Connect with us

ಅಪರಾಧ

NDPS case-ಪುತ್ತೂರು: ಮಾದಕ ವಸ್ತು ಸೇವನೆ-ಮೂವರು ಯುವಕರ ವಿರುದ್ಧ NDPS ಕೇಸ್

Published

on



Ad Widget

Ad Widget

Ad Widget

Ad Widget

ಮಾದಕ ವಸ್ತು ಸೇವನೆ ಅನುಮಾನದ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಮೂವರು ಯುವಕರು ನಿಷೇಧಿತ ಬಾರ್ಬಿಟುರೇಟ್ಸ್ (Barbiturates) ಎಂಬ ಮನೋವಿಕಾರಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದ್ದು, ಪುತ್ತೂರು ಗ್ರಾಮಾಂತರ ಪೊಲೀಸರು ಮೂವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

ಪುತ್ತೂರು: ಮಾದಕ ವಸ್ತು ಸೇವನೆ ಅನುಮಾನದ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಮೂವರು ಯುವಕರು ನಿಷೇಧಿತ ಬಾರ್ಬಿಟುರೇಟ್ಸ್ (Barbiturates) ಎಂಬ ಮನೋವಿಕಾರಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದ್ದು, ಪುತ್ತೂರು ಗ್ರಾಮಾಂತರ ಪೊಲೀಸರು ಮೂವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.15ರಂದು ಸಂಜೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ವಿನಾಯಕನಗರ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಈ ಘಟನೆ ನಡೆದಿದೆ.

Ad Widget

Ad Widget <> Ad Widget

ಸುಳ್ಯ ತಾಲೂಕಿನ ಪೈಚಾರ್ ನಿವಾಸಿ ಅಬ್ದುಲ್ ನಾಸೀರ್ (27), ಸೋಣಂಗೇರಿ ನಿವಾಸಿ ಅಬ್ದುಲ್ ನಾಸೀರ್ (26), ಅರಂತೋಡು ನಿವಾಸಿ ಗಣೇಶ್ (25) ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.



Ad Widget

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಕ್ರೈಂ ಸಿಬ್ಬಂದಿಗಳಾದ ಹೆಚ್‌ ಸಿ 624 ಪ್ರವೀಣ್‌, ಶರಣಪ್ಪ ಪೊಲೀಸ್ ಪಾಟೀಲ್ ಹಾಗೂ ಸಿದ್ದಪ್ಪ ಹೂಗಾರ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ವಿನಾಯಕನಗರ ರಸ್ತೆಯ ಬದಿಯಲ್ಲಿ ಮೂವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ. ಅವರ ವರ್ತನೆಯಿಂದ ಮಾದಕ ವಸ್ತು ಸೇವಿಸಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Ad Widget

Ad Widget

ವೈದ್ಯಾಧಿಕಾರಿಗಳು ಮೂವರ ಮೂತ್ರದ ಮಾದರಿಗಳನ್ನು ಸಂಗ್ರಹಿಸಿ ವಿಷವಿಜ್ಞಾನ ಪರೀಕ್ಷೆ ನಡೆಸಿದ್ದು, ಪರೀಕ್ಷಾ ವರದಿಯಲ್ಲಿ ಬಾರ್ಬಿಟುರೇಟ್ಸ್ ಸೇವಿಸಿರುವುದು ದೃಢಪಟ್ಟಿದೆ.

ವೈದ್ಯಕೀಯ ಚೀಟಿ ಅಥವಾ ಕಾನೂನುಬದ್ಧ ಪರವಾನಗಿ ಇಲ್ಲದೆ ನಿಷೇಧಿತ ಮಾದಕ ವಸ್ತು ಸೇವಿಸಿರುವ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಸಂಖ್ಯೆ 142/2026ರಂತೆ ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಹೆಚ್‌ ಸಿ 624 ಪ್ರವೀಣ್‌ ಅವರು ಸ್ವಯಂಪ್ರೇರಿತ ದೂರನ್ನು ನೀಡಿದ್ದಾರೆ.

