Connect with us

ಅಪರಾಧ

ವಾಮಂಜೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಮಾಡಿದ್ದ ಉಪ್ಪಿನಂಗಡಿ ಪೆರಿಯಡ್ಕದ ಪ್ರವೀಣನಿಗೆ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆ ಬಿಡುಗಡೆಗೆ ಆದೇಶ – ಸಂತ್ರಸ್ತ ಕುಟುಂಬದ ಆಕ್ಷೇಪ

Published

on

Ad Widget

Ad Widget

Ad Widget

Ad Widget

90ರ ದಶಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನೆ ಬೆಚ್ಚಿ ಬೀಳಿಸಿದ್ದ, ರಾಜ್ಯಾದ್ಯಂತ ಸಂಚಲನ ಸೃಷ್ಡಿಸಿದ್ದ ಮಂಗಳೂರಿನ ವಾಮಂಜೂರಿನಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಜೀವಾವಧಿ ಶಿಕ್ಷೆಗೊಳಗಾದ ಖೈದಿ, ಮೂಲತ: ದ.ಕ. ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ನಿವಾಸಿಯಾಗಿದ್ದ ಪ್ರವೀಣ್ ಕುಮಾರ್(62) ನನ್ನು ಬಿಡುಗಡೆಗೊಳಿಸಲು ಸರಕಾರ ನಿರ್ಧಾರಿಸಿದೆ. ಭಾರತದ 75 ನೇ ವರ್ಷ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಈತನ ಸಹಿತ ಹಲವರ ಬಿಡುಗಡೆಗೆ ನಿರ್ಧರಿಸಲಾಗಿದ್ದು ಇದಕ್ಕೆ ಈತನಿಂದ ಹತ್ಯೆಯಾದವರ ಕುಟುಂಬಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ವಾಮಜೂರು ಪ್ರವೀಣ್‌ ಕಳೆದ 23 ವರ್ಷಗಳಿಂದ ಜೈಲಿನಲ್ಲಿದ್ದು, ಪ್ರಸ್ತುತ ಬಳ್ಳಾರಿ ಜೈಲಿನಲ್ಲಿದ್ದಾನೆ. ಸ್ವಾತಂತ್ಯ್ರೋತ್ಸವದ ಅಮೃತೋತ್ಸವದ ಹಿನ್ನಲೆಯಲ್ಲಿ ಈತನನ್ನು ಕ್ಷಮಧಾನದ ಆಧಾರದಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ. ಆದರೆ, ಇದಕ್ಕೆ ಆತನಿಂದ ಕೊಲೆಯಾದವರ ಕುಟುಂಬದವರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಆತನನ್ನು ಬಿಡುಗಡೆ ಮಾಡದಂತೆ ಕುಟುಂಬಸ್ಥರು ಪೊಲೀಸ್ ಇಲಾಖೆ ಮೊರೆ ಹೋಗಿದ್ದು, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು ಮತ್ತು ಮಂಗಳೂರು ಪೊಲೀಸ್‌ ಕಮಿಷನರರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲುತೀರ್ಮಾನ ಕೈಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ :

Ad Widget

Ad Widget <> Ad Widget

1994ರ ಫೆ.23ರ ಮಧ್ಯರಾತ್ರಿ ವಾಮಂಜೂರು ಪ್ರವೀಣ ತನ್ನ ಅತ್ತೆ (ತಂದೆಯ ತಂಗಿ) ಅಪ್ಪಿ ಶೇರಿಗಾರ್ತಿ (75), ಅತ್ತೆ ಮಗ ಗೋವಿಂದ(30) , ಅತ್ತೆ ಮಗಳು ಶಕುಂತಳಾ(36) ಹಾಗೂ ಶಕುಂತಾಳ ಅವರ ಪುತ್ರಿ ದೀಪಿಕಾಳ ( 9)ನ್ನು ಬರ್ಬರವಾಗಿ ಕೊಲೆ ಮಾಡಿದ್ದ. ಸಾಮೂಹಿಕವಾಗಿ ಮಾಡಿದ ಈ ಹತ್ಯೆ ಪ್ರಕರಣದ ಬಗ್ಗೆ ಕೆಳ ಹಂತದ ನ್ಯಾಯಾಲಯದಿಂದ ಹಿಡಿದು ಸರ್ವೋಚ್ಚ ನ್ಯಾಯಾಲಯ ವರೆಗೂ ಈತನ ಅಪರಾಧ ಸಾಭೀತಾಗಿತ್ತು.

