Connect with us

ದಕ್ಷಿಣ ಕನ್ನಡ

Harish Poonja School Political Speech, ಶಾಲಾ ಮಕ್ಕಳಿಗೆ ಬಿಜೆಪಿ ಶಾಸಕನ ರಾಜಕೀಯ ಪಾಠ! ಕಾಂಗ್ರೆಸ್‌ನಂತಹ ದರಿದ್ರ ಪಕ್ಷದ ಹಿಂದೆ ಹೋಗಬೇಡಿ ಮಕ್ಕಳೇ’ ಎಂಬ ಹೇಳಿಕೆ ಹೊತ್ತಿಸಿದೆ ವಿವಾದದ ಕಿಡಿ

Published

on



Ad Widget

Ad Widget

Ad Widget

Ad Widget

ಶಾಲೆಯೋ, ರಾಜಕೀಯ ವೇದಿಕೆಯೋ ? ವಿಡಿಯೋ ವೈರಲ್ ಬೆನ್ನಲ್ಲೇ ಶಿಕ್ಷಣ ಪ್ರೇಮಿಗಳು, ಪ್ರಜ್ಞಾವಂತರು ಹಾಗೂ ಕಾಂಗ್ರೆಸ್ ಮುಖಂಡರಿಂದ ಆಕ್ರೋಶ

–

Ad Widget

Ad Widget

Ad Widget

ಮಂಗಳೂರು: ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಜ್ಞಾನ, ಸಂಸ್ಕಾರ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಡುವ ಪವಿತ್ರ ಕೇಂದ್ರಗಳು. ಆದರೆ, ಇಂತಹ ಶಿಕ್ಷಣ ಸಂಸ್ಥೆಗಳ ವೇದಿಕೆಯನ್ನು ರಾಜಕೀಯ ವಾಗ್ವಾದಗಳಿಗೆ ಬಳಸಿಕೊಳ್ಳುವುದು ಎಷ್ಟು ಸರಿ? ಶಾಲಾ ಮಕ್ಕಳ ಎದುರೇ ರಾಜಕೀಯ ಪಕ್ಷವೊಂದರ ವಿರುದ್ಧ ವಾಗ್ದಾಳಿ ನಡೆಸಿ, ನಿರ್ದಿಷ್ಟ ಪಕ್ಷವನ್ನು ಬೆಂಬಲಿಸದಂತೆ ಕರೆ ನೀಡಿದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಭಾಷಣ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಶಿಕ್ಷಣ ಪ್ರೇಮಿಗಳು, ಪ್ರಜ್ಞಾವಂತ ನಾಗರಿಕರು ಹಾಗೂ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಂತಹ ಶಿಕ್ಷಣ ಸಂಸ್ಥೆಯೊಳಗೆ ರಾಜಕೀಯವನ್ನು ತಂದು ಮಕ್ಕಳ ಮನಸ್ಸಿನಲ್ಲಿ ಪಕ್ಷ ರಾಜಕಾರಣದ ವಿಚಾರಗಳನ್ನು ಬಿತ್ತುವ ಪ್ರಯತ್ನ ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget <> Ad Widget

ಏನಿದು ವಿವಾದ?



Ad Widget

ಶಾಲೆಯ ನೂತನ ಸಭಾಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರದಿಂದ ವಿವಾದ ಆರಂಭವಾಗಿತ್ತು. ಸರ್ಕಾರದ ಅನುಮತಿ ಪಡೆಯದೆ ಸಭಾಭವನಕ್ಕೆ ನರೇಂದ್ರ ಮೋದಿ ಅವರ ಹೆಸರು ಇಟ್ಟಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಆಕ್ಷೇಪ ವ್ಯಕ್ತಪಡಿಸಿತ್ತು ಎನ್ನಲಾಗಿದೆ. ಶಿಕ್ಷಣ ಇಲಾಖೆಯ ಸೂಚನೆಯ ಬೆನ್ನಲ್ಲೇ ನಿಗದಿಯಾಗಿದ್ದ ಉದ್ಘಾಟನಾ ಕಾರ್ಯಕ್ರಮ ರದ್ದಾಗಿತ್ತು. ಈ ಬೆಳವಣಿಗೆಯಿಂದ ಅಸಮಾಧಾನಗೊಂಡಿದ್ದ ಶಾಸಕ ಹರೀಶ್ ಪೂಂಜಾ, ಬಳಿಕ ನಡೆದ ಅಭಿನಂದನಾ ಸಮಾರಂಭದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

Ad Widget

Ad Widget

ಮಕ್ಕಳ ಎದುರೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ!

ಭಾಷಣದ ವೇಳೆ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡ ಶಾಸಕ, ‘ಕಾಂಗ್ರೆಸ್‌ನಂತಹ ದರಿದ್ರ ಪಕ್ಷದ ಹಿಂದೆ ನೀವು ಯಾವತ್ತೂ ಹೋಗಬೇಡಿ ಮಕ್ಕಳೇ. ಇಂತಹ ದರಿದ್ರ ಕೆಟ್ಟ ಪಕ್ಷವನ್ನು ಯಾವತ್ತೂ ನೆಚ್ಚಿಕೊಂಡು ಹೋಗಬೇಡಿ’ ಎಂದು ವಿದ್ಯಾರ್ಥಿಗಳಿಗೆ ಹೇಳಿದ್ದಾರೆ.

‘ಈ ದೇಶ ಇರುವುದು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ. ನಿಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಯಾರು ತೊಂದರೆ ಕೊಡುತ್ತಿದ್ದಾರೋ ಅವರ ಹಿಂದೆ ಹೋಗಬೇಡಿ. ಎಲ್ಲಿಂದಾದರೂ ಕಾಡಿ ಬೇಡಿ ಅನುದಾನ ತಂದು ಶಾಲೆಯನ್ನು ಅಭಿವೃದ್ಧಿಪಡಿಸುತ್ತೇನೆ. ಮುಂದೊಂದು ದಿನ ಒಳ್ಳೆಯ ಕಾರ್ಯಕ್ರಮ ಸಂಘಟಿಸಿ ಎಲ್ಲರಿಗೂ ಉತ್ತರ ಕೊಡುವ ಕೆಲಸ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಇದೇ ವೇಳೆ, ‘ನಾನು ಬಸವನಗುಡಿಯ ದೇವರಿಗೆ ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ. ಇಂತಹ ದುಷ್ಟ ಬುದ್ಧಿಗಳಿಗೆ ಆದಷ್ಟು ಬೇಗ ಮುಕ್ತಿ ಕೊಡು’ ಎಂದು ಪ್ರಾರ್ಥಿಸುವುದಾಗಿ ಹೇಳಿರುವ ಅವರು, ‘ಶಾಲೆಯಲ್ಲಿ ರಾಜಕಾರಣ ಮಾಡಲು ಬರಬೇಡಿ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಲು ಬರಬೇಡಿ. ಹಾಗೆ ಮಾಡಲು ಬಂದರೆ ಆ ಬಸವೇಶ್ವರ ನಿಮ್ಮನ್ನು ಭಸ್ಮ ಮಾಡದೆ ಬಿಡನು’ ಎಂಬ ಮಾತುಗಳನ್ನೂ ಆಡಿದ್ದಾರೆ. ಭಾಷಣದ ಕೊನೆಯಲ್ಲಿ ನರೇಂದ್ರ ಮೋದಿ ಅವರಿಗೆ ಜೈಕಾರವನ್ನೂ ಹಾಕಿಸಿದ್ದಾರೆ.

ವಿಡಿಯೋ ವೈರಲ್: ಶಿಕ್ಷಣ ಪ್ರೇಮಿಗಳ ಆಕ್ರೋಶ

ಶಾಸಕರ ಈ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಪರ-ವಿರೋಧದ ಚರ್ಚೆ ಆರಂಭವಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ರಾಜಕೀಯ ಪಕ್ಷಗಳ ಪರ-ವಿರೋಧದ ಪ್ರಚಾರಕ್ಕೆ ಅವಕಾಶ ನೀಡಬಾರದು. ಶಾಲೆಯ ಮಕ್ಕಳಿಗೆ ರಾಜಕೀಯ ಪಕ್ಷಗಳ ಬಗ್ಗೆ ಅಭಿಪ್ರಾಯ ರೂಪಿಸುವ ಬದಲು ಶಿಕ್ಷಣ, ಶಿಸ್ತು, ಮಾನವೀಯ ಮೌಲ್ಯಗಳು ಹಾಗೂ ಪ್ರಜಾಸತ್ತಾತ್ಮಕ ಚಿಂತನೆಗಳನ್ನು ಕಲಿಸಬೇಕಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಶಾಲೆಯೊಳಗೆ ನಡೆದ ಕಾರ್ಯಕ್ರಮದಲ್ಲಿ ಮಕ್ಕಳನ್ನು ಉದ್ದೇಶಿಸಿ ರಾಜಕೀಯ ಪಕ್ಷವೊಂದರ ವಿರುದ್ಧ ಇಂತಹ ಹೇಳಿಕೆ ನೀಡಿರುವುದು ಖಂಡನೀಯ. ಶಿಕ್ಷಣ ಇಲಾಖೆಯ ಆಕ್ಷೇಪಕ್ಕೆ ಸಂಬಂಧಿಸಿದಂತೆ ತಮ್ಮ ಅಸಮಾಧಾನವನ್ನು ಸಂಬಂಧಪಟ್ಟ ಅಧಿಕಾರಿಗಳ ಮುಂದೆ ವ್ಯಕ್ತಪಡಿಸಬಹುದಿತ್ತು. ಆದರೆ, ಅದನ್ನು ಶಾಲಾ ಮಕ್ಕಳ ಎದುರು ರಾಜಕೀಯ ಭಾಷಣದ ರೂಪದಲ್ಲಿ ಹೊರಹಾಕಿರುವುದು ಸರಿಯಲ್ಲ ಎಂದು ಶಿಕ್ಷಣ ಪ್ರೇಮಿಗಳು ಹಾಗೂ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖಂಡರೂ ಶಾಸಕನ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಶಿಕ್ಷಣ ಸಂಸ್ಥೆಗಳನ್ನು ರಾಜಕೀಯ ಸಂಘರ್ಷದ ಅಖಾಡವನ್ನಾಗಿ ಮಾಡಬಾರದು ಎಂಬ ಅಭಿಪ್ರಾಯವನ್ನು ಮುಂದಿಟ್ಟಿದ್ದಾರೆ.

ಶಿಕ್ಷಣ ಸಂಸ್ಥೆಗಳು ರಾಜಕೀಯ ಪಕ್ಷಗಳ ಪ್ರಚಾರ ವೇದಿಕೆಯಾಗಬೇಕೇ?

ರಾಜಕೀಯ ನಾಯಕರು ತಮ್ಮ ಪಕ್ಷದ ಸಿದ್ಧಾಂತ, ಸಾಧನೆ ಹಾಗೂ ವಿರೋಧಿ ಪಕ್ಷಗಳ ವಿರುದ್ಧದ ಟೀಕೆಗಳನ್ನು ರಾಜಕೀಯ ವೇದಿಕೆಗಳಲ್ಲಿ ಮಂಡಿಸಲು ಅವಕಾಶವಿದೆ. ಆದರೆ, ಶಾಲಾ ಮಕ್ಕಳನ್ನು ಉದ್ದೇಶಿಸಿ ನಿರ್ದಿಷ್ಟ ರಾಜಕೀಯ ಪಕ್ಷದ ಹಿಂದೆ ಹೋಗಬೇಡಿ ಎಂದು ಹೇಳುವುದು ಎಷ್ಟು ಸಮಂಜಸ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ಚರ್ಚೆಯ ಕೇಂದ್ರವಾಗಿದೆ.