Ad Widget
Click to comment

Leave a Reply

ಅಂತರ ರಾಜ್ಯ

Arrested-ಲವ್ ಬ್ರೇಕಪ್ ನಿಂದ ಮನನೊಂದು ಮಂಗಳೂರಿಗೆ ತೆರಳುತ್ತಿದ್ದ ರೈಲಿಗೆ ಕಲ್ಲೆಸೆದ ಯುವಕ ಅರೆಸ್ಟ್

Published

on



Ad Widget

Ad Widget

Ad Widget

Ad Widget

ಲವ್ ಬ್ರೇಕಪ್ ಆಗಿದಕ್ಕೆ ಮನ ನೊಂದು ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲೆಸೆದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಆಲುವಾದಲ್ಲಿ ನಡೆದಿದೆ. ಸುಜಿತ್ ಸುರೇಶ್ (19) ಬಂಧಿತ ಆರೋಪಿ.

Ad Widget

Ad Widget

Ad Widget

ಕೇರಳ: ಲವ್ ಬ್ರೇಕಪ್ ಆಗಿದಕ್ಕೆ ಮನ ನೊಂದು ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲೆಸೆದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಆಲುವಾದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಸುಜಿತ್ ಸುರೇಶ್ (19) ಬಂಧಿತ ಆರೋಪಿ. ತಿರುವನಂತಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಮೂರು ಬಾರಿ ಕಲ್ಲು ಎಸೆದಿದ್ದಾನೆ. ಇದರ ಪರಿಣಾಮವಾಗಿ ರೈಲಿನ ಕಿಟಕಿಯ ಗಾಜುಗಳಿಗೆ ಹಾನಿಯಾಗಿದೆ.

Ad Widget

Ad Widget <> Ad Widget

ಈತನ ಪ್ರೇಯಸಿಯ ಮನೆಯು ರೈಲ್ವೆ ಹಳಿಗಳ ಸಮೀಪದಲ್ಲೇ ಇದ್ದು, ಆಕೆ ತನ್ನನ್ನು ಬಿಟ್ಟು ಹೋಗಿದ್ದಾಳೆಂಬ ಕೋಪ ಮತ್ತು ಪ್ರೇಮ ವೈಫಲ್ಯದ ಬೇಸರದಿಂದ ರೈಲಿನ ಮೇಲೆ ಕಲ್ಲೆಸೆದಿರುವುದಾಗಿ ಪೊಲೀಸರ ವಿಚಾರಣೆಯ ವೇಳೆ ತಿಳಿಸಿದ್ದಾನೆ.



Ad Widget

ರೈಲ್ವೇ ಹಳಿಗಳ ಸಮೀಪ ಪದೇ ಪದೇ ಸುಳಿದಾಡುತ್ತಿದ್ದ ಈತನನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ರೈಲ್ವೆ ಪೊಲೀಸರು ಗುರುತಿಸಿ ಬಂಧಿಸಿದ್ದಾರೆ. ರೈಲ್ವೆ ಪೊಲೀಸರು ಈತನ ವಿರುದ್ಧ ಭಾರತೀಯ ರೈಲ್ವೆ ಕಾಯ್ದೆ 153ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Continue Reading

ಅಪರಾಧ

Puttur-ಪುತ್ತೂರು: ಪರವಾನಗಿ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: 9.50 ಲಕ್ಷ ರೂ. ಮೌಲ್ಯದ ವಾಹನ, ದನಗಳು ವಶ; ಚಾಲಕ ಸೇರಿ ಇಬ್ಬರ ವಿರುದ್ಧ ಕೇಸ್

Published

on



Ad Widget

Ad Widget

Ad Widget

Ad Widget

ಸೂಕ್ತ ಪರವಾನಗಿ ಹಾಗೂ ಪಶುವೈದ್ಯಾಧಿಕಾರಿಗಳ ಪ್ರಮಾಣಪತ್ರವಿಲ್ಲದೆ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂರು ದನಗಳನ್ನು ರಕ್ಷಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ತಮಿಳು ನಾಡಿನ ಸೇಲಂ ಜಿಲ್ಲೆಯ ಒಮಲೂರು ತಾಲೂಕು ನಿವಾಸಿ ದುರೈಯಾರಸನ್ ಸಹಿತ ಇರ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

