ಶಿಕ್ಷಣ
Philomena-ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ವತಿಯಿಂದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಯನ್ನು ಶನಿವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ಅವರು ಸ್ನಾತಕೋತ್ತರ (ಪಿಜಿ) ಗ್ರಂಥಾಲಯದಲ್ಲಿ 10 ದಿನಗಳ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು.
ಪುತ್ತೂರು, ನ. 14: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ವತಿಯಿಂದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಯನ್ನು ಶನಿವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು.
ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ಅವರು ಸ್ನಾತಕೋತ್ತರ (ಪಿಜಿ) ಗ್ರಂಥಾಲಯದಲ್ಲಿ 10 ದಿನಗಳ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು. ಈ ಪ್ರದರ್ಶನದಲ್ಲಿ ಖ್ಯಾತ ಲೇಖಕರ ಕಲೆ, ಸಾಹಿತ್ಯ, ಜೀವನಚರಿತ್ರೆ, ವ್ಯಕ್ತಿತ್ವ ವಿಕಸನ ಹಾಗೂ ಕೆಎಎಸ್ (KAS), ಐಎಎಸ್ (IAS), ಬ್ಯಾಂಕಿಂಗ್, ಆರ್‌ಆರ್‌ಬಿ (RRB), ಪೊಲೀಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ 750ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

ಉದ್ಘಾಟನಾ ಭಾಷಣ ಮಾಡಿದ ಡಾ. ವಿಜಯಕುಮಾರ್ ಎಂ ಅವರು, ವಿದ್ಯಾರ್ಥಿಗಳಲ್ಲಿ ಓದುವ ಮತ್ತು ಬರೆಯುವ ಹವ್ಯಾಸವನ್ನು ಬೆಳೆಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳನ್ನು ಕಾಲೇಜಿನಲ್ಲಿ ‘ಗ್ರಂಥಾಲಯ ಮಾಸ’ವನ್ನಾಗಿ ಆಚರಿಸುವ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಮೊಬೈಲ್ ಫೋನ್‌ಗಳು ಮತ್ತು ಆನ್‌ಲೈನ್ ಗೇಮ್‌ಗಳಿಂದ ದೂರವಿದ್ದು, ಪುಸ್ತಕಗಳ ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿ, ಪುಸ್ತಕಗಳ ಓದು ಸಮಾಜದಲ್ಲಿ ಮುನ್ನಡೆಯಲು ಮತ್ತು ಯಶಸ್ಸು ಸಾಧಿಸಲು ಅಗತ್ಯವಾದ ಅಮೂಲ್ಯ ಒಳನೋಟಗಳು ಹಾಗೂ ದೃಷ್ಟಿಕೋನಗಳನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.
ಸಪ್ತಾಹದ ಪೂರ್ವಭಾವಿಯಾಗಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಿಂದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಕ್ಟೋಬರ್ 5ರಂದು ಪ್ರದರ್ಶನ ಕಲಾ ಸಂಘದ ಸಹಯೋಗದಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ ಮತ್ತು ಅಕ್ಟೋಬರ್ 22ರಂದು ಹಿಂದಿ ವಿಭಾಗದ ಸಹಯೋಗದಲ್ಲಿ ಹಿಂದಿ ಭಾಷಣ ಸ್ಪರ್ಧೆ ನಡೆಸಲಾಗಿತ್ತು.
ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಡಾ. ವಿನಯಚಂದ್ರ, ಐಕ್ಯೂಎಸಿ ಸಂಯೋಜಕ ಹಾಗೂ ಹಣಕಾಸು ಅಧಿಕಾರಿ ಡಾ. ಎಡ್ವಿನ್ ಡಿ’ಸೋಜಾ, ಕಚೇರಿ ಅಧೀಕ್ಷಕಿ ರುಫಿನಾ ಡಿ’ಸೋಜಾ, ಪ್ರಾಧ್ಯಾಪಕರು ಹಾಗೂ ಗ್ರಂಥಾಲಯ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಆಯ್ಕೆ ಶ್ರೇಣಿ ಗ್ರಂಥಪಾಲಕ ಅಬ್ದುಲ್ ರೆಹಮಾನ್ ಜಿ. ಸ್ವಾಗತಿಸಿದರು. ಪಿ.ಜಿ ಗ್ರಂಥಪಾಲಕ ಮನೋಹರ್ ಎಸ್.ಜಿ. ವಂದಿಸಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮಣಿ ನಿರೂಪಿಸಿದರು. ಗ್ರಂಥಾಲಯ ಸಿಬ್ಬಂದಿ ಝೀಟಾ ನೊರೊನ್ಹಾ, ಕ್ಯಾಥರೀನ್ ಕ್ರಾಸ್ತಾ ಹಾಗೂ ಪ್ರಥಮ ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು ಪ್ರದರ್ಶನದ ವ್ಯವಸ್ಥೆಗೆ ಸಹಕರಿಸಿದರು.
ಶಿಕ್ಷಣ
Philomena-ಚರ್ಚಾ ಸ್ಪರ್ಧೆ: ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಜೀತನ್ ಗೆ ಪ್ರಶಸ್ತಿ
ಜಿಲ್ಲಾ ಸಹಕಾರಿ ಯೂನಿಯನ್ ನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯ
ಪುತ್ತೂರು: ಜಿಲ್ಲಾ ಸಹಕಾರಿ ಯೂನಿಯನ್ ನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
ಶಿಕ್ಷಣ
Dr. S.V. Prasad-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಡಾ.ಎಸ್.ವಿ.ಪ್ರಸಾದ್ ಅವರಿಗೆ ಪೋಸ್ಟ್ ಡಾಕ್ಟರಲ್ ಫೆಲೋಶಿಪ್
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್(ಡಾಟಾ ಸೈನ್ಸ್) ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಎಸ್.ವಿ.ಪ್ರಸಾದ್ ಅವರು ಮಂಗಳೂರಿನ ಶ್ರೀನಿವಾಸ್ ಯುನಿವರ್ಸಿಟಿಯಿಂದ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್(ಡಾಟಾ ಸೈನ್ಸ್) ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಎಸ್.ವಿ.ಪ್ರಸಾದ್ ಅವರು ಮಂಗಳೂರಿನ ಶ್ರೀನಿವಾಸ್ ಯುನಿವರ್ಸಿಟಿಯಿಂದ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ.
ಶ್ರೀನಿವಾಸ್ ಯುನಿವರ್ಸಿಟಿಯ ಕುಲಪತಿ ಡಾ.ಕೆ.ಸತ್ಯನಾರಾಯಣ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಇಲೆಕ್ಟ್ರಾನಿಕ್ಸ್ಎಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ ನಡೆಸಿದ ಸಂಶೋಧನೆಗೆ ಈ ಪ್ರಮಾಣಪತ್ರವು ಸಿಕ್ಕಿದೆ. ವೇದ ಗಣಿತವನ್ನು ಬಳಸಿಕೊಂಡು ಡಿಜಿಟಲ್ ಸಿಗ್ನಲ್ ಪ್ರಾಸೆಸಿಂಗ್ ಅನ್ವಯಿಕೆಗಳಿಗಾಗಿ ಹೆಚ್ಚಿನ ಕಾರ್ಯಕ್ಷಮತೆಯ ಫ್ಲೋಟಿಂಗ್ ಪಾಯಿಂಟ್ ಗುಣಕಗಳ ವಿನ್ಯಾಸ ಮತ್ತು ಅನುಷ್ಟಾನ ಎನ್ನುವ ವಿಷಯದ ಬಗ್ಗೆ ಅವರು ಸಂಶೊಧನಾ ಪ್ರಬಂಧವನ್ನು ಮಂಡಿಸಿದ್ದಾರೆ.
ಡಿಜಿಟಲ್ ಸಿಗ್ನಲ್ ಪ್ರಾಸೆಸಿಂಗ್ ವಿಷಯಕ್ಕೆ ಉಪಯುಕ್ತವಾಗುವ ಇವರ ಈ ಶೈಕ್ಷಣಿಕ ಹಾಗೂ ಸಂಶೋಧನಾ ಸಾಧನೆಗೆ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.
ಶಿಕ್ಷಣ
Vivekananda-ವಿಟಿಯು ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ 1 ಚಿನ್ನ, 1 ಬೆಳ್ಳಿ ಹಾಗೂ 2 ಕಂಚಿನ ಪದಕಗಳ ಸಾಧನೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಒಂದು ಚಿನ್ನ, ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಗಳಿಸಿಕೊಂಡಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಒಂದು ಚಿನ್ನ, ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಗಳಿಸಿಕೊಂಡಿದ್ದಾರೆ.