ಶಾಲೆಯ ಸಭಾಭವನದ ಹೆಸರಿನ ವಿಚಾರದಲ್ಲಿ ಆರಂಭವಾದ ವಿವಾದ ಇದೀಗ ಶಾಲೆಯೊಳಗಿನ ರಾಜಕೀಯ ಭಾಷಣದ ಚರ್ಚೆಯಾಗಿ ಮಾರ್ಪಟ್ಟಿದೆ. ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳುವ ನಾಯಕರೇ ಶಿಕ್ಷಣ ಸಂಸ್ಥೆಯ ವೇದಿಕೆಯಲ್ಲಿ ರಾಜಕೀಯ ಪಕ್ಷದ ವಿರುದ್ಧ ಭಾಷಣ ಮಾಡುವುದು ಎಷ್ಟು ಸಮಂಜಸ ಎಂಬ ಪ್ರಶ್ನೆಯನ್ನೂ ಸಾರ್ವಜನಿಕರು ಮುಂದಿಡುತ್ತಿದ್ದಾರೆ.

ಶಾಲೆಗಳು ರಾಜಕೀಯ ನಾಯಕರ ವಾಗ್ದಾಳಿಯ ವೇದಿಕೆಯಾಗದೆ, ಮಕ್ಕಳ ಭವಿಷ್ಯ ರೂಪಿಸುವ ಜ್ಞಾನಮಂದಿರಗಳಾಗಿ ಉಳಿಯಬೇಕು ಎಂಬುದು ಶಿಕ್ಷಣ ಪ್ರೇಮಿಗಳು ಹಾಗೂ ಪ್ರಜ್ಞಾವಂತರ ಒತ್ತಾಯವಾಗಿದೆ.

Ad Widget
Click to comment

Leave a Reply

ದಕ್ಷಿಣ ಕನ್ನಡ

Ashoka Janamana 2026 : ಒಂದು ಲಕ್ಷ ಜನರಿಗೆ ಆತಿಥ್ಯ, ಉಡುಗೊರೆ ಸಿದ್ಧ! ನ.22ಕ್ಕೆ ಪುತ್ತೂರಿನಲ್ಲಿ ಅಶೋಕ ಜನಮನ

Published

on



Ad Widget

Ad Widget

Ad Widget

Ad Widget

ಪುತ್ತೂರು: ಕಳೆದ 14 ವರ್ಷಗಳಿಂದ ಪ್ರತೀ ದೀಪಾವಳಿಯ ಸಂದರ್ಭದಲ್ಲಿ ತಮ್ಮ ಸ್ವಂತ ಉದ್ಯಮದ ಆದಾಯದ ಒಂದು ಭಾಗವನ್ನು ಬಡವರಿಗೆ ಹಂಚುವ ಕಾರ್ಯ ಮಾಡುತ್ತಾ ಬಂದಿದ್ದೇನೆ. ಇದು ಅಹಂಕಾರದಿಂದ ಮಾಡುತ್ತಿರುವ ಕಾರ್ಯಕ್ರಮವಲ್ಲ. ದೇವರು ಎಷ್ಟು ವರ್ಷ ಈ ಸೇವೆ ಮಾಡುವ ಶಕ್ತಿ ನೀಡುತ್ತಾನೋ ಅಷ್ಟು ವರ್ಷ ಮುಂದುವರಿಸುತ್ತೇನೆ. ಅಶೋಕ ಜನಮನ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಶೀರ್ವದಿಸುವುದೇ ನನಗೆ ಮತ್ತಷ್ಟು ಸೇವೆ ಮಾಡಲು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

