗಳೂರಿಗೆ ಸತ್ಯನಾರಾಯಣ ಎಂಬವರು ಬಸ್ಸಿನಲ್ಲಿ ₹1.15 ಕೋಟಿ ಹಣ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದ ಕಾನ್‌ಸ್ಟೇಬಲ್ ಶ್ರೀಶೈಲ್, ಯುವಕರ ತಂಡವೊಂದನ್ನು ಕಟ್ಟಿಕೊಂಡು ಪೊಲೀಸರ ಸೋಗಿನಲ್ಲಿ ತೆರಳಿ ಹಣ ದೋಚಲು ಸಂಚು ರೂಪಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಸತ್ಯನಾರಾಯಣ ಅವರು ದೂರು ನೀಡಿದ್ದು, ಉರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

Ad Widget

Ad Widget

ಕಾರವಾರ ತಾಲೂಕಿನ ಕಿನ್ನರ ಗ್ರಾಮದ ಗಣೇಶ ಕೋಳಂಕರ್ ಎಂಬ ಯುವಕನನ್ನು ಪೊಲೀಸ್ ಕಾನ್‌ಸ್ಟೇಬಲ್ ಶ್ರೀಶೈಲ್ ಈ ಕೃತ್ಯಕ್ಕೆ ಬಳಸಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಪ್ರಮುಖ ಆರೋಪಿಯ ಪತ್ತೆಗಾಗಿ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಾನ್‌ಸ್ಟೇಬಲ್ ಅಮಾನತು: ಹಣ ದರೋಡೆ ಹಾಗೂ ಅಪಹರಣ ಪ್ರಕರಣದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಶ್ರೀಶೈಲ್ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆತನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!