ದಕ್ಷಿಣ ಕನ್ನಡ
Ashoka Janamana 2026 : ಒಂದು ಲಕ್ಷ ಜನರಿಗೆ ಆತಿಥ್ಯ, ಉಡುಗೊರೆ ಸಿದ್ಧ! ನ.22ಕ್ಕೆ ಪುತ್ತೂರಿನಲ್ಲಿ ಅಶೋಕ ಜನಮನ

ಪುತ್ತೂರು: ಕಳೆದ 14 ವರ್ಷಗಳಿಂದ ಪ್ರತೀ ದೀಪಾವಳಿಯ ಸಂದರ್ಭದಲ್ಲಿ ತಮ್ಮ ಸ್ವಂತ ಉದ್ಯಮದ ಆದಾಯದ ಒಂದು ಭಾಗವನ್ನು ಬಡವರಿಗೆ ಹಂಚುವ ಕಾರ್ಯ ಮಾಡುತ್ತಾ ಬಂದಿದ್ದೇನೆ. ಇದು ಅಹಂಕಾರದಿಂದ ಮಾಡುತ್ತಿರುವ ಕಾರ್ಯಕ್ರಮವಲ್ಲ. ದೇವರು ಎಷ್ಟು ವರ್ಷ ಈ ಸೇವೆ ಮಾಡುವ ಶಕ್ತಿ ನೀಡುತ್ತಾನೋ ಅಷ್ಟು ವರ್ಷ ಮುಂದುವರಿಸುತ್ತೇನೆ. ಅಶೋಕ ಜನಮನ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಶೀರ್ವದಿಸುವುದೇ ನನಗೆ ಮತ್ತಷ್ಟು ಸೇವೆ ಮಾಡಲು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪೂರ್ವಸಿದ್ಧತೆ ಹಾಗೂ ವಿವಿಧ ಸಮಿತಿಗಳ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಅಂತಿಮ ಹಂತದಲ್ಲಿ ಸಿದ್ಧತೆ
ಅಶೋಕ ಜನಮನ ಕಾರ್ಯಕ್ರಮಕ್ಕಾಗಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಚಪ್ಪರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಊಟದ ವ್ಯವಸ್ಥೆ, ಉಡುಗೊರೆ ವಿತರಣೆ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಪ್ರತ್ಯೇಕವಾಗಿ ರೂಪಿಸಲಾಗಿದೆ. ಹಿರಿಯ ನಾಗರಿಕರು ಹಾಗೂ ಅಶಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಕಾರ್ಯಕ್ರಮದ ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿದ್ದು, ಗ್ರಾಮಗಳಿಗೆ ತೆರಳಿ ಆಹ್ವಾನಿಸುವ ಕಾರ್ಯ, ಪ್ರಚಾರ ಹಾಗೂ ಪ್ರಸಾರ ಚಟುವಟಿಕೆಗಳು ಮುಂದುವರಿದಿವೆ.
ಸಭೆಯಲ್ಲಿ ಟ್ರಸ್ಟ್ ಪ್ರಮುಖರಾದ ಸುಮಾ ಅಶೋಕ್ ರೈ, ಮಹಮ್ಮದ್ ಬಡಗನ್ನೂರು, ಡಾ. ರಾಜಾರಾಂ ಕೆ.ಬಿ., ಮುರಳೀಧರ ರೈ ಮಟಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ, ಯು.ಟಿ. ತೌಸೀಫ್ ಉಪ್ಪಿನಂಗಡಿ, ಕೃಷ್ಣಪ್ರಸಾದ್ ಆಳ್ವ, ಜಯಪ್ರಕಾಶ್ ಬದಿನಾರ್, ಕೃಷ್ಣಪ್ರಸಾದ್ ಭಟ್ ಬೊಳ್ಳಾವು, ರಿತೇಶ್ ಶೆಟ್ಟಿ ಪುತ್ತೂರು, ನಿಹಾಲ್ ಪಿ. ಶೆಟ್ಟಿ ಸಾಮೆತ್ತಡ್ಕ, ಯೋಗೀಶ್ ಸಾಮಾನಿ, ರಾಧಾಕೃಷ್ಣ ನಾಯ್ಕ್, ರಾಮಣ್ಣ ಪಿಲಿಂಜ ಉಪ್ಪಿನಂಗಡಿ, ಸುದೇಶ್ ಶೆಟ್ಟಿ ಸೇರಿದಂತೆ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.
ಶಿಕ್ಷಣ
Philomena-ಚರ್ಚಾ ಸ್ಪರ್ಧೆ: ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಜೀತನ್ ಗೆ ಪ್ರಶಸ್ತಿ
ಜಿಲ್ಲಾ ಸಹಕಾರಿ ಯೂನಿಯನ್ ನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯ
ಪುತ್ತೂರು: ಜಿಲ್ಲಾ ಸಹಕಾರಿ ಯೂನಿಯನ್ ನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
ಶಿಕ್ಷಣ
Philomena-ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ವತಿಯಿಂದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಯನ್ನು ಶನಿವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ಅವರು ಸ್ನಾತಕೋತ್ತರ (ಪಿಜಿ) ಗ್ರಂಥಾಲಯದಲ್ಲಿ 10 ದಿನಗಳ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು.