Ad Widget

Ad Widget

Ad Widget

ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪೂರ್ವಸಿದ್ಧತೆ ಹಾಗೂ ವಿವಿಧ ಸಮಿತಿಗಳ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ಅಂತಿಮ ಹಂತದಲ್ಲಿ ಸಿದ್ಧತೆ
ಅಶೋಕ ಜನಮನ ಕಾರ್ಯಕ್ರಮಕ್ಕಾಗಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಚಪ್ಪರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಊಟದ ವ್ಯವಸ್ಥೆ, ಉಡುಗೊರೆ ವಿತರಣೆ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಪ್ರತ್ಯೇಕವಾಗಿ ರೂಪಿಸಲಾಗಿದೆ. ಹಿರಿಯ ನಾಗರಿಕರು ಹಾಗೂ ಅಶಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

Ad Widget

Ad Widget <> Ad Widget


ಕಾರ್ಯಕ್ರಮದ ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿದ್ದು, ಗ್ರಾಮಗಳಿಗೆ ತೆರಳಿ ಆಹ್ವಾನಿಸುವ ಕಾರ್ಯ, ಪ್ರಚಾರ ಹಾಗೂ ಪ್ರಸಾರ ಚಟುವಟಿಕೆಗಳು ಮುಂದುವರಿದಿವೆ.



Ad Widget


ಸಭೆಯಲ್ಲಿ ಟ್ರಸ್ಟ್ ಪ್ರಮುಖರಾದ ಸುಮಾ ಅಶೋಕ್ ರೈ, ಮಹಮ್ಮದ್ ಬಡಗನ್ನೂರು, ಡಾ. ರಾಜಾರಾಂ ಕೆ.ಬಿ., ಮುರಳೀಧರ ರೈ ಮಟಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ, ಯು.ಟಿ. ತೌಸೀಫ್ ಉಪ್ಪಿನಂಗಡಿ, ಕೃಷ್ಣಪ್ರಸಾದ್ ಆಳ್ವ, ಜಯಪ್ರಕಾಶ್ ಬದಿನಾರ್, ಕೃಷ್ಣಪ್ರಸಾದ್ ಭಟ್ ಬೊಳ್ಳಾವು, ರಿತೇಶ್ ಶೆಟ್ಟಿ ಪುತ್ತೂರು, ನಿಹಾಲ್ ಪಿ. ಶೆಟ್ಟಿ ಸಾಮೆತ್ತಡ್ಕ, ಯೋಗೀಶ್ ಸಾಮಾನಿ, ರಾಧಾಕೃಷ್ಣ ನಾಯ್ಕ್, ರಾಮಣ್ಣ ಪಿಲಿಂಜ ಉಪ್ಪಿನಂಗಡಿ, ಸುದೇಶ್ ಶೆಟ್ಟಿ ಸೇರಿದಂತೆ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.

Continue Reading

ಶಿಕ್ಷಣ

Philomena-ಚರ್ಚಾ ಸ್ಪರ್ಧೆ: ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಜೀತನ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಜಿಲ್ಲಾ ಸಹಕಾರಿ ಯೂನಿಯನ್ ನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯ

Ad Widget

Ad Widget alt="Ad Widget"/>

Ad Widget

ಪುತ್ತೂರು: ಜಿಲ್ಲಾ ಸಹಕಾರಿ ಯೂನಿಯನ್ ನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.



Ad Widget

ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Philomena-ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ವತಿಯಿಂದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಯನ್ನು ಶನಿವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ಅವರು ಸ್ನಾತಕೋತ್ತರ (ಪಿಜಿ) ಗ್ರಂಥಾಲಯದಲ್ಲಿ 10 ದಿನಗಳ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

ಪುತ್ತೂರು, ನ. 14: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ವತಿಯಿಂದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಯನ್ನು ಶನಿವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ಅವರು ಸ್ನಾತಕೋತ್ತರ (ಪಿಜಿ) ಗ್ರಂಥಾಲಯದಲ್ಲಿ 10 ದಿನಗಳ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು. ಈ ಪ್ರದರ್ಶನದಲ್ಲಿ ಖ್ಯಾತ ಲೇಖಕರ ಕಲೆ, ಸಾಹಿತ್ಯ, ಜೀವನಚರಿತ್ರೆ, ವ್ಯಕ್ತಿತ್ವ ವಿಕಸನ ಹಾಗೂ ಕೆಎಎಸ್ (KAS), ಐಎಎಸ್ (IAS), ಬ್ಯಾಂಕಿಂಗ್, ಆರ್‌ಆರ್‌ಬಿ (RRB), ಪೊಲೀಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ 750ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