ಪ್ರವೀಣ ವೃತ್ತಿಯಲ್ಲಿ ಟೈಲರ್ ಮಾಡುತ್ತಿದ್ದ. ಮಂಗಳೂರಿನ ಚಿಲಿಂಬಿಯಲ್ಲಿದ್ದ ತಮಿಳು ಮೂಲದ ವ್ಯಕ್ತಿಗೆ ಪ್ರವೀಣ ಮತ್ತು ಆತನ ಪತ್ನಿ ಬಟ್ಟೆ ಹೊಲಿದು ಕೊಡುತ್ತಿದ್ದರು. ಇದಕ್ಕಾಗಿ ಪ್ರವೀಣ ವಾಮಂಜೂರಿನ ತನ್ನ ಸೋದರತ್ತೆ ಅಪ್ಪಿ ಶೇರಿಗಾರ್ತಿ ಮನೆಯಲ್ಲಿ ವಾಸವಿದ್ದ. ಒಂದಂಕಿ ಲಾಟರಿ ಚಟ ಇದ್ದ ಪ್ರವೀಣ ಲಾಟರಿ ತೆಗೆಯಲು ಹಣ ಇಲ್ಲದೆ ಅಲ್ಲಿ, ಇಲ್ಲಿ ಸಾಲ ಸೋಲ ಮಾಡಿದ್ದು, ಹಣ ಖಾಲಿಯಾದಾಗ ಕೊನೆಗೆ ತನ್ನ ಪತ್ನಿ, ಮನೆಯವರ ಚಿನ್ನವನ್ನೇ ಅಡವಿಟ್ಟಿದ್ದ.

Ad Widget

Ad Widget

ಅಪ್ಪಿ ಶೇರಿಗಾರ್ತಿಯ ಪುತ್ರಿ ಶಕುಂತಳಾ ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅಲ್ಲಿಂದ ಆಗಷ್ಟೆ ಬಂದು ಮರಳಿದ್ದರು. ಅತ್ತೆಯ ಅಳಿಯ ವಿದೇಶದಿಂದ ಹಣ ಅಥವಾ ಚಿನ್ನಾಭರಣ ತಂದಿರಬಹುದು ಎಂದು ಪ್ರವೀಣ ಅಂದುಕೊಂಡಿದ್ದ.

ಇದೇ ದುರಾಸೆ ಪ್ರವೀಣನನ್ನು ಸಾಮೂಹಿಕ ಹತ್ಯೆಗೆ ಪ್ರಚೋದಿಸಿತು. ಅಂದು 1994ರ ಫೆ.23ರ ರಾತ್ರಿ ಎಂದಿನಂತೆ ಅತ್ತೆ ಮನೆಗೆ ಹೋದ ಪ್ರವೀಣ ಆಮ್ಲೆಟ್ ಮಾಡಿಸಿ ಅತ್ತೆ ಸೇರಿದಂತೆ ಮನೆಯವರೊಂದಿಗೆ ಸೇರಿ ಊಟ ಮಾಡಿ ಮಲಗಿದ್ದ. ಮಧ್ಯರಾತ್ರಿ ಸಮಯ ಮೊದಲೇ ನಿರ್ಧರಿಸಿದಂತೆ ಪಿಕ್ಕಾಸಿನ ಹಿಡಿ ತೆಗೆದು ಅಪ್ಪಿ ಶೇರಿಗಾರ್ತಿ, ಶಕುಂತಳಾ, ಗೋವಿಂದ ಮತ್ತು ದೀಪಿಕಾಳ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.

ನಾಲ್ವರ ಶವ ಸಂಸ್ಕಾರ ಆಗುವ ಹಂತದಲ್ಲಿದ್ದಾಗಲೇ ಪ್ರವೀಣನ ಮೇಲೆ ಸಂಶಯಪಟ್ಟಿದ್ದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ತೀವ್ರ ‘ವಿಚಾರಣೆ’ ನಡೆಸಿದರು. ವಿಚಾರಣೆಯಲ್ಲಿ ಆತ ಕೊಲೆ ಮಾಡಿದ್ದು ನಾನೇ ಎಂದು ತಪ್ಪೊಪ್ಪಿಕೊಂಡಿದ್ದ. ಅಲ್ಲದೆ ದರೋಡೆ ಮಾಡಿದ್ದ ಚಿನ್ನಾಭರಣಗಳನ್ನು ಅಡಗಿಸಿಟ್ಟಿದ್ದ ಜಾಗವನ್ನು ಪೊಲೀಸರಿಗೆ ತೋರಿಸಿದ್ದ.

ಪೊಲೀಸರ ಕೈಯಿಂದ ಪರಾರಿ

ಆದರೆ ಒಂದೇ ವರ್ಷದಲ್ಲಿ ಆತ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿದ್ದ. ಬೆಳಗಾವಿಯ ಹಿಂಡಲಗಾ ಜೈಲ್‌ನಲ್ಲಿದ್ದ ಪ್ರವೀಣನನ್ನು ಮಂಗಳೂರಿನ ಕೋರ್ಟ್‌ಗೆ ಕರೆತರುವ ಸಂದರ್ಭ ಕಾರವಾರದ ಕಲ್ಲಕಟಿಗೆ ಸಮೀಪ ರಾತ್ರಿ ಊಟಕ್ಕೆ ವಾಹನ ನಿಲ್ಲಿಸಿದ ಸಂದರ್ಭ ಪ್ರವೀಣ ಪರಾರಿಯಾಗಿದ್ದ.

ಗೋವಾದಲ್ಲಿ ಅಡಗಿ ಕೂತಿದ್ದ :

ತಪ್ಪಿಸಿಕೊಂಡಿದ್ದ ಪ್ರವೀಣ ಗೋವಾದಲ್ಲಿ ಅವಿತುಕೊಂಡಿದ್ದ. ಅಲ್ಲಿ ಆತ ಉದ್ಯೋಗಕ್ಕೂ ಸೇರಿ ಯುವತಿಯೊರ್ವಳನ್ನು ವಿವಾಹವಾಗಿದ್ದ. ಹಾಗೂ ದಂಪತಿಗಳಿಗೆ ಮಗುವು ಜನಿಸಿತ್ತು. ಅಲ್ಲಿ ಆತ ಇರುವ ಮಾಹಿತಿ ಪಡೆದ ಮಂಗಳೂರಿನ ರೌಡಿ ನಿಗ್ರಹ ದಳದ ಸಿಬ್ಬಂದಿಗಳು ನಾಲ್ಕು ವರ್ಷದ ಬಳಿಕ ಪ್ರವೀಣನನ್ನು ಮತ್ತೆ ಬಂಧಿಸಿ ಜೈಲಿಗೆ ಅಟ್ಟಿದ್ದರು.

ಗಲ್ಲು ಶಿಕ್ಷೆ

ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪ್ರದಾನ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರವೀಣನ ವಿಚಾರಣೆ ನಡೆದು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಆತ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅಲ್ಲೂ ಕೂಡಾ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿಯಲಾಗಿತ್ತು. ಹೈಕೋರ್ಟ್ ಆದೇಶವನ್ನು ಪ್ರವೀಣ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ. ಆದರೆ ಅಲ್ಲೂ ಕೇಸು ಆತನ ಪರವಾಗಿ ನಿಲ್ಲಲಿಲ್ಲ. 2003ರ ಅಕ್ಟೋಬರ್ 15ರಂದು ಸುಪ್ರೀಂ ಕೋರ್ಟ್‌ನ ಪೀಠ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿತ್ತು.