ಪುತ್ತೂರು, ನ. 14: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ವತಿಯಿಂದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಯನ್ನು ಶನಿವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು.
ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ಅವರು ಸ್ನಾತಕೋತ್ತರ (ಪಿಜಿ) ಗ್ರಂಥಾಲಯದಲ್ಲಿ 10 ದಿನಗಳ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು. ಈ ಪ್ರದರ್ಶನದಲ್ಲಿ ಖ್ಯಾತ ಲೇಖಕರ ಕಲೆ, ಸಾಹಿತ್ಯ, ಜೀವನಚರಿತ್ರೆ, ವ್ಯಕ್ತಿತ್ವ ವಿಕಸನ ಹಾಗೂ ಕೆಎಎಸ್ (KAS), ಐಎಎಸ್ (IAS), ಬ್ಯಾಂಕಿಂಗ್, ಆರ್‌ಆರ್‌ಬಿ (RRB), ಪೊಲೀಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ 750ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

ಉದ್ಘಾಟನಾ ಭಾಷಣ ಮಾಡಿದ ಡಾ. ವಿಜಯಕುಮಾರ್ ಎಂ ಅವರು, ವಿದ್ಯಾರ್ಥಿಗಳಲ್ಲಿ ಓದುವ ಮತ್ತು ಬರೆಯುವ ಹವ್ಯಾಸವನ್ನು ಬೆಳೆಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳನ್ನು ಕಾಲೇಜಿನಲ್ಲಿ ‘ಗ್ರಂಥಾಲಯ ಮಾಸ’ವನ್ನಾಗಿ ಆಚರಿಸುವ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಮೊಬೈಲ್ ಫೋನ್‌ಗಳು ಮತ್ತು ಆನ್‌ಲೈನ್ ಗೇಮ್‌ಗಳಿಂದ ದೂರವಿದ್ದು, ಪುಸ್ತಕಗಳ ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿ, ಪುಸ್ತಕಗಳ ಓದು ಸಮಾಜದಲ್ಲಿ ಮುನ್ನಡೆಯಲು ಮತ್ತು ಯಶಸ್ಸು ಸಾಧಿಸಲು ಅಗತ್ಯವಾದ ಅಮೂಲ್ಯ ಒಳನೋಟಗಳು ಹಾಗೂ ದೃಷ್ಟಿಕೋನಗಳನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.
ಸಪ್ತಾಹದ ಪೂರ್ವಭಾವಿಯಾಗಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಿಂದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಕ್ಟೋಬರ್ 5ರಂದು ಪ್ರದರ್ಶನ ಕಲಾ ಸಂಘದ ಸಹಯೋಗದಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ ಮತ್ತು ಅಕ್ಟೋಬರ್ 22ರಂದು ಹಿಂದಿ ವಿಭಾಗದ ಸಹಯೋಗದಲ್ಲಿ ಹಿಂದಿ ಭಾಷಣ ಸ್ಪರ್ಧೆ ನಡೆಸಲಾಗಿತ್ತು.
ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಡಾ. ವಿನಯಚಂದ್ರ, ಐಕ್ಯೂಎಸಿ ಸಂಯೋಜಕ ಹಾಗೂ ಹಣಕಾಸು ಅಧಿಕಾರಿ ಡಾ. ಎಡ್ವಿನ್ ಡಿ’ಸೋಜಾ, ಕಚೇರಿ ಅಧೀಕ್ಷಕಿ ರುಫಿನಾ ಡಿ’ಸೋಜಾ, ಪ್ರಾಧ್ಯಾಪಕರು ಹಾಗೂ ಗ್ರಂಥಾಲಯ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಆಯ್ಕೆ ಶ್ರೇಣಿ ಗ್ರಂಥಪಾಲಕ ಅಬ್ದುಲ್ ರೆಹಮಾನ್ ಜಿ. ಸ್ವಾಗತಿಸಿದರು. ಪಿ.ಜಿ ಗ್ರಂಥಪಾಲಕ ಮನೋಹರ್ ಎಸ್.ಜಿ. ವಂದಿಸಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮಣಿ ನಿರೂಪಿಸಿದರು. ಗ್ರಂಥಾಲಯ ಸಿಬ್ಬಂದಿ ಝೀಟಾ ನೊರೊನ್ಹಾ, ಕ್ಯಾಥರೀನ್ ಕ್ರಾಸ್ತಾ ಹಾಗೂ ಪ್ರಥಮ ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು ಪ್ರದರ್ಶನದ ವ್ಯವಸ್ಥೆಗೆ ಸಹಕರಿಸಿದರು.