ಪುತ್ತೂರು: ಯಾವುದೇ ಸೂಕ್ತ ಪರವಾನಗಿ ಹಾಗೂ ಪಶುವೈದ್ಯಾಧಿಕಾರಿಗಳ ಪ್ರಮಾಣಪತ್ರವಿಲ್ಲದೆ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂರು ದನಗಳನ್ನು ರಕ್ಷಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ತಮಿಳು ನಾಡಿನ ಸೇಲಂ ಜಿಲ್ಲೆಯ ಒಮಲೂರು ತಾಲೂಕು ನಿವಾಸಿ ದುರೈಯಾರಸನ್ ಸಹಿತ ಇರ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ನ.15ರಂದು ರಾತ್ರಿ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ನೂಜಿಬೈಲು ಎಂಬಲ್ಲಿ ಘಟನೆ ನಡೆದಿದೆ.

Ad Widget

Ad Widget <> Ad Widget

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಅವರು ಈಶ್ವರಮಂಗಲ ಹೊರಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ, ಕಾವು ಕಡೆಯಿಂದ ಈಶ್ವರಮಂಗಲದತ್ತ TN 30 BS 1248 ನೋಂದಣಿ ಸಂಖ್ಯೆಯ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿತ್ತು.



Ad Widget

ಈ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಸೂಚನೆಯಂತೆ ಕಾವು ರಸ್ತೆಯಲ್ಲಿ ತೆರಳುತ್ತಿದ್ದಾಗ ರಾತ್ರಿ ಸುಮಾರು 9.15ಕ್ಕೆ ನೂಜಿಬೈಲು ಬಳಿ ಸಂಬಂಧಪಟ್ಟ ವಾಹನ ಎದುರಾಗಿದೆ. ವಾಹನವನ್ನು ನಿಲ್ಲಿಸುವಂತೆ ಸೂಚನೆ ನೀಡಿದರೂ ಚಾಲಕ ನಿಲ್ಲಿಸದೆ ವೇಗವಾಗಿ ಮುಂದೆ ಸಾಗಿದ್ದಾನೆ. ಬಳಿಕ ಪೊಲೀಸರು ವಾಹನವನ್ನು ಬೆನ್ನಟ್ಟಿ ತಡೆದು ಪರಿಶೀಲನೆ ನಡೆಸಿದ್ದಾರೆ.

Ad Widget

Ad Widget

ಈ ವೇಳೆ ವಾಹನದ ಹಿಂಭಾಗದಲ್ಲಿ ಮೂರು ಕಪ್ಪು-ಬಿಳಿ ಬಣ್ಣದ ದೊಡ್ಡ ಗಾತ್ರದ ದನಗಳನ್ನು ಅವುಗಳ ಕುತ್ತಿಗೆಗೆ ಹಗ್ಗ ಬಿಗಿದು ವಾಹನದ ರಾಡ್‌ಗೆ ಕಟ್ಟಿರುವುದು ಕಂಡುಬಂದಿದೆ. ಯಾವುದೇ ಪರವಾನಗಿ ಅಥವಾ ಪಶುವೈದ್ಯಕೀಯ ಪ್ರಮಾಣಪತ್ರವಿಲ್ಲದೆ ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಾಹನ ಚಾಲಕನನ್ನು ವಿಚಾರಿಸಿದಾಗ, ತಾನು ತಮಿಳುನಾಡಿನ ಸೇಲಂ ಜಿಲ್ಲೆಯ ಒಮಲೂರು ತಾಲೂಕಿನ ನಿವಾಸಿ ದುರೈಯಾರಸನ್ (21) ಎಂದು ತಿಳಿಸಿದ್ದಾನೆ.

ಕಾಸರಗೋಡು ವಿಲೇಜ್ ಡೈರಿ ಫಾರ್ಮ್‌ನ ಅಹಮದ್ ಆಸೀದ್ ಎಂಬವರು ಚಿಂತಾಮಣಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ದನಗಳನ್ನು ಖರೀದಿಸಿ, ಅವುಗಳನ್ನು ಕಾಸರಗೋಡಿಗೆ ಸಾಗಿಸುವಂತೆ ತಿಳಿಸಿದ್ದರು. ಅದರಂತೆ ತಾನು ಸಾಗಾಟ ಮಾಡುತ್ತಿದ್ದುದಾಗಿ ಪೊಲೀಸರಿಗೆ ಹೇಳಿದ್ದಾನೆ ಎನ್ನಲಾಗಿದೆ.