ಆದರೆ ಇದನ್ನು ಪ್ರಶ್ನಿಸಿದ್ದ ಪ್ರವೀಣ ಕ್ಷಮಾದಾನ ನೀಡುವಂತೆ ರಾಷ್ಟ್ರಪತಿಯಲ್ಲಿ ಭಿನ್ನವಿಸಿಕೊಂಡಿದ್ದ. ಆದರೆ ಸುಧೀರ್ಘ 10 ವರ್ಷಗಳ ಕಾಲ ಈ ಅರ್ಜಿ ರಾಷ್ಟ್ರಪತಿ ಭವನದಲ್ಲಿ ವಿಲೇವಾರಿಯಾಗದೆ ಬಾಕಿ ಉಳಿದಿತ್ತು. ಅಂತಿಮವಾಗಿ ಪ್ರಣಬ್ ಮುಖರ್ಜಿ ರಾಷ್ಟ್ರಪತಿಯಾದ ಬಳಿಕ ಇಂತಹಾ ಅರ್ಜಿಗಳ ವಿಲೇವಾರಿಯನ್ನು ತ್ವರಿತಗತಿಯಾಗಿ ಮಾಡಲಾಗಿ, ಪ್ರವೀಣನ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

ಕೊದಲೆಲೆ ಅಂತರದಲ್ಲಿ ತಪ್ಪಿದ ಜೈಲು ಶಿಕ್ಷೆ

ಆದ್ದರಿಂದ ಈತನಿಗೆ ಗಲ್ಲು ಶಿಕ್ಷೆ ಜಾರಿಯಾಗುವುದು ಖಚಿತವಾಗಿತ್ತು. ಆದರೆ ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕಾರಗೊಂಡ 14 ದಿನಗಳಲ್ಲಿ ಅವರನ್ನು ಗಲ್ಲಿಗೇರಿಸಬೇಕು. ಅದು ಸಾಧ್ಯವಾಗದಿದ್ದರೆ, ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬೇಕು ಎಂದು ಸುಪ್ರೀಂಕೋರ್ಟ್ ನೀಡಿದ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಪ್ರವೀಣ ನೇಣು ಕುಣಿಕೆಯಿಂದ ಕೊದಲೆಲೆ ಅಂತರದಲ್ಲಿ ಬಚಾವ್ ಆಗಿದ್ದ.

ಬಿಡುಗಡೆಗೆ ತೀವ್ರ ಆಕ್ಷೇಪ :

ಇದೀಗ ನಿರಂತರ 23 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿರುವ ಪ್ರವೀಣನನ್ನು ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದ್ದು
ಸಂತ್ರಸ್ತ ಕುಟುಂಬದವರ ಪರವಾಗಿ ಗುರುಪುರದ ಸೀತಾರಾಮ ಅವರು ಆತಂಕ ಹಾಗೂ ಅಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೇವಲ 80,000 ರೂಪಾಯಿ ಹಣದ ಆಸೆಗಾಗಿ ನನ್ನ 75 ವರ್ಷ ಪ್ರಾಯದ ವೃದ್ಧ ತಾಯಿ, 36 ವರ್ಷ ಪ್ರಾಯದ ತಂಗಿ, 30 ವರ್ಷ
ಮಾನಸಿಕ ಅಸ್ವಸ್ಥ ಸಹೋದರ, ಹಾಗೂ 9 ವರ್ಷದ ಮುಗ್ದ ಬಾಲಕಿಯನ್ನು ಅಮಾನುಷವಾಗಿ ಕೊಲೆಗೈದ ಆತ ಜೈಲಿನಿಂದ ಹೊರಗೆ ಬಂದರೆ ಸಮಾಜಕ್ಕೆ ಅಪಾಯವಿದೆ ಎಂಬ ಭೀತಿ ನಮಗಿದೆ.ಸ್ವತಃ ಪ್ರವೀಣನ ಕುಟುಂಬದವರಿಗೂ ಆತ ಜೈಲಿನಿಂದ ಹೊರಗೆ ಬರುವುದರ ಬಗ್ಗೆ ಆತಂಕವಿದೆ.ಆತನನ್ನು ಬಿಡುಗಡೆ ಮಾಡಬಾರದು.ಇಂತಹ ವ್ಯಕ್ತಿಯನ್ನು ಬಿಡುಗಡೆ ಮಾಡುವುದು ಸ್ವಾತಂತ್ರೋತ್ಸವದ ಅಮೃತೋತ್ಸವಕ್ಕೆ ಅವಮಾನ ಎಂದು ಸೀತಾರಾಮರವರು ತಿಳಿಸಿದ್ದಾರೆ.

Ad Widget

ಅಪರಾಧ

Arrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget <> Ad Widget

ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಎಂಬ ಯುವಕನನ್ನು ಆತನ ಸ್ನೇಹಿತ ಶ್ರವಣ್ ಕೊಲೆ ಮಾಡಿ ಬಳಿಕ ತನ್ನ ಊರಾದ ಉತ್ತರ ಪ್ರದೇಶದ ಖುಷಿನಗರಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ. ಪ್ರಕರಣವನ್ನು ವ್ಯವಸ್ಥಿತ ಕೊಲೆ ಎಂದು ಶಂಕಿಸಿ ಮೃತನ ಸಹೋದರ ಸೋನು ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಾಲದ ಇಎಂಐ ಕಟ್ಟಲು ಕೊಲೆ?
ಆರೋಪಿಗೆ ಸಾಲದ ಇಎಂಐ ಪಾವತಿಸಲು ಹಣದ ಅವಶ್ಯಕತೆ ಇದ್ದು, ಸ್ನೇಹಿತ ಮನೀಶ್ ಬಳಿ ಹಣವಿರುವುದನ್ನು ತಿಳಿದುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಮನೀಶ್‌ನ ಮೊಬೈಲ್ ಪಾಸ್‌ವರ್ಡ್‌ಗಳನ್ನು ಮೊದಲೇ ತಿಳಿದುಕೊಂಡಿದ್ದ ಶ್ರವಣ್, ಹಣ ಪಡೆಯುವ ಉದ್ದೇಶದಿಂದ ಆತನನ್ನು ಉಪಾಯವಾಗಿ ಊಟಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

ಖಾತೆಯಿಂದ ₹63,720 ವರ್ಗಾವಣೆ
ಕೊಲೆ ಬಳಿಕ ಮನೀಶ್‌ನ ಬ್ಯಾಂಕ್ ಖಾತೆಯಲ್ಲಿದ್ದ ₹63,720 ಹಣವನ್ನು ರಾಜನ್ ಎಂಬ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಬಳಿಕ ರಾಜನ್ ಮೂಲಕ ತನ್ನ ಖಾತೆಗೆ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಹಣ ವರ್ಗಾವಣೆಯ ಸುಳಿವು ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.

ಸಿಸಿಟಿವಿ ದೃಶ್ಯಗಳಿಂದ ಸುಳಿವು
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅ.27ರಂದು ಮನೀಶ್ ಮತ್ತು ಶ್ರವಣ್ ಒಟ್ಟಿಗೆ ತೆರಳಿರುವುದು ಹಾಗೂ ಬಳಿಕ ಶ್ರವಣ್ ಒಬ್ಬನೇ ವಾಪಸ್ ಬಂದಿರುವುದು ಕಂಡುಬಂದಿತ್ತು. ಈ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು.

ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ ಪೊಲೀಸರಿಗೆ ಅಸ್ಥಿಪಂಜರದ ತುಂಡುಗಳು ಹಾಗೂ ತಲೆಬುರುಡೆಯ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲಿ ದೊರೆತ ಶರ್ಟ್ ಮತ್ತು ಪ್ಯಾಂಟ್‌ಗಳನ್ನು ಮೃತನ ಸಹೋದರ ಸೋನು ಶರ್ಮಾ ಗುರುತಿಸಿದ್ದರು.

ಆರೋಪಿಯನ್ನು ಉತ್ತರ ಪ್ರದೇಶದಿಂದ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget
Continue Reading

ಅಂತರ ರಾಜ್ಯ

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

Published

on

Ad Widget

Ad Widget

Ad Widget

Ad Widget

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget

Ad Widget

Ad Widget

ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget alt="Ad Widget"/>

Ad Widget

ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Ad Widget

Ad Widget <> Ad Widget

ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.

ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.

Ad Widget

Ad Widget

ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.

ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.

ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!