Ad Widget

Ad Widget <> Ad Widget

ಉದ್ಘಾಟನಾ ಭಾಷಣ ಮಾಡಿದ ಡಾ. ವಿಜಯಕುಮಾರ್ ಎಂ ಅವರು, ವಿದ್ಯಾರ್ಥಿಗಳಲ್ಲಿ ಓದುವ ಮತ್ತು ಬರೆಯುವ ಹವ್ಯಾಸವನ್ನು ಬೆಳೆಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳನ್ನು ಕಾಲೇಜಿನಲ್ಲಿ ‘ಗ್ರಂಥಾಲಯ ಮಾಸ’ವನ್ನಾಗಿ ಆಚರಿಸುವ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಮೊಬೈಲ್ ಫೋನ್‌ಗಳು ಮತ್ತು ಆನ್‌ಲೈನ್ ಗೇಮ್‌ಗಳಿಂದ ದೂರವಿದ್ದು, ಪುಸ್ತಕಗಳ ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿ, ಪುಸ್ತಕಗಳ ಓದು ಸಮಾಜದಲ್ಲಿ ಮುನ್ನಡೆಯಲು ಮತ್ತು ಯಶಸ್ಸು ಸಾಧಿಸಲು ಅಗತ್ಯವಾದ ಅಮೂಲ್ಯ ಒಳನೋಟಗಳು ಹಾಗೂ ದೃಷ್ಟಿಕೋನಗಳನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.



Ad Widget

ಸಪ್ತಾಹದ ಪೂರ್ವಭಾವಿಯಾಗಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಿಂದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಕ್ಟೋಬರ್ 5ರಂದು ಪ್ರದರ್ಶನ ಕಲಾ ಸಂಘದ ಸಹಯೋಗದಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ ಮತ್ತು ಅಕ್ಟೋಬರ್ 22ರಂದು ಹಿಂದಿ ವಿಭಾಗದ ಸಹಯೋಗದಲ್ಲಿ ಹಿಂದಿ ಭಾಷಣ ಸ್ಪರ್ಧೆ ನಡೆಸಲಾಗಿತ್ತು.

Ad Widget

Ad Widget

ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಡಾ. ವಿನಯಚಂದ್ರ, ಐಕ್ಯೂಎಸಿ ಸಂಯೋಜಕ ಹಾಗೂ ಹಣಕಾಸು ಅಧಿಕಾರಿ ಡಾ. ಎಡ್ವಿನ್ ಡಿ’ಸೋಜಾ, ಕಚೇರಿ ಅಧೀಕ್ಷಕಿ ರುಫಿನಾ ಡಿ’ಸೋಜಾ, ಪ್ರಾಧ್ಯಾಪಕರು ಹಾಗೂ ಗ್ರಂಥಾಲಯ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಆಯ್ಕೆ ಶ್ರೇಣಿ ಗ್ರಂಥಪಾಲಕ ಅಬ್ದುಲ್ ರೆಹಮಾನ್ ಜಿ. ಸ್ವಾಗತಿಸಿದರು. ಪಿ.ಜಿ ಗ್ರಂಥಪಾಲಕ ಮನೋಹರ್ ಎಸ್.ಜಿ. ವಂದಿಸಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮಣಿ ನಿರೂಪಿಸಿದರು. ಗ್ರಂಥಾಲಯ ಸಿಬ್ಬಂದಿ ಝೀಟಾ ನೊರೊನ್ಹಾ, ಕ್ಯಾಥರೀನ್ ಕ್ರಾಸ್ತಾ ಹಾಗೂ ಪ್ರಥಮ ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು ಪ್ರದರ್ಶನದ ವ್ಯವಸ್ಥೆಗೆ ಸಹಕರಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!