ಶಿಕ್ಷಣ
Dr. S.V. Prasad-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಡಾ.ಎಸ್.ವಿ.ಪ್ರಸಾದ್ ಅವರಿಗೆ ಪೋಸ್ಟ್ ಡಾಕ್ಟರಲ್ ಫೆಲೋಶಿಪ್
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್(ಡಾಟಾ ಸೈನ್ಸ್) ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಎಸ್.ವಿ.ಪ್ರಸಾದ್ ಅವರು ಮಂಗಳೂರಿನ ಶ್ರೀನಿವಾಸ್ ಯುನಿವರ್ಸಿಟಿಯಿಂದ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್(ಡಾಟಾ ಸೈನ್ಸ್) ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಎಸ್.ವಿ.ಪ್ರಸಾದ್ ಅವರು ಮಂಗಳೂರಿನ ಶ್ರೀನಿವಾಸ್ ಯುನಿವರ್ಸಿಟಿಯಿಂದ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ.
ಶ್ರೀನಿವಾಸ್ ಯುನಿವರ್ಸಿಟಿಯ ಕುಲಪತಿ ಡಾ.ಕೆ.ಸತ್ಯನಾರಾಯಣ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಇಲೆಕ್ಟ್ರಾನಿಕ್ಸ್ಎಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ ನಡೆಸಿದ ಸಂಶೋಧನೆಗೆ ಈ ಪ್ರಮಾಣಪತ್ರವು ಸಿಕ್ಕಿದೆ. ವೇದ ಗಣಿತವನ್ನು ಬಳಸಿಕೊಂಡು ಡಿಜಿಟಲ್ ಸಿಗ್ನಲ್ ಪ್ರಾಸೆಸಿಂಗ್ ಅನ್ವಯಿಕೆಗಳಿಗಾಗಿ ಹೆಚ್ಚಿನ ಕಾರ್ಯಕ್ಷಮತೆಯ ಫ್ಲೋಟಿಂಗ್ ಪಾಯಿಂಟ್ ಗುಣಕಗಳ ವಿನ್ಯಾಸ ಮತ್ತು ಅನುಷ್ಟಾನ ಎನ್ನುವ ವಿಷಯದ ಬಗ್ಗೆ ಅವರು ಸಂಶೊಧನಾ ಪ್ರಬಂಧವನ್ನು ಮಂಡಿಸಿದ್ದಾರೆ.
ಡಿಜಿಟಲ್ ಸಿಗ್ನಲ್ ಪ್ರಾಸೆಸಿಂಗ್ ವಿಷಯಕ್ಕೆ ಉಪಯುಕ್ತವಾಗುವ ಇವರ ಈ ಶೈಕ್ಷಣಿಕ ಹಾಗೂ ಸಂಶೋಧನಾ ಸಾಧನೆಗೆ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.
-
ಸ್ಥಳೀಯ10 hours agoMandya-ಕೊಲೆಯಾಗಿದ್ದಾಳೆಂದು ಭಾವಿಸಿದ್ದ ಮಹಿಳೆ 6 ವರ್ಷಗಳ ಬಳಿಕ ಜೀವಂತ ಪ್ರತ್ಯಕ್ಷ..! ಮಾಡದ ತಪ್ಪಿಗೆ ಎರಡೂವರೆ ವರ್ಷ ಜೈಲಿನಲ್ಲಿದ್ದ ವ್ಯಕ್ತಿ
-
ಸ್ಥಳೀಯ11 hours agoMurder-26 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕೊಲೆ ಆರೋಪಿ..!
-
ಲೇಖನಗಳು8 hours agoRahu-Ketu-18 ತಿಂಗಳ ಬಳಿಕ ರಾಹು-ಕೇತು ರಾಶಿ ಬದಲಾವಣೆ; 12 ರಾಶಿಗಳ ಭವಿಷ್ಯ ಹೇಗಿರಲಿದೆ?
-
ಕ್ರೈಂ10 hours agoMurder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!
-
ಅಂತರ ರಾಜ್ಯ10 hours agoCommander-ನಗ್ನ ಚಿತ್ರಗಳ ಆಮಿಷಕ್ಕೆ ಬಲಿಯಾದ ವಾಯುಪಡೆ ವಿಂಗ್ ಕಮಾಂಡರ್: ಪಾಕ್ ಏಜೆಂಟ್ಗೆ ರಹಸ್ಯ ಯುದ್ಧ ಮಾಹಿತಿ ಸೋರಿಕೆ..!
-
ಆರೋಗ್ಯ9 hours ago‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
-
ಅಪರಾಧ11 hours agoPanambur Beach-ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿಗರು ವಶಕ್ಕೆ
-
Uncategorized6 hours agoSoujanya case-Big Breaking: ಸೌಜನ್ಯ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು















