ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
ಉಡುಪಿ
ಬೆಂಗಳೂರು ಟು ಗೋವಾ ಇನ್ನು ವಂದೇ ಭಾರತ್ನಲ್ಲಿ ಪ್ರಯಾಣ: ನ.13ಕ್ಕೆ ಪ್ರಧಾನಿ ಮೋದಿ ಚಾಲನೆ
ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಭಾಗವನ್ನು ಗೋವಾದ ಮಡಗಾಂವ್ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಧ್ಯಾಹ್ನ 2 ಗಂಟೆಗೆ ರೈಲಿಗೆ ಚಾಲನೆ ನೀಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಉಡುಪಿ: ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಭಾಗವನ್ನು ಗೋವಾದ ಮಡಗಾಂವ್ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಧ್ಯಾಹ್ನ 2 ಗಂಟೆಗೆ ರೈಲಿಗೆ ಚಾಲನೆ ನೀಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಆಧುನಿಕ ಭಾರತದ ಅತ್ಯಾಧುನಿಕ ರೈಲುಗಳಲ್ಲೊಂದಾದ ವಂದೇ ಭಾರತ್ ಎಕ್ಸ್ಪ್ರೆಸ್ ಇನ್ನು ಮುಂದೆ ಬೆಂಗಳೂರು, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ವರೆಗೆ ಸಂಚರಿಸಲಿದೆ. ಕಳೆದ ಒಂದು ವರ್ಷದಿಂದ ಮಂಗಳೂರು ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ಈ ರೈಲು ಸೇವೆ ಇದೀಗ ಬೆಂಗಳೂರಿನವರೆಗೆ ವಿಸ್ತರಣೆಯಾಗುತ್ತಿದೆ.
ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿ ರೈಲಿಗೆ ಚಾಲನೆ ನೀಡುವ ಸಮಯದಲ್ಲೇ ಮಂಗಳೂರು ಜಂಕ್ಷನ್ನಲ್ಲೂ ಸರಳ ಸಮಾರಂಭ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕರಾವಳಿ ಭಾಗದ ಸಂಸದರ ಉಪಸ್ಥಿತಿಯಲ್ಲಿ ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿನ ಸಾಂಕೇತಿಕ ಉದ್ಘಾಟನೆ ನಡೆಯಲಿದೆ.
ನವೆಂಬರ್ 13ರಂದು ಉದ್ಘಾಟನೆಗೊಂಡ ಬಳಿಕ ನವೆಂಬರ್ 15ರಿಂದ ಬೆಂಗಳೂರು ಮತ್ತು ಮಡಗಾಂವ್ ಎರಡೂ ಕಡೆಯಿಂದ ರೈಲಿನ ನಿಯಮಿತ ಸಂಚಾರ ಆರಂಭವಾಗಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2019ರಲ್ಲಿ ಕಂಡಿದ್ದ ಕನಸು ಈಗ ನನಸು
ಬೆಂಗಳೂರಿನಿಂದ ಕರಾವಳಿ ಮಾರ್ಗವಾಗಿ ವಂದೇ ಭಾರತ್ ರೈಲು ಓಡಿಸುವ ಕನಸು 2019ರಲ್ಲೇ ಮೂಡಿತ್ತು. ಅಂದು ರೈಲ್ವೆ ಸಚಿವರಾಗಿದ್ದ ಪಿಯೂಷ್ ಗೋಯಲ್ ಅವರು ಬೆಂಗಳೂರಿಗೆ ವಂದೇ ಭಾರತ್ ರೈಲು ಆರಂಭಿಸುವ ಯೋಜನೆಯ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಸಕಲೇಶಪುರ–ಸುಬ್ರಹ್ಮಣ್ಯ ಘಾಟ್ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಳ್ಳದ ಕಾರಣ ಯೋಜನೆ ಮುಂದೂಡಲ್ಪಟ್ಟಿತ್ತು.
ನಂತರ ಭಾರತೀಯ ರೈಲ್ವೆಯ ಸಂಪೂರ್ಣ ವಿದ್ಯುದೀಕರಣ ಯೋಜನೆಯಡಿ ಕಾರವಾರ–ಮಂಗಳೂರು–ಬೆಂಗಳೂರು ಮಾರ್ಗದ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಂದೇ ಭಾರತ್ ರೈಲು ಸಂಚಾರದ ಕನಸು ಮತ್ತೆ ಸಾಕಾರಗೊಳ್ಳುವ ಹಂತ ತಲುಪಿತು.
ಕಳೆದ ವರ್ಷ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು–ಮಂಗಳೂರು ಮಾರ್ಗವಾಗಿ ಗೋವಾದ ಮಡಗಾಂವ್ವರೆಗೆ ವಂದೇ ಭಾರತ್ ರೈಲು ಓಡಿಸುವ ನಿರ್ಧಾರ ಪ್ರಕಟಿಸಿದ್ದರು. ಈಗಾಗಲೇ ಮಂಗಳೂರು–ಮಡಗಾಂವ್ ನಡುವೆ ವಂದೇ ಭಾರತ್ ರೈಲು ಸಂಚಾರದಲ್ಲಿದ್ದ ಹಿನ್ನೆಲೆಯಲ್ಲಿ ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ಹಲವು ಬಾರಿ ಪರೀಕ್ಷಾರ್ಥ ಸಂಚಾರವನ್ನೂ ನಡೆಸಲಾಗಿತ್ತು.
ಇದೀಗ ಬೆಂಗಳೂರು, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ವರೆಗೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗುತ್ತಿರುವುದು ಕರಾವಳಿ ಭಾಗದ ಪ್ರಯಾಣಿಕರಲ್ಲಿ ನಿರೀಕ್ಷೆ ಮೂಡಿಸಿದೆ. ಈ ಸೇವೆ ಆರಂಭಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಹಾಗೂ ವಿಶೇಷವಾಗಿ ಕರಾವಳಿ ಜನತೆಯ ಪರವಾಗಿ ಕೋಟ ಶ್ರೀನಿವಾಸ ಪೂಜಾರಿ ಕೃತಜ್ಞತೆ ಸಲ್ಲಿಸಿದ್ದಾರೆ.
ಉಡುಪಿ
Pradeep Poojari case-ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಮಹತ್ವದ ತಿರುವು: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ವರ್ಗಾವಣೆ
ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೋಮವಾರ ತಿಳಿಸಿದ್ದಾರೆ.
ಉಡುಪಿ: ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೋಮವಾರ ತಿಳಿಸಿದ್ದಾರೆ.
ಪ್ರದೀಪ್ ಪೂಜಾರಿ ಸಾವಿನ ಪ್ರಕರಣ ಕರಾವಳಿ ಭಾಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ತನಿಖೆಯ ಬಗ್ಗೆ ಮೃತನ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳು ಹಲವು ಅನುಮಾನಗಳನ್ನು ವ್ಯಕ್ತಪಡಿಸಿ, ತನಿಖೆಯನ್ನು ಸಿಐಡಿ ಅಥವಾ ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದರು. ಸಿಐಡಿ ತನಿಖೆಗೆ ವಹಿಸದಿದ್ದರೆ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಲಾಗಿತ್ತು.
ಇದರ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಕರ್ತವ್ಯ ಲೋಪದ ಬಗ್ಗೆಯೂ ವಿಚಾರಣೆ ನಡೆಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ನಡೆದ ತನಿಖೆಯ ವರದಿ ಆಧರಿಸಿ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ಲಗತ್ತಿಸಲಾಗಿತ್ತು. ಅಲ್ಲದೆ, ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಮಧ್ಯಪ್ರದೇಶ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.
-
ರಾಜಕೀಯ20 hours ago
BIG Political FACEOFF : ಪೂಂಜಾ ರಣವೀಳ್ಯ ಸ್ವೀಕರಿಸಿದ ಅಶೋಕ್ ರೈ: ಡೆವಲಪ್ಮೆಂಟ್ ಚರ್ಚೆಗೆ ಪುತ್ತೂರಿನಲ್ಲಿ ಮುಹೂರ್ತ ಫಿಕ್ಸ್! ; ಪೂಂಜಾ ಪಾಲಿಗೆ ಈಗ ಪ್ರತಿಷ್ಠೆಯ ಪ್ರಶ್ನೆ; ಸವಾಲು ಸ್ವೀಕರಿಸದೆ ವಿಧಿಯಿಲ್ಲವೇ?
-
ರಾಜಕೀಯ7 hours agoPuttur-ಅಳಿಯ ಹರೀಶ್ ಪೂಂಜಾಗೆ ಮಾವ ಕೃಷ್ಣಪ್ರಸಾದ್ ಆಳ್ವ ತಿರುಗೇಟು: ‘ಮೊದಲು ಪಕ್ಷ, ಆಮೇಲೆ ಸಂಬಂಧ’!
-
ನಿಧನ ವಾರ್ತೆ8 hours agoBCA student-ಶತಾಬ್ದಿ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಬಿಸಿಎ ವಿದ್ಯಾರ್ಥಿನಿ ದುರ್ಮರಣ; ತಾಯಿಯ ಕಣ್ಣೆದುರೇ ನಡೆದ ದುರಂತ..!
-
ಅಪರಾಧ6 hours agoPuttur-ಪುತ್ತೂರು: ಪರವಾನಗಿ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: 9.50 ಲಕ್ಷ ರೂ. ಮೌಲ್ಯದ ವಾಹನ, ದನಗಳು ವಶ; ಚಾಲಕ ಸೇರಿ ಇಬ್ಬರ ವಿರುದ್ಧ ಕೇಸ್
-
ಅಪರಾಧ6 hours agoNDPS case-ಪುತ್ತೂರು: ಮಾದಕ ವಸ್ತು ಸೇವನೆ-ಮೂವರು ಯುವಕರ ವಿರುದ್ಧ NDPS ಕೇಸ್
-
ಶಿಕ್ಷಣ8 hours agoVidhyamata-ವಿದ್ಯಾಮಾತಾದ ಸಾಧನೆಯ ಹಾದಿಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಶ್ರೀಕರ ಕರ್ನಾಟಕ ಬ್ಯಾಂಕ್ ಗೆ ಆಯ್ಕೆ; ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಪಡೆದ ಗ್ರಾಮೀಣ ಪ್ರತಿಭೆ
-
ಬಿಗ್ ನ್ಯೂಸ್7 hours agoPuttur-ಪುತ್ತೂರಿನಲ್ಲಿ ಕೃಷಿಗೆ ಹೊಸ ಪ್ರಯೋಗ: ಗಿಡಗಳ ಬುಡಕ್ಕೇ ತಲುಪಲಿದೆ ಸಾವಯವ ಸ್ಲರಿ ಗೊಬ್ಬರ: ಕೃಷ್ಣ ಮುಳಿಯ ಗ್ರೀನ್ ಎನರ್ಜಿ–ಪಿಂಗಾರ ಸಂಸ್ಥೆ ಒಡಂಬಡಿಕೆ
-
ಅಂತರ ರಾಜ್ಯ5 hours agoCyclone-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಿಗೆ ಚಂಡಮಾರುತದ ಎಚ್ಚರಿಕೆ..!