ಮೂಡಬಿದ್ರೆಯ ಯೇನಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‌ರಾಮ್ ಜಗದೀಶ್ ಭಂಡಾರಿ 75 ಕೆಜಿ ವಿಭಾಗದ ಸ್ನಾಚ್‌ನಲ್ಲಿ 93 ಕೆಜಿ ಕ್ಲೀನ್ ಎಂಡ್ ಜರ್ಕ್ನಲ್ಲಿ 110ಕೆಜಿ ಹೀಗೆ ಒಟ್ಟು 203 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕದ ಸಾಧನೆಯನ್ನು ಮಾಡಿದ್ದಾರೆ.
ತೃತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಗೌರವ್.ಎಸ್.ಜಿ 85 ಕೆಜಿ ವಿಭಾಗದ ಸ್ನಾಚ್‌ನಲ್ಲಿ 70 ಕೆಜಿ ಕ್ಲೀನ್ ಎಂಡ್ ಜರ್ಕ್ನಲ್ಲಿ 82ಕೆಜಿ ಹೀಗೆ ಒಟ್ಟು 152ಕೆಜಿ ಭಾರ ಎತ್ತುವುದರ ಮೂಲಕ ರಜತ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ತೃತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಎಂ.ವಿಜೇತ್ ಪೂಜಾರಿ 75 ಕೆಜಿ ವಿಭಾಗದ ಸ್ನಾಚ್‌ನಲ್ಲಿ 60 ಕೆಜಿ ಕ್ಲೀನ್ ಎಂಡ್ ಜರ್ಕ್ನಲ್ಲಿ 83 ಕೆಜಿ ಹೀಗೆ ಒಟ್ಟು 143 ಕೆಜಿ ಭಾರ ಎತ್ತುವುದರ ಮೂಲಕ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
65 ಕೆಜಿ ವಿಭಾಗದಲ್ಲಿ ಅಂತಿಮ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದ ಸ್ಕಂದ ಪ್ರಸಾದ್ ಸ್ನಾಚ್‌ನಲ್ಲಿ 76ಕೆಜಿ ಕ್ಲೀನ್ ಎಂಡ್ ಜರ್ಕ್ನಲ್ಲಿ 88 ಕೆಜಿ ಹೀಗೆ ಒಟ್ಟು 164 ಕೆಜಿ ಭಾರ ಎತ್ತುವುದರ ಮೂಲಕ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್‌ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
-
ಸ್ಥಳೀಯ16 hours agoMandya-ಕೊಲೆಯಾಗಿದ್ದಾಳೆಂದು ಭಾವಿಸಿದ್ದ ಮಹಿಳೆ 6 ವರ್ಷಗಳ ಬಳಿಕ ಜೀವಂತ ಪ್ರತ್ಯಕ್ಷ..! ಮಾಡದ ತಪ್ಪಿಗೆ ಎರಡೂವರೆ ವರ್ಷ ಜೈಲಿನಲ್ಲಿದ್ದ ವ್ಯಕ್ತಿ
-
ಲೇಖನಗಳು14 hours agoRahu-Ketu-18 ತಿಂಗಳ ಬಳಿಕ ರಾಹು-ಕೇತು ರಾಶಿ ಬದಲಾವಣೆ; 12 ರಾಶಿಗಳ ಭವಿಷ್ಯ ಹೇಗಿರಲಿದೆ?
-
ಸ್ಥಳೀಯ17 hours agoMurder-26 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕೊಲೆ ಆರೋಪಿ..!
-
ಕ್ರೈಂ16 hours agoMurder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!
-
ಅಂತರ ರಾಜ್ಯ15 hours agoCommander-ನಗ್ನ ಚಿತ್ರಗಳ ಆಮಿಷಕ್ಕೆ ಬಲಿಯಾದ ವಾಯುಪಡೆ ವಿಂಗ್ ಕಮಾಂಡರ್: ಪಾಕ್ ಏಜೆಂಟ್ಗೆ ರಹಸ್ಯ ಯುದ್ಧ ಮಾಹಿತಿ ಸೋರಿಕೆ..!
-
Uncategorized11 hours agoSoujanya case-Big Breaking: ಸೌಜನ್ಯ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
-
ಆರೋಗ್ಯ15 hours ago‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
-
ಅಪರಾಧ17 hours agoPanambur Beach-ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿಗರು ವಶಕ್ಕೆ