ದನಗಳನ್ನು ಸಾಗಾಟ ಮಾಡಲು ಯಾವುದೇ ಸಂಬಂಧಪಟ್ಟ ಪರವಾನಗಿ ಅಥವಾ ಪಶುವೈದ್ಯಕೀಯ ಪ್ರಮಾಣಪತ್ರ ಇರಲಿಲ್ಲ. ಅಲ್ಲದೆ, ಅವುಗಳನ್ನು ಕುತ್ತಿಗೆಗೆ ಹಗ್ಗ ಬಿಗಿದು ಹಿಂಸಾತ್ಮಕವಾಗಿ ವಾಹನದಲ್ಲಿ ಸಾಗಾಟ ಮಾಡಲಾಗುತ್ತಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ವಾಹನದ ಅಂದಾಜು ಮೌಲ್ಯ 5 ಲಕ್ಷ ರೂ. ಹಾಗೂ ಮೂರು ದನಗಳ ಅಂದಾಜು ಮೌಲ್ಯ 4.50 ಲಕ್ಷ ರೂ. ಎಂದು ತಿಳಿದುಬಂದಿದೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 143/2026ರಂತೆ ಭಾರತೀಯ ನ್ಯಾಯ ಸಂಹಿತೆ ಕಲಂ 281, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960ರ ಕಲಂ 11(ಡಿ) ಹಾಗೂ ಮೋಟಾರು ವಾಹನ ಕಾಯ್ದೆಯ ಕಲಂ 66 ಜೊತೆಗೆ 192(a) ಅಡಿಯಲ್ಲಿ ಚಾಲಕ ದುರೈಯಾರಸನ್ ಮತ್ತು ಜಾನುವಾರು ಸಾಗಾಟಕ್ಕೆ ವ್ಯವಸ್ಥೆ ಮಾಡಿದ್ದರೆನ್ನಲಾದ ಅಹಮದ್ ಆಸೀದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Ad Widget
Continue Reading

ಸ್ಥಳೀಯ

Uppinangadi-ಉಪ್ಪಿನಂಗಡಿ: ವೈದ್ಯರ ಮನೆ ದರೋಡೆ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ಸುಲಿಗೆ ಪ್ರಕರಣವೊಂದರಲ್ಲಿ ಕಳೆದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್ ಮಸೂರ್ ಬಂಧಿತ ಆರೋಪಿ.

Ad Widget

Ad Widget

Ad Widget

ಉಪ್ಪಿನಂಗಡಿ: ಸುಲಿಗೆ ಪ್ರಕರಣವೊಂದರಲ್ಲಿ ಕಳೆದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget alt="Ad Widget"/>

Ad Widget

ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್ ಮಸೂರ್ ಬಂಧಿತ ಆರೋಪಿ.

Ad Widget

Ad Widget <> Ad Widget

2006ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿಯಲ್ಲಿ ಈ ಸುಲಿಗೆ ಪ್ರಕರಣ ನಡೆದಿತ್ತು. ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಅವರ ಮನೆಗೆ ನಾಲ್ವರು ಅಪರಿಚಿತರು ಚಿಕಿತ್ಸೆ ಪಡೆಯುವ ನೆಪದಲ್ಲಿ ಬಂದಿದ್ದರು. ಬಳಿಕ ಮನೆಯಲ್ಲಿದ್ದ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ ಚಿನ್ನಾಭರಣ ಮತ್ತು ನಗದು ಸೇರಿದಂತೆ ಒಟ್ಟು 2,35,800 ರೂ. ಮೌಲ್ಯದ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದರು.



Ad Widget

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 187/2006ರ ಅಡಿಯಲ್ಲಿ ಐಪಿಸಿ ಕಲಂ 395 ಮತ್ತು 397ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿದ್ದ ಮಸೂದ್ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Ad Widget

Ad Widget

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ನಂಜುಂಡಯ್ಯ (HC-325) ಮತ್ತು ಪೊಲೀಸ್ ಕಾನ್‌ಸ್ಟೆಬಲ್ ಮ್ಯಾಥ್ಯು ವರ್ಗಿಸ್ (PC-1944) ